Subscribe to Updates
Get the latest creative news from FooBar about art, design and business.
- BPS: ಪದಾಧಿಕಾರಿಗಳ ಆಯ್ಕೆ, ಎಂಬಿಬಿಎಸ್ ವಿದ್ಯಾರ್ಥಿಗೆ ಸನ್ಮಾನ
- ಹಂಚೀಪುರ ಗ್ರಾ.ಪಂ.: ರಸ್ತೆ ಬದಿಯ ಗಿಡಗಂಟಿ ತೆರವಿಗೆ ಆಗ್ರಹಿಸಿ ಪ್ರತಿಭಟನೆ
- ಸರಗೂರು | ಆರ್ ಎಸ್ ಎಸ್ ಬ್ಯಾನ್ ಗೆ ಡಿ ಎಸ್ ಎಸ್ ಒತ್ತಾಯ
- ತಿಪಟೂರು | ಸರಿಯಾಗಿ ಕಾರ್ಯನಿರ್ವಹಿಸದ ಸಂಚಾರ ಸಿಗ್ನಲ್ ಗಳು: ವಾಹನ ಚಾಲಕರಿಂದ ಆಕ್ರೋಶ
- ಕನಕದಾಸರು ಸಮಾಜದ ಓರೆಕೋರೆಗಳನ್ನು ತಿದ್ದಲು ಶ್ರಮಿಸಿದವರು: ಸಿ.ವಿ.ಕುಮಾರ್
- ಅವೈಜ್ಞಾನಿಕ ಸುತ್ತೋಲೆ ವಾಪಸ್ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರಾಂಶುಪಾಲರ, ಉಪನ್ಯಾಸಕರ ಸಂಘ ಆಗ್ರಹ
- ತುಮಕೂರು | ಕಾಂಗ್ರೆಸ್ ಭವನ ಕಟ್ಟಡ ನಿರ್ಮಾಣಕ್ಕೆ ತಡೆಯಾಜ್ಞೆ
- ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ
Author: admin
ಹಿರಿಯೂರು: ತಾಲ್ಲೂಕಿನ ತಾಲ್ಲೂಕು ತಹಶೀಲ್ದಾರರಾದ ಪ್ರಶಾಂತ ಕೆ. ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತ್ಯೋತ್ಸವದ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ವಾಣಿಕಾಲೇಜಿನ ಪ್ರಾಂಶುಪಾಲ ಡಿ. ಧರೇಂದ್ರಯ್ಯ, ಕೇರಳದ ಸಮಾಜದ ಸಮಾಜಸುಧಾರಕರಾದ ಬ್ರಹ್ಮಶ್ರೀ ನಾರಾಯಣ ಗುರು ನಾರಾಯಣ ಗುರುಗಳು ವೈಕಂ ಚಳುವಳಿಯ ಪ್ರತಿಪಾದಕರಾಗಿದ್ದು, ಭೂ ರಹಿತ ರೈತರಿಗೆ ಭೂಚಳುವಳಿಯ ಮೂಲಕ ಭೂಮಿ ಕೊಡಿಸಲು ಹೋರಾಡಿದರು, ನಾರಾಯಣ ಗುರುಗಳ ಮಹಾನ್ ವ್ಯಕ್ತಿಗಳ ಆದರ್ಶಗಳು ಇಂದಿನ ಯುವಕರಿಗೆ ದಾರಿದೀಪವಾಗಿದೆ. ನಾರಾಯಣ ಗುರುಗಳು ಸಮಾಜದ ಪಿಡುಗುಗಳಾದ ಮೂಢನಂಬಿಕೆ, ಜಾತೀಯತೆ, ಅಸ್ಪೃಶ್ಯತೆ, ದೇವದಾಸಿ ಪದ್ಧತಿ, ಬೆತ್ತಲೆ ಸೇವೆ, ಬಾಲ್ಯವಿವಾಹ, ಗುಲಾಮಗಿರಿ, ಜೀತ ಪದ್ಧತಿ, ಜಮೀನ್ದಾರಿ ಪದ್ಧತಿಗಳ ತೊಡೆದು ಹಾಕಲು ಹೋರಾಡಿದರು ಎಂದರು. ತಹಶೀಲ್ದಾರ್ ಪ್ರಶಾಂತ ಕೆ. ಪಾಟೀಲ ಅವರು ಮಾತನಾಡಿ, ಹಿಂದುಳಿದ ವರ್ಗದವರಿಗೆ ದೇವಸ್ಥಾನ ಪ್ರವೇಶ ದೊರಕಿಸಿ ಕೊಡಲು ಹೋರಾಡಿದ ಅವರು ಮಹಾನ್ ಮಾನವತಾವಾದಿಯಾಗಿದ್ದು, ಅಂತರ್ ಜಾತಿಯ ವಿವಾಹಕ್ಕೆ ಒತ್ತು ನೀಡಿದ ಇವರು ಸರ್ವಜನರಲ್ಲೂ ಭ್ರಾತೃತ್ವವನ್ನು ಬೆಳೆಸಲು ಹೋರಾಡಿದರು, ಸಾಮಾಜಿಕ ಪಿಡುಗುಗಳ ವಿರುದ್ಧ ಹೋರಾಡಿದ…
ಶ್ರೀ ವಿನಾಯಕ ಯುವಕರ ಸಂಘ ಅರಕೆರೆ ತುಮಕೂರು ಜಿಲ್ಲೆ ಕಸಬಾ ಹೊಬಳಿ ಯುವಕರ ಸಂಘದ ವತಿಯಿಂದ ಅದ್ದೂರಿ ಗಣೇಶ ವಿಸರ್ಜನೆ ನಡೆಯಿತು. ಎಲ್ಲಾ ಮುಂಜಾಗ್ರತೆ ವಹಿಸಿಕೊಂಡು ಗಣೇಶ ವಿಸರ್ಜನೆ ಮಾಡಲಾಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಅರಕೆರೆ ಟಿ.ಅರ್.ರವೀಶ್ ಹಾಗೂ ಅರಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸಲ್ಮಾ ಆರಿಫ್, ಉಪಾಧ್ಯಕ್ಷರಾದ ನಾಗರತ್ನಮ್ಮ ಮತ್ತು ಸದಸ್ಯರಾದ ಅನಿಲ್ ಪಾಟೀಲ್, ಶಿವಕುಮಾರ್, ನರಸಿಂಹರಾಜು, ನವೀನ್, ಕುಮಾರಣ್ಣ, ಸಂಜೀವಮ್ಮ, ಭಾಗವಹಿಸಿದ್ದರು. ಈ ಕಾರ್ಯಕ್ರಮಕ್ಕೆ ಗ್ರಾಮದ ಯುವಕರು, ಮಹಿಳೆಯರು, ಪುಟ್ಟ ಮಕ್ಕಳು, ಹಿರಿಯರು ತುಂತುರು ಮಳೆಯನ್ನು ಲೆಕ್ಕಿಸದೆ ವಾದ್ಯಕ್ಕೆ ತಕ್ಕಂತೆ ನೃತ್ಯ ಮಾಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬೆಂಗಳೂರು : ಹುತಾತ್ಮ ಅರಣ್ಯ ಇಲಾಖೆಯ ಸಿಬ್ಬಂದಿಗಳ ಪರಿಹಾರವನ್ನು 50 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಹುತಾತ್ಮ ಅರಣ್ಯ ಇಲಾಖೆಯ ಸಿಬ್ಬಂದಿಗಳ ಪರಿಹಾರ ಮೊತ್ತವನ್ನು 50 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. ಯಡಿಯೂರಪ್ಪ ಅವರು 30 ಲಕ್ಷ ರೂ.ಗೆ ಏರಿಸಿದ್ದರು. ಇದೀಗ 50 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ. ನೇಮಕಾತಿ ಸಂಬಂಧಿ ಎಲ್ಲಾ ಕೆಲಸಗಳು ಸುಲಭ ಮಾಡುತ್ತೇವೆ. ಅರಣ್ಯವನ್ನು ನೀವು ರಕ್ಷಣೆ ಮಾಡಿ, ನಾವು ನಿಮ್ಮನ್ನು ರಕ್ಷಣೆ ಮಾಡುತ್ತೇವೆ. ಹೊಸ ವಿಧಾನದ ನೈಸರ್ಗಿಕ ಸಂಪತ್ತು ಆಕರ್ಷಿಸುವ ಕೆಲಸ ಆಗುತ್ತಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬೆಂಗಳೂರು: ರಾಜ್ಯ ಸರ್ಕಾರದಿಂದ ಹೈಕೋರ್ಟ್ ಆದೇಶದ ಹಿನ್ನಲೆಯಲ್ಲಿ ಎಸಿಬಿ ರದ್ದುಗೊಳಿಸಿ, ಅಧಿಕೃತವಾಗಿ ಆದೇಶಿಸಿತ್ತು. ಈ ಬೆನ್ನಲ್ಲೇ ಎಸಿಪಿಯಲ್ಲಿನ ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆಗೊಳಿಸುವಂತೆ ಅಧಿಕೃತವಾಗಿ ಆದೇಶಿಸಿದೆ. ಈ ಸಂಬಂಧ ಎಸಿಬಿಯ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ಆದೇಶ ಹೊರಡಿಸಿದ್ದು, ಎಸಿಬಿಯ ಎಲ್ಲಾ ತನಿಖೆ, ಪ್ರಕರಣಗಳ ಕಡತಗಳನ್ನು ಸಂಪೂರ್ಣವಾಗಿ ಲೋಕಾಯುಕ್ತಕ್ಕೆ ವರ್ಗಾವಣೆಗೊಳಿಸುವಂತೆ ಸೂಚಿಸಿದ್ದಾರೆ. ಎಲ್ಲಾ ಕಡತಗಳನ್ನು ವರ್ಗಾಯಿಸಿ, ಸ್ವೀಕೃತಿ ಪಡೆಯುವಂತೆ ಹೇಳಿದ್ದಾರೆ. ಇದಲ್ಲದೇ ಸೆಪ್ಟೆಂಬರ್ 12ರ ಸಂಜೆ 5 ಗಂಟೆಯೊಳಗೆ ಪಾಲನಾ ವರದಿಯನ್ನು ಸಲ್ಲಿಸುವಂತೆ ಎಸಿಬಿಯ ಆಡಳಿತ ವಿಭಾಗದ ಎಸ್ಪಿಗೆ, ಕಡತ ವರ್ಗಾವಣೆಯ ಮೇಲುಸ್ತುವಾರಿ ನೀಡಿದ್ದಾರೆ. ಜೊತೆಗೆ ರಾಜ್ಯದ ಎಲ್ಲಾ ವಲಯಗಳ ಕಡತ ಪಡೆದ ವರದಿ ಸಲ್ಲಿಸುವಂತೆಯೂ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಮೈಸೂರು: ಪ್ರಸ್ತುತ ಹೃದಯಸಂಬಂಧಿಗೆ ಕಾಯಿಲೆಗೆ ಭಾರತದಲ್ಲಿ ಶೇ.30 ರಷ್ಟು ಜನ ಮೃತಪಡುತ್ತಿದ್ದಾರೆ. ಉಳಿದಂತೆ ರಕ್ತದೊತ್ತಡ, ಡಯಾಬಿಟಿಸ್, ಕ್ಯಾನ್ಸರ್, ಸ್ಟ್ರೋಕ್ ಕೂಡ ಮಾನವನನ್ನು ಕಾಡುತ್ತಿದೆ. ಬೇರೆ ದೇಶಕ್ಕೆ ಹೋಲಿಸಿದರೆ 15 ವರ್ಷಗಳಿಗಿಂತ ಮುಂಚಿತವಾಗಿಯೇ ಹೃದಯ ಸಂಬಂಧಿ ಕಾಯಿಲೆ ಭಾರತೀಯರಲ್ಲಿ ಕಾಡುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತರೂ ಆದ ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ತಿಳಿಸಿದ್ದಾರೆ. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶುಕ್ರವಾರ ಸಂಘದ ಸಭಾಂಗಣದಲ್ಲಿ ಆಯೋಜಿಸಿದ್ದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದು ಯುವಕರಲ್ಲಿ ಹೃದಯಾಘಾತ ಹೆಚ್ಚುತ್ತಿದೆ. 45 ವರ್ಷ ಕಡಿಮೆ ಇರುವ ಶೇ.8ರಷ್ಟು ಮಹಿಳೆಯರಿಗೆ ಹೃದಯಾಘಾತ ಆಗುತ್ತಿದೆ. ಸ್ಮೋಕಿಂಗ್, ಅಧಿಕ ರಕ್ತದೊತ್ತಡ ಹೃದಯಾಘಾತಕ್ಕೆ ಪ್ರಮುಖ ಕಾರಣ ಎಂದು ತಿಳಿಸಿದರು. ನಮ್ಮ ಸುತ್ತಮುತ್ತಲಿನ ವಾತಾವರಣ ಹಾಗೂ ಜೀವನಶೈಲಿ ನಮ್ಮ ಆರೋಗ್ಯವನ್ನು ನಿರ್ಧರಿಸುತ್ತದೆ. ಭಾರತದಲ್ಲಿ ವಾಯು ಮಾಲಿನ್ಯದಿಂದ 20 ಲಕ್ಷ ಜನ ನಾನಾ ಕಾಯಿಲೆಗೆ ತುತ್ತಾಗಿ ಮೃತ ಪಟ್ಟಿದ್ದಾರೆ. 45 ವರ್ಷದಿಂದ 60 ವರ್ಷದವರಲ್ಲಿ ಹೃದಯ ಸಂಬಂಧಿ…
ಬಳ್ಳಾರಿ: ವಿಜಯನಗರ ಜಿಲ್ಲೆಯ ಹೊಸಪೇಟೆಯ ತುಂಗಭದ್ರಾ ಡ್ಯಾಂ ಕಾಲುವೆ ಬಳಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಕ್ರೇನ್ ಪಲ್ಟಿಯಾಗಿದೆ. ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. 35 ಅಡಿ ಎತ್ತರದ ಗಣೇಶ ಮೂರ್ತಿ ವಿಸರ್ಜನೆ ವೇಳೆ ಶನಿವಾರ ರಾತ್ರಿ 1.30ರ ಸುಮಾರಿಗೆ ಈ ಘಟನೆ ನಡೆದಿದೆ. ತುಂಗಭದ್ರಾ ಡ್ಯಾಂ ಕಾಲುವೆ ಬಳಿ ಗಣೇಶ ಮೂರ್ತಿ ಇದ್ದ ಕ್ರೇನ್ ಪಲ್ಟಿಯಾಗಿದೆ. ತುಂಗಭದ್ರಾ ಡ್ಯಾಂನ ಇವಿ ಕ್ಯಾಂಪ್ ನಿವಾಸಿ ಅಶೋಕ್ (18) ಮೃತಪಟ್ಟವರು. ನಿಖಿಲ್ ಎಂಬುವವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರ ಸ್ಥಿತಿಯೂ ಗಂಭೀರವಾಗಿದೆ. ಹೊಸಪೇಟೆಯಲ್ಲಿ ಪ್ರತಿಷ್ಠಾಪಿಸಲಾಗಿದ್ದ 35 ಅಡಿ ಅತ್ತರದ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಶನಿವಾರ ನಡೆದಿತ್ತು. ಟಿಬಿ ಡ್ಯಾಂ ಕಾಲುವೆಯಲ್ಲಿ ಗಣೇಶ ಮೂರ್ತಿ ವಿಸರ್ಜಿಸಲು ಸಕಲ ತಯಾರಿ ನಡೆದಿತ್ತು. ವಾಹನದಿಂದ ಗಣೇಶ ಮೂರ್ತಿಯನ್ನು ಕ್ರೇನ್ ಮೂಲಕ ಎತ್ತಿ ಕಾಲುವೆಗೆ ಇಳಿಸುವಾಗ ಕ್ರೇನ್ ಪಲ್ಟಿಯಾಗಿದೆ. ಆಗ ಇಬ್ಬರು ಯುವಕರು ಅದರ ಅಡಿ ಸಿಲುಕಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
ಯುಪಿಯ ಲಕ್ನೋದಿಂದ ಕೃಷ್ಣನಗರದಲ್ಲಿ ಸಾಕು ನಾಯಿಯೊಂದು ಯುವಕ (23) ಮೇಲೆ ದಾಳಿ ಮಾಡಿದ ಭಯಾನಕ ಘಟನೆ ಬೆಳಕಿಗೆ ಬಂದಿದೆ. ದಾಳಿ ವೇಳೆ ಯುವಕನ ಖಾಸಗಿ ಅಂಗಕ್ಕೆ ನಾಯಿ ಕಚ್ಚಿದೆ ಎನ್ನಲಾಗಿದೆ. ಗಾಯಗೊಂಡ ಯುವಕನನ್ನು ಚಿಕಿತ್ಸೆಗಾಗಿ ಕೆಜಿಎಂಯುಗೆ ದಾಖಲಿಸಲಾಗಿದ್ದಾನೆ. 2 ದಿನಗಳ ನಂತರ ಕೆಜಿಎಂಯುನಿಂದ ಬಿಡುಗಡೆಯಾದ ನಂತರ, ಸಂತ್ರಸ್ತ ಕೃಷ್ಣನಗರ ಪೊಲೀಸ್ ಠಾಣೆಗೆ ಬಂದು ನಾಯಿ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಮಕ್ಕಳ ಕಳ್ಳತನ ಮಾಡಲು ಯತ್ನಿಸಿದರು ಎಂಬ ಸಂಶಯದಿಂದ ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಚನ್ನಮ್ಮನ ಕಿತ್ತೂರು ತಾಲ್ಲೂಕಿನ ಮರಿಗೇರಿ- ಇಟಗಾ ಗ್ರಾಮದಲ್ಲಿ ನಡೆದಿದೆ. ಇನ್ನೂ ಮೂವರು ಪರಾರಿಯಾಗಿದ್ದಾರೆ. ರಗ್ಗು, ಬೆಡ್ ಸೀಟ್, ಪ್ಲಾಸ್ಟಿಕ್ ಬುಟ್ಟಿಗಳನ್ನು ಮಾರಲು ಆರು ಜನ ವಾಹನದಲ್ಲಿ ಬಂದಿದ್ದರು. ಈ ವೇಳೆ ರಸ್ತೆ ಬದಿ ಸೈಕಲ್ ಓಡಿಸುತ್ತಿದ್ದ ಬಾಲಕನನ್ನು ವಾಹನದಲ್ಲಿ ಹತ್ತಿಸಿಕೊಳ್ಳಲು ಯತ್ನಿಸಿದರು. ಇದರಿಂದ ಕಿರುಚಿದ 12 ವರ್ಷದ ಬಾಲಕ ಮನೆಗೆ ಓಡಿದ. ಇದನ್ನು ಕಂಡು ಊರಿನ ಜನ ಗುಂಪಾಗಿ ಸೇರಿದರು. ತನ್ನನ್ನು ಎಳೆದುಕೊಂಡು ಹೋಗಲು ಯತ್ನಿಸಿದರು ಎಂದು ಬಾಲಕ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ. ಜನಸೇರಿರುವುದನ್ನು ಕಂಡು ಮೂವರು ಪರಾರಿಯಾಗಿದ್ದು, ಮೂವರನ್ನು ಜನ ಪೊಲೀಸರಿಗೆ ಒಪ್ಪಿಸಿದ್ದಾರೆ. ಆದರೆ, ತಾವು ಉತ್ತರ ಪ್ರದೇಶದಿಂದ ವ್ಯಾಪಾರ ಮಾಡುತ್ತ ಊರೂರು ಅಲೆಯುವುದಾಗಿ ಆರೋಪಿಗಳು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬೆಳಗಾವಿ : ಗಣಪತಿ ವಿಸರ್ಜನೆ ವೇಳೆ ಯುವಕನ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಯರಗಟ್ಟಿ ತಾಲೂಕಿನ ಮುಗಳಿಹಾಳ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಗಣೇಶ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಗಲಾಟೆ ವಿಕೋಪಕ್ಕೆ ತಿರುಗಿ ಚಾಕುವಿನಿಂದ ಇರಿದು ಅರ್ಜುನಗೌಡ ಪಾಟೀಲ್ (20) ಹತ್ಯೆ ಮಾಡಲಾಗಿದೆ. ಅರ್ಜುನಗೌಡ ಪಾಟೀಲ್ ಕುಸಿದು ಬೀಳುತ್ತಿದ್ದಂತೆ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಮುರುಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬೆಂಗಳೂರು: ಪ್ರಸಕ್ತ ಸಾಲಿನ ಮೈಸೂರು ದಸರಾ ಕಾರ್ಯಕ್ರಮವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉದ್ಘಾಟಿಸಲಿದ್ದಾರೆ ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ನಗರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದಂತ ಅವರು, ಮೈಸೂರು ದಸರಾ ಮಹೋತ್ಸವವನ್ನು ಯಾರು ಉದ್ಘಾಟಿಸಬೇಕು ಎಂಬುದಾಗಿ ಚರ್ಚಿಸಲಾಗಿತ್ತು. ಆ ಚರ್ಚೆಯಂತೆ ಈ ಬಾರಿ ಮೈಸೂರು ದಸರಾವನ್ನು ರಾಷ್ಟ್ರಪತಿ ದ್ರೌಪತಿ ಮುರ್ಮು ಉದ್ಘಾಟಿಸಲು ಆಹ್ವಾನಿಸಲು ನಿರ್ಧರಿಸಲಾಗಿದೆ. ಹೀಗಾಗಿ ಈ ಬಾರಿಯ ಮೈಸೂರು ದಸರಾವನ್ನು ದ್ರೌಪದಿ ಮುರ್ಮು ಅವರು ಉದ್ಘಾಟಿಸಲಿದ್ದಾರೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz