Author: admin

ಕನ್ನಡಿಗ ರಾಬಿನ್ ಉತ್ತಪ್ಪ ಬುಧವಾರ ಭಾರತೀಯ ಕ್ರಿಕೆಟ್‌ನ ಎಲ್ಲಾ ಮಾದರಿಗಳಿಗೆ ನಿವೃತ್ತಿ ಘೋಷಿಸಿದ್ದಾರೆ. “ನನ್ನ ದೇಶ ಮತ್ತು ನನ್ನ ರಾಜ್ಯ ಕರ್ನಾಟಕವನ್ನು ಪ್ರತಿನಿಧಿಸುವುದು ನನಗೆ ದೊಡ್ಡ ಗೌರವವಾಗಿದೆ. ಆದರೂ ಒಳ್ಳೆಯ ವಿಷಯಗಳಿಗೆ ಅಂತ್ಯವಿರುತ್ತದೆ “ಎಂದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ನನ್ನ ದೇಶ ಮತ್ತು ನನ್ನ ರಾಜ್ಯ ಕರ್ನಾಟಕವನ್ನು ಪ್ರತಿನಿಧಿಸುವುದು ನನ್ನ ದೊಡ್ಡ ಗೌರವ. ಹೇಗಾದರೂ, ಎಲ್ಲಾ ಒಳ್ಳೆಯ ವಿಷಯಗಳು ಕೊನೆಗೊಳ್ಳಬೇಕು. ಕೃತಜ್ಞತೆಯ ಹೃದಯದಿಂದ, ನಾನು ಭಾರತೀಯ ಕ್ರಿಕೆಟ್‌ನ ಎಲ್ಲಾ ಪ್ರಕಾರಗಳಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದೇನೆ. ಎಲ್ಲರಿಗೂ ಧನ್ಯವಾದಗಳು” ಎಂದಿದ್ದಾರೆ. “ನಾನು ವೃತ್ತಿಪರ ಕ್ರಿಕೆಟ್ ಆಡಲು ಆರಂಭಿಸಿ 20 ವರ್ಷಗಳಾಗಿವೆ. ನನ್ನ ದೇಶ ಮತ್ತು ರಾಜ್ಯ, ಕರ್ನಾಟಕವನ್ನು ಪ್ರತಿನಿಧಿಸುವುದು ಅತ್ಯಂತ ದೊಡ್ಡ ಗೌರವವಾಗಿದೆ. ಇದು ಏರಿಳಿತಗಳ ಅದ್ಭುತ ಪ್ರಯಾಣ. ಇದು ಲಾಭದಾಯಕ, ಆನಂದದಾಯಕ ಮತ್ತುಉತ್ತಮ ಮನುಷ್ಯನಾಗಿ ಬೆಳೆಯಲು ನನಗೆ ಅವಕಾಶ ಮಾಡಿಕೊಟ್ಟಿದೆ. ಹೇಗಾದರೂ, ಎಲ್ಲಾ ಒಳ್ಳೆಯ ವಿಷಯಗಳು ಕೊನೆಗೊಳ್ಳಬೇಕು ಮತ್ತು ಕೃತಜ್ಞತೆಯ ಹೃದಯದಿಂದ ನಾನು ಭಾರತೀಯ ಕ್ರಿಕೆಟ್‌ನ ಎಲ್ಲಾ ಪ್ರಕಾರಗಳಿಂದ…

Read More

ಸವದತ್ತಿ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ ಅವರು ಆರೋಗ್ಯದಲ್ಲಿ ಏರುಪೇರು ಆಗಿದ್ದು, ತಪಾಸಣೆಗಾಗಿ ಚೆನ್ನೈಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಆನಂದ ಮಾಮನಿ ವಿಡಿಯೋ ಹೇಳಿಕೆ ಬಿಡುಗಡೆಗೊಳಿಸಿದ್ದಾರೆ. ಮನುಷ್ಯ ಅಂದ್ಮೇಲೆ ಆರೋಗ್ಯದಲ್ಲಿ ಏರಿಳಿತವಾಗುವುದು ಸಹಜ. ಕೆಲವು ವರ್ಷಗಳಿಂದ ನನಗೆ ಮಧುಮೇಹ ಇದೆ. ಆದರೆ ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ. ನನ್ನ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದ್ದಾರೆ. ಮನುಷ್ಯನಿಗೆ ಜೀವನದಲ್ಲಿ ಸ್ವಾಭಾವಿಕವಾಗಿ ಆರೋಗ್ಯದಲ್ಲಿ ಏರಿಳಿತ ಆಗೋದು ಸಹಜ. ಕೆಲವು ವರ್ಷಗಳಿಂದ ನನಗೆ ಮಧುಮೇಹ ಖಾಯಿಲೆ ಇದೆ. ಆದ್ರೆ, ಕೆಲ ಮಾಧ್ಯಮದಲ್ಲಿ ಬೇರೆ ಬೇರೆ ಕಾರಣ ಹೇಳಿ ಸುಳ್ಳು ವದಂತಿಗಳು ಬರುತ್ತಿದೆ. ರಾಜ್ಯದ ಜನರ ಆಶೀರ್ವಾದ ಇದೆ. ನಾನು ಆರೋಗ್ಯವಾಗಿದ್ದೇನೆ. ಸುಳ್ಳು ವಂದತಿಗೆ ನಮ್ಮ ಕಾರ್ಯಕರ್ತರು ಕಿವಿಗೊಡಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ಇತ್ತೀಚಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಮಾಧ್ಯಮ ಸಂಯೋಜಕರಾಗಿದ್ದಂತ ಗುರುಲಿಂಗಸ್ವಾಮಿ ಹೊಳಿಮಠ ಅವರು ಅಕಾಲಿಕವಾಗಿ ನಿಧನಹೊಂದಿದ್ದರು. ಅವರ ನಿಧನದ ತೆರವಾಗಿದ್ದ ಸ್ಥಾನಕ್ಕೆ ಹಿರಿಯ ಪತ್ರಕರ್ತ ಶಂಕರ್ ಹಾಗೋಜಿ ಅವರನ್ನು ನೇಮಕ ಮಾಡಲಾಗಿದೆ. ಇದಲ್ಲದೇ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರನ್ನಾಗಿ ಮೋಹನ್ ಕೃಷ್ಣ ಅವರನ್ನು ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಮಾಧ್ಯಮ ಸಲಹೆಗಾರರನ್ನಾಗಿ ಮೋಹನ್ ಕೃಷ್ಣ ಅವರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಇವರಲ್ಲದೇ ಈ ತಕ್ಷಣದಿಂದ ಜಾರಿಗೆ ಬರುವಂತೆ ಶಂಕರ್ ಪಾಗೋಜಿ ಅವರನ್ನು ಮುಖ್ಯಮಂತ್ರಿಯವರ ಪದಾವಧಿವರೆಗೆ ಅಥವಾ ಮುಂದಿನ ಆದೇಶದವರೆಗೆ ಮುಖ್ಯಮಂತ್ರಿಯವರ ಮಾಧ್ಯಮ ಸಂಯೋಜಕರನ್ನಾಗಿ ನೇಮಿಸಲಾಗಿದೆ ಎಂದು ಆದೇಶ ಹೊರಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಗುಜರಾತ್‌ ನ ಅಹಮದಾಬಾದ್‌ ನಲ್ಲಿ ನಿರ್ಮಾಣ ಹಂತದ ಕಟ್ಟಡದ ಲಿಫ್ಟ್ ಕುಸಿದು ಏಳು ಕಾರ್ಮಿಕರು ಬುಧವಾರ ಮೃತಪಟ್ಟಿದ್ದಾರೆ. ಲಿಫ್ಟ್ ಕುಸಿದಾಗ ಒಟ್ಟು ಎಂಟು ಮಂದಿ ಲಿಫ್ಟ್‌ನಲ್ಲಿದ್ದರು ಎಂದು ತಿಳಿದು ಬಂದಿದೆ. ಘಟನೆಯ ಬಗ್ಗೆ ಮುಖ್ಯ ಅಗ್ನಿಶಾಮಕ ಅಧಿಕಾರಿ ಜಯೇಶ್ ಖಾಡಿಯಾ ಮಾತನಾಡಿ, ಅಹಮದಾಬಾದ್‌ ನಲ್ಲಿ ಲಿಫ್ಟ್ ಕುಸಿದು ಏಳು ಕಾರ್ಮಿಕರು ಮೃತಪಟ್ಟ ಘಟನೆ ವರದಿಯಾಗಿದೆ. ಓರ್ವ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದರು. ಅಹಮದಾಬಾದ್ ಮೇಯರ್ ಕೆಜೆ ಪರ್ಮಾರ್ ಮಾತನಾಡಿ, ಘಟನೆ ನಡೆದ ನಿರ್ಮಾಣ ಹಂತದ ಕಟ್ಟಡವು ಖಾಸಗಿ ಬಿಲ್ಡರ್‌ನದ್ದಾಗಿದೆ. “ಆಸ್ಪೈರ್ II ಘಟನೆ ಸಂಭವಿಸಿದ ಕಟ್ಟಡವಾಗಿದೆ. ಇದು ಖಾಸಗಿ ಡೆವಲಪರ್ ಹೊಂದಿರುವ ಖಾಸಗಿ ಕಟ್ಟಡವಾಗಿದೆ. ಅವರ ಆವರಣದಲ್ಲಿ ಛಾವಣಿಯೊಂದು ಬಿದ್ದ ನಂತರ 7 ಪುರುಷರು ನಿಧನರಾದರು. ಘಟನೆ ಬೆಳಗ್ಗೆ 7.30ಕ್ಕೆ ಸಂಭವಿಸಿದೆ. ಆದರೆ ಬಿಲ್ಡರ್ ಅದನ್ನು ಮರೆಮಾಚಿದ್ದಾರೆ ಮತ್ತು 11 ಗಂಟೆಯ ನಂತರ ಮಾತ್ರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಮೇಯರ್ ಕೆಜೆ ಪರ್ಮಾರ್ ಹೇಳಿದರು. ಅವರು ಮುನ್ಸಿಪಲ್ ಕಾರ್ಪೊರೇಶನ್‌ನ…

Read More

ಮಾರಣಾಂತಿಕ ಮುದ್ದೆ ಚರ್ಮದ ಕಾಯಿಲೆ ದೇಶದಾದ್ಯಂತ ರೈತರನ್ನು ಭಯಭೀತರನ್ನಾಗಿಸಿದೆ. ರೋಗಕ್ಕೆ ತುತ್ತಾದ ತಮ್ಮ ಜಾನುವಾರುಗಳು ಹೊಲಗಳಲ್ಲಿ ಕುಸಿದು ಬೀಳುವುದನ್ನು ಕಂಡು ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಜುಲೈನಿಂದ 50,000 ಕ್ಕೂ ಹೆಚ್ಚು ಜಾನುವಾರುಗಳು ಸಾವನ್ನಪ್ಪಿರುವ ರಾಜಸ್ಥಾನ ರಾಜ್ಯದ ರೈತರು ಈ ರೋಗದಿಂದ ಅತ್ಯಂತ ಕೆಟ್ಟ ಪರಿಸ್ಥಿತಿಯನ್ನು ಕಾಣುತ್ತಿದ್ದಾರೆ. ಸೆಪ್ಟಂಬರ್ 12 ರಂದು ಜುಲೈನಲ್ಲಿ ಮುದ್ದೆ ಚರ್ಮ ರೋಗ ಕಾಣಿಸಿಕೊಂಡು 67,000 ಕ್ಕೂ ಹೆಚ್ಚು ಜಾನುವಾರುಗಳು ಸಾವನ್ನಪ್ಪಿವೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿತ್ತು. ಆದರೆ, ಈಗ ಅದರ ಸಂಖ್ಯೆ 75,000 ಕ್ಕೂ ಅಧಿಕವಾಗಿದೆ. ಏಪ್ರಿಲ್‌ನಲ್ಲಿ ಗುಜರಾತ್‌ನ ಕಚ್ ಪ್ರದೇಶದಲ್ಲಿ ಮೊದಲ ಮುದ್ದೆ ಚರ್ಮದ ಸೋಂಕಿನ ಪ್ರಕರಣ ವರದಿಯಾಗಿದೆ. ಜುಲೈನಿಂದ ಇಲ್ಲಿಯವರೆಗೆ 75,000 ಜಾನುವಾರುಗಳು ಸಾವನ್ನಪ್ಪಿವೆ. ಮುದ್ದೆ ಚರ್ಮದ ರೋಗವು ವೈರಸ್‌ ನಿಂದ ಉಂಟಾಗುತ್ತದೆ. ಇದು ನೊಣಗಳು ಅಥವಾ ಸೊಳ್ಳೆಗಳಿಂದ ಹರಡುತ್ತದೆ. ಈ ವೈರಸ್ಸಿನಿಂದಾಗಿ ಚರ್ಮದ ಮೇಲೆ ಗಂಟುಗಳು ರೂಪುಗೊಳ್ಳುತ್ತವೆ. ಈ ರೋಗವು ಜನರ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಜಾನುವಾರುಗಳ ಮೇಲೆ ಪರಿಣಾಮ…

Read More

ಬೆಂಗಳೂರು: ಮತಾಂತರ ನಿಷೇಧ ವಿಧೇಯಕವೂ ವಿಧಾನ ಪರಿಷತ್‍ನಲ್ಲಿಂದು ಮಂಡನೆಯಾಗಲಿದ್ದು, ಪ್ರಶ್ನೋತ್ತರ ಕಲಾಪದ ಬಳಿಕ ಸದನದಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆಯಾಗಲಿದೆ ಎನ್ನಲಾಗಿದೆ. ಇನ್ನೂ ಮಂಡನೆಯಾಗಲಿರುವ ಮಸೂದೆಗೆ ಬಿಜೆಪಿ ನಾಯಕರುಗಳು ಸದನದಲ್ಲಿ ಯಾವೆಲ್ಲ ರೀತಿಯಲ್ಲಿ ನಮ್ಮ ವಿಧೇಯಕವನ್ನು ಸಮರ್ಥನೆ ಮಡಿಕೊಳ್ಳಬೇಕು ಎನ್ನುವುದಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಎಲ್ಲಾ ಪಾಠವನ್ನು ಹಿರಿಯ ನಾಯಕರು ಮಾಡಿದ್ದಾರೆ ಎನ್ನಲಾಗಿದೆ. ಮತಾಂತರ ಮಸೂದೆ ಮಂಡನೆಯಾಗಲಿದೆ ಎನ್ನುವ ಬೆನ್ನಲೇ ರಾತ್ರಿ ಚಾಮರಾಜಪೇಟೆಯ ಕೇಶವಾಕೃಪಾದಲ್ಲಿ ಸಭೆ ನಡೆಸಿ ಮಹತ್ವ ಚರ್ಚೆ ನಡೆಸಲಾಗಿದೆ ಎನ್ನಲಾಗಿದೆ. ಪ್ರಸ್ತುತ ವಿಧಾನ ಪರಿಷತ್‍ ನಲ್ಲಿ ಬಿಜೆಪಿಯ 41 ಸದಸ್ಯರಿದ್ದಾರೆ. ಕಾಂಗ್ರೆಸ್‍ ನ 26 ಮತ್ತು ಜೆಡಿಎಸ್‍ ನ 8 ಸದಸ್ಯರಿದ್ದಾರೆ. ಹೀಗಾಗಿ ಈ ಬಾರಿ ಪರಿಷತ್ ನಲ್ಲಿ ಮಸೂದೆ ಪಾಸಾಗಲಿದೆ ಎನ್ನಲಾಗಿದೆ. ಮತಾಂತರ ನಿಷೇಧ ವಿಧೇಯಕಕ್ಕೆ ಈಗಾಗಲೇ ವಿಧಾನಸಭೆಯಲ್ಲಿ ಅನುಮೋದನೆ ದೊರೆತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ನಗರದ ಸೇಂಟ್ ಜೋಸೆಫ್ ಕಾನ್ವೆಂಟ್ ಹೈಯರ್ ಪ್ರೈಮರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಮೂವರು ಬಾಲಕಿಯರು ನಾಪತ್ತೆಯಾಗಿರುವ ಘಟನೆ ಪುಲಕೇಶಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸೆಪ್ಟೆಂಬರ್ 6 ರಂದು ಮೂವರು ಬಾಲಕಿಯರು ನಾಪತ್ತೆಯಾಗಿದ್ದು, ಪೋಷಕರು ಪುಲಕೇಶಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಶಕ್ತೇಶ್ವರಿ , ವರುಣಿಕಾ, ನಂದಿನಿ ನಾಪತ್ತೆಯಾಗಿರುವ ಬಾಲಕಿಯರಾಗಿದ್ದಾರೆ. ಕಾಣೆಯಾಗಿ 9 ದಿನವಾದರೂ ಇನ್ನೂ ಬಾಲಕಿಯರು ಪತ್ತೆಯಾಗಿಲ್ಲ. ಮಕ್ಕಳ ಬಗ್ಗೆ ಕೇಳಿದರೇ ಆಡಳಿತ ಮಂಡಳಿಯವರು ಸರಿಯಾಗಿ ಹೇಳುತ್ತಿಲ್ಲ ಎಂದು ಶಾಲಾ ಆಡಳಿತ ಮಂಡಳಿ ವಿರುದ್ಧ ದೂರು ನೀಡಿದ್ದಾರೆ. ಮನೆಯಲ್ಲಿ ಸಮಸ್ಯೆ ಎಂದು ಪತ್ರ?ಮನೆಯಲ್ಲಿ ಸಮಸ್ಯೆ ಹಾಗಾಗಿ ಮನೆ ಬಿಟ್ಟು ಹೋಗ್ತಿದ್ದೀವಿ. ಓದಲು ಇಷ್ಟವಿಲ್ಲ ಹಾಗಾಗಿ ಮನೆ ಬಿಟ್ಟು ಹೋಗ್ತಿದ್ದೀವಿ ಎಂದು ಪತ್ರ ಬರೆದಿದ್ದಾರಂತೆ ಬಾಲಕಿಯರು ಎಂಬ ಮಾಹಿತಿ ಸಿಕ್ಕಿದೆ. ಶಕ್ತೀಶ್ವರಿ 9 ನೇ ತರಗತಿ, ವರುಣಿಕ 10 ನೇ ತರಗತಿ, ನಂದಿನಿ 9 ನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿಯರಾಗಿದ್ದಾರೆ. ಬೆಂಗಳೂರಿನ ಪುಲಕೇಶಿ ನಗರದಿಂದ ನಾಪತ್ತೆಯಾಗಿರುವ ವಿದ್ಯಾರ್ಥಿಗಳ ಪತ್ತೆಗೆ ವಿಶೇಷ ತಂಡವನ್ನು…

Read More

ಸವದತ್ತಿ : ಸವದತ್ತಿ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ ಅವರು ಆರೋಗ್ಯದಲ್ಲಿ ಏರುಪೇರು ಆಗಿದ್ದು, ತಪಾಸಣೆಗಾಗಿ ಚೆನ್ನೈಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಕ್ಕರೆ ಕಾಯಿಲೆ ಹಿನ್ನೆಲೆಯಲ್ಲಿ ಕೆಲವು ದಿನಗಳ ಹಿಂದೆ ಚೆನ್ನೈಯಲ್ಲಿ ಚಿಕಿತ್ಸೆ ಪಡೆದಿದ್ದ ಅವರಿಗೆ ವೈದ್ಯರು ವಿಶ್ರಾಂತಿ ಪಡೆಯಲು ಸಲಹೆ ನೀಡಿದ್ದರು. ಹಾಗಾಗಿ, ಚೆನ್ನೈಯಲ್ಲಿ ಐಎಎಸ್ ಅಧಿಕಾರಿಯಾಗಿರುವ ಮಾಮನಿಯವರ ಸಹೋದರ ರಾಜಣ್ಣ ಮಾಮನಿ ಪುತ್ರನ ಮನೆಯಲ್ಲಿದ್ದು ವಿಶ್ರಾಂತಿ ಪಡೆದು ಮತ್ತೊಮ್ಮೆ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಮತ್ತೊಮ್ಮೆ ತಪಾಸಣೆ ನಡೆಸಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದೆಂದು ವೈದ್ಯರು ತಿಳಿಸಿದ್ದಾರೆ. ಶಾಸಕರಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ಮಾಮನಿ ಕುಟುಂಬದ ಮೂಲಗಳು ತಿಳಿಸಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಮೂರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಪುನಾ-ಬೆಂಗಳೂರು ರಸ್ತೆಯ ವರೂರು ಬಳಿಯ ಗಣೇಶ್ ಹೋಟೆಲ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ದಾವಣಗೆರೆ ಮೂಲದ ಚಾಲಕ ಶಾರೂಖ್ (27), ಸೋಹೆಲ್​(26) ಮತ್ತು ಎಚ್.ಕೆ. ಸುಶೀಲಾ (38) ಮೃತರು. ದಾವಣಗೆರೆಯಿಂದ ಮಂಗಳವಾರ ರಾತ್ರಿ ಹುಬ್ಬಳ್ಳಿ ಕಡೆಗೆ ಕಾರಿನಲ್ಲಿ ಬರುತ್ತಿದ್ದರು. ಮಾರ್ಗಮಧ್ಯೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದು ನಾಲ್ಕು ಬಾರಿ ಪಲ್ಟಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಫಾರುಕ್ ಎಂಬುವರನ್ನು ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿಯ ಗ್ರಾಮೀಣ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಕುಟುಂಬ ವಿರುದ್ಧ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಮತ್ತೆ ಅವರಿಗೆ ಸಂಕಷ್ಟ ಎದುರಾಗಿದೆ. ಲೋಕಾಯುಕ್ತದಲ್ಲಿ ಎಫ್‌ ಐಆರ್‌ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಎಫ್‌ ಐಆರ್‌ ದಾಖಲಿಸಿ ತನಿಖೆ ನಡೆಸುವಂತೆ ಕೋರ್ಟ್‌ ಸೂಚನೆ ನೀಡಿದೆ. ಹೀಗಾಗಿ ಯಡಿಯೂರಪ್ಪಗೆ ಸಂಕಷ್ಟ ಉಂಟಾಗಿದೆ. ಕೆಲ ದಿನಗಳ ಹಿಂದೆಯಷ್ಟೇ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಕುಟುಂಬದವರ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣವನ್ನು ಸಿಬಿಐ ಅಥವಾ ಎಸ್‌ಐಟಿ ತನಿಖೆಗೆ ವಹಿಸಬೇಕೆಂದು ಕೋರಿ ಪಿಐಎಲ್ ಸಲ್ಲಿಸುವುದಕ್ಕೆ ಅವಕಾಶ ನೀಡುವಂತೆ ಹೈಕೋರ್ಟ್​ನಲ್ಲಿ ಟಿ.ಜೆ.ಅಬ್ರಹಾಂ ಅರ್ಜಿ ಸಲ್ಲಿಸಿದ್ದರು. ಆದರೆ ಟಿ.ಜೆ.ಅಬ್ರಹಾಂ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್, ಈ ಹಿಂದೆ ಅರ್ಜಿದಾರರು ಖಾಸಗಿ ದೂರು ಸಲ್ಲಿಸಿದ್ದ ಹಿನ್ನೆಲೆ ಪಿಐಎಲ್ ಆಗಿ ಪರಿಗಣಿಸಲು ಸಾಧ್ಯವಿಲ್ಲವೆಂದು ಅರ್ಜಿಯನ್ನು ತಿರಸ್ಕರಿಸಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More