Author: admin

ಚೀನಾದಿಂದ ವಾಪಸಾದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಆಗ್ರಾ ಮೂಲದ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ವ್ಯಕ್ತಿಯನ್ನು ಬಾಧಿಸಿದ ಕಾಯಿಲೆಯ ಪ್ರಕಾರವನ್ನು ಖಚಿತಪಡಿಸಲು ಕಾರ್ಯವಿಧಾನಗಳನ್ನು ಪ್ರಾರಂಭಿಸಲಾಗಿದೆ. ಲಕ್ನೋದ ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಜೀನೋಮ್ ಸೀಕ್ವೆನ್ಸಿಂಗ್ ಮೂಲಕ ಇದನ್ನು ಕಂಡುಹಿಡಿಯಲಾಯಿತು. ಉತ್ತರ ಪ್ರದೇಶ ಸರ್ಕಾರವು ವಿದೇಶದಿಂದ ಹಿಂದಿರುಗುವವರಿಗೆ 7 ದಿನಗಳ ಸ್ವಯಂ ಕ್ವಾರಂಟೈನ್‌ಗೆ ಆದೇಶಿಸಿದೆ. ಈ ಹಿಂದೆ, ಚೀನಾವನ್ನು ಬಿಕ್ಕಟ್ಟಿಗೆ ಸಿಲುಕಿಸಿದ ಕೋವಿಡ್‌ನ ಹೊಸ ರೂಪಾಂತರವನ್ನು ಭಾರತದಲ್ಲಿಯೂ ಬಿಎಫ್ 7 ಎಂದು ದೃಢಪಡಿಸಲಾಯಿತು. ಈ ಹಿನ್ನೆಲೆಯಲ್ಲಿ ದೇಶ ಕಟ್ಟೆಚ್ಚರ ವಹಿಸಿದೆ. ಸೆಲ್ ಹೋಸ್ಟ್ ಮತ್ತು ಮೈಕ್ರೋಬ್ ಜರ್ನಲ್‌ನಲ್ಲಿ ಪ್ರಕಟವಾದ ಅಧ್ಯಯನವು ವುಹಾನ್‌ನಲ್ಲಿ ಮೊದಲು ಹರಡಿದ ವೈರಸ್‌ಗಿಂತ BF7 ರೂಪಾಂತರವು 4 ಪಟ್ಟು ಹೆಚ್ಚು ತಟಸ್ಥೀಕರಣ ಪ್ರತಿರೋಧವನ್ನು ಹೊಂದಿದೆ ಎಂದು ಹೇಳುತ್ತದೆ. ಇದರರ್ಥ ವ್ಯಾಕ್ಸಿನೇಷನ್ ಅಥವಾ ಸ್ವಾಧೀನಪಡಿಸಿಕೊಂಡ ಪ್ರತಿರಕ್ಷೆಯ ಮೂಲಕ ದೇಹವು ಈ ರೂಪಾಂತರದ ಸೋಂಕನ್ನು ಸುಲಭವಾಗಿ ತಡೆಯಲು ಸಾಧ್ಯವಿಲ್ಲ.ಅವು ಹೆಚ್ಚು ನಿರೋಧಕವಾಗಿದ್ದರೂ, ಅವು ಹೆಚ್ಚು ಅಪಾಯಕಾರಿ ಅಲ್ಲ…

Read More

ಕಮ್ಯುನಿಸ್ಟ್ ನಾಯಕ ಪುಷ್ಪ ಕಮಲ್ ಧಲ್ (ಪ್ರಚಂಡ) ನೇಪಾಳದ ಪ್ರಧಾನಿಯಾಗಿ ಇಂದು ಅಧಿಕಾರ ಸ್ವೀಕರಿಸಲಿದ್ದಾರೆ. ನೇಪಾಳದ ಪ್ರಧಾನಿಯಾಗಿ ಆಯ್ಕೆಯಾಗಿರುವ ಪ್ರಚಂಡ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಸ್ನೇಹವನ್ನು ಬಲಪಡಿಸಲು ನಾವು ಒಟ್ಟಾಗಿ ಕೆಲಸ ಮಾಡಬಹುದು ಎಂದು ಪ್ರಧಾನಿ ಹೇಳಿದರು. ಭಾರತ ಮತ್ತು ನೇಪಾಳ ನಡುವಿನ ಸಂಬಂಧವು ಸಾಂಸ್ಕೃತಿಕವಾಗಿ ಆಳವಾದದ್ದು. ಸ್ನೇಹವನ್ನು ಬಲಪಡಿಸಲು ಉಭಯ ದೇಶಗಳು ಒಟ್ಟಾಗಿ ಕೆಲಸ ಮಾಡಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಪ್ರತಿಪಕ್ಷ ಕಮ್ಯುನಿಸ್ಟ್ ಲೆನಿನಿಸ್ಟ್ ಮತ್ತು ಪ್ರಚಂಡ ಅವರ ಕಮ್ಯುನಿಸ್ಟ್ ಪಾರ್ಟಿ ಆಫ್ ನೇಪಾಳ ಮಾವೋವಾದಿ ಕೇಂದ್ರದ ನಡುವಿನ ಸಮ್ಮಿಶ್ರ ಸರ್ಕಾರ ಈ ಬಾರಿ ಅಧಿಕಾರಕ್ಕೆ ಬರಲಿದೆ. ಕಮ್ಯುನಿಸ್ಟ್ ಪಾರ್ಟಿ ಆಫ್ ನೇಪಾಳ-ಮಾವೋವಾದಿ ಕೇಂದ್ರದ ಅಧ್ಯಕ್ಷ ಪ್ರಚಂಡ ಮೂರನೇ ಬಾರಿಗೆ ಪ್ರಧಾನಿ ಹುದ್ದೆಗೆ ಏರುತ್ತಿದ್ದಾರೆ. ಪ್ರಚಂಡ ಅವರು ಈ ಹಿಂದೆ 2008 ಮತ್ತು 2016ರಲ್ಲಿ ಪ್ರಧಾನಿಯಾಗಿದ್ದರು. ಸಂಸತ್ತಿನಲ್ಲಿ ಬಹುಮತ ಸಾಬೀತುಪಡಿಸಲು ಅಧ್ಯಕ್ಷರು ಈ ಹಿಂದೆ ಪಕ್ಷಗಳಿಗೆ ಆಹ್ವಾನ ನೀಡಿದ್ದರು. 275 ಸದಸ್ಯ ಬಲದ…

Read More

ನಾಯಕಿ ತ್ರಿಷಾ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ ಎಂಬ ಪ್ರಚಾರದಲ್ಲಿ ಇರುವಂತ ವದಂತಿ ನಿಜವಲ್ಲ ಮತ್ತು ತನಗೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅವರ ಹೊಸ ಚಿತ್ರ ‘ರಾಂಗಿ’ ಇದೇ ತಿಂಗಳ 30 ರಂದು ಬಿಡುಗಡೆಯಾಗಲಿದೆ. ಈ ಸಿನಿಮಾದ ಪ್ರಚಾರದ ಭಾಗವಾಗಿ ನೀಡಿರುವ ಸಂದರ್ಶನದಲ್ಲಿ ತ್ರಿಶಾ ರಾಜಕೀಯ ಪ್ರವೇಶದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಚಿತ್ರರಂಗಕ್ಕೆ ಬಂದು 20 ವರ್ಷಗಳು ಕಳೆದಿದ್ದು, ಈ ಎರಡು ದಶಕಗಳಲ್ಲಿ ವಾಸ್ತವ ಅಂಶಗಳನ್ನು ಮಾತ್ರ ಪರಿಗಣಿಸಿ ಟೀಕೆಗಳತ್ತ ಗಮನ ಹರಿಸಿಲ್ಲ ಎಂದರು. ತಾನು ಕಾಂಗ್ರೆಸ್ ಪಕ್ಷ ಸೇರಲಿದ್ದೇನೆ ಎಂಬ ಪ್ರಚಾರ ನಡೆಯುತ್ತಿದ್ದು, ಅದರಲ್ಲಿ ಯಾವುದೇ ಸತ್ಯಾಂಶವಿಲ್ಲ,  ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು. ಅದೇ ಸಮಯದಲ್ಲಿ ನೀವು ಯಾವಾಗ ಮದುವೆಯಾದಿರಿ? ನಿಮ್ಮ ನೆಚ್ಚಿನ ನಟ ಯಾರು? ಅಂತಹ ಪ್ರಶ್ನೆಗಳನ್ನು ಸ್ವಲ್ಪ ಸಮಯದವರೆಗೆ ಕೇಳದಿರುವುದು ಉತ್ತಮ ಎಂದು ಅವರು ಸೂಚಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…

Read More

ಎಸೆಸೆಲ್ಸಿ ಪರೀಕ್ಷೆಯಲ್ಲಿ ಕೋವಿಡ್‌-19 ನಿಯಮಾವಳಿ ಪಾಲನೆ ಜತೆಗೆ ಸಾಮಾಜಿಕ ಅಂತರ ಕಾಯ್ದುಕೊಂಡೇ ಪರೀಕ್ಷೆ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ಧರಿಸಿದೆ.ಕೋವಿಡ್‌-19 ನಿಯಮಾವಳಿ ಪಾಲನೆ ಜತೆಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಆಸನ ವ್ಯವಸ್ಥೆ ಮಾಡಲಾಗುತ್ತದೆ. ಎಸೆಸೆಲ್ಸಿ ಪರೀಕ್ಷೆಯನ್ನು ಸುವ್ಯವಸ್ಥಿತ ಹಾಗೂ ಅಚ್ಚುಕಟ್ಟಾಗಿ ನಡೆಸುವ ಉದ್ದೇಶದಿಂದ ಕೆಲವು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಇದನ್ನು ಕಡ್ಡಾಯವಾಗಿ ಪಾಲಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಎಲ್ಲ ಉಪನಿರ್ದೇಶಕರಿಗೆ ಸೂಚಿಸಲಾಗಿದೆ. ಪರೀಕ್ಷಾ ಕೇಂದ್ರದ ಪ್ರತಿ ಕೊಠಡಿಗೆ 24 ವಿದ್ಯಾರ್ಥಿಗಳಂತೆ ಆಸನ ವ್ಯವಸ್ಥೆ ಮಾಡಿ ಪರೀಕ್ಷಾ ಕೇಂದ್ರ ರಚಿಸಬೇಕು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ದೇಶನ ನೀಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ರವರು ಕ್ಷೇತ್ರದಲ್ಲಿ ಅಭಿವೃಧ್ದಿಯ ಪರ್ವವನ್ನು ಮುಂದುವರೆಸಿದ್ದು, ಅದರಂತೆಯೇ ಇಂದು ಬೆಳಗಾವಿ ನಗರದ ಮುಖ್ಯ ರಸ್ತೆ ಎನಿಸಿಕೊಂಡಿರುವ ಮಹಾಂತೇಶ ನಗರದ ಬ್ರಿಡ್ಜ ದಿಂದ ಕಣಬರ್ಗಿ ರಸ್ತೆ (ಸುರಭಿ ಹೊಟೆಲ್) ವರೆಗಿನ 2 ಕಿ.ಮೀ ರಸ್ತೆಯನ್ನು ಲೋಕೊಪಯೋಗಿ ಇಲಾಖೆಯಡಿ 1 ಕೋಟಿ ರೂಪಾಯಿ ಅನುದಾನದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಅವರ ಅಮೃತ ಹಸ್ತದಿಂದ ಭೂಮಿ ಪೂಜೆ ಸಲ್ಲಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕರು ಈಗಾಗಲೇ ನಗರದಲ್ಲಿ ಎಲ್ಲ ಕಡೆಗಳಲ್ಲಿ ಅಭಿವೃಧ್ದಿ ಕಾಮಗಾರಿಗಳು ಚಾಲ್ತಿಯಲ್ಲಿವೆ ಅದರಂತೆಯೇ ಇಂದು ನಗರದ ಮುಖ್ಯ ರಸ್ತೆಯಾಗಿರುವ ಮಹಾಂತೇಶ ನಗರ ಬ್ರಿಡ್ಜ ಕಡೆಗಿನ ರಸ್ತೆಯಲ್ಲಿ ಕುಡಿಯುವ ನೀರಿನ ಪೈಪ್ ಲೈನ್  ಕಾಮಗಾರಿಯು ನಡೆಯುತ್ತಿದ್ದರಿಂದ ರಸ್ತೆ ನಿರ್ಮಾಣ ಕಾಮಗಾರಿಯು ತಡವಾಗಿತ್ತು. ಆದ್ದರಿಂದ ಸದ್ಯ ಮಹಾಂತೇಶ ನಗರ ಬ್ರಿಡ್ಜ ರಸ್ತೆ ಯಿಂದ ಕಣಬರ್ಗಿ ರಸ್ತೆ (ಸುರಭಿ ಹೊಟೆಲ್) ವರೆಗಿನ ರಸ್ತೆ ಡಾಂಬರೀಕರಣ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆಯಡಿಯ 1 ಕೋಟಿ ರೂಪಾಯಿ…

Read More

ಬೆಂಗಳೂರು : ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ಹೈಕಮಾಂಡ್ ನಿಂದ ಸಚಿವ ಸಂಪುಟ ವಿಸ್ತರಣೆಗೆ ಹಸಿರು ನಿಶಾನೆ ತೋರುವ ಸಾಧ್ಯತೆ ಇದೆ ಎನ್ನಲಾಗಿದೆ. ಸಚಿವ ಸಂಪುಟ ವಿಸ್ತರಣೆ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಈಗಾಗಲೇ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದ್ದು, , ವರಿಷ್ಠರನ್ನು ಭೇಟಿಯಾಗಿ ಸಂಪುಟ ವಿಸ್ತರಣೆ ಕುರಿತಂತೆ ಚರ್ಚೆ ನಡೆಸಲಿದ್ದಾರೆ.ಇನ್ನು ಮೂರು ಪ್ರತ್ಯೇಕ ಪಟ್ಟಿಯನ್ನ ಸಿದ್ಧಪಡಿಸಿಕೊಂಡ ಸಿಎಂ , ವರಿಷ್ಠರ ಬಳಿ ಮೂರು ಪಟ್ಟಿಗಳ ಬಗ್ಗೆ ಚರ್ಚಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಸಚಿವ ಸ್ಥಾನಕ್ಕೆ ಈಶ್ವರಪ್ಪ , ರಮೇಶ್ ಜಾರಕಿಹೊಳಿ ಸೇರಿ ಖಾಲಿಯಿರುವ ಐದು ಸಚಿವ ಸ್ಥಾನಗಳ ಭರ್ತಿ ಮಾಡಲು ಸಿಎಂ ಲೆಕ್ಕಚಾರ ಹಾಕಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಹೊಸಮುಖಗಳಿಗೆ ಅವಕಾಶ ಕಲ್ಪಿಸುವ ಲೆಕ್ಕಾಚಾರ ಸಿದ್ದಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ : ಇಬ್ಬರನ್ನು ತಡರಾತ್ರಿ ಅಪರಿಚಿತರು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಶಿಂದೊಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿ ನಡೆಯುತ್ತಿದ್ದ ವೇಳೆ ಬಂದ ದುಷ್ಕರ್ಮಿಗಳು ಇಬ್ಬರು ವ್ಯಕ್ತಿಗಳ ಮೇಲೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಬಸವರಾಜ ಬೆಳಗಾಂವಾಕ್ಕರ್ (23), ಗಿರೀಶ್ ನಾಗಣ್ಣನವರ್ (34) ಮೃತರು ಎಂದು ಗುರುತಿಸಲಾಗಿದೆ. ಪಂದ್ಯಾವಳಿ ವೇಳೆ ಮೈದಾನಕ್ಕೆ ಅಪರಿಚಿತ ವಾಹನ ನುಗ್ಗಿದ್ದು, ಯುವಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಳಿಕ ವಾಹನದಿಂದ ಕೆಳಗಿಳಿದ ಅಪರಿಚಿತರು ಇಬ್ಬರು ಯುವಕರ ಮೇಲೆ ಚಾಕುವಿನಿಂದ ಇರಿದು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಮೃತದೇಹಗಳನ್ನು ಬಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಆಸ್ಪತ್ರೆ ಬಳಿ ಮುನ್ನೆಚ್ಚರಿಕಾ ಕ್ರಮವಾಗಿ ಕೆಎಸ್ ಆರ್ ಪಿ ತುಕಡಿ ನಿಯೋಜನೆ ಮಾಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬಾದಾಮಿ ನೀರು ಸೇವನೆಯಿಂದ ಈ ಸಮಸ್ಯೆಗಳನ್ನು ನಿಯಂತ್ರಿಸಬಹುದು! ಬಾದಾಮಿ ಅಂದ್ರೆ, ಯಾರಿಗೆ ಇಷ್ಟ ಇಲ್ಲ ಹೇಳಿ, ಬಾದಾಮಿ ಕೇವಲ ರುಚಿಗೆ ಮಾತ್ರವಲ್ಲದೇ ನಮ್ಮ ಆರೋಗ್ಯಕ್ಕೂ ಅತ್ಯುತ್ತಮವಾಗಿದೆ. ಹಾಗೆಯೇ ಬಾದಾಮಿಯ ನೀರು ಕೂಡ ಆರೋಗ್ಯಕ್ಕೆ ಉತ್ತಮವಾಗಿದೆ. ಬಾದಾಮಿ ನೀರನ್ನು ಸೇವನೆ ಮಾಡುವುದರಿಂದ ದೇಹ ತಂಪಾಗಿರುತ್ತದೆ. ಒಂದಷ್ಟು ಬಾದಾಮಿಯನ್ನು ರಾತ್ರಿ ವೇಳೆ ನೀರಿನಲ್ಲಿ ನೆನೆಹಾಕಿ ಬೆಳಗ್ಗೆ ಸೇವನೆ ಮಾಡಬೇಕು. ಹೀಗೆ ಮಾಡುವುದರಿಂದ ರಕ್ತದೊತ್ತಡದ ಮಟ್ಟವನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ. ಒಂದು ವಾರಗಳ ವರೆಗೆ ಬಾದಾಮಿ ನೀರನ್ನು ಸೇವನೆ ಮಾಡುವುದರಿಂದ ರಕ್ತದ ಒತ್ತಡ ನಿಯಂತ್ರಣಕ್ಕೆ ಬರುತ್ತದೆ. ಜೊತೆಗೆ ದೇಹವು ದುರ್ಬಲವಾಗಿರುವವರು ಬಾದಾಮಿ ನೀರನ್ನು ಸೇವನೆ ಮಾಡುವುದು ಉತ್ತಮ. ಯಾಕೆಂದರೆ ಬಾದಾಮಿ ನೀರು ದೇಹಕ್ಕೆ ಶಕ್ತಿಯನ್ನು ನೀಡುತ್ತದೆ.ಬಾದಾಮಿ ನೀರಿನ ಸೇವನೆಯಿಂದ ನೆನಪಿನ ಶಕ್ತಿ ಹೆಚ್ಚಿಸಲು ಸಹಕಾರಿಯಾಗುತ್ತದೆ. ಜೊತೆಗೆ ದೇಹದಲ್ಲಿ ಸಕ್ಕರೆ ಪ್ರಮಾಣವನ್ನು ಸಮತೋಲನದಲ್ಲಿಡಲು ಬಾದಾಮಿ ನೀರು ಒಳ್ಳೆಯದು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…

Read More

ಕೋವಿಡ್ ಬಗ್ಗೆ ಆತಂಕ ಪಡುವುದು ಬೇಡ. ಹೊಸ ವರ್ಷಕ್ಕೆ  ಇಂದು ಸಂಜೆ ಅಥವಾ ನಾಳೆ ಗೈಡ್ ಲೈನ್ ಬಿಡುಗಡೆ ಮಾಡುತ್ತೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ಬೆಳಗಾವಿಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಆರ್.ಅಶೋಕ್, ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸಭೆ ಮಾಡುತ್ತಿದ್ದೇವೆ.  ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು. ಜನ ಸಹಕರಿಸಿದರೆ ಕೋವಿಡ್ ತಡೆಯಬಹುದು ಎಂದಿದ್ದಾರೆ. ಸದ್ಯಕ್ಕೆ  ಯಾವುದೇ ಕಠಿಣ ನಿರ್ಬಂದ ಹಾಕಲ್ಲ. ಎಲ್ಲರೂ ಮಾಸ್ಕ್ ಸ್ಯಾನಿಟೈಸರ್ ಬಳಸಿ ಎಂದು ಮನವಿ ಮಾಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ದೇಶದಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ತಡೆಯಲು ಬಿಜೆಪಿ ಮತ್ತೆ ಕೊರೊನಾ ಬಳಕೆ ಮಾಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆರೋಪಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಕಾಂಗ್ರೆಸ್ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯುತ್ತಿವೆ. ಇದನ್ನು ಸಹಿಸಿಕೊಳ್ಳದ ಬಿಜೆಪಿ ಅದನ್ನು ತಡೆಯಲು ಕೊರೊನಾ ನೆಪ ಹೇಳುತ್ತಿದೆ ಎಂದರು. ಇನ್ನು ದೇಶದಲ್ಲಿ 2019ರಿಂದ ಕೊರೊನಾ ಇತ್ತು. ಮೊದಲ ಹಾಗೂ ಎರಡನೇ ವರ್ಷದಲ್ಲಿ ಬಹಳ ವೇಗವಾಗಿ ಹರಡಿತ್ತು. ಆದರೆ ಈಗ ಕೊರೊನಾ ಅಂತಹ ಅಪಾಯಕಾರಿಯಾಗಿ ಕಾಣಿಸುತ್ತಿಲ್ಲ. ಈಗ ಬಿಜೆಪಿ ಮತ್ತು ಪ್ರಧಾನಿ ಮೋದಿ ಅವರ ನಡೆಗೆ ದೇಶದ ಜನ ಹೆದರಿ ಮತ್ತೆ ಮಾಸ್ಕ್ ಹಾಕಿಕೊಳ್ಳಲು ಯೋಚಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More