Subscribe to Updates
Get the latest creative news from FooBar about art, design and business.
- BPS: ಪದಾಧಿಕಾರಿಗಳ ಆಯ್ಕೆ, ಎಂಬಿಬಿಎಸ್ ವಿದ್ಯಾರ್ಥಿಗೆ ಸನ್ಮಾನ
- ಹಂಚೀಪುರ ಗ್ರಾ.ಪಂ.: ರಸ್ತೆ ಬದಿಯ ಗಿಡಗಂಟಿ ತೆರವಿಗೆ ಆಗ್ರಹಿಸಿ ಪ್ರತಿಭಟನೆ
- ಸರಗೂರು | ಆರ್ ಎಸ್ ಎಸ್ ಬ್ಯಾನ್ ಗೆ ಡಿ ಎಸ್ ಎಸ್ ಒತ್ತಾಯ
- ತಿಪಟೂರು | ಸರಿಯಾಗಿ ಕಾರ್ಯನಿರ್ವಹಿಸದ ಸಂಚಾರ ಸಿಗ್ನಲ್ ಗಳು: ವಾಹನ ಚಾಲಕರಿಂದ ಆಕ್ರೋಶ
- ಕನಕದಾಸರು ಸಮಾಜದ ಓರೆಕೋರೆಗಳನ್ನು ತಿದ್ದಲು ಶ್ರಮಿಸಿದವರು: ಸಿ.ವಿ.ಕುಮಾರ್
- ಅವೈಜ್ಞಾನಿಕ ಸುತ್ತೋಲೆ ವಾಪಸ್ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರಾಂಶುಪಾಲರ, ಉಪನ್ಯಾಸಕರ ಸಂಘ ಆಗ್ರಹ
- ತುಮಕೂರು | ಕಾಂಗ್ರೆಸ್ ಭವನ ಕಟ್ಟಡ ನಿರ್ಮಾಣಕ್ಕೆ ತಡೆಯಾಜ್ಞೆ
- ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ
Author: admin
ಬೆಂಗಳೂರು, ಸೆ.7. ದಂಪತಿ ನಡುವೆ ವೈವಾಹಿಕ ವ್ಯಾಜ್ಯ ಏರ್ಪಟ್ಟಿದ್ದಾಗ ಕೋರ್ಟ್ ಮಗುವನ್ನು ಪತ್ನಿಯ ವಶಕ್ಕೆ ಒಪ್ಪಿಸಿದ್ದರೆ ಆಗ ಪಾಸ್ ಪೋರ್ಟ್ ನೀಡಲು ತಂದೆಯ ಒಪ್ಪಿಗೆ ಪಡೆಯುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ. ಬೆಂಗಳೂರಿನ ಮಹಿಳೆಯೊಬ್ಬರು ಸಲ್ಲಿಸಿದ್ದ ಪ್ರಕರಣದಲ್ಲಿ ನ್ಯಾಯಾಲಯ ಈ ಆದೇಶ ನೀಡಿದೆ. ನ್ಯಾ. ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯಪೀಠ, ತಮ್ಮ ಅರ್ಜಿ ವಜಾಗೊಳಿಸಿರುವ ಪಾಸ್‌ಪೋರ್ಟ್ ಅಧಿಕಾರಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಮಹಿಳೆ ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿ ಈ ಆದೇಶ ಮಾಡಿದೆ. ”ಪ್ರಾದೇಶಿಕ ಪಾಸ್ ಪೋರ್ಟ್ ಅಧಿಕಾರಿ ಅರ್ಜಿದಾರರು ಸಲ್ಲಿಸಿರುವ ಅರ್ಜಿಯನ್ನು ಅವರ ಮಾಜಿ ಪತಿಯ ಉಪಸ್ಥಿತಿ ಕೇಳದೆ ಅಥವಾ ಒಪ್ಪಿಗೆ ಕೇಳದೆ ಪಾಸ್ ಪೋರ್ಟ್ ಅರ್ಜಿಯನ್ನು ಪರಿಗಣಿಸಬೇಕು” ಎಂದು ನ್ಯಾಯಪೀಠ ಆದೇಶ ನೀಡಿದೆ. ಭೇಟಿಯ ಹಕ್ಕು ಮೊಟಕಾಗದು: ಅಲ್ಲದೆ, ಕೇವಲ ಪಾಸ್ ಪೋರ್ಟ್ ನೀಡುವುದರಿಂದ ಮಗುವಿನ ಭೇಟಿಯ ಹಕ್ಕನ್ನು ಸಂಪೂರ್ಣವಾಗಿ ನಿರಾಕರಿಸಿದಂತಾಗುವುದಿಲ್ಲ. ಪ್ರತಿವಾದಿಗಳ ಪರ ವಕೀಲರು, ಪಾಸ್‌ಪೋರ್ಟ್ ಪಡೆದು ಆನಂತರ ವೀಸಾ ಪಡೆದರೆ ಅವರು ವಿದೇಶಕ್ಕೆ ತೆರಳಿದರೆ…
ಬೆಂಗಳೂರು ಸೆಪ್ಟೆಂಬರ್ 7: ಕರ್ನಾಟಕ ಬೆಂಗಳೂರಿನಲ್ಲಿ ತೀವ್ರ ಮಳೆಯ ನಡುವೆ, ಪೂರ್ವ ವಲಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇಂದು ರಜೆ ನೀಡಲಾಗಿದೆ. ನಿನ್ನೆ ರಾತ್ರಿ ಬ್ಲಾಕ್ ಶಿಕ್ಷಣಾಧಿಕಾರಿ ಪ್ರಕಟಣೆ ಹೊರಡಿಸಿದ್ದಾರೆ. ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಮಾಹಿತಿ ನೀಡಲಾಗಿದೆ. ಬ್ಲಾಕ್ ಶಿಕ್ಷಣಾಧಿಕಾರಿಗಳು ಹೊರಡಿಸಿರುವ ಆದೇಶವು ಎಲ್ಲಾ ಖಾಸಗಿ ಮತ್ತು ಸರ್ಕಾರಿ ಶಾಲೆಗಳಿಗೆ ಅನ್ವಯವಾಗುತ್ತದೆ. ಇದೇ ವೇಳೆ ನಗರದಲ್ಲಿ 3 ದಿನಗಳ ಕಾಲ ಹಳದಿ ಅಲರ್ಟ್ ಘೋಷಿಸಲಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಕಳೆದ 50 ವರ್ಷಗಳಲ್ಲಿ ನಗರದಲ್ಲಿ ಸುರಿದ ಎರಡನೇ ಅತಿ ಹೆಚ್ಚು ಮಳೆಯಾಗಿದೆ ಎಂದು ಹೇಳಿದ್ದಾರೆ. ಬೆಂಗಳೂರಿನ ಹಲವು ಭಾಗಗಳಲ್ಲಿ ಮಳೆಯ ಪರಿಸ್ಥಿತಿ ಮಂಗಳವಾರ ರಾತ್ರಿಯವರೆಗೂ ಹಾಗೆಯೇ ಇತ್ತು. ಮಂಗಳವಾರ, ಭಾರತೀಯ ಹವಾಮಾನ ಇಲಾಖೆ (IMD) ನಗರವು ಮುಂಬರುವ 2-3 ದಿನಗಳವರೆಗೆ ಮಳೆಯಿಂದ ಬಿಡುವು ಕಾಣುವುದಿಲ್ಲ ಎಂದು ಭವಿಷ್ಯ ನುಡಿದಿದೆ. ನಗರದ ಯೆಮಲೂರು, ರೈನ್‌ಬೋ ಡ್ರೈವ್ ಲೇಔಟ್, ಸನ್ನಿ ಬ್ರೂಕ್ಸ್ ಲೇಔಟ್,…
ಬೆಂಗಳೂರು, ಸೆಪ್ಟೆಂಬರ್ 07: ಬೆಂಗಳೂರು ನಗರದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 22 ಕಡೆಗಳಲ್ಲಿ ಏಕಕಾಲಕ್ಕೆ ದಾಳಿಯಾಗಿದ್ದು, ದಾಖಲೆಗಳ ಪರಿಶೀಲನೆ ಕಾರ್ಯ ನಡೆಯುತ್ತಿದೆ. ಬೆಂಗಳೂರು ನಗರದ 22 ಪ್ರದೇಶಗಳಲ್ಲಿ ಬುಧವಾರ ಬೆಳಗ್ಗೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. 45ಕ್ಕೂ ಅಧಿಕ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ಕಾರ್ಯದಲ್ಲಿ ತೊಡಗಿದ್ದಾರೆ. ಬುಧವಾರ ಬೆಳಗ್ಗೆ 6.30ಕ್ಕೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಆರಂಭಿಸಿದ್ದಾರೆ. ಬೆಂಗಳೂರು ನಗರದ ಹೈ ಗ್ರೌಂಡ್ಸ್ ಪೊಲೀಸ್ ಠಾಣೆ ಬಳಿ ಇರುವ ಆಸ್ಪತ್ರೆ ಸೇರಿದಂತೆ ವಿವಿಧ ಕಡೆ ದಾಖಲೆಗಳ ಪರಿಶೀಲನೆ ಕಾರ್ಯ ನಡೆಯುತ್ತಿದೆ. ಮಣಿಪಾಲ್ ಸಮೂಹ ಸಂಸ್ಥೆಗಳ ಪ್ರಮುಖ ಕಚೇರಿ ಇರುವ ಉಡುಪಿಯ ಮಣಿಪಾಲ್‌ನಲ್ಲಿಯೂ ದಾಳಿ ನಡೆಸಲಾಗಿದೆ ಎಂಬ ಮಾಹಿತಿ ಸಿಕ್ಕಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು, ಸೆ.7. ರಾಜ್ಯದಲ್ಲಿ ಗೋಮಾಳ, ಸರಕಾರಿ ಜಾಗ ಒತ್ತುವರಿ ಆಗುವುದು ಕಾಮನ್. ಆದರೆ, ಜನರು ಸ್ಮಶಾನದ ಜಾಗವನ್ನೂ ಸಹ ಬಿಡೋದಿಲ್ಲ.ಹೌದು ಅದು ನಿಜ, ಸರ್ಕಾರವೇ ಹೈಕೋರ್ಟ್ ಗೆ ಮಂಗಳವಾರ ನೀಡಿರುವ ಮಾಹಿತಿಯಂತೆ ಒಟ್ಟು 1,141 ಕಡೆ ಸ್ಮಶಾನ ಜಾಗಗಳು ಒತ್ತುವರಿಯಾಗಿದೆಯಂತೆ. ಆ ಪೈಕಿ ಸರ್ಕಾರ ಈವರೆಗೆ ತೆರವು ಮಾಡಿರುವುದು ಕೇವಲ 282, ಇನ್ನೂ 859 ಕಡೆ ಸ್ಮಶಾನ ಜಾಗಗಳ ಒತ್ತುವರಿಯನ್ನು ತೆರವುಗೊಳಿಸಬೇಕಾಗಿದೆ. ರಾಜ್ಯದಲ್ಲಿ ಸ್ಮಶಾನ ಜಾಗ ಇಲ್ಲದ ಗ್ರಾಮ ಮತ್ತು ಪಟ್ಟಣ ಪ್ರದೇಶಗಳಿಗೆ ಅಗತ್ಯ ಜಮೀನು ಒದಗಿಸುವಂತೆ ಹೈಕೋರ್ಟ್ ನೀಡಿದ್ದ ಆದೇಶ ಪಾಲನೆ ಮಾಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಬೆಂಗಳೂರಿನ ಮಹಮ್ಮದ್ ಇಕ್ಬಾಲ್ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯು ಹಿರಿಯ ನ್ಯಾಯಮೂರ್ತಿ ಬಿ. ವೀರಪ್ಪ ಅವರಿದ್ದ ವಿಭಾಗೀಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು. ಈ ವೇಳೆ ಸರ್ಕಾರದ ಪರ ವಕೀಲರು, ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್ ಸಲ್ಲಿಸಿದ ಅನುಪಾಲನಾ ವರದಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.ಸರ್ಕಾರದ ಪರ ವಕೀಲರು ವಾದ…
ಬೆಂಗಳೂರು: ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ(61) ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿಕೊನೆಯುಸಿರೆಳೆದಿದ್ದಾರೆ. ಡಾಲರ್ಸ್ ಕಾಲೋನಿಯ ನಿವಾಸದಲ್ಲಿದ್ದಾಗ ಎದೆನೋವು ಕಾಣಿಸಿಕೊಂಡು ಬಾತ್ ರೂಮ್ ನಲ್ಲಿ ಕುಸಿದುಬಿದ್ದಿದ್ದರು. ಈ ವೇಳೆ ತಕ್ಷಣವೇ ಕುಟುಂಬಸ್ಥರು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದರು. ಅವರಿಗೆ ತಕ್ಷಣ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ತಡ ರಾತ್ರಿ ಸಚಿವ ಉಮೇಶ್ ಕತ್ತಿ ವಿಧಿವಶರಾಗಿದ್ದಾರೆ. ರಾಮಯ್ಯ ಅಸ್ಪತ್ರೆಗೆ ಆರೋಗ್ಯ ಸಚಿವ ಡಾ. ಸುಧಾಕರ್ ಭೇಟಿ ನೀಡಿದ್ದಾರೆ. ಕುಟುಂಬಸ್ಥರು, ಅಭಿಮಾನಿಗಳ ಕಣ್ಣೀರು: ಉಮೇಶ್ ಕತ್ತಿ ಸಾವಿನ ಸುದ್ದಿ ಕೇಳಿ ಬೆಂಬಲಿಗರು, ಅಭಿಮಾನಿಗಳು ಮತ್ತು ಕುಟುಂಬಸ್ಥರು ಆಘಾತಕ್ಕೊಳಗಾಗಿದ್ದಾರೆ. ಸ್ವಗ್ರಾಮ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿರುವ ನಿವಾಸದತ್ತ ಬೆಂಬಲಿಗರು ಆಗಮಿಸಿದ್ದಾರೆ. ಉಮೇಶ್ ಕತ್ತಿ ಅವರ ಅಗಲಿಕೆಯನ್ನು ನಂಬಲಾಗದೆ ಬೆಂಬಲಿಗರು ಕಣ್ಣೀರು ಹಾಕಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಪಾವಗಡ: ತಾಲೂಕಿನ ವೈ.ಎನ್.ಹೊಸಕೋಟೆ ಘಟಕದ ವಿಶ್ವ ಹಿಂದೂ ಪರಿಷತ್, ಬಜರಂಗದಳ ವತಿಯಿಂದ ಮೊದಲನೇ ವರ್ಷದ ಗಣೇಶೋತ್ಸವವನ್ನು ಆಚರಣೆ ಮಾಡಲಾಯಿತು. ಗಣೇಶೋತ್ಸವ ಮೆರವಣಿಗೆಯಲ್ಲಿ ಲೌಡ್ ಸ್ಪೀಕರ್ ಬಳಕೆ ಮಾಡಿದ ಹಿನ್ನೆಲೆಯಲ್ಲಿ ಮೆರವಣಿಯನ್ನು ಪೊಲೀಸರು ತಡೆದು ನಿಲ್ಲಿಸಿದ್ದು, ಭಾರತದ ಸರ್ವೋಚ್ಚ ನ್ಯಾಯಾಲಯದ ಆದೇಶ ಹಾಗೂ ರಾಜ್ಯ ಸರಕಾರದ ಆದೇಶದಂತೆ ಲಘು ಶಬ್ದ ಬಳಕೆ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ವೇಳೆ ಕಾಂಗ್ರೆಸ್ ಸ್ವಾತಂತ್ರ್ಯ ಅಮೃತ ಮಹೋತ್ಸವದ ನಡಿಗೆ ವೇಳೆ ಲೌಡ್ ಸ್ಪೀಕರ್ ಗೆ ಅನುಮತಿ ನೀಡಿದ್ದೀರಿ ಆದರೆ ನಮ್ಮನ್ನೇಕೆ ತಡೆಯುತ್ತಿದ್ದೀರಿ ಎಂದು ಮುಖಂಡರು, ಕಾರ್ಯಕರ್ತರ ಪ್ರಶ್ನಿಸಿದ್ದು, ಇದರಿಂದಾಗಿ ಪೊಲೀಸರು ಹಾಗೂ ಸಾರ್ವಜನಿಕರ ನಡುವೆ ಮಾತಿನ ಚಕಮಕಿ ನಡೆಯಿತು. ಘಟನೆಯನ್ನು ಖಂಡಿಸಿ ಸ್ಥಳದಲ್ಲೇ ಪ್ರತಿಭಟನೆಗೆ ಮುಂದಾದಾಗ ಸಂಘಟಕರ ಜೊತೆ ಮಾತನಾಡಿದ ಪೊಲೀಸರು ಲೌಡ್ ಸ್ಪೀಕರ್ ನಿಯಮಗಳ ಬಗ್ಗೆ ಮನವರಿಕೆ ಮಾಡಿಸಿದ್ದು, ಬಳಿಕ ಡೋಲು, ನೃತ್ಯಗಳ ಮೂಲಕ ಮೆರವಣಿಗೆ ಮುಂದುವರೆಸಲಾಯಿತು. ವರದಿ: ನಂದೀಶ್ ನಾಯ್ಕ ಪಿ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…
ಗುಬ್ಬಿ : ತಾಲೂಕಿನಲ್ಲಿ ವರುಣನ ಆರ್ಭಟಕ್ಕೆ ಚೇಳೂರು ಹೋಬಳಿಯ ಹರಿವೆಸಂದ್ರ ಗ್ರಾಮದಲ್ಲಿ ಎರಡು ಮನೆಗಳು ತಡ ರಾತ್ರಿ ಧರೆಗೆ ಉರುಳಿದ್ದು, ಸಾರ್ವಜನಿಕರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ತಡರಾತ್ರಿ 11 ಗಂಟೆಯ ಸಮಯದಲ್ಲಿ ಭಾರೀ ಮಳೆಗೆ ಮನೆ ಕುಸಿದಿದ್ದು, ಜನಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿದರು ಸಹ ಯಾರು ಸ್ವೀಕರಿಸುತ್ತಿಲ್ಲ ಎಂದು ಸಂತ್ರಸ್ತ ಮಹಿಳೆ ಮಹದೇವಮ್ಮ ದೂರಿದ್ದಾರೆ. ಕೂಡಲೇ ಸರಕಾರ ಈ ಮನೆಗಳಿಗೆ ಪರಿಹಾರ ನೀಡಿ ತಾತ್ಕಾಲಿಕವಾಗಿ ಅವರಿಗೆ ನೆರವು ನೀಡಬೇಕು ಎಂದು ಒತ್ತಾಯ ಮಾಡಿದ್ದಾರೆ. ವರದಿ: ಡಿ.ಮಂಜುನಾಥ್ ಗುಬ್ಬಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಭಾರತೀಯ ಜೀವ ವಿಮಾ ಪ್ರತಿನಿಧಿಗಳು ತಿಪಟೂರು ಜೀವ ವಿಮಾ ಕಚೇರಿ ಮುಂದೆ ತಿಪಟೂರು ಘಟಕದ ಜೀವ ವಿಮಾ ಪ್ರತಿನಿಧಿಗಳ ಅಧ್ಯಕ್ಷ ಬಿ.ಪಿ.ಜಯಪ್ಪ ನೇತೃತ್ವದಲ್ಲಿ ಸಾಂಕೇತಿಕವಾಗಿ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದರು. ಪ್ರೀಮಿಯಂದಾರರು ಸಾಲದ ಮೇಲಿನ ಬಡ್ಡಿ ದರ ಹೆಚ್ಚಳ, ಪ್ರೀಮಿಯಂ ಮೇಲಿನ ಜಿಎಸ್ ಟಿ ಹಿಂತೆಗೆತ ಹಾಗೂ ವಿಮಾ ಏಜೆಂಟ್ ಗಳ ಮೆಡಿಕ್ ಲೈನ್ ಪಿಂಚಣಿ ಸೌಲಭ್ಯ ಗ್ರಾಜುವಿಟಿ ವಿವಿಧ ರೀತಿಯ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು. ಈ ಪ್ರತಿಭಟನೆಯಲ್ಲಿ ಶಾಖ ಘಟಕದ ಅಧ್ಯಕ್ಷರಾದ ಬಿ.ಪಿ.ಜಯಪ್ಪ, ಉಪಾಧ್ಯಕ್ಷರಾದ ಹಾಲುಗೋಣ ಶಿವಾನಂದ್, ಗೊರಗುಂಡನಹಳ್ಳಿ ಗೋವಿಂದಪ್ಪ, ವಿದ್ಯಾಧರ ಸೇರಿದಂತೆ ಹಲವಾರು ಏಜೆಂಟ್ ಗಳು ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಗುಬ್ಬಿ: ತಾಲೂಕಿನ ಸೋಮಲಾಪುರದಿಂದ ಹರಿದು ಹೋಗುವ ಹೇಮಾವತಿ ನಾಲೆ 15ರ ಮಳೆಯ ನೀರಿನಿಂದಾಗಿ ಚಾನಲ್ ಮೇಲಿನ ರಸ್ತೆಗಳು ಮೇಲೆ ನೀರು ಹರಿಯುತ್ತಿದ್ದು ಇದರಿಂದಾಗಿ ಜನರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ನೀರು ಹರಿಯುವ ವೇಗಕ್ಕೆ ಕೆಲವು ಕಡೆ ಬಿರುಕು ಬಿಟ್ಟು ಚಾನೆಲ್ ಹೊಡೆದಿದ್ದು, ರಾತ್ರಿಯಿಂದ ಅಕ್ಕಪಕ್ಕದಲ್ಲಿರುವ ತೋಟಗಳಿಗೆ ನೀರಿನಿಂದ ಜಲವೃತ ವಾಗಿದೆ. ಪರಿಣಾಮವಾಗಿ ತೋಟಗಳಲ್ಲಿ ರೈತರು ಬೆಳೆದ ಬೆಳೆಗಳು ಹಾಳಾಗಿದ್ದು ಸಾಕಷ್ಟು ನಷ್ಟ ಸಂಭವಿಸಿದೆ. ಪಕ್ಕದಲ್ಲಿ ಕುರುಬರ ಪಾಳ್ಯ ಸಣ್ಣ ಗ್ರಾಮವಿದ್ದು, ಇಲ್ಲಿ ತೋಟದ ಮನೆಗಳಲ್ಲಿ ರೈತರು ವಾಸವಾಗಿದ್ದು, ರಾತ್ರಿಯಿಂದ ಹೇಮಾವತಿ ನಾಲೆಯಲ್ಲಿ ಹರಿಯುತ್ತಿರುವ ನೀರು ಮನೆಗಳಿಗೆ ನುಗ್ಗಿ ಜನರು ಪರದಾಡುವಂತಹ ಸ್ಥಿತಿಗೆ ತಲುಪಿದ್ದಾರೆ. ಇಷ್ಟೆಲ್ಲ ಸಂಕಷ್ಟಕ್ಕೆ ಜನರು ಸಿಲುಕಿದ್ದರೂ ಸ್ಥಳಕ್ಕೆ ಹೇಮಾವತಿ ನಾಲಾ ವಲಯದ ಯಾವುದೇ ಅಧಿಕಾರಿಗಳು ಬಾರದೇ ನಿರ್ಲಕ್ಷ್ಯ ವಹಿಸಿದ್ದು, ಇದರ ವಿರುದ್ಧ ಗ್ರಾಮಸ್ಥರು ಹಾಗೂ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವರದಿ: ಡಿ.ಮಂಜುನಾಥ್ ಗುಬ್ಬಿ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…
ಚಿತ್ರದುರ್ಗ: ಐತಿಹಾಸಿಕ ವಾಣಿವಿಲಾಸ ಸಾಗರ ಕೋಡಿ ಹರಿದಿದ್ದು, ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನಗರದ ಪ್ರಮುಖ ಬಡಾವಣೆಗಳಿಗೆ ನೀರು ನುಗ್ಗಿದೆ. ನಗರದ ಸಿ ಎಮ್ ಬಡಾವಣೆಯಲ್ಲಿ ಮನೆಗಳಿಗೆ ನೀರು ನುಗ್ಗಿದ್ದು, ಇಲ್ಲಿನ ಜನರು ತೀವ್ರವಾಗಿ ಸಂಕಷ್ಟಕ್ಕೊಳಗಾಗಿದ್ದಾರೆ. ರಾಜಕಾಲುವೆಯನ್ನು ಸರಿಯಾದ ರೀತಿಯಲ್ಲಿ ನಿರ್ಮಿಸದೇ ಇರುವುದರಿಂದಾಗಿ ಈ ರೀತಿಯ ಸಮಸ್ಯೆಯಾಗಿದೆ ಎಂದು ಸರ್ಕಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜಕಾಲುವೆ ಬಗ್ಗೆ ಜಿಲ್ಲಾಡಳಿತ ಹೆಚ್ಚು ಗಮನ ಹರಿಸಬೇಕಿದೆ. ರಾಜಕಾಲುವೆಯನ್ನು ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕಿದೆ ಎಂದು ಸಿ.ಎಮ್.ಬಡಾವಣೆ ನಿವಾಸಿಗಳು ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ಬಡಾವಣೆಯ ಅಂಗನವಾಡಿ ಕೇಂದ್ರ ಕೂಡ ನೀರಿನಲ್ಲಿ ಮುಳುಗಡೆಯಾಗಿದ್ದು, ಇದರಿಂದಾಗಿ ಮಕ್ಕಳು ಅಂಗನವಾಡಿಗೆ ತೆರಳಲು ಸಾಧ್ಯವಾಗದೇ ಸಂಕಷ್ಟದಲ್ಲಿದ್ದಾರೆ. ಜೊತೆಗೆ ಈ ಭಾಗದಲ್ಲಿ ಬೀದಿ ದೀಪಗಳು ಕೂಡ ಇಲ್ಲ. ರಸ್ತೆಯಲ್ಲಿಯೇ ನೀರು ಹರಿಯುತ್ತಿದ್ದು, ವಿದ್ಯುತ್ ದೀಪ ಇಲ್ಲದ ಕಾರಣ ಇಲ್ಲಿ ಅವಘಡಗಳಿಗೆ ಆಹ್ವಾನ ನೀಡಿದಂತಾಗಿದೆ. ಜಿಲ್ಲಾಡಳಿತ ಈ ಬಗ್ಗೆ ತಕ್ಷಣವೇ ಕ್ರಮಕೈಗೊಂಡು ಮುಂದಾಗುವ ಅನಾಹುತ ತಪ್ಪಿಸಬೇಕಿದೆ ಎಂದು ಇಲ್ಲಿನ ನಿವಾಸಿಗಳು ಮನವಿ ಮಾಡಿದ್ದಾರೆ. ಹಿರಿಯೂರು…