Subscribe to Updates
Get the latest creative news from FooBar about art, design and business.
- BPS: ಪದಾಧಿಕಾರಿಗಳ ಆಯ್ಕೆ, ಎಂಬಿಬಿಎಸ್ ವಿದ್ಯಾರ್ಥಿಗೆ ಸನ್ಮಾನ
- ಹಂಚೀಪುರ ಗ್ರಾ.ಪಂ.: ರಸ್ತೆ ಬದಿಯ ಗಿಡಗಂಟಿ ತೆರವಿಗೆ ಆಗ್ರಹಿಸಿ ಪ್ರತಿಭಟನೆ
- ಸರಗೂರು | ಆರ್ ಎಸ್ ಎಸ್ ಬ್ಯಾನ್ ಗೆ ಡಿ ಎಸ್ ಎಸ್ ಒತ್ತಾಯ
- ತಿಪಟೂರು | ಸರಿಯಾಗಿ ಕಾರ್ಯನಿರ್ವಹಿಸದ ಸಂಚಾರ ಸಿಗ್ನಲ್ ಗಳು: ವಾಹನ ಚಾಲಕರಿಂದ ಆಕ್ರೋಶ
- ಕನಕದಾಸರು ಸಮಾಜದ ಓರೆಕೋರೆಗಳನ್ನು ತಿದ್ದಲು ಶ್ರಮಿಸಿದವರು: ಸಿ.ವಿ.ಕುಮಾರ್
- ಅವೈಜ್ಞಾನಿಕ ಸುತ್ತೋಲೆ ವಾಪಸ್ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರಾಂಶುಪಾಲರ, ಉಪನ್ಯಾಸಕರ ಸಂಘ ಆಗ್ರಹ
- ತುಮಕೂರು | ಕಾಂಗ್ರೆಸ್ ಭವನ ಕಟ್ಟಡ ನಿರ್ಮಾಣಕ್ಕೆ ತಡೆಯಾಜ್ಞೆ
- ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ
Author: admin
ಯುವಕನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆಗೈದಿರುವ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ವಿನಾಯಕ ಹೋರಕೇರಿ (28) ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ. ಬೈಕ್‌ನಲ್ಲಿ ಗ್ರಾಮಕ್ಕೆ ಮರಳುವಾಗ ಹಿಂಬಾಲಿಸಿ ಬಂದ ದುಷ್ಕರ್ಮಿಗಳು ಮನಬಂದಂತೆ ಹಲ್ಲೆ ಮಾಡಿದ್ದಾರೆ. ತೀವ್ರ ರಕ್ತಸ್ರಾವದಿಂದ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಶನಿವಾರವಷ್ಟೇ ಯುವಕ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಎಂದು ತಿಳಿದುಬಂದಿದೆ. ಇನ್ನು ಕಳೆದ ವರ್ಷ ಸತೀಶ್ ಜಾರಕಿಹೊಳಿ ಆಪ್ತರೊಬ್ಬರ ಮೇಲೆ ಕೊಲೆಯಾದ ಯುವಕ ನಾಡಪಿಸ್ತೂಲಿನಿಂದ ಫೈರಿಂಗ್ ಮಾಡಿ ಪರಾರಿಯಾಗಿದ್ದನಂತೆ. ಇದಾಗಿ ಕೆಲ ತಿಂಗಳ ಹಿಂದೆ ಜಾಮೀನಿನ ಮೇಲೆ ಹೊರಗೆ ಬಂದಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಯಮಕನಮರಡಿ ಪಿಎಸ್‌ಐ ಬಿ.ವಿ.ನಾಮ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಲಗಾ ಗ್ರಾಮದ ಶ್ರೀ 1008 ಪಾರ್ಶ್ವನಾಥ ದಿಗಂಬರ ಜೈನ ಬಸದಿಯ 108 ಶ್ರೀ ಬಾಲಾಚಾರ್ಯ ಸಿದ್ಧಸೇನ ಮುನಿ ಮಹಾರಾಜರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ದಶಲಕ್ಷಣ ನೊಂಪಿ ಪರ್ವ 2022 ರ ಕಾರ್ಯಕ್ರಮದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಹಲಗಾ ಗ್ರಾಮದಲ್ಲಿ ಈ ದಶಲಕ್ಷಣ ನೊಂಪಿ ಕಾರ್ಯಕ್ರಮ ಹದಿನಾರು ದಿನಗಳ ಕಾಲ ಜರುಗಲಿದ್ದು, ಹಲವಾರು ಮಹಿಳೆಯರು ಮಡಿವಂತರಾಗಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗುವ ಮುಖೇನ ಆತ್ಮಶುದ್ಧಿಗಾಗಿ, ನಾಡಿನ ಏಳ್ಗೆಗಾಗಿ, ದೇಶದ ಐಕ್ಯತೆಗಾಗಿ, ನಾಡಿನಲ್ಲಿ ಸುಖ, ಶಾಂತಿ, ನೆಮ್ಮದಿ, ಸಮೃದ್ಧಿ ಸದಾಕಾಲವೂ ನೆಲೆಸಲಿ ಎಂದು ಪ್ರಾರ್ಥಿಸುತ್ತಾರೆ. ಇಂತಹ ಭಕ್ತಿಪೂರ್ವಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಖುಷಿ ಎನಿಸುತ್ತಿದೆ. ಸಮಾಜವನ್ನು ಸನ್ಮಾರ್ಗದಲ್ಲಿ ಮುನ್ನಡೆಸಲು ಇಂತಹ ಕಾರ್ಯಕ್ರಮಗಳು ಸಹಕಾರಿ. ಅಹಿಂಸೆ ಸೇರಿದಂತೆ ಜೈನ ಧರ್ಮದ ಎಲ್ಲ ತತ್ವಗಳು ಇಡೀ ಸಮಾಜಕ್ಕೆ ಆದರ್ಶವಾಗಿವೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಈ ಸಂದರ್ಭದಲ್ಲಿ ಹೇಳಿದರು. ಈ ಸಮಯದಲ್ಲಿ ಗ್ರಾಮದ ಹಿರಿಯರು, ಚಾರುಕೀರ್ತಿ ಸೈಬಣ್ಣವರ, ಮಹಾವೀರ ಪಾಟೀಲ, ಧನ್ಯಕುಮಾರ ದೇಸಾಯಿ, ಸುಕುಮಾರ…
ನಗರದಲ್ಲಿ ಮಳೆ ಬಂದರೆ ವಿದ್ಯುತ್ ವ್ಯವಸ್ಥೆ ಸಹ ಕೈ ಕೊಡುತ್ತದೆ. ಅದರಲ್ಲೂ ಮರ ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡರೆ ಜನರು ಬೆಸ್ಕಾಂ ಸಂಪರ್ಕಿಸಬೇಕಾಗುತ್ತದೆ. ಬೆಸ್ಕಾಂ ಜನರ ಉಪಯೋಗಕ್ಕಾಗಿ ವಾಟ್ಸಪ್ ಸಹಾಯವಾಣಿಯನ್ನು ಆರಂಭಿಸಿದೆ. ಒಂದು ವೇಳೆ ಬೆಸ್ಕಾಂ ಸಹಾಯವಾಣಿ ಸಂಖ್ಯೆ 1912 ಬ್ಯುಸಿ ಇದ್ದರೆ ಜನರು ವಾಟ್ಸಪ್ ಮೂಲಕವೂ ದೂರು ನೀಡಬಹುದು. ಉಳಿದರಂತೆ ಸಂಪರ್ಕ ಸಂಖ್ಯೆಗಳು ದಕ್ಷಿಣ ವಲಯ 82778 84011, ಪಶ್ಚಿಮ ವಲಯ 82778 84012, ಪೂರ್ವ ವಲಯ 82778 84013ಮ ಉತ್ತರ ವಲಯ 82778 84014. ಮಳೆ ಸಮಸ್ಯೆ ಆದಾಗ ಸಂಪರ್ಕಿಸಲು ಜಲಮಂಡಳಿ ಸಂಪರ್ಕಿಸಲು ಪ್ರತ್ಯೇಕ ಸಹಾಯವಾಣಿ ಇಲ್ಲ. ದೂರು ನೀಡಲು ಬಳಕೆ ಮಾಡುವ 1916 ಸಂಖ್ಯೆಗೆ ಜನರು ಕರೆ ಮಾಡಬೇಕಿದೆ. ಮ್ಯಾನ್ ಹೋಲ್ ಉಕ್ಕಿ ಹರಿಯುವುದು, ಒಳಚರಂಡಿ ಸಮಸ್ಯೆ ಮುಂತಾದವುಗಳಿಗೆ ಈ ಸಂಖ್ಯೆಗೆ ಕರೆ ಮಾಡಬೇಕಿದೆ. ಬೆಂಗಳೂರಿನ ಆಡಳಿತ ನೋಡಿಕೊಳ್ಳುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಮಳೆ ಸಂದರ್ಭದಲ್ಲಿ ಸಂಪರ್ಕಿಸಬೇಕು. ಬಿಬಿಎಂಪಿ ಎಲ್ಲಾ ಸಹಾಯವಾಣಿಗಳನ್ನು ವಿಲೀನಗೊಳಿಸಿದೆ. ಈಗ ಬಿಬಿಎಂಪಿಯನ್ನು…
ಬೆಂಗಳೂರು, ಸೆಪ್ಟೆಂಬರ್ 05: ಬೆಂಗಳೂರಿನಲ್ಲಿ ಹಲವು ದಿನಗಳಿಂದ ನಿತ್ಯ ತೀವ್ರ ಮಳೆ ಸುರಿಯುತ್ತಿದ್ದು ಸಂಚಾರ ವ್ಯವಸ್ಥೆ ತೀರ ಹದಗೆಟ್ಟಿದೆ. ನಿನ್ನೆ ರಾತ್ರಿಯಿಂದ ಬೆಳಗಿನ ಜಾವದವರೆಗೆ ಎಡಬಿಡದೆ ಸುರಿದ ಮಳೆಯಿಂದಾಗಿ ರಸ್ತೆಗಳು ನದಿಗಳಾಗಿ ಮಾರ್ಪಟ್ಟಿವೆ. ರಸ್ತೆಗಳಲ್ಲಿ ಮಳೆ ನೀರು ನಿಂತು ಸಂಚಾರಕ್ಕೆ ಅಡೆತಡೆ ಉಂಟಾಗಿದೆ. ಇದರಿಂದಾಗಿ ಜನ ಕಚೇರಿಗಳಿಗೆ ತೆರಳಲು ಪರದಾಡುವಂತ ಸ್ಥಿತಿ ನಿರ್ಮಾಣವಾಗಿತ್ತು. ಅಲ್ಲಲ್ಲಿ ಸಂಚಾರ ಸಾಧ್ಯವಾಗದೇ ವಾಹನಗಳು ನಿಂತಿರುವುದು ಹಾಗೂ ನೀರಿನಲ್ಲಿ ತಳ್ಳುತ್ತಿರುವ ದೃಶ್ಯಗಳು ಕಂಡುಬಂದಿದೆ. ಇಂದು ಬೆಳಗ್ಗೆ ಬೆಂಗಳೂರಿನ ಮಾರತ್ತಹಳ್ಳಿ-ಸಿಲ್ಕ್ ಬೋರ್ಡ್ ಜಂಕ್ಷನ್ ರಸ್ತೆಯಲ್ಲಿ ತೀವ್ರ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡ ದೃಶ್ಯಗಳು ಕಂಡು ಬಂದಿವೆ. ಮಾತ್ರವಲ್ಲದೆ ಭಾರಿ ಟ್ರಾಫಿಕ್ ಜಾಮ್ ಉಂಟಾಗಿರುವುದು ಕಂಡುಬಂದಿದೆ. ವಾಹನ ಸವಾರರು ನಿಗದಿತ ಸಮಯಕ್ಕೆ ಕಚೇರಿಗಳಿಗೆ ತೆರಳಾಗದೆ ಅಧಿಕಾರಿಗಳಿಗೆ ಹಿಡಿ ಶಾಪ ಹಾಕಿದ್ದಾರೆ. ಇನ್ನೂ ಬೆಂಗಳೂರು ವಿಮಾನ ನಿಲ್ದಾಣದಲ್ಲೂ ಇದೇ ಪರಿಸ್ಥಿತಿ ನಿರ್ಮಾಣವಾಗಿತ್ತು. ವಿಮಾನ ನಿಲ್ದಾಣದಲ್ಲಿ ಮಳೆ ನೀರು ಹರಿವು ಹೆಚ್ಚಾದ್ದರಿಂದ ಪ್ರಯಾಣಿಕರು ಮನೆಗಳಿಗೆ ಹಾಗೂ ವಿಮಾನ ನಿಲ್ದಾಣಕ್ಕೆ ತೆರಳು ತೊಂದರೆ ಅನುಭವಿಸಿದ್ದಾರೆ. ವಿಮಾನನಿಲ್ದಾಣದಲ್ಲಿ…
ಶಿಕ್ಷಕರ ದಿನವನ್ನು ಪ್ರತಿ ವರ್ಷ ಸೆಪ್ಟೆಂಬರ್ 5 ರಂದು ಆಚರಿಸಲಾಗುತ್ತದೆ. ಭಾರತದ ಮಾಜಿ ರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಸಂದರ್ಭದಲ್ಲಿ ಶಿಕ್ಷಕರಿಗೆ ಗೌರವವನ್ನು ತೋರಿಸಲು ಸೆಪ್ಟೆಂಬರ್ 5 ರಂದು ಭಾರತದಾದ್ಯಂತ ಶಿಕ್ಷಕರ ದಿನವನ್ನು ಆಚರಿಸಲಾಗುತ್ತದೆ. ಶಿಕ್ಷಕರು ನಮಗೆ ನಿಜವಾದ ಜೀವನ ವಿಧಾನವನ್ನು ಕಲಿಸುತ್ತಾರೆ. ಸರಿಯಾದ ಮಾರ್ಗವನ್ನು ಅನುಸರಿಸಲು ನಿಮ್ಮನ್ನು ಪ್ರೇರೇಪಿಸುತ್ತಾರೆ. ಜೀವನದಲ್ಲಿ ಪೋಷಕರ ಸ್ಥಾನವನ್ನು ಯಾರೂ ತೆಗೆದುಕೊಳ್ಳಲು ಸಾಧ್ಯವಿಲ್ಲ. ಏಕೆಂದರೆ ಅವರು ನಮ್ಮನ್ನು ಈ ವರ್ಣರಂಜಿತ ಸುಂದರ ಜಗತ್ತಿನಲ್ಲಿ ತಂದವರು. ನಮ್ಮ ತಂದೆ ತಾಯಿಗಳು ಜೀವನದ ಮೊದಲ ಗುರುಗಳಾದರೆ ಎರಡನೇ ಸ್ಥಾನವನ್ನು ಶಿಕ್ಷಕರಿಗೆ ನೀಡಲಾಗುತ್ತದೆ. ಪ್ರತಿಯೊಬ್ಬರ ಜೀವನದಲ್ಲಿ ಗುರುವಿಗೆ ಹೆಚ್ಚಿನ ಮಹತ್ವವಿದೆ. ಸಮಾಜದಲ್ಲಿ ಅವರಿಗೆ ವಿಶೇಷ ಸ್ಥಾನವಿದೆ. ಸರ್ವಪಲ್ಲಿ ರಾಧಾಕೃಷ್ಣನ್ ಶಿಕ್ಷಣದಲ್ಲಿ ಅಪಾರ ನಂಬಿಕೆ ಇಟ್ಟವರು. ಅವರು ಮಹಾನ್ ತತ್ವಜ್ಞಾನಿ ಮತ್ತು ಶಿಕ್ಷಕರಾಗಿದ್ದರು. ಅವರಿಗೆ ಬೋಧನೆಯಲ್ಲಿ ಆಳವಾದ ಪ್ರೀತಿ ಇತ್ತು. ಆದರ್ಶ ಶಿಕ್ಷಕನ ಎಲ್ಲಾ ಗುಣಗಳನ್ನು ಹೊಂದಿದ್ದರು. ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರು ತಮ್ಮ ಜನ್ಮದಿನದ ಸಂದರ್ಭದಲ್ಲಿ ಶಿಕ್ಷಕರಿಗೆ…
ಬೆಳಗಾವಿ: ಬುದ್ಧ, ಬಸವ, ಅಂಬೇಡ್ಕರ್, ಏಸುಕ್ರಿಸ್ತ ಮುಂತಾದ ಮಹನೀಯರು ಜಗತ್ತಿಗೆ ಶಾಂತಿ, ಪ್ರೀತಿ, ವಾತ್ಸಲ್ಯಗಳ ಮೂಲಕ ನಾವೆಲ್ಲರೂ ಭಾರತೀಯ ಮಕ್ಕಳು ಎಂದು ತೋರಿಸಿಕೊಟ್ಟಿದ್ದಾರೆ. ಇಂದು ಈ ಎಲ್ಲ ಮಹನೀಯರ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ನಮ್ಮ ಜೀವನಕ್ಕೆ ಒಂದು ಅರ್ಥ ಸಿಗಲಿದೆ ಎಂದು ಬೆಳಗಾವಿ ಗ್ರಾಮಿಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹೇಳಿದರು. ಗಣೇಶಪುರ ಶಿವಂ ನಗರದಲ್ಲಿರುವ ಸೆಂಟ್ ಜಾನ್ ಬಾಪ್ಟಿಸ್ಟ್ ಚರ್ಚ್ ಸುತ್ತಮುತ್ತಲಿನ ರಸ್ತೆಗಳನ್ನು ನಿರ್ಮಾಣ ಮಾಡಿಕೊಟ್ಟ ಹಿನ್ನಲೆಯಲ್ಲಿ ಚರ್ಚಿನ ಪದಾಧಿಕಾರಿಗಳಿಂದ ಸನ್ಮಾನ ಸ್ವೀಕರಿಸಿ ಭಾನುವಾರ ಮಾತನಾಡಿದರು. ದೇವನೊಬ್ಬ ನಾಮ ಹಲವು ಎನ್ನುವ ಹಾಗೆ, ವಿವಿಧ ಧರ್ಮೀಯರು ತಮ್ಮದೇ ಆದ ಪದ್ಧತಿಯಲ್ಲಿ ದೇವರನ್ನು ಸ್ಮರಿಸುತ್ತಾರೆ. ಆದರೆ ಎಲ್ಲ ಧರ್ಮಗಳ ಸಾರವೂ ಒಂದೇ ಆಗಿದ್ದು ಸರ್ವ ಧರ್ಮಗಳನ್ನು ಗೌರವಿಸುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಎಂದು ಅವರು ಹೇಳಿದರು. ಇದೇ ವೇಳೆ ಚರ್ಚ್ ವತಿಯಿಂದ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ…
ಹುಬ್ಬಳ್ಳಿ: ನವೆಂಬರ್ 23ರಂದು ಸರ್ವೋಚ್ಛ ನ್ಯಾಯಾಲಯದಲ್ಲಿ ಬರುವ ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದ ವಿಚಾರಣೆಗೆ ಬರಲಿದೆ. ರಾಜ್ಯದ ಪರವಾಗಿ ವಾದ ಮಂಡಿಸಲು ಅನುಭವಿ ಹಾಗೂ ಹಿರಿಯ ಕಾನೂನು ತಜ್ಞರ ತಂಡ ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಡಿವಿವಾದ ಕುರಿತು ಅಡ್ವಕೇಟ್ ಜನರಲ್ ಅವರೊಂದಿಗೆ ಚರ್ಚಿಸಿ , ಸಾಕಷ್ಟು ಅಧ್ಯಯನ ಸಹ ನಡೆಸಲಾಗಿದೆ. ವಾದ ಮಂಡನೆಗೆ ಹಿರಿಯ,ಅನುಭವಿ ವಕೀಲರನ್ನು ನೇಮಿಸಲು ಸೂಚಿಸಲಾಗಿದೆ ಎಂದರು. ಪೊಲೀಸ್ ಇಲಾಖೆಗೆ ಸಂಬಂಧಿಸಿದ ಮಾತನಾಡಿದ ಅವರು, ರಾಘವೇಂದ್ರ ಔರಾದ್‌ಕರ್ ವರದಿ ಅನುಷ್ಠಾನಗೊಳ್ಳುತ್ತಿದೆ. ಸಿಬ್ಬಂದಿಯೂ ಹೆಚ್ಚಿನ ಕೌಶಲ್ಯ ಬೆಳೆಸಿಕೊಳ್ಳಬೇಕು. ಕಂಪ್ಯೂಟರ್ ಶಿಕ್ಷಣ ಕಡ್ಡಾಯಗೊಳಿಸಲಾಗಿದೆ. ಎಲ್ಲ ಇಲಾಖೆಯ ಸಿಬ್ಬಂದಿಗೂ ಇದು ಕಡ್ಡಾಯವಾಗಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ: ನಗರದಲ್ಲಿ ಎರಡು ವರ್ಷಗಳ ನಂತರ ಗಣೇಶೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಬೆಳಗಾವಿ ಜನತೆಗೆ ಗಣೇಶ್ ಉತ್ಸವ ಒಂದು ವಿಶೇಷ ಹಬ್ಬವಾಗಿದ್ದು, ಎಲ್ಲಿ ಎಲ್ಲಾ ಸಮುದಾಯದ ಜನ ಸೇರಿ ಈ ಉತ್ಸವವನ್ನು ಆಚರಣೆ ಮಾಡುತ್ತಾರೆ. ಬೆಳಗಾವಿ ಗಣೇಶ್ ಉತ್ಸವ ತನ್ನದೇ ಆದ ಇತಿಹಾಸವನ್ನು ಹೊಂದಿದೆ. 1906ರಲ್ಲಿ ಸ್ವತಂತ್ರ ಹೋರಾಟಗಾರರಾದ ಬಾಲ್ ಗಂಗಾಧರ್ ತಿಲಕ್ ಅವರು ಸ್ವತಂತ್ರದ ಸಂಗ್ರಾಮದಲ್ಲಿ ಸಾರ್ವಜನಿಕರು ಭಾಗವಹಿಸಲು ಮತ್ತು ದೇಶವನ್ನು ಸ್ವಾತಂತ್ರ್ಯಗೊಳಿಸಲು ಧಾರ್ಮಿಕ ಆಚರಣೆ ಮತ್ತು ಹಬ್ಬಗಳಿಂದ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ಹಮ್ಮಿಕೊಂಡು ಅದರ ಅಂಗವಾಗಿ ಬೆಳಗಾವಿಯಲ್ಲಿ ಗಣೇಶ್ ಉತ್ಸವ ಪ್ರಾರಂಭಿಸಿದರು. ಈಗ 125 ವರ್ಷಗಳ ಕಳೆದು ತನ್ನ ಇತಿಹಾಸ ಪ್ರದರ್ಶನ ಮಾಡುತ್ತಾ ಇದೆ. ಈ ಸಂದರ್ಭದಲ್ಲಿ ಬೆಳಗಾವಿ ಪ್ರತಿ ಗಲ್ಲಿಗಳಲ್ಲಿ ಸಾರ್ವಜನಿಕ ಗಣಪತಿ ಮಂಟಪಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಹತ್ತು ದಿನಗಳ ಕಾಲವರೆಗೆ ಈ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಣೆ ಮಾಡುತ್ತಾ ಇದ್ದಾರೆ. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ವಾಡ್೯ ನಂ 44 ಸೇವಕರಾದ…
ಬೆಂಗಳೂರು: ಬಡತನ ರೇಖೆಗಿಂತ ಕೆಳಗಿರುವಂತ ಬಿಪಿಎಲ್ ಪಡಿತರ ಚೀಟಿದಾರ ಎಸ್ಸಿ, ಎಸ್ಟಿ ಸಮುದಾಯದವರಿಗೆ 75 ಯುನಿಟ್ ಉಚಿತ ವಿದ್ಯುತ್ ನೀಡೋದಾಗಿ ಘೋಷಣೆ ಮಾಡಿತ್ತು. ಆದರೆ ಈಗ ಯೋಜನೆಯನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಇಂಧನ ಇಲಾಖೆ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ಕುಟುಂಬಗಳ ಗೃಹ ವಿದ್ಯುತ್ ಬಳಕೆದಾರರಿಗೆ 75 ಯುನಿಟ್ ಮಾಸಿಕ ವಿದ್ಯುತ್ ಅನ್ನು ಉಚಿತವಾಗಿ ನೀಡುವುದಾಗಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿತ್ತು ಎಂದಿದ್ದಾರೆ. ಈ ಯೋಜನೆಯ ಸಂಬಂಧ ಸರ್ಕಾರದಿಂದ ಹೊರಡಿಸಿದ್ದಂತ ಸುತ್ತೋಲೆಯನ್ನು, ಈ ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂಬುದಾಗಿ ಆದೇಶಿಸಿದ್ದಾರೆ. ಈ ಮೂಲಕ ಎಸ್ಸಿ, ಎಸ್ಟಿ ಸಮುದಾಯದವರಿಗೆ ಬಿಗ್ ಶಾಕ್ ನೀಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಪಾಲ್ಘರ್: ಟಾಟಾ ಸಮೂಹದ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಪಾಲ್ಘರ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಈ ಮಾಹಿತಿಯನ್ನು ಪಾಲ್ಘರ್ ಜಿಲ್ಲಾ ಪೋಲಿಸ್ ಅಧೀಕ್ಷಕರು ನೀಡಿದ್ದಾರೆ. ಸೈರಸ್ ಪಲ್ಲೋಂಜಿ ಮಿಸ್ತ್ರಿ ಭಾರತೀಯ ಮೂಲದ ಐರಿಷ್ ಉದ್ಯಮಿಯಾಗಿದ್ದವರು. ಪಾಲ್ಘರ್ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸೈರಸ್ ಮಿಸ್ತ್ರಿ ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ. ಕಾರು ವಿಭಜಕಕ್ಕೆ ಡಿಕ್ಕಿ ಹೊಡೆದಾಗ ಈ ದುರಂತ ಘಟನೆ ನಡೆದಿದೆ ಎಂದು ಹೇಳಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy