Author: admin

ಪಣಜಿ: ಗೋವಾದಲ್ಲಿ ಕಾಂಗ್ರೆಸ್ ಪಕ್ಷವು ಪಕ್ಷಾಂತರದ ಯತ್ನವನ್ನು ತಡೆದ ಎರಡು ತಿಂಗಳ ನಂತರ, 11 ಶಾಸಕರಲ್ಲಿ ಎಂಟು ಮಂದಿ ಶಾಸಕರು ಬಿಜೆಪಿ ಸೇರಿದ್ದಾರೆ. ಹಿರಿಯ ನಾಯಕರಾದ ದಿಗಂಬರ್ ಕಾಮತ್ ಮತ್ತು ಮೈಕೆಲ್ ಲೋಬೋ ನೇತೃತ್ವದಲ್ಲಿ ಈ ಶಾಸಕರು ಆಡಳಿತಾರೂಢ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಭಾರತ್ ಜೋಡೋ ಯಾತ್ರೆಯ ನಡುವೆಯೇ ಗೋವಾದಲ್ಲಿನ ಸಾಮೂಹಿಕ ಪಕ್ಷಾಂತರವು ಕಾಂಗ್ರೆಸ್ ಪಕ್ಷಕ್ಕೆ ಭಾರಿ ಮುಜುಗರವನ್ನುಂಟುಮಾಡಿದೆ. ಸಿಎಂ ಪ್ರಮೋದ್ ಸಾವಂತ್ ಸಮ್ಮುಖದಲ್ಲಿ ದಿಗಂಬರ ಕಾಮತ್, ಮೈಕಲ್ ಲೋಬೋ, ದೇಲಿಲಾ ಲೋಬೋ, ಸೇರಿದಂತೆ 8 ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. 40 ಸದಸ್ಯ ಬಲದ ಗೋವಾ ವಿಧಾನಸಭೆಯಲ್ಲಿ ಕಾಂಗ್ರೆಸ್ ಈಗ ಕೇವಲ 3 ಶಾಸಕರನ್ನು ಹೊಂದಿದ್ದು, ಬಿಜೆಪಿ ಸಂಖ್ಯೆ 28 ಕ್ಕೆ ಏರಿದೆ. ಕಾಂಗ್ರೆಸ್ ನ ಎಲ್ಲಾ ಶಾಸಕರು ಪ್ರಧಾನಿ ಮೋದಿ ಅವರ ಕೈಗಳನ್ನು ಬಲಪಡಿಸಲು ಪ್ರಯತ್ನಿಸುತ್ತಾರೆ ಎಂದು ಲೋಬೋ ಬಿಜೆಪಿಗೆ ಸೇರುವ ಸಂದರ್ಭದಲ್ಲಿ ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…

Read More

ಬಳ್ಳಾರಿ: ಕಾಲುವೆಗೆ ಆಟೋ ಪಲ್ಟಿಯಾಗಿ ಮೂವರು ಕಾರ್ಮಿಕರು ಮೃತಪಟ್ಟ ಘಟನೆ ಬಳ್ಳಾರಿ ತಾಲೂಕಿನ ಕೊಳಗಲ್​ ಬಳಿ ನಡೆದಿದೆ. ಆಟೋದಲ್ಲಿ 9 ಕಾರ್ಮಿಕರು ಕೂಲಿ ಕೆಲಸಕ್ಕೆ ತೆರಳುತ್ತಿದ್ದರು. ಈ ವೇಳೆ ತುಂಗಭದ್ರಾ ಕಾಲುವೆಗೆ ಆಟೋ ಪಲ್ಟಿಯಾಗಿದೆ. ಘಟನೆ ಸಂಬಂಧ ನಿಂಗಮ್ಮ, ದುರ್ಗಮ್ಮ, ಪುಷ್ಪಾವತಿ ಎಂಬುವವರ ಮೃತದೇಹಗಳು ಪತ್ತೆಯಾಗಿದ್ದು ಹೇಮಾವತಿ, ಶಿಲ್ಪಾ, ಮಹೇಶ್, ಭೀಮಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಲ್ಲು ತಪ್ಪಿಸಲು ಹೋಗಿ ಕಾಲುವೆಗೆ ಆಟೋ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಚಿಕ್ಕೋಡಿ: ಮಹಾರಾಷ್ಟ್ರ ಘಟ್ ಪ್ರದೇಶದಲ್ಲಿ ಭಾರಿ ಮಳೆ ಹಿನ್ನೆಲೆ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ. ಕೃಷ್ಣಾ ನದಿ ಅಪಾಯ ಮಟ್ಟ ಮೀರಿ ಹರಿಯುವತ್ತಿರುವ ಹಿನ್ನೆಲೆ ಕುಡಚಿ- ಉಗಾರ್ ಬ್ರಿಜ್ಡ್ ಮುಳುಗಡೆ ಹಂತಕ್ಕೆ ತಲುಪಿದೆ ಬ್ರಿಡ್ಜ್ ಮುಳುಗಡೆಗೆ ಇನ್ನು 2 ಅಡಿ ಮಾತ್ರ ಬಾಕಿ ಇದ್ದು ಕೃಷ್ಣಾ ನದಿ ಅಕ್ಕ ಪಕ್ಕದ ಜನೆತೆಗೆ ಜಾಗೃತಿ ವಹಿಸುವಂತೆ ಸ್ಥಳೀಯ ತಾಲೂಕಾಡಳಿತ ಎಚ್ಚರಿಕೆ ನೀಡಿದೆ, ಕೊಯ್ನ್ ಜಲಾಶಯದಿಂದ ಅಪಾರ ಪ್ರಮಾಣದ ನೀರು ಬಿಟ್ಟ ಹಿನ್ನೆಲೆ ಕೃಷ್ಣಾ ನದಿ ಒಳ ಹರಿವಿನ ಪ್ರಮಾಣ ವೇಗದಲ್ಲಿದೆ. ಆದ್ದರಿಂದ ಸಮೀಪದ ಜನರು ಜಾಗ್ರತೆ ವಹಿಸಲು ಅಧಿಕಾರಿಗಳು ಸೂಚಿಸಿದ್ದಾರೆ, ಇನ್ನು ರಾಜ್ಯದ ಹಲವೆಡೆ ಮಳೆಯ ಆರ್ಭಟ ಮುಂದುವರೆದಿದ್ದು ಹಲವಾರು ಪ್ರದೇಶಗಳು ಮುಳುಗಡೆಯಾಗಿವೆ. ಅಂತೆಯೇ ಕೆಲವೆಡೆ ವರುಣರಾಯ ನಿಲುಗಡೆಯಿಂದ ಪರಿಸ್ಥಿತಿ ಯಥಾಸ್ಥಿತಿಗೆ ಮರುಳಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬಾಗಲಕೋಟೆ: ಪಂಪ್ ಸೆಟ್ ತರಲು ಹೋಗಿದ್ದ ಯುವಕ ನದಿಯಲ್ಲಿ ಮುಳುಗಿ ಸಾವನ್ನಪ್ಪಿರೋ ಘಟನೆ ಮುಧೋಳ ತಾಲ್ಲೂಕಿನ ಒಂಟಗೋಡಿ ಗ್ರಾಮದಲ್ಲಿ ನಡೆದಿದೆ. ವಿಜಯ್ ಬಿರಾದಾರ (19) ಮೃತ ದುರ್ದೈವಿ. ಯುವಕ ದೊಡ್ಡಪ್ಪನ ಜೊತೆ ಪಂಪ್​​ಸೆಟ್ ತರಲು ಹೋಗಿದ್ದಾಗ ಘಟಪ್ರಭಾ ನದಿ ಹಿನ್ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಪೊಲೀಸ್​​ ಅಧಿಕಾರಿಗಳು ಹಾಗೂ ಮುಧೋಳ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಶವವನ್ನು ಹೊರ ತೆಗೆದಿದ್ದಾರೆ. ಮುಧೋಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು : ಪೂರ್ಣ ಪ್ರಮಾಣ ಮನೆ ಬಿದ್ದವರಿಗೆ 24 ಗಂಟೆ ಒಳಗೆ ಪರಿಹಾರ ಕೊಡ್ತಾ ಇದೀವಿ. ಇಷ್ಟೊಂದು ಪ್ರಮಾಣದಲ್ಲಿ ಯಾರು ಹಣವನ್ನು ಕೊಟ್ಟಿಲ್ಲ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದರು. ವಿಧಾನಸಭೆಯಲ್ಲಿ ಮಾತನಾಡಿದ ಅವರು, ನಾವು 2019ರಲ್ಲಿ 46,959 ಮನೆಗಳಿಗೆ 828.67 ರೂ. ಪರಿಹಾರ ಕೊಟ್ಟಿದ್ದೇವೆ. 2019ರಲ್ಲೇ ಬೆಳಗಾವಿಗೆ 120.05 ಕೋಟಿ ರೂ. ಕೊಟ್ಟಿದ್ದೇವೆ. ಇಷ್ಟು ಪ್ರಮಾಣದಲ್ಲಿ ಪರಿಹಾರವನ್ನು 75 ವರ್ಷದಲ್ಲಿ ಯಾರು ಒಂದೇ ಜಿಲ್ಲೆಗೆ ಕೊಟ್ಟಿಲ್ಲ. ಮೂರು ವರ್ಷದಲ್ಲೇ ಬೆಳಗಾವಿಗೆ 1726 ಕೋಟಿ ರೂಪಾಯಿ ನೀಡಿದ್ದೇವೆ ಎಂದರು. ಬೆಳೆ ಪರಿಹಾರದಲ್ಲಿ ನಮಗೆ ಹೊಲಕ್ಕೆ ಹೋಗಲು ಆಗ್ತಾ ಇಲ್ಲ. ಸರ್ವೇ ಮಾಡಲು ಆಗ್ತಾ ಇಲ್ಲ.ಹನಿಶ್ಚಿತವಾಗಿ ಸರ್ವೇ ಮಾಡ್ಬೇಕು ಅಂದ್ರೆ ಭೂಮಿ ಒಣಗಬೇಕು ಎಂದು ಹೇಳಿದರು. ಈ ವೇಳೆ ಶಾಸಕ ಶಿವಾನಂದ್ ಮಾತನಾಡಿ , ಮೊದಲನೇ ಕಂತಿನ ಹಣ ಬಿಡುಗಡೆ ಆಗಿದೆ. ಆದರೆ, ಎರಡು ಮತ್ತು ಮೂರನೇ ಕಂತಿನ ಹಣ ಆದಷ್ಟು ಬೇಗ ಬಿಡುಗಡೆ ‌ಮಾಡ್ಬೇಕು ಎಂದು ಮನವಿ…

Read More

ಬೆಳಗಾವಿ : ಜಿಲ್ಲೆಯಲ್ಲಿ ಇತ್ತೀಚೆಗೆ ಅತಿವೃಷ್ಟಿಯಿಂದ ಉಂಟಾಗಿದ್ದ ಬೆಳೆಹಾನಿಯ ಕುರಿತು ತಕ್ಷಣವೇ ಜಂಟಿ‌ ಸಮೀಕ್ಷೆ ಕೈಗೊಂಡು 11,234 ರೈತರಿಗೆ ಒಟ್ಟಾರೆ 17.01 ಕೋಟಿ ರೂಪಾಯಿ ಪರಿಹಾರವನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಜುಲೈ ಹಾಗೂ ಆಗಸ್ಟ್ ಮಾಹೆ ಸೇರಿದಂತೆ ಪ್ರಸಕ್ತ ಸಾಲಿನಲ್ಲಿ ಅತಿವೃಷ್ಟಿಯಿಂದ ಬೆಳೆಹಾನಿಯಾಗಿತ್ತು.ತಕ್ಷಣವೇ ಕಾರ್ಯಪ್ರವೃತ್ತಗೊಂಡ ಜಿಲ್ಲಾಡಳಿತವು ಕಂದಾಯ, ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳಿಂದ ಜಂಟಿ ಸಮೀಕ್ಷೆಯನ್ನು ಕೈಗೊಂಡು ಅತ್ಯಂತ ತ್ವರಿತವಾಗಿ ರೈತರಿಗೆ ಪರಿಹಾರ ಒದಗಿಸಿದೆ. ಜಿಲ್ಲೆಯಲ್ಲಿ ಹೆಸರು, ಮೆಕ್ಕೆಜೋಳ, ಹತ್ತಿ, ಸೂರ್ಯಕಾಂತಿ, ಸೋಯಾಬಿನ್ ಮತ್ತಿತರ ಬೆಳೆಹಾನಿಯಾಗಿತ್ತು.ಜಂಟಿ ಸಮೀಕ್ಷೆ ಆಧರಿಸಿ ಸರಕಾರದ‌ ಮಾರ್ಗಸೂಚಿ ಪ್ರಕಾರ ಆಯಾ ರೈತರ ಬ್ಯಾಂಕ್ ಖಾತೆಗಳಿಗೆ ಬೆಳೆಹಾನಿ ಪರಿಹಾರವನ್ನು ಬಿಡುಗಡೆಗೊಳಿಸಲಾಗಿದ್ದು, ನಾಳೆಯೇ ರೈತರ ಖಾತೆಗೆ ಹಣ ಜಮೆಯಾಗಲಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ. ಜಿಲ್ಲೆಯ ಒಟ್ಟು 11,234 ರೈತರ ಖಾತೆಗೆ ಒಟ್ಟಾರೆ 17,01,01,195 ರೂಪಾಯಿ ಜಮೆಯಾಗಲಿದೆ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…

Read More

ಬೆಳಗಾವಿ: ಪಶ್ಚಿಮ ಘಟ್ಟ ಪ್ರದೇಶದಲ್ಲಿ ರಣಮಳೆಯಾಗುತ್ತಿದ್ದು, ಮಹಾರಾಷ್ಟ್ರ ಹಾಗೂ ಕರ್ನಾಟಕದ ಗಡಿ ಭಾಗ, ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿಯುಂತಾಗಿದೆ. ಭಾರಿ ಮಳೆಯಿಂದಾಗಿ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದ್ದು, ಜಿಲ್ಲೆಯಲ್ಲಿ 17 ಸೇತುವೆಗಳು ಮುಳುಗಡೆಯಾಗಿವೆ. ಕಳೆದ ಎರಡು ದಿನಗಳಿಂದ ಬೆಳಗಾವಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಿಡಕಲ್ ಜಲಾಶಯ ತುಂಬಿ ಹರಿಯುತ್ತಿದೆ. ಪರಿಣಾಮ ಜಲಾಶಯದಿಂದ 27,000 ಕ್ಯೂಸೆಕ್ ನೀರನ್ನು ಘಟಪ್ರಭಾ ನದಿಗೆ ಬಿಡಲಾಗಿದ್ದು, ಗೋಕಾಕ್, ನಿಪ್ಪಾಣಿ ಸೇರಿದಂತೆ ಬೆಳಗಾವಿಯ ಹಲವೆಡೆಗಳಲ್ಲಿ ಪ್ರವಾಹವುಂಟಾಗಿದೆ. ಗೋಕಾಕ್ ತಾಲೂಕಿನಲ್ಲಿ ಘಟಪ್ರಭಾ ನದಿ ಉಕ್ಕಿ ಹರಿದ ಪರಿಣಾಮ ಮಾರ್ಕೆಟ್ ಗಳು ಮುಳುಗಡೆಯಾಗಿದ್ದು, ಉಪ್ಪಾರ ಓಣಿ, ಹಳೆ ದನದ ಪೇಟೆ ಹಾಗೂ ತಾಲೂಕಿನಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿ ಅವಾಂತರಗಳು ಸೃಷ್ಟಿಯಾಗಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ಬಹಳ ದಿನಗಳ ನಂತರ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿಸುದ್ದಿ ಸಿಕ್ಕಿದ್ದು, 2500 ಶಿಕ್ಷಕರ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಬಗ್ಗೆ ಶಿಕ್ಷಣ ಸಚಿವ ಬಿಸಿ ನಾಗೇಶ್‌ ಅವರು ತಮ್ಮ ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದಾರೆ. ಸರ್ಕಾರಿ ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 2,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ ಅವರು ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದಾರೆ. ಸಹ ಶಿಕ್ಷಕರು – 2,200 ಹುದ್ದೆಗಳು. ದೈಹಿಕ ಶಿಕ್ಷಣ ಶಿಕ್ಷಕರು – 200 ಹುದ್ದೆಗಳು. ವಿಶೇಷ ಶಿಕ್ಷಕರು – 100 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಪಣಜಿ: ಬಿಜೆಪಿ ನಾಯಕಿ ಸೋನಾಲಿ ಪೋಗಟ್ ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಗೋವಾ ಸರ್ಕಾರ ಕೇಂದ್ರವನ್ನು ಕೋರಿದೆ. ಸೋನಾಲಿ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಸೋನಾಲಿ ಕುಟುಂಬ ಸದಸ್ಯರು ಹರಿಯಾಣ ಸಿಎಂ ಕಟ್ಟರ್ ಅವರಿಗೆ ಮನವಿ ಮಾಡಿದ್ದಾರೆ. ಗೋವಾ ಸರ್ಕಾರದ ತನಿಖೆಯಿಂದ ನಮಗೆ ತೃಪ್ತಿ ಇಲ್ಲ ಎಂದು ಸೋನಾಲಿ ಕುಟುಂಬ ಹೇಳಿದೆ. ಗೋವಾ ಪೊಲೀಸರ ಮೇಲೆ ನನಗೆ ಸಂಪೂರ್ಣ ನಂಬಿಕೆ ಇದೆ, ಆದರೆ ಸೋನಾಲಿ ಮಗಳ ಬೇಡಿಕೆಯಂತೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವುದಾಗಿ ಗೋವಾ ಸಿಎಂ ಪ್ರಮೋದ್ ಸಾವಂತ್ ಹೇಳಿದ್ದಾರೆ. ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಹಲವರು ಪತ್ರವನ್ನೂ ಬರೆದಿದ್ದು, ಹೀಗಾಗಿಯೇ ಕೇಂದ್ರ ತನಿಖಾ ಸಂಸ್ಥೆಗೆ ಪ್ರಕರಣವನ್ನು ಹಸ್ತಾಂತರಿಸುವಂತೆ ಕೇಂದ್ರ ಗೃಹ ಸಚಿವಾಲಯಕ್ಕೆ ಮನವಿ ಮಾಡುತ್ತಿದ್ದೇವೆ ಎಂದು ಸಿಎಂ ಬಹಿರಂಗಪಡಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy  

Read More

ಬೆಂಗಳೂರು (Bengaluru): ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ದೊಡ್ಡದಾಗಿದೆ. ಇದರಿಂದ ವಾಹನಗಳು ಗಂಟೆಗಟ್ಟಲೆ ಟ್ರಾಫಿಕ್‌ನಲ್ಲಿ ಸಿಲುಕಿಕೊಳ್ಳಬೇಕಾಗಿದೆ. ನಿಗದಿತ ಸಮಯದೊಂದಿಗೆ ಕೆಲಸಕ್ಕೆ ಹೋಗುವವರಿಗೆ ಕಷ್ಟಗಳು ಅನಿವಾರ್ಯ. ಆದರೆ ಇತ್ತೀಚಿಗೆ ಬೆಂಗಳೂರಿನ ವೈದ್ಯರೊಬ್ಬರು ತಮ್ಮ ಕಾರನ್ನು ಟ್ರಾಫಿಕ್‌ನಲ್ಲಿ ಬಿಟ್ಟು ಆಸ್ಪತ್ರೆಗೆ ಧಾವಿಸಿದ್ದಾರೆ. ಆ ಒಂದು ವಿಡಿಯೋ ಈಗ ವೈರಲ್ ಆಗಿದೆ. ಸರ್ಜಾಪುರದ ಮಣಿಪಾಲ್ ಆಸ್ಪತ್ರೆಯ ಗ್ಯಾಸ್ಟ್ರೋಎಂಟರಾಲಜಿ ಶಸ್ತ್ರಚಿಕಿತ್ಸಕ ಡಾ.ಗೋವಿಂದ್ ನಂದಕುಮಾರ್ ಅವರು ಆಗಸ್ಟ್ 30 ರಂದು ಬೆಳಿಗ್ಗೆ 10 ಗಂಟೆಗೆ ಮಹಿಳೆಯೊಬ್ಬರಿಗೆ ಪಿತ್ತಕೋಶದ ಶಸ್ತ್ರಚಿಕಿತ್ಸೆ ಮಾಡಬೇಕಾಗಿತ್ತು. ಆದರೆ ವೈದ್ಯರು ಮನೆಯಿಂದ ಹೊರಬಂದು ಟ್ರಾಫಿಕ್‌ನಲ್ಲಿ ಸಿಲುಕಿಕೊಂಡರು. ಶಸ್ತ್ರಚಿಕಿತ್ಸೆಗೆ ತಡವಾಗಬಹುದೆಂಬ ಭಯದಿಂದ ವೈದ್ಯರು ಮೂರು ಕಿಲೋಮೀಟರ್ ಓಡಿದರು. ಕಾರು ಚಾಲಕನಿಗೆ ಬಿಟ್ಟುಕೊಟ್ಟ ವೈದ್ಯರು ಆಸ್ಪತ್ರೆಗೆ ಧಾವಿಸಿ ಯಶಸ್ವಿ ಶಸ್ತ್ರ ಚಿಕಿತ್ಸೆ ನಡೆಸಿದರು. ರೋಗಿಯು ಆರೋಗ್ಯವಾಗಿದ್ದಾನೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More