Subscribe to Updates
Get the latest creative news from FooBar about art, design and business.
- BPS: ಪದಾಧಿಕಾರಿಗಳ ಆಯ್ಕೆ, ಎಂಬಿಬಿಎಸ್ ವಿದ್ಯಾರ್ಥಿಗೆ ಸನ್ಮಾನ
- ಹಂಚೀಪುರ ಗ್ರಾ.ಪಂ.: ರಸ್ತೆ ಬದಿಯ ಗಿಡಗಂಟಿ ತೆರವಿಗೆ ಆಗ್ರಹಿಸಿ ಪ್ರತಿಭಟನೆ
- ಸರಗೂರು | ಆರ್ ಎಸ್ ಎಸ್ ಬ್ಯಾನ್ ಗೆ ಡಿ ಎಸ್ ಎಸ್ ಒತ್ತಾಯ
- ತಿಪಟೂರು | ಸರಿಯಾಗಿ ಕಾರ್ಯನಿರ್ವಹಿಸದ ಸಂಚಾರ ಸಿಗ್ನಲ್ ಗಳು: ವಾಹನ ಚಾಲಕರಿಂದ ಆಕ್ರೋಶ
- ಕನಕದಾಸರು ಸಮಾಜದ ಓರೆಕೋರೆಗಳನ್ನು ತಿದ್ದಲು ಶ್ರಮಿಸಿದವರು: ಸಿ.ವಿ.ಕುಮಾರ್
- ಅವೈಜ್ಞಾನಿಕ ಸುತ್ತೋಲೆ ವಾಪಸ್ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರಾಂಶುಪಾಲರ, ಉಪನ್ಯಾಸಕರ ಸಂಘ ಆಗ್ರಹ
- ತುಮಕೂರು | ಕಾಂಗ್ರೆಸ್ ಭವನ ಕಟ್ಟಡ ನಿರ್ಮಾಣಕ್ಕೆ ತಡೆಯಾಜ್ಞೆ
- ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ
Author: admin
ತೀವ್ರ ಹೃದಯಾಘಾತದಿಂದ ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದರು. ಇಂದು ಅವರ ಮನೆಗೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಬಳಿಕ ಮಾತನಾಡಿದ ಅವರು, ಉಮೇಶ್ ಕತ್ತಿ ಅವರ ರಾಜಕೀಯ ಜೀವನ ಪುಸ್ತಕವಾಗಬೇಕು. ಸಚಿವ ಉಮೇಶ್ ಕತ್ತಿ ನನ್ನ ಆತ್ಮೀಯ ಮಿತ್ರ. ಹೀಗಾಗಿ ನಾವು ಬೆಂಗಳೂರು ದೆಹಲಿಯಲ್ಲಿ ಅನೇಕ ಬಾರಿ ಮಾತುಕತೆ ನಡೆಸಿದ್ದೇನೆ. ಪಕ್ಷ ಕಟ್ಟುವ ಬಗ್ಗೆ ಅನೇಕ ಸಲಹೆ ನೀಡುತ್ತಿದ್ದರು. ಉಮೇಶ್ ಕತ್ತಿ ಬಿಂದಾಸ್ ವ್ಯಕ್ತಿಯಾಗಿದ್ದರು. ಅವರ ಅಗಲಿಕೆಯಿಂದಾಗಿ ಪಕ್ಷ ಹಾಗೂ ರಾಜ್ಯಕ್ಕೆ ನಷ್ಟ ಆಗಿದೆ ಎಂದು ಬೇಸರ ವ್ಯಕ್ತಪಡಿಸಿದರು. 40 ವರ್ಷಗಳ ಕಾಲದಿಂದ ಜನ ಅವರಿಗೆ ಆಶೀರ್ವಾದ ಮಾಡಿದ್ದಾರೆ. ಅವರ ರಾಜಕೀಯ ಜೀವನವು ಪುಸ್ತಕದ ರೂಪದಲ್ಲಿ ಹೊರ ಬರಬೇಕು. ಒಬ್ಬ ರಾಜಕೀಯ ನಾಯಕ 40 ವರ್ಷಗಳ ಶಾಸಕನಾಗಿ ಮಾಡಿದ ಕೆಲಸ, ಅವರ ದೂರದೃಷ್ಟಿ, ಅವರ ಆಲೋಚನೆಗಳು ಎಲ್ಲರಿಗೂ ಗೊತ್ತಾಗಬೇಕಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
ಕೋಲಾರ: ಭಾರತ-ಪಾಕಿಸ್ತಾನ ಪಂದ್ಯಾವಳಿ ಸಂದರ್ಭದಲ್ಲಿ ಪಾಕ್ ಪರವಾಗಿ ಸ್ಟೇಟಸ್ ಹಾಕಿದ್ದಂತ ಮೂವರ ವಿರುದ್ಧ, ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಅಲ್ಲದೇ ಈ ಪ್ರಕರಣದಲ್ಲಿ ಓರ್ವನನ್ನು ಬಂಧಿಸಿದ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸ ಪುರ ತಾಲೂಕಿನಲ್ಲಿ ನಡೆದಿದೆ. ಭಾರತ ಮತ್ತು ಪಾಕಿಸ್ತಾನ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ಬೆಂಬಲಿಸಿ ಸ್ಟೇಟಸ್ ಹಾಕಲಾಗಿತ್ತು. ಸೋಹೆಲ್, ತೋಹಿಬ್ ಪಾಷ ಹಾಗೂ ಮನ್ಸೂರ್ ಉಲ್ಲಾ ಎಂಬುವರು ಪಾಕ್ ಪರ ಸ್ಟೇಟಸ್ ಹಾಕಿದ್ದರು. ಇದನ್ನು ಗಮನಿಸಿದಂತ ಪುರಸಭೆಯ ನಾಮನಿರ್ದೇಶಿತ ಸದಸ್ಯ ರಾಮಾಂಜಿಯವರು ಶ್ರೀನಿವಾಸಪುರ ಠಾಣೆಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಎಫ್‌ಐಆರ್ ದಾಖಲಿಸಿಕೊಂಡಿದ್ದ ಪೊಲೀಸರು, ಸೊಹೇಲ್ ಎಂಬಾತನನ್ನು ಬಂಧಿಸಿದ್ದಾರೆ. ಇನ್ನುಳಿದ ತೊಹೀಬ್ ಹಾಗೂ ಮನ್ಸೂರ್ ಹಾಗಿ ಹುಡುಕಾಟ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕಾರವಾರ: ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ, ಕಾರವಾರ ಮೂಲದ ಮೂವರು ಸ್ಥಳದಲ್ಲೇ ಮೃತಪಟ್ಟ, ಐವರ ಸ್ಥಿತಿ ಗಂಭೀರ ಗಾಯಗೊಂಡ ಘಟನೆ ಗೋವಾ ರಾಜ್ಯದ ಕಾಣಕೋಣ ಬಳಿ ನಡೆದಿದೆ. ಸದ್ಯ ಗೋವಾದ ವಾಸ್ಕೊದಲ್ಲಿ ನೆಲೆಸಿರುವ ಉಲ್ಲಾಸ ನಾಗೇಕರ್ (64), ಇವರ ಪತ್ನಿ ವೀಣಾ ಉಲ್ಲಾಸ ನಾಗೇಕರ್ (60), ಪುತ್ರ ಹರೀಶ ಉಲ್ಲಾಸ ನಾಗೇಕರ್(35) ಮೃತರು. ಐವರು ಗಂಭೀರವಾಗಿ ಗಾಯಗೊಂಡಿದ್ದು, ದಕ್ಷಿಣ ಗೋವಾ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ. ಅಪಘಾತಕ್ಕೀಡಾದ ಕಾರುಗಳು ನುಜ್ಜುಗುಜ್ಜಾಗಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಇತ್ತೀಚಿಗೆ ಆಂಧ್ರಪ್ರದೇಶದಲ್ಲಿ ಬಳಿಯಲ್ಲಿ ಗಾಂಜಾ ಗ್ಯಾಂಗ್ ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸರ ಕಾರು ಅಪಘಾತಕ್ಕೆ ಈಡಾಗಿತ್ತು. ಈ ಘಟನೆಯಲ್ಲಿ ಸಬ್ ಇನ್ಸ್ ಪೆಕ್ಟರ್, ಕಾನ್ಸ್ ಟೇಬಲ್ ಸೇರಿ ಮೂವರು ಸಿಬ್ಬಂದಿ ದಾರುಣವಾಗಿ ಸಾವನ್ನಪ್ಪಿದ್ದರು. ಈ ಬಳಿಕ ಎಚ್ಚೆತ್ತುಕೊಂಡಿರುವಂತ ರಾಜ್ಯ ಸರ್ಕಾರ, ಪೊಲೀಸರ ರಾತ್ರಿ ಪ್ರಯಾಣವನ್ನು ನಿರ್ಬಂಧಿಸಿ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಪೊಲೀಸ್ ಇಲಾಖೆಯ ಸಿಐಡಿ, ಡಿಜಿಪಿ ಆದೇಶ ಹೊರಡಿಸಿದ್ದು, ಕಾನೂನು ಸುವ್ಯವಸ್ಥೆ ಬಂದೋಬಸ್ತ್, ಚುನಾವಣಾ ಕರ್ತವ್ಯ, ಅಪರಾಧ ಪ್ರಕರಣಗಳ ತನಿಖೆ ಸೇರಿದಂತೆ ಇನ್ನಿತರ ಅನ್ಯ ಕಾರ್ಯದ ಮೇಲೆ ನಿಯೋಜನೆಗೊಳ್ಳುವಂತ ಪೊಲೀಸ್ ಅಧಿಕಾರಿ, ಸಿಬ್ಬಂದಿ ಯಾವುದೇ ವಾಹನದಲ್ಲಿ ಕರ್ತವ್ಯದ ನಿಮಿತ್ತ ಅಥವಾ ಕರ್ತವ್ಯದಿಂದ ಬಿಡುಗಡೆಯಾದ ನಂತರ, ರಾತ್ರಿ 10 ರಿಂದ ಬೆಳಿಗ್ಗೆ 6 ಗಂಟೆಯವರೆಗೆ ಪ್ರಯಾಣ ಮಾಡದಂತೆ ತಿಳಿಸಲಾಗಿದೆ. ಪೊಲೀಸರ ಹಿತದೃಷ್ಠಿಯಿಂದ ರಾತ್ರಿ ಪ್ರಯಾಣ ನಿರ್ಬಂಧಿಸಿ, ಪೊಲೀಸ್ ಇಲಾಖೆಯಿಂದ ಆದೇಶಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…
ಕರ್ನಾಟಕದ ಅಭಿವೃದ್ಧಿ ಎರಡು ಭಾಗಗಳಾಗಿ ವಿಂಗಡಣೆಗೊಂಡಿದೆ ಮತ್ತು ಉತ್ತರ ಕರ್ನಾಟಕಕ್ಕೆ ಅಭಿವೃದ್ಧಿಯ ಪಾಲು ದೊರಕದೇ ತಾರತಮ್ಯ ನಡೀತಾನೆ ಇದೆ. ಅದಕ್ಕೆ ನಾನು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕೆಂದು ಎಂದು ಅನಿಸುತ್ತದೆ. ಈ ಮಾತನ್ನು ಕೇಳಿದ ತಕ್ಷಣ ಕರ್ನಾಟಕದಲ್ಲಿ ರಾಜಕೀಯ ಮತ್ತು ಪ್ರತ್ಯೇಕದ ಸಂಚಲನ ಮೂಡಿಸಿತು. ಇದು ಮಾತನ್ನು ಆಡಿದವರು ಬೇರೆ ಯಾರು ಅಲ್ಲ ಎಂಟು ಬಾರಿ ಶಾಸಕರಾದ ನಾಲ್ಕು ಬಾರಿ ಸಚಿವರಾದ ಉಮೇಶ್ ಕತ್ತಿ. ಬುದ್ಧಿಜೀವಿಗಳು, ಕನ್ನಡ ಪರ ಸಂಘಟನೆಗಳು ಇವರು ವಿರುದ್ಧ ಸಿಡಿದೆದ್ದು ನಿಂತವು, ಆದರೆ ತಮ್ಮ ನಿಲುವನ್ನು ಬದಲಾಯಿಸದೆ ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ನಾನು ಯಾವುದೇ ತ್ಯಾಗ ಮತ್ತು ಬಲಿದಾನಕ್ಕೆ ಸಿದ್ಧನಿದ್ದೇನೆ ಎಂದು ದಿಟ್ಟ ಮತ್ತು ನೇರ ಉತ್ತರ ಕೊಟ್ಟವರು ಇದೇ ಉಮೇಶ್ ಕತ್ತಿ. ಉಮೇಶ್ ಕತ್ತಿ ಅಭಿವೃದ್ಧಿ ಕೆಲಸದಿಂದಾಗಿ ಜನರ ವಿಶ್ವಾಸ ಮತ್ತು ಪ್ರೀತಿಗಳಿಸಿದ್ದ ತಮ್ಮ ಕ್ಷೇತ್ರದಲ್ಲಿ ಸಾಹುಕಾರ ಎಂದೇ ಜನರ ಮನಸ್ಸಿನಲ್ಲಿ ವಾಸವಾಗಿದ್ದರು. 1985ರಲ್ಲಿ ಉಮೇಶ್ ಕತ್ತಿ ಅವರ ತಂದೆ ವಿಶ್ವನಾಥ್ ಕತ್ತಿ ಅವರ ಅಕಾಲಿಕ…
ಬಂಟ್ವಾಳ ಸೆ 8:ಕಳೆದ 3 ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಅಮ್ಟಾಡಿ ನಿವಾಸಿ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ (Mangalore) ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಕೊನೆಯುಸಿರೆಳೆದ್ದಾಳೆ. ಬಂಟ್ವಾಳ ತಾಲೂಕಿನ ಅಮ್ಟಾಡಿ ನಿವಾಸಿ ಲೋಕೇಶ್ ಅವರ ಪುತ್ರಿ ಕವಿತಾ ( 20) ಮೃತಪಟ್ಟ ವಿದ್ಯಾರ್ಥಿನಿ. ಈಕೆ ಸಿದ್ದ ಕಟ್ಟೆ ಸರಕಾರಿ ಕಾಲೇಜಿನ ವಿದ್ಯಾರ್ಥಿನಿ. ಆಕೆ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಮಂಗಳವಾರ ಸೆ.6 ರಂದು ಜ್ವರ ಉಲ್ಬಣಗೊಂಡ ಹಿನ್ನೆಲೆಯಲ್ಲಿ ತುಂಬೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಅಲ್ಲಿಂದ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಅಲ್ಲಿ ತೀವ್ರ ನಿಗಾ ಘಟಕ ದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕವಿತಾ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾಳೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.ಕವಿತಾ ಸಿದ್ದಕಟ್ಟೆ ಕಾಲೇಜಿನ ಅಂತಿಮ ಬಿಕಾಂ ವಿದ್ಯಾರ್ಥಿನಿಯಾಗಿದ್ದು, ಕಲಿಕೆಯಲ್ಲಿ ಮುಂದಿದ್ದಳು. ಸೆ.12 ರಂದು ಪರೀಕ್ಷೆ ನಡೆಯಲಿದ್ದ ಸೆಮಿಸ್ಟರ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದಳು ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
ರಾಯಚೂರು: ಮಲವಿಸರ್ಜನೆ ಮಾಡಿದ್ದಕ್ಕೆ ಕೋಪಗೊಂಡ ಶಿಕ್ಷಕ ಹುಲಿಗೆಪ್ಪ ಬಿಸಿ ನೀರು ಎರಚಿದ ಘಟನೆ ಜಿಲ್ಲೆಯ ಮಸ್ಕಿ ತಾಲೂಕಿನ ಸಂತೆಕಲ್ಲೂರು ಶ್ರೀಘನಮಠೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ. ತರಗತಿಯಲ್ಲಿ 2ನೇ ತರಗತಿ ವಿದ್ಯಾರ್ಥಿಯೊಬ್ಬ ಶಾಲಾ ಸಮವಸ್ತ್ರದಲ್ಲಿ ಮಲವಿಸರ್ಜನೆ ಮಾಡಿದ್ದಕ್ಕೆ ಕೋಪಗೊಂಡ ಶಿಕ್ಷಕ ಹುಲಿಗೆಪ್ಪ ಬಿಸಿ ನೀರು ಎರಚಿದ್ದಾರೆ ಎಂದು ಆರೋಪಿಸಲಾಗಿದೆ. ಬಿಸಿನೀರಿನ ತಾಪಕ್ಕೆ ವಿದ್ಯಾರ್ಥಿಯ ದೇಹದ ಶೇ. 40ರಷ್ಟು ಭಾಗ ಸುಟ್ಟು ಹೋಗಿದೆ. ಘಟನೆ ನಡೆದ ಬೆನ್ನಲ್ಲೇ ಗಂಭೀರ ಆರೋಪ ಹೊತ್ತಿರುವ ಶಿಕ್ಷಕ ಶಾಲೆಗೆ ಗೈರಾಗುತ್ತಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳು ಬಾಲಕನಿಗೆ ಲಿಂಗಸುಗೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ನಡೆದು ವಾರವಾದರೂ ಈವರೆಗೆ ಪ್ರಕರಣ ದಾಖಲಾಗಿಲ್ಲ. ಇದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಗದಗ: ಗಣೇಶ ವಿಸರ್ಜನೆ ವೇಳೆ ದುಷ್ಕರ್ಮಿಗಳು ಚಾಕು ಇರಿತಕ್ಕೆ ಯುವಕ ಸಾವನ್ನಪ್ಪಿರುವಂತಹ ಘಟನೆ ಗದಗ ತೋಂಟದಾರ್ಯ ಮಠದ ಬಳಿ ತಡರಾತ್ರಿ ನಡೆದಿದೆ. ಸುದೀಪ್ ಮುಂಡೆವಾಡಿ(22) ಕೊಲೆಯಾದ ದುರ್ದೈವಿ. ಸ್ನೇಹಿತರೇ ಚಾಕು ಇರಿದಿರುವ ಆರೋಪ ಮಾಡಿದ್ದು, ತೀವ್ರ ರಕ್ತಸ್ರಾವದಿಂದ ಆಸ್ಪತ್ರೆಯಲ್ಲಿ ಸುದೀಪ್ ಸಾವನ್ನಪ್ಪಿದ್ದಾನೆ. ಸುದೀಪ್ ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಗದಗ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಭಾರೀ ಮಳೆಯಿಂದಾಗಿ, ಕಪಿಲೇಶ್ವರ ವಿಸರ್ಜನ ಕೆರೆಗೆ ಕಸ ಮತ್ತು ಕಲುಷಿತ ನೀರು ಸೇರಿತ್ತು, ಆದ್ದರಿಂದ ಇಂದು ಮತ್ತೊಮ್ಮೆ ಕೆರೆಯನ್ನು ಸ್ವಚ್ಛಗೊಳಿಸಲಾಯಿತು. ಶಾಸಕ ಅನಿಲ ಬೆನಕೆ ಅಡಳಿತಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರಿಂದ ನಿನ್ನೆ ರಾತ್ರ್ರಿ ಹಾಗೂ ಇಂದು ಬೆಳಗ್ಗೆ ಕೆರೆಯ ಕಲುಷಿತ ನೀರು, ಕಸ ತೆಗೆದು ಪುನ: ಶುದ್ಧ ನೀರನ್ನು ಕಾಮಗಾರಿ ಕೈಗೆತ್ತಿಕೊಳ್ಳಲಾಯಿತ್ತು. ಇದರಿಂದಾಗಿ ಇಂದು ಹಾಗೂ ನಾಳೆ ಬರುವ ಅನಂತ ಚತುರ್ದಶಿ ಎಂದು ಕಪಿಲೆಶ್ವರ ಕೆರೆ ಶೀ ಗಣೇಶನ ವಿಸರ್ಜನಕ್ಕೆ ಪುನ: ಲಭ್ಯವಾಗಿದೆ. ಈ ಸಂದರ್ಭದಲ್ಲಿ ಶಾಸಕರೊಂದಿಗೆ ಕಾರ್ಪೊರೇಟರ ಭಾತಕಾಂಡೆ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಮಂಜುಶ್ರೀ, ಸಿದ್ದಾರ್ಥ ಭಾತಕಾಂಡೆ, ಮಹಾನಗರ ಪಾಲಿಕೆ ಸಿಬ್ಬಂದಿಗಳು ಹಾಗೂ ಮಹಾದೇವ ಎಲ್&ಟಿ ಅಧಿಕಾರಿಗಳು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕುಣಿಗಲ್: ಲಾರಿ ಹಾಗೂ ಬೊಲೆರೋ ವಾಹನದ ನಡುವೆ ನಡೆದ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕುಣಿಗಲ್ ತಾಲೂಕಿನ ಪಿ.ಹೊನಮಾಚನಹಳ್ಳಿ ಬಳಿ ನಡೆದಿದೆ. 30 ವರ್ಷದ ವಯಸ್ಸಿನ ಸಲೀಂ ಪಾಷಾ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕುಣಿಗಲ್ ಮಾರ್ಗವಾಗಿ ಮದ್ದೂರಿಗೆ ಹೋಗುತ್ತಿದ್ದ ಲಾರಿ ಹುಲಿಯೂರುದುರ್ಗದಿಂದ ಪಶು ಆಹಾರ ಸಾಗಿಸುತ್ತಿದ್ದ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಓವರ್ ಟೇಕ್ ಮಾಡುವ ಭರದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಘಟನೆ ಸಂಬಂಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹುಲಿಯೂರುದುರ್ಗ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz