Subscribe to Updates
Get the latest creative news from FooBar about art, design and business.
- ಕೊಡಿಗೇನಹಳ್ಳಿ: ಬಸ್ ನಿಲ್ದಾಣದಲ್ಲಿ ಬಿದ್ದಿದ್ದ ಚಿನ್ನದ ನೆಕ್ಲೇಸ್ ಕದ್ದ ಮಹಿಳೆ ಬಂಧನ
- ಕುಣಿಗಲ್ ಬಳಿ ಭೀಕರ ರಸ್ತೆ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸೇರಿ ನಾಲ್ವರು ಸಾವು
- ಮೇ 12 ರಂದು ಡಾ.ಜಿ.ಎಸ್.ಸಿದ್ದಲಿಂಗಯ್ಯನವರ ಬದುಕು–ಬರಹ ವಿಚಾರ ಸಂಕಿರಣ, ದತ್ತಿ ಪ್ರಶಸ್ತಿ ಸಮಾರಂಭ
- ಸಿರಾ: ಶಿಕ್ಷಕರ ತರಬೇತಿ ಸಂಸ್ಥೆ ದಾಖಲಾತಿ ಪ್ರಾರಂಭ
- ತುರುವೇಕೆರೆ: ಹೆಗ್ಗೆರೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ
- ತೆರೆ ಮೇಲೆ ರಾಜ್ ಕುಮಾರ್, ಅಂತರಂಗದಲ್ಲಿ ಮುತ್ತುರಾಜ್ ಇದ್ದರು: ಆರ್. ಮಂಜುನಾಥ್ ಚವಾಣ್, ನಾದಯೋಗಿ ಡಾ.ರಾಜಕುಮಾರ್ ಪುಸ್ತಕ ಬಿಡುಗಡೆ
- ಕಾರವಾರ: ಕಾರ್ಮಿಕರು ಸರ್ಕಾರದಿಂದ ಸಿಗುವ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ: ನ್ಯಾ.ಕವಿತಾ ಎಸ್.ಉಂಡೋಡಿ
- ಧಾರವಾಡ: ಜನ–ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್ ಆರ್. ಸೂಚನೆ
Author: admin
ಉತ್ತರ ಪ್ರದೇಶದಲ್ಲಿ ಸುರಂಗ ನಿರ್ಮಿಸಿ ಬ್ಯಾಂಕ್ ದರೋಡೆ. ಉತ್ತರ ಪ್ರದೇಶದ ಕಾನ್ಪುರದಲ್ಲಿರುವ ಎಸ್ ಬಿಐ ಬ್ಯಾಂಕ್ ನ ಭಾನುತಿ ಶಾಖೆಯಲ್ಲಿ ದರೋಡೆ ನಡೆದಿದೆ. ಬ್ಯಾಂಕ್ ನಿಂದ ಸುಮಾರು 1 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ನಷ್ಟವಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ದರೋಡೆಯಲ್ಲಿ 10 ಅಡಿ ಉದ್ದದ ಸುರಂಗ ನಿರ್ಮಿಸಲಾಗಿದೆ. ಖಾಲಿ ಜಾಗದಿಂದ ದಂಡೆಯೊಳಗೆ ಸುರಂಗ ನಿರ್ಮಿಸಲಾಗುತ್ತಿದೆ. ಸುರಂಗವು 4 ಅಡಿ ಅಗಲವಿದೆ. ದರೋಡೆಕೋರರು ಚಿನ್ನವನ್ನು ತೆಗೆದುಕೊಂಡು ಹೋದರೂ ನಗದು ಪೆಟ್ಟಿಗೆಯನ್ನು ತೆರೆಯಲು ಸಾಧ್ಯವಾಗದ ಕಾರಣ ಅದರಲ್ಲಿದ್ದ 32 ಲಕ್ಷ ರೂ.ಕಳೆದುಹೋದ ಚಿನ್ನದ ಮೌಲ್ಯವನ್ನು ಬ್ಯಾಂಕ್ ಅಧಿಕಾರಿಗಳು ಗಂಟೆಗಳಲ್ಲಿ ಲೆಕ್ಕ ಹಾಕಿದರು. ಸುಮಾರು 1.8 ಕೆಜಿ ಚಿನ್ನ ನಷ್ಟವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಕಳ್ಳತನಕ್ಕೆ ಬ್ಯಾಂಕ್ ಉದ್ಯೋಗಿಗಳ ಸಂಬಂಧವಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಕೈ ದಾಖಲೆಗಳು ಸೇರಿದಂತೆ ಕೆಲವು ಸಾಕ್ಷ್ಯಾಧಾರಗಳು ದೊರೆತಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…
ಅಲಿಗಢ;25 ವರ್ಷದ ಮಹಿಳೆ ದೆಹಲಿ ನಿವಾಸಿ ಅಮಿತ್ ಅವರನ್ನು 2015 ರಲ್ಲಿ ವಿವಾಹವಾಗಿದ್ದರು. ಪತಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ವರ್ಷಗಳ ಹಿಂದೆ ಇಬ್ಬರ ನಡುವೆ ಜಗಳವಾಗಿತ್ತು. ಅದಾದ ನಂತರ ಇಬ್ಬರೂ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ಬ್ಯೂಟಿಪಾರ್ಲರ್ಗೆ ಹೋಗಲು ಹಣ ಕೊಡುತ್ತಿಲ್ಲ ಎಂಬ ಕಾರಣಕ್ಕೆ ಪತ್ನಿ ವಿಚ್ಛೇದನ ಕೇಳಿದ ಅಚ್ಚರಿಯ ಘಟನೆಯೊಂದು ಇಲ್ಲಿ ನಡೆದಿದೆ. ಅಲಿಗಢದ ಸಿವಿಲ್ ಲೈನ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.ದಂಪತಿಗೆ ಮಕ್ಕಳಿಲ್ಲ. ಇದೀಗ ಖರ್ಚಿಗಾಗಿ ಪತ್ನಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾಳೆ. ಪತಿ ಮೇಕಪ್ ಮತ್ತು ಇತರ ಮನೆಯ ಖರ್ಚಿಗೆ ಹಣ ನೀಡುವುದಿಲ್ಲ ಎಂದು ಪತ್ನಿ ಆರೋಪಿಸಿದ್ದಾರೆ. ಗಂಡ ಮತ್ತು ಹೆಂಡತಿ ಒಟ್ಟಿಗೆ ವಾಸಿಸಲು ಸಿದ್ಧರಿಲ್ಲ. ಇಬ್ಬರೂ 2 ವರ್ಷಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ.ವಿಚ್ಛೇದನ ಕೋರಿ ಪ್ರಥಮ ಎಡಿಜೆ ಕೌಟುಂಬಿಕ ನ್ಯಾಯಾಲಯದಲ್ಲಿ ಪತ್ನಿ ಅರ್ಜಿ ಸಲ್ಲಿಸಿದ್ದಾರೆ. ಇಬ್ಬರ ಮನವೊಲಿಸಲು ನ್ಯಾಯಾಲಯದ ಸಲಹೆಗಾರರು ಪ್ರಯತ್ನಿಸುತ್ತಿದ್ದರೂ ಹೆಂಡತಿ ತನ್ನ ಪತಿಯೊಂದಿಗೆ ವಾಸಿಸಲು ಸಿದ್ಧವಾಗಿಲ್ಲ. ಈಗ ಇಬ್ಬರ ಕೌನ್ಸೆಲಿಂಗ್ ಜನವರಿ ತಿಂಗಳಲ್ಲಿ ನಡೆಯಲಿದೆ ಎಂದು ಹೇಳಿದರು.…
ಕಾಂಗ್ರೆಸ್ ನಲ್ಲಿ ಸಿಎಂ ಅಭ್ಯರ್ಥಿ ಸ್ಥಾನಕ್ಕೆ ಮಾಜಿ ಸಿಎಂ ಸಿದ‍್ಧರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಡುವೆ ಪೈಪೋಟಿ ಇದೆ. ಈ ನಡುವೆ ಸಿದ್ಧರಾಮಯ್ಯ ಹೋದಲೆಲ್ಲಾ ಅವರ ಅಭಿಮಾನಿಗಳು ಸಿದ್ಧರಾಮಯ್ಯ ಮುಂದಿನ ಸಿಎಂ ಎಂಬ ಘೋಷಣೆ ಕೂಗುವುದು ಸಾಮಾನ್ಯವಾಗಿಬಿಟ್ಟಿದೆ. ಈ ಮಧ್ಯೆ ಮತ್ತೆ ಸಿದ್ದರಾಮಯ್ಯ ಮುಂದಿನ ಸಿಎಂ ಎಂಬ ಕೂಗು ಮೊಳಗಿದೆ. ಧಾರವಾಡ ಜಿಲ್ಲೆ ಕುಂದಗೋಳ ತಾಲ್ಲೂಕಿನ ಸಂಶಿ ಗ್ರಾಮದಲ್ಲಿ ಸಿದ‍್ಧರಾಮಯ್ಯ ಅಭಿಮಾನಿಗಳು ಈ ಘೋಷಣೆಯನ್ನ ಕೂಗಿದ್ದಾರೆ. ಸಂಶಿ ಗ್ರಾಮದಲ್ಲಿ ಕನಕ ಜಯಂತಿ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಭಾಗಿಯಾಗಿದ್ದರು. ಕಾರ್ಯಕ್ರಮಕ್ಕೂ ಮುನ್ನ ಸಿದ್ಧರಾಮಯ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ಗ್ರಾಮದ ಕರಿಸಿದ್ದೇಶ್ವರ ದೇಗಲದಲ್ಲಿ ಪೂಜೆ ಸಲ್ಲಿಸಿದ್ದರು. ಈ ವೇಳೆ ಸಿದ್ದರಾಮಯ್ಯ ಮುಂದಿನ ಸಿಎಂ ಎಂದು ಅಭಿಮಾನಿಗಳು ಘೋಷಣೆ ಕೂಗಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು;ರಾಜ್ಯದಲ್ಲಿ ಮತ್ತೆ ಕೊರೊನಾ ಭೀತಿ ಹೆಚ್ಚಳವಾಗಿದ್ದು, ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬಿಎಂಟಿಸಿ ಮತ್ತು ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ಪ್ರಯಾಣಿಕರು, ಚಾಲಕ, ಕಂಡಕ್ಟರ್ ಮಾಸ್ಕ್ ಬಳಸುವುದು ಕಡ್ಡಾಯ ಮಾಡಿ ಎಂದು ಇಲಾಖೆ ಆದೇಶ ಹೊರಡಿಸಿದೆ. ಕೊರೋನಾ ರೂಪಾಂತರಿ ತಳಿ BF.7 ಆತಂಕ ಹಿನ್ನೆಲೆಯಲ್ಲಿ ಬಿಎಂಟಿಸಿ, ಕೆಎಸ್ ಆರ್ ಟಿಸಿ ಬಸ್ಗಳ ಕಂಡಕ್ಟರ್, ಡ್ರೈವರ್, ಪ್ರಯಾಣಿಕರಿಗೂ ಮಾಸ್ಕ್ ಕಡ್ಡಾಯ ಮಾಡಿದೆ. ಈ ಸಂಬಂಧ ಶೀಘ್ರವೇ ಬಿಎಂಟಿಸಿ ಗೈಡ್ಲೈನ್ಸ್ ಬಿಡುಗಡೆ ಮಾಡಲಿದೆ. ಒಂದು ವೇಳೆ ಮಾಸ್ಕ್ ಹಾಕಿಲ್ಲ ಅಂದರೆ ಬಸ್ ಗೆ ಹೋಗಲು ಅವಕಾಶ ನೀಡಲ್ಲ ಇಂದಿನಿಂದ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ ಎಂದು ಸಾರಿಗೆ ಇಲಾಖೆ ಸೂಚನೆ ನೀಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಶಾಸಕ ಸತೀಶ್ ಜಾರಕಿಹೊಳಿಯವರು ಮರಾಠಾ ಮತ್ತು ಹಿಂದೂ ಸಮಾಜದ ವಿರೋಧಿ ಅಲ್ಲ. ಆದರೆ ಬಿಜೆಪಿ, ಆರ್‌ಎಸ್‌ಎಸ್‌ನವರು ಶಾಸಕ ಸತೀಶ್ ಜಾರಕಿಹೊಳಿ ವಿರುದ್ಧ ಷ್ಯಡ್ಯಂತ್ರ ರೂಪಿಸಿ, ದ್ವೇಷ ರಾಜಕಾರಣ ಮಾಡುತ್ತಿದ್ದು, ಇದನ್ನು ಮರಾಠಾ ಸಮಾಜದವರು ಸಹಿಸಲ್ಲ ಎಂದು ಮರಾಠಾ ಸಮಾಜದ ನೂರಾರು ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಸತೀಶ್ ಜಾರಕಿಹೊಳಿಯವರು ಸದಾ ಮರಾಠಾ ಸಮುದಾಯದ ಸೇರಿದಂತೆ ಎಲ್ಲಾ ಸಮಾಜದ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದಾರೆ. ಅವರು ಯಾವುದೇ ಜಾತಿಗೆ ಇದುವರೆಗೂ ಅನ್ಯಾಯ ಮಾಡಿಲ್ಲ. ಆದರೆ ಶಾಸಕ ಸತೀಶ್ ಜಾರಕಿಹೊಳಿ ಅವರು ಮರಾಠಾ ಸಮುದಾಯದ ವಿರೋಧಿ ಇದ್ದಾರೇ ಎಂದು ಯಮಕನಮರಡಿ ಕ್ಷೇತ್ರದಲ್ಲಿ ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆ ನಮ್ಮ ವಿರೋಧವಿದೆ ಎಂದರು. ಕೆಲವು ದಿನಗಳ ಹಿಂದೆ ನಿಪ್ಪಾಣಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಸತೀಶ್ ಜಾರಕಿಹೊಳಿ ಶಿವಾಜಿ ಇತಿಹಾಸದ ಬಗ್ಗೆಯೂ ಮಾತನಾಡಿದ್ದರು. ಆದರೆ ಶಾಸಕ ಸತೀಶ್ ಜಾರಕಿಹೊಳಿ ಅವರು ಈ ನಾಡಿನ ಜನತೆಗೆ ಇತಿಹಾಸ ತಿಳಿಸುವ…
ಕೊರೋನಾ ಭೀತಿ ಶುರುವಾಗಿರುವ ಹಿನ್ನೆಲೆ ಪರಿಸ್ಥಿತಿ ನೋಡಿಕೊಂಡು ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ ಮಾಡುತ್ತೇವೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಈ ಕುರಿತು ಇಂದು ಮಾತನಾಡಿದ ಸಚಿವ ಸುಧಾಕರ್, ಮಾಸ್ಕ್ ಕಡ್ಡಾಯ ಮಾಡಿಲ್ಲ. ಸಲಹೆ ನೀಡಿದ್ದೇವೆ. ಬೂಸ್ಟರ್ ಡೋಸ್ ಸ್ವಲ್ಪ ವೇಸ್ಟ್ ಆಗಿದೆ. ಬೂಸ್ಟರ್ ಡೋಸ್ ಬಗ್ಗೆ ಜನ ಆಸಕ್ತಿ ವಹಿಸಿಲ್ಲ. ಮೊದಲ ಎರಡು ಡೋಸ್ ಗೆ ಇದ್ದ ಆಸಕ್ತಿ ಈಗ ಕಡಿಮೆಯಾಗಿದೆ. ಜನ ಕೊರೋನಾ ಹೋಗಿದೆ ಎಂಬ ಮನಸ್ಥಿತಿಯಲ್ಲಿದ್ದಾರೆ ಎಂದರು. ಪರಿಸ್ಥಿತಿ ನೋಡಿಕೊಂಡು ಮಾಸ್ಕ್ ಕಡ್ಡಾಯ ಮಾಡುತ್ತೇವೆ. ಪ್ರಧಾನಿ ಮೋದಿಗೆ ಬೆಲೆಕೊಟ್ಟು ಮಾಸ್ಕ್ ಧರಿಸಿ ಎಂದು ಸಚಿವ ಸುಧಾಕರ್ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮೈಸೂರಿನಲ್ಲಿ ವಾಹನ ತಪಾಸಣೆ ವೇಳೆ ಪೊಲೀಸರು ಮತ್ತೆ ಎಡವಟ್ಟು ಮಾಡಿದ್ದು ವಾಹನ ತಪಾಸಣೆ ವೇಳೆ ವೃದ್ಧ ಬೈಕ್ ನಿಂದ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ಇಂದು ನಡೆದಿದೆ. ಚಾಮರಾಜಪುರಂ ನ ನಿವಾಸಿ ಬಸವರಾಜು ಬೈಕ್ ನಿಂದ ಬಿದ್ದು ಗಾಯಗೊಂಡ ವೃದ್ಧ. ಮೈಸೂರಿನ ಆರ್ ಟಿಓ ವೃತ್ತದಲ್ಲಿ ಕೆ ಆರ್ ಟ್ರಾಫಿಕ್ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದರು . ಹೆಲ್ಮೆಟ್ ಹಾಕದ ವೃದ್ಧನಿಗೆ ಬ್ಯಾರಿಕೇಡ್ ಅಡ್ಡಗಟ್ಟಿ ನಿಲ್ಲಿಸಲು ಟ್ರಾಫಿಕ್ ಪೊಲೀಸರು ಯತ್ನಿಸಿದ್ದು, ತಪ್ಪಿಸಿಕೊಳ್ಳುವ ಯತ್ನದಲ್ಲಿ ಬೈಕ್ ನಿಂದ ಬಿದ್ದು ವೃದ್ಧನಿಗೆ ಗಂಭೀರ ಗಾಯಗಳಾಗಿದೆ. ಮರದ ಹಿಂದೆ ಅವಿತು ಹಿಡಿಯಲು ಪೊಲೀಸರು ಯತ್ನಿಸಿದ ಪರಿಣಾಮ ಈ ಘಟನೆಗೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ಸಂಚಾರಿ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಪ್ರತಿದಿನ ವಾಹನ ತಪಾಸಣೆ ಹೆಸರಿನಲ್ಲಿ ವಾಹನ ಸವಾರರಗೆ ಪೋಲಿಸರು ಕಿರಿಕರಿ ನೀಡುತ್ತಿದ್ದು ಈ ಹಿನ್ನೆಲೆಯಲ್ಲಿ ಪೊಲೀಸರನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡರು. ಈ ವೇಳೆ ಕೆಲಕಾಲ ಸಾರ್ವಜನಿಕರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ…
ತಮಿಳುನಾಡು : ಸೆಲ್ವಂ ಪಲ್ಲಡಂ ರಾಯರಪಾಳ್ಯಂ ಪ್ರದೇಶದವರು. ಪಲ್ಲಡಂ ಸಮೀಪದ ಗರುಡಮುತ್ತೂರಿನಲ್ಲಿ ಇವರ ಒಡೆತನದ ತೆಂಗಿನಕಾಯಿ ತಯಾರಿಕಾ ಕಾರ್ಖಾನೆ ಕಾರ್ಯನಿರ್ವಹಿಸುತ್ತಿದೆ. 50ಕ್ಕೂ ಹೆಚ್ಚು ಉತ್ತರ ರಾಜ್ಯ ಹಾಗೂ ಸ್ಥಳೀಯ ಕಾರ್ಮಿಕರು ಇದರಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ವೇಳೆ ತೆಂಗಿನ ನಾರುಗಳನ್ನು ಬೇರ್ಪಡಿಸುವ ಕಾರ್ಯದಲ್ಲಿ ರೋಟವೇಟರ್ ಯಂತ್ರದ ಮೂಲಕ ಕೆಲಸ ಮಾಡಲಾಗುತ್ತಿತ್ತು. ಅಷ್ಟರಲ್ಲಿ ಅಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ಮೌಲ್ಯದ ತೆಂಗಿನ ನಾರುಗಳು ಬೆಂಕಿಗೆ ಆಹುತಿಯಾಗಿವೆ. ಸ್ಥಾವರದ ವ್ಯವಸ್ಥಾಪಕ ಸುರೇಶ್ ನೀಡಿದ ಮಾಹಿತಿ ಮೇರೆಗೆ ಪಲ್ಲಡಂ ಅಗ್ನಿಶಾಮಕ ದಳದವರು ಸ್ಥಳಕ್ಕಾಗಮಿಸಿ 5ಕ್ಕೂ ಹೆಚ್ಚು ನೀರಿನ ಲಾರಿಗಳ ಮೂಲಕ ನೀರು ಸಿಂಪಡಿಸಿ ಬೆಂಕಿ ನಂದಿಸಿದ್ದಾರೆ. ಗಾಳಿಯ ರಭಸಕ್ಕೆ ಲಕ್ಷಾಂತರ ಮೌಲ್ಯದ ತೆಂಗಿನ ನಾರುಗಳು ಬೆಂಕಿಗೆ ಆಹುತಿಯಾಗಿ ಹಾನಿಯಾಗಿದೆ ಎನ್ನಲಾಗಿದೆ. ತೆಂಗಿನಕಾಯಿ ಒಣಗಿಸಲು ಬಳಸುವ ಯಂತ್ರದಿಂದ ಕಿಡಿ ಹೊತ್ತಿಸಿ ಹಠಾತ್ ಬೆಂಕಿ ಸಂಭವಿಸಿದೆಯೇ ಅಥವಾ ಇನ್ನಾವುದೇ ಕಾರಣಕ್ಕಾಗಿ ಕಾಮನಾಯಕನಪಾಳ್ಯಂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…
ಬೆಳಗಾವಿ: ಸುವರ್ಣಸೌಧದಲ್ಲಿ ಪಂಚಮಸಾಲಿ 2ಎ ಮೀಸಲಾತಿ ಒತ್ತಾಯಿಸಿ ಸುವರ್ಣ ವಿಧಾನಸೌಧದ ಎದುರು ಪಂಚಮಸಾಲಿ ಸಮಾಜದಿಂದ ವಿರಾಟ್ ಸಮಾವೇಶ ನಡೆಯುತ್ತಿದ್ದ ವೇಳೆ ಕಳ್ಳರು ಸುಮಾರು 25 ಮೊಬೈಲ್ ಫೋನ್ ಗಳನ್ನು ಕಳ್ಳತನ ಮಾಡಿದ್ದಾರೆ. ಸಮಾವೇಶದಲ್ಲಿ ಬಂದಿದ್ದವರ 25 ಮೊಬೈಲ್ ಫೋನ್ ಗಳನ್ನು ಕಳ್ಳರು ಎಗರಿಸಿದ್ದಾರೆ. ಮೊಬೈಲ್ ವಾಪಸ್ ನೀಡುವಂತೆ ಆಯೋಜಕರು ಮನವಿ ಮಾಡುತ್ತಿರುವುದು ಕಂಡು ಬಂದಿತ್ತು. ಆದರೆ ಕಳ್ಳರ ಪತ್ತೆಯೇ ಇಲ್ಲದಂತಾಗಿದೆ. 2 ಲಕ್ಷಕ್ಕೂ ಹೆಚ್ಚು ಜನ ಭಾಗವಹಿಸಿರುವ ವೇಳೆ ಗುಂಪಿನೊಳಗೆ ನುಗ್ಗಿದ ಕಳ್ಳರು ಕೈಚಳಕ ತೋರಿದ್ದು, ಪ್ರತಿಭಟನಾಕಾರರ ಮೊಬೈಲ್ ಗಳನ್ನು ಕಳವು ಮಾಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ನಿವೃತ್ತ ನ್ಯಾಯಾಧೀಶ ಎಜೆ ಸದಾಶಿವ ಆಯೋಗದ ವರದಿ ಜಾರಿಗಾಗಿ ಸಾಮಾಜಿಕ ನ್ಯಾಯ ಸಂಕಲ್ಪ ರಾಲಿಯನ್ನು ಹಮ್ಮಿಕೊಳ್ಳಲಾಯಿತ್ತು. ಚಲೋ ಕರ್ನಾಟಕ ದಲಿತ ಸಂಘರ್ಷ ಸಮಿತಿ ಮತ್ತು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಸಂಘಟನೆ ವತಿಯಿಂದ ಬೆಳಗಾವಿ ಚಲೋ ನಡೆಸಲಾಯಿತು. ರಾಣಿ ಚೆನ್ನಮ್ಮ ವೃತ್ತದಿಂದ ಸುವರ್ಣಸೌಧದ ವರೆಗೆ ಪರಿಶಿಷ್ಟರ ಒಳ ಮೀಸಲಾತಿ ಜಾರಿಗಾಗಿ ಸಾಮಾಜಿಕ ನ್ಯಾಯ ಸಂಕಲ್ಪ ರಾಲಿಯನ್ನು ರಾಜ್ಯಾಧ್ಯಕ್ಷರಾದ ಡಾ. ಎನ್ ಮೂರ್ತಿ ಮತ್ತು ಜಿಲ್ಲಾಧ್ಯಕ್ಷರಾದ ಶಿವಾನಂದ ಮಾದರ ಮತ್ತು ಸಂಚಾಲಕರಾದ ಸಿದ್ದರಾಮ ಹೊಸಮನಿ ಮತ್ತು ಬೈಲಹೊಂಗಲ ತಾಲೂಕ ಅಧ್ಯಕ್ಷರಾದ ಮಹೇಶ್ವರಿ ಅವರ ನೇತೃತ್ವದಲ್ಲಿ ನಡೆಯಿತು. ರಾಜ್ಯಾಧ್ಯಕ್ಷ ಎನ್ ಮೂರ್ತಿಯವರು ರಾಲಿ ಮುಖ್ಯ ಕಾರಣವನ್ನು ಉದ್ದೇಶದ ಬಗ್ಗೆ ಮಾತನಾಡಿ, 101 ಪರಿಶಿಷ್ಟ ಜಾತಿಗಳಿಗೆ ನೀಡುತ್ತಿರುವ ಮೀಸಲಾತಿ ಜಾತಿಗಳ ಮಧ್ಯೆ ಸಮನಾಗಿ ಹಂಚಿಕೆ ಆಗಿಲ್ಲ.ಆದ್ದರಿಂದ ಪರಿಶಿಷ್ಟ ಜಾತಿಗಳ ಜನರಲ್ಲಿ ಅಸಮಾಧಾನ ಉಂಟಾಗಿ ಕಳೆದ 30 ವರ್ಷಗಳಿಂದ ಪರಿಶಿಷ್ಟ ಮೀಸಲಾತಿಗಾಗಿ ಒತ್ತಾಯಿಸಿ ತೀವ್ರ ಹೋರಾಟ ನಡೆಯುತ್ತಿದ್ದರೂ ರಾಜ್ಯ ಸರ್ಕಾರ ಚಳುವಳಿಗಾರರೊಂದಿಗೆ ಚರ್ಚಿಸಿ ಮಾತುಕತೆ ನಡೆಸಿಲ್ಲ ಎಂದು…