Subscribe to Updates
Get the latest creative news from FooBar about art, design and business.
- BPS: ಪದಾಧಿಕಾರಿಗಳ ಆಯ್ಕೆ, ಎಂಬಿಬಿಎಸ್ ವಿದ್ಯಾರ್ಥಿಗೆ ಸನ್ಮಾನ
- ಹಂಚೀಪುರ ಗ್ರಾ.ಪಂ.: ರಸ್ತೆ ಬದಿಯ ಗಿಡಗಂಟಿ ತೆರವಿಗೆ ಆಗ್ರಹಿಸಿ ಪ್ರತಿಭಟನೆ
- ಸರಗೂರು | ಆರ್ ಎಸ್ ಎಸ್ ಬ್ಯಾನ್ ಗೆ ಡಿ ಎಸ್ ಎಸ್ ಒತ್ತಾಯ
- ತಿಪಟೂರು | ಸರಿಯಾಗಿ ಕಾರ್ಯನಿರ್ವಹಿಸದ ಸಂಚಾರ ಸಿಗ್ನಲ್ ಗಳು: ವಾಹನ ಚಾಲಕರಿಂದ ಆಕ್ರೋಶ
- ಕನಕದಾಸರು ಸಮಾಜದ ಓರೆಕೋರೆಗಳನ್ನು ತಿದ್ದಲು ಶ್ರಮಿಸಿದವರು: ಸಿ.ವಿ.ಕುಮಾರ್
- ಅವೈಜ್ಞಾನಿಕ ಸುತ್ತೋಲೆ ವಾಪಸ್ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರಾಂಶುಪಾಲರ, ಉಪನ್ಯಾಸಕರ ಸಂಘ ಆಗ್ರಹ
- ತುಮಕೂರು | ಕಾಂಗ್ರೆಸ್ ಭವನ ಕಟ್ಟಡ ನಿರ್ಮಾಣಕ್ಕೆ ತಡೆಯಾಜ್ಞೆ
- ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ
Author: admin
ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆ ಅಕ್ರಮ ಪ್ರಕರಣ ಸಂಬಂಧ ವಿವಿಧ ಬಗೆಯ ಎಲೆಕ್ಟ್ರಾನಿಕ್ ಡಿವೈಸ್ ಪೂರೈಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ದೇವಸಂದ್ರದ ಮೊಹಮ್ಮದ್ ಅಜೀಮುದ್ದಿನ್ ಬಂಧಿತ ಆರೋಪಿ. ಈ ಮೂಲಕ ಬಂಧಿತರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಕಿಂಗ್ಪಿನ್ ಸಂಜು ಭಂಡಾರಿ ಹಾಗೂ ಬೆಳಗಾವಿಯ ಇತರರಿಗೆ ಆರೋಪಿ ಎಲೆಕ್ಟ್ರಾನಿಕ್ ಡಿವೈಸ್ ಪೂರೈಸುತ್ತಿದ್ದ. ಎಲೆಕ್ಟ್ರಾನಿಕ್ ಡಿವೈಸ್ ಅಳವಡಿಸಿದ ಏಳು ಮಾಸ್ಕ್, 41 ಎಲೆಕ್ಟ್ರಾನಿಕ್ ಡಿವೈಸ್ ಅಳವಡಿಸಿದ ಬನಿಯನ್, 445 ಎಲೆಕ್ಟ್ರಾನಿಕ್ ಇಯರ್ ಪೀಸ್, 554 ವಿವಿಧ ಬಗೆಯ ಚಾರ್ಜಿಂಗ್ ಕೇಬಲ್, 6 ವಾಕಿಟಾಕಿಯನ್ನು ಬೆಳಗಾವಿ ಪೊಲೀಸರ ಜಪ್ತಿ ಮಾಡಿದ್ದಾರೆ. ಪರೀಕ್ಷೆಗಳಲ್ಲಿ ಅಕ್ರಮ ಎಸಗಲು ಎಲೆಕ್ಟ್ರಾನಿಕ್ ಉಪಕರಣಗಳ ಪೂರೈಕೆ ಆರೋಪ ಮಾಡಿದ್ದು, ಬೆಂಗಳೂರಿನ ಎಸ್ಪಿ ರಸ್ತೆಯಲ್ಲಿ ಸ್ಪೈ ಜೋನ್ ಎಲೆಕ್ಟ್ರಾನಿಕ್ ಮಳಿಗೆಯನ್ನು ಆರೋಪಿ ಹೊಂದಿದ್ದಾನೆ. ಮಳಿಗೆ ಸೀಜ್ ಮಾಡಿ ಆರೋಪಿಯನ್ನು ಪೊಲೀಸರು ಬೆಳಗಾವಿಗೆ ಕರೆತಂದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…
ತಿಪಟೂರು: ಧಾರ್ಮಿಕ ನಾಡು ಎಂದು ಹೆಸರಾಗಿರುವ ಹಾಲ್ಕುರ್ಕಿ ಕೆರೆ ಕೋಡಿ ಹೊಡೆದ ಪರಿಣಾಮ ಕಂಬಿ ಕಟ್ಟೆ, ಎರೆಪಟ್ಟೆ, ಅಮ್ಮನಹಾಳು, ಶೆಟ್ಟಿಕೆರೆ ದೊಡ್ಡಿಕಟ್ಟೆ, ಮಾಕುವಳ್ಳಿ, ಕಡೆಗೆ ಹೋಗುವ ರೈತರು ಮತ್ತು ಸಾರ್ವಜನಿಕರು ಜೀವ ಕೈಯಲ್ಲಿ ಹಿಡಿದು ಓಡಾಡುವ ಪರಿಸ್ಥಿತಿ ಉಂಟಾಗಿದೆ. ಬಹುತೇಕ ಜನರು ತೋಟದ ಮನೆಗಳಲ್ಲಿ ವಾಸಿಸುವ ಕಾರಣ ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ವೇಳೆಗೆ ಹಾಲನ್ನು ಡೈರಿಗೆ ಹಾಕಲು ಇದೇ ಮಾರ್ಗವಾಗಿ ಕ್ರಮಿಸಬೇಕಾಗುತ್ತದೆ ಆದರೆ ಈಗಿರುವ ಪರಿಸ್ಥಿತಿಯಲ್ಲಿ ಕೇವಲ ನೂರು ಅಡಿ ದಾಟಲು ಸಾಧ್ಯವಿಲ್ಲದೆ 6 ರಿಂದ 7 ಕಿಲೋಮೀಟರ್ ಸುತ್ತುವರೆದು ಹಾಲ್ಕುರ್ಕೆಗೆ ಬರುವ ಪರಿಸ್ಥಿತಿ ಅನಿವಾರ್ಯವಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ ರೈತರು ಮತ್ತು ಸಾರ್ವಜನಿಕರು ಯಾವುದೇ ತೊಂದರೆ ಇಲ್ಲದ ರೀತಿಯಲ್ಲಿ ಸಂಚರಿಸಲು ಸುಸಜ್ಜಿತವಾದ ಸೇತುವೆ ನಿರ್ಮಾಣ ಮಾಡಬೇಕೆಂದು ಹಾಲ್ಕುರ್ಕೆ ಮತ್ತು ಅಕ್ಕಪಕ್ಕದ ಗ್ರಾಮಸ್ಥರು ಮನವಿ ಮಾಡಿದ್ದಾರೆ. ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…
ಬ್ರಿಟನ್: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬ್ರಿಟನ್ ರಾಣಿ ಎರಡನೇ ಎಲಿಜಬೆತ್ ಅವರು ಗುರುವಾರ(ಸೆ.8)ದಂದು ನಿಧನರಾಗಿದ್ದಾರೆ. ಬ್ರಿಟನ್ ರಾಣಿ ನಿಧನದ ಹಿನ್ನೆಲೆಯಲ್ಲಿ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ರಾಣಿಯ ನಿಧನದ ಸುದ್ದಿಯನ್ನು ಬಂಕಿಂಗ್ ಹ್ಯಾಮ್ ಅರಮನೆಯವರು ಖಚಿತಪಡಿಸಿದ್ದಾರೆ. ಬ್ರಿಟನ್ ಗೆ ಸುದೀರ್ಘ ಸೇವೆ ಸಲ್ಲಿಸಿದ್ದ ಎರಡನೇ ಎಲಿಜಬೆತ್ 70 ವರ್ಷಗಳ ಕಾಲ ಆಳ್ವಿಕೆ ನಡೆಸಿದ್ದರು. ಇದೀಗ ತನ್ನ 96ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಸರಗೂರು: ತಾಲ್ಲೂಕಿನ ಬಿ ಮಟಕೆರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಂಕವಾಡಿ ಗ್ರಾಮದಲ್ಲಿ ಒಂದು ತಿಂಗಳು ಹಿಂದೆ ನಾಟಿ ಮಾಡಿದ ಭತ್ತವನ್ನು ಕಾಡಾನೆಗಳು ನಾಶಪಡಿಸಿದ್ದು, ಆನೆಗಳನ್ನು ಕಾಡಿಗೆ ಓಡಿಸಲು ಹೋದಾಗ ರೈತರನ್ನು ಹಿಂಬಾಲಿಸಿಕೊಂಡು ಬಂದು ಭೀತಿ ಸೃಷ್ಟಿಸಿರುವ ಘಟನೆ ಬಂಕವಾಡಿ ಗ್ರಾಮದಲ್ಲಿ ನಡೆದಿದೆ. ತಿಂಗಳುಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿವ ರೈತರು ಯಾವುದೇ ಬೆಳೆಗಳನ್ನು ಬೆಳೆಯಲಾಗದೇ ಕಂಗೆಟ್ಟಿದ್ದಾರೆ.ಈ ನಡುವೆ ಕಾಡಿನಿಂದ ಬರುತ್ತಿರುವ ಆನೆಗಳು ಜಮೀನುಗಳಲ್ಲಿ ಬೆಳೆದಿರುವ ಫಸಳಿಗೆ ಬಂದ ಬೆಳೆಗಳನ್ನು ನಾಶ ಮಾಡುತ್ತಿದ್ದು, ಇದರಿಂದಾಗಿ 2 ರಿಂದ 3 ಲಕ್ಷಾಂತರ ನಷ್ಟವಾಗಿದೆ ಎಂದು ಪ್ರಕಾಶ್ ಗೌಡ ಎಂಬವರು ಅಳಲು ತೋಡಿಕೊಂಡಿದ್ದಾರೆ. ಆನೆ ದಾಳಿ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದರೆ, ನಾವು ಅಲ್ಲಿದ್ದೇವೆ, ಇಲ್ಲಿದ್ದೇವೆ ಎಂಬ ನೆಪ ಹೇಳಿ ಸಮಸ್ಯೆಗಳಿಂದ ಜಾರಿಕೊಳ್ಳುತ್ತಿದ್ದಾರೆ. ಒತ್ತಡ ಹಾಕಿದರೆ, ಉಡಾಫೆ ಮಾತುಗಳನ್ನಾಡತ್ತಾರೆ ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ. ಮೋಳೆಯೂರು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಗಳು ಬಂದಿದ್ದ ಸಂದರ್ಭದಲ್ಲಿ ಗ್ರಾಮಸ್ಥರು ಸೇರಿಕೊಂಡು ಮನವಿ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಪ್ರವಾಸಿ ಮಂದಿರದಲ್ಲಿ ಶಾಸಕರಾದ ಕೆ.ಪೂರ್ಣಿಮಾ ಶ್ರೀನಿವಾಸ್ ಅವರ ಅಧ್ಯಕ್ಷತೆಯಲ್ಲಿ ತಾಲ್ಲೂಕಿನ ಸರ್ಕಾರಿ ಅಧಿಕಾರಿಗಳ ತುರ್ತು ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಮಾತನಾಡಿದ ಹಿರಿಯೂರು ತಾಲ್ಲೂಕಿನ ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಕಳೆದ ಎರಡು ವರ್ಷಗಳಿಂದ ಕೋವಿಡ್ ಹಾಗೂ ಒಮಿಕ್ರೋನ್ ನಿಂದ ತತ್ತರಿಸಿದ ಜನ ಇದೀಗ ಅತಿಯಾದ ಮಳೆ ಗಾಳಿಯಿಂದ ರೈತರು ಬೆಳೆದ ಬೆಳೆಗಳು ನಷ್ಟವಾಗಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. ಆದರಿಂದ ಮಳೆಯಿಂದ ಬೆಳೆ ಹಾನಿಯಾಗಿರುವ ಮನೆ ಮತ್ತು ಬೆಳೆಗಳನ್ನು ಶೀಘ್ರದಲ್ಲೇ ಸರ್ವೇ ಮಾಡಿ ಸರ್ಕಾರದ ಪರಿಹಾರಕ್ಕೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು. ರೈತರು ಬೆಳೆಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿದ್ದಾರೆ. ಅಧಿಕಾರಿಗಳು ಯಾವುದೇ ನೆಪ ಹೇಳದೆ ಹಗಲು ರಾತ್ರಿ ಹಾಗೂ ರಜಾ ದಿನಗಳಲ್ಲೂ ಕರ್ತವ್ಯ ನಿರ್ವಹಿಸಿ ರೈತರ ಕಷ್ಟಗಳಿಗೆ ಸ್ಪಂದಿಸಬೇಕು ಎಂದು ಅವರು ಮನವಿ ಮಾಡಿದರು. ತಾಲ್ಲೂಕಿನಲ್ಲಿ ರೈತರು ಬೆಳೆದಿರುವಂತಹ ಅಡಿಕೆ, ತೆಂಗು, ಬಾಳೆ, ಈರುಳ್ಳಿ ಹತ್ತಿ, ದಾಳಿಂಬೆ, ಪಪ್ಪಾಯಿ, ಶೇಂಗಾ ಮುಂತಾದ ಬೆಳೆಗಳಿಗೆ ಮಳೆಯಿಂದ ಹಾನಿಯಾಗಿದ್ದು, ಈ ಕೂಡಲೇ ಹೋಬಳಿವಾರು…
ಕೊರಟಗೆರೆ: ತಾಲ್ಲೂಕಿನ ವಡ್ಡಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲಪನಹಳ್ಳಿ ಗ್ರಾಮದಲ್ಲಿ ಜಯಮಂಗಲಿ ನದಿಯಲ್ಲಿ ರಭಸವಾಗಿ ಹರಿಯುತ್ತಿದ್ದ ನೀರಿನಲ್ಲಿ ಕೊಚ್ವಿ ಹೋಗಿದ್ದ ಟಾಟಾ ಏಸ್ ವಾಹನ ಸಮೇತ ನದಿಯಲ್ಲಿ ಕೊಚ್ಚಿ ಹೋಗಿದ್ದ ಚಾಲಕನ ಮೃತದೇಹ ಬುಧವಾರ ಪತ್ತೆಯಾಗಿದೆ. ಘಟನೆ ಬಳಿಕ ಸತತ 24 ಗಂಟೆಯಿಂದ ಸ್ಥಳದಲ್ಲೇ ಬೀಡುಬಿಟ್ಟಿದ್ದ ಅಗ್ನಿಶಾಮಕ ಸಿಬ್ಬಂದಿ ಚಾಲಕ ಮತ್ತು ವಾಹನ ಹುಡುಕಾಟದಲ್ಲಿ ತೊಡಗಿದ್ದರು. ಕೊನೆಗೂ ಟಾಟಾ ಎಸ್ ವಾಹನ ಮತ್ತು ಮೃತ ಚಾಲಕನ ಶವ ಪತ್ತೆಯಾಗಿದೆ. ಕೊರಟಗೆರೆ ತಾಲ್ಲೂಕಿನ ವಡ್ಡಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲಪ್ಪನಹಳ್ಳಿ ಗ್ರಾಮದ ಜಯಮಂಗಲಿ ನದಿಯಲ್ಲಿ ಟಾಟಾ ಏಸ್ ವಾಹನ ಚಲಾಯಿಸಿಕೊಂಡು ಹೋಗಿದ್ದ ಚಾಲಕ ನೀರಿನಲ್ಲಿ ಕೊಚ್ಚಿ ಹೋಗಿದ್ದ. ಕಾರ್ಯಾಚರಣೆಗೆ ಅಗ್ನಿಶಾಮಕ ಸಿಬ್ಬಂದಿಗೆ ಕೊರಟಗೆರೆ ಪೊಲೀಸ್ ಸಿಬ್ಬಂದಿ ಹಾಗೂ ಸ್ಥಳೀಯರು ಸಾಥ್ ನೀಡಿದ್ದರು. ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತುಮಕೂರು: ಗಂಗಾಮತ ಬೆಸ್ತರ ಕುಲದೇವತೆಯಾದ ಗಂಗಾಮಾತೆಯನ್ನು ಕೇಳಲಾಗದ ಭಾಷೆಯಲ್ಲಿ ಬರೆದು ಅವಮಾನ ಮಾಡಲಾಗಿದೆ ಎಂದು ತುಮಕೂರು ಜಿಲ್ಲಾ ಗಂಗಾಮತಸ್ಥ ಸಮಾಜದ ವತಿಯಿಂದ ಸಾಹಿತಿ ಬರಗೂರು ರಾಚಂದ್ರಪ್ಪ ವಿರುದ್ಧ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕಲ್ಲೂರು ಗಂಗಾಮತ ಕ್ಷೇಮಾಭಿವೃದ್ಧಿ ಅಧ್ಯಕ್ಷರಾದ ಕೆ.ಟಿ.ಸೋಮಶೇಖರ್, ಬರಗೂರು ರಾಮಚಂದ್ರಪ್ಪನವರು ನಮ್ಮ ತುಮಕೂರು ಜಿಲ್ಲೆಯ ಕೀರ್ತಿಯನ್ನೂ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ವಿಶೇಷವಾಗಿ ಸ್ಥಾನ ಮಾನ ಪಡೆದ ವ್ಯಕ್ತಿ ಇವರ ಸಾಧನೆಗೆ ಅಭಿನಂದನೆಗಳನ್ನು ಸಲ್ಲಿಸುತ್ತೇವೆ. ಆದರೆ ಇವರು ಬರೆದ ‘ಭರತ ನಗರಿ’ ಕಾದಂಬರಿಯಲ್ಲಿ ಗಂಗೆಯನ್ನು ಅವಮಾನಿಸಿರುವುದನ್ನು ಖಂಡಿಸುತ್ತೇವೆ ಎಂದರು. ತುಮಕೂರು ಜಿಲ್ಲೆಯ ಗಂಗಾಮತಸ್ಥ ಬೆಸ್ತರ ಸಮಾಜದ ಜಿಲ್ಲಾ ಅಧ್ಯಕ್ಷರಾದ ನಾಗರಾಜ್ ಮಾತನಾಡಿ, ಬರಗೂರು ರಾಮಚಂದ್ರಪ್ಪನವರು ತಪ್ಪು ಒಪ್ಪಿಕೊಂಡು ರಾಜ್ಯದ ಗಂಗಾಮತ ಸಮಾಜದ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು. ಉಪಾಧ್ಯಕ್ಷರಾದ ದಿವಾಕರ್ ಮಾತನಾಡಿ, ಬರಗೂರು ತಮ್ಮ ಕಾದಂಬರಿಯಲ್ಲಿ ಗಂಗೆಯನ್ನು ಹಾದರದ ಗಂಗೆ ಎಂದು ಮೂಲವನ್ನು ತಿರುಚಿ ಬರೆದಿದ್ದಾರೆ. ಬರಗೂರುರವರು ವಿಚಾರವಂತರು ವಾಘ್ಮೀಗಳು ತಿಳಿದವರು ಹೀಗೆ ಮೂಲವನ್ನು ತಿರುಚಿ…
ಮಧುಗಿರಿ: ಪ್ರಪಂಚದಲ್ಲೇ ಅತ್ಯಂತ ಗೌರವ ವೃತ್ತಿ ಶಿಕ್ಷಕ ವೃತ್ತಿ. ಶಿಕ್ಷಕರು ರೋಲ್ ಮಾಡೆಲ್ ಗಳು ಎಂದು ಶಾಸಕ ಎಂ.ವಿ. ವೀರಭದ್ರಯ್ಯ ತಿಳಿಸಿದರು. ಪಟ್ಟಣದ ಕುಂಚಿಟಿಗ ವಕ್ಕಲಿಗರ ಸಮುದಾಯ ಭವನದಲ್ಲಿ ಸೋಮವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಹಮ್ಮಿಕೊಂಡಿದ್ದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ರವರ 135ನೇ ಜಯಂತಿ ಹಾಗೂ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ವೃತ್ತಿ ಅನನ್ಯವಾದುದು. ಉನ್ನತ ಶಿಕ್ಷಣದಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳಿಗೆ ಹೆಚ್ಚಿನ ಶಿಕ್ಷಣ ನೀಡಲಾಗುತ್ತದೆ. ಆದರೆ ಪ್ರಾಥಮಿಕ ಶಾಲೆಗಳಲ್ಲಿ ಬೇರು ಮಟ್ಟದಿಂದ ಶಿಕ್ಷಣ ನೀಡಬೇಕು. ಪ್ರಾಥಮಿಕ ಹಾಗೂ ಫ್ರೌಡಶಾಲಾ ಶಿಕ್ಷಕರ ಇವರ ಜವಾಬ್ದಾರಿ, ಪಾತ್ರ ಬಹಳ ಮುಖ್ಯ, ದೇಶದ ಪ್ರಧಾನಿಯಿಂದ ಹಿಡಿದು ರಾಷ್ಟ್ರಪತಿಯವರೆಗೆ ಪ್ರತಿಯೊಬ್ಬರು ಶಿಕ್ಷಕರ ಗರಡಿಯಲ್ಲೇ ಪಳಗಿದವರು ಎಂದರು. ಶಿಕ್ಷಕರು ಸಂಘಟಿತರಾಗಿ ಹೌಸಿಂಗ್ ಸೊಸೈಟಿ, ಮತ್ತು ಕೋ- ಆಪರೇಟೀವ್ ಬ್ಯಾಂಕ್ ಆರಂಭಿಸಬಹುದಿತ್ತು, ಇದರ ಬಗ್ಗೆ ಚಿಂತನೆ ನಡೆಸಿದಲ್ಲಿ ನಾನೂ ಸಹ ಸಹಕಾರ ನೀಡುತ್ತೇನೆ ಎಂದು ಇದೇ ವೇಳೆ…
ಮಧುಗಿರಿ: ಬಗುರ್ ಹುಕುಂ ಸಮಿತಿಯ ಸದಸ್ಯರಿಗೆ ಸಮಿತಿಯಿಂದ ಸಾಗುವಳಿ ಚೀಟಿ ನೀಡುವ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ ಎಂದು ಬಗರ್ ಹುಕುಂ ಸಮಿತಿ ನಾಮಿನಿ ಸದಸ್ಯ ಪ್ರಸನ್ನ ಕುಮಾರ್ ಆರೋಪಿಸಿದ್ದಾರೆ. ಸಭೆಯನ್ನು ಬಹಿಷ್ಕರಿಸಿದ ಬಳಿಕ ಪಟ್ಟಣದ ತಹಶೀಲ್ದಾರ್ ಕಚೇರಿಯ ಮುಂಭಾಗದಲ್ಲಿ ಮಾತನಾಡಿದ ಅವರು, ತಹಶೀಲ್ದಾರ್ ಅವರು ಸಮಿತಿ ಸದಸ್ಯರನ್ನು ವಿಶ್ವಾಸಕ್ಕೆ ಪಡೆಯುತ್ತಿಲ್ಲ. ಮೀಟಿಂಗ್ ವಿಫಲವಾಗಿದೆ. ಶಾಸಕರು ಒಳ್ಳೆಯ ಮನುಷ್ಯರಿದ್ದು ಅವರ ಸಹನೆಯನ್ನು ಹಾಲಿ ಶಾಸಕರು, ಅಧಿಕಾರಿಗಳು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು. ಸರ್ಕಾರದಿಂದ ನಾಮಿನಿ ಸದಸ್ಯರನ್ನು ನೇಮಿಸಿದ್ದು, ನಮಗೆ ಬೆಲೆ ಇಲ್ಲದಂತಾಗಿದೆ. ಅರ್ಜಿ ನೀಡಿದ ರೈತರ ಮಾಹಿತಿಯೇ ಇಲ್ಲವಾಗಿದೆ. ಈ ಬಗ್ಗೆ ಸಚಿವ ಆರ್.ಅಶೋಕ್ ಮತ್ತು ಜಿಲ್ಲಾಧಿಕಾರಿಗಳಿಗೆ ಮನವಿ ನೀಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಬಗರ್ ನಾಮಿನಿ ಸದಸ್ಯರಾದ ನಾರಣಪ್ಪ, ಉಮಾದೇವಿ ಚೌಡಪ್ಪ ಮತ್ತಿತರ ಹಾಜರಿದ್ದರು. ವರದಿ: ಅಬಿದ್, ಮಧುಗಿರಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…
ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2022-23ರ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮ ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಸ್ನಾತಕ/ಸ್ನಾತಕೋತ್ತರ ಕೋರ್ಸ್ಗಳಾದ ಬಿ.ಎ/ಬಿ.ಕಾಂ/ಬಿ.ಬಿ.ಎ/ಬಿ.ಸಿ.ಎ/ಬಿ.ಎಲ್.ಐ.ಎಸ್ಸಿ ಹಾಗೂ ಬಿ.ಎಸ್ಸಿ, ಎಂ.ಎ/ಎಂ.ಸಿ.ಜೆ/ಎಂ.ಕಾಂ., ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ. ಎಂ.ಬಿ.ಎ., ಪಿ.ಜಿ. ಡಿಪ್ಲೋಮಾ ಪ್ರೋಗ್ರಾಮ್ಸ್., ಡಿಪ್ಲೋಮಾ ಪ್ರೋಗ್ರಾಮ್ಸ್., ಸರ್ಟಿಫಿಕೇಟ್ ಪ್ರೋಗ್ರಾಮ್ಸ್ ಗಳಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ತುಮಕೂರು ಪ್ರಾದೇಶಿಕ ಕೇಂದ್ರದಲ್ಲಿ ಪ್ರವೇಶಾತಿಯನ್ನು ಮಾಡಿಕೊಳ್ಳಲಾಗುತ್ತಿದೆ. ಪ್ರಥಮ ವರ್ಷದ ಈ ಮೇಲ್ಕಂಡ ಕೋರ್ಸ್ಗಳ ಪ್ರವೇಶಾತಿಗೆ 31/10/2022 ಕಡೆಯ ದಿನಾಂಕವಾಗಿರುತ್ತದೆ. ಇತರ ಕಾಲೇಜಿನಲ್ಲಿ ಅಥವಾ Regular DV ಆಗಿ ಓದುತ್ತಿರುವ ವಿದ್ಯಾರ್ಥಿಗಳು ಮೊದಲ ವರ್ಷ ವ್ಯಾಸಂಗ ಮಾಡಿ ಕಾರಣಾಂತರಗಳಿಂದ ಓದಲು ಆಗದಿದ್ದರೆ ಅಥವಾ Regular DV ಆಗಿ ವಿದ್ಯಾಭ್ಯಾಸ ಮುಂದುವರೆಸಲು ಸಾಧ್ಯವಾಗದಿದ್ದರೆ, ಅಂತಹ ವಿದ್ಯಾರ್ಥಿಗಳು ಆರ್ಹತಾ ಮಾನದಂಡಗಳನ್ನು ಪೂರೈಸಿ 2ನೇ ಮತ್ತು 3ನೇ ವರ್ಷಕ್ಕೆ ಮುಕ್ತ ವಿವಿಯಲ್ಲಿ ಲ್ಯಾಟರಲ್ ಪ್ರವೇಶ ಅಥವಾ ನೇರ ಪ್ರವೇಶ ಆಯ್ಕೆ ಮಾಡಿಕೊಂಡು ವಿದ್ಯಾಭ್ಯಾಸ ಮುಂದುವರೆಸಬಹುದು. ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ…