Subscribe to Updates
Get the latest creative news from FooBar about art, design and business.
- ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ
- ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ
- ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)
- ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಸ್ವಚ್ಛಗೊಳಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ
- ಕುಣಿಗಲ್: ಮಾ.25ರಂದು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವ
- ಮಧುಗಿರಿ: ಮಾರ್ಚ್ 7ರಿಂದ ಕಬಡ್ಡಿ ಪಂದ್ಯಾಟ
- ಮೋದಿ ಕಾರ್ಯಕ್ರಮಕ್ಕೆ ₹33 ಕೋಟಿ ವೆಚ್ಚ; ಜನರನ್ನು ಕರೆತರಲು ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ ₹6.5 ಕೋಟಿ!
- ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ: ಡಿ.ಕೆ.ಸುರೇಶ್
Author: admin
ಮುಂಬೈ : ಬಾಳಾಸಾಹೇಬ್ ಅವರು ಏಕೈಕ ಹಿಂದೂ ಹೃದಯ ಸಾಮ್ರಾಟ್ ಎಂದು ಹೇಳಿದ್ದು, ಪಕ್ಷದ ಸಂಸ್ಥಾಪಕರಿಗೆ ಭಾರತ ರತ್ನ ನೀಡುವಂತೆ ಶಿವಸೇನೆ ಸಂಸದ ಸಂಜಯ್ ರಾವತ್ ಒತ್ತಾಯಿಸಿದ್ದಾರೆ. ಕೇಂದ್ರ ಸರ್ಕಾರದ ನಿಜವಾಗಿಯೂ ಹಿಂದುತ್ವದ ಬಗ್ಗೆ ಗೌರವವಿದ್ದರೆ, ವೀರ್ ಸಾವರ್ಕರ್ ಜೊತೆಗೆ ಬಾಳಾಸಾಹೇಬ್ ಠಾಕ್ರೆಯವರಿಗೂ ಭಾರತ ರತ್ನ ಪ್ರಶಸ್ತಿಯನ್ನು ಘೋಷಿಸಬೇಕು. ಅವರು ಅದನ್ನು ಏಕೆ ಘೋಷಿಸುತ್ತಿಲ್ಲ.. ಕಳೆದ ಹದಿನೈದು ವರ್ಷಗಳಿಂದ ನಾವು ಈ ಬೇಡಿಕೆಯನ್ನು ಸಲ್ಲಿಸುತ್ತಿದ್ದೇವೆ ಎಂದು ಸಂಜಯ್ ರಾವತ್ ಹೇಳಿದ್ದಾರೆ. ವಾಸ್ತವವಾಗಿ, ಭಾರತ ರತ್ನ ಪ್ರಶಸ್ತಿಯಿಂದ ವೀರ್ ಸಾವರ್ಕರ್ ಮತ್ತು ಬಾಳಾಸಾಹೇಬ್ ಠಾಕ್ರೆ ಅವರ ಸ್ಥಾನಮಾನವು ಹೆಚ್ಚಾಗುವುದಿಲ್ಲ. ಆದರೆ ಅಂತಹ ಮಹಾನ್ ನಾಯಕರಿಗೆ ನೀಡಿದ ನಂತರ ಪ್ರಶಸ್ತಿಯ ಮಹತ್ವವು ಹಲವು ಪಟ್ಟು ಹೆಚ್ಚಾಗುತ್ತದೆ ಎಂದು ಹೇಳಿದ್ದಾರೆ. ಕೆಲವು ಜನರ ರಾಜಕೀಯ ಲಾಭಕ್ಕಾಗಿ ಹಲವು ರಾಜ್ಯ ನಾಯಕರಿಗೆ ಭಾರತ ರತ್ನ ಪ್ರಶಸ್ತಿ ನೀಡಲಾಗಿದೆ ಎಂದು ಸಂಜಯ್ ರಾವತ್ ಆರೋಪಿಸಿದ್ದಾರೆ. ವೀರ್ ಸಾವರ್ಕರ್ ಬಗ್ಗೆ ನಕಲಿ ಪ್ರೀತಿ ಮತ್ತು ಗೌರವವನ್ನು ಪ್ರದರ್ಶಿಸುವುದನ್ನು ನಿಲ್ಲಿಸಿ, ಸಾಧ್ಯವಾದಷ್ಟು…
ಶಿರಸಿ: ಅತಿಕ್ರಮಣವಾಗಿರುವ ಮನೆ ಖಾಲಿ ಮಾಡಿಸಲು ಹೋದ ಸಂದರ್ಭದಲ್ಲಿ ಅರಣ್ಯ ಅಧಿಕಾರಿಯ ಕೈ ಬೆರಳು ಕತ್ತರಿಸಿದ ಘಟನೆ ಸಿದ್ದಾಪುರದ ಗವಿನಗುಡ್ಡದಲ್ಲಿ ನಡೆದಿದೆ. ವಿ ಟಿ ನಾಯ್ಕ ಗಾಯಗೊಂಡ ಅರಣ್ಯ ಇಲಾಖೆ ಅಧಿಕಾರಿ. ಮಹಾಬಲೇಶ್ವರ ಚಂದು ಮರಾಠಿ ಹಲ್ಲೆ ನಡೆಸಿದ ಆರೋಪಿ. ಇವರು ಹೊಸದಾಗಿ ನಿರ್ಮಾಣ ಮಾಡಿಕೊಂಡಿದ್ದ ಮನೆಯನ್ನು ತೆರವುಗೊಳಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದರು. ಇದೇ ವಿಚಾರವಾಗಿ ಗಲಾಟೆ ನಡೆದಿದೆ. ಈ ವೇಳೆ ಅರಣ್ಯ ಅಧಿಕಾರಿಯ ಕೈ ಬೆರಳನ್ನು ಮಹಾಬಲೇಶ್ವರ ಕತ್ತರಿಸಿದ್ದಾನೆ. ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಂಧಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಮುಂಬೈ: ನವೆಂಬರ್ 19ರಂದು ಇಂದಿರಾ ಗಾಂಧಿ ಜನ್ಮ ದಿನ ಇರುವುದರಿಂದ ಭಾರತ್ ಜೋಡೋ ಯಾತ್ರೆಯಲ್ಲಿ ಮಹಿಳೆಯರು ಮಾತ್ರ ಭಾಗವಹಿಸಲಿದ್ದಾರೆ. ಇಂದಿರಾ ಗಾಂಧಿ ನೆನಪಿನಲ್ಲಿ ಈ ಪಾದಯಾತ್ರೆಯಲ್ಲಿ ಭಾಗವಹಿಸಲು ಮಹಿಳೆಯರಿಗೆ ಆದ್ಯತೆ ನೀಡಲಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ. ಇಂದಿರಾಗಾಂಧಿ ಜಯಂತಿಯಂದು ರಾಹುಲ್ ಗಾಂಧಿ ಅವರೊಂದಿಗೆ ಮಹಿಳೆಯರು ಮಾತ್ರ ನಡೆಯಲಿದ್ದಾರೆ. ಇಡೀ ದಿನ ಮಹಿಳೆಯರು ರಾಹುಲ್ ಗಾಂಧಿಯವರೊಂದಿಗೆ ಪಾದಯಾತ್ರೆ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಖಚಿತಪಡಿಸಿದ್ದಾರೆ. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಈ ಹಿಂದೆ ತಮ್ಮ ಅಜ್ಜಿ ಇಂದಿರಾ ಗಾಂಧಿ ಅವರ ಪುಣ್ಯತಿಥಿಯಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದರು. ನೀವು ಈ ದೇಶಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದ್ದೀರಿ. ಆ ತ್ಯಾಗ ವ್ಯರ್ಥವಾಗಲು ನಾನು ಬಿಡುವುದಿಲ್ಲ. ಈ ದೇಶವನ್ನು ಒಗ್ಗೂಡಿಸುತ್ತೇನೆ ಎಂದು ರಾಹುಲ್ ಗಾಂಧಿ ಕುರಿತು ಟ್ವೀಟ್ ಮಾಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…
ವಿಜಯಪುರ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅಂತ್ಯ ಕಾಲ ಹತ್ತಿರವಾಗಿದೆ ಎಂದು ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ಧಾಳಿ ನಡೆಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ಅಂತ್ಯ ಕಾಲ ಹತ್ತಿರವಾಗಿದೆ, ಅದಕ್ಕಾಗಿಯೇ ಈ ತರಹದ ಹೇಳಿಕೆ ನೀಡುತ್ತಿದ್ದಾರೆ. ನನಗೆ ಗೋಕಾಕ್ ಬರಲು ಆಹ್ವಾನ ನೀಡಿದ್ದರು. ಆದ್ದರಿಂದ ನಾನು ಗೋಕಾಕ್ ಗೆ ಹೋಗಿದ್ದೆ, ಆ ಕ್ಷೇತ್ರಕ್ಕೆ ಹೋಗಲು ಯಾರಿಗೂ ಧಮ್ ಇಲ್ಲ ಎನ್ನುವಂತಾಗಿತ್ತು ಎಂದರು. ಸತೀಶ್ ಜಾರಕಿಹೊಳಿ ಅವರ ತಪ್ಪನ್ನು ಸರಿಮಾಡಿಕೊಳ್ಳಬೇಕು, ಇಂತಹ ಹೇಳಿಕೆಗಳನ್ನು ನೀಡಬಾರದು. ಅವರ ಅಂತ್ಯ ಕಾಲ ಹತ್ತಿರವಾಗುತ್ತಿದೆ ಎಂದು ಕಿಡಿಕಾರಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಹಾರಾಷ್ಟ್ರ : ಆರ್ಡರ್ ಮಾಡಿದ ಮಟನ್ ಸೂಪ್ನಲ್ಲಿ ಅನ್ನವನ್ನು ಕಂಡ ಇಬ್ಬರು ಯುವಕರು ವೇಟರ್ನನ್ನು ಹತ್ಯೆ ಮಾಡಿರುವ ಘಟನೆ ಪಿಂಪಲ್ ಸೌದಾಗರ್‌ನ ಸಾಸರವಾಡಿಯಲ್ಲಿ ನಡೆದಿದೆ. ಮೃತರನ್ನು ಮಂಗೇಶ್ ಸಂಜಯ್ ಪೋಸ್ತೆ(19) ಎಂದು ಗುರುತಿಸಲಾಗಿದೆ. ಆರೋಪಿಗಳಾದ ವಿಜಯರಾಜ್ ವಾಘಿರೆ ಮತ್ತು ಆತನ ಸಹಚರ ತಲೆ ಮರೆಸಿಕೊಂಡಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಪೊಲೀಸರ ಪ್ರಕಾರ, ಆರೋಪಿಗಳಿಬ್ಬರು ಹೋಟೆಲ್ ಗೆ ತಿನ್ನಲು ಬಂದಿದ್ದರು. ವಿಜಯರಾಜ್ ಆರ್ಡರ್ ಮಾಡಿದ ಮಟನ್ ಸೂಪ್ನಲ್ಲಿ ಅನ್ನದ ಕಣಗಳಿದ್ದವು. ಇದರಿಂದಾಗಿ ವೇಟರ್ ಮತ್ತು ವಿಜಯರಾಜ್ ನಡುವೆ ತೀವ್ರ ವಾಗ್ವಾದ ನಡೆದಿದೆ. ಮಂಗೇಶ್ ಜೊತೆ ಉಪಾಹಾರ ಗೃಹದ ಉದ್ಯೋಗಿ ಅಜಿತ್ ಮತ್ತು ಸಚಿನ್ನ್ನು ಮರದ ಕೋಲಿನಿಂದ ಹೊಡೆದಿದ್ದಾರೆ. ಇದರಲ್ಲಿ ಗಂಭೀರವಾಗಿ ಗಾಯಗೊಂಡ ಮಂಗೇಶ್ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಶ್ರೀಗಂಧ ನೀತಿ -2022ಕ್ಕೆ ಸಚಿವ ಸಂಪುಟ ಸಭೆ ಸಮ್ಮತಿ ನೀಡಿದ್ದು, ರೈತರು ತಮ್ಮ ಜಮೀನಿನಲ್ಲಿ ಶ್ರೀಗಂಧ ಬೆಳೆದು ಮಾರಾಟ ಮಾಡಬಹುದು ಎಂದು ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮುಕ್ತ ಮಾರುಕಟ್ಟೆಯಲ್ಲಿ ಶ್ರೀಗಂಧ ಮಾರಾಟ ಮಾಡಬಹುದು. ಜಾಗತಿಕ ಮಟ್ಟದಲ್ಲಿ ಶ್ರೀಗಂಧಕ್ಕೆ ಹೆಚ್ಚಿನ ಬೇಡಿಕೆ ಇದೆ. ಹೀಗಾಗಿ ಶ್ರೀಗಂಧ ನೀತಿ ಸರಳೀಕರಣ ಮಾಡಲಾಗಿದೆ. ಶ್ರೀಗಂಧ ಬೆಳೆಯುವ ರೈತರಿಗೆ ಮಾರ್ಗದರ್ಶನ ನೀಡಲಾಗುವುದು. ರೈತರು ಬೆಳೆಯುವ ಶ್ರೀಗಂಧಕ್ಕೆ ರಕ್ಷಣೆ ಒದಗಿಸಲಾಗುವುದು. ಪ್ರಸ್ತುತ ದಿನಗಳಲ್ಲಿ ಶ್ರೀಗಂಧ ಲಭ್ಯತೆಯ ಕೊರತೆ ಇದೆ. ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಿಗೆ ಶ್ರೀಗಂಧ ಬೇಕಾಗಿದೆ. ಹೀಗಾಗಿ ಶ್ರೀಗಂಧ ಮಾರಾಟಕ್ಕೆ ಇದ್ದ ನಿರ್ಬಂಧಗಳನ್ನು ತೆಗೆದುಹಾಕಲಾಗಿದೆ ಎಂದು ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ನವದೆಹಲಿ : ದೇಶೀಯ ಸಿಲಿಂಡರ್ ಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಎಲ್ಪಿಜಿ ಸಿಲಿಂಡರ್ಗಳು ಶೀಘ್ರದಲ್ಲೇ ಕ್ಯೂಆರ್ ಕೋಡ್ಗಳೊಂದಿಗೆ ಬರಲಿವೆ. ಟ್ರ್ಯಾಕಿಂಗ್ ಮತ್ತು ಟ್ರೇಸ್ ಉಪಕ್ರಮವು ಸಿಲಿಂಡರ್ ಕಳವನ್ನು ತಡೆಯಲು ನೆರವಾಗಲಿದೆ.ಜೊತೆಗೆ ಸಿಲಿಂಡರ್‌ಗಳ ಉತ್ತಮ ದಾಸ್ತಾನು ನಿರ್ವಹಣೆಯನ್ನು ಪತ್ತೆಹಚ್ಚಲು ಮತ್ತು ಖಚಿತಪಡಿಸಿಕೊಳ್ಳಲು ಕೂಡ ಅನುಕೂಲ ಮಾಡಿಕೊಡಲಿದೆ. ಕ್ಯೂಆರ್ ಕೋಡ್ ಅನ್ನು ಅಸ್ತಿತ್ವದಲ್ಲಿರುವ ಸಿಲಿಂಡರ್ ಗಳಲ್ಲಿ ಅಂಟಿಸಲಾಗುವುದು ಮತ್ತು ಹೊಸದಕ್ಕೆ ಕೂಡ ಬೆಸುಗೆ ಹಾಕಲಾಗುತ್ತದೆ. ಕ್ಯೂಆರ್ ಕೋಡ್ ಸಕ್ರಿಯಗೊಳಿಸಿದಾಗ ಇದು ಗ್ಯಾಸ್ ಸಿಲಿಂಡರ್ ಗಳ ಕಳ್ಳತನ, ಟ್ರ್ಯಾಕಿಂಗ್ ಮತ್ತು ಟ್ರೇಸಿಂಗ್ ದಾಸ್ತಾನು ನಿರ್ವಹಣೆ ಹೀಗೆ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ಸಹಾಯಕವಾಗಲಿದೆ ಎಂದು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಟ್ವೀಟ್ ಮಾಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮುಂಬೈ : ಮಹಾರಾಷ್ಟ್ರದಲ್ಲಿ ನಡೆದ 13 ವರ್ಷಗಳ ಹಿಂದಿನ ಜೋಡಿ ಕೊಲೆ ಪ್ರಕರಣದಲ್ಲಿ ಭೂಗತ ಪಾತಕಿ ಛೋಟಾ ರಾಜನ್ ಸೇರಿ ಎಲ್ಲ ನಾಲ್ವರು ಆರೋಪಿಗಳನ್ನು ಮುಂಬೈ ವಿಶೇಷ ಸಿಬಿಐ ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ನಾಲ್ವರನ್ನೂ ಆರೋಪ ಮುಕ್ತ ಮಾಡಲಾಗಿದೆ. 2009ರ ಜುಲೈ 29ರಂದು ಭಿಂಡಿ ಬಜಾರ್‌ನಲ್ಲಿ ಮತ್ತೊಬ್ಬ ಭೂಗತ ಪಾತಕಿ ಛೋಟಾ ಶಕೀಲ್ ಗ್ಯಾಂಗ್‌ನ ಆಸಿಫ್ ದಾಧಿ ಅಲಿಯಾಸ್ ಛೋಟೆ ಮಿಯಾನ್ ಮತ್ತು ಶಕೀಲ್ ಮೋದಕ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಛೋಟಾ ರಾಜನ್ ಈ ಜೋಡಿ ಕೊಲೆಗೆ ಸಂಚು ರೂಪಿಸಿದ್ದ ಆರೋಪ ಹೊತ್ತಿದ್ದರು. ಮೊಹಮ್ಮದ್ ಅಲಿ ಜಾನ್, ಪ್ರಣಯ್ ರಾಣೆ ಮತ್ತು ಉಮ್ಮದ್ ಕೂಡ ಪ್ರಕರಣದಲ್ಲಿ ಆರೋಪಿಗಳಾಗಿದ್ದರು. ಆದರೆ, ಅಪರಾಧವನ್ನು ಸಾಬೀತುಪಡಿಸುವಲ್ಲಿ ಸಾಧ್ಯವಾಗಿಲ್ಲ. ಸಾಕ್ಷ್ಯಾಧಾರಗಳ ಕೊರತೆ, ಗುರುತಿನ ಪರೇಡ್ ವಿಫಲತೆ, ಶಸ್ತ್ರಾಸ್ತ್ರಗಳು ಮತ್ತು ಗುಂಡುಗಳು ಹೊಂದಿಕೆಯಾಗದ ಕಾರಣ ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ. ಮುಂಬೈ ಸೆಷನ್ಸ್ ನ್ಯಾಯಾಲಯದ ವಿಶೇಷ ಸಿಬಿಐ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಎ.ಎಂ.ಪಾಟೀಲ್ ತೀರ್ಪು ಪ್ರಕಟಿಸಿದ್ದಾರೆ.…
ಶಿರಸಿ: ಅತಿಕ್ರಮಣವಾಗಿರುವ ಮನೆ ಖಾಲಿ ಮಾಡಿಸಲು ಹೋದ ಸಂದರ್ಭದಲ್ಲಿ ಅರಣ್ಯ ಅಧಿಕಾರಿಯ ಕೈ ಬೆರಳು ಕತ್ತರಿಸಿದ ಘಟನೆ ಸಿದ್ದಾಪುರದ ಗವಿನಗುಡ್ಡದಲ್ಲಿ ನಡೆದಿದೆ. ವಿ ಟಿ ನಾಯ್ಕ ಗಾಯಗೊಂಡ ಅರಣ್ಯ ಇಲಾಖೆ ಅಧಿಕಾರಿ. ಮಹಾಬಲೇಶ್ವರ ಚಂದು ಮರಾಠಿ ಹಲ್ಲೆ ನಡೆಸಿದ ಆರೋಪಿ. ಇವರು ಹೊಸದಾಗಿ ನಿರ್ಮಾಣ ಮಾಡಿಕೊಂಡಿದ್ದ ಮನೆಯನ್ನು ತೆರವುಗೊಳಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದರು. ಇದೇ ವಿಚಾರವಾಗಿ ಗಲಾಟೆ ನಡೆದಿದೆ. ಈ ವೇಳೆ ಅರಣ್ಯ ಅಧಿಕಾರಿಯ ಕೈ ಬೆರಳನ್ನು ಮಹಾಬಲೇಶ್ವರ ಕತ್ತರಿಸಿದ್ದಾನೆ. ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಂಧಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬಿಜೆಪಿಯವರು ಚುನಾವಣೆಯಲ್ಲಿ ಅಕ್ರಮ ಮಾಡಲು ಮತದಾರರ ಪಟ್ಟಿ ಪರಿಷ್ಕರಣೆಯನ್ನು ಖಾಸಗಿ ಸಂಸ್ಥೆಗೆ ಗುತ್ತಿಗೆ ಕೊಟ್ಟಿದ್ದಾರೆ. ಇದು ಮಂತ್ರಿಗಳ ಬೇನಾಮಿ ಹೆಸರಿನಲ್ಲಿ ಇರುವ ಕಂಪನಿ ಎಂದು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಇವಿಎಂ ಇರುವವರೆಗೆ ಬಿಜೆಪಿಗೆ ಯಾವುದೇ ಸಮಸ್ಯೆ ಇಲ್ಲ. ಅಕ್ರಮದ ರೀತಿಯಲ್ಲೇ ಮತ್ತೆ ಅಧಿಕಾರಕ್ಕೆ ಬರಲು ಬಿಜೆಪಿ ಪ್ರಯತ್ನಿಸುತ್ತಿದೆ. ಇದರ ಬಗ್ಗೆ ನಾನು ಹೆಚ್ಚಾಗಿ ತಲೆ ಕೆಡಿಸಿಕೊಳ್ಳುವುದಿಲ್ಲ. ಎರಡೂ ರಾಷ್ಟ್ರೀಯ ಪಕ್ಷಗಳ ಬಗ್ಗೆ ಜನರು ಎಚ್ಚೆತ್ತುಕೊಳ್ಳಬೇಕು. ಸಚಿವ ಅಶ್ವತ್ಥ್ ನಾರಾಯಣ ವಿರುದ್ಧ ನಾನು ಸಾಫ್ಟ್ ಆಗಿಲ್ಲ. ಬಿಜೆಪಿ ಎಷ್ಟೇ ಕುತಂತ್ರ ಮಾಡಿದರೂ ಅಧಿಕಾರಕ್ಕೆ ಬರಲು ಆಗುವುದಿಲ್ಲ. ಮುಂದೆ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲಿದೆ. ಆಗ ಅಕ್ರಮ ಎಸಗಿರುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ಚನ್ನಪಟ್ಟಣ ತಾಲೂಕಿಗೆ ಮನೆಗಳ ಮಂಜೂರಾತಿ ವಿಚಾರದಲ್ಲಿ ಆಗಿರುವ ಸಮಸ್ಯೆಗಳ ಕುರಿತು ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ನನ್ನ ಪತ್ರಗಳಿಗೆ ಸೋಮಣ್ಣ ಹೇಗೆ ಸ್ಪಂದಿಸಿದರು ಎನ್ನುವುದು ಎಲ್ಲರಿಗೂ ಗೊತ್ತಿದೆ. ಮೂರು ಸಾವಿರ ಮನೆಗಳಿಗೆ 60 ಕೋಟಿ ಬೇಕಿತ್ತು. ಆದರೆ ಚುನಾವಣೆಗಾಗಿ…