Author: admin

ಮನೆಯ ಮಹಡಿಯಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ 11 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರಂತೋಡಿನಲ್ಲಿ ನಡೆದಿದೆ. ಅರಂತೋಡಿನ ಹೊನ್ನಪ್ಪ ಮಡಿವಾಳ ರವರ ಮಗ ಕೇಶವ (32). ಇವರು ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದರು.ಅವರು ಕೊರೊನಾ ಬಳಿಕ ಬೆಂಗಳೂರಿನಿಂದ ಊರಿಗೆ ಹಿಂತಿರುಗಿದ್ದರು. ಸದ್ಯ ಅವರು ವರ್ಕ್ ಪ್ರಮ್ ಹೋಮ್ ಮಾದರಿಯಲ್ಲಿ ಮನೆಯಲ್ಲಿದೆ ಕಾರ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಮನೆಯವರೆಲ್ಲ ಹೊರ ಹೋಗಿದ್ದ ವೇಳೆ ಕೇಶವರವರು ಮನೆಯ ಮಹಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ವೇಳೆ ಮನೆಯವರು ದೇವಸ್ಥಾನಕ್ಕೆ ಹೋಗಿದ್ದರು ಎನ್ನಲಾಗಿದೆ.ಮನೆಯವರು ದೇವಸ್ಥಾನದಿಂದ ವಾಪಸ್ಸು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಘಟನೆಯೂ ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸ್ಥಳದಲ್ಲಿ ಡೆತ್ ನೋಟ್ ಲಭಿಸಿದ್ದು, ಅದನ್ನು ಹಾಗೂ ಅವರು ಬಳಸುತ್ತಿದ್ದ ಲ್ಯಾಪ್ ಟಾಪ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೃತರು ಅವಿವಾಹಿತರಾಗಿದ್ದು, ತಂದೆ,ತಾಯಿ, ಸಹೋದರ, ಸಹೋದರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.…

Read More

ವಾರಣಾಸಿ: ಜ್ಞಾನ್ವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶೃಂಗಾರ ಗೌರಿ ಹಾಗೂ ಶಿವಲಿಂಗದ ದರ್ಶನ ಮತ್ತು ಪ್ರತಿನಿತ್ಯ ಪೂಜೆ ಸಲ್ಲಿಸಲು ಅವಕಾಶ ಕೋರಿ ನಾಲ್ವರು ಮಹಿಳೆಯರು ಸಲ್ಲಿಸಿರುವ ಅರ್ಜಿಯ ವಿಚಾರಣೆಗೆ ಒಪ್ಪಿಗೆ ಸೂಚಿಸಿದೆ. ಕಾಶಿ ವಿಶ್ವನಾಥ ದೇವಾಲಯದ ಪಕ್ಕದಲ್ಲಿರುವ ನಗರದ ಜ್ಞಾನವಾಪಿ ಮಸೀದಿಯೊಳಗೆ ಪೂಜಿಸುವ ಹಕ್ಕನ್ನು ಕೋರಿ ಐವರು ಹಿಂದೂ ಮಹಿಳೆಯರು ದಾಖಲಿಸಿರುವ ಪ್ರಕರಣವನ್ನು ಆಲಿಸಬಹುದೇ ಅಥವಾ ಇಲ್ಲವೇ ಎಂಬುದನ್ನು ವಾರಣಾಸಿಯ ಹಿರಿಯ ನ್ಯಾಯಾಧೀಶರ ನ್ಯಾಯಾಲಯವು ಇಂದು ನಿರ್ಧರಿಸಿದ್ದಾರೆ. ಜಿಲ್ಲಾ ನ್ಯಾಯಾಧೀಶ ಎ.ಕೆ.ವಿಶ್ವೇಶ ಅವರು ಜ್ಞಾನವಾಪಿ ಮಸೀದಿಯ ಒಳಗೆ ಸಮೀಕ್ಷೆಗೆ ಕಾರಣವಾದ ಮಹಿಳೆಯರ ಪ್ರಕರಣವು ವಿಚಾರಣೆ ಮುಂದುವರಿಯುತ್ತದೆಯೇ ಅಥವಾ ಅದು ಯಾವುದೇ ಕಾನೂನು ಸ್ಥಾನಮಾನವನ್ನು ಹೊಂದುವುದಿಲ್ಲವೇ ಎಂಬ ಬಗ್ಗೆ ದೇಶದಲ್ಲಿ ಕೂತುಹಲಕ್ಕೆ ಕಾರಣವಾಗಿತ್ತು. ಈ ನಡುವೆ ಜ್ಞಾನ್ವಾಪಿ ಮಸೀದಿಗೆ ಸಂಬಂಧಿಸಿದಂತೆ ಲಕ್ನೋದಲ್ಲಿ ಎಚ್ಚರಿಕೆ ನೀಡಲಾಗಿದೆ. ಪೊಲೀಸ್ ಆಯುಕ್ತರು ಲಕ್ನೋ ಚೌಕ್ ಛೇದಕದಿಂದ ನಖಾಸ್ ಗೆ ಮೆರವಣಿಗೆ ನಡೆಸಿದರು. ಭದ್ರತೆಯ ದೃಷ್ಟಿಯಿಂದ, ಆಯುಕ್ತರು ಕಾಲ್ನಡಿಗೆಯಲ್ಲಿ ಮೆರವಣಿಗೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…

Read More

ಅಕ್ಟೋಬರ್ 16 ರಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಭಾರತ ಜೋಡೋ ಕಾರ್ಯಕ್ರಮದ ಪೂರ್ವಭಾವಿ ಸಭೆಗೆ ನಡೆಸುವುದಕ್ಕೆ ರಾಯಚೂರಿಗೆ ಆಗಮಿಸಿ ಮಾತನಾಡಿದ ಅವರು, ನಾನು ಅಧ್ಯಕ್ಷನಾಗಿ ಎರಡು‌ ವರ್ಷಗಳು ಪೂರ್ಣವಾಗುತ್ತಿದೆ. ಎಐಸಿಸಿ ಈಗಾಗಲೇ ಪ್ರಕಟಿಸಿದಂತೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬೆಂಗಳೂರಿನ ಡಾ.ಬಿ.ಆರ್. ಅಂಬೇಡ್ಕರ್ ‌ಭವನದಲ್ಲಿ ಮತದಾನ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದರು. ಇನ್ನು ಕಾಂಗ್ರೆಸ್ ಹಗರಣಗಳನ್ನು ಬಯಲಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈಚೆಗೆ ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರಿಗೆ ನನ್ನ ಮೇಲೆ ಹಾಗೂ ಸಿದ್ದರಾಮಯ್ಯ ಅವರ ಮೇಲೆ ಪ್ರೀತಿ ಜಾಸ್ತಿ ಅದಕ್ಕೆ ನಮ್ಮ ಬಗ್ಗೆ ಹಗರಣದ ಆರೋಪ ಮಾಡುತ್ತಾರೆ ಎಂದು ಹೇಳಿದರು. ಬಿಜೆಪಿಯವರ ಬೆದರಿಕೆಗೆ ನಾವು ಹೆದರುವುದಿಲ್ಲ. ದಿಟ್ಟತನದಿಂದ ಉತ್ತರಿಸುತ್ತೇವೆ. ಆದರೆ ಸಾಮಾಜಿಕ ಮಾಧ್ಯಮಗಳ ಬಿಜೆಪಿಯವರಿಗೆ ಪ್ರತಿದಿನ ಒಂದು ಪ್ರಶ್ನೆ ಕೇಳುತ್ತಿದ್ದೇವೆ ಆದರೆ ಏಕೆ ಉತ್ತರಿಸುತ್ತಿಲ್ಲ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…

Read More

ಬೆಂಗಳೂರು, ಸೆಪ್ಟೆಂಬರ್ 12: ರಾಜ್ಯದಲ್ಲಿ ಬಿಸಿಯೂಟ ತಯಾರಿಸುವ ನೌಕರರು ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದು, ತಮ್ಮ ಕುಟುಂಬ ನಿರ್ವಹಣೆಗೂ ಪರದಾಡಬೇಕಾದ ಸ್ಥಿತಿಯಲ್ಲಿ ತಮ್ಮ ಜೀವನ ನಡೆಸುತ್ತಿದ್ದಾರೆ. ಎಂದಿನಂತೆ ಮಧ್ಯಾಹ್ನದ ಬಿಸಿಯೂಟ ಯೋಜನೆಯು ಈ ಶೈಕ್ಷಣಿಕ ವರ್ಷದಲ್ಲಿ ಹೆಚ್ಚೆಚ್ಚು ಮಕ್ಕಳನ್ನು ಮರಳಿ ಶಾಲೆಗೆ ಕರೆತರುತ್ತಿದೆ. ಮಕ್ಕಳಿಗೆ ಪೌಷ್ಟಿಕಾಂಶದ ಆಹಾರ ನೀಡುವ ಉದ್ದೇಶದಿಂದ ಈ ಯೋಜನೆ ಆರಂಭಿಸಲಾಗಿದೆ. ಆದರೆ, ರಾಜ್ಯಾದ್ಯಂತ ಈ ಊಟವನ್ನು ತಯಾರಿಸಲು ಮತ್ತು ಬಡಿಸಲು ನೇಮಕಗೊಂಡ ಅಡುಗೆಯವರು ಮತ್ತು ಕಾರ್ಮಿಕರಿಗೆ ಈ ವರ್ಷದ ಏಪ್ರಿಲ್‌ನಿಂದ ಗೌರವಧನ ಸಿಕ್ಕಿಲ್ಲ. ಹಲವಾರು ಶಾಲೆಗಳಿಗೆ ತರಕಾರಿಗಳನ್ನು ಖರೀದಿಸಲು ಹಣಕಾಸು ಒದಗಿಸಿಲ್ಲ. ಕೇಂದ್ರ ಸರ್ಕಾರದ ಸೂಚನೆಗಳ ಪ್ರಕಾರ ನೇರವಾಗಿ ಫಲಾನುಭವಿಗಳಿಗೆ ವೇತನವನ್ನು ವಿತರಿಸಲು ರಾಜ್ಯ ಸರ್ಕಾರವು ಸಾರ್ವಜನಿಕ ಹಣಕಾಸು ನಿರ್ವಹಣಾ ವ್ಯವಸ್ಥೆಗೆ ಬದಲಾಯಿಸುತ್ತಿದೆ. ಆದಾಗ್ಯೂ, ಅಕಾಲಿಕ ಶಿಫ್ಟ್ ಮತ್ತು ಸ್ಥಳದಲ್ಲಿ ಬ್ಯಾಕಪ್ ಕಾರ್ಯವಿಧಾನವಿಲ್ಲದೆ, ಬಿಸಿಯೂಟ ತಯಾರಿಸುವ ಕಾರ್ಮಿಕರನ್ನು ತೀವ್ರ ಸಂಕಷ್ಟಕ್ಕೆ ಸಿಲುಕಿಸಿದೆ. ”ಬಿಸಿಯೂಟ ನೌಕರರು ತಿಂಗಳಿಗೆ 2,000 ರೂ.ನಿಂದ 3,500 ರೂ.ವರೆಗಿನ ಸಂಬಳದೊಂದಿಗೆ ಕೆಲಸ ಮಾಡುತ್ತಿದ್ದಾರೆ. ಆದರೆ ಈಗಾಗಲೇ…

Read More

ಲೋಕಾಯುಕ್ತಕ್ಕೆ ಮಾತ್ರ ಈಗ ಭಷ್ಟಾಚಾರ ಪ್ರಕರಗಣ ವಿಚಾರಣೆ ಮಾಡುವ ಅಧಿಕಾರ ಇದ್ದು, ಲೋಕಾಯುಕ್ತ ಇಲಾಖೆಗೆ ಅಗತ್ಯ ಸೌಲಭ್ಯಗಳನ್ನು ನೀಡಬೇಕು ಎಂದು ಧಾರವಾಡದಲ್ಲಿ ನಿ‌ವೃತ್ತ ಲೋಕಾಯುಕ್ತ ನ್ಯಾ. ಸಂತೋಷ್‌ ಹೆಗ್ಡೆ ಹೇಳಿದರು. ನಗರದಲ್ಲಿ ಈ ಬಗ್ಗೆ ಮಾತನಾಡಿದ ಅವರು, ಲೋಕಾಯುಕ್ತ ಪುನಃ ಅಧಿಕಾರ ಬಂದಿದ್ದು, ಒಳ್ಳೆಯ ನಿರ್ಧಾರ ಆಗಿದೆ. ಲೋಕಾಯುಕ್ತಕ್ಕೆ ಸರ್ಕಾರ ಸೂಕ್ತ ಸಿಬ್ಬಂದಿ ನಿಯೋಜಿಸಬೇಕು. ಸೂಕ್ತ ಸಿಬ್ಬಂದಿ ಕೊಟ್ಟರೆ ಸರ್ಕಾರಕ್ಕೆ ನಾನು ಸಲಾಂ ಹೇಳುತ್ತೇನೆ. ಈಗಾಗಲೇ ಅನೇಕ ಕೊರತೆಗಳ ನಡುವೆಯೂ ಲೋಕಾಯುಕ್ತ ಕೆಲಸ ಮಾಡುತಿದೆ. ಅದ್ದರಿಂದ ಲೋಕಾಯುಕ್ತಕ್ಕೆ ಸರ್ಕಾರ ಬೇಕಾದ ಸಿಬ್ಬಂದಿಯನ್ನು ಕೊಡಬೇಕು ಎಂದರು. ಕೆಲವು ಲೋಕಾಯುಕ್ತ ಕಾಯ್ದೆಗಳಿಗೆ ತಿದ್ದುಪಡಿ ಆಗಬೇಕು. ಈ ಹಿಂದೆ ಇದ್ದ ಅಧಿಕಾರಗಳನ್ನು ಪುನಃ ಮರಳಿ ಅವರನ್ನು ಅಧಿಕಾರಕ್ಕೆ ತರಬೇಕು. ಆದರೆ ಯಾವುದೇ ಕಾರಣಕ್ಕೂ ನಾನು ಪುನಃ ಲೋಕಾಯುಕ್ತಕ್ಕೆ ಬರುವುದಿಲ್ಲ. ಈಗಾಗಲೇ ನಾನು ಐದು ವರ್ಷ ಕರ್ತವ್ಯ ನಿಭಾಯಿಸಿದ್ದೇನೆ. ನನಗೆ ಈಗ 83 ವರ್ಷ ವಯಸ್ಸಾಯಿತು ಎಂದರು. ನನ್ನ ಬಳಿ ಸಹಾಯಕ್ಕೆ ಬಂದರೆ ಸ್ಪಂದಿಸುವೆ; ನನಗೆ ಈಗ…

Read More

ಅಹಮದಾಬಾದ್: ಗುಜರಾತ್ ವಿಧಾನಸಭೆ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಆಮ್ ಆದ್ಮಿ ಪಕ್ಷದ ಕಚೇರಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ದಾಳಿ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ಪೊಲೀಸರ ದಾಳಿ ಕುರಿತು ಪ್ರತಿಕ್ರಿಯೆ ನೀಡಿರುವ ಆಮ್‌ ಆದ್ಮಿ ಪಕ್ಷ ಗುಜರಾತ್‌ನಲ್ಲಿ ಎಎಪಿ ಪಕ್ಷಕ್ಕೆ ಸಿಗುತ್ತಿರುವ ಜನ ಬೆಂಬಲ ಕಂಡು ಬಿಜೆಪಿ ಆತಂಕಗೊಂಡಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅಹಮದಾಬಾದ್‌ಗೆ ಬಂದಾಗಲೇ ಈ ದಾಳಿ ನಡೆಸಲಾಗಿದೆ ಎಂದು ದೂರಿದೆ. ಪೊಲೀಸರ ದಾಳಿ ಕುರಿತು ಅರವಿಂದ್ ಕೇಜ್ರಿವಾಲ್ ಪ್ರತಿಕ್ರಿಯೆ ನೀಡಿದ್ದು, “ಪಕ್ಷದ ಕಚೇರಿಯಲ್ಲಿರುವ ನಾಯಕರು, ಕಾರ್ಯಕರ್ತರು ಪ್ರಮಾಣಿಕರು. ಕಚೇರಿಯಲ್ಲಿ ಪೊಲೀಸರಿಗೆ ಏನೂ ಸಿಕ್ಕಿಲ್ಲ” ಎಂದು ಹೇಳಿದ್ದಾರೆ. ಎಎಪಿ ಕಚೇರಿ ಮೇಲೆ ದಾಳಿ ಏಕೆ ನಡೆಸಲಾಗಿದೆ?. ದಾಳಿಯ ವೇಳೆ ಸಿಕ್ಕಿರುವುದು ಏನು? ಎಂಬ ಬಗ್ಗೆ ಗುಜರಾತ್ ಪೊಲೀಸರು ಯಾವುದೇ ಮಾಹಿತಿ ನೀಡಿಲ್ಲ. ಆದರೆ, ಈ ದಾಳಿ ಎಎಪಿ ಮತ್ತು ಬಿಜೆಪಿ ನಡುವೆ ರಾಜ್ಯದಲ್ಲಿ ವಾಕ್ಸಮರಕ್ಕೆ ಕಾರಣವಾಗಿದೆ. “ದೆಹಲಿ ಬಳಿಕ ಗುಜರಾತ್‌ನಲ್ಲಿಯೂ ದಾಳಿಗಳು ಆರಂಭವಾಗಿವೆ. ದೆಹಲಿಯಲ್ಲಿ ಏನೂ ಸಿಗಲಿಲ್ಲ,…

Read More

ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ ಪ್ರಕರಣ ಸಂಬಂಧ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 17 ಕ್ಕೆ ಏರಿಕೆಯಾಗಿದೆ. ನೆಟ್ ಎಕ್ಸಾಂನಲ್ಲಿ 46 ನೇ ರ‍್ಯಾಂಕ್ ಪಡೆದಿದ್ದ, ಹುಕ್ಕೇರಿ ಸರ್ಕಾರಿ ‌ಕಾಲೇಜಿನ‌ ಅತಿಥಿ ಉಪನ್ಯಾಸಕ ಆದೇಶ್​ ನಾಗನೂರಿ ಎಂಬಾತನನ್ನು ಬಂಧಿಸಿದ್ದಾರೆ. ಬೆಳಗಾವಿ ಎಸ್​ಪಿ ಡಾ.ಸಂಜೀವ್ ಪಾಟೀಲ್ ನೇತೃತ್ವದ ವಿಶೇಷ ತಂಡಗಳು ಸದ್ಯದಲ್ಲೇ ಇನ್ನಷ್ಟು ಆರೋಪಿಗಳನ್ನ ಬಂಧಿಸುವ ಸಾಧ್ಯತೆಯಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ನವದೆಹಲಿ: ಪೌರತ್ವ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳು ಸೇರಿದಂತೆ 200 ಕ್ಕೂ ಹೆಚ್ಚು ಪಿಐಎಲಗಳನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ ಎನ್ನಲಾಗಿದೆ . ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ನೇತೃತ್ವದ ಪೀಠವು ಸಿಎಎಯ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಲಿದೆ. ಸುಪ್ರೀಂ ಕೋರ್ಟ್ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಲಾದ ವ್ಯವಹಾರಗಳ ಪಟ್ಟಿಯ ಪ್ರಕಾರ, ಮುಖ್ಯ ನ್ಯಾಯಮೂರ್ತಿ ಮತ್ತು ನ್ಯಾಯಮೂರ್ತಿ ಎಸ್ ರವೀಂದ್ರ ಭಟ್ ಅವರನ್ನು ಒಳಗೊಂಡ ಪೀಠವು ಸಿಎಎ ವಿರುದ್ಧ ಇಂಡಿಯನ್ ಯೂನಿಯನ್ ಆಫ್ ಮುಸ್ಲಿಂ ಲೀಗ್ನ ಪ್ರಮುಖ ಅರ್ಜಿ ಸೇರಿದಂತೆ 220 ಅರ್ಜಿಗಳನ್ನು ವಿಚಾರಣೆಗೆ ಮುಂದಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಬೆಂಗಳೂರು: ಇಂದಿನಿಂದ ವಿಧಾನ ಮಂಡಲ ಅಧಿವೇಶನ ನಡೆಯಲಿದ್ದು, ರಾಜ್ಯ ಸರ್ಕಾರದ ಮೇಲಿನ 40% ಕಮಿಷನ್ ಭ್ರಷ್ಟಾಚಾರ ವಿರುದ್ಧ ಪ್ರಸ್ತಾಪಿಸಲು ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದೆ. ಇದೇ ವೇಳೆ ಸಿದ್ದರಾಮಯ್ಯ ಅವಧಿಯಲ್ಲಿನ ಅಕ್ರಮಗಳ ಪ್ರಸ್ತಾಪಿಸಲು ಬಿಜೆಪಿ ತಯಾರಾಗಿದೆ ಅತಿವೃಷ್ಟಿ ನಿರ್ವಹಣೆಯಲ್ಲಿ ಸರ್ಕಾರದ ವೈಫಲ್ಯ, ಪಠ್ಯಪುಸ್ತಕ ಪರಿಷ್ಕರಣೆ ಎಡವಟ್ಟು, ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ, ಕಾನೂನು ಸುವ್ಯವಸ್ಥೆ ಸೇರಿದಂತೆ ಬಿಜೆಪಿ ಸರ್ಕಾರದ ವಿವಿಧ ಲೋಪಗಳನ್ನು ಎತ್ತಿ ಹಿಡಿಯಲು ಕಾಂಗ್ರೆಸ್ ಸಜ್ಜಾಗಿದೆ. ಇದಕ್ಕೆ ತಿರುಗೇಟು ನೀಡಲು ಬಿಜೆಪಿ ಕೂಡ ಸಿದ್ಧತೆ ಮಾಡಿಕೊಂಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಸಪ್ಟೆಂಬರ್ 11 ರಂದು ಪ್ರತಿ ವರ್ಷ ಅರಣ್ಯ ಹುತಾತ್ಮ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತಿದೆ ಅರಣ್ಯ ಅಧಿಕಾರಿಗಳು ಕರ್ತವ್ಯದಲ್ಲಿ ಹುತಾತ್ಮರಾದವರಿಗೆ ಅವರಿಗೆ ಗೌರವಾರ್ಥ ಆಚರಣೆ ಮಾಡಲಾಗುತ್ತದೆ. ಈ ವೇಳೆ ಅರಣ್ಯ ಇಲಾಖೆಯಲ್ಲಿ ಹುತಾತ್ಮರಾದ ಸಿಬ್ಬಂದಿಗಳಿಗೆ ಗೌರವ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬೆಳಗಾವಿ ವೃತ್ತದ ಮುಖ್ಯ ಸಂರಕ್ಷಣಾಧಿಕಾರಿಗಳು ಮಂಜುನಾಥ್ ಚೌವ್ಹಾಣ್, ಜಿಲ್ಲಾಧಿಕಾರಿ ನಿತೀಶ್ ಪಾಟೀಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಚ್. ದರ್ಶನ್ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಬೆಳಗಾವಿ ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಖಾನಾಪುರ್ ಉಪ ವಿಭಾಗ ವತಿಯಿಂದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ ಚವ್ಹಾಣ್ ಹಾಗೂ ವಲಯ ಕವಿತಾ ಈರನಟ್ಟಿ, ಲೋಡಾ ವಲಯ ಅರಣ್ಯ ಅಧಿಕಾರಿ ನಾಗರಾಜ್ ಭೀಮ್ ಗೋಳ, ಕಣಕುಂಬಿ ವಲಯ ಅರಣ್ಯ. ಅಧಿಕಾರಿ, ಗಣೇಶ ಶೆಟ್ಟರ್ ಮತ್ತು ನಾಗರಗಾಳಿ ಉಪ ವಿಭಾಗ ವತಿಯಿಂದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಿವರುದ್ರಪ್ಪ ಕಬ್ಬಡಿಗಿ, ನಾಗರಗಾಳಿ ವಲಯದ ಅರಣ್ಯ ಅಧಿಕಾರಿ ರತ್ನಾಕರ್ ಓಬನ್ನವರ್ , ವರಗೋಲಿ ಹಳ್ಳಿ ವಲಯ ಅಧಿಕಾರಿ ವಾಣಿಶ್ರೀ…

Read More