Subscribe to Updates
Get the latest creative news from FooBar about art, design and business.
- ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
- ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
- ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
- ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್ ಜಿ ಯೋಜನೆ ಜಾರಿ : ಜಿಪಂ ಸಿಇಒ
- ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ
- ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ
- ತುಮಕೂರು: ವಿಮೆ ಹಣ, ಮದ್ಯದ ಅಮಲಿಗೆ ನಡೆದಿದ್ದ 3 ಭೀಕರ ಕೊಲೆ ಕೇಸ್ ಭೇದಿಸಿದ ಪೊಲೀಸರು; 7 ಮಂದಿ ಬಂಧನ
- ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ
Author: admin
ಕರ್ನಾಟಕ ಉಚ್ಚ ನ್ಯಾಯಾಲಯವು ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿತ್ತು. ಇದೀಗ ಫಲಿತಾಂಶ ಪ್ರಕಟಗೊಂಡಿದ್ದು ಎನ್ ಗಾಯತ್ರಿ ಅವರು ಆಯ್ಕೆಯಾಗಿದ್ದಾರೆ. ಕೋಲಾರ ಜಿಲ್ಲೆಯ ಬಂಗಾರ ಪೇಟೆಯ ತಾಲೂಕಿನ ಕಾರಹಳ್ಳಿಯ ಗಾಯತ್ರಿ ಅವರು 2021ರಲ್ಲಿ ಕಾನೂನು ಪದವಿ ಪಡೆದುಕೊಂಡಿದ್ದಾರೆ. ತಾವು ಕಂಡ ಕನಸನ್ನು ನನಸು ಮಾಡಿಕೊಳ್ಳುವ ನಿಟ್ಟಿನಲ್ಲಿ ಸತತ ಮತ್ತು ಸರಿಯಾದ ಪ್ರಯತ್ನದ ಮೂಲಕ 25ನೇ ವಯಸ್ಸಿಗೆ ಸಿವಿಲ್ ನ್ಯಾಯಾಧೀಶೆ ಹುದ್ದೆಗೆ ಆಯ್ಕೆಯಾಗುವಲ್ಲಿ ಯಶಸ್ವಿಯಾಗಿದ್ದು, ಪ್ರಶಂಸೆಗೆ ಪಾತ್ರರಾಗಿದ್ದಾರೆ. ಅತ್ಯಂತ ಕೆಳಸಮುದಾಯ ಮತ್ತು ಬಡತನದ ಹಿನ್ನೆಲೆಯಿಂದ ಬಂದ ಗಾಯತ್ರಿ ಅವರು ಬಂಗಾರಪೇಟೆಯ ಕಾರಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಾಲಕಿಯರ ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಣ ಪಡೆದುಕೊಂಡಿದ್ದಾರೆ. ಕೆಜಿಎಫ್ ನ ಕೆಂಗಲ್ ಹನುಮಂತಯ್ಯ ಲಾ ಕಾಲೇಜಿನಲ್ಲಿ ಕಾನೂನು ಪದವಿಯನ್ನು ಕರ್ನಾಟಕಕ್ಕೆ 4ನೇ ರ‍್ಯಾಂಕ್ ಬರುವ ಮೂಲಕ ಪಡೆದುಕೊಂಡಿದ್ದಾರೆ. ನಾರಾಯಣಸ್ವಾಮಿ, ವೆಂಕಟಲಕ್ಷ್ಮೀ ಅವರ ಒಬ್ಬಳೇ ಮಗಳು. ಮೂವರು ಸಹೋದರರಿದ್ದಾರೆ. ತೀರಾ ಬಡತನದಲ್ಲಿ ಬೆಳೆದ ಗಾಯತ್ರಿ ಮೊದಲಿನಿಂದಲೂ ಸಾಮಾಜಿಕ…
ವಿಜಯಪುರ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯಿಂದ ನೋಟಿಸ್ ನೀಡಲಾಗಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್, ನನಗೆ ಯಾವುದೇ ನೋಟಿಸ್ ಬಂದಿಲ್ಲ. ಸುಮ್ಮನೆ ವದಂತಿ ಹಬ್ಬಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಈ ನಗರದಲ್ಲಿ ಮಾತನಾಡಿದ ಅವರು, ನನಗೆ ನೋಟಿಸ್ ಕೊಡುವಂತಹ ಪಕ್ಷ ವಿರೋಧಿ ಹೇಳಿಕೆ ನೀಡಿಲ್ಲ. ಭ್ರಷ್ಟರು ರಾಜಕೀಯ ಮುಂದುವರೆಸುವವರ ಬಗ್ಗೆ ನಾನು ಮಾತನಾಡಿದ್ದೇನೆ. ಇನ್ನು ಯಾಕೆ ನೋಟಿಸ್ ನೀಡಿಲ್ಲ ಎಂದು ಕೆಲವರಿಗೆ ಕಾಡುತ್ತಿದೆ. ಅದಕ್ಕೆ ಇಂತಹ ಊಹಾಪೋಹ ಹರಡಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ: ಶಿವಸೇನೆಯ ಸಂಸದ ಧೈರ್ಯಶೀಲ್ ಮಾನೆ ಅವರಿಗೆ ಕರ್ನಾಟಕದ ಗಡಿ ಪ್ರವೇಶಿಸಿ ಬೆಳಗಾವಿಗೆ ಬರದಂತೆ ನಿರ್ಬಂಧ ಹೇರಿ ಆದೇಶ ಹೊರಡಿಸಿದ್ದಾರೆ. ಈ ಮೂಲಕ ರಾತ್ರೋರಾತ್ರಿ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಶಾಕ್ ನೀಡಿದ್ದಾರೆ. ಇಂದು ನಗರದಲ್ಲಿ ಎಂಇಎಸ್ ಕಾರ್ಯಕರ್ತರು ಹುತಾತ್ಮರ ದಿನ ಆಚರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಹಾರಾಷ್ಟ್ರದ ಗಡಿ ಸಮನ್ವಯ ಸಮಿತಿ ಅಧ್ಯಕ್ಷ ಆಗಿರುವ ಧೈರ್ಯಶೀಲ್ ಮಾನೆ ಆಗಮಿಸಲಿದ್ದರು. ಮಾನೆ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದೇ ಆದಲ್ಲಿ ಪರಿಸ್ಥಿತಿ ಹದಗೆಡಬಹುದು. ಪ್ರಚೋದನಾತ್ಮಕ ಭಾಷಣ ಮಾಡಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವ ಸಾಧ್ಯತೆ ಇದೆ ಎಂದು ವಿಶೇಷ ಅಧಿಕಾರ ಬಳಸಿ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಗಡಿ ವಿವಾದ ಸಂಬಂಧ ಉದ್ರೇಕಕಾರಿ ಹೇಳಿಕೆಗಳಿಂದ ಭಾಷಾ ಸಮಸ್ಯೆ ಉದ್ಭವವಾಗಬಹುದು. ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗಿ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯಾಗುವ ಸಾಧ್ಯತೆ ಹೆಚ್ಚು. ಹೀಗಾಗಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…
ಪಿಂಪ್ ಗಳಿಂದ ಹಣ ಮಾಡಿಕೊಳ್ಳುವ ಸ್ಥಿತಿ ಬಂದರೇ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೇಳಿಕೆ ನೀಡಿದ್ದ ಗೃಹಸಚಿವ ಅರಗ ಜ್ಞಾನೇಂದ್ರ ಅವರಿಗೆ ಮಾಜಿ ಹೆಚ್.ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ರಾಮನಗರದ ಕೇತಗಾನಹಳ್ಳಿಯಲ್ಲಿ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ನಾನೇಕೆ ಅವರು ಅತ್ಮಹತ್ಯೆ ಮಾಡಿಕೊಳ್ಳಲಿ ಎಂದು ಹೇಳಲಿ. ನಿಮ್ಮ ಆತ್ಮಸಾಕ್ಷಿಗೆ ತಕ್ಕಂತೆ ನಡೆದು ಕೊಳ್ಳಬೇಕು. ಪೊಲೀಸ್ ಅಧಿಕಾರಿಗಳಿಂದ ಸ್ಯಾಂಟ್ರೋ ರವಿ ಹಣ ವಸೂಲಿ ಮಾಡಿದ್ದಾನೆ. 150 ಪೊಲೀಸ್ ಅಧಿಕಾರಿಗಳಿಂದ ಹಣ ವಸೂಲಿ ಮಾಡಿದ್ದಾನೆ. ಅರಗ ಜ್ಞಾನೇಂದ್ರ ಚೇಂಬರ್ ನಲ್ಲೇ ಎರಡು ಫೋಟೊಗಳಿವೆ. ಆರಗ ಜ್ಞಾನೇಂದ್ರ ಯಾಕೆ ಇಂತಹ ವ್ಯಕ್ತಿಯನ್ನ ಸೇರಿಸಿಕೊಂಡರು. ತಮ್ಮ ಭೇಟಿಗೆ ಸಾವಿರಾರು ಜನ ಬರುತ್ತಾರೆ ಎಂದಿದ್ದಾರೆ. ನಾನು ಒಪ್ಪಿಕೊಳ್ಳುತ್ತೇನೆ. ನಮ್ಮನ್ನು ನೋಡಲು ಸಹ ಜನರು ಬರುತ್ತಾರೆ. ಆತ ಏನು ನಡೆಸಿಕೊಂಡು ಬಂದಿದ್ದಾನೆ ಇವರಿಗೆ ಗೊತ್ತಿಲ್ವಾ…? ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಉಚಿತ ವಿದ್ಯುತ್ ಘೋಷಣೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಹೆಚ್.ಡಿ ಕುಮಾರಸ್ವಾಮಿ, ನಾನು ಕಾಂಗ್ರೆಸ್ ನವರ ಘೋಷಣೆ ಬಗ್ಗೆ ಮಾತನಾಡಲ್ಲ. ದುಡಿಯುವವರ ಕೈ ಬಲಪಡಿಸಲು…
ರಿಪ್ಪನ್‌ಪೇಟೆ: ಸಮೀಪದ ಕೋಣಂದೂರು ಶ್ರೀಕ್ಷೇತ್ರ ಶಿವಲಿಂಗೇಶ್ವರ ಬೃಹನ್ಮಠದಲ್ಲಿ ಜನವರಿ 20 ರಂದು ಧನುರ್ಮಾಸದ ಅಂಗವಾಗಿ ಶ್ರೀಪತಿ ಪಂಡಿತರಾಧ್ಯ ಶಿವಚಾರ್ಯ ಮಹಾಸ್ವಾಮೀಜಿಯವರು ಲೋಕಕಲ್ಯಾಣಾರ್ಥ ಶಿವಪೂಜಾನುಷ್ಟಾನ ಮತ್ತು ಧರ್ಮಜಾಗೃತಿ ಕಾರ್ಯಕ್ರಮವನ್ನು ಜನವರಿ 20 ರಂದು ಏರ್ಪಡಿಸಿದ್ದಾರೆಂದು ಮಠದ ಪ್ರಕಟಣೆ ತಿಳಿಸಿದೆ. ಧರ್ಮ ಸಮಾರಂಭದ ದಿವ್ಯಸಾನಿಧ್ಯವನ್ನು ಆನಂದಪುರ ಮುರುಘಾರಾಜೇಂದ್ರ ಸಂಸ್ಥಾನ ಮಠದ ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮಿಜಿ ವಹಿಸಿ ಅಶೀರ್ವಚನ ನೀಡುವರು. ಹೊನ್ನಾಳಿ ಹೀರೆಕಲ್ಮಠದ ಒಡೆಯರ್ ಡಾ.ಚನ್ನಮಲ್ಲಿಕಾರ್ಜುನ ಮಹಾಸ್ವಾಮೀಜಿ ಅಧ್ಯಕ್ಷತೆ ವಹಿಸುವರು. ಧರ್ಮಸಮಾರಂಭವನ್ನು ಸಂಸದ ಬಿ.ವೈ.ರಾಘವೇಂದ್ರ ಉದ್ಘಾಟಿಸುವರು. ಶ್ರೀಶಿವಲಿಂಗೇಶ್ವರ ತೂಗು ಪಂಚಾಂಗವನ್ನು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಬಿಡುಗಡೆ ಮಾಡುವರು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಶಾಸಕ ಹರತಾಳು ಹಾಲಪ್ಪ, ರುದ್ರೇಗೌಡ, ಆರ್.ಎಂ.ಮಂಜುನಾಥ, ಉದ್ಯಮಿ ಕೆ.ಆರ್.ಪ್ರಕಾಶ್, ಕೋಣಂದೂರು ಜಿ.ಪಂ.ಮಾಜಿ ಸದಸ್ಯೆ ಅಪೂರ್ವ ಶರಥಿ ಪೂರ್ಣೇಶ್, ಗ್ರಾಮ ಪಂಚಾಯ್ತಿ ಅಧ್ಯಕ್ಷ ಶಾಂತಮ್ಮ, ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ. ಮೇಘರಾಜ್ ಹಾಗೂ ನಾಡಿನ ವಿವಿಧ ಮಠಾಧೀಶರುಗಳು ಪಾಲ್ಗೊಳ್ಳಲಿದ್ದಾರೆಂದು ಮಠದ ಪೀಠಾಧ್ಯಕ್ಷರಾದ ಶ್ರೀಪತಿ ಪಂಡಿತರಾಧ್ಯ ಶಿವಾಚಾರ್ಯ ಸ್ವಾಮಿಜಿ…
ನವದೆಹಲಿ: ರಾಜ್ಯದ ಬಜೆಟ್ ಅಧಿವೇಶನದ ನಂತರ ನಾಲ್ಕು ಕಡೆ ರಥಯಾತ್ರೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕಾರಿಣಿಯಲ್ಲಿ ಹಲವಾರು ರಾಜಕೀಯ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ ಎಂದರು. ಚುನಾವಣೆ ನಡೆಯುವ ರಾಜ್ಯಗಳ ಬಗ್ಗೆ ವರದಿ ಮಂಡಿಸಲಾಯಿತು. ಬೂತ್ ಮಟ್ಟದ ಕಾರ್ಯಕ್ರಮಗಳಿಂದ ಹಿಡಿದು, ಸಂಘಟನೆ ಕುರಿತು ಮಾಹಿತಿ ನೀಡಲಾಗಿದೆ ಎಂದು ಹೇಳಿದರು. ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಇಲ್ಲದೆ ಚುನಾವಣೆ ಎದುರಿಸುತ್ತಿದ್ದೇನೆ. ನಕಾರಾತ್ಮಕ ಪ್ರಚಾರದ ಪ್ರಯತ್ನಗಳು ನಡೆದರು ವಿಪಕ್ಷಗಳು ಪರಿಣಾಮ ಬಿರಿಲ್ಲ. ಬಜೆಟ್ ಅಧಿವೇಶನದ ಬಳಿಕ ನಾಲ್ಕು ಕಡೆಯಿಂದ ರಥಯಾತ್ರೆ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ. ಆದರೆ ನಾಲ್ಕು ದಿಕ್ಕಿನಿಂದ ರಥಯಾತ್ರೆ ಮಾಡಬೇಕು ಎಂದು ನಿರ್ಧರಿಸಿದೆ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ : 2023-2024 ನೇ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ಬೆಳಗಾವಿ ಜಿಲ್ಲೆಯಲ್ಲಿ ಮೊರರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಇತರೆ ವಸತಿ ಶಾಲೆಗಳ 6ನೇ ತರಗತಿಯ ದಾಖಲಾತಿಗಾಗಿ ಮಾರ್ಚ್ 12, 2023 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ವರೆಗೆ ಪರೀಕ್ಷೆ ನಡೆಯಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಪ್ರವೇಶ ಪರೀಕ್ಷೆ ಮತ್ತುಆನ್‍ಲೈನ್ ಕೌನ್ಸಿಲಿಂಗ್ ನಡೆಸಲಾಗುವುದು. ಪ್ರಸ್ತುತ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಪಾಲಕರು/ಪೋಷಕರು ತಮ್ಮ ಮಕ್ಕಳನ್ನು 6ನೇ ತರಗತಿಗೆ ವಸತಿ ಶಾಲೆಗಳಿಗೆ ದಾಖಲಿಸಲು ಜನವರಿ 5, 2023 ರಿಂದ ಜನವರಿ 22 ರವರೆಗೆ ಅವಶ್ಯಕ ದಾಖಲಾತಿಗಳೊಂದಿಗೆ ತಮ್ಮ ಹತ್ತಿರದ ವಸತಿ ಶಾಲೆಗಳ ಮೂಲಕ ಆನ್‍ಲೈನ್ ಅರ್ಜಿ ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕೊರಟಗೆರೆ: ಕೊರಟಗೆರೆಯಲ್ಲಿ ರೈತಚೈತನ್ಯ ಮತ್ತು ರೈತ ಸಂಕ್ರಾಂತಿ ಸಂವಾದ ಕಾರ್ಯಕ್ರಮವು ಯಶಸ್ವಿಯಾಗಿದೆ ಎಂದು ಮಾಜಿ ಶಾಸಕ ಪಿ.ಆರ್.ಸುಧಾಕರಲಾಲ್ ತಿಳಿಸಿದರು. ಕೊರಟಗೆರೆ ಪಟ್ಟಣದ ಲಕ್ಷ್ಮೀನರಸಿಂಹ ಕಲ್ಯಾಣ ಮಂಟಪದಲ್ಲಿ ಜಾತ್ಯಾತೀತ ಜನತಾದಳ ಪಕ್ಷದಿಂದ ಸೋಮವಾರ ಏರ್ಪಡಿಸಲಾಗಿದ್ದ ‘ರೈತನಾಯಕ ಕುಮಾರಣ್ಣನ ಜೊತೆ ರೈತಚೈತನ್ಯ ಮತ್ತು ರೈತ ಸಂಕ್ರಾಂತಿಯ ವಿಡೀಯೊ ಸಂವಾದ’ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು. ಕರ್ನಾಟಕದ 224 ಕ್ಷೇತ್ರದ ರೈತರ ಸಂಕಷ್ಟವನ್ನು ತಿಳಿಯುವ ಉದ್ದೇಶದಿಂದ ರೈತ ಸಂಕ್ರಾಂತಿ ಸಂವಾದ ಕಾರ್ಯಕ್ರಮ ನಡೆದಿದೆ. ರೈತನ ಪರವಾಗಿ ಸದಾ ಚಿಂತಿಸುವ ರೈತನಾಯಕ ಕುಮಾರಣ್ಣ ಮುಖ್ಯಮಂತ್ರಿ ಆದರೆ, ರೈತರ ಆರ್ಥಿಕ ಅಭಿವೃದ್ದಿಗೆ ಸಹಕಾರಿ ಆಗಲಿದೆ. ಕೊರಟಗೆರೆಯ ರೈತರು ಮುಸುಕಿನ ಜೋಳ ಮತ್ತು ರಾಗಿಬೆಳೆಯ ಬಗ್ಗೆ ಸಂವಾದ ಕಾರ್ಯಕ್ರಮದಲ್ಲಿ ಚರ್ಚಿಸಿದ್ದಾರೆ ಎಂದು ಹೇಳಿದರು. ತೋವಿನಕೆರೆ ರೈತ ಭೀಮರಾಜು ಮಾತನಾಡಿ, ಕೊರಟಗೆರೆ ಕ್ಷೇತ್ರದಲ್ಲಿ ಮಳೆಯಿಂದ ರಾಗಿಬೆಳೆಯು ಕೊಚ್ಚಿಹೋಗಿದೆ. ರಾಗಿಬೆಳೆಗೆ ಸರಕಾರ ಬೆಂಬಲ ಬೆಲೆ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ. ರಾಗಿ ಮಾರಾಟಕ್ಕೆ ಕೊರಟಗೆರೆ ರೈತರು ಅಲೆದಾಡುವ ಪರಿಸ್ಥಿತಿ ನಿರ್ಮಾಣ ಆಗಿದೆ. ಕೊರಟಗೆರೆ ಕ್ಷೇತ್ರಕ್ಕೆ…
ಮನುಷ್ಯನ ಆಸೆಗೆ ಕೊನೆಯೇ ಇಲ್ಲ, ಅದರಲ್ಲಿ ಸಾಕಷ್ಟು ಆಸೆಗಳು ಚಟವಾಗಿ ಮಾರ್ಪಡುವುದು ಹೆಚ್ಚು. ಆ ಪೈಕಿ ಮದ್ಯಪಾನ, ಧೂಮಪಾನ ಪ್ರಮುಖವಾದದ್ದು, ಮದ್ಯಪಾನ, ಧೂಮಪಾನ ಮಾಡುವುದರಿಂದ ಪುರುಷರಲ್ಲಿ ಬಂಜೆತನ ಸೃಷ್ಟಿಯಾಗುವ ಸಾಧ್ಯತೆ ಇದೆ. ಮದ್ಯಪಾನ ಒಂದೆರಡು ಪೆಗ್ ನಂತೆ ಮಿತಿಯಲ್ಲಿ ಇದ್ದರೆ, ಯಾವುದೇ ಹಾನಿ ಇರುವುದಿಲ್ಲ. ಆದರೆ, ಅದಕ್ಕೂ ಹೆಚ್ಚಿನ ಚಟ ಹೊಂದಿರುವವರ ಸಂತಾನ ಭಾಗ್ಯವನ್ನು ಕಳೆದುಕೊಳ್ಳುವ ಸಾಧ್ಯತೆಗಳು ಹೆಚ್ಚಂತೆ. 2015ರಲ್ಲಿ ನಡೆಸಿದ ಸಂಶೋಧನೆಯೊಂದರಲ್ಲಿ, ಅತೀಯಾದ ಮದ್ಯಪಾನ ಮಾಡುವುದರಿಂದ ವೀರ್ಯಾಣುಗಳು ನಾಶವಾಗಿ ಪುರುಷರಲ್ಲಿ ಬಂಜೆತನ ಸೃಷ್ಟಿಯಾಗುವ ಶೇ.35ರಷ್ಟು ಸಾಧ್ಯತೆಗಳಿವೆ ಎಂದು ಸಿಡಿಸಿ ಹೇಳಿದೆ. ಮದ್ಯಪಾನ ಮಾಡುವುದರಿಂದ ಹಾರ್ಮೋನುಗಳ ಸಂಖ್ಯೆ ಕಡಿಮೆಯಾಗುವುದು, ಇದಲ್ಲದೇ ಫಾಲಿಕಲ್ ಉತ್ಪತ್ತಿ ಮಾಡುವ ಹಾರ್ಮೋನುಗಳು ಕೂಡ ಕಡಿಮೆಯಾಗುವುದು. ಇದರಿಂದಾಗಿ ವೀರ್ಯಗಳ ಸಂಖ್ಯೆ ಕಡಿಮೆಯಾಗುತ್ತದೆ. ಅತೀಯಾದ ಮದ್ಯಪಾನದಿಂದ ಪುರುಷರ ಜನನಾಂಗದ ಗಾತ್ರ ಕೂಡ ಕುಗ್ಗುತ್ತದೆ. ಇದರಿಂದಾಗಿ ಶೀಘ್ರಸ್ಖಲನ ಉಂಟಾಗುತ್ತದೆ. ಮದ್ಯಪಾನದ ಜೊತೆಗೆ ಗಾಂಜಾ, ಧೂಮಪಾನದಿಂದಲೂ ವೀರ್ಯಾಣುಗಳು ಕಡಿಮೆಯಾಗುತ್ತದೆ. ಸಣ್ಣ ವಯಸ್ಸಿನಿಂದಲೇ ಕುಡಿತದ ಚಟಕ್ಕೆ ಸಿಲುಕಿದವರಲ್ಲಿ ಇಂತಹ ಸಮಸ್ಯೆಗಳು ಕಂಡು ಬರುತ್ತದೆ. ಮದ್ಯಪಾನದಿಂದ…
ಮಂಜುಸ್ವಾಮಿ ಎಂ.ಎನ್. ಕೊರಟಗೆರೆ ಕೊರಟಗೆರೆ: ನಿಮ್ಮ ಆಧಾರ್ ಕಾರ್ಡು ಮನೆಗೆ ಇನ್ನೂ ಬಂದಿಲ್ವಾ.. ಬ್ಯಾಂಕು ಚೆಕ್ ಬುಕ್ ನಿಮ್ಮ ಕೈಗೆ ಇನ್ನೂ ಸೇರಿಲ್ವಾ.. ರಿಜಿಸ್ಟರ್ ಪೋಸ್ಟ್–ಸ್ಪೀಡ್ ಪೋಸ್ಟ್ ಮನೆಗೆ ಬರ್ತಾ ಇಲ್ವಾ.. ಕೆಲಸದ ಆಹ್ವಾನದ ತುರ್ತುಕರೆ ನಿಮಗೇ ಬರೋದೇ ಇಲ್ಲ ಬಿಡಿ.. ಯಾಕೆ ಗೊತ್ತಾ ಮಲ್ಲೇಕಾವು ಅಂಚೆ ಕಚೇರಿಯ ಅಂಚೆ ಪಾಲಕ ಕಳೆದ 45ದಿನಗಳಿಂದ ಕಚೇರಿಗೆ ಬಂದೇ ಇಲ್ವಂತೆ..!! ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ಸಿದ್ದರಬೆಟ್ಟ ಗ್ರಾಪಂ ವ್ಯಾಪ್ತಿಯ ಮಲ್ಲೇಕಾವು ಗ್ರಾಮದ ಅಂಚೆ ಕಚೇರಿಯ ಅಂಚೆ ಪಾಲಕ ನಾಗೇಂದ್ರ ಎಂಬಾತ ಕಳೆದ 45 ದಿನಗಳಿಂದ ಕರ್ತವ್ಯಕ್ಕೆ ಗೈರುಹಾಜರಿಯಾಗಿದ್ದು, ಹತ್ತಾರು ಗ್ರಾಮಗಳಿಗೆ ತುರ್ತುಸೇವೆ ನೀಡಬೇಕಾದ ಅಂಚೆ ಪಾಲಕ ಗೈರಾದ ಹಿನ್ನೆಲೆಯಲ್ಲಿ ನೂರಾರು ಸಮಸ್ಯೆಗಳು ಸೃಷ್ಟಿಯಾಗಿವೆ. ಬ್ಯಾಂಕ್ ಬೆಕ್, ಆಧಾರ್ ಕಾರ್ಡು, ಕೋರ್ಟ್ ನೊಟೀಸ್, ಎಟಿಎಂ ಕಾರ್ಡು, ರೇಷನ್ ಕಾರ್ಡು, ಎಲ್ ಐಸಿ ಬಾಂಡ್, ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್, ಜಾಬ್ ನೊಟೀಸ್, ಕೊರಿಯರ್, ಪಾರ್ಸಲ್ ಗಳು, ಹತ್ತಾರು ಗ್ರಾಮದ ನೂರಾರು ಜನ ಗ್ರಾಹಕರ…