Subscribe to Updates
Get the latest creative news from FooBar about art, design and business.
- ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ
- ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ
- ತುಮಕೂರು: ವಿಮೆ ಹಣ, ಮದ್ಯದ ಅಮಲಿಗೆ ನಡೆದಿದ್ದ 3 ಭೀಕರ ಕೊಲೆ ಕೇಸ್ ಭೇದಿಸಿದ ಪೊಲೀಸರು; 7 ಮಂದಿ ಬಂಧನ
- ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ
- ತುಮಕೂರು: ಆನ್ಲೈನ್ ಕೌನ್ಸಿಲಿಂಗ್ ಮೂಲಕ 41 ಸರ್ಕಾರಿ ನೌಕರರ ವರ್ಗಾವಣೆ
- ವೃದ್ದೆಯನ್ನು ಕೊಲೆ ಮಾಡಿ ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ
- ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ
- ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ
Author: admin
ಮಂಡ್ಯ: ನಾನು ರೈತನ ಮಗ ರೈತರ ಸಮಸ್ಯೆ ಅರಿವಿದೆ, ಒಂದು ಬಾರಿ ಅವಕಾಶ ನೀಡಿದರೆ ಪ್ರಾಮಾಣಿಕವಾಗಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಧಿಕೃತ ಅಭ್ಯರ್ಥಿ ಎಚ್.ಟಿ.ಮಂಜು ರವರು ಮತದಾರರಲ್ಲಿ ಮನವಿ ಮಾಡಿದರು ತಾಲೂಕು ಅಧ್ಯಕ್ಷ ಜಾನಕಿರಾಮ್ ರವರ ನೇತೃತ್ವದಲ್ಲಿ ಜೆಡಿಎಸ್ ಅಧಿಕೃತ ಅಭ್ಯರ್ಥಿ ಎಚ್.ಟಿ.ಮಂಜುರವರು ಕಾರ್ಯಕರ್ತರ ಜೊತೆಗೂಡಿ ಕೆ.ಆರ್.ಪೇಟೆ ತಾಲೂಕಿನ ಸಂತೆಬಾಚಹಳ್ಳಿ ಹೋಬಳಿಯ ನಾಯಕನಹಳ್ಳಿ,ಬಿಕ್ಕಸಂದ್ರ, ಅಪ್ಪನಹಳ್ಳಿ, ಮಾವಿನಕಟ್ಟೆ ಕೋಪಲು, ಮಾಳಗೂರು, ಆದಿಹಳ್ಳಿ, ಗೊರವಿ, ಹೆತ್ತಗೋನಹಳ್ಳಿ ಸೇರಿದಂತೆ ಹಲವಾರು ಗ್ರಾಮಗಳ ಮತದಾರ ಮನೆಗಳಿಗೆ ತೆರಳಿ ಮತಯಾಚಿಸಿದರು. ನಾನು ಒಬ್ಬ ಬಡ ಕುಟುಂಬ ರೈತನ ಮಗ. ರೈತರ ಕಷ್ಟ ಏನು ಎಂದು ನನಗೂ ತಿಳಿದಿದೆ. 2023 ವಿಧಾನಸಭಾ ಚುನಾವಣೆಯಲ್ಲಿ ನಿಮ್ಮ ಮತವನ್ನು ನೀಡಿ, ನಿಮ್ಮ ಸೇವೆಗೆ ಅವಕಾಶ ಮಾಡಿಕೊಟ್ಟಲ್ಲಿ ತಾಲೂಕಿನ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ. ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬಂದರೆ, ರೈತರು ಯಾವುದೇ ಸಾಲ ಮಾಡದೇ ಕೃಷಿ ಕಾರ್ಯದಲ್ಲಿ ತೊಡಗಲು ಅನುಕೂಲವಾಗಲಿದೆ ಎಂದು ಅವರು ಹೇಳಿದರು. ಬಳಿಕ…
ತುರುವೇಕೆರೆ: ಪಟ್ಟಣದ ತಾಲೂಕು ಆಡಳಿತದಿಂದ ಜನವರಿ 26ನೇ ಗುರುವಾರ ಗಣರಾಜ್ಯೋತ್ಸವದ ಪೂರ್ವ ಸಾಧ್ಯತೆಯನ್ನು ಕೈಗೊಳ್ಳಲು ತಾಲೂಕು ಕಚೇರಿಯಲ್ಲಿ ಶಾಸಕರಾದ ಮಸಾಲ ಜಯರಾಮ್ ರವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ತಾಲೂಕು ಆಡಳಿತದ ಎಲ್ಲಾ ಇಲಾಖೆಗಳಿಗೂ ಸಭೆಯ ಬಗ್ಗೆ ಮಾಹಿತಿ ನೀಡಿದ್ದು, ಅದರಲ್ಲಿ ಕೆಲವು ಇಲಾಖೆಗಳು ಪೂರ್ವಭಾವಿ ಸಭೆಗೆ ಹಾಜರಾಗಿರಲಿಲ್ಲ. ಇದನ್ನು ಗಮನಿಸಿದ ಶಾಸಕ ಮಸಾಲ ಜಯರಾಮ್, ಹಾಜರಾಗದ ಇಲಾಖೆಗಳಿಗೆ ತಕ್ಷಣ ನೋಟಿಸ್ ನೀಡಿ ಎಂದು ತಾಲೂಕು ದಂಡಾಧಿಕಾರಿಗಳಾದ ವೈ.ಎಂ.ರೇಣು ಕುಮಾರ್ ರವರಿಗೆ ಸೂಚಿಸಿದರು. ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಬಾರದೆ ಇದ್ದರೆ, ಅವರ ವಿರುದ್ಧ ಕಾನೂನು ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಇದೇ ವೇಳೆ ಅವರು ಹೇಳಿದರು. ಪೂರ್ವಭಾವಿ ಸಭೆಯಲ್ಲಿ ಕೆಲವೊಂದು ಇಲಾಖೆಗಳು ಹಾಜರಿದ್ದು, ಆಯಾ ಇಲಾಖೆಯ ಜವಾಬ್ದಾರಿಗಳನ್ನು ನೀಡಿದರು. ಈ ಸಭೆಯಲ್ಲಿ ತಾಲೂಕು ದಂಡಾಧಿಕಾರಿಗಳಾದ ವೈ.ಎಂ. ರೇಣು ಕುಮಾರ್, ತಾಲೂಕು ಕಾರ್ಯನಿರ್ವಹಣಾಧಿಕಾರಿ ಸತೀಶ್ ಕುಮಾರ್, ಮಾಜಿ ಶಾಸಕ ಎಂ.ಡಿ.ಲಕ್ಷ್ಮೀನಾರಾಯಣ್, ಮುಖಂಡರಾದ ಕೊಂಡಜ್ಜಿ ವಿಶ್ವನಾಥ್ , ಬುಗುಡನಹಳ್ಳಿ ಕೃಷ್ಣಮೂರ್ತಿ…
ಧಾರವಾಡ: ಜಿಲ್ಲೆಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಮಲಗಿದ್ದ ಭಿಕ್ಷುಕಿಯ ಮೇಲೆ ಬೀದಿ ನಾಯಿಗಳು ದಾಳಿ ಮಾಡಿ ಸಾಯಿಸಿದ ಘಟನೆ ಉಪ್ಪಿನ ಬೆಟಗೇರಿ ಗ್ರಾಮದ ಖಬರಸ್ತಾನ್ ಬಳಿ ಘಟನೆ ನಡೆದಿದೆ. ಮಲಗಿದ್ದ ಭಿಕ್ಷುಕಿಯನ್ನು ಬೀದಿ ನಾಯಿಗಳು ಕಚ್ಚಿ ಎಳೆದಾಡಿದೆ. ಪರಿಣಾಮ ಭಿಕ್ಷುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಗರಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ: ಮಸೀದಿ ಪಾಲಿಟಿಕ್ಸ್ ಸದ್ದು ಜೋರಾಗಿ ಕೇಳಿ ಬಂದಿದೆ. ಮನೆಯಲ್ಲಿ ಅಕ್ರಮವಾಗಿ ಮಸೀದಿ ನಿರ್ಮಾಣ ಆರೋಪ ಕೇಳಿಬಂದಿದ್ದು, ಮಸೀದಿ ವಿವಾದ ಭುಗಿಲೆದ್ದಿದೆ. ಮಸೀದಿ ತೆರೆವುಗೊಳಿಸುವುದಕ್ಕೆ ಹೋರಾಟ ಶುರುವಾಗಿದೆ.ಆದರೆ ಆ ಮಸೀದಿ ತೆರವುಗೊಳಿಸದಂತೆ ಪಾಲಿಕೆ ಆಯುಕ್ತರಿಗೆ ಒತ್ತಡ ಹೇರಿದ ಆರೋಪ ಕೇಳಿಬಂದಿದೆ. ಶಾಸಕಿಯೊಬ್ಬರು ವಿರುದ್ಧ ಒತ್ತಡ ಹಾಕಿದ್ದಾರೆ ಎನ್ನಲಾಗಿದೆ. ಸಾರಥಿ ನಗರದಲ್ಲಿದ್ದ ಮನೆಯನ್ನೇ ಫಾತೀಮಾ ಮಸೀದಿಯಾಗಿ ನಿರ್ಮಾಣ ಮಾಡಿ ವಕ್ಫ್ ಬೋರ್ಡ್ಗೆ ಹಸ್ತಾಂತರ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ವಸತಿ ಯೋಜನೆಗೆ ಮೀಸಲಿದ್ದ ಜಾಗದಲ್ಲಿ ಮಸೀದಿ ನಿರ್ಮಾಣ ಮಾಡಿದ್ದಾರೆ. ಚಾಲಕರ ರಹವಾಸಿಗಳ ಸಂಘದಿಂದ ವಸತಿಗಾಗಿ ನಿವೇಶನ ಹಂಚಿಕೆ ಮಾಡಲಾಗುತ್ತಿತ್ತು. ಆದರೆ ಇದೀಗ ಮನೆ ನಿರ್ಮಾಣದ ಜಾಗದಲ್ಲಿ ಮಸೀದಿ ನಿರ್ಮಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಮಸೀದಿ ನಿರ್ಮಿಸಿದ್ದಕ್ಕೆ ಬಿಜೆಪಿ ಮತ್ತು ಹಿಂದೂ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ವೇಳೆ ಅಕ್ರಮವಾಗಿ ಮಸೀದಿ ನಿರ್ಮಿಸಿರುವ ತೆರವಿಗೆ ಬಿಜೆಪಿ ಆಗ್ರಹಿಸಿದೆ. ಈ ವಿವಾರವಾಗಿ ಬಿಜೆಪಿಯವರು ಇಂದು ಬೆಳಗಾವಿ ಪಾಲಿಕೆ ಆಯುಕ್ತರಿಗೆ ದೂರು ನೀಡಲಿದ್ದಾರೆ. ಒಂದು ವಾರದ ಒಳಗೆ…
ವಾಲ್ಮೀಕಿ ಭವನದ ನಿರ್ಮಾಣ ಹಂತದ ಸಂಪ್ ನಲ್ಲಿ ಬಿದ್ದು ನರ್ಸರಿಯಲ್ಲಿ ಓದುತ್ತಿದ್ದ ಇಬ್ಬರು ಮಕ್ಕಳು ಸಾವನ್ನಪ್ಪಿರುವ ದುರ್ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಗೂರ್ಲಹೊಸೂರ ಕಾಲೋನಿಯಲ್ಲಿ ನಡೆದಿದೆ. ನಾಲ್ಕು ವರ್ಷದ ಶ್ಲೋಕ ಗುಡಿ ಹಾಗೂ ಚಿದಾನಂದ ಸಾಳುಂಕೆ ಮೃತ ದುರ್ದೈವಿಗಳು. ಪ್ರಾಥಮಿಕ ಶಾಲೆಯಲ್ಲಿ ನರ್ಸರಿ ವಿದ್ಯಾಭ್ಯಾಸ ಮಾಡುತ್ತಿದ್ದ ಮಕ್ಕಳು ಮಧ್ಯಾಹ್ನ ಆಟವಾಡಲು ಶಾಲೆಯಿಂದ ಹೊರಬಂದಿದ್ದಾರೆ. ಈ ವೇಳೆ ನೀರಿನ ಸಂಪ್ ನಲ್ಲಿ ಬಿದ್ದು ಇಬ್ಬರೂ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಸವದತ್ತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡಿ ಸಿದ್ದು ನಿಜ ಕನಸುಗಳು ಎಂಬ ಪುಸ್ತಕ ಬಿಡುಗಡೆಗೆ ಸಜ್ಜಾಗಿದ್ದ ಬಿಜೆಪಿಗೆ ನಿರಾಸೆಯಾಗಿದೆ. ಪುಸ್ತಕ ಬಿಡುಗಡೆಗೆ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ತಡೆ ನೀಡಿದೆ. ಸಚಿವ ಅಶ್ವತ್ಥನಾರಾಯಣ ಸೇರಿದಂತೆ ಬಿಜೆಪಿ ನಾಯಕರು ಇಂದು ಸಿದ್ದರಾಮಯ್ಯ ವಿರುದ್ಧ ಪುಸ್ತಕ ಬಿಡುಗಡೆಗೆ ಸಿದ್ಧತೆ ನಡೆಸಿದ್ದರು. ಪುಸ್ತಕ ಬಿಡುಗಡೆಗೆ ತಡೆ ಕೋರಿ ವರುಣಾ ಕ್ಷೇತ್ರದ ಕಾಂಗ್ರೆಸ್ ಶಾಸಕ, ಸಿದ್ದರಾಮಯ್ಯನವರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಸಿಟಿ ಸಿವಿಲ್ ಕೋರ್ಟ್, ಪುಸ್ತಕ ಬಿಡುಗಡೆಗೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಅಲ್ಲದೇ ಸಚಿವ ಅಶ್ವತ್ಥನಾರಾಯಣ ಸೇರಿ ಹಲವರಿಗೆ ಕೋರ್ಟ್ ನೋಟೀಸ್ ಜಾರಿ ಮಾಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ರಾಜ್ಯ ವಿಧಾನಸಭೆ ಚುನಾವಣೆಗೆ ಸಿದ‍್ಧತೆ ಆರಂಭಿಸಿರುವ ಕಾಂಗ್ರೆಸ್ ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆ ಸಿದ್ಧಪಡಿಸಲು ತೀರ್ಮಾನಿಸಿದೆ. ಈ ಕುರಿತು ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ರಾಜ್ಯದ ಜನರಿಗೆ ಬಿಜೆಪಿಯವರು ಕೊಟ್ಟ ಭರವಸೆಯನ್ನ ಈಡೇರಿಸಿಲ್ಲ, ದಿನಬಳಕೆಯ ವಸ್ತುಗಳ ಬೆಲೆ ಶೇಕಡಾ 60ರಷ್ಟು ಹೆಚ್ಚಾಗಿದೆ. ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆ ಸಿದ್ಧಪಡಿಸುವ ಮೂಲಕ ಮಹಿಳೆಯರ ಪರವಾಗಿ ನಿಲ್ಲಲು ಕಾಂಗ್ರೆಸ್ ನಿರ್ಧರಿಸಿದೆ ಎಂದರು. ಸ್ಯಾಂಟ್ರೋ ರವಿ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಡಿ.ಕೆ ಶಿವಕುಮಾರ್, ಸ್ಯಾಂಟ್ರೊ, ಆಡಿ, ಮರ್ಸಿಡೀಸ್ ಎಂದು ಟಿವಿಯಲ್ಲಿ ತೋರಿಸುತ್ತಿದ್ದರು. ಅವರಿಗೂ ಬಿಜೆಪಿಯವರಿಗೂ ಇರುವ ಸಂಬಂಧ ನೀವೇ ತೋರಿಸಿದ್ದೀರಿ. ಜೊತೆಗೆ ಹೆಚ್.ಡಿ ಕುಮಾರಸ್ವಾಮಿ ಅವರು ಕೂಡ ಈ ವಿಚಾರವಾಗಿ ಆರೋಪ ಮಾಡಿದ್ದಾರೆ. ಬಿಜೆಪಿಯವರು ಇಂತಹವರನ್ನು ರಕ್ಷಣೆ ಮಾಡುತ್ತಿದ್ದಾರೆ. ಸಿಎಂ ಬೊಮ್ಮಾಯಿಯವರು ಹಾಗೂ ಗೃಹ ಸಚಿವರು ಇದರ ಬಗ್ಗೆ ಕ್ರಮ ಕೈಗೊಳ್ಳಬೇಕು ಆದರೆ ಆ ಕೆಲಸ ಮಾಡ್ತಾಯಿಲ್ಲ. ಅವರ ವಿರುದ್ಧ ಆರೋಪ ಬಂದಾಗ ಪಾರದರ್ಶಕವಾದ ತನಿಖೆ ಮಾಡಬೇಕು ಆಗ ಸತ್ಯ ಹೊರಗಡೆ ಬರುತ್ತದೆ ಎಂದು ಹೇಳಿದರು. ನಮ್ಮತುಮಕೂರು.ಕಾಂನ…
ಬೆಂಗಳೂರು: ಡ್ರೋನ್ ಮೂಲಕ ಭೂ ಸರ್ವೆ ನಡೆಸಿ ಆಸ್ತಿ ವಿವರಗಳನ್ನು ಸಂಪೂರ್ಣ ಡಿಜಿಟಲ್ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ. ಈ ಕುರಿತು ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ವರ್ಷದಲ್ಲಿ ಡ್ರೋನ್ ಮೂಲಕ ಸರ್ವೆ ಕಾರ್ಯ ಪೂರ್ಣಗೊಳಿಸಲಿದ್ದು, ಆಸ್ತಿ ವಿವರ ಸಂಪೂರ್ಣ ಡಿಜಿಟಲೀಕರಣ ಮಾಡಲಾಗುವುದು. ಈ ಕಾರ್ಯ ಪೂರ್ಣಗೊಂಡ ನಂತರ ಭೂ ವಿವಾದಗಳು, ನಕಲಿ ದಾಖಲೆಗಳ ಸೃಷ್ಠಿ, ಕಂದಾಯ ಕಚೇರಿಗಳಿಗೆ ಅಲೆದಾಡುವುದು ತಪ್ಪುತ್ತದೆ ಎಂದು ಹೇಳಿದ್ದಾರೆ.ಇನ್ನು ಸರ್ವೆ ಕಾರ್ಯಕ್ಕಾಗಿ 258 ಕೋಟಿ ನೀಡಲಾಗಿದ್ದು, ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುಮಕೂರು: ಸಿರಾ ತಾಲೂಕಿನ ಪದ್ಮಾಪುರ ಸರ್ಕಾರಿ ಶಾಲೆಯ ಶಿಕ್ಷಕ ಹಾಗೂ ಆತನ ಜೊತೆಗೆ ಮತ್ತೋರ್ವ ಜಾತಿ ನಿಂದನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ದೂರಿಗೆ ಸಂಬಂಧಿಸಿದಂತೆ ದೂರುದಾರರಿಗೆ ಪರಿಹಾರವಾಗಿ ಸರ್ಕಾರ 25 ಸಾವಿರ ರೂ. ನೀಡಿದ್ದು, ಈ ಹಣವನ್ನು ಸಾಮಾಜಿಕ ಕೆಲಸಗಳಿಗೆ ವಿನಿಯೋಗಿಸಲಾಗಿದೆ. ಸಮಾಜವನ್ನು ತಿದ್ದ ಬೇಕಾಗಿದ್ದ ಶಿಕ್ಷಕ ಜಾತಿ ನಿಂದಿಸಿ, ಜನಾಂಗಗಳ ಘನತೆಗೆ ಧಕ್ಕೆ ತಂದ ಹಿನ್ನೆಲೆಯಲ್ಲಿ ಸಾಮಾಜಿಕ ಹೋರಾಟಗಾರರಾದ ಹಂದ್ರಾಳ್ ನಾಗಭೂಷಣ್ ದೂರು ದಾಖಲಿಸಿದ್ದರು. ಈ ದೂರಿನನ್ವಯ ದೂರುದಾರರಿಗೆ ಸರ್ಕಾರ 25 ಸಾವಿರ ರೂ. ಪರಿಹಾರವನ್ನು ನೀಡಿತ್ತು. ಇದು ಸಾರ್ವಜನಿಕ ಹಣವಾಗಿರುವುದರಿಂದ ಹಂದ್ರಾಳ್ ನಾಗಭೂಷಣ್ ಅವರು ಈ ಹಣ ಸಮಾಜಕ್ಕೆ ಸೇರಬೇಕಾದದ್ದು ಅನ್ನೋ ನಿಟ್ಟಿನಲ್ಲಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಗೌರವಾನ್ವಿತ ನೂರುನ್ನಿಸ್ಸಾ ಹಾಗೂ ಡಾ.ವೀಣಾ ಅವರ ಸಮ್ಮುಖದಲ್ಲಿ ಕಷ್ಟದಲ್ಲಿರುವ 12 ಜನ ಬಡ ರೋಗಿಗಳಿಗೆ ಈ ಹಣವನ್ನು ಹಂಚಲಾಯಿತು. ಇದೇ ವೇಳೆ ಮಾತನಾಡಿದ ನಾಗಭೂಷಣ್, ನಾನು ಹಾಗೂ ನನ್ನ ಹೋರಾಟದ ಸ್ನೇಹಿತರು, ಯಾವುದೇ ರೀತಿಯ…
ಚಂಡೀಗಢ: ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿರುದ್ಧ ಹರಿಹಾಯ್ದಿರುವ ರಾಹುಲ್ ಗಾಂಧಿ, ಆರ್‌ಎಸ್‌ಎಸ್‌ನವರು 21ನೇ ಶತಮಾನದ ಕೌರವರು ಎಂದು ವಾಗ್ದಾಳಿ ನಡೆಸಿದ್ದಾರೆ. ಹರಿಯಾಣ ಮಹಾಭಾರತದ ನೆಲ, ಕೌರವರು ಯಾರು.. ನಿಮಗೆ 21ನೇ ಶತಮಾನದ ಕೌರವರ ಬಗ್ಗೆ ಹೇಳುತ್ತೇನೆ. ಅವರು ಖಾಕಿ ಚೆಡ್ಡಿ ಧರಿಸುತ್ತಾರೆ. ಲಾಠಿ ಹಿಡಿಯುತ್ತಾರೆ, ಶಾಖೆ ನಡೆಸುತ್ತಾರೆ ಎಂದು ಜರಿದಿದ್ದಾರೆ. ಭಾರತ್ ಜೋಡೊ ಯಾತ್ರೆಯು ಹರಿಯಾಣದ ಅಂಬಾಲಾ ಜಿಲ್ಲೆಯನ್ನು ಪ್ರವೇಶಿಸಿದ ಸಂದರ್ಭದಲ್ಲಿ ಅವರು ಸುದ್ದಿಗಾರರ ಜೊತೆಗೆ ಮಾತನಾಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy