Author: admin

ಬೆಂಗಳೂರಿನಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಉಂಟಾಗಿರುವ ಮಳೆಯ ಅವಾಂತರಗಳು ದೇಶದ ಗಮನ ಸೆಳೆದಿರುವ ಹಿನ್ನೆಲೆಯಲ್ಲಿ ತೆಲಂಗಾಣ ಸಚಿವ ಕೆಟಿ ರಾಮರಾವ್ ಅವರು ಹವಾಮಾನ ಬದಲಾವಣೆಯ ವಿನಾಶಕಾರಿ ಪರಿಣಾಮಗಳಿಂದ ಭಾರತದ ಯಾವುದೇ ನಗರವು ಹೊರತಾಗಿಲ್ಲ ಎಂದು ಹೇಳಿದ್ದಾರೆ. ಕೆಟಿಆರ್‌ ಎಂದೇ ಜನಪ್ರಿಯವಾಗಿರುವ ಸಚಿವರು, ತುರ್ತು ನಗರೀಕರಣದ ಸವಾಲುಗಳನ್ನು ನಿಭಾಯಿಸಲು ನಗರ ಯೋಜನೆ ಮತ್ತು ಆಡಳಿತದಲ್ಲಿ ದಿಟ್ಟ ಸುಧಾರಣೆಗಳನ್ನು ಯೋಜಿಸುವಂತೆ ಕೇಂದ್ರ ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಕರೆ ನೀಡಿದ್ದಾರೆ. ನೀರಿನಿಂದ ಮುಳುಗಿರುವ ಬೆಂಗಳೂರನ್ನು ಅಪಹಾಸ್ಯ ಮಾಡುವ ಎಲ್ಲರಿಗೂ ನಮ್ಮ ನಗರಗಳು ಈಗ ಮಾತಿಗೆ ಸಿಕ್ಕಿವೆ. ಈ ನಗರಗಳು ನಮ್ಮ ಪ್ರಾಥಮಿಕ ಆರ್ಥಿಕ ಇಂಜಿನ್‌ಗಳು. ರಾಜ್ಯಗಳ, ದೇಶದ ಬೆಳವಣಿಗೆಗೆ ಕೊಡುಗೆ ನೀಡುವ ಇವು ವೇಗದ ನಗರೀಕರಣ ಮತ್ತು ಉಪ-ನಗರೀಕರಣದ ಪರಿಣಾಮ ಸಾಕಷ್ಟು ಬಂಡವಾಳವನ್ನು ತುಂಬದ ಕಾರಣ ಮೂಲಸೌಕರ್ಯಗಳು ಕುಸಿಯುತ್ತವೆ ಎಂದು ಟ್ವೀಟ್ ಮಾಡಿದ್ದಾರೆ. ಹವಾಮಾನ ಬದಲಾವಣೆಯ ವಿನಾಶಕಾರಿ ಪರಿಣಾಮಗಳಿಂದ ಇಂದು ಯಾವುದೇ ಭಾರತೀಯ ನಗರವು (ನನ್ನ ರಾಜ್ಯದ ರಾಜಧಾನಿ ಸೇರಿದಂತೆ)…

Read More

ಮಹಾನಗರ ಪಾಲಿಕೆ ಚುನಾವಣೆಯ ನಡೆದು ಒಂದು ವರ್ಷ ಕಳೆದರೂ ಮಹಾಪೌರ ಮತ್ತು ಉಪ ಮಹಾಪೌರರ ಚುನಾವಣೆ ನಡೆದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಪಕ್ಷೇತರರ ಸದಸ್ಯರುಗಳು ಬಿಜೆಪಿ ಸರಕಾರದ ವಿರುದ್ಧ ಕೇಕ್ ಕತ್ತರಿಸುವ ಮೂಲಕ ಪ್ರತಿಭಟನೆ ನಡೆಸಿದರು. ಈ ವೇಳೆ ಚುನಾಯಿತಗೊಂಡ ಮಹಾನಗರ ಸದಸ್ಯರುಗಳು ಕಳೆದ ಒಂದು ವರ್ಷಗಳಿಂದ ಜನರ ಯಾವುದೇ ರೀತಿಯ ಕೆಲಸ ಕಾರ್ಯಗಳು ಆಗುತ್ತಿಲ್ಲ ಮತ್ತು ನಮ್ಮನ್ನು ಆಯ್ಕೆ ಮಾಡಿದ ಜನರಿಗೆ ಉತ್ತರ ಕೊಡುವುದು ಬಹಳ ಕಷ್ಟವಾಗಿದೆ ಎಂದು ಕಿಡಿಕಾರಿದ್ದಾರೆ. ನಮ್ಮಗೆ ನಗರಸಭೆಯ ಸದಸ್ಯರುಗಳಿಗೆ ಚುನಾವಣೆಗಳಲ್ಲಿ ಮತ ಚಲಾಯಿಸುವುದು. ರಾಜಕೀಯ ಉದ್ದೇಶದಿಂದ ನಮ್ಮನ್ನು ಬಳೆಸಿಕೂಡರು. ಆದರೆ ಜನರ ಸೇವೆ ಮಾಡಲು ನಮಗೆ ಆಗುತ್ತಾ ಇಲ್ಲ ಎಂದು ಸಂದರ್ಭದಲ್ಲಿ ಅಸಮಾಧಾನವನ್ನು ವ್ಯಕ್ತಪಡಿಸಿದರು. ಇನ್ನು ಸದಸ್ಯರು ಪ್ರತಿಭಟನೆ ಮಾಡುವ ವೇಳೆ ಮಹಾನಗರ ಪಾಲಿಕೆ ಆವರಣದಲ್ಲಿ ಯಾವುದೇ ರೀತಿ ಪ್ರತಿಭಟನೆ ಮಾಡಬಾರದೆಂದು ಮಹಾನಗರ ಪಾಲಿಕೆಯ ಆಯುಕ್ತ ರುದ್ರೇಶ್ ಘಾಳಿ ಸದಸ್ಯರುಗಳನ್ನು ಹೊರ ಹೋಗಲು ಆದೇಶಿಸಿದರು. ಇದರಿಂದ ತೀವ್ರವಾಗಿ ಅಸಮಾಧಾನಗೊಂಡ ಕಾರ್ಪೊರೇಟರ್ ಗಳು ನಾವು ಮಹಾನಗರ…

Read More

ಗದಗ, ಸೆಪ್ಟೆಂಬರ್‌, 06: ಗದಗ ಜಿಲ್ಲೆಯಲ್ಲಿ ಮಳೆರಾಯ ಆರ್ಭಟಿಸಿದ್ದು, ಜನಜೀವನ ಅಸ್ತವ್ಯಸ್ಥವಾಗಿದೆ. ವರುಣನ ಅಬ್ಬರಕ್ಕೆ ಜಿಲ್ಲೆಯ ಮಜ್ಜೂರಿನಲ್ಲಿ 40ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ಪರಿಣಾಮ ಜನರು ಗುಡ್ಡದಲ್ಲಿ ವಾಸ ಮಾಡುವಂತಹ ಪರಿಸ್ಥಿತಿ ನಿರ್ಮಾಣ ಆಗಿದೆ. ಶಿರಹಟ್ಟಿ ತಾಲೂಕಿನ ಮಜ್ಜೂರು ಗ್ರಾಮದ ಮಕ್ಕಳು, ವೃದ್ಧರು, ಮಹಿಳೆಯರು ಗುಡ್ಡದಲ್ಲಿ ವಾಸ ಮಾಡುತ್ತಿದ್ದಾರೆ. ಮನೆಗಳು ಸಂಪೂರ್ಣ ಜಲಾವೃತವಾಗಿದ್ದು, ಬೇರೆ ಯಾವುದೇ ದಾರಿಯಿಲ್ಲದೇ ಜನರು ಮಕ್ಕಳ್ಳನ್ನು ಕರೆದುಕೊಂಡು ಗುಡ್ಡದಲ್ಲಿ ವಾಸ ಮಾಡಲು ಹೋಗಿದ್ದಾರೆ. ಅಲ್ಲದೇ ರಾತ್ರಿಯಿಡಿ ತತ್ತು ಅನ್ನ ಇಲ್ಲದೇ ಪರದಾಡಿದ್ದಾರೆ. ಆದರೂ ಕೂಡ ನೆರವಿಗೆ ಸ್ಥಳೀಯ ಅಧಿಕಾರಿಗಳು ಇತ್ತ ತಲೆ ಹಾಕುತ್ತಿಲ್ಲ ಎಂದು ಜನರು ಆಕ್ರೋಶ ಹೊರಹಾಕಿದರು. ಇನ್ನು ಮುಂಡರಗಿ ತಾಲೂಕಿನ ಡಂಬಳ ಗ್ರಾಮಕ್ಕೂ ಕೆರೆ ನೀರು ನುಗ್ಗಿದ ಪರಿಣಾಮ ಕೆವಿಜಿ ಬ್ಯಾಂಕ್, ಬಿಸಿಎಂ ಹಾಸ್ಟಲ್ ಜಲಾವೃತಗೊಂಡಿವೆ. ನರಗುಂದ ತಾಲೂಕಿನ ಕುರ್ಲಗೇರಿ ಗ್ರಾಮಕ್ಕೆ ಬೆಣ್ಣೆ ಹಳ್ಳದ ನೀರು ನುಗ್ಗಿ ಬಹುತೇಕ ಮನೆಗಳು ಜಲಾವೃತವಾಗಿವೆ. ಮನೆಯಲ್ಲಿದ್ದ ಧಾನ್ಯಗಳು, ಗೃಹೋಪಯೋಗಿ ವಸ್ತುಗಳು ಸಂಪರ್ಣ ಹಾನಿಯಾಗಿವೆ. ಅಪಾಯದ ಮಟ್ಟ ಮೀರಿ…

Read More

ವಿಜಯಪುರ: ಅಣ್ಣನನ್ನು ತಮ್ಮ ಬರ್ಬರವಾಗಿ ಹತ್ಯೆಗೈದ ಘಟನೆ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ನಡೆದಿದೆ. ಜಗ್ಗೇಶ್ ವಡ್ಡರ್‌ (30) ಹತ್ಯೆಯಾದ ದುರ್ದೈವಿ. ರಾಹುಲ್ ವಡ್ಡರ್ ಕೊಲೆ ಆರೋಪಿ. ನಿತ್ಯ ಮದ್ಯ ಸೇವಿಸಲು ತಮ್ಮನ ಬಳಿ ಅಣ್ಣ ಜಗ್ಗೇಶ್ ಹಣವನ್ನ ಕೇಳುತ್ತಿದ್ದನಂತೆ. ಅಣ್ಣನ ಕಾಟಕ್ಕೆ ರೋಸಿಹೋಗಿದ್ದ ತಮ್ಮ ರಾಹುಲ್, ನಿನ್ನೆ ರಾತ್ರಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾನೆ. ಹಣದ ವಿಚಾರಕ್ಕೆ ರಾತ್ರಿ ಇಬ್ಬರ ಮಧ್ಯೆ ಜಗಳವಾಗಿತ್ತು. ಜಗಳ ವಿಕೋಪಕ್ಕೆ ತಿರುಗಿ ಆಯುಧದಿಂದ ಇರಿದು ಅಣ್ಣನ ಕೊಲೆ ಮಾಡಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಬಿಜೆಪಿ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಅಕ್ಟೋಬರ್ ನಲ್ಲಿ ನೂತನ ಆಯೋಗ ರಚನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ವಿಧಾನಸೌಧದದ ಬ್ಯಾಂಕ್ವೆಟ್ ಹಾಲ್ ನಲ್ಲಿ ಇಂದು ಆಯೋಜಿಸಿದ್ದ ರಾಜ್ಯ ಸರ್ಕಾರಿ ನೌಕರರ ದಿನ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸರ್ಕಾರಿ ನೌಕರರಿಗೆ ಕೊಟ್ಟ ಮಾತಿನಂತೆ ಅಕ್ಟೋಬರ್ ನಲ್ಲಿ ನೂತನ ವೇತನ ಆಯೋಗ ರಚನೆ ಮಾಡಲಾಗುವುದು. ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಶಿಫಾರಸು ಹಾಗೂ ವರದಿ ಸಲ್ಲಿಸಲು ಈ ಆಯೋಗ ರಚಿಸಲಿದ್ದು, ನೌಕರರ ಉಳಿದ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದ್ದಾರೆ. ಆರ್ಥಿಕ ಬಲದ ಆಧಾರದ ಮೇಲೆ ಅಭಿವೃದ್ಧಿ, ಜನರ ಆಶೋತ್ತರಗಳಿಗೆ ಸ್ಪಂದನೆ ಜೊತೆಗೆ ನೌಕರರ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಶಕ್ತವಾಗಿದೆ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮತ್ತೊಂದು ಖಾಸಗಿ ಬ್ಯಾಂಕ್ ಆಗಿರುವ ಫೆಡರಲ್ ಬ್ಯಾಂಕ್, ಕೋಟಕ್ ಮಹೀಂದ್ರಾ ಬ್ಯಾಂಕ್ (Kotak Mahindra Bank) ಜೊತೆ ವಿಲೀನದ ಸುದ್ದಿಯನ್ನು ತಳ್ಳಿಹಾಕಿದೆ. ಇದು ಸೋಮವಾರದ ದೇಶೀಯ ಷೇರು ಮಾರುಕಟ್ಟೆಗಳಲ್ಲಿ ಫೆಡರಲ್ ಬ್ಯಾಂಕ್ ಸ್ಟಾಕ್ ಅನ್ನು 52 ವಾರಗಳ ಗರಿಷ್ಠ ರೂ 129.75 ಕ್ಕೆ ತಳ್ಳಿತು, ಸುಮಾರು 8 ಶೇಕಡಾ ಏರಿಕೆಯಾಗಿದೆ. ಕೋಟಕ್ ಮಹೀಂದ್ರಾ ಬ್ಯಾಂಕ್ ಜೊತೆ ವಿಲೀನದ ಕುರಿತು ಚರ್ಚೆ ನಡೆಯುತ್ತಿದೆ ಎಂಬ ಸುದ್ದಿ ಸಂಪೂರ್ಣ ಸುಳ್ಳು ಎಂದು ಫೆಡರಲ್ ಬ್ಯಾಂಕ್ ಸ್ಪಷ್ಟಪಡಿಸಿದೆ. ಈ ಬಗ್ಗೆ ತಮ್ಮ ಬಳಿ ಯಾವುದೇ ಮಾಹಿತಿ ಇಲ್ಲ ಎಂದು ಸ್ಪಷ್ಟಪಡಿಸಿದರು. ಕಳೆದ ಕೆಲವು ಸೆಷನ್‌ಗಳಲ್ಲಿ ಫೆಡರಲ್ ಬ್ಯಾಂಕ್ ಷೇರುಗಳು 12 ಪ್ರತಿಶತದಷ್ಟು ಗಳಿಸಿವೆ. ವಿಲೀನದ ಕುರಿತು ಚರ್ಚಿಸಲು ಎರಡು ಬ್ಯಾಂಕ್‌ಗಳ ಮಾಲೀಕರು ಇತ್ತೀಚೆಗೆ ಭೇಟಿಯಾಗಿದ್ದಾರೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಪ್ರಸಕ್ತ ಹಣಕಾಸು ವರ್ಷದ (2022 23) ಮೊದಲ ತ್ರೈಮಾಸಿಕದಲ್ಲಿ ಬಡ್ಡಿ ಆದಾಯ ಶೇ.8.14ರಷ್ಟು ಏರಿಕೆಯಾಗಿದೆ. ಕಳೆದ ವರ್ಷ ರೂ.3,355.71 ಕೋಟಿ ಗಳಿಸಿದ ಬಡ್ಡಿ…

Read More

ಬೆಳಗಾವಿ : ಪ್ರತಿಯೊಬ್ಬರ ಜೀವನದಲ್ಲೂ ಶಿಕ್ಷಕರ ಪಾತ್ರ ಅತ್ಯಂತ ಪ್ರಮುಖವಾಗಿದ್ದು, ಜೀವನ ಪರ್ಯಂತ ಪೂಜಿಸಲ್ಪಡುವ ಸ್ಥಾನದಲ್ಲಿ ಶಿಕ್ಷಕರು ನಿಲ್ಲುತ್ತಾರೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಜಿಲ್ಲಾ ಪಂಚಾಯತ ಬೆಳಗಾವಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬೆಳಗಾವಿ, ಗ್ರಾಮೀಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ನಗರದ ಖಾಸಬಾಗ ಸಾಯಿ ಭವನದಲ್ಲಿ ಆಯೋಜಿಸಲಾಗಿದ್ದ 61ನೇ ಶಿಕ್ಷಕರ ದಿನಾಚರಣೆ, ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಹಿರಿದು. ಭಾರತ ಇಂದು ವಿಶ್ವಗುರುವಾಗಿ ನಿಲ್ಲುವುದಕ್ಕೆ ಶಿಕ್ಷಕರೇ ಕಾರಣ. ಇಡೀ ಸಮಾಜದ ಗೌರವಕ್ಕೆ ಶಿಕ್ಷಕರು ಪಾತ್ರರು. ನನ್ನ ಜೀವನದಲ್ಲಿ ನಾನು ಈ ಮಟ್ಟಕ್ಕೇರಲು, ಜೀವನದಲ್ಲಿ ಅಲ್ಪವಾದರೂ ಸಾಧನೆ ಮಾಡಿದ್ದೇನೆಂದರೆ ಅದಕ್ಕೆ ಶಿಕ್ಷಕರೇ ಕಾರಣ ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಇದೇ ಸಮಯದಲ್ಲಿ ಗ್ರಾಮೀಣ ಕ್ಷೇತ್ರದಲ್ಲಿ 2021ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತೀ…

Read More

ಚಿತ್ರದುರ್ಗ: ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮುರುಘಾಮಠದ ಡಾ. ಶ್ರೀ ಶಿವಮೂರ್ತಿ ಮುರುಘಾ ಶರಣರು ತಮ್ಮ ಕುರಿತು ಸುದ್ದಿಗಳನ್ನು ಪ್ರಕಟಿಸದಂತೆ ನ್ಯಾಯಾಲಯದಿಂದ ಪ್ರತಿಬಂಧಕಾಜ್ಞೆಯನ್ನು ಪಡೆದಿದ್ದಾರೆ. ಈ ಹಿಂದೆ ಕೂಡ ನ್ಯಾಯಾಲಯದಿಂದ ಪ್ರತಿಬಂಧಕಾಜ್ಞೆ ತಂದಿರುವ ಹಲವು ಗಣ್ಯರು, ಶಾಸಕರು, ಅಧಿಕಾರಿಗಳು ತಮ್ಮ ಕುರಿತು ಯಾವುದೇ ಸುದ್ದಿಗಳನ್ನು ಪ್ರಕಟ ಮಾಡುತ್ತಿಲ್ಲ. ಹೀಗಾಗಿ ಇಂದಿನಿಂದ ಮುರುಘಾ ಶರಣರ ಪರ ಅಥವಾ ವಿರುದ್ಧವಾದ ಯಾವುದೇ ಸುದ್ದಿಯನ್ನು ಪ್ರಕಟಿಸದಿರಲು ತೀರ್ಮಾನಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು : ರಾಜ್ಯಾದ್ಯಂತ ಭಾರೀ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದ್ದು, ಸಾಕಷ್ಟು ಹಾನಿಯಾಗಿದೆ. ಹೀಗಾಗಿ ನೆರೆಹಾನಿ ಪರಿಹಾರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿಗೆ ತಕ್ಷಣದ ಪರಿಹಾರವಾಗಿ 300 ಕೋಟಿ ರೂ.ಹಾಗೂ ರಾಜ್ಯದ ಉಳಿದ ಭಾಗಕ್ಕೆ 300 ಕೋಟಿ ರೂ. ಬಿಡುಗಡೆಗೆ ಆದೇಶಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಎಲ್ಲ ಜಿಲ್ಲಾಧಿಕಾರಿಗಳ ಜೊತೆಗೆ ಸಭೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆಯಿಂದಾಗಿ ಉಂಟಾಗಿರುವ ಹಾನಿಯನ್ನು ಸರಿಪಡಿಸಲು ಪ್ರವಾಹ ಪೀಡಿತ ಜಿಲ್ಲೆಗಳಿಗೆ ತುರ್ತಾಗಿ 600 ಕೋಟಿ ರೂ. ಘೋಷಿಸಿದ್ದಾರೆ. ರಾಜ್ಯಾದ್ಯಂತ ಭಾರೀ ಮಳೆಯಿಂದಾಗಿ ಆಸ್ತಿ ಹಾನಿಯ ಜೊತೆಗೆ ಬೆಳೆ ಹಾನಿಯಾಗಿದ್ದು, ಪರಿಹಾರ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ತಂಡ ರಾಜ್ಯಕ್ಕೆ ಆಗಮಿಸುತ್ತಿದೆ ಎಂದು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಕಾರವಾರ: ಮಾಜಿ ಶಿಕ್ಷಣ ಸಚಿವ ಪ್ರಭಾಕರ ರಾಣೆ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದಂತ ಮಾಜಿ ಶಿಕ್ಷಣ ಸಚಿವ ಪ್ರಭಾಕರ್ ರಾಣೆ ಅವರು, ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. 1983ರಿಂದ ಮೂರು ಬಾರಿಗೆ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಪ್ರಭಾಕರ್ ರಾಣೆ, ಕಾರವಾರ-ಜೊಯಿಡಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು. 1993ರಲ್ಲಿ ವೀರಪ್ಪ ಮೊಯ್ಲಿ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಶಿಕ್ಷಣ ಸಚಿವರಾಗಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More