Author: admin

ಸ್ವಯಂಘೋಷಿತ ದೇವಮಾನವ ನಿತ್ಯಾನಂದನ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಹೀಗಾಗಿ, ವೈದ್ಯಕೀಯ ನೆರವು ಕೋರಿ ಶ್ರೀಲಂಕಾ ದೇಶಕ್ಕೆ ಪತ್ರ ಬರೆದಿದ್ದಾನೆ. ಎನ್ನಲಾಗಿದೆ. ಆಸ್ಟ್ರೇಲಿಯಾ ಸಮೀಪದ ದ್ವೀಪವೊಂದನ್ನು ಖರೀದಿಸಿ (ಕೈಲಾಸ ದೇಶ) ಅಲ್ಲಿರುವ ನಿತ್ಯಾನಂದ, ಇಲ್ಲಿ ವೈದ್ಯಕೀಯ ಸೌಲಭ್ಯಗಳಿಲ್ಲ. ತುರ್ತಾಗಿ ಚಿಕಿತ್ಸೆ ಬೇಕಾಗಿದೆ. ನೆರವು ನೀಡಿದರೆ ಆರ್ಥಿಕ ಮುಗ್ಗಟ್ಟಿನಿಂದ ತತ್ತರಿಸಿರುವ ಶ್ರೀಲಂಕಾದಲ್ಲಿ ಕೋಟಿಗಟ್ಟಲೆ ಹಣ ಹೂಡಿಕೆ ಮಾಡುವುದಾಗಿ ಆಮಿಷ ಒಡ್ಡಿದ್ದಾನೆ ಎಂದು ಹೇಳಲಾಗಿದೆ. ಅತ್ಯಾಚಾರ ಆರೋಪ ಎದುರಿಸುತ್ತಿರುವ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದನ ಆರೋಗ್ಯದಲ್ಲಿ ಏರುಪೇರು ತನಗೆ ವೈದ್ಯಕೀಯ ಆರೈಕೆಯ ‘ತುರ್ತು’ ಅಗತ್ಯವಿದೆ ಎಂದು ಶ್ರೀಲಂಕಾ ಅಧ್ಯಕ್ಷರಿಗೆ ನಿತ್ಯಾನಂದನ ಪತ್ರ ‘ಶ್ರೀಕೈಲಾಸ’ದಲ್ಲಿನ ಮೂಲಸೌಕರ್ಯ ಕೊರತೆ ಉಲ್ಲೇಖಿಸಿ ತನಗೆ ಚಿಕಿತ್ಸೆ ನೀಡುವಂತೆ ದೇವಮಾನವನ ಮನವಿ. ಅತ್ಯಾಚಾರದ ಆರೋಪ ಎದುರಿಸುತ್ತಿರುವ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಶ್ರೀಲಂಕಾದಲ್ಲಿ ರಾಜಕೀಯ ಆಶ್ರಯ ಬಯಸುತ್ತಿದ್ದಾರೆ ಎಂದು ವರದಿಯಾಗಿದೆ. ತನ್ನ ಆರೋಗ್ಯ ಕ್ಷೀಣಿಸುತ್ತಿರುವುದನ್ನು ಉಲ್ಲೇಖಿಸಿ ನಿತ್ಯಾನಂದ ಆಗಸ್ಟ್ 7ರಂದು ದ್ವೀಪ ರಾಷ್ಟ್ರದ ಅಧ್ಯಕ್ಷರಿಗೆ ಪತ್ರ ಬರೆದಿದ್ದು,ತನಗೆ ವೈದ್ಯಕೀಯ ಆರೈಕೆಯ ‘ತುರ್ತು’ ಅಗತ್ಯವಿದೆ…

Read More

ಚಿತ್ರದುರ್ಗ ಸೆಪ್ಟೆಂಬರ್ 3: ಪ್ರೌಢಶಾಲೆಯ ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಚಿತ್ರದುರ್ಗ ಮುರುಘಾ ಮಠದ ಮುರುಘಾ ಶ್ರೀಗಳನ್ನು 2 ನೇ ಅಪರ ಜಿಲ್ಲಾ ಕೋರ್ಟ್ ಎದುರು ಶುಕ್ರವಾರ ಹಾಜರುಪಡಿಸಲಾಗಿದ್ದು, ಸೆ. 5 ರವರೆಗೆ ಅವರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಇಂದು ಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಸಲಿದ್ದಾರೆ. ಈ ಬಗ್ಗೆ ಮಠದ ಪರ ವಕೀಲ ಉಮೇಶ್, ಶ್ರೀಗಳಿಗೆ ಜಾಮೀನು ಕೋರಿ ಇಂದು ಕೋರ್ಟ್​ಗೆ ಮತ್ತೆ ಅರ್ಜಿ ಸಲ್ಲಿಸುತ್ತೇವೆ. ನಾವು ನಿನ್ನೆ ನ್ಯಾಯಾಲಯಕ್ಕೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ರದ್ದಾಗಿದೆ. ಇಂದು ಮತ್ತೊಮ್ಮೆ ಜಾಮೀನಿಗೆ ಅರ್ಜಿ ಸಲ್ಲಿಸುತ್ತೇವೆ. ಮುರುಘಾಶ್ರೀಗಳಿಗೆ ಗೆದ್ದು ಬರುವ ವಿಶ್ವಾಸ ಇದೆ ಎಂದು ಅವರು ಹೇಳಿದರು. ಪೋಕ್ಸೋ ಕಾಯ್ದೆ ಪ್ರಕರಣದಡಿ ಗುರುವಾರ ರಾತ್ರಿ ಮುರುಘಾಶರಣರನ್ನು ಬಂಧಿಸಿದ್ದ ಪೊಲೀಸರು ತಡರಾತ್ರಿ ನ್ಯಾಯಾಧೀಶರ ನಿವಾಸದಲ್ಲಿ ಹಾಜರುಪಡಿಸಿದಾಗ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಜಡ್ಜ್ ಆದೇಶಿಸಿದ್ದರು. ನಂತರ ಶುಕ್ರವಾರ ಎದೆ ನೋವು ಎಂದು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಶುಕ್ರವಾರ…

Read More

ಬೆಳಗಾವಿ : ಕೆಪಿಟಿಸಿಎಲ್ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ ಪ್ರಕರಣ ಸಂಬಂಧ ಬೆಳಗಾವಿ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದೆ. ಬೆಳಗಾವಿ ನಗರದ ಸಂಜೀವ ಲಕ್ಷ್ಮಣ ಭಂಡಾರಿ ಬಂಧಿತ ಆರೋಪಿ. ಪರೀಕ್ಷಾ ಅಕ್ರಮ ಬಯಲಿಗೆ ಬಂದಾಗಿನಿಂದ ತಲೆಮಲೆಸಿಕೊಂಡಿದ್ದ ಸಂಜೀವ್ ಭಂಡಾರಿಗೆ ಬಲೆ ಬೀಸಿದ್ದ ಪೊಲೀಸರು ಗೋಕಾಕದಲ್ಲಿ ಬಂಧಿಸಿದ್ದಾರೆ. ಆರೋಪಿ ಸಂಜೀವ ಭಂಡಾರಿಯನ್ನು ಗೋಕಾಕ ಹೆಚ್ಚುವರಿ ಜಿಲ್ಲಾ ಮತ್ತು ಪ್ರಧಾನ ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ 7 ದಿನಗಳ ಕಾಲ ಪೊಲೀಸ್ ವಶಕ್ಕೆ ಹಸ್ತಾಂತರಿಸುವಂತೆ ನ್ಯಾಯಾಲಯ ಆದೇಶಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಶಿವಮೂರ್ತಿ ಶರಣರ ಬಂಧನದ ಬೆನ್ನಲ್ಲೇ ಮುರುಘಾ ಮಠದಿಂದ ತಮಗೆ ನೀಡಲಾಗಿದ್ದ ಬಸವ ಶ್ರೀ ಪ್ರಶಸ್ತಿಯನ್ನು ಖ್ಯಾತ ಪತ್ರಕರ್ತ ಪಿ.ಸಾಯಿನಾಥ್ ಹಿಂದಿರುಗಿಸಲು ನಿರ್ಧರಿಸಿದ್ದು, ಇದರ ಜೊತೆಗೆ ಕೊಟ್ಟ 5 ಲಕ್ಷ ರೂಪಾಯಿಗಳ ಚೆಕ್ ಸಹ ಮರಳಿಸುತ್ತಿದ್ದಾರೆ. ಈ ಕುರಿತಂತೆ ಮಾತನಾಡಿರುವ ಅವರು, ಶ್ರೀಗಳ ಕುರಿತ ಆರೋಪಗಳನ್ನು ಮಾಧ್ಯಮಗಳಲ್ಲಿ ನೋಡಿ ವಿಚಲಿತನಾಗಿದ್ದೇನೆ. ಮಕ್ಕಳ ಮೇಲೆ ದೌರ್ಜನ್ಯವೆಸಗಿರುವ ಕೃತ್ಯವನ್ನು ಖಂಡಿಸಲು ಶಬ್ದಗಳು ಸಾಕಾಗುವುದಿಲ್ಲ. ಈ ಪ್ರಕರಣದ ಸಂತ್ರಸ್ತ ಬಾಲಕಿಯರ ಜೊತೆ ನಾವಿದ್ದೇವೆ. ಆ ಬಾಲಕಿಯರಿಗೆ ನ್ಯಾಯ ಸಿಗಬೇಕು ಎಂದು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಶೈಕ್ಷಣಿಕ ವರ್ಷ ವಿಸ್ತರಣೆ ಹಿನ್ನೆಲೆ ತುಮಕೂರು ವಿಶ್ವವಿದ್ಯಾಲಯದ ಪೇಯಿಂಗ್‌ ಹಾಸ್ಟೆಲ್‌ ವಿದ್ಯಾರ್ಥಿನಿಯರು 3 ದಿನಗಳಿಂದ ಊಟವಿಲ್ಲದೆ ಉಪವಾಸ ಸಂಕಷ್ಟಕ್ಕೆ ಸಿಲುಕಿದ್ದು, ಶೀಘ್ರ ಸಮಸ್ಯೆ ಬಗೆಹರಿಸುವುದು ಅತ್ಯಗತ್ಯವಾಗಿದೆ. ಹೌದು, ನಗರದ ರೈಲ್ವೇ ಸ್ಟೇಷನ್‌ ರಸ್ತೆಯಲ್ಲಿರುವ ವಿವಿ ಹೆಣ್ಮಕ್ಕಳ ವಿದ್ಯಾರ್ಥಿ ನಿಲಯದ(ಪೇಯಿಂಗ್‌) ವಿದ್ಯಾರ್ಥಿಗಳು ಇಂಥದ್ದೊಂದು ಸಂಕಷ್ಟಕ್ಕೆ ಸಿಲುಕಿದ್ದು, ನೂತನ ಶಿಕ್ಷಣ ನೀತಿಯಿಂದ ಶೈಕ್ಷಣಿಕ ವರ್ಷ 1 ತಿಂಗಳು ವಿಸ್ತರಣೆಯಾಗಿರುವುದು ಅವರ ಸಮಸ್ಯೆಗೆ ಮುಖ್ಯ ಕಾರಣವಾಗಿದೆ. ತುಮಕೂರು ವಿವಿ ಹೆಣ್ಣುಮಕ್ಕಳ ವಿದ್ಯಾರ್ಥಿ ನಿಲಯದಲ್ಲಿ 128 ವಿದ್ಯಾರ್ಥಿನಿಯರಿದ್ದು, ವಿವಿ ಕಾಲೇಜು ವಿದ್ಯಾರ್ಥಿನಿಯರಿಗೆಂದೇ ಇರುವ ಈ ವಿದ್ಯಾರ್ಥಿ ನಿಲಯದಲ್ಲಿ ವಾರ್ಷಿಕ 16,000 ರೂ. ಊಟ, ವಸತಿ ಶುಲ್ಕ ನಿಗದಿಪಡಿಸಲಾಗಿದೆ. ಆದರೆ, ಈ ಬಾರಿ ಕೋವಿಡ್‌ ಕಾರಣದ ಜತೆಗೆ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಹಿನ್ನೆಲೆ 10 ತಿಂಗಳಿದ್ದ ಶೈಕ್ಷಣಿಕ ವರ್ಷವು 11 ತಿಂಗಳಿಗೆ ವಿಸ್ತರಣೆಗೊಂಡಿದ್ದು, ಇದೇ ಕಾರಣ ಹೇಳಿ ಹಾಸ್ಟೆಲ್‌ ವಾರ್ಡನ್‌ ವಿದ್ಯಾರ್ಥಿನಿಯರಿಗೆ ಸುಮಾರು 3 ದಿನಗಳಿಂದ ಊಟ ನೀಡದೆ, ವಿದ್ಯಾರ್ಥಿಗಳನ್ನು ಉಪವಾಸ ಕೆಡವಿ 1 ತಿಂಗಳಿಗೆ ತಗುಲುವ…

Read More

ಬೆಳಗಾವಿ: ಬಾಲಕಿಯನ್ನು ಮದುವೆ ಆಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡು, ಬಾಲಕಿ ಗರ್ಭ ಧರಿಸಲು ಕಾರಣನಾದ ಯುವಕನನ್ನು ಖಾನಾಪುರ ಪೊಲೀಸರು ಬಂಧಿಸಿದ್ದಾರೆ. ಖಾನಾಪುರ ತಾಲ್ಲೂಕಿನ ಗೌಳಿವಾಡ ಗ್ರಾಮದ ಮಲ್ಲು ಅಪ್ಪು ಪಿಂಗಳೆ (19) ಬಂಧಿತ ಆರೋಪಿ. ಅದೇ ತಾಲ್ಲೂಕಿನ 16 ವರ್ಷದ ಬಾಲಕಿಯನ್ನು ಪುಸಲಾಯಿಸಿ, ಕೆಲ ವರ್ಷಗಳಿಂದ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಬಾಲಕಿ ಗಂಡುಮಗುವಿಗೆ ಜನ್ಮ ನೀಡಿದ್ದಾಳೆ. ಆರೋಪಿ ಮೇಲೆ ಪೋಕ್ಸೊ ಅಡಿ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿ ವಿಲಾಸ ಸಾಗರಕ್ಕೆ ಗುರುವಾರ ಬೆಳಿಗ್ಗೆ 8 ಗಂಟೆ ವೇಳೆಗೆ 3,546 ಕ್ಯೂಸೆಕ್ ನೀರು ಹರಿದು ಬಂದಿದೆ. ನೀರಿನ ಮಟ್ಟ 130 ಅಡಿಗೆ ಏರಿಕೆಯಾಗಿ ಗುರುವಾರ ಸಂಜೆ 6: 45 ಗಂಟೆಗೆ ಕೋಡಿ ಹರಿದಿದೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಬಯಲುಸೀಮೆಯ ಜೀವನಾಡಿ ವಾಣಿವಿಲಾಸ ಸಾಗರ ಜಲಾಶಯ ಸಂಪೂರ್ಣ ಭರ್ತಿಯಾಗುತ್ತಿರುವ ದೃಶ್ಯ ವೀಕ್ಷಿಸಲು ಜನರು ಕಾತರದಿಂದ ಕಾಯುತ್ತಿದ್ದರು. ವಿ.ವಿ.ಸಾಗರ ಜಲಾಶಯ ಸುಮಾರು 88 ವರ್ಷಗಳ ನಂತರ ಭರ್ತಿಯಾಗುತ್ತಿದ್ದು, ಕೋಡಿಯ ಮೂಲಕ ನದಿಗೆ ನೀರು ಹರಿಯಲಿದೆ. ವಿವಿ ಸಾಗರ ಜಲಾನಯನ ಪ್ರದೇಶದಲ್ಲಿ ಸತತ ಮಳೆಯಿಂದಾಗಿ ಡ್ಯಾಂನ ಗರಿಷ್ಟ ಮಟ್ಟ ಸೆಪ್ಟೆಂಬರ್ 1ರಂದು ಸಂಜೆ ಗರಿಷ್ಠ 130 ಅಡಿಗೆ ಏರಿಕೆಯಾಗಿ ಭರ್ತಿಯಾಗಿದೆ. ಒಳಹರಿವು 4,564 ಕ್ಯೂಸೆಕ್ ಇದೆ. ಗರಿಷ್ಟ ಮಟ್ಟ 130 ಅಡಿ ತಲುಪಿದ್ದು, ಭರ್ತಿಯಾಗಿ ಕೋಡಿ ಹರಿದಿದೆ. ಹೆಚ್ಚುವರಿ ನೀರು ಕೋಡಿಯ ಮೂಲಕ ನದಿಗೆ ಹರಿಯಲಿದ್ದು, ಈಗಾಗಲೇ ನದಿಪಾತ್ರದ ಇಕ್ಕೆಲಗಳ ಹಾಗೂ ತಗ್ಗು ಪ್ರದೇಶದ ಜನಗಳಿಗೆ ತಮ್ಮ…

Read More

ತಿಪಟೂರು: ತಾಲೂಕು ಪಂಚಾಯಿತಿ ಆವರಣದಲ್ಲಿ ಜವಾಬ್ದಾರಿಯುತ ಸ್ಥಾನಕ್ಕೆ ಅನ್ಯ ಇಲಾಖೆಯ ಹೊರಗುತ್ತಿಗೆ ಆಧಾರದಲ್ಲಿ ನೌಕರರನ್ನು ನೇಮಿಸಿರುವ ಸರ್ಕಾರದ ಕ್ರಮ ಖಂಡಿಸಿ ತಿಪಟೂರು ತಾಲೂಕು ಪಂಚಾಯಿತಿ ನೌಕರರು ಸಾಂಕೇತಿಕ ಧರಣಿ ನಡೆಸಿದರು. ತಾಲೂಕು ಪಂಚಾಯಿತಿ ನೌಕರರ ಸಂಘದ ಅಧ್ಯಕ್ಷ ಬಸವಲಿಂಗಪ್ಪ ಮಾತನಾಡಿ, ತಾಲೂಕು ಕಾರ್ಯನಿರ್ವಾಹಕ ಹುದ್ದೆ ವಿಭಾಗ ಅಧಿಕಾರಿಗಳಿಗೆ ಸಮಾನ ಹುದ್ದೆಯಾಗಿದ್ದು, ಇಂತಹ ಹುದ್ದೆಗೆ ಗ್ರಾಮ ಪಂಚಾಯಿತಿ ಮಟ್ಟದಿಂದ ಕಾರ್ಯನಿರ್ವಹಿಸಿ ಅನುಭವ ಇರುವ ಅಧಿಕಾರಿಗಳನ್ನು ಪರಿಗಣಿಸದೆ, ರಾಜ್ಯ ಸರ್ಕಾರ ಹಗರಿಬೊಮ್ಮನಹಳ್ಳಿ ಬೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಯಂತರ ಎಸ್ ಎಸ್ ಪ್ರಕಾಶ್ ಅವರನ್ನು ಹೊರಗುತ್ತಿಗೆ ಆಧಾರದಲ್ಲಿ ಹೂವಿನಹಡಗಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಘಟನೆಯನ್ನು ಖಂಡಿಸಿ, ತಾಲೂಕಿನ 26 ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು ಹಾಗೂ ಇತರರು ಸೇರಿ ಸರ್ಕಾರದ ವಿರುದ್ಧ ಕಪ್ಪುಪಟ್ಟಿ ಧರಿಸಿ ಮುಷ್ಕರ ನಡೆಸಿದರು. ಬಳಿಕ ಧರಣಿ ನಿರತರು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಎಚ್.ಎಂ ಸುದರ್ಶನಿಗೆ ಮನವಿ ಪತ್ರ ಸಲ್ಲಿಸಿದರು. ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ…

Read More

ಪಾವಗಡ:  ತಾಲ್ಲೂಕಿನ ನಿಡಗಲ್ ಹೋಬಳಿಯ ಸಿ.ಕೆ.ಪುರ ಗ್ರಾಮ ಪಂಚಾಯಿತಿಯಲ್ಲಿ ಸಿ.ಕೆ.ಪುರ ಗ್ರಾಮದ ಲಕ್ಷ್ಮಮ್ಮ ಈರಣರವರ ರಾಜೀನಾಮೆಯಿಂದ ತೆರವಾಗಿದ್ದ ಸಿ.ಕೆ.ಪುರ ಗ್ರಾಮ ಪಂಚಾಯ್ತಿ ಅಧ್ಯಕ್ಷ ಸ್ಥಾನಕ್ಕೆ ಕೊತ್ತೂರು ಗ್ರಾಮದ ರತ್ನಮ್ಮ ಕೊಂಡಪ್ಪರವರು ನೂತನ ಅಧ್ಯಕ್ಷರಾಗಿ ಆಯ್ಕೆಯಾದರು. ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ರತ್ನಮ್ಮ ಕೊಂಡಪ್ಪರವರು ನಾಮಪತ್ರ ಸಲ್ಲಿಸಿದ್ದರು ಅಂತಿಮವಾಗಿ ರತ್ನಮ್ಮ ಕೊಂಡಪ್ಪ ರವರು 14 ಮತಗಳನ್ನು ಪಡೆದು. ಅವಿರೋಧವಾಗಿ ಆಯ್ಕೆಯಾದರು. ತಾಲ್ಲೂಕು ದಂಡಾಧಿಕಾರಿ ವರದರಾಜು ಚುನಾವಣಾ ಪ್ರಕ್ರಿಯೆ ನಡೆಸಿದರು. ಈ ಸಂದರ್ಭದಲ್ಲಿ ಆನಂದ್ ರಾವ್ ಹಾಗೂ ಪ್ರಭಾಕರ್ ಟಿ.ಎನ್. ಕೋಟೆ ರವರು ಮಾತನಾಡುತ್ತಾ, ಪಂಚಾಯತಿಯಲ್ಲಿ ಒಳ್ಳೆಯ ಅಭಿವೃದ್ಧಿ  ಕೆಲಸ ಕಾರ್ಯಗಳು ನಡೆಯಲಿ ಎಂದು ಹಾರೈಸಿದರು. ಈ ವೇಳೆ ಮುಖಂಡರುಗಳಾದ ಊರಿನ ಮುಖಂಡರಾದ ಸಿ.ಎನ್. ಆನಂದ್ ರಾವ್ ಎಸ್ ಎಸ್ ಕೆ ಸಂಘದ ಉಪಾಧ್ಯಕ್ಷ ಅಜಯ್ ನಾಗೇಶ್ ,  ಯರ್ರಪ್ಪ ಕೆಇಬಿ , ಆರ್ ಐ. ಶ್ರೀನಿವಾಸ್,  ವಿ.ಎ ರಾಮಲಿಂಗಪ್ಪ ,  ಪಿಡಿಒ ಸುದರ್ಶನ್,  ಎ ಎಸ್ ಐ ರಾಜೇಶ್,  ಕರಾ ವಸೂಲಿಗಾರ ನಾಗರಾಜ್,…

Read More

ಚಿತ್ರದುರ್ಗ, ಸೆಪ್ಟೆಂಬರ್ 2: ಲೈಂಗಿಕ ದೌರ್ಜನ್ಯ ಪ್ರಕರಣ ಎದುರಿಸುತ್ತಿರುವ ಚಿತ್ರದುರ್ಗ ಮುರುಘಾ ಶರಣರ ಆರೋಗ್ಯದಲ್ಲಿ ಏರುಪೇರು ಆಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್ ಮಾಡುವುದಕ್ಕೆ ನಿರ್ಧರಿಸಲಾಗಿದೆ ಎಂದು ಜಿಲ್ಲಾ ಸರ್ಜನ್ ಡಾ‌. ಬಸವರಾಜ್ ತಿಳಿಸಿದ್ದಾರೆ. ಚಿತ್ರದುರ್ಗದಲ್ಲಿ ಶಿವಮೂರ್ತಿ ಶರಣರ ಆರೋಗ್ಯ ತಪಾಸಣೆ ನಡೆಸಿದ ವೈದ್ಯರ ತಂಡವು, ಅವರ ಆರೋಗ್ಯದಲ್ಲಿ ವ್ಯತ್ಯಾಸವಾಗುತ್ತಿರುವುದನ್ನು ಗಮನಿಸಿದೆ. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಲಾಗುವುದು ಎಂದು ಮಾಹಿತಿ ನೀಡಿದರು. ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಶ್ರೀಗಳ ಆರೋಗ್ಯದಲ್ಲಿ ಹೆಚ್ಚು ಏರುಪೇರು ಉಂಟಾಗಿದ್ದು ಅವರನ್ನು ರಸ್ತೆ ಮೂಲಕ ಬೆಂಗಳೂರಿಗೆ ಶಿಫ್ಟ್ ಮಾಡಲಾಗುತ್ತದೆ ಎಂದು ಹೇಳಿದರು. ಶಿವಮೂರ್ತಿ ಶರಣರಿಗೆ ಎದೆನೋವು: ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಶುಕ್ರವಾರ ಬೆಳಗ್ಗೆ ಎದೆನೋವು ಕಾಣಿಸಿಕೊಂಡಿತು. ಎದೆ ನೋವಿನಿಂದ ಬಳಲುತ್ತಿದ್ದ ಶ್ರೀಗಳಿಗೆ ಬೆಳಿಗ್ಗೆಯಿಂದಲೇ ಚಿಕಿತ್ಸೆ ನೀಡಲಾಗಿದ್ದು, ಅದರಲ್ಲಿ ಹೃದಯರೋಗ ಇರುವುದು ಹಾಗೂ ರಕ್ತದೊತ್ತಡ ಹೆಚ್ಚು ಇರುವುದರಿಂದ ಅವರನ್ನು ಬೆಂಗಳೂರಿಗೆ ಶಿಫ್ಟ್ ಮಾಡಬೇಕಾಗಿದೆ. ದಾವಣಗೆರೆ ನಾರಾಯಣ ಹೃದಯದ…

Read More