Subscribe to Updates
Get the latest creative news from FooBar about art, design and business.
- ಕೊಡಿಗೇನಹಳ್ಳಿ: ಬಸ್ ನಿಲ್ದಾಣದಲ್ಲಿ ಬಿದ್ದಿದ್ದ ಚಿನ್ನದ ನೆಕ್ಲೇಸ್ ಕದ್ದ ಮಹಿಳೆ ಬಂಧನ
- ಕುಣಿಗಲ್ ಬಳಿ ಭೀಕರ ರಸ್ತೆ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸೇರಿ ನಾಲ್ವರು ಸಾವು
- ಮೇ 12 ರಂದು ಡಾ.ಜಿ.ಎಸ್.ಸಿದ್ದಲಿಂಗಯ್ಯನವರ ಬದುಕು–ಬರಹ ವಿಚಾರ ಸಂಕಿರಣ, ದತ್ತಿ ಪ್ರಶಸ್ತಿ ಸಮಾರಂಭ
- ಸಿರಾ: ಶಿಕ್ಷಕರ ತರಬೇತಿ ಸಂಸ್ಥೆ ದಾಖಲಾತಿ ಪ್ರಾರಂಭ
- ತುರುವೇಕೆರೆ: ಹೆಗ್ಗೆರೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ
- ತೆರೆ ಮೇಲೆ ರಾಜ್ ಕುಮಾರ್, ಅಂತರಂಗದಲ್ಲಿ ಮುತ್ತುರಾಜ್ ಇದ್ದರು: ಆರ್. ಮಂಜುನಾಥ್ ಚವಾಣ್, ನಾದಯೋಗಿ ಡಾ.ರಾಜಕುಮಾರ್ ಪುಸ್ತಕ ಬಿಡುಗಡೆ
- ಕಾರವಾರ: ಕಾರ್ಮಿಕರು ಸರ್ಕಾರದಿಂದ ಸಿಗುವ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ: ನ್ಯಾ.ಕವಿತಾ ಎಸ್.ಉಂಡೋಡಿ
- ಧಾರವಾಡ: ಜನ–ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್ ಆರ್. ಸೂಚನೆ
Author: admin
ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ಬಂಜಾರ ಸಮುದಾಯದ ಅಭಿವೃದ್ಧಿಗೆ ಸಾಕಷ್ಟು ಯೋಜನೆಗಳನ್ನು ರೂಪಿಸಿತ್ತು ಆದರೆ ಇಂದಿನ ಬಿಜೆಪಿ ಸರ್ಕಾರ ಬಂಜಾರ ಸಮುದಾಯವನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ನಮ್ಮ ಕರ್ನಾಟಕ ರಾಜ್ಯದ ಬಂಜಾರ ಸಮುದಾಯದ ತಾಂಡಗಳಲ್ಲಿರುವ ಅರ್ಚಕರಿಗೆ ಮಾಸಿಕ ರೂ. 10,000/- ಗಳಂತೆ ಗೌರವಧನ ನೀಡಬೇಕು ಎಂದು ಧಾರ್ಮಿಕ ದತ್ತಿ ಮತ್ತು ಮುಜರಾಯಿ ಇಲಾಖೆ ಸಚಿವರಾದ ಶಶಿಕಲಾ ಜೊಲ್ಲೆ ಅವರಿಗೆ ಪತ್ರ ಬರೆದಿದ್ದೇನೆ ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ, ತೆಲಂಗಾಣ ರಾಜ್ಯ ಸರ್ಕಾರವು ಅಲ್ಲಿನ ಬಂಜಾರ ಸಮುದಾಯದವರ ಬಗ್ಗೆ ಮಹತ್ವದ ನಿರ್ಧಾರವನ್ನು ಕೈಗೊಂಡು ತಾಂಡಗಳಲ್ಲಿನ ವಿವಿಧ ದೇವಾಲಯಗಳ ಆರ್ಚಕರಿಗೆ “ಧೂಪ, ದೀಪ, ನೈವೇದ್ಯಮ್” ಯೋಜನೆ ರೂಪಿಸಿ ಮಾಸಿಕ ಗೌರವಧನ ನೀಡಲಾಗುತ್ತಿದೆ. ಅದೇ ರೀತಿ ನಮ್ಮ ಕರ್ನಾಟಕ ರಾಜ್ಯದಲ್ಲಿರುವ ಸಾವಿರಾರು ಬಂಜಾರ ತಾಂಡಾಗಳ ಆರಾಧ್ಯ ದೇವರುಗಳ ದೇವಸ್ಥಾನಗಳಲ್ಲಿ ಪೂಜೆ, ಅರ್ಚನೆ, ಭಜನೆ ಮುಂತಾದ ಧಾರ್ಮಿಕ ಚಟುವಟಿಕೆಗಳನ್ನು ನಡೆಸಿಕೊಂಡು ಬಂದಿರುತ್ತಾರೆ. ಆದರೆ ಇಲ್ಲಿನ ತಾಂಡಾಗಳ ಅರ್ಚಕರುಗಳು ಸೌಲಭ್ಯ ವಂಚಿತರಾಗಿದ್ದಾರೆ ಎಂದು ಅವರು ಹೇಳಿದ್ದಾರೆ. ಕರ್ನಾಟಕ ಸರ್ಕಾರವು…
ಚುನಾವಣೆಯಲ್ಲಿ ಪರಾಭವಗೊಂಡ ಅಭ್ಯರ್ಥಿಯ ಹೆಸರಲ್ಲಿ ಅನುದಾನ ಬಿಡುಗಡೆ ಮಾಡುವುದು ಪ್ರಜಾಪ್ರಭುತ್ವ ವಿರೋಧಿ ಧೋರಣೆ. ಬಿಜೆಪಿ ಸರ್ಕಾರ ಇದನ್ನು ಪ್ರತಿಷ್ಠೆಯಾಗಿ ತೆಗೆದುಕೊಳ್ಳದೆ ವಿಧಾನಸಭೆಯ ಎಲ್ಲಾ ಶಾಸಕರ ಘನತೆ ಮತ್ತು ಹಕ್ಕುಗಳ ರಕ್ಷಣೆಗೆ ಮುಂದಾಗಬೇಕು ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಶೃಂಗೇರಿಗೆ ಅನುದಾನ ನೀಡುವಾಗ ಜೀವರಾಜ್ ಅವರ ಹೆಸರು ಉಲ್ಲೇಖಿಸಿರುವುದು ಸರಿಯಲ್ಲ. ಜೀವರಾಜ್ ಅವರು ಚುನಾವಣೆಯಲ್ಲಿ ಸೋತಿದ್ದಾರೆ. ಸೋತ ಅಭ್ಯರ್ಥಿಯ ಹೆಸರಲ್ಲಿ ಅನುದಾನ ಬಿಡುಗಡೆ ಮಾಡುವುದು ಒಂದು ಕೆಟ್ಟ ಸಂಪ್ರದಾಯ. ಅದು ಯಾವುದೇ ಪಕ್ಷದ ಅಭ್ಯರ್ಥಿಯಾಗಿರಲಿ. ಬಜೆಟ್ ಗೆ ಅನುಮೋದನೆ ನೀಡುವವರು ಯಾರು? ಚುನಾವಣೆಯಲ್ಲಿ ಸೋತವರು ಬಂದು ಚರ್ಚಿಸಿ ಬಜೆಟ್ ಪಾಸ್ ಮಾಡಿ ಕೊಡುತ್ತಾರ? ಸೋತವರ ಹೆಸರಿಗೆ ಅನುದಾನ ನೀಡಿ, ಅವರಿಗೆ ಜನರ ಜೊತೆ ಹೋಗಿ ಕೆಲಸ ಮಾಡಿ ಎನ್ನುವುದು ಪ್ರಜಾಪ್ರಭುತ್ವ ವಿರೋಧಿ ಧೋರಣೆ. ಇದನ್ನು ಪ್ರತಿಷ್ಠೆ ಮಾಡಿಕೊಳ್ಳಬಾರದು, ಇದು ಮುಂದುವರೆಲೂಬಾರದು. ಸೋತವರು ಮತ್ತೆ ಗೆದ್ದು ಬಂದು ಜನರ ಜೊತೆ ನಿಂತು ಕೆಲಸ ಮಾಡಲಿ ಎಂದು ಸಿದ್ದರಾಮಯ್ಯ ವಿಧಾನ ಸಭೆಯಲ್ಲಿ…
ವಿಶ್ವಕ್ಕೆ ಭಯವನ್ನು ತೋರಿಸಲು ಕಚ್ಚಾ ತೈಲ ಉತ್ಪಾದನೆಯನ್ನು ಕಡಿತಗೊಳಿಸುವುದಾಗಿ ರಷ್ಯಾ ಘೋಷಿಸಿದೆ. ಇದಾದ ನಂತರ ವಿಶ್ವ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ತೀವ್ರವಾಗಿ ಏರಿಕೆಯಾಗಿದೆ. ತರುವಾಯ, ಒಂದು ಬ್ಯಾರೆಲ್ ಕಚ್ಚಾ ತೈಲದ ಬೆಲೆ 2.94 ಡಾಲರ್ಗಳಷ್ಟು ಹೆಚ್ಚಾಗಿದೆ ಮತ್ತು $ 83.72 ಕ್ಕೆ ಮಾರಾಟವಾಗುತ್ತಿದೆ. ಕಳೆದ ತಿಂಗಳು $80 ರ ಸಮೀಪದಲ್ಲಿದ್ದ ಪೆಟ್ರೋಲ್ ಬೆಲೆಗಳು ರಷ್ಯಾದ ಘೋಷಣೆಯಿಂದಾಗಿ ಮತ್ತೆ ಏರಲು ಪ್ರಾರಂಭಿಸಿವೆ. ತಜ್ಞರ ಪ್ರಕಾರ, ಈ ಘೋಷಣೆಯಿಂದ ಭಾರತದಲ್ಲಿಯೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಾಗಬಹುದು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಎಸ್.ಸಿ ಮತ್ತು ಎಸ್.ಟಿ ಮೀಸಲಾತಿ ಹೆಚ್ಚಳಕ್ಕೆ ಕೇಂದ್ರದ ಮೇಲೆ ಒತ್ತಡ ಹಾಕುವಂತೆ ಸರ್ಕಾರಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಆಗ್ರಹಿಸಿದರು. ವಿಧಾನಸಭಾ ಕಲಾಪದಲ್ಲಿ ಮೀಸಲಾತಿ ವಿಚಾರ ಚರ್ಚೆಯಾಯಿತು. ಈ ವೇಳೆ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ನೀವು ಅವರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದ್ದೀರಾ…? ಮೀಸಲಾತಿ ಹೆಚ್ಚಳದ ಬಗ್ಗೆ ಈವರೆಗೆ ಕೇಂದ್ರದ ಮೇಲೆ ಒತ್ತಡ ಹಾಕಿಲ್ಲ. ಮೀಸಲಾತಿ ಪ್ರಮಾಣ ಹೆಚ್ಚಳದ ಬಗ್ಗೆ ಕೇಂದ್ರದ ಮೇಲೆ ಒತ್ತಡ ಹಾಕಿ. ಎಸ್.ಸಿ ಎಸ್ ಟಿ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ನಮ್ಮ ಬೆಂಬಲವಿದೆ. ಕಾಂಗ್ರೆಸ್ ಪಕ್ಷ ಮೀಸಲಾತಿ ಹೆಚ್ಚಳದ ಪರ ಇದೆ ಎಂದು ಒತ್ತಾಯಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ವಾರ್ಷಿಕ ಪರಿಶೋಧನಾ ವರದಿಯಲ್ಲಿ ಗಮನಕ್ಕೆ ಬಂದಿರುವಂತೆ ಬಿಬಿಎಂಪಿಯ ಅಧಿಕಾರಿಗಳು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಗೆ ಸಿದ್ಧವಾಗುತ್ತಿರುವ ಪದವಿಪೂರ್ವ (ಪಿಯು) ವಿದ್ಯಾರ್ಥಿಗಳಿಗೆ ಹಾಗೂ ಟ್ಯಾಲಿ ಅಕೌಂಟಿಂಗ್ ಸಾಫ್ಟ್ ವೇರ್ ಅನ್ನು ಕಲಿತು ತಮ್ಮ ಅಕೌಂಟೆನ್ಸಿ ಕೌಶಲ್ಯಗಳನ್ನು ಉತ್ತಮಪಡಿಸಿಕೊಳ್ಳಲು ಉತ್ಸುಕರಾಗಿದ್ದಂತಹ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ತರಬೇತಿ ಏಜೆನ್ಸಿಯೊಂದನ್ನು ಆಯ್ಕೆ ಮಾಡುವಲ್ಲಿ ಅಗತ್ಯಕ್ಕಿಂತ ಹೆಚ್ಚು ವೇಗವನ್ನು ತೋರ್ಪಡಿಸಿರುವ ಸಂಗತಿ ಬಹಿರಂಗಗೊಂಡಿದೆ. ಈ ಪರಿಶೊಧನಾ ವರದಿಯಲ್ಲಿ ಬಿಬಿಎಂಪಿ ಕಾಲೇಜುಗಳಲ್ಲಿ ಕಲಿಯುತ್ತಿರುವ ಪಿಯು ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಬಿಬಿಎಂಪಿ ಆಯ್ಕೆ ಮಾಡಿರುವ ಸೇವಾ ಏಜೆನ್ಸಿ ಆಯ್ಕೆ ಪ್ರಕ್ರಿಯೆಯಲ್ಲಿ ಗಂಭೀರ ಲೋಪವೊಂದು ಬಹಿರಂಗಗೊಂಡಿದೆ. ಸಿಇಟಿ ಹಾಗೂ ಅಕೌಂಟಿಂಗ್ ಸಾಫ್ಟ್ ವೇರ್ ಟ್ಯಾಲಿಗಾಗಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಸಂಬಂಧಪಟ್ಟ ವಿಷಯದಲ್ಲಿ ಪರಿಣಿತಿಯನ್ನು ಹೊಂದಿರುವ ಸಂಸ್ಥೆಗಳನ್ನು ಗುರುತಿಸಿ ಆಯ್ಕೆ ಮಾಡುವ ಬದಲಿಗೆ, ಬಿಬಿಎಂಪಿಯು ಪೇಪರ್ ಪ್ಲೇಟುಗಳನ್ನು ತಯಾರಿಸಿ ವಿತರಣೆ ಮಾಡುವ ಎಸ್ ಆರ್ ಇಂಡಸ್ಟ್ರಿಸ್‌ಗೆ ಆ ಜವಾಬ್ದಾರಿಯನ್ನು ವಹಿಸಿರುವ ಸಂಗತಿ ಪರಿಶೋಧನಾ ವರದಿಯಲ್ಲಿ…
ಚಾಮರಾಜನಗರ: ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಆದ ಅಚಾನಕ್ ಘಟನೆಯಿಂದ ಮೂವರು ದುರ್ಮರಣಕ್ಕೀಡಾದ ಘಟನೆ ನಡೆದಿದೆ. ಬಿಸಲವಾಡಿ ಗ್ರಾಮದಲ್ಲಿ ನಡೆಯುತ್ತಿರುವ ಕ್ಚಾರಿಯೊಂದರಲ್ಲಿ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ಸಂಬಂಧಿಸಿದ ಠಾಣಾ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಬಿಸಲವಾಡಿ ಗ್ರಾಮದಲ್ಲಿರುವ ಭಾಸ್ಕರ್ ಎಂಬುವವರ ಕ್ವಾರಿಯಲ್ಲಿ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಕ್ವಾರಿಯಲ್ಲಿ ಕೆಲಸ ಮಾಡುತ್ತಿರುವಾಗ ಸಡಿಲವಾದ್ದರಿಂದ ಕಲ್ಲು ಕುಸಿದು ಈ ಘಟನೆ ನಡೆದಿದೆ. ಬಂಡೆಯ ಮೇಲುಗಡೆ ನಿಂತು ಕುಳಿ ತೆಗೆಯುವಾಗ ಈ ಘಟನೆ ಸಂಭವಿಸಿದ್ದು ಮೃತರು ಹೊರರಾಜ್ಯದವರೊ ಅಥವಾ ಸ್ಥಳೀಯರೊ ಎಂಬುದನ್ನ ಇಲಾಖೆ ಖಾತ್ರಿಪಡಿಸಬೇಕಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮುಜರಾಯಿ ಇಲಾಖೆ ವ್ಯಾಪ್ತಿಗೊಳಪಡುವ ದೇವಸ್ಥಾನಗಳ ವಾರ್ಷಿಕ ನಿರ್ವಹಣಾ ವೆಚ್ಚವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಧಾರ್ಮಿಕ ದತ್ತಿ,ಹಜ್ ಹಾಗೂ ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆ ಹೇಳಿದರು ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿಂದು ಲಿಂಗಸುಗೂರು ಶಾಸಕ ಡಿ.ಎಸ್. ಹೂಲಗೇರಿಯವರ ಪರವಾಗಿ ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪುರ ಅವರು ಕೇಳಿದ ಪ್ರಶ್ನೆಗೆ ಉತ್ತರಿಸುತ್ತ ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿದರು, ಮುಜರಾಯಿ ಇಲಾಖೆಗೆ ಅನುದಾನ ಬಹಳ ಕಡಿಮೆಯಿದ್ದು, ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಗಿರಿಜನ ಉಪಯೋಜನೆ ಸೇರಿದಂತೆ ಇಲಾಖೆಯ ಕಾರ್ಯಕ್ರಮಗಳಿಗೆ ಅನುದಾನ ಹೆಚ್ಚಿಸಲು ಪ್ರಯತ್ನಿಸಲಾಗುವುದು ಎಂದರು. … ಶಾಸಕ ಅಮರೇಗೌಡ ಪಾಟೀಲ ಬಯ್ಯಾಪುರ ಮಾತನಾಡಿ, ಮುಜರಾಯಿ ದೇವಸ್ಥಾನಗಳಿಗೆ 50 ಸಾವಿರ ರೂ., 1 ಲಕ್ಷ ರೂ., 2 ಲಕ್ಷ ರೂ.ಹೀಗೆ ಕನಿಷ್ಠ ಪ್ರಮಾಣದ ಅನುದಾನ ನೀಡಿದರೆ ನಿರ್ವಹಣೆ ಮಾಡುವುದು ಹೇಗೆ?, ವಾರ್ಷಿಕ ಅನುದಾನವನ್ನು ಕನಿಷ್ಟ 25 ಲಕ್ಷ ರೂ.ಗಳಿಗೆ ಹೆಚ್ಚಳ ಮಾಡಬೇಕೆಂದು ಆಗ್ರಹಿಸಿದರು.ಪ್ರಶ್ನೆಗೆ ಒದಗಿಸಿರುವ ಲಿಖಿತ ಉತ್ತರದಲ್ಲಿ ದೇವಸ್ಥಾನಗಳ ಹೆಸರು ಹಾಗೂ ಮಾಹಿತಿ ಆಂಗ್ಲಭಾಷೆಯಲ್ಲಿದೆ. ಗ್ರಾಮಗಳ…
ಸೈಬರ್ ಅಪರಾಧಗಳನ್ನು ಸಮರ್ಥವಾಗಿ ನಿಭಾಯಿಸಲು ಹಾಗೂ ಸೈಬರ್ ಕ್ರೈಂ ವಂಚನೆಗೊಳಗಾದವರ ನೆರವಿಗಾಗಿ ಸರ್ಕಾರವು ಬೆಂಗಳೂರು ನಗರದಲ್ಲಿ 8 ಹಾಗೂ ಪ್ರತಿ ಜಿಲ್ಲೆ ಹಾಗೂ ನಗರ ವ್ಯಾಪ್ತಿಯಲ್ಲಿ ವಿಶೇಷ ಸೈಬರ್ ಪೊಲೀಸ್ ಠಾಣೆಗಳನ್ನು ತೆರೆದು, ಸೈಬರ್ ಅಪರಾಧಗಳನ್ನು ಪತ್ತೆ ಹಚ್ಚಲು ಸೈಬರ್ ತಜ್ಞರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಸೋಮವಾರ ವಿಧಾನ ಪರಿಷತ್ತಿನ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಪಿ.ಆರ್.ರಮೇಶ್ ಹಾಗೂ ಟಿ.ಎ.ಶರವಣ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಅವರು ಉತ್ತರಿಸಿದರು.ರಾಜ್ಯದಲ್ಲಿ ಸೈಬರ್ ಅಪರಾಧ ಪತ್ತೆ ಹಚ್ಚುವ ನಿಟ್ಟಿನಲ್ಲಿ ಪೊಲೀಸ್ ಸೈಬರ್ ಸೆಲ್ ಆಧುನೀಕರಣಗೊಳಿಸಲಾಗಿದೆ. ಪೊಲೀಸರಿಗೆ ಆಧುನಿಕ ತರಬೇತಿ ನೀಡಲು ಸಿ.ಐ.ಡಿ ಘಟಕದಲ್ಲಿ ವಿಶೇಷ ತರಬೇತಿ ವಿಭಾಗವನ್ನು ಸ್ಥಾಪಿಸಲಾಗಿದೆ. ಒಟ್ಟು 3657 ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ, ಸರ್ಕಾರಿ ಅಯೋಜಕರು, ಇನ್ನಿತರೆ ಕಾನೂನು ಜಾರಿ ಸಂಸ್ಥೆಗಳಿಗೆ ತರಬೇತಿ ನೀಡಲಾಗಿದೆ. ರಾಜ್ಯದ ಗೃಹ ಇಲಾಖೆ ಗುಜರಾತಿನ ಅಹಮದಬಾದ್ ವಿಧಿ ವಿಜ್ಞಾನ ವಿಶ್ವವಿದ್ಯಾಲಯದೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಅಲ್ಲಿ ರಾಜ್ಯದ ಆಸಕ್ತ…
ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೊರೊನಾ ಪರೀಕ್ಷೆ ವೇಳೆಯಲ್ಲಿ 12 ಮಂದಿಗೆ ಪಾಸಿಟಿವ್ ವರದಿಯಾಗಿದೆ. ಇದರಲ್ಲಿ ಚೀನಾದಿಂದ ಬಂದಿರುವಂತ ವ್ಯಕ್ತಿಯೊಬ್ಬರು ಸಹ ಸೇರಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಬಿಎಫ್ 7 ಒಮಿಕ್ರಾನ್ ಉಪತಳಿಯ ಆಂತಕ ಹೆಚ್ಚಾಗಿದೆ. ಚೀನಾದಿಂದ ಬಂದ 35 ವರ್ಷದ ವ್ಯಕ್ತಿಯೊಬ್ಬನನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೊರೊನಾ ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಅವರಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಅವರನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಕಳೆದ ಮೂರು ದಿನಗಳಿಂದ ಹೈರಿಸ್ಕ್ ದೇಶಗಳಿಂದ ಬಂದಂತ 12 ಜನರಲ್ಲಿ ಕೊರೋನಾ ದೃಢಪಟ್ಟಿದೆ. ಇವರಲ್ಲಿ ಐವರನ್ನು ಹೋಂ ಐಸೋಲೇಷನ್ ಮಾಡಲಾಗಿದೆ, ನಾಲ್ವರನ್ನು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಹೀಗಾಗಿ ಈಗ ಬೆಂಗಳೂರಿನಲ್ಲಿಯೂ ಬಿಎಫ್.7 ಕೊರೋನಾ ಆತಂಕ ಹೆಚ್ಚಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ನಾಗ್ಪುರ : ಗಡಿ ವಿವಾದ ಸಂಬಂಧ ಕರ್ನಾಟಕದ ಸಿಎಂ ಬಸವರಾಜ ಬೊಮ್ಮಾಯಿ ಪ್ರಚೋದನೆ ನೀಡುತ್ತಿದ್ದಾರೆ ಎಂದು ಮಹಾರಾಷ್ಟ್ರ ವಿಪಕ್ಷ ನಾಯಕ ಅಜಿತ್ ಪವಾರ್ ಆರೋಪಿಸಿದ್ದಾರೆ. ಇಂದು ಮಹಾರಾಷ್ಟ್ರ ವಿಧಾನಸಭೆಯಲ್ಲಿ ಗಡಿ ವಿವಾದ ವಿಚಾರದ ಚರ್ಚೆ ವೇಳೆ ಮಾತನಾಡಿದ ವಿಪಕ್ಷ ನಾಯಕ ಅಜಿತ್ ಪವಾರ್, ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ದೇಶಪೂರ್ವಕವಾಗಿ ಗಡಿ ವಿಚಾರದಲ್ಲಿ ಪ್ರಚೋದನೆ ನೀಡುತ್ತಿದ್ದಾರೆ ಎಂದರು. ಕರ್ನಾಟಕದ ಸಿಎಂ ನಮಗೆ ದ್ರೋಹ ಮಾಡಿದ್ರೂ ಸುಮ್ಮನಿದ್ದೇವೆ. ಗಡಿ ವಿವಾದದ ಬಗ್ಗೆ ಸರ್ಕಾರ ನಿರ್ಣಯ ಕೈಗೊಳ್ಳಬೇಕು. ಎಂಇಎಸ್ ನವರು ಕೊಲ್ಹಾಪುರಕ್ಕೆ ಬರುವ ಇಚ್ಛೆ ವ್ಯಕ್ತಪಡಿಸಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy