Author: admin

ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಸೆಪ್ಟೆಂಬರ್ 12 ರವರೆಗೆ ರಾಜ್ಯದ ಕೆಲವು ಭಾಗಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯು ವಾರಾಂತ್ಯದಲ್ಲಿ ಕರಾವಳಿ ಮತ್ತು ಮಹಾರಾಷ್ಟ್ರದ ಮಧ್ಯ ಭಾಗಗಳಲ್ಲಿ ತೀವ್ರ ಮಳೆಯಾಗುವ ಮುನ್ಸೂಚನೆ ನೀಡಿದೆ. ರಾಯಗಡ, ರತ್ನಗಿರಿ ಮತ್ತು ಸಿಂಧುದುರ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕೊಂಕಣ-ಗೋವಾ ಮತ್ತು ಮಧ್ಯ ಮಹಾರಾಷ್ಟ್ರದಲ್ಲಿ ಮುಂದಿನ ನಾಲ್ಕು ದಿನಗಳವರೆಗೆ (ಸೆಪ್ಟೆಂಬರ್ 09-12) ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಅದೇ ರೀತಿ ಮುಂಬೈ, ಪುಣೆ, ಸತಾರಾ, ಕೊಲ್ಲಾಪುರ, ನಾಸಿಕ್, ವಿದರ್ಭ ಮತ್ತು ಮರಾಠವಾಡ ಪ್ರದೇಶಗಳಲ್ಲಿ ಮಳೆಯ ಬಗ್ಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಗುರುವಾರ ಸಂಜೆ ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಅಧಿಕ ಮಳೆ ಸುರಿದಿದೆ. ಜಲಾವೃತಗೊಂಡ ರಸ್ತೆಗಳಿಂದಾಗಿ ಸಂಚಾರದಲ್ಲಿ ಅಡಚಣೆ ಉಂಟಾಗಿದೆ. ಭಾರಿ ಮಳೆಯಿಂದಾಗಿ ನಾಸಿಕ್‌ನ ಗೋದಾವರಿ ನದಿಯ ದಡದಲ್ಲಿರುವ ಅನೇಕ ದೇವಾಲಯಗಳು ಜಲಾವೃತಗೊಂಡಿವೆ. ಜೊತೆಗೆ ರಾಜ್ಯದಲ್ಲಿ ಪ್ರವಾಹದಂತಹ…

Read More

ಗಣೇಶ ಗಣೇಶ ಮೌರ್ಯ ಮುಂದಿನ ವರ್ಷ ಬೇಗನೆ ಬಾ ಎಂಬ ಜಯ ಘೋಷದೊಂದಿಗೆ ಬೆಳಗಾವಿ ಜನತೆ ಬಲು ಅದ್ಧೂರಿಯಿಂದ ವಿಘ್ನೇಶ್ವರನಿಗೆ ವಿದಾಯ ಹೇಳಿದರು. ಎರಡು ವರ್ಷಗಳ ನಂತರ ಬೆಳಗಾವಿ ನಗರವನ್ನೇ ಗಣೇಶ ಉತ್ಸವ ವರ್ಣ ರಂಜಿತ ಇತಿಹಾಸವನ್ನು ಪುನರಗೊಳಿಸಿತ್ತು. ಹತ್ತು ದಿನಗಳ ಕಾಲ ಅದ್ಧೂರಿಯಿಂದ ಆಚರಣೆ ಮಾಡಲಾಯಿತು. ಗಣೇಶ್ ಉತ್ಸವವನ್ನು ಅತಿ ಉಲ್ಲಾಸದಿಂದ ಬೆಳಗಾವಿ ಜನತೆ ಆಚರಣೆ ಮಾಡಿದರು. ಗಣಪತಿ ವಿಸರ್ಜನೆ ಮೆರವಣಿಗೆ ಮೂಲಕ ಬೆಳಗಾವಿಯಲ್ಲಿ ಹಬ್ಬದ ವಾತಾವರಣ ನಿರ್ಮಾಣ ಮಾಡಿದರು. ಬೆಳಗಾವಿಯಲ್ಲಿ ಕಳೆದು ಹೋದ ಗತವೈಭವ ಮತ್ತೆ ಗಣೇಶ್ ವಿಸರ್ಜನೆ ಮೆರವಣಿಗೆಯಲ್ಲಿ ಕಂಡು ಬಂತು. ಇನ್ನು ರಾಜಕೀಯ ಪಕ್ಷಗಳು ಗಣೇಶ ಉತ್ಸವದಲ್ಲಿಯೂ ತಮ್ಮ ರಾಜಕೀಯ ಶಕ್ತಿ ಪ್ರದರ್ಶನದಲ್ಲಿ ತೊಡಗಿರುವುದು ಸಾಮಾನ್ಯವಾಗಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ದೊಡ್ಡಬಳ್ಳಾಪುರದಲ್ಲಿಂದು ಬಿಜೆಪಿ ಬೃಹತ್ ಜನಸ್ಪಂದನಾ ಸಮಾವೇಶ ನಡೆಯಲಿದ್ದು, ಸರ್ಕಾರದ ಮೂರು ವರ್ಷದ ಸಾಧನೆಯೊಂದಿಗೆ ಮುಂಬರುವ ವಿಧಾನಸಭಾ ಚುನಾವಣೆಗೆ ಶಕ್ತಿ ಪ್ರದರ್ಶಕ್ಕೆ ವೇದಿಕೆ ಸಜ್ಜಾಗಿದೆ. 40 ಎಕರೆ ಜಾಗದಲ್ಲಿ ಜನಸ್ಪಂದನಾ ಕಾರ್ಯಕ್ರಮಕ್ಕೆ ವ್ಯವಸ್ಥೆ ಮಾಡಲಾಗಿದ್ದು, 3 ಲಕ್ಷ ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಸಮಾವೇಶಕ್ಕೆ ತೆರಳಲು ಬಿಜೆಪಿ ವಿಶೇಷ ಬಸ್ ವ್ಯವಸ್ಥೆಯನ್ನು ಮಾಡಿದೆ. ದೊಡ್ಡಬಳ್ಳಾಪುರದಲ್ಲಿ ಆಯೋಜಿಸಿರುವ ಬಿಜೆಪಿ ಜನಸ್ಪಂದನಾ ಸಮಾವೇಶಕ್ಕೆ ಬೆಂಗಳೂರು ಗ್ರಾಮಾಂತರ ಎಸ್ ಪಿ ಬಾಲದಂಡಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ನಾಲ್ಕು ಜಿಲ್ಲೆಗಳ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಇತ್ತ ಕಾಂಗ್ರೆಸ್ ಸಮಾವೇಶದ ವಿರುದ್ಧ ಕಿಡಿಕಾರಿದ್ದು, ಇದು ಬಿಜೆಪಿ ಭ್ರಷ್ಟೋತ್ಸವ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬಾಗಲಕೋಟೆ: ಬೈಕ್ ಮೇಲೆ ಮರ ಬಿದ್ದು ಮಹಿಳೆ ಸಾವು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಜಮಖಂಡಿ ನಗರದಲ್ಲಿ ನಡೆದಿದೆ. ರುಕ್ಮಿಣಿ ಶ್ರೀಶೈಲ್ ಮರನೂರ (40) ಮೃತ ದುರ್ದೈವಿ. ಬಾಗಲಕೋಟೆಯ ಜಿಲ್ಲೆಯ ಕುಳಲಿ ಗ್ರಾಮದ ರುಕ್ಮಿಣಿ ಮರನೂರ ತಮ್ಮ ಪತಿ ಜೊತೆ ಬೈಕ್​ನಲ್ಲಿ ತೆರಳುತ್ತಿದ್ದರು. ಈ ವೇಳೆ ಜೋರಾಗಿ ಬಿಸಿದ ಗಾಳಿಯಿಂದ ಆಲದ ಮರದ ಕೊಂಬೆ ಅವರ ಮೇಲೆ ಬಿದ್ದಿದೆ. ಬೈಕ್​ನಲ್ಲಿ ಹಿಂಬದಿ ಕುಳಿತಿದ್ದ ಮಹಿಳೆ ರುಕ್ಮಿಣಿ ಮೇಲೆ ಮರದ ರಂಬೆ ಬಿದ್ದಿದ್ದು, ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಚಿತ್ರದುರ್ಗ: ಕುಷ್ಟರೋಗ ಪ್ರಕರಣ ನಿವಾರಣೆಯ ಕಾರ್ಯಕ್ರಮದ ಅಡಿಯಲ್ಲಿ  ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಆರೋಗ್ಯ ಕುಟುಂಬ ಕಲ್ಯಾಣ ಸೇವೆಗಳ ಉಪನಿರ್ದೇಶಕಿ ಡಾಕ್ಟರ್ ರೇಖಾ ಎಸ್.  ಆರೋಗ್ಯ ಕಾರ್ಯಕರ್ತರು ಕುಷ್ಠರೋಗ ಪತ್ತೆ ಕಾರ್ಯ ಮಾಡಿದ್ದಾರೆಯೇ ಎಂಬ ಬಗ್ಗೆ ಪರಿಶೀಲನೆ ನಡೆಸಿದರು. ಗೋನೂರು ಗ್ರಾಮದ ಮನೆ ಮನೆಗೆ ತೆರಳಿ ಆರೋಗ್ಯ ಕಾರ್ಯಕರ್ತರು ಆಗಮಿಸಿ  ಕುಷ್ಟರೋಗದ ಬಗ್ಗೆ ಮಾಹಿತಿ ನೀಡಿದ್ದಾರೆಯೇ ಎಂದು ರೇಖಾ ಪರಿಶೀಲನೆ ನಡೆಸಿದರು. 2025ರ ವೇಳೆಗೆ ಕುಷ್ಟರೋಗ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಪ್ರತಿ ವರ್ಷವೂ  ನಿಯಂತ್ರಣಕ್ಕೆ ತರುವ ಕಾರ್ಯವು ನಿರಂತರವಾಗಿ ನಡೆಯುತ್ತಿದ್ದು, 18 ದಿನಗಳ ಕಾಲ ಗ್ರಾಮದ ಪ್ರತಿ ಮನೆಗಳಿಗೆ ತೆರಳಿ ಕುಷ್ಟರೋಗ ಪತ್ತೆ ಹಚ್ಚುವ ಕಾರ್ಯ ನಡೆದಿದೆ. ಪರಿಶೀಲನೆ ಕಾರ್ಯಕ್ಕೆ ಅಧಿಕಾರಿಗಳು ಆರೋಗ್ಯ ಕಾರ್ಯಕರ್ತರು  ಆಶಾ ಕಾರ್ಯಕರ್ತರು ಅಂಗನವಾಡಿ ಕಾರ್ಯಕರ್ತರು ಸಾಥ್ ನೀಡಿದರು. ಈ ವೇಳೆ  ಡಿ.ಎಲ್.ಒ.  ಡಾ.ರೂಪ ಆರ್. ಡಿ. ಎನ್. ಟಿ.,  ತಂಡದ ಎಂ. ಚಂದ್ರಪ್ಪ ವೈ. ತಿಪ್ಪೇಶ್,  ರಾಜೇಂದ್ರ ಪ್ರಸಾದ್,  ಕೆ. ಪಿ. ಎಂ. ಡಬ್ಲ್ಯೂ …

Read More

ಮಧುಗಿರಿ: ಪಟ್ಟಣದ ಶ್ರೀ ಮಲ್ಲೇಶ್ವರ ಸ್ವಾಮಿ ಹಾಗೂ ವೆಂಕಟರಮಣ ಸ್ವಾಮಿ ದೇವಸ್ಥಾನದ ಪಕ್ಕದ ಬಾಲ ಗಂಗಾಧರನಾಥ ತಿಲಕ್ ಮಂಟಪದಲ್ಲಿ ಶ್ರೀ ವಿದ್ಯಾ ಗಣಪತಿ ಮಹಾಮಂಡಳಿ ಮಧುಗಿರಿ ಇವರ ವತಿಯಿಂದ ಗಣೇಶೋತ್ಸವ ನಡೆಯಿತು. ಸುಮಾರು 9 ದಿನಗಳ ಕಾಲ ವಿಜೃಂಭಣೆಯಿಂದ ನಡೆದ ಗಣೇಶೋತ್ಸವದಲ್ಲಿ ಪ್ರತಿದಿನವೂ ಕೂಡ ಒಂದೊಂದು ಕಾರ್ಯಕ್ರಮವನ್ನು ಏರ್ಪಡಿಸಿದ್ದು, ಕೊನೆ ದಿನ ವಿಶೇಷ ಮೆರವಣಿಗೆಯೊಂದಿಗೆ ಶ್ರೀ ವಿದ್ಯ ಗಣಪತಿ ಮಹಾಮಂಡಳಿ ಸಮಿತಿ ಅಧ್ಯಕ್ಷರು ಉಪಾಧ್ಯಕ್ಷರು ಎಲ್ಲಾ ಪದಾಧಿಕಾರಿಗಳು ನಗರದ ಯುವಕರು ವಿನಾಯಕನನ್ನು ಪೂಜಿಸಿ ನಂತರ, ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಧಿಕಾರಿ ರಾಹುಲ್ ಕುಮಾರ್ ರವರಿಗೆ ಮಧುಗಿರಿ ನಗರದ ಜನತೆ ಹಾಗೂ ಪಕ್ಕದೂರಿನ ಗ್ರಾಮಸ್ಥರು ಸ್ವಾಗತಿಸಿ ವಿಶೇಷವಾಗಿ ಸನ್ಮಾನಿಸಲಾಯಿತು. ಅದ್ದೂರಿ ಮೆರವಣಿಗೆಯಲ್ಲಿ ನಾಸಿಕ್ ಡೋಲು, ಬೊಂಬೆ ಕುಣಿತ ಸದ್ದಿಗೆ ಮಕ್ಕಳು,ಯುವಕರು ಹಾಗೂ ಯುವತಿಯರು ಸಂಭ್ರಮದಿಂದ ಕುಣಿದು ಕುಪ್ಪಳಿಸಿದರು. ತದನಂತರ ಒಕ್ಕಲಿಗರ ಭವನ ನೀರಿನ ತಟ್ಟಿಯಲ್ಲಿ ಗಣೇಶನನ್ನು ಶ್ರದ್ದಾ ಭಕ್ತಿಯಿಂದ ವಿಸರ್ಜನೆ…

Read More

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯದ್ಯಂತ ಭೀಮ ಯಾತ್ರೆ ಬಳಗದಿಂದ ಸದಸ್ಯತ್ವಕ್ಕೆ ಚಾಲನೆ ನೀಡಲಾಯಿತು. ತಾಲೂಕಿನ ಹಂಚಿಬರಟ್ಟಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭೀಮ ಯಾತ್ರೆ ಬಳಗ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಭೀಮ ಯಾತ್ರೆ ಬಳಗದ ಸದಸ್ಯ ಪ್ರಕಾಶ್, ಭೀಮ ಯಾತ್ರೆ ಒಂದು ಸಮಾನತೆಯನ್ನು ಸಾರುತ್ತದೆ ಮತ್ತು ಯಾವುದೇ ರಾಜಕೀಯಕ್ಕೆ ಕಿವಿಕೊಡದೆ ಬಾಬಾ ಸಾಹೇಬರ ಸಮಾನತೆ ಸಂದೇಶಕ್ಕೆ ನಾವು ಬದ್ಧರಾಗಬೇಕೆಂದರು. ವಕೀಲ ರವಿ ಮಾತನಾಡಿ, ಭೀಮ ಯಾತ್ರೆ ಬಳಗ ಕೇವಲ ಒಂದು ಸಮಾಜಕ್ಕೆ ಸೀಮಿತವಲ್ಲ ಎಲ್ಲ ಜನಾಂಗದ ಒಗ್ಗಟ್ಟಿಗೆ ಸಾಕ್ಷಿಯಾಗಿದೆ. ಈಗಿನ ಸಂದರ್ಭದಲ್ಲಿ ತಾಲೂಕಿನ ಸದಸ್ಯತ್ವ ನಡೆಯುತ್ತಿದೆ ಎಲ್ಲರೂ ಸದಸ್ಯ ಪಡೆದುಕೊಳ್ಳಿ ಎಂದು ಮನವಿ ಮಾಡಿದರು. ಇದೆ ಸಂದರ್ಭದಲ್ಲಿ ಪ್ರಸನ್ನ, ರಾಘವೇಂದ್ರ, ಪ್ರಕಾಶ್, ಶ್ರೀನಿವಾಸ್, ಜಗದೀಶ್, ಕುಮಾರಸ್ವಾಮಿ ಶಿವಕುಮಾರ್ ಮೊದಲಾದವರಿದ್ದರು. ಕಾರ್ಯಕ್ರಮದಲ್ಲಿ ಭೀಮ ಯಾತ್ರೆಯ ಸದಸ್ಯರಾದ ಶರಣಪ್ಪ ಜಿ. ರವೀಂದ್ರ ಡಿ. ಕುಮಾರಸ್ವಾಮಿ ಮಂಜುನಾಥ ಎಸ್. ರಘು ಆರ್. ಪ್ರಕಾಶ್ ಜೆ. ಪ್ರಸನ್ನ ಕೃಷ್ಣಮೂರ್ತಿ ರುದ್ರಮುನಿ ಶಾಂತಕುಮಾರ್ ಕಣಮೇಶ್ ನರಹರಿ ಜಯಪ್ಪ…

Read More

ಸರಗೂರು: ತಾಲ್ಲೂಕಿನ ಬಿ.ಮಟಕೆರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲನಹಳ್ಳಿ ಗ್ರಾಮದಲ್ಲಿ ಅಕ್ರಂ ಪಾಷಾ ಎಂಬುವರ ಮನೆ ಆನೆಯೊಂದು ದಾಳಿ ನಡೆಸಿದ್ದು, ಬಾಗಿಲು ಮತ್ತು ಗೋಡೆಗೆ ಹಾನಿಯೆಸಗಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ. ಮೋಳೆಯೂರು (ಶೀಗೊಡಿ) ವಲಯ ಕಾಡಿನಿಂದ ಬಂದ ಸಾಕಾಣೆ ಅಕ್ರಂ ಪಾಷಾ ಅವರ ಮನೆಯ ಮೇಲೆ ದಾಳಿ ನಡೆಸಿದೆ. ಆನೆ ದಾಳಿ ನಡೆಸುತ್ತಿರುವ ಬಗ್ಗೆ ಅರಣ್ಯಾಧಿಕಾರಿಗಳಿಗೆ ಹಲವು ಬಾರಿ ಕರೆ ಮಾಡಿದರೂ ಸ್ಥಳಕ್ಕೆ ಆಗಮಿಸದೇ ನಿರ್ಲಕ್ಷ್ಯವಹಿಸಿದ್ದು, ಇದರಿಂದಾಗಿ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬೆಳಿಗ್ಗೆ ಘಟನೆ ನಡೆದಿದ್ದರೆ, ಅರಣ್ಯಾಧಿಕಾರಿಗಳು 11 ಗಂಟೆಯ ವೇಳೆಗೆ ಸ್ಥಳಕ್ಕೆ ಆಗಮಿಸಿದ್ದಾರೆ. ಈ ವೇಳೆ ಆಕ್ರೋಶಿತ ಜನರು ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆತ್ತಿಕೊಂಡರು. ಅಲ್ಲದೇ ನಷ್ಟಕ್ಕೊಳಗಾಗಿರುವ ಕುಟುಂಬಸ್ಥರಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಬಳಿಕ ಮಾತನಾಡಿದ ಅಧಿಕಾರಿ, ಇದು ಕಾಡಾನೆ ಅಲ್ಲ. ಇಂದು ಸಾಕಾಣೆ ಎಂದು ತಿಳಿಸಿದರು. ಮನೆಗೆ ಹಾನಿ ಮಾಡಿ, ಪದಾರ್ಥಗಳನ್ನು ನಾಶ ಮಾಡಿರುವ ಹಿನ್ನೆಲೆಯಲ್ಲಿ ನಮ್ಮ ಮೇಲಿನ ಅಧಿಕಾರಿಗಳಿಗೆ ಮಾಹಿತಿ ನೀಡಿ, ಪರಿಹಾರವನ್ನು ನೀಡುತ್ತೆವೆ…

Read More

ತುಮಕೂರು: ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಸಾರಿಗೆ ನೌಕರರು, ಮತ್ತು ಅನೇಕ ಅಂಬೇಡ್ಕರ್ ವಾದಿ ಸಂಘಟನೆಗಳು ಸೇರಿ ಸೆಪ್ಟಂಬರ್ 10ರಂದು ತುಮಕೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿ ಭೀಮೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಅಂದು ಸುಮಾರು 12 ಗಂಟೆಯ ವೇಳೆಗೆ ಟೌನ್ ಹಾಲ್ ನಿಂದ ತುಮಕೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದವರೆಗೆ ಮೆರವಣಿಗೆ ನಡೆಯಲಿದ್ದು, 2 ಗಂಟೆಗೆ ತುಮಕೂರು ಬಸ್ ನಿಲ್ದಾಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಜ್ಞಾನಪ್ರಕಾಶ ಸ್ವಾಮೀಜಿ ಅವರು ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯವಹಿಸಲಿದ್ದಾರೆ. ಶಾಸಕ ಜ್ಯೋತಿ ಗಣೇಶ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಚಲನ ಚಿತ್ರ ನಟ ಚೇತನ್ ಅಹಿಂಸಾ ಅವರು ಭಾಗವಹಿಸಲಿದ್ದಾರೆ. ಉಳಿದಂತೆ ಹಲವು ಸಂಘಟನೆಗಳ ಮುಖಂಡರು, ಚಿಂತಕರು, ಅಂಬೇಡ್ಕರ್ ವಾದಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಜನರಲ್ಲಿ ಧಾರ್ಮಿಕ ಭಾವನೆ ಬೆಳೆಸುವಲ್ಲಿ ಮತ್ತು ಮಹಿಳೆಯರನ್ನು ಸ್ವಾವಲಂಬಿಯಾಗಿಸುವಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಉಚಗಾಂವ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾಮೂಹಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ಹಾಗೂ ಒಕ್ಕೂಟಗಳ ಪದಗ್ರಹಣ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು, ಮಾತನಾಡಿದರು. ರಾಜರ್ಷಿ ಡಾ. ವೀರೇಂದ್ರ ಹೆಗ್ಗಡೆಯವರ ಹಾಗೂ ಮಾತೃಶ್ರೀ ಡಾ‌. ಹೇಮಾವತಿ ವೀ ಹೆಗ್ಗಡೆಯವರ ವ್ಯಕ್ತಿತ್ವ ಅತ್ಯಂತ ಎತ್ತರದ್ದು. ಅವರ ದೂರದೃಷ್ಟಿ ಮತ್ತು ವಿಶಾಲ ಮನೋಭಾವದಿಂದಾಗಿ ಸಮಾಜದಲ್ಲಿ ನೆಮ್ಮದಿಯ ವಾತಾವರಣ ನಿರ್ಮಾಣವಾಗುತ್ತಿದೆ. ಒಂದು ಸರಕಾರದ ರೀತಿಯಲ್ಲಿ ಧರ್ಮಸ್ಥಳ ಸಂಸ್ಥೆ ಕೆಲಸ ಮಾಡುತ್ತಿದೆ ಎಂದು ಹೆಬ್ಬಾಳಕರ್ ಹೇಳಿದರು. ಸಾಮೂಹಿಕ ಸತ್ಯನಾರಾಯಣ ಪೂಜಾ ವ್ಯವಸ್ಥಾಪನ ಸಮಿತಿ, ಉಚಗಾಂವ, ಬಸುರ್ತೆ, ಬೆಕ್ಕಿನಕೇರಿ, ಸುಳಗಾ, ತುರಮುರಿ, ಕುದ್ರೆಮನಿ, ಕೊನೆವಾಡಿ, ಅತಿವಾಡ, ಬಾಚಿ ಹಾಗೂ ಪ್ರಗತಿಬಂಧು ಜ್ಞಾನವಿಕಾಸ ಸ್ವ-ಸಹಾಯ ಸಂಘಗಳ ಒಕ್ಕೂಟ ಉಚಗಾಂವ ವಲಯ ಇವರ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು…

Read More