Author: admin

ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶದ ಜಿಲ್ಲಾ ಆಸ್ಪತ್ರೆಯೊಂದರಲ್ಲಿ ವಿದ್ಯುತ್ ಕಡಿತದಿಂದ ವೈದ್ಯರು ಹಾಗೂ ರೋಗಿಗಳು ಪರದಾಡಿದರು. ಒಂದು ಗಂಟೆಗೂ ಹೆಚ್ಚು ಕಾಲ ವಿದ್ಯುತ್ ಬಂದಿಲ್ಲ. ಇದರೊಂದಿಗೆ ವೈದ್ಯರು ತಮ್ಮ ಮೊಬೈಲ್ ಫೋನ್‌ಗಳ ಟಾರ್ಚ್‌ಲೈಟ್‌ನಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಿದರು. ಬಲ್ಲಿಯಾ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಶನಿವಾರ ಸುರಿದ ಭಾರಿ ಮಳೆಯಿಂದಾಗಿ ಈ ಪ್ರದೇಶದಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾ ಸರಕಾರಿ ಆಸ್ಪತ್ರೆಯ ವೈದ್ಯರು ಹಾಗೂ ರೋಗಿಗಳು ಪರದಾಡಿದರು. ಒಂದು ಗಂಟೆಗೂ ಹೆಚ್ಚು ಕಾಲ ವಿದ್ಯುತ್ ಬಂದಿಲ್ಲ. ಆಸ್ಪತ್ರೆಯಲ್ಲಿ ಜನರೇಟರ್ ಕೆಲಸ ಮಾಡಿಲ್ಲ. ತುರ್ತು ದೀಪಗಳೂ ಇಲ್ಲ. ವೈದ್ಯರು ತಮ್ಮ ಮೊಬೈಲ್ ಫೋನ್‌ಗಳ ಟಾರ್ಚ್‌ಲೈಟ್‌ನ ಸಹಾಯದಿಂದ ವೈದ್ಯಕೀಯ ಸೇವೆಗಳನ್ನು ಒದಗಿಸಿದರು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಆಸ್ಪತ್ರೆಯಲ್ಲಿ ಕತ್ತಲು ಆವರಿಸಿತು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಏತನ್ಮಧ್ಯೆ, ಈ ಘಟನೆಯ ಕುರಿತು ಬಲ್ಲಿಯಾ ಜಿಲ್ಲಾ ಆಸ್ಪತ್ರೆಯ ಪ್ರಭಾರಿ ಡಾ.ಆರ್.ಡಿ.ರಾಮ್ ಸೋಮವಾರ ವಿವರಣೆ ನೀಡಿದರು.…

Read More

ವಿಜಯನಗರ : ನೇಣು ಹಾಕಿಕೊಳ್ಳುತ್ತಿದ್ದ ವ್ಯಕ್ತಿಯನ್ನು ತಡೆಯುವುದು ಬಿಟ್ಟು, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಘಟನೆ ಹೊಸಪೇಟೆ ತಾಲೂಕಿನ ಹನುಮನಹಳ್ಳಿಯಲ್ಲಿ ನಡೆದಿದೆ. ಹನುಮನಹಳ್ಳಿಯ ರಾಷ್ಟ್ರೀಯ ಹೆದ್ದಾರಿಯ ಫ್ಲೈಓವರ್​ ಮೇಲೆ ವಿದ್ಯುತ್ ಕಂಬಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಳ್ಳತ್ತಿದ್ದನ್ನು ತಡೆಯುದು ಬಿಟ್ಟು ಕೆಲವರು ವಿಡಿಯೋ ಮಾಡಿದ್ದಾರೆ. ಮೃತ ಯುವಕನನ್ನು ಮಂಜುನಾಥ್ (25) ಎಂದು ಗುರುತಿಸಲಾಗಿದೆ. ಜೀವನದಲ್ಲಿ ಜಿಗುಪ್ಸೆಗೊಂಡು ಮಂಜುನಾಥ್​ ನೇಣಿಗೆ ಶರಣಾಗಿದ್ದಾರೆ. ಆದರೆ ಅವನು ತಡೆಯುವ ಪ್ರಯತ್ನ ಮಾಡದೇ ವಿಡಿಯೋ ಮಾಡಿ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ : ಪಶ್ಚಿಮ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ಮಲಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಈಗ ರಾಮದುರ್ಗಕ್ಕೂ ನೀರು ನುಗ್ಗಿದೆ ಎಂದು ತಿಳಿದುಬಂದಿದೆ. ಪಟ್ಟಣದ ಹೊರವಲಯದ ತೇರ ಬಜಾರ್ ನ ನಾಲ್ಕಕ್ಕೂ ಅಧಿಕ ಮನೆಗಳು ಜಲಾವೃತವಾಗಿದ್ದು, ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೊದಲಿನಿಂದಲೂ ನದಿ ತೀರದ ಜನತೆಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಬೇಕು ಎಂಬ ಒತ್ತಾಯ ಕೇಳಿ ಬಂದಿದ್ದು, ಜನ ಪ್ರತಿನಿಧಿಗಳು, ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ತವರು ಮನೆಗೆ ಹೋಗಿದ್ದ ಹೆಂಡತಿ ವಾಪಸ್ ಬರಲ್ಲ ಎಂದು ಹೇಳಿದ್ದಕ್ಕೆ ಹೆಂಡತಿ ಮೇಲೆ ಗುಂಡು ಹಾರಿಸಿರುವ ಘಟನೆ ಜಿಲ್ಲೆಯ ಅಥಣಿಯಲ್ಲಿ ನಡೆದಿದೆ. ಸೆಪ್ಟೆಂಬರ್ 11 ರಂದು ತವರು ಮನೆಗೆ ಹೋಗಿದ್ದ ಪತ್ನಿಯನ್ನು ಕರೆಯಲು ಹೋಗಿದ್ದ ವೇಳೆ ಗಂಡನೇ ಮೇಲೆ ಫೈರಿಂಗ್ ಮಾಡಿದ್ದಾನೆ. ಗುಂಡು ಹಾರಿಸಿದ ಶಿವಾನಂದನನ್ನು ಪೊಲೀಸರು ಬಂಧಿಸಿದ್ದಾರೆ. 4 ವರ್ಷದ ಹಿಂದೆ ಶಿವಾನಂದ, ಪ್ರೀತಿ ಮದುವೆಯಾಗಿತ್ತು. ಆದರೆ ಗಂಡ ಶಿವಾನಂದನ ಅನೈತಿಕ ಸಂಬಂಧ, ಕಿರುಕುಳಕ್ಕೆ ಬೇಸತ್ತು ಪ್ರೀತಿ ತವರು ಮನೆ ಸೇರಿದ್ರು. ಸೆಪ್ಟೆಂಬರ್ 11 ರ ರಾತ್ರಿ ಪ್ರೀತಿ ಅವರ ತವರು ಮನೆಗೆ ಬಂದ ಶಿವಾನಂದ ತನ್ನ ಜೊತೆಗೆ ಬರುವಂತೆ ಪಟ್ಟು ಹಿಡಿದಿದ್ದಾನೆ. ಆದರೆ ಪತ್ನಿ ಪ್ರೀತಿ ನಿನ್ನೆ ಜೊತೆಗೆ ಬರಲ್ಲ ಎಂದು ಹೇಳಿದಾಗ ಪಿಸ್ತೂಲ್ ನಿಂದ ಗುಂಡು ಹಾರಿಸಿ ಪರಾರಿಯಾಗಿದ್ದಾನೆ. ಅದೃಷ್ಟವಶಾತ್ ಹೆಂಡತಿ ಅಪಾಯದಿಂದ ಪಾರಾಗಿದ್ದಾರೆ. ಘಟನೆ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…

Read More

ಇತ್ತೀಚೆಗೆ ದೆಹಲಿ ಸೇರಿದಂತೆ ಕೆಲ ಪ್ರದೇಶಗಳಲ್ಲಿ ಪಿಟ್‌ಬುಲ್ ನಾಯಿ ದಾಳಿ ಘಟನೆಗಳು ನಡೆದಿವೆ. ಬಹಳ ಕಟ್ಟುಮಸ್ತಾದ, ಭಯಂಕರವೆನಿಸುವ ಈ ನಾಯಿಗಳನ್ನು ಕಂಡರೆ ಜನರು ಹೆದರಿ ಮಾರು ದೂರ ಹೋಗುವಂತಾಗಿದೆ. ಘಾಜಿಯಾಬಾದ್‌ನಲ್ಲಿ ಇತ್ತೀಚೆಗೆ ಪಾರ್ಕ್‌ನಲ್ಲಿ ವಾಕ್ ಮಾಡುತ್ತಿದ್ದ 10 ವರ್ಷದ ಬಾಲಕನನ್ನು ಪಿಟ್‌ಬುಲ್ ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿದೆ. ನವದೆಹಲಿ ಪಕ್ಕದಲ್ಲೇ ಇರುವ ಇದೇ ಘಾಜಿಯಾಬಾದ್‌ನಲ್ಲಿ 6 ವರ್ಷದ ಬಾಲಕನೊಬ್ಬನನ್ನು ಮತ್ತೊಂದು ಪಿಟ್‌ಬುಲ್ ನಾಯಿ ದಾಳಿ ಮಾಡಿ ಗಾಯಗಳಿಸಿತ್ತು. ಗುರುಗ್ರಾಮದಲ್ಲಿ ಒಬ್ಬ ಮಹಿಳೆ, ಲಕ್ನೋದಲ್ಲಿ ವೃದ್ಧೆಯೊಬ್ಬರ ಮೇಲೆ ಪಿಟ್‌ಬುಲ್ ದಾಳಿ ಮಾಡಿ ಗಾಯ ಮಾಡಿದೆ. ಬೆಂಗಳೂರಿನಲ್ಲೂ ಪಿಟ್‌ಬುಲ್ ಡಾಗ್ ದಾಳಿ ಘಟನೆಗಳು ಹಲವು ಜರುಗಿವೆ. ಕಳೆದ ವರ್ಷ ಯಲಹಂಕದ ಅಟ್ಟುರು ಲೇಔಟ್ ಬಳಿಕ ಕಟ್ಟಡ ಕೆಲಸದಲ್ಲಿದ್ದ ಕಾರ್ಮಿಕನನ್ನು ಪಿಟ್‌ಬುಲ್ ಕೊಂದುಹಾಕಿತ್ತು. ಮಧ್ಯಾಹ್ನ ಕಟ್ಟಡ ಕೆಲಸ ಮುಗಿಸಿ ಪಕ್ಕದ ಮನೆಯ ಸ್ಟೇರ್‌ಕೇಸ್‌ ಬಳಿ ವಿಶ್ರಾಂತಿ ಮಾಡುತ್ತಿದ್ದವನ ಮೇಲೆ ಪಿಟ್ ಬುಲ್ ದಾಳಿ ಮಾಡಿ, ಕುತ್ತಿಗೆಯನ್ನು ಕಚ್ಚಿ ಸಾಯಿಸಿತ್ತು. ಐದು ವರ್ಷಗಳ ಹಿಂದೆ ಚಿಕ್ಕಮಗಳೂರಿನಲ್ಲಿ ಇನ್ನೂ…

Read More

ಬೈಕ್ ಮೇಲೆ ಮರ ಬಿದ್ದು ಯುವಕನೊಬ್ಬ ಸ್ಥಳದಲ್ಲೇ ಮೃತ ಪಟ್ಟ ಘಟನೆ ನಗರದ ರಾಯಣ್ಣ ಸರ್ಕಲ್ ಸರ್ಕಲ್ ಬಳಿ ನಡೆದಿದೆ. ರಾಯಣ್ಣ ಸರ್ಕಲ್ ನಿಂದ ಇಬ್ಬರು ಯುವಕರು ಚನ್ನಮ್ಮ ಸರ್ಕಲ್ ಕಡೆಗೆ ಬೈಕ್ ಮೇಲೆ ಹೊರಟಿದ್ದರು. ಈ ವೇಳೆ ಮರ ಬೈಕ್ ಮೇಲೆ ಬಿದ್ದ ಪರಿಣಾಮ ಗೋಕಾಕ್ ತಾಲ್ಲೂಕಿನ ಸುಲದಾಳ ಗ್ರಾಮದ ರಾಕೇಶ್ ಸುಲದಾಳ (25 ವರ್ಷ) ಎಂಬ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು,ಇ‌ನ್ನೋರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಘಟನೆ ನಡೆಯುತ್ತಿದ್ದಂತೆಯೇ ಸ್ಥಳಕ್ಕೆ ಪೋಲೀಸರು ದೌಡಾಯಿಸಿ ಮರ ತೆರವುಗೊಳಿಸಿ ಸಂಚಾರ ಸುಗಮಗೊಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಂಬೇವಾಡಿ ಗ್ರಾಮದ ಶ್ರೀ ಮಸಣಾಯಿ ಮಂದಿರದ ಜೀರ್ಣೋದ್ಧಾರದ ಸಲುವಾಗಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು 3 ಲಕ್ಷ ರೂ,ಗಳನ್ನು ಬಿಡುಗಡೆ ಮಾಡಿಸಿದ್ದು, ಸ್ಥಳೀಯ ಜನಪ್ರತಿನಿಧಿಗಳು, ಎಪಿಎಂಸಿ ಅಧ್ಯಕ್ಷ ಯುವರಾಜ ಕದಂ, ಕಾಂಗ್ರೆಸ್ ಯುವ ಮುಖಂಡ ಮೃಣಾಲ ಹೆಬ್ಬಾಳಕರ್ ಸೇರಿ ಚೆಕ್ ನ್ನು ದೇವಸ್ಥಾನ ಕಮೀಟಿಯವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಸರಿತಾ ನಾಯಕ, ಸಂಗೀತಾ ಅಂಬೇಕರ್, ಸುಚಿತ್ ಸಾಂಬ್ರೇಕರ್, ಪುಂಡಲೀಕ ಬಾಂದುರ್ಗೆ, ಯಲ್ಲಪ್ಪ ಲೋಹಾರ, ದತ್ತು ಚೌಗುಲೆ, ಮಲ್ಲಪ್ಪ ತರಳೆ, ರಾಜು ಕೊಚೇರಿ, ವಿಕ್ರಂ ತರಳೆ, ಕುಲದೀಪ ತರಳೆ, ಮಿಲೀಂದ್ ಬಾತ್ಕಂಡೆ, ದೇವಸ್ಥಾನ ಕಮೀಟಿಯವರು ಹಾಗೂ ಮುಂತಾದವರು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಬೆಂಗಳೂರು: ಬಿಬಿಎಂಪಿಯ ಜಂಟಿ ಆಯುಕ್ತರ ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಬಿಬಿಎಂಪಿಯ ಜಂಟಿ ಆಯುಕ್ತ ಶ್ರೀನಿವಾಸ್ ಹಾಗೂ ಪಿಎ ಉಮೇಶ್ ಎಂಬುವರನ್ನು ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿಸಿರೋದಾಗಿ ತಿಳಿದು ಬಂದಿದೆ. ಹೈಕೋರ್ಟ್ ಎಸಿಬಿ ರದ್ದುಗೊಳಿಸಿದ ಬಳಿಕ ಲೋಕಾಯುಕ್ತಕ್ಕೆ ಅಧಿಕಾರ ನೀಡಲಾಗಿತ್ತು. ಈ ಹಿನ್ನಲೆಯಲ್ಲಿಯೇ ರಾಜ್ಯ ಸರ್ಕಾರದಿಂದ ಅಧಿಕೃತವಾಗಿ ಎಸಿಬಿ ರದ್ದುಗೊಳಿಸಿ, ಈ ಬೆನ್ನಲ್ಲೇ ಲೋಕಾಯುಕ್ತ ಕಾರ್ಯಾಚರಣೆ ಚುರುಕುಗೊಂಡಿದೆ. ಬೆಂಗಳೂರಿನ ಬಿಬಿಎಂಪಿ ಜಂಟಿ ಆಯುಕ್ತರ ಕಚೇರಿ ಮೇಲೆ ದಾಳಿ ನಡೆಸಿತ್ತು. ಇಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವಂತ ಬಿಬಿಎಂಪಿ ಪಶ್ಚಿಮ ವಿಭಾಗದ ಜಂಟಿ ಆಯುಕ್ತ ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಒಟ್ಟು 8 ಲೋಕಾಯುಕ್ತ ಅಧಿಕಾರಿಗಳು ದಾಳಿಯನ್ನು ನಡೆಸಲಾಗಿತ್ತು. ಬಿಬಿಎಂಪಿ ಪಶ್ಚಿಮ ವಿಭಾಗದ ಜಂಟಿ ಆಯುಕ್ತ ಶ್ರೀನಿವಾಸ್ ವಿರುದ್ಧ ಖಾತೆ ಬದಲಾವಣೆ ಸಂಬಂಧ ದೂರು ನೀಡಲಾಗಿತ್ತು. ಈ ದೂರಿನ ಹಿನ್ನಲೆಯಲ್ಲಿಯೇ ಲೋಕಾಯುಕ್ತ ಡಿವೈಎಸ್ಪಿ ಮಂಜಯ್ಯ, ಶಂಕರ್ ನಾರಾಯಣ ನೇತೃತ್ವದಲ್ಲಿ ದಾಳಿ ಮಾಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…

Read More

ಬೆಳಗಾವಿ : ಕೀಣೆ ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆಯ ಚುನಾವಣೆಯೂ ರಾಜಕೀಯ ರೋಚಕ ತಿರುವು ಪಡೆಯಿತು. 22 ಸದಸ್ಯರುಗಳ ಕೀಣೆ ಗ್ರಾಮ ಪಂಚಾಯತಿ ವರ್ಷದ ಅವಧಿಯ ಮುಂಚೆ ಮತ್ತೆ ಅಧ್ಯಕ್ಷರು ಬದಲಾವಣೆ ಹಾಗೂ ಸ್ಥಳೀಯ ರಾಜಕೀಯ ಹೊಂದಾಣಿಕೆಯಿಂದಾಗಿ ಈ ಬದಲಾವಣೆ ಕಂಡುಬಂತು. ಗ್ರಾಮ ಪಂಚಾಯತ್ ಅಧ್ಯಕ್ಷ ಹಿಂದುಳಿದ ವರ್ಗ ಮೀಸಲಾತಿಯನ್ನು ಹೊಂದಿದ್ದು, ಉಪಾಧ್ಯಕ್ಷ ಸಾಮಾನ್ಯ ವರ್ಗಕ್ಕೆ ನೀಡಲಾಗಿದೆ. ಅದರಂತೆ ಅಧ್ಯಕ್ಷತೆ ಚುನಾವಣೆಯಲ್ಲಿ ಗ್ರಾಮ ಪಂಚಾಯತಿ ಸದಸ್ಯೆ ಅರ್ಚನಾ ಚಿಗರಿಗೆ 13 ಮತಗಳು ಪಡೆದು ಅಧ್ಯಕ್ಷೆಯಾಗಿ ವಿಜಯಶಾಲಿಯಾದ್ದರು. ಉಪಾಧ್ಯಕ್ಷನ್ನಾಗಿ ಬ್ರಹ್ಮಣ್ಣ ಪಾಟೀಲ್ ಅವರಿಗೆ 14 ಮತಗಳನ್ನು ಪಡೆದು ವಿಜಯಶಾಲಿಯಾದ್ದರು. ಈ ಮೂಲಕ ಕಾಂಗ್ರೆಸ್ ಅಧಿಕಾರದ ಗದ್ದುಗೆ ಹಿಡಿಯಿತು. ಅಧ್ಯಕ್ಷರು ವಿರುದ್ಧವಾಗಿ ಒಂಬತ್ತು ಮತಗಳು ಬಿದ್ದರೆ ಉಪಾಧ್ಯಕ್ಷರ ವಿರುದ್ಧವಾಗಿ ಎಂಟು ಮತಗಳು ಬಿದ್ದವು. ನೋಡಲ್ ಅಧಿಕಾರಿಯಾಗಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರು ಸುಭಾಷ್ ನಾಯಕ್ ಅಧಿಕಾರಿಯಾಗಿ ಚುನಾವಣೆ ನಡೆಸಿಕೊಟ್ಟರು. ಒಟ್ಟಾರೆ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮ ಕ್ಷೇತ್ರದಲ್ಲಿ ಪಕ್ಷ…

Read More

ಹಾವೇರಿ : ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ರಾಜ್ಯ ಸರ್ಕಾರಕ್ಕೆ ನೀಡಿದ್ದ ಗಡುವು ಮುಗಿದಿದೆ. ಹೀಗಾಗಿ ಸೆಪ್ಟೆಂಬರ್ 19 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಶಿಗ್ಗಾವಿಯಲ್ಲಿರುವ ಮನೆ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ. ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ನೀಡಿದ್ದ ಗಡುವು ಮುಗಿದಿದ್ದು,ಶಿಗ್ಗಾವಿ, ಸವಣೂರು ತಾಲೂಕಿನ ಪ್ರತಿ ಗ್ರಾಮಗಳಿಗೆ ಸಂಚರಿಸಿ ಹೋರಾಟಕ್ಕೆ ಅಣಿಗೊಳಿಸಲಾಗುತ್ತಿದೆ. ಸಮಾಜದ ಬಡ ಮಕ್ಕಳ ಭವಿಷ್ಯದ ಕಲ್ಯಾಣಕ್ಕೆ ಹೋರಾಡುವುದು ಅನಿವಾರ್ಯವಾಗಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More