Subscribe to Updates
Get the latest creative news from FooBar about art, design and business.
- BPS: ಪದಾಧಿಕಾರಿಗಳ ಆಯ್ಕೆ, ಎಂಬಿಬಿಎಸ್ ವಿದ್ಯಾರ್ಥಿಗೆ ಸನ್ಮಾನ
- ಹಂಚೀಪುರ ಗ್ರಾ.ಪಂ.: ರಸ್ತೆ ಬದಿಯ ಗಿಡಗಂಟಿ ತೆರವಿಗೆ ಆಗ್ರಹಿಸಿ ಪ್ರತಿಭಟನೆ
- ಸರಗೂರು | ಆರ್ ಎಸ್ ಎಸ್ ಬ್ಯಾನ್ ಗೆ ಡಿ ಎಸ್ ಎಸ್ ಒತ್ತಾಯ
- ತಿಪಟೂರು | ಸರಿಯಾಗಿ ಕಾರ್ಯನಿರ್ವಹಿಸದ ಸಂಚಾರ ಸಿಗ್ನಲ್ ಗಳು: ವಾಹನ ಚಾಲಕರಿಂದ ಆಕ್ರೋಶ
- ಕನಕದಾಸರು ಸಮಾಜದ ಓರೆಕೋರೆಗಳನ್ನು ತಿದ್ದಲು ಶ್ರಮಿಸಿದವರು: ಸಿ.ವಿ.ಕುಮಾರ್
- ಅವೈಜ್ಞಾನಿಕ ಸುತ್ತೋಲೆ ವಾಪಸ್ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರಾಂಶುಪಾಲರ, ಉಪನ್ಯಾಸಕರ ಸಂಘ ಆಗ್ರಹ
- ತುಮಕೂರು | ಕಾಂಗ್ರೆಸ್ ಭವನ ಕಟ್ಟಡ ನಿರ್ಮಾಣಕ್ಕೆ ತಡೆಯಾಜ್ಞೆ
- ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ
Author: admin
ಕೋವಿಡ್ 19 ರ ನಂತರ, ವೈಯಕ್ತಿಕ ಚಲನಶೀಲತೆಯ ಪ್ರಾಮುಖ್ಯತೆ ಹೆಚ್ಚಾಗಿದೆ. ದೂರದ ಊರುಗಳಿಗೆ ಹೋಗುವ ಉದ್ದೇಶ ಇರುವವರು ಸ್ವಂತ ಕಾರು ಹೊಂದಲು ಬಯಸುತ್ತಾರೆ. ಆದರೆ, ಕುಟುಂಬದ ಅಗತ್ಯತೆಗಳಿಂದಾಗಿ ಹೊಸ ಕಾರು ಖರೀದಿಸಲು ಸಾಧ್ಯವಾಗುತ್ತಿಲ್ಲ. ಅಂತಹ ಜನರು ಸೆಕೆಂಡ್ ಹ್ಯಾಂಡ್ ಕಾರುಗಳನ್ನು (Second Hand Cars) ಖರೀದಿಸುತ್ತಾರೆ. ಇಲ್ಲಿಯವರೆಗೆ, ಸೆಕೆಂಡ್ ಹ್ಯಾಂಡ್ ಕಾರುಗಳ ಮಾರಾಟಕ್ಕೆ ಸರ್ಕಾರ ಯಾವುದೇ ನಿಯಮಗಳನ್ನು ಜಾರಿಗೆ ತರುತ್ತಿಲ್ಲ. ಇನ್ಮುಂದೆ ಸೆಕೆಂಡ್ ಹ್ಯಾಂಡ್ ಕಾರು (Second Hand Cars Sale) ಮಾರುಕಟ್ಟೆ ಸರ್ಕಾರದ ಹಿಡಿತಕ್ಕೆ ಬರಲಿದೆ. ಸೆಕೆಂಡ್ ಹ್ಯಾಂಡ್ ಕಾರುಗಳ ಮಾರಾಟ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಸೂಚನೆ ನೀಡಲಿದೆ. ಸೆಕೆಂಡ್ ಹ್ಯಾಂಡ್ ಕಾರುಗಳನ್ನು ಖರೀದಿಸುವ ಜನರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಪರಿಸ್ಥಿತಿಯಲ್ಲಿ ಗ್ರಾಹಕರ ಅನುಕೂಲಗಳನ್ನು ರಕ್ಷಿಸುವ ಉದ್ದೇಶದಿಂದ ಈ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ಹೇಳುತ್ತಾರೆ. ಸರ್ಕಾರದ ಇತ್ತೀಚಿನ ನಿಯಮಗಳ ಪ್ರಕಾರ, ಡೀಲರ್‌ಗಳು (Second Hand Cars Dealers) ವಾಹನ ಮರುಮಾರಾಟದ ಮಾಹಿತಿಯನ್ನು ಸರ್ಕಾರ ಮತ್ತು ಸಾರಿಗೆ ಇಲಾಖೆಯೊಂದಿಗೆ…
ಬೆಂಗಳೂರು : ಪ್ರೌಢಶಾಲಾ ಶಿಕ್ಷಕರ ನೇಮಕಾತಿಯಲ್ಲಿ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಯಲ್ಲಿ 2012-13 ಮತ್ತು 2014-15ರಲ್ಲಿ ತಲಾ 5 ರಿಂದ 10 ಲಕ್ಷ ರೂ.ಗೆ ಶಿಕ್ಷಕರ ಹುದ್ದೆ ಮಾರಾಟ ಮಾಡಲಾಗಿದೆ ಎಂದು ಸಿಐಡಿ ತನಿಖೆಯಿಂದ ತಿಳಿದುಬಂದಿದೆ. ಉನ್ನತ ಮೂಲಗಳ ಪ್ರಕಾರ, ಪ್ರೌಢಶಾಲೆ ಶಿಕ್ಷಕರ ನೇಮಕಾತಿಗೆ ಕೆಲ ಅಭ್ಯರ್ಥಿಗಳು 5 ರಿಂದ 10 ಲಕ್ಷ ರೂಪಾಯಿಗೆ ಲಂಚ ನೀಡಿದ್ದಾರೆ. ಈ ಬಗ್ಗೆ ಸಿಐಡಿ ವಶದಲ್ಲಿರುವ ಮಹಿಳಾ ಅಭ್ಯರ್ಥಿಯೊಬ್ಬರು, ಕೆಲಸ ಮಾಡಲು 15 ಲಕ್ಷ ರೂ.ಗಳನ್ನು ಪಾವತಿಸಿದ್ದಾರೆ ಎಂದು ತನಿಖೆಯ ವೇಳೆ ಬಹಿರಂಗಪಡಿಸಿದ್ದಾರೆ ಎನ್ನಲಾಗಿದೆ. ತುಮಕೂರು, ವಿಜಯಪುರ ಹಾಗೂ ಕೋಲಾರ ಜಿಲ್ಲೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿರುವುದು ದಾಖಲೆಗಳಿಂದ ಗೊತ್ತಾಗಿದೆ ಎನ್ನಲಾಗಿದೆ. ಈ ಜಿಲ್ಲೆಯಲ್ಲಿ ಅಕ್ರಮವಾಗಿ ಹುದ್ದೆಗೆ ಆಯ್ಕೆಯಾಗಲು ಸಹ ಶಿಕ್ಷಕರು, ತಲಾ 5 ಲಕ್ಷದಿಂದ 10 ಲಕ್ಷ ನೀಡಿರುವುದು ಪತ್ತೆಯಾಗಿದೆ. ಇನ್ನು ಹಣವನ್ನು ಹಂತ ಹಂತವಾಗಿ ಪಾವತಿಸಲಾಗಿದೆ ಎಂದು ಹೇಳಲಾಗುತ್ತಿದೆ. ಶಾಲಾ ಶಿಕ್ಷಕರ ನೇಮಕಾತಿ ಹಗರಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ…
ಬೆಂಗಳೂರು: ಇಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.ನಗರದ ಅಂಬೇಡ್ಕರ್ ಭವನದಲ್ಲಿ ಎಐಸಿಸಿ ವರಿಷ್ಠ ಹಾಗೂ ಸದಸ್ಯತ್ವ ನೊಂದಣಿ ಉಸ್ತುವಾರಿ ಸುದರ್ಶನ ನಾಚಿಯಪ್ಪನ್ ಸಮ್ಮುಖದಲ್ಲಿ ಆಂತರಿಕ ಚುನಾವಣೆ ನಡೆಯಲಿದೆ. ಡಿ.ಕೆ.ಶಿವಕುಮಾರ್ ಎದುರು ಯಾರಾದರೂ ನಾಮಪತ್ರ ಸಲ್ಲಿಸಿದರೆ ಮಾತ್ರ ಚುನಾವಣೆ ಪ್ರಕ್ರಿಯೆಗಳು ನಡೆಯಲಿವೆ. ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಎರಡು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬೈಲಾ ಪ್ರಕಾರ ಮೂರು ವರ್ಷಕ್ಕೊಮ್ಮೆ ಚುನಾವಣೆ ನಡೆಸಬೇಕಿದೆ. ನೂತನ ಕೆಪಿಸಿಸಿ ಪದಾಧಿಕಾರಿಗಳು ಆಯ್ಕೆಯಾದಾಗ ಸಂಪ್ರದಾಯದಂತೆ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಮಾಡಬೇಕಿದೆ. ಆದರೆ ದಿನೇಶ್ ಗುಂಡೂರಾವ್ ರಾಜಿನಾಮೆ ಬಳಿಕ ಪದಾಧಿಕಾರಿಗಳ ಆಯ್ಕೆ ಮೂಲೆ ಗುಂಪಾಗಿತ್ತು. ಡಿಕೆ ಶಿವಕುಮಾರ್ ಅಧ್ಯಕ್ಷರಾದ ಬಳಿಕ ಸದಸ್ಯತ್ವ ನೋಂದಣಿಗೆ ಚಾಲನೆ ಸಿಕ್ಕಿದೆ. ಕೆಪಿಸಿಸಿಗೆ ಹೊಸ ಪದಾಧಿಕಾರಿಗಳು ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಇಂದು ಚುನಾವಣೆ ಪ್ರಕ್ರಿಯೆ ನಡೆಯಲಿದೆ. ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೂ ಚುನಾವಣೆ ನಡೆಯಲಿರುವ ಕಾರಣ ಎಲ್ಲಾ ರಾಜ್ಯಗಳ ಅಧ್ಯಕ್ಷ ಸ್ಥಾನಗಳಿಗೆ ಚುನಾವಣೆ ಘೋಷಿಸಲಾಗಿದೆ. ಮೂರು ವರ್ಷಗಳ ಅವಧಿ ಪೂರ್ಣವಾಗದವರನ್ನು ಅಧಿಕಾರದಲ್ಲಿ ಮುಂದುವರಿಸುವ…
ಪರಿಸರ ಮಾಲಿನ್ಯದಿಂದಾಗಿ ವಾತಾವರಣದಲ್ಲಿರುವ ಓಝೇನ್ ಪದರ ನಿರಂತರವಾಗಿ ಹಾನಿಗೊಳಗಾಗುತ್ತಿದೆ.ಹೀಗಾಗಿ ಓಝೇನ್ ಅನ್ನು ರಕ್ಷಿಸುವ & ಸಮಸ್ಯೆ ನಿವಾರಿಸುವ ಸಲುವಾಗಿ ಜಾಗೃತಿ ಮೂಡಿಸಲು ಪ್ರತಿವರ್ಷ ಸೆ.16ರಂದು ವಿಶ್ವ ಓಝೇನ್ ದಿನವನ್ನಾಗಿ ಆಚರಿಸಲಾಗುತ್ತದೆ. ಸೂರ್ಯನ ವಿಕಿರಣ ಭೂಮಿಗೆ ನೇರವಾಗಿ ಅಪ್ಪಳಿಸಿ, ಜೀವಸಂಕುಲಗಳಿಗೆ ಹಾನಿಯನ್ನುಂಟುಮಾಡುತ್ತದೆ. ಸೂರ್ಯನ ಕಿರಣ ನೇರವಾಗಿ ಭೂಮಿಗೆ ಬೀಳದಂತೆ ಓರೋನ್ ಪದರ ನೋಡಿಕೊಳ್ಳುತ್ತದೆ. ಹೀಗಾಗಿ ಪರಿಸರ ರಕ್ಷಣೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕಿದೆ. ನಮಗೆ ಚಳಿಯಾದಾಗ ಯಾರಾದರೂ ಬೆಚ್ಚನೆಯ ಹೊದಿಕೆ ಕೊಟ್ಟರೇ, ಮಳೆಯಲ್ಲಿ ನೆನೆಯುವಾಗ, ಬಿಸಿಲಿನ ತಾಪ ತಡೆಯದಾದಾಗ ಯಾರಾದರೂ ಕೊಡೆ ಹಿಡಿದರೆ ಅದೆಷ್ಟು ಖುಷಿ, ಸುರಕ್ಷತಾ ಭಾವ ಅಲ್ಲವೇ.. ನಾವೇನೋ ಮನುಷ್ಯರು ಒಬ್ಬರಲ್ಲ ಒಬ್ಬರು ಸಹಾಯ ಮಾಡುತ್ತಾರೆ. ಕುಟುಂಬ, ಸಂಬಂಧಿಕರು, ಸ್ನೇಹಿತರು ಯಾರಾದರೂ… ಆದರೆ ಭೂಮಿಗೆ…? ಇರುವುದೊಂದೇ ಭೂಮಿ…ಆದರೆ ನಿಮಗೆ ಗೊತ್ತೇ ಭೂಮಿಯನ್ನೂ ಕೂಡ ಒಂದು ಪದರ ಸೂರ್ಯನ ನೇರಳಾತೀತ ಕಿರಣಗಳಿಂದ ರಕ್ಷಿಸುತ್ತದೆ. ಅದೇ ಓಝೋನ್ ಪದರ. ಇಂದು ವಿಶ್ವ ಓಝೋನ್ ದಿನ. ಈ ದಿನದ ನೆಪದಲ್ಲಾದರೂ ಓಝೋನ್ ಪದರದ ಬಗ್ಗೆ…
ತಮಿಳುನಾಡು : ಭಾರತೀಯ ಜನತಾ ಪಕ್ಷದ ಘಟಕವು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವಾದ ಸೆಪ್ಟೆಂಬರ್ 17 ರಂದು ಜನಿಸಿದ ಪ್ರತಿ ಮಗುವಿಗೆ ಚಿನ್ನದ ಉಂಗುರವನ್ನು ನೀಡುವುದಾಗಿ ಘೋಷಿಸಿದೆ. ಅಷ್ಟೇ ಅಲ್ಲದೇ, 720 ಕೆಜಿ ಮೀನುಗಳನ್ನು ಸಹ ವಿತರಿಸಲಾಗುತ್ತದೆ. ಈ ಯೋಜನೆಗಾಗಿ ಪಕ್ಷವು ಆರ್‌ಎಸ್‌ಆರ್‌ಎಂ ಆಸ್ಪತ್ರೆಯನ್ನು ಆಯ್ಕೆ ಮಾಡಿದೆ ಎಂದು ರಾಜ್ಯದ ಸಚಿವ ಎಲ್ ಮುರುಗನ್ ಮಾಹಿತಿ ನೀಡಿದ್ದಾರೆ. ಅವರ ಪ್ರಕಾರ, ಪ್ರತಿ ಉಂಗುರವು 2 ಗ್ರಾಂ ತೂಕ ಹೊಂದಿರುತ್ತದೆ. ಸ್ಥಳೀಯ ಘಟಕದ ಪ್ರಕಾರ, ಸೆಪ್ಟೆಂಬರ್ 17 ರಂದು ಆಸ್ಪತ್ರೆಯಲ್ಲಿ 10-15 ಮಕ್ಕಳು ಜನಿಸುವ ನಿರೀಕ್ಷೆಯಿದೆ. ಮೀನು ವಿತರಿಸುವ ಬಗ್ಗೆ ಮಾತನಾಡಿದ ಅವರು, ಇದಕ್ಕಾಗಿ ಎಂ.ಕೆ.ಸ್ಟಾಲಿನ್ ಅವರ ಕ್ಷೇತ್ರವನ್ನು ಆಯ್ಕೆ ಮಾಡಲಾಗಿದೆ. ಮೋದಿಯವರಿಗೆ 72 ವರ್ಷವಾಗುವುದರಿಂದ 720 ಕೆಜಿ ಮೀನು ವಿತರಿಸಲಾಗುವುದು ಎಂದು ಪತ್ರಿಕೆಯೊಂದು ವರದಿ ಮಾಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಗಡಿ ವಿಚಾರವಾಗಿ ಒಂದಲ್ಲ ಒಂದು ರೀತಿ ಕಿತಾಪತಿ ಮಾಡುತ್ತಲೇ ಇರುವ ಎಂಇಎಸ್ ಇದೀಗ ಕರ್ನಾಟಕ ಪೊಲೀಸರನ್ನು ಬೈದಾಡುವ ಸಿನಿಮಾವನ್ನು ಮಾಡಿದ್ದು, ಇಂದು ಮರಾಠಿ ಚಿತ್ರ ಬಾಯ್ಸ್ – 3 ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ ಹಲವೆಡೆ ಬಿಡುಗಡೆ ಮಾಡಲು ಎಂಇಎಸ್ ಸಿದ್ಧತೆ ನಡೆಸಿದೆ. ವಿವಾದಾತ್ಮಕ ಚಿತ್ರ ರಾಜ್ಯದಲ್ಲಿ ಬಿಡುಗಡೆಗೆ ಅವಕಾಶ ನೀಡಬಾರದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಪೊಲೀಸ್ ಇಲಾಖೆಗೆ ಮನವಿ ಮಾಡಿದೆ. ಕನ್ನಡಿಗರಿಗೆ ಪ್ರಚೋದಿಸುವಂತೆ ಮಾಡಲು ವಿವಾದಾತ್ಮಕ ಮರಾಠಿ ಚಲನಚಿತ್ರ ಬಾಯ್-3 ಬಿಡುಗಡೆ ಮಾಡಲಾಗುತ್ತಿದ್ದು, ಇದು ಕೇವಲ ಮನೋರಂಜನಾ ಚಿತ್ರವಾಗಿದ್ದಲ್ಲಿ ನಮ್ಮ ವಿರೋಧವಿರಲಿಲ್ಲ. ಆದರೆ ಕರ್ನಾಟಕ-ಮಹಾರಾಷ್ಟ್ರ ಗಡಿ ವಿಷಯವನ್ನಿಟ್ಟು ತಯಾರಾಗಿರುವ ಚಿತ್ರವಾಗಿದೆ. ಚಿತ್ರದ ಒಂದು ದೃಶ್ಯದಲ್ಲಿ ಕರ್ನಾಟಕದ ಪೊಲೀಸ್ ಠಾಣೆಗೆ ಬಂದು, ನಮ್ಮ ಪೊಲೀಸರಿಗೆ ನಿಮಗೆ ಕನ್ನಡ ಭಾಷೆಯ ಮೇಲೆ ಅಭಿಮಾನವಿದ್ದರೆ ನಮಗೂ ನಮ್ಮ ಮರಾಠಿ ಭಾಷೆಯ ಮೇಲೆ ದುಪ್ಪಟ್ಟು ಅಭಿಮಾನವಿದೆ, ಅಷ್ಟಕ್ಕೂ ಮರಾಠಿ ಭಾಷೆಯನ್ನು ಬೆಳಗಾವಿಯಲ್ಲಿ ಮಾತನಾಡದಿದ್ದರೆ ಮತ್ತೆಲ್ಲಿ ಮಾತನಾಡಬೇಕು? ಎಂದು ಪ್ರಶ್ನಿಸುವ ದೃಶ್ಯವಿದೆ. ಆದ್ದರಿಂದ…
ತುಮಕೂರು : ಶಿಕ್ಷಕರ ನೇಮಕಾತಿ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಎಸಗಿದ ಆರೋಪದ ಮೇಲೆ ಜಿಲ್ಲೆಯ 10 ಸರ್ಕಾರಿ ಪ್ರೌಢಶಾಲಾ ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ. ಅಕ್ರಮದ ಮೂಲಕ ಉದ್ಯೋಗ ಪಡೆದ ಆರೋಪದ ಮೇಲೆ ಸಿಐಡಿ ಪೊಲೀಸರು ಸೆಪ್ಟೆಂಬರ್ 6 ರಂದು ಶಿಕ್ಷಕರನ್ನು ಬಂಧಿಸಿದ್ದರು. ಡಿಡಿಪಿಐ ಸಿ.ನಂಜಯ್ಯ ಅವರು ಬಂಧನದ ದಿನಾಂಕಕ್ಕೆ ಅನ್ವಯವಾಗುವಂತೆ ಅಮಾನತುಗೊಳಿಸಿ ಬುಧವಾರ ಆದೇಶ ಹೊರಡಿಸಿದ್ದಾರೆ. ಸಿಐಡಿ ಅಧಿಕಾರಿಗಳು ಕಳೆದ ತಿಂಗಳು ಜಿಲ್ಲೆಯ ಶಾಲೆಗಳಿಗೆ ಭೇಟಿ ನೀಡಿ, ಕಳಂಕಿತ ಶಿಕ್ಷಕರು ಕೆಲಸ ಮಾಡುತ್ತಿದ್ದ ಶಾಲೆಗಳಿಗೆ ಭೇಟಿ ನೀಡಿ ಅವರನ್ನು ಬಂಧಿಸಿದ್ದರು. ಹೆಚ್ಚಿನ ವಿಚಾರಣೆಗಾಗಿ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ ನಂತರ ಅವರು ಅವರನ್ನು ತಮ್ಮ ವಶಕ್ಕೆ ತೆಗೆದುಕೊಂಡು ತನಿಖೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಧ್ವನಿ ಮತದ ಮೂಲಕ ವಿಧಾನ ಪರಿಷತ್‍ನಲ್ಲಿ ಮತಾಂತರ ನಿಷೇಧ ವಿಧೇಯಕ ಅಂಗೀಕಾರ ಮಾಡಲಾಗಿದೆ. ಇಂದು ವಿಧಾನ ಪರಿಷತ್ತಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿಧಾನ ಮತಾಂತರ ನಿಷೇಧ ಕಾಯ್ದೆ ಮಂಡನೆ ಮಾಡಿದರು ಇದೇ ವೇಳೆ ಅವರು ಇದು ಬಹಳ ಮಹತ್ವದ ಕಾಯ್ದೆಯನ್ನ ಸರ್ಕಾರ ತಂದಿದೆ. 2013 ರಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗಲು ಇದರ ಬಗ್ಗೆ ಚಿಂತನೆ ನಡೆಸಿತ್ತು. ಎಲ್ಲರಿಗೂ ಅವರವರ ಧಾರ್ಮಿಕ ಹಕ್ಕಿನಲ್ಲಿ ಬದುಕುವ ಅವಕಾಶವಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಬಲವಂತದಿಂದ, ಆಮೀಷದ ಮತಾಂತರ ನಡೆಯುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅಧಿವೇಶನದಲ್ಲಿ ಪ್ರಸ್ತಾಪಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ ಮತ್ತೆ ಸಮನ್ಸ್ ಜಾರಿಗೊಳಿಸಿದ್ದು, ಈ ಬಗ್ಗೆ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೆ 19ರಂದು ವಿಚಾರಣೆ ಹಾಜರಾಗುವಂತೆ ಇಡಿ ಸಮನ್ಸ್ ನೀಡಿದೆ ಎಂದು ಟ್ವೀಟ್ ಮಾಡುವ ಮೂಲಕ ಡಿ.ಕೆ.ಶಿವಕುಮಾರ್ ಅಸಮಧಾನ ವ್ಯಕ್ತಪಡಿಸಿದ್ದಾರೆ. ಭಾರತ್ ಜೋಡೋ ಯಾತ್ರೆ ಹಾಗೂ ವಿಧಾನಸಭಾ ಅಧಿವೇಶನ ನಡೆಯುತ್ತಿರುವ ಮಧ್ಯೆಯೇ ಮತ್ತೊಮ್ಮೆ ಇಡಿ ನನಗೆ ಸಮನ್ಸ್ ನೀಡಿದೆ. ನಾನು ಸಹಕರಿಸಲು ಸಿದ್ಧ ಆದರೆ ಈ ಸಮನ್ಸ್ ನೀಡಿರುವ ಸಮಯ ಹಾಗೂ ಮೇಲಿಂದ ಮೇಲೆ ನೀಡುತ್ತಿರುವ ಕಿರುಕುಳದಿಂದಾಗಿ ನನ್ನ ಸಾಂವಿಧಾನಿಕ ಮತ್ತು ರಾಜಕೀಯ ಕರ್ತವ್ಯಗಳನ್ನು ನಿರ್ವಹಿಸಲು ತೊಂದರೆಯಾಗುತ್ತಿದೆ ಎಂದು ಈ ಬಗ್ಗೆ ಟ್ವೀಟ್ ಮಾಡಿರುವ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಂಡ್ಯ: ನಗರದ ಅಶೋಕ ನಗರದಲ್ಲಿರುವ ನ್ಯಾಷನಲ್ ಚಿಲ್ಡ್ರನ್ ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿ ಕಸ್ತೂರಿ ಸಿರಿಗನ್ನಡ ವೇದಿಕೆ ರಾಜ್ಯ ಘಟಕ ಶ್ರೀ ಶಂಭು ಸೇವಾ ಟ್ರಸ್ಟ್ ಎಂ.ಬೊಮ್ಮನಹಳ್ಳಿ ವತಿಯಿಂದ ಶಿಕ್ಷಕರ ದಿನಾಚರಣೆ ಮತ್ತು ಸರ್.ಎಂ.ವಿಶ್ವೇಶ್ವರಯ್ಯ ಅವರ ಜನ್ಮ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದ ಪ್ರಯುಕ್ತ ಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಹಾಗೂ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಮನ್ಮುಲು ಅಧ್ಯಕ್ಷ ರಾಮಚಂದ್ರು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ನ್ಯಾಷನಲ್ ಚಿಲ್ಡ್ರನ್ಸ್ ಶಾಲೆ ಕಾರ್ಯದರ್ಶಿ, ಬಿ.ಟಿ.ನಾಗರಾಜು ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಸ್ತೂರಿ ಸಿರಿಗನ್ನಡ ವೇದಿಕೆ ರಾಜ್ಯಾಧ್ಯಕ್ಷ ಪೋತೇರ ಮಹದೇವು, ಸಮಾಜ ಸೇವಕ ಶಿವಪ್ರಸಾದ್ ಗುರು, ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾಗಿರುವ ಶಿಕ್ಷಕರಾದ ಬಾಲಚಂದ್ರ ಹೆಗಡೆ, ರಾಮಚಂದ್ರ, ಗೀತಾ ಲೋಕೇಶ್, ಎಂ. ನೀಲಮ್ಮ, ಮಂಜುಳಾ, ವಿವಿಧ ಕ್ಷೇತ್ರಗಳ ಪ್ರಶಸ್ತಿ ಪುರಸ್ಕೃತರಾಗಿರುವ ಜೆ.ಜಗದೀಶ್ ಕಿಲಾರ ಕೃಷ್ಣ, ಮಂಗಳ, ಯೋಗೇಶ್ ಎಂ., ಗುರುಪ್ರಸಾದ್, ಸುಧಾ ಆರಾಧ್ಯ ಸೇರಿದಂತೆ ಕಸ್ತೂರಿ ಸಿರಿಗನ್ನಡ ವೇದಿಕೆಯ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ವರದಿ: ಸುಶ್ಮಿತಾ ಶೇಖರ್…