Subscribe to Updates
Get the latest creative news from FooBar about art, design and business.
- ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ
- ಪರಿಶಿಷ್ಟರ ಸಮಸ್ಯೆಗಳ ಶೀಘ್ರ ವಿಲೇವಾರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
- ಜ.31ರವರೆಗೆ ರಸ್ತೆ ಸುರಕ್ಷಾ ಮಾಸಾಚರಣೆ ಅಭಿಯಾನ
- ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ
- ತುಮಕೂರು: 40 ವರ್ಷ ವಾಸವಿದ್ದರೂ ಸಿಗದ ಹಕ್ಕು ಪತ್ರ: ನಿವಾಸಿಗಳ ಆಕ್ರೋಶ
- ಹುಯಿಲ್ ದೊರೆ ನೂತನ ಗ್ರಾ.ಪಂ. ಕಟ್ಟಡ ಉದ್ಘಾಟನೆ: ಗ್ರಾಮ ಪಂಚಾಯ್ತಿಗಳೇ ಗ್ರಾಮಗಳ ಸರ್ಕಾರವಾಗಬೇಕು: ಶಾಸಕ ಟಿ.ಬಿ.ಜಯಚಂದ್ರ
- ತುಮಕೂರು: ಗಾಜಿನ ಮನೆಯಲ್ಲಿ ‘ಸಿರಿಧಾನ್ಯ ಖಾದ್ಯಗಳ’ ಘಮಲು!
- 48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ: ಎಸ್ಪಿ ಅಶೋಕ್ ಗೆ ಪದೋನ್ನತಿ
Author: admin
ತುಮಕೂರು: ತುಮಕೂರಿನಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟವನ್ನು ಆಯೋಜಿಸುವ ಚಿಂತನೆ ಇದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಶನಿವಾರ ತಿಳಿಸಿದರು. ತುಮಕೂರು ವಿಶ್ವವಿದ್ಯಾಲಯದ ಆವರಣದಲ್ಲಿರುವ ಟೆನ್ನಿಸ್ ಕೋರ್ಟ್ ಹಾಗೂ ಆಟಗಾರರ ಕೊಠಡಿಯ ನವೀಕರಣಗೊಳಿಸುವ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಕಳೆದ ಬಾರಿ ಮಂಗಳೂರಿನಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟಗಳು ನಡೆದಿವೆ. ಈ ಬಾರಿ ತುಮಕೂರಿನಲ್ಲಿ ಆಯೋಜಿಸುವಂತೆ ಅಸೋಸಿಯೇಷನ್‌ರವರನ್ನು ಕೇಳಿದ್ದೇನೆ. ಅವರು ಸಹ ನನ್ನ ಮನವಿಗೆ ಒಪ್ಪಿಗೆ ಸೂಚಿಸಿದ್ದಾರೆ ಎಂದರು. ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಟೆನ್ನಿಸ್, ಬ್ಯಾಸ್ಕೆಟ್ ಬಾಲ್, ಜಿಮ್ನಾಸ್ಟಿಕ್ ಸೇರಿದಂತೆ ಎಲ್ಲ ರೀತಿಯ ಕ್ರೀಡೆಗಳು ನಡೆಯಲಿವೆ ಎಂದರು. ತುಮಕೂರಿನಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟಗಳನ್ನು ಆಯೋಜಿಸಲು ಸರ್ಕಾರವು 5 ಕೋಟಿ ರೂ. ಹಣ ಸಹ ನೀಡಲಿದೆ ಎಂದು ಅವರು ಹೇಳಿದರು. ಈ ಟೆನ್ನಿಸ್ ಕೋರ್ಟ್ ನಿರ್ಮಾಣದ ಬಳಿಕ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳನ್ನು ಕರೆತಂದು ಆಡಿಸುವ ಇಂಗಿತವನ್ನು ಅವರು ವ್ಯಕ್ತಪಡಿಸಿದರು. ಶಿಕ್ಷಣ ಮತ್ತು ಕ್ರೀಡೆ ಒಟ್ಟೊಟ್ಟಿಗೆ ಕಲಿಯಲು ಸಾಧ್ಯವಿಲ್ಲ ಎಂಬ ತಪ್ಪು…
ಬೆಂಗಳೂರು: ಭಾರೀ ಮಳೆಗೆ ಬೆಂಗಳೂರಲ್ಲಿ ಮನೆಯ ಗೋಡೆ ಕುಸಿದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದ್ದು, ವೈಟ್ ಫೀಲ್ಡ್ ನಲ್ಲಿ ಈ ದುರ್ಘಟನೆ ನಡೆದಿದೆ. ಶಶಿಕಲಾ(35) ಮೃತಪಟ್ಟ ಮಹಿಳೆಯಾಗಿದ್ದಾರೆ. ಇವರು ಖಾಸಗಿ ಕಂಪನಿ ಕಂಪನಿಯಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದರು. ಇಡೀ ರಾತ್ರಿ ಮಳೆಗೆ ಗೋಡೆ ನೆನೆದಿದ್ದರಿಂದ ಕುಸಿದು ಶಶಿಕಲಾ ಮೇಲೆ ಬಿದ್ದಿದೆ. ಪರಿಣಾಮ ಶಶಿಕಲಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ಶಶಿಕಲಾಗೆ ಇಬ್ಬರು ಸಣ್ಣ ಮಕ್ಕಳಿದ್ದು, ಗಂಡ ಕೂಡ ಕೂಲಿ ಕೆಲಸ ಮಾಡುತ್ತಿದ್ದರು. ಘಟನಾ ಸ್ಥಳಕ್ಕೆ ಮಹದೇವಪುರ ಪೊಲೀಸರು ಭೇಟಿ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ಬೀದರ್ : ಮಳೆ ಹಾನಿಯ ಕುರಿತು ಸಂಪೂರ್ಣ ಮಾಹಿತಿ ಕಲೆ ಹಾಕಿ ನಿಯಮದಡಿ ಪರಿಹಾರಕ್ಕೆ ಕ್ರಮವಹಿಸಬೇಕು ಎಂದು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಮಳೆ ಹಾನಿಯ ಕುರಿತು ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು. ನಗರದಲ್ಲಿ ಚರಂಡಿಗಳು ತುಂಬಿ ತುಳುಕುತ್ತಿರುವುದು ಕಂಡು ಬರುತ್ತಿದೆ. ಒಂದು ವಾರದೊಳಗೆ ಚರಂಡಿ ಸ್ವಚ್ಛತೆಗೆ ಕ್ರಮವಹಿಸಬೇಕು. ಇಲ್ಲದಿದ್ದರೆ ಇದಕ್ಕೆ ಸಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು. ಜಿಲ್ಲೆಯ ಜನರಿಗೆ ಯಾವುದೇ ರೀತಿಯಲ್ಲಿ ಕುಡಿಯುವ ನೀರಿನ ಬಗ್ಗೆ ಸಮಸ್ಯೆಯಾಗದಂತೆ ಕ್ರಮವಹಿಸಬೇಕು ಎಂದರು. ಈ ಸಂದರ್ಭದಲ್ಲಿ ಪೌರಾಡಳಿತ ಹಾಗೂ ಹಜ್ ಖಾತೆ ಸಚಿವ ರಹೀಮ್ ಖಾನ್, ನಗರಸಭೆ ಅಧ್ಯಕ್ಷ ಮುಹಮ್ಮದ್ ಗೌಸ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಅಪರ ಜಿಲ್ಲಾಧಿಕಾರಿ ಶಿವಕುಮಾರ್ ಶೀಲವಂತ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ…
ಬೆಂಗಳೂರು: ಬೆಂಗಳೂರಿನಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಕೇವಲ 24 ಗಂಟೆಗಳಲ್ಲಿ ಬರೊಬ್ಬರಿ 103 ಮಿ.ಮೀ ಮಳೆಯಾಗಿದ್ದು, ಮಳೆಯ ರೌದ್ರಾವತಾರದಿಂದ ಬರೊಬ್ಬರಿ 10 ಕಿ.ಮೀ ವರೆಗೂ ಟ್ರಾಫಿಕ್ ಜಾಮ್ ಉಂಟಾಗಿರುವ ಘಟನೆ ನಡೆದಿದೆ. ಸೋಮವಾರ ಸುರಿದ ಭಾರೀ ಮಳೆಯಿಂದಾಗಿ ಬೆಂಗಳೂರು ನಗರದ ಹಲವು ಭಾಗಗಳು ಜಲಾವೃತ್ತವಾಗಿದ್ದು, ರಸ್ತೆಗಳಲ್ಲಿ ನೀರು ನಿಂತು ಸವಾರರು ಪರದಾಡಿದರು. ಜನ ವಸತಿ ಪ್ರದೇಶಗಳು ಜಲಾವೃತಗೊಂಡಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ. ಈ ಕುರಿತು ಮಾಹಿತಿ ನೀಡಿರುವ ಹವಾಮಾನ ಇಲಾಖೆ ಬೆಂಗಳೂರಿನಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲೆಯ 103 ಮಿಮೀ ಮಳೆಯಾಗಿದೆ. ಮುಂಬರುವ ದಿನಗಳಲ್ಲಿ ನಗರದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ನಗರದ ಹವ್ಯಾಸಿ ಹವಾಮಾನ ವೀಕ್ಷಕರ ಪ್ರಕಾರ, ಬೆಂಗಳೂರಿನಲ್ಲಿ ಈ ಪೂರ್ವ ಮಾನ್ಸೂನ್ ಋತುವಿನಲ್ಲಿ, ಕಳೆದ ಎರಡು ದಿನಗಳಿಂದ 15 ರಿಂದ 20 ಸೆಂ.ಮೀ. ಮಳೆಯಾಗುತ್ತಿದೆ ಎಂದು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ಬೀದರ್: ಜಿಲ್ಲೆಯ ಹಲವು ಕಡೆ ಇಂದು ಸಾಯಂಕಾಲ ಗುಡುಗು ಸಹಿತವಾಗಿ ಭಾರೀ ಮಳೆಯಾಗಿದೆ. ಜಿಲ್ಲೆಯಲ್ಲಿ ಮುಂಜಾನೆಯಿಂದ ಮಧ್ಯಾಹ್ನದವರೆಗೆ ಬಿಸಿಲಿನ ವಾತಾವರಣವಿತ್ತು. ಸಾಯಂಕಾಲ ಸಮಯದಲ್ಲಿ ಮೋಡವಾಗಿ ಗುಡುಗು ಹಾಗೂ ಬಿರುಗಾಳಿ ಸಹಿತ ಮಳೆಯಾಗಿದೆ. ಬೀದರ್ ನಗರ ಸೇರಿದಂತೆ ನೌಬಾದ್ ಹಾಗೂ ಸುತ್ತಲಿನ ಹಳ್ಳಿಗಳಲ್ಲಿ ಭಾರೀ ಮಳೆಯಾಗಿದೆ. ಜಿಲ್ಲೆಯಲ್ಲಿ ಸೇರಿದಂತೆ ಸೋಮವಾರ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ: ಪಟ್ಟಣ ಪಂಚಾಯಿತಿ ಯಿಂದ ಎಫ್ ಎಸ್ ಟಿಪಿ ಘಟಕ ಸ್ಥಾಪನೆಗೆ ಕಸಬಾ ಹೋಬಳಿ ಕೊರಟಗೆರೆ ಸರ್ವೇ.ನಂ. 181ರಲ್ಲಿ 3 ಎಕೆರೆ ಭೂ ಮಂಜುರಾತಿಗೆ ಕೋರಿದ ಹಿನ್ನೆಲೆ ತಹಶೀಲ್ದಾರ್ ಕೆ.ಮಂಜುನಾಥ್ ನೇತೃತ್ವದಲ್ಲಿ ಕಂದಾಯ ಇಲಾಖೆ ಅಧಿಕಾರಿ ವರ್ಗ ಸರ್ವೇ ಕಾರ್ಯದಲ್ಲಿ ಭಾಗಿಯಾಗಿತ್ತು. ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಎಫ್‌ಎಸ್‌ಟಿಪಿ ಘಟಕ ನಿರ್ಮಾಣಕ್ಕೆ ಸರ್ವೇ ನಂಬರ್ 181ರಲ್ಲಿ ಸರ್ಕಾರಿ ಗೋಮಾಳದಲ್ಲಿ 3 ಎಕೆರೆ ಭೂಮಿ ನೀಡುವಂತೆ ಪ.ಪಂಚಾಯಿತಿಯು ಕಂದಾಯ ಇಲಾಖೆಗೆ ಕೋರಿತ್ತು. ಜಿಲ್ಲಾಧಿಕಾರಿಗಳ ಆದೇಶದ ಅನ್ವಯ ತಹಶೀಲ್ದಾರ್ ಮಂಜುನಾಥ್ ನೇತೃತ್ವದಲ್ಲಿ ಅಧಿಕಾರಿಗಳು ಸರ್ವೇ ಮಾಡಿದ್ದು ಶೀಘ್ರದಲ್ಲಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸಾರ್ವಜನಿಕರಿಂದ ತಕರಾರು: ಜೀವನಕ್ಕೆಂದು ಇರುವ ಭೂಮಿಯನ್ನು ಕಿತ್ತುಕೊಂಡು ಕಸ ವಿಲೇವಾರಿ ಘಟಕಕ್ಕೆ ಭೂ ಮಂಜೂರು ಮಾಡಬೇಡಿ. ಗಂಗಾಧರೇಶ್ವರ ಕೆರೆಗೆ ಸದರಿ ಕಾಲುವೆ ಮೂಲಕವೇ ಮುಂದೆ ಸಾಗುತ್ತಿದೆ. ಕಾಲುವೆ ನೀರನ್ನು ಪ್ರಾಣ ಪಕ್ಷಿಗಳು ಸೇವಿಸುತ್ತವೆ. ತ್ಯಾಜ್ಯ ವಸ್ತುವಿನಿಂದ ಪರಿಸರದ ಮಾಲಿನ್ಯ ಜೊತೆಗೆ ಮನುಷ್ಯನ ಆರೋಗ್ಯದ ಮೇಲೆ ದುಷ್ಪಾರಿಣಾಮ ಬೀರಲಿದೆ…
ಬೀದರ್: ಜಿಲ್ಲೆಯ ಸಂತಪೂರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಕೌಟಾ–ಬಿ ಗ್ರಾಮದ ಮುಖಾಂತರ ವಾಹನಗಳು ಅತೀ ವೇಗವಾಗಿ ಚಲಿಸುತ್ತಿರುವದನ್ನು ಗಮನಿಸಿದ ಸಂತಪೂರ ಪೊಲೀಸರು ಅಪಘಾತ ತಡೆಯಲು ಬ್ಯಾರಿಕೇಡ್ ಅಳವಡಿಕೆ ಮಾಡಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರ ನಿರ್ದೇಶನದಂತೆ ಸಂತಪೂರ ಠಾಣೆಯ ಪಿ.ಎಸ್.ಐ ನಂದ ಕುಮಾರ್ ಅವರ ನೇತೃತ್ವದಲ್ಲಿ ಅಪಘಾತದಲ್ಲಿ ಅಮಾಯಕರ ಪ್ರಾಣ ರಕ್ಷಣೆ ಮಾಡುವ ನಿಟ್ಟಿನಲ್ಲಿ ಬ್ಯಾರಿಕೇಡ್ ಅಳವಡಿಸಿ ವಾಹನಗಳ ವೇಗ ತಗ್ಗಿಸಲು ಕ್ರಮವಹಿಸಲಾಗಿದೆ. ಸಾರ್ವಜನಿಕರ ಪ್ರಾಣ ರಕ್ಷಣೆ ಹಾಗೂ ಅಪಘಾತ ತಡೆಯಲು ಮುಂಜಾಗೃತ ಕ್ರಮವಾಗಿ ಕಾರ್ಯ ಪ್ರವರ್ತರಾದ ಸಂತಪೂರ ಪೊಲೀಸ್ ಠಾಣೆಯ ಅಧಿಕಾರಿ, ಸಿಬ್ಬಂದಿರವರ ಕಾರ್ಯಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಶ್ಲಾಘಿಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ತುಮಕೂರು: ಆಂಧ್ರಪ್ರದೇಶ ಕರ್ನೂಲ್ ಬಳಿ ನಡೆದ ಭೀಕರ ಕಾರು ಅಪಘಾತದಲ್ಲಿ ತುಮಕೂರು ಮೂಲದ ಮೂವರು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಭಾನುವಾರ ರಾತ್ರಿ ಈ ದುರ್ಘಟನೆ ಸಂಭವಿಸಿದೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಕೆಂಕೆರೆ ಗ್ರಾಮದ ನಿವಾಸಿಗಳಾದ ನವೀನ್, ಸಂತೋಷ್ ಹಾಗೂ ಲೋಕೇಶ್ ಎಂಬವರು ಮೃತಪಟ್ಟವರು ಎಂದು ತಿಳಿದು ಬಂದಿದೆ. ಕೆಂಕೆರೆ ನವೀನ್ ಚಿಕ್ಕನಾಯಕನಹಳ್ಳಿ, ಸ್ಥಳೀಯ ಬಿಜೆಪಿ ಮುಖಂಡರಾಗಿದ್ದು, ತಾಲೂಕು ಪಂಚಾಯಿತಿಯ ಮಾಜಿ ಅಧ್ಯಕ್ಷ ಆಗಿದ್ದರು. ಸಂತೋಷ್ ಕೂಡಾ ಬಿಜೆಪಿ ಜಿಲ್ಲಾ ಘಟಕದ ಕಾರ್ಯದರ್ಶಿ ಆಗಿದ್ದರು. ಸಂತೋಷ್ ಹುಟ್ಟುಹಬ್ಬದ ಆಚರಣೆಗಾಗಿ ಆಂದ್ರ ಪ್ರದೇಶದ ಪ್ರವಾಸಕ್ಕೆ ಒಟ್ಟು 6 ಮಂದಿ ತೆರಳಿದ್ದರು. ಮಂತ್ರಲಾಯ ದರ್ಶನ ಮುಗಿಸಿ ಶ್ರೀಶೈಲಕ್ಕೆ ಹೋಗುವ ಸಂದರ್ಭದಲ್ಲಿ ಕರ್ನೂಲ್ ಬಳಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿದೆ. ಪರಿಣಾಮವಾಗಿ ಮೂವರೂ ಸ್ಥಳದಲ್ಲೇ ಮೃತಪಟ್ಟಿದ್ದು, ಇತರ ಮೂವರಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…
ತುಮಕೂರು: ಅಲ್ಪಾವಧಿಯಲ್ಲಿ ವೃತ್ತಿಜೀವನ ನಡೆಸಲು ಡಿಪ್ಲೋಮಾ ಕೋರ್ಸ್ ಗಳು ಉಪಯುಕ್ತವಾಗಿವೆ ಎಂದು ಹಿರೇಹಳ್ಳಿ ಕೈಗಾರಿಕಾ ಪ್ರದೇಶ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ)ದ ಪ್ರಾಚಾರ್ಯ ಜಯಪ್ರಕಾಶ್ ಜೆ.ಕೆ. ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಹಿರೇಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಜಿಟಿಟಿಸಿ ಸಂಸ್ಥೆಯಲ್ಲಿರುವ ಕೋರ್ಸುಗಳ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಜಿಟಿಟಿಸಿ ಸಂಸ್ಥೆಯು ಜಿಲ್ಲೆಯಲ್ಲೇ ಹೆಸರಾಂತ ತಾಂತ್ರಿಕ ಶಿಕ್ಷಣ ಸಂಸ್ಥೆಯಾಗಿದ್ದು, ಸಂಸ್ಥೆಯಲ್ಲಿ ಪ್ರಾಯೋಗಿಕ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ. ವಿಶೇಷವಾಗಿ ವಿದ್ಯಾರ್ಥಿನಿಯರಿಗೆ ಶೇ. 33ರಷ್ಟು ಸೀಟುಗಳು ಮೀಸಲಿಡಲಾಗಿದೆ. ಅರ್ಹ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರದ ವಿದ್ಯಾಸಿರಿ ವಿದ್ಯಾರ್ಥಿ ವೇತನ ಸೌಲಭ್ಯವಿರುತ್ತದೆ ಎಂದು ತಿಳಿಸಿದರು. ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ 2025–26ನೇ ಶೈಕ್ಷಣಿಕ ವರ್ಷದಲ್ಲಿ ವಿಶಿಷ್ಠ ಉದಯೋನ್ಮುಖ ಡಿಪ್ಲೋಮಾ ಕೋರ್ಸುಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಬಹು ರಾಷ್ಟ್ರೀಯ ಕೈಗಾರಿಕೆಗಳಿಗೆ ಬಹು ಬೇಡಿಕೆಯ ಕೋರ್ಸ್ ಗಳು ಇದಾಗಿದೆ. ಅಲ್ಪಾವಧಿಯಲ್ಲಿ ಉದ್ಯೋಗ ಬಯಸುವ ವಿದ್ಯಾರ್ಥಿಗಳು ಈ ಕೋರ್ಸ್ ಗಳ ಕಲಿಕೆಯ ಕಡೆಗೆ ಗಮನ ಹರಿಸಬೇಕು. ಜಿಟಿಟಿಸಿ…
ತುಮಕೂರು: ಜಿಲ್ಲೆಯ ಗುಬ್ಬಿ ತಾಲ್ಲೂಕು ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸಲಾಗುತ್ತಿರುವ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ(ನರೇಗಾ) ಯೋಜನೆಯಡಿ ಸೌಲಭ್ಯ ಕಲ್ಪಿಸಲು ಅರ್ಜಿ ಆಹ್ವಾನಿಸಲಾಗಿದೆ. ನರೇಗಾ ಯೋಜನೆಯಡಿ ತೆಂಗು, ಮಾವು, ಸಪೋಟ, ಬಾಳೆ(ಅಂಗಾಂಶ), ಪಪ್ಪಾಯ, ಸೀಬೆ, ನೇರಳೆ, ನಿಂಬೆ, ಹಲಸು, ಕಾಳು ಮೆಣಸು, ಜಾಯಿಕಾಯಿ, ಏಲಕ್ಕಿ, ಹುಣಸೆ, ಗೇರು ಬೆಳೆ, ಕೋಕೋ, ತಾಳೆ ಬೆಳೆ, ಗುಲಾಬಿ ಹಾಗೂ ಇತರೆ ಎಲ್ಲಾ ತೋಟಗಾರಿಕೆ ಬೆಳೆಗಳನ್ನು (ಅಡಿಕೆ ಹೊರತುಪಡಿಸಿ) ರೈತರ ಜಮೀನಿನಲ್ಲಿ ಪ್ರದೇಶ ವಿಸ್ತರಣೆ ಕೈಗೊಳ್ಳಬಹುದಾಗಿದೆ. ಈ ಯೋಜನೆಯಡಿ ಸ್ವ–ಸಹಾಯ ಸಂಘಗಳ ಪಾಲ್ಗೊಳ್ಳುವಿಕೆಯೊಂದಿಗೆ ಮಿಶ್ರ ಬೆಳೆ ಪದ್ಧತಿಯಲ್ಲಿ ಕಾಳುಮೆಣಸು, ಜಾಯಿಕಾಯಿ, ಲವಂಗ, ದಾಲ್ಮೀನಿ ಸರ್ವಸಾಂಬಾರ, ಎಲಕ್ಕಿ, ಇತರೆ ಸಾಂಬಾರು ಬೆಳೆ ಹಾಗೂ ಬೆಟ್ಟದ ನೆಲ್ಲಿ, ಬಾರೆ, ಅಂಜೂರ, ಕವಳಿ ಹಣ್ಣು, ಪ್ಯಾಶಾನ್ ಹಣ್ಣು, ನಕ್ಷತ್ರ ಹಣ್ಣು, ಹಲಸು, ನೇರಳೆ, ಬೆಣ್ಣೆ ಹಣ್ಣು, ಡ್ರಾಗನ್ ಹಣ್ಣು, ರಾಮ್ ಬೂಟನ್, ಪಾಲ್ಸ, ಸೀತಾಫಲ, ಅಮಟೆಕಾಯಿ, ಪನ್ನೇರಳೆ, ಮ್ಯಾಂಗೋಸ್ಟೀನ್, ದುರಿಯನ್, ಹುಣಸೆ, ಕಿರು ನೆಲ್ಲಿ, ಬೇಲದ ಹಣ್ಣು…