Subscribe to Updates
Get the latest creative news from FooBar about art, design and business.
- ತಿಪಟೂರು | ಸರಿಯಾಗಿ ಕಾರ್ಯನಿರ್ವಹಿಸದ ಸಂಚಾರ ಸಿಗ್ನಲ್ ಗಳು: ವಾಹನ ಚಾಲಕರಿಂದ ಆಕ್ರೋಶ
- ಕನಕದಾಸರು ಸಮಾಜದ ಓರೆಕೋರೆಗಳನ್ನು ತಿದ್ದಲು ಶ್ರಮಿಸಿದವರು: ಸಿ.ವಿ.ಕುಮಾರ್
- ಅವೈಜ್ಞಾನಿಕ ಸುತ್ತೋಲೆ ವಾಪಸ್ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರಾಂಶುಪಾಲರ, ಉಪನ್ಯಾಸಕರ ಸಂಘ ಆಗ್ರಹ
- ತುಮಕೂರು | ಕಾಂಗ್ರೆಸ್ ಭವನ ಕಟ್ಟಡ ನಿರ್ಮಾಣಕ್ಕೆ ತಡೆಯಾಜ್ಞೆ
- ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ
- ಸಾಮಾಜಿಕ ನ್ಯಾಯ ಎತ್ತಿ ಹಿಡಿದವರು ಕನಕದಾಸರು: ಎಂ.ಬಿ.ಆನಂದ
- ರಾಜ್ಯ ಮಟ್ಟದ ಕನ್ನಡ ಸೇವಾರತ್ನ ಪ್ರಶಸ್ತಿಗೆ ಡಾ.ಸತ್ಯಕ್ಕ ಗಡ್ಡೆ ಆಯ್ಕೆ
- ನರಹಂತಕ ವ್ಯಾಘ್ರನ ಸೆರೆ: ಜನರ ನಿದ್ದೆಗೆಡಿಸಿದ 9 ವರ್ಷದ ಹುಲಿಯನ್ನು ಹಿಡಿದ ಅರಣ್ಯ ಇಲಾಖೆ
Author: admin
ರಾಮನಗರ, ಸೆಪ್ಟೆಂಬರ್ 2: ಕಳೆದೆರಡು ವರ್ಷ ಕೋವಿಡ್ ಹಾವಳಿಯ ಹಿನ್ನಲೆಯಲ್ಲಿ ಸ್ಥಗಿತವಾಗಿದ್ದ ಗಣೇಶೋತ್ಸವ ಈ ಬಾರಿ ಕೋವಿಡ್ ಭೀತಿ ಕಡಿಮೆಯಾದ ಕಾರಣ ಜಿಲ್ಲಾದ್ಯಂತ ವಿಜೃಂಭಣೆಯಿಂದ ಗಣೇಶೋತ್ಸವ ಆಚರಣೆ ಮಾಡಲಾಗುತ್ತಿದ್ದು, ಸಾರ್ವಜನಿಕರು ಮೆರವಣಿಗೆ ಮಾಡಿ ವಿಸರ್ಜನೆ ಮಾಡಲು ಸಜ್ಜಾಗಿರುವ ಹಿನ್ನಲೆಯಲ್ಲಿ ಮುಂಜಾಗ್ರತೆಯಾಗಿ ಜಿಲ್ಲಾಡಳಿತ ಎರಡು ದಿನ ಜಿಲ್ಲೆಯಾದ್ಯಂತ ಮದ್ಯ ಮಾರಾಟವನ್ನು ನಿಷೇಧಿಸಿದೆ. ಜಿಲ್ಲೆಯಲ್ಲಿ ಒಟ್ಟು 1492 ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಿದ್ದು, ಬಹುತೇಕ ಗಣೇಶ ಮೂರ್ತಿಗಳನ್ನು ವಿಜೃಂಭಣೆಯಿಂದ ಮೆರವಣಿಗೆ ಮೂಲಕ ಶುಕ್ರವಾರ ಹಾಗೂ ಭಾನುವಾರ ವಿಸರ್ಜನೆ ಮಾಡಲು ಗಣೇಶೋತ್ಸವ ಸಮಿತಿಗಳು ಸಜ್ಜಾಗಿವೆ. ಅಲ್ಲದೇ ಜಿಲ್ಲೆಯು ಮತೀಯವಾಗಿ ಅತ್ಯಂತ ಸೂಕ್ಷ್ಮ ಪ್ರದೇಶವಾದ ಕಾರಣ ಸೆಪ್ಟೆಂಬರ್ 2 ಹಾಗೂ 04 ರ ಎರಡು ದಿನಗಳ ಕಾಲ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಶಾಂತಿಯುತವಾಗಿ ಯಾವುದೇ ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗುವಂತಹ ಘಟನೆಗಳನ್ನು ತಡೆಯಲು ಮುಂಜಾಗ್ರತಾ ಕ್ರಮವಾಗಿ ದಿನಾಂಕ 02-09-2022 ರಂದು ಬೆಳಿಗ್ಗೆ 6.00 ಗಂಟೆಯಿಂದ ಮಧ್ಯರಾತ್ರಿ 12.00 ಗಂಟೆಯವರೆಗೆ ಮತ್ತು ದಿನಾಂಕ 04-09-2022 ರಂದು…
ಮುರುಘಾ ಮಠದ ವಸತಿ ನಿಲಯದ ಅಪ್ರಾಪ್ತ ಬಾಲಕಿಯರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿದ್ದ ಹಾಸ್ಟೆಲ್ ವಾರ್ಡನ್ ರಶ್ಮಿಯನ್ನು ಶುಕ್ರವಾರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಪ್ರಾಪ್ತ ಬಾಲಕಿಯರು ಮೈಸೂರಿನಲ್ಲಿ ಒಡನಾಡಿ ಸಂಸ್ಥೆಯ ನೆರವಿನೊಂದಿಗೆ ಮುರುಘಾ ಶರಣರು ಸೇರಿದಂತೆ ಐವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದರು. ದೂರು ದಾಖಲಾದ 6 ದಿನಗಳಾದರೂ ಶ್ರೀಗಳ ಬಂಧನ ಮಾಡಿರುವ ಕ್ರಮವನ್ನು ಖಂಡಿಸಿ ರಾಜ್ಯದ ವಿವಿಧೆಡೆ ಪ್ರತಿಭಟನೆ ಮಾಡಲಾಗಿತ್ತು. ಕೊನೆಗೆ ಗುರುವಾರ ರಾತ್ರಿ ಸ್ವಾಮೀಜಿಯನ್ನು ಬಂಧಿಸಲಾಗಿತ್ತು. ಇದೀಗ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸ್ವಾಮೀಜಿಗೆ ನೆರವಾಗಿರುವ ಆರೋಪ ಎದುರಿಸಿ 2ನೇ ಆರೋಪಿಯಾಗಿದ್ದ ರಶ್ಮಿಯನ್ನು ಗುರುವಾರವೇ ವಶಕ್ಕೆ ಪಡೆದು ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿತ್ತು. ಶುಕ್ರವಾರದಂದು ರಶ್ಮಿಯನ್ನು ಬಂಧಿಸಿರುವ ಪೊಲೀಸರು ವೈದ್ಯಕೀಯ ತಪಾಸಣೆಗೆ ಒಳಪಡಿಸಿ ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸುವ ಸಾಧ್ಯತೆ ಇದೆ. ಎರಡನೇ ಆರೋಪಿಯಾಗಿರುವ ರಶ್ಮಿ ಸ್ವಾಮೀಜಿಗೆ ಹಣ್ಣು ತೆಗೆದುಕೊಡುವಂತೆ ಹೇಳಿ ನಮ್ಮನ್ನು ರೂಮಿಗೆ ಕಳುಹಿಸುತ್ತಿದ್ದರು ಎಂದು ಬಾಲಕಿಯರು ವಿಚಾರಣೆ ವೇಳೆ ಆರೋಪಿಸಿದ್ದಾರೆ. ಒಟ್ಟು ಐವರ ವಿರುದ್ಧ ಪೋಕ್ಸೋ…
ನವದೆಹಲಿ : ಕರ್ನಾಟಕದ ಗ್ರಾಮೀಣ ಅಭಿವೃದ್ಧಿಗಾಗಿ ಸ್ಥಳೀಯ ಸಂಸ್ಥೆಗಳಿಗೆ ಕೇಂದ್ರ ಹಣಕಾಸು ಇಲಾಖೆಯು 628 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಕೇಂದ್ರ ಹಣಕಾಸು ಇಲಾಖೆಯು ದೇಶದ ವಿವಿಧ ರಾಜ್ಯಗಳಿಗೆ ಒಟ್ಟು 4,190 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದ್ದು, ಈ ಪೈಕಿ ಕರ್ನಾಟಕಕ್ಕೆ 628 ಕೋಟಿ ರೂ. ಹಣ ಬಿಡುಗಡೆ ಮಾಡಿದೆ. 15ನೇ ಹಣಕಾಸು ಆಯೋಗದ ಶಿಫಾರಸು ಪ್ರಕಾರ ಈ ಅನುದಾನ ಬಿಡುಗಡೆ ಮಾಡಲಾಗಿದೆ. ಈ ಹಣದಲ್ಲಿ ಗ್ರಾಮೀಣಾ ಪ್ರದೇಶಗಳ ಸ್ವಚ್ಛತೆ, ಬಯಲು ಶೌಚಾಲಯ ಮುಕ್ತ ಯೋಜನೆಗಳ ಅನುಷ್ಠಾನಕ್ಕೆ ಬಳಸಬೇಕು. ಕುಡಿಯುವ ನೀರು, ಮಳೆ ನೀರು ಕೊಯ್ಲು ಮತ್ತು ನೀರು ಮರುಬಳಕೆಯ ಸೌಕರ್ಯ ಕಲ್ಪಿಸಬೇಕು ಎಂದು ಸೂಚನೆ ನೀಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ವಾಷಿಂಗ್ಟನ್: ಸ್ಟಾರ್‌ಬಕ್ಸ್ ತನ್ನ ಮುಂದಿನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಭಾರತೀಯ ಮೂಲದ ಲಕ್ಷ್ಮಣ್ ನರಸಿಂಹನ್ ಅವರನ್ನು ಹೆಸರಿಸಿದೆ. ಲಕ್ಷ್ಮಣ್ ಅಕ್ಟೋಬರ್ 1 ರಂದು ಕಂಪನಿಗೆ ಸೇರಿಕೊಳ್ಳಲಿದ್ದಾರೆ. ಏಪ್ರಿಲ್ 2023ರಲ್ಲಿ ಪ್ರಸ್ತುತ ಸಿಇಓ ಹೊವಾರ್ಡ್ ಷುಲ್ಟ್ಜ್ ನಿರ್ಗಮನದ ನಂತ್ರ ಲಕ್ಷ್ಮಣ್ ಈ ಸ್ಥಾನವನ್ನು ಅಲಂಕರಿಸಲಿದ್ದಾರೆ. ಸ್ವತಂತ್ರ ಸ್ಟಾರ್‌ಬಕ್ಸ್ ನಿರ್ದೇಶಕ ಮಂಡಳಿಯ ಅಧ್ಯಕ್ಷ ಮೆಲೋಡಿ ಹಾಬ್ಸನ್ ಅವರು ಲಕ್ಷ್ಮಣ್ ನರಸಿಂಹನ್ ಅವರನ್ನು ಸ್ಫೂರ್ತಿದಾಯಕ ನಾಯಕ ಎಂದು ಕರೆದಿದ್ದಾರೆ. ಸ್ಟಾರ್‌ಬಕ್ಸ್‌ನ ಬೆಳವಣಿಗೆಯನ್ನು ವೇಗಗೊಳಿಸಲು ಮತ್ತು ನಮ್ಮ ಮುಂದಿರುವ ಅವಕಾಶಗಳನ್ನು ಈಡೇರಿಸಿಕೊಳ್ಳಲು ಸೂಕ್ತವಾದ ಆಯ್ಕೆಯಾಗಿದೆ’ ಎಂದು ಅವರು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕೊರಟಗೆರೆ: ಮೊಮ್ಮಗನನ್ನು ಸರಕಾರಿ ಶಾಲೆಗೆ ಬಿಟ್ಟು ಮನೆಗೆ ಹೋಗುತ್ತಿದ್ದ ವೃದ್ದೆಗೆ ರಾಜ್ಯ ಹೆದ್ದಾರಿಯಲ್ಲಿ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ಜೆಟ್ಟಿಅಗ್ರಹಾರ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ಅಪಘಾತವಾಗಿ ವೃದ್ದೆಯ ಕಾಲು ಮುರಿದಿದೆ. ಜೆಟ್ಟಿಅಗ್ರಹಾರ ಗ್ರಾಮದ ದಾಸಪ್ಪನ ಮಡದಿಯಾದ ಗಿರಿಯಮ್ಮ(65)ನ ಮೇಲೆ ದ್ವಿಚಕ್ರ ವಾಹನ ಹರಿದು ವೃದ್ದೆಯ ಎರಡು ಕಾಲುಗಳು ಮುರಿದು ಕೊರಟಗೆರೆ ಆಸ್ಪತ್ರೆಗೆ ರವಾನಿಸಲಾಗಿದೆ. ಕೇಶಿಪ್ ವಿರುದ್ದ ಸ್ಥಳೀಯರಿಂದ ಪ್ರತಿಭಟನೆ: ಜೆಟ್ಟಿಅಗ್ರಹಾರ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ತಿಂಗಳಿಗೆ ನೂರಾರು ಅಪಘಾತ ಆಗುತ್ತಿವೆ. ಅಪಘಾತವಾದಾಗ ಮಾತ್ರ ಪೊಲೀಸರು ಬರುತ್ತಾರೆ. ಅಪಘಾತದಲ್ಲಿ ಸತ್ತವರ ಕುಟುಂಬದ ನೋವು ಕೇಳೋರು ಯಾರು ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆ ಉಬ್ಬು ನಿರ್ಮಾಣಕ್ಕೆ ಸ್ಥಳೀಯರ ಆಗ್ರಹ: ರಾಜ್ಯ ಹೆದ್ದಾರಿಯಲ್ಲಿ ನಡೆಯುತ್ತಿರುವ ಅಪಘಾತ ತಡೆಯಲು ವೈಜ್ಞಾನಿಕ ರಸ್ತೆ ಉಬ್ಬುಗಳನ್ನು ನಿರ್ಮಾಣ ಮಾಡಬೇಕಿದೆ. 100 ಕಿ.ಮೀ. ವೇಗವಾಗಿ ಬರುವ ವಾಹನಗಳಿಂದ ಪದೇ ಪದೇ ಅಪಘಾತ ಆಗುತ್ತಿವೆ. ದಯವಿಟ್ಟು ಅಪಘಾತ ತಡೆದು ಜನರ ಜೀವ ಉಳಿಸಬೇಕಿದೆ…
ಕೊರಟಗೆರೆ: ಗ್ರಾಮದಲ್ಲಿ ಹಾದುಹೋಗಿರುವ ಪ್ರಮುಖ ರಸ್ತೆಯಲ್ಲಿ ಪ್ರತಿನಿತ್ಯ ರಸ್ತೆ ಅಪಘಾತಗಳು ನಡೆಯುತ್ತಿದ್ದು ಇದರಿಂದ ಗ್ರಾಮದ ಸಾರ್ವಜನಿಕರು ನೆಮ್ಮದಿಯಿಂದ ಓಡಾಡಲು ಸಾಧ್ಯವಾಗುತ್ತಿಲ್ಲ ಎಂದು ಸ್ವತಹ ಗ್ರಾಮಸ್ಥರೇ ರಸ್ತೆ ಬಂದ್ ಮಾಡಿ ಆಕ್ರೋಶ ಹೊರ ಹಾಕಿರುವ ಘಟನೆ ವರದಿಯಾಗಿದೆ. ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಜಟ್ಟಿ ಅಗ್ರಹಾರದಲ್ಲಿ ಇಂದು ಬೆಳಗ್ಗೆ ಖಾಸಗಿ ಬಸ್ಸೊಂದು ವೃದ್ದೆಗೆ ಗುದ್ದಿದ ಪರಿಣಾಮ ವೃದ್ದೆ ತೀವ್ರವಾಗಿ ಗಾಯಗೊಂಡಿದ್ದು ಘಟನೆಯನ್ನು ಖಂಡಿಸಿ ಗ್ರಾಮಸ್ಥರು ದಿಡೀರ್ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಇನ್ನು ಗ್ರಾಮಸ್ಥರ ರಸ್ತೆ ತಡೆಯಿಂದ ಕಿಲೋಮೀಟರ್ಗಟ್ಟಲೆ ರಸ್ತೆಯಲ್ಲಿ ವಾಹನಗಳು ನಿಂತಿದ್ದು ಕೆಲಕಾಲ ವಾಹನ ಸವಾರರು ತೀವ್ರ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಕಳೆದ ಒಂದುವರೆ ವರ್ಷದ ಹಿಂದೆಯೂ ಸಹ ಗ್ರಾಮದಲ್ಲಿ ಬೀಕರ ಅಪಘಾತವಾಗಿದ್ದು ಹಲವರು ಮೃತಪಟ್ಟಿದ್ದರು ಇನ್ನು ಪದೇ ಪದೇ ಗ್ರಾಮದಲ್ಲಿ ರಸ್ತೆ ಅಪಘಾತಗಳು ನಡೆಯುತ್ತಿದ್ದರು ಸಹ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಎಂದು ಗ್ರಾಮಸ್ಥರು ತೀವ್ರ ಅಕ್ರೋಶ ಹೊರ ಹಾಕಿದ್ದಾರೆ. ಮಾಹಿತಿ ತಿಳಿದ ಕೂಡಲೇ ಕೊರಟಗೆರೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು ಗ್ರಾಮಸ್ಥರನ್ನು…
ಚಿತ್ರದುರ್ಗ : ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮುರಘಾಮಠದ ಶ್ರೀಗಳನ್ನು ಬಂಧಿಸಲಾಗಿದೆ. ಸದ್ಯ ಅವರನನ್ನು 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದ್ದು , ಸದ್ಯ ಮರುಘಾಮಠದ ಶ್ರೀಗಳ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಶ್ರೀಗಳಿಗೆ ಎದೆನೋವು ಕಾಣಿಸಕೊಂಡ ಹಿನ್ನೆಲೆಯಲ್ಲಿ ಮುರುಘಾಮಠದ ಶ್ರೀಗಳನ್ನು ಜೈಲಿನಿಂದ ಆಸ್ಪತ್ರೆಗೆ ರವಾನಿಸಲಾಗಿದೆ. ಮುರುಘಾಮಠದ ಶ್ರೀಗಳ ಬಂಧನದ ಕುರಿತಂತೆ ಪ್ರತಿಕ್ರಿಯೆ ಮಠದ ಪರ ವಕೀಲ ಉಮೇಶ್, ಮುರುಘಾ ಮಠದ ಪೀಠಾಧ್ಯಕ್ಷ ಶಿವಮೂರ್ತಿ ಮುರುಘಾ ಶರಣರನ್ನು ಪೊಲೀಸರು ಬಂಧಿಸಿಲ್ಲ. ಕಾನೂನಿಗೆ ಗೌರವ ನೀಡಲೆಂದು ಸ್ವಾಮೀಜಿಯೇ ಪೊಲೀಸರಿಗೆ ಶರಣಾಗಿದ್ದಾರೆ. ಶ್ರೀಗಳಿಗೆ ಜಾಮೀನು ಕೋರಿ ಇಂದು ಕೋರ್ಟ್ಗೆ ಮತ್ತೆ ಅರ್ಜಿ ಸಲ್ಲಿಸುತ್ತೇವೆ. ನಾವು ನಿನ್ನೆ ನ್ಯಾಯಾಲಯಕ್ಕೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ರದ್ದಾಗಿದೆ. ಇಂದು ಮತ್ತೊಮ್ಮೆ ಜಾಮೀನಿಗೆ ಅರ್ಜಿ ಸಲ್ಲಿಸುತ್ತೇವೆ. ಮುರುಘಾ ಶ್ರೀಗಳು ಗೆದ್ದು ಬರುವ ವಿಶ್ವಾಸ ಇದೆ ಎಂದು ಅವರು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…
ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪೋಕ್ಸೋ ಕಾಯ್ದೆ ದಾಖಲಾಗಿದ್ದರೂ, ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರ ಬಂಧನವಾಗಿರಲಿಲ್ಲ. ಇದೀಗ ಕೊನೆಗೂ ಸ್ವಾಮೀಜಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧನದ ಭೀತಿ ಎದುರಿಸುತ್ತಿದ್ದ ಶ್ರೀಗಳು ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಸೆ.2ರಂದು ವಿಚಾರಣೆಯಾಗಲಿದೆ. ವರದಿಗಳ ಪ್ರಕಾರ ಈ ಬೆಳವಣಿಗೆಗಳ ನಡುವೆಯೇ ಇಂದು ಸಂಜೆ ಎಲ್ಲ ಆರೋಪಿಗಳ ವಿರುದ್ಧ ಲುಕೌಟ್ ನೋಟಿಸ್ ಜಾರಿಯಾಗಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಕೊರಟಗೆರೆ : ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಸಿದ್ಧರಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಮಟೇನಹಳ್ಳಿ ಗ್ರಾಮಕ್ಕೆ ರಸ್ತೆ ಇಲ್ಲದೆ ಹರಿಯುವ ಹಳ್ಳದಲ್ಲಿ ಪ್ರತಿ ನಿತ್ಯವೂ ಓಡಾಡುವ ಸ್ಥಿತಿ ನಿರ್ಮಾಣವಾಗಿತ್ತು ಈ ವಿಚಾರವಾಗಿ ನಮ್ಮ ತುಮಕೂರು ವಾಹಿನಿಯು ನಿರಂತರವಾದ ವರದಿಯನ್ನು ಪ್ರಸಾರ ಮಾಡಿತ್ತು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ಗಮನಕ್ಕೆ ನಮ್ಮ ವರದಿಗಾರ ಮಂಜುಸ್ವಾಮಿ.ಎಂ.ಎನ್ ರವರು ತಂದಿದ್ದರು. ಮೂಲ ಸೌಕರ್ಯಗಳಿಂದ ವಂಚಿತವಾಗಿದ್ದ ಕುಮಟೇನಹಳ್ಳಿ ಗ್ರಾಮಕ್ಕೆ ತಹಶೀಲ್ದಾರ್ ನಹೀದ ಜಂ ಜಂ, ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ರವಿಕುಮಾರ್, ಸಹಾಯಕ ಇಂಜಿನಿಯರ್ ಮುಶೀರ್, ರಾಜಸ್ವ ನಿರೀಕ್ಷಕರಾದ ಅಮ್ಜದ್, ಗ್ರಾಮ ಲೆಕ್ಕಿಗ ರಮೇಶ, ತಾಲ್ಲೂಕು ಸರ್ವೆ ಇಲಾಖೆಯ ನಾಗಲಾಂಬಿಕೆ, ಮತ್ತು ಗ್ರಾಮ ಸಹಾಯಕರು ಈ ಗ್ರಾಮಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ನಕಾಶೆ ರಸ್ತೆ ತೆರವು ಮಾಡಲು ಭೂ ಸರ್ವೆ ಮಾಡಿ ಗ್ರಾಮದ ಸರ್ವೇ ನಂಬರ್ 10 ರ ಮತ್ತು 59 ಮದ್ಯೇ ಹಾದು ಹೋಗುವ ಬಂಡಿ ಜಾಡು ರಸ್ತೆ ಒತ್ತುವರಿ ಮಾಡಿರುವ ಮಾಲೀಕರಿಗೆ…
ನವದೆಹಲಿ : ದೇಶದ ಜನತೆಗೆ ಗಣೇಶ ಹಬ್ಬಕ್ಕೆ ಸಿಹಿಸುದ್ದಿ ಸಿಕ್ಕಿದ್ದು, ಇಂಡಿಯನ್ ಆಯಿಲ್ ಸೆಪ್ಟೆಂಬರ್ 1 ರಂದು ಬಿಡುಗಡೆ ಮಾಡಿದ ಬೆಲೆಗಳ ಪ್ರಕಾರ. 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 91.5 ರೂ.ಗೆ ಇಳಿಸಲಾಗಿದೆ. ಈ ಮೂಲಕ ನವದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ 1,885 ರೂಪಾಯಿ ಇದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಿನ್ನೆಯವರೆಗೆ ರೂ. 1976.50. ಈಗ ಅದು 1885 ರೂ.ಗೆ ಇಳಿದಿದೆ. ಅದೇ ರೀತಿ, ಕೋಲ್ಕತಾದಲ್ಲಿ, ಇದು 2095.50 ರಿಂದ 1995.50 ಕ್ಕೆ ಇಳಿದರೆ, ಮುಂಬೈನಲ್ಲಿ ಇದು 1936.50 ರಿಂದ 1,844 ರೂ.ಗೆ ಇಳಿದಿದೆ. ಚೆನ್ನೈನಲ್ಲಿ, ನೀವು 2141 ರೂ.ಗಳ ಬದಲು 2,045 ರೂಪಾಯಿಗಳನ್ನು ಪಾವತಿಸಬೇಕಾಗುತ್ತದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy