Subscribe to Updates
Get the latest creative news from FooBar about art, design and business.
- ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!
- ಅಂಗನವಾಡಿ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರ್ ಕುಸಿತ: ನಾಲ್ವರು ಮಕ್ಕಳು, ಕಾರ್ಯಕರ್ತೆಗೆ ಗಾಯ
- RSS ಅಷ್ಟೊಂದು ಉತ್ತಮವಾಗಿದ್ದರೆ, ಬಿಜೆಪಿ ನಾಯಕರ ಮಕ್ಕಳು ಏಕೆ ಸ್ವಯಂ ಸೇವಕರಾಗುತ್ತಿಲ್ಲ?: ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ
- ಸತ್ತವರು ಬೇಟೆಗಾರರಲ್ಲ, ರೈತರು: ಹನೂರು ಶೂಟೌಟ್ ಪ್ರಕರಣದಲ್ಲಿ ಅರಣ್ಯ ಸಿಬ್ಬಂದಿ ವಿರುದ್ಧ ಮೃತರ ಕುಟುಂಬಸ್ಥರ ಗಂಭೀರ ಆರೋಪ
- ತುಮಕೂರಿಗೆ ಏರ್ ಪೋರ್ಟ್, ಮೆಡಿಕಲ್ ಕಾಲೇಜು: ಶೀಘ್ರ ಸಿಎಂ ಭೇಟಿ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
- 80ನೇ ಸ್ವಾತಂತ್ರ್ಯ ದಿನಾಚರಣೆ: ಹುತಾತ್ಮರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳಿಂದ ಪ್ರತಿಜ್ಞೆ!
- ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ
- ಪ್ರಾಣತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನ ಇವತ್ತೀನ ಯುವ ಪೀಳಿಗೆ ಅರಿಯಬೇಕು: ತಹಶೀಲ್ದಾರ್ ಮಂಜುನಾಥ್
Author: admin
ಹುಳಿಯಾರು: ಪಟ್ಟಣ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಪ್ರೀತಿ ರಾಘವೇಂದ್ರ ಸೋಮವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಿಂದಿನ ಅಧ್ಯಕ್ಷರಾಗಿದ್ದ ರತ್ನಮ್ಮ ರೇವಣ್ಣ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪ್ರೀತಿ ರಾಘವೇಂದ್ರ ಆಯ್ಕೆಯಾದರು. ಚುನಾವಣೆ ಹಿನ್ನೆಲೆಯಲ್ಲಿ ಪ್ರವಾಸಕ್ಕೆ ತೆರಳಿದ್ದ ಸದಸ್ಯರು, ಶಾಸಕ ಸಿ.ಬಿ. ಸುರೇಶ್ ಬಾಬು ಅವರೊಂದಿಗೆ ಸುಮಾರು 11.40ರ ಸುಮಾರಿಗೆ ಪಟ್ಟಣ ಪಂಚಾಯಿತಿಗೆ ಆಗಮಿಸಿ ಪ್ರೀತಿ ರಾಘವೇಂದ್ರ ಮಾತ್ರ ನಾಮಪತ್ರ ಸಲ್ಲಿಸಿದರು. ಪ್ರೀತಿ ರಾಘವೇಂದ್ರ ಹೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿ ಕೆ. ಪುರಂದರ ಅವಿರೋಧ ಆಯ್ಕೆಯನ್ನು ಘೋಷಿಸಿದರು. ಅಧ್ಯಕ್ಷ ಸ್ಥಾನ ಯಾರಿಗೆ ಸಿಗಲಿದೆ ಎಂಬ ಪಟ್ಟಣದ ಜನರ ಕುತೂಹಲಕ್ಕೆ ತೆರೆ ಬಿದ್ದು, ಈ ಬಾರಿ ಕೂಡ ಮೈತ್ರಿಕೂಟ ಅಧಿಕಾರಕ್ಕೆ ಬಂದಿದೆ. ಬಿಜೆಪಿ ಪಕ್ಷದ ಮೂವರು ಸದಸ್ಯರು, ಕಾಂಗ್ರೆಸ್ ಪಕ್ಷದ ನಾಲ್ವರು ಸದಸ್ಯರು ಹಾಗೂ ಜೆಡಿಎಸ್ ಪಕ್ಷದ ಇಬ್ಬರು ಸದಸ್ಯರು ಸೇರಿ ಒಟ್ಟು 9 ಸದಸ್ಯರು ಪ್ರೀತಿ ರಾಘವೇಂದ್ರ ಅವರ ಆಯ್ಕೆಗೆ…
ಸರಗೂರು: ವಿಕಲಚೇತನ ಮಕ್ಕಳ ಪ್ರತಿಭೆಗಳನ್ನು ಗುರುತಿಸಿ, ಪ್ರೋತ್ಸಾಹ ನೀಡುವುದರಿಂದ ಅವರ ದೌರ್ಬಲ್ಯಗಳ ಹೊರತಾಗಿಯೂ ಅದಮ್ಯ ಶಕ್ತಿ ಅವರಲ್ಲಿದೆ ಎಂಬುದನ್ನು ನಿರೂಪಿಸಲು ಸಾಧ್ಯ ಎಂದು ಹಂಚೀಪುರ ಮಠ ತೋಂಟದಾರ್ಯ ಸ್ವಾಮೀಜಿ ಆರ್ಶೀವಾದ ನೀಡಿದರು. ಪಟ್ಟಣದ ಅಖಿಲ ನಾಮಧಾರಿಗೌಡ ಸಮುದಾಯದ ಭವನದಲ್ಲಿ ಮಂಗಳವಾರದಂದು ಶ್ರೀ ಚಿಕ್ಕ ದೇವಮ್ಮ ವಿಶೇಷಚೇತನರ ಕ್ಷೇಮಾಭಿವೃದ್ಧಿ ಒಕ್ಕೂಟ ಹಾಗೂ ಜೀವನಜ್ಯೋತಿ ವಿಶೇಷಚೇತನ ಕ್ಷೇಮಾಭಿವೃದ್ಧಿ ಒಕ್ಕೂಟ ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಶಾಲಾ ಶಿಕ್ಷಣ ಇಲಾಖೆ ಅಖಿಲ ನಾಮಧಾರಿಗೌಡರ ಸಂಘ, ಸ್ಥಳಿಯ ಸಂಘ ಸಂಸ್ಥೆಗಳು ಸಹಭಾಗಿತ್ವದೊಂದಿಗೆ ಹಮ್ಮಿಕೊಂಡಿರುವ ಅಂತಾರಾಷ್ಟ್ರೀಯ ವಿಶೇಷಚೇತನರ ದಿನಾಚರಣೆ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿ ಮಾತನಾಡಿದರು. ವಿಕಲಚೇತನರ ಏಳಿಗೆಗೆ ಕುಟುಂಬದ ಸದಸ್ಯರು ಮಾತ್ರವಲ್ಲದೇ ಪ್ರತಿಯೊಬ್ಬ ನಾಗರಿಕರು ಕೈಜೋಡಿಸಬೇಕು. ಅಂಗವಿಕಲರಿಗಾಗಿ ಕಾನೂನು ಅಡಿಯಲ್ಲಿ ಅನೇಕ ಹಕ್ಕುಗಳನ್ನು ನೀಡಿದ್ದು, ಅವರ ಶ್ರೇಯಸ್ಸು ಹಾಗೂ ಮಾನವ ಹಕ್ಕುಗಳಿಗೆ ಚ್ಯುತಿ ತರದಂತೆ ಅವರ ಅಭಿವೃದ್ಧಿಯಲ್ಲಿ ಸಹಕಾರ ನೀಡಬೇಕು ಎಂದು ಪ್ರತಿಪಾದಿಸಿದರು. ತಹಶೀಲ್ದಾರ್ ಮೋಹನಕುಮಾರಿ ಮಾತನಾಡಿ, ವಿಕಲಚೇತನರು…
ತುರುವೇಕೆರೆ: ಪಟ್ಟಣದ ತಾಲೂಕು ಕಚೇರಿಗೆ ಹೊಂದಿಕೊಂಡಂತಿರುವ ವಾಣಿಜ್ಯ ಸಂಕೀರ್ಣದಲ್ಲಿ ಇಂದು ಪ್ರೊಫೆಸರ್ ಬಿ. ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ(DSS)ಯ ತಾಲೂಕು ಶಾಖೆಯನ್ನು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅನಂತರಾಜು ಉದ್ಘಾಟಿಸಿದರು. ಈ ಶಾಖೆಯು ಜಿಲ್ಲಾ ಸಂಚಾಲಕ ನಾಗತಿಹಳ್ಳಿ ಕೃಷ್ಣಮೂರ್ತಿ, ಜಿಲ್ಲಾ ಸಂಘಟನಾ ಸಂಚಾಲಕ ದಂಡಿನ ಶಿವರಕುಮಾರ್, ತಾಲೂಕು ಸಂಚಾಲಕ ಮಲ್ಲೂರು ತಿಮ್ಮೇಶ್ ರವರ ನೇತೃತ್ವದಲ್ಲಿ ಉದ್ಘಾಟನೆಗೊಂಡಿದ್ದು, ಇದೇ ವೇಳೆ ತಾಲೂಕು ಶಾಖೆ ಉದ್ಘಾಟಿಸಿದ ಅನಂತರಾಜು ಮಾತನಾಡಿ, ಪಟ್ಟಣದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕು ಶಾಖೆ ಇಂದಿನಿಂದ ಆರಂಭಗೊಂಡಿದ್ದು, ಇದರಿಂದಾಗಿ ನೊಂದವರಿಗೆ ಸಾಮಾಜಿಕವಾಗಿ ದೀನದಲಿತರಿಗೆ ಸರ್ವ ಜನಾಂಗದವರಿಗೂ ಆರೋಗ್ಯಕರ ಹೋರಾಟ ಮಾಡುವುದರ ಮೂಲಕ ನ್ಯಾಯ ದೊರಕಿಸಿ ಕೊಡುವಂತಹ ಕಾರ್ಯ ನಿರ್ವಹಿಸಬೇಕು, ನೊಂದವರ ಪಾಲಿಗೆ ದಾರಿ ದೀಪವಾಗಿ ಈ ಸಂಘಟನೆ ಕಾರ್ಯ ನಿರ್ವಹಿಸಿ ನ್ಯಾಯ ದೊರಕಿಸಿ ಕೊಡಬೇಕು, ಇದರ ಜೊತೆಗೆ ನಾನು ಕೂಡ ಒಬ್ಬ ಅಧಿಕಾರಿಯಾಗಿ ಸದಾ ನಿಮ್ಮೊಂದಿಗೆ ಇರುತ್ತೇನೆ ಎಂದರು. ನಂತರ ಜಿಲ್ಲಾ ಸಂಚಾಲಕರಾದ ನಾಗತಿಹಳ್ಳಿ ಕೃಷ್ಣಮೂರ್ತಿ ಮಾತನಾಡಿ,…
Bomb Threat Email– ತುಮಕೂರು: ರಾಜ್ಯದ ಹಲವು ಜಿಲ್ಲಾಧಿಕಾರಿ ಕಚೇರಿಗಳಿಗೆ ಸಾಲು ಸಾಲು ಬಾಂಬ್ ಬೆದರಿಕೆ ಇಮೇಲ್‌ಗಳು ಬರುತ್ತಿರುವ ಬೆನ್ನಲ್ಲೇ, ಇಂದು (ಡಿ.16) ತುಮಕೂರು ಜಿಲ್ಲಾಧಿಕಾರಿ (DC) ಕಚೇರಿಗೂ ಸಹ ಬಾಂಬ್ ಇಟ್ಟಿರುವ ಕುರಿತು ಬೆದರಿಕೆ ಇಮೇಲ್ ಬಂದಿದೆ. ವರದಿಗಳ ಪ್ರಕಾರ, ಬೆಳಗ್ಗೆ 6.59ಕ್ಕೆ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅವರ ಮೇಲ್ ಗೆ ಬಂದ ಈ ಸಂದೇಶವನ್ನು ನೋಡಿ ಸಿಬ್ಬಂದಿಗಳು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಭದ್ರತೆಯನ್ನು ಬಿಗಿಗೊಳಿಸಿದ್ದಾರೆ. ತೀವ್ರ ಪರಿಶೀಲನೆ ಮತ್ತು ಭದ್ರತೆ 100ಕ್ಕೂ ಹೆಚ್ಚು ಪೊಲೀಸರು: ನಗರ ಡಿವೈಎಸ್ಪಿ ಚಂದ್ರಶೇಖರ್ ಅವರ ನೇತೃತ್ವದಲ್ಲಿ 100ಕ್ಕೂ ಹೆಚ್ಚು ಪೊಲೀಸರನ್ನು ಕಚೇರಿ ಸುತ್ತಮುತ್ತ ನಿಯೋಜಿಸಲಾಗಿದೆ. ಬಾಂಬ್ ಮತ್ತು ಡಾಗ್ ಸ್ಕ್ವಾಡ್: ಬಾಂಬ್ ಸ್ಕ್ವಾಡ್ ಮತ್ತು ಡಾಗ್ ಸ್ಕ್ವಾಡ್ ತಂಡಗಳು ಸ್ಥಳಕ್ಕೆ ಭೇಟಿ ನೀಡಿ ಜಿಲ್ಲಾಧಿಕಾರಿಗಳ ಕೊಠಡಿ, ಆಪ್ತ ಸಹಾಯಕ ಕಚೇರಿ, ತಹಶೀಲ್ದಾರ್ ಕಚೇರಿ ಸೇರಿದಂತೆ ಕಚೇರಿ ಆವರಣದ ಮೂಲೆ ಮೂಲೆಯನ್ನೂ ಸಂಪೂರ್ಣವಾಗಿ ಪರಿಶೀಲನೆ ನಡೆಸುತ್ತಿದ್ದಾರೆ. ಗೇಟ್‌ನಲ್ಲಿ…
ಸರಗೂರು: ಅಖಿಲ ನಾಮಧಾರಿಗೌಡ ಸಂಘದ ನೂತನ ಅಧ್ಯಕ್ಷರಾಗಿ ಎಚ್.ಡಿ.ರತ್ನಯ್ಯ ಹಾಗೂ ಪ್ರಧಾನ ಕಾರ್ಯದರ್ಶಿರಾಗಿ ಪ್ರಕಾಶ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಪಟ್ಟಣದ ಅಖಿಲ ನಾಮಧಾರಿಗೌಡ ಸಮುದಾಯ ಭವನದಲ್ಲಿ ಭಾನುವಾರ ಅಖಿಲ ನಾಮಧಾರಿಗೌಡ ಸಂಘ ಸರಗೂರು ಶಾಖೆಯಿಂದ ನಡೆದ ಡಿ.ಸುಂದರ್ ದಾಸ್ ಸಂಘದ ಸರ್ವ ಸದಸ್ಯರ ಮಹಾಸಭೆಯಲ್ಲಿ ಉಪಾಧ್ಯಕ್ಷರಾಗಿ ಕೆ.ಬೆಳ್ತೂರು ಪ್ರಕಾಶ್, ಕಾರ್ಯದರ್ಶಿಯಾಗಿ ಮಟಕೆರೆ ನಾಗೇಶ್ ಅವರನ್ನು 3 ವರ್ಷದ ಅವಧಿಗೆ ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆಯಾದರು. ನಂತರ ಮಾತನಾಡಿದ ನೂತನ ಅಧ್ಯಕ್ಷ ಎಚ್.ಡಿ.ರತ್ನಯ್ಯ, ನಾಮಧಾರಿಗೌಡ ಸಮಾಜ ಸರ್ವಾನುಮತದಿಂದ ನೀಡಲಾದ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳದೇ ಪ್ರಾಮಾಣಿಕತೆಯಿಂದ ಸಮಾಜದ ಏಳಿಗೆಗಾಗಿ ಶಕ್ತಿಮಿರಿ ಶ್ರಮಿಸುತ್ತೇನೆ. ಸಮುದಾಯಭವನ ನೂತನ ರೂಪ ಪಡೆಯಲು ಕೆಲಸ ಮಾಡುತ್ತೇನೆ. ಹೀಗಾಗಿ ಇದಕ್ಕೆ ಸಮಾಜದ ಬಂಧುಗಳ ಸಹಕಾರ ಅಗತ್ಯವಾಗಿದೆ ಎಂದು ತಿಳಿಸಿದರು. ಮಹಾಸಭೆ: ಇದೇ ಸಂದರ್ಭದಲ್ಲಿ ಸಂಘದ ಪ್ರಭಾರ ಅಧ್ಯಕ್ಷ ವಿನೋದ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಂಘದ ಸರ್ವಸದಸ್ಯರ ಮಹಾಸಭೆಯನ್ನು ಅಖಿಲ ನಾಮಧಾರಿಗೌಡ ಸಂಘದ ಕೇಂದ್ರ ಸಮಿತಿ ಅಧ್ಯಕ್ಷ ಕೆ.ಟಿ.ಗೋವಿಂದರಾಜು ಉದ್ಘಾಟಿಸಿದರು. ಬೀಜ ನಿಗಮದ ಮಾಜಿ…
ತುಮಕೂರು: ವಿದ್ಯೆಗೆ ಯಾವುದೇ ಜಾತಿಯ ಹಂಗಿಲ್ಲ. ಪರಿಶ್ರಮದಿಂದ ಕಲಿಕೆಯಲ್ಲಿ ತೊಡಗಿದರೆ ಜ್ಞಾನವಂತರಾಗಲು ಸಾಧ್ಯ. ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯದಂತೆ ವಿದ್ಯೆಯು ಕೇವಲ ಸಾಧಕರ ಸ್ವತ್ತು, ಸೋಮಾರಿಗಳ ಸ್ವತ್ತಲ್ಲ ಎಂದು ಹಿರಿಯ ದಲಿತ ಮುಖಂಡ ಹಬ್ಬತ್ತನಹಳ್ಳಿ ಶ್ರೀನಿವಾಸ್ ಅವರು ಕರೆ ನೀಡಿದರು. ನಗರದ ಅಂಬೇಡ್ಕರ್ ಭವನದಲ್ಲಿ ವಿವಿಧ ದಲಿತ ಸಂಘಟನೆಗಳ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ ಪರಿನಿಬ್ಬಾಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅಂಬೇಡ್ಕರ್ ಹಾದಿಯಲ್ಲಿ ಯಶಸ್ಸು ಸಾಧ್ಯ: ಡಾ. ಬಿ.ಆರ್. ಅಂಬೇಡ್ಕರ್ ಅವರು ನಡೆದುಬಂದ ಹಾದಿಯು ನಮಗೆಲ್ಲ ಆದರ್ಶವಾಗಬೇಕು. ಅವರು ತೋರಿಸಿದ ಶಿಕ್ಷಣ, ಸ್ವಾಭಿಮಾನ ಮತ್ತು ಸಂಘಟನೆಯ ಮಾರ್ಗದಲ್ಲಿ ಸಾಗಿದಾಗ ಮಾತ್ರ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ಶ್ರೀನಿವಾಸ್ ಅವರು ಒತ್ತಿ ಹೇಳಿದರು. ದಲಿತ ಪರ ಹೋರಾಟಕ್ಕೆ ಮೆರುಗು ನೀಡಿದ ಎಂ.ಸಿ. ರಾಜು: ಕಾರ್ಯಕ್ರಮದಲ್ಲಿ ಮಾತನಾಡಿದ ಹಿರಿಯ ಹೋರಾಟಗಾರ ಎಂ. ರಾಮಯ್ಯ ಅವರು, ದಿವಂಗತ ಎಂ.ಸಿ. ರಾಜು ಅವರು ತುಮಕೂರು ಜಿಲ್ಲೆಯ ದಲಿತಪರ ಹೋರಾಟಕ್ಕೆ ಮೆರುಗು ನೀಡಿದವರು.…
ಸರಗೂರು: ನಮ್ಮ ನಡೆ–ನುಡಿಗಳೆ ನಮ್ಮ ಧರ್ಮವನ್ನು ಹೇಳುತ್ತಿವೆ. ಅದನ್ನು ಅರ್ಥ ಮಾಡಿಕೊಂಡು ಸಮಾಜದಲ್ಲಿ ನುಡಿದು ನಡೆಯಬೇಕು. ಧರ್ಮಾಚರಣೆಯಿಂದ ಸುಖ–ಸಂಪತ್ತು ಲಭಿಸುತ್ತದೆ. ಸತ್ಯ ನಾರಾಯಣ ಪೂಜೆ ಮಾಡುವುದರಿಂದ ಇಷ್ಟಾರ್ಥಗಳು ದೊರೆಯುತ್ತವೆ ಎಂದು ಸೌಮ್ಯ ಅನೀಲ್ ಚಿಕ್ಕಮಾದು ಹೇಳಿದರು. ತಾಲೂಕಿನ ಕೊತ್ತೇಗಾಲ ಗ್ರಾ.ಪಂ. ವ್ಯಾಪ್ತಿಯ ಕೊತ್ತೆಗಾಲ ಗ್ರಾಮದಲ್ಲಿ ಸೋಮವಾರದಂದು ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಹುಲ್ಲಹಳ್ಳಿ ಯೋಜನೆ ಮುಳ್ಳೂರು ವಲಯದ ವತಿಯಿಂದ ಗುಜ್ಜಮ್ಮ ದೇವಸ್ಥಾನದ ಆವರಣದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜಾ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ತಂತ್ರಜ್ಞಾನ ವೇಗವಾಗಿ ಬೆಳೆದಂತೆ ಇಂದಿನ ಯುವ ಜನಾಂಗದಲ್ಲಿ ಧಾರ್ಮಿಕ ನಂಬಿಕೆಗಳು ಆಚರಣೆಗಳು ಕಡಿಮೆಯಾಗುತ್ತಿದೆ.ಮಕ್ಕಳಿಗೆ ಸಣ್ಣ ವಯಸ್ಸಿನಲ್ಲಿಯೇ ಸಂಸ್ಕಾರಯುತ ಜೀವನ ಮೌಲ್ಯಗಳ ಬಗ್ಗೆ ತಿಳುವಳಿಕೆ ನೀಡುವಲ್ಲಿ ಪೋಷಕರ ಪಾತ್ರ ಅತ್ಯಂತ ಮಹತ್ವದ್ದಾದದ್ದು ಎಂದು ತಿಳಿಸಿದರು. ಮನುಷ್ಯ ಧರ್ಮದ ದಾರಿಯಲ್ಲಿ ನಡೆದಾಗ ಭಗವಂತನ ಅನುಗ್ರಹ ಪ್ರಾಪ್ತವಾಗುತ್ತದೆ. ಧರ್ಮಸ್ಥಳದ ಧರ್ಮಾಧಿಕಾರಿಗಳು ಪ್ರತಿ ಹಳ್ಳಿ ಹಳ್ಳಿಗಳಲ್ಲಿ ಇಂತಹ ಪೂಜಾ ಕಾರ್ಯಕ್ರಮಗಳನ್ನು ನಡೆಸಿ ಜನರಲ್ಲಿ ಧಾರ್ಮಿಕ ಜಾಗೃತಿಯನ್ನು ಮೂಡಿಸುತ್ತಿದ್ದು, …
ಕೊರಟಗೆರೆ: ಈಡಿಗ, ಬಿಲ್ಲವ, ನಾಮಧಾರಿ, ಧೀವರ ಸೇರಿದಂತೆ 26 ಪಂಗಡಗಳ ಬೇಡಿಕೆ ಈಡೇರಿಕೆಗೆ ಸುಮಾರು 700 ಕಿ.ಮೀ ಸತತ 41 ದಿನಗಳ ಐತಿಹಾಸಿಕ ಪಾದಯಾತ್ರೆ ಮಾಡುತ್ತೇವೆ ಎಂದು ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿಪೀಠ ಸೇವಾ ಟ್ರಸ್ಟ್ ಪೀಠಾಧಿಪತಿ ಶ್ರೀಪ್ರಣವಾನಂದ ಸ್ವಾಮೀಜಿ ತಿಳಿಸಿದರು. ಪಟ್ಟಣದ ಖಾಸಗಿ ಹೋಟೆಲ್‌ನಲ್ಲಿ ಅಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ದಿವ್ಯಸಾನಿಧ್ಯ ವಹಿಸಿ ಮಾತನಾಡಿ, ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ ಕೂಡಲೇ 500 ಕೋಟಿ ರೂ. ಬಿಡುಗಡೆ ಮಾಡಬೇಕು. ಕುಲಕಸುಬು ಕಳೆದುಕೊಂಡ ಕಲ್ಯಾಣ ಕರ್ನಾಟಕ ಭಾಗದ ಸಂತ್ರಸ್ಥ ಈಡಿಗರಿಗೆ 5 ಎಕೆರೆ ಜಮೀನು ಪ್ರತಿ ಕುಟುಂಬಕ್ಕೆ ಮಂಜೂರು ಮಾಡಬೇಕು ಎಂದು ಹೇಳಿದರು. ಸಮುದಾಯವನ್ನು 2ಎ ಯಿಂದ ಎಸ್ಟಿ ಗೆ ಮೀಸಲಾತಿಗೆ ಸೇರಿಸುವುದಕ್ಕೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು. ಬ್ರಹ್ಮಶ್ರೀ ನಾರಾಯಣ ಗುರುಗಳ ಪುತ್ಥಳಿಯನ್ನು ಬೆಂಗಳೂರಿನ ವಿಧಾನಸೌಧದ ಎದುರು ಸ್ಥಾಪಿಸಬೇಕು, ರಾಜ್ಯದ ಈಡಿಗ ಸಮಾಜದ ಹಾಗೂ ಹಿಂದುಳಿದ ವರ್ಗದ ಭಕ್ತಿ ಶ್ರದ್ಧಾ ಕೇಂದ್ರವಾದ ಶ್ರೀಸಿಗಂಧೂರು ಚೌಡೇಶ್ವರಿ ದೇವಸ್ಥಾನದ ವಿರುದ್ಧ ಹೂಡಿದ…
ಕೊರಟಗೆರೆ: ತಾಲ್ಲೂಕಿನ ತಣ್ಣೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯ ಆವರಣದಲ್ಲಿ ಶ್ರೀ ಬಸವೇಶ್ವರ ಸ್ವಾಮಿ ಆಂಜನೇಯ ಸ್ವಾಮಿ ಸೇವಾ ಟ್ರಸ್ಟ್ ಹಾಗೂ ಸಪ್ತಗಿರಿ ಆಸ್ಪತ್ರೆ ಇವರ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ಹಾಗೂ ಶಸ್ತ್ರ ಚಿಕಿತ್ಸೆ ಶಿಬಿರದಲ್ಲಿ ನೂರಾರು ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನ ಯಶಸ್ವಿಗೊಳಿಸಿದರು. ಟ್ರಸ್ಟ್ ಅಧ್ಯಕ್ಷ ಗೋವಿಂದಯ್ಯ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಬಡತನದಿಂದ ಅನೇಕ ಯುವಕರು ಹಾಗೂ ವಯೋವೃದ್ಧರು ಪಟ್ಟಣಕ್ಕೆ ಹೋಗಿ ಚಿಕಿತ್ಸೆ ಪಡೆಯಲು ಆಗದಂತಹ ಪರಿಸ್ಥಿತಿ ಇನ್ನೂ ಹಳ್ಳಿಗಳಲ್ಲಿ ಇದ್ದಾರೆ. ಪ್ರತಿಯೊಬ್ಬ ಮನುಷ್ಯನಿಗೆ ಆರೋಗ್ಯದ ರಕ್ಷಣೆ ಬಹು ಮುಖ್ಯ ಆದ್ದರಿಂದ ನಮ್ಮ ಸೇವಾ ಟ್ರಸ್ಟ್ ಪದಾಧಿಕಾರಿಗಳು ನಮ್ಮ ತಾಲೂಕಿನ ಬಡ ಜನರಿಗೆ ಅನುಕೂಲವಾಗಲಿ ಎಂದು ಈ ಆರೋಗ್ಯ ಶಿಬಿರವನ್ನು ಏರ್ಪಡಿಸಿದ್ದೇವೆ ಇದರ ಸದುಪಯೋಗವನ್ನು ಪಡೆದುಕೊಂಡು ಆರೋಗ್ಯವನ್ನ ಕಾಪಾಡಿಕೊಳ್ಳಿ ಎಂದರು. ಸಪ್ತಗಿರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಧನುಷ್ ಮಾತನಾಡಿ, ನಮ್ಮ ಆಸ್ಪತ್ರೆಯ ನುರಿತ ವೈದ್ಯಾಧಿಕಾರಿಗಳು ತಣ್ಣೇನಹಳ್ಳಿ ಗ್ರಾಮಕ್ಕೆ ಬಂದಿದ್ದಾರೆ. ನಿಮ್ಮ ಗ್ರಾಮದ ಶ್ರೀ ಬಸವೇಶ್ವರ ಸ್ವಾಮಿ ಆಂಜನೇಯಸ್ವಾಮಿ ಸೇವಾ ಟ್ರಸ್ಟ್ನ ಮುಖಂಡರು…
ಕೊರಟಗೆರೆ : ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಅತಿಮುಖ್ಯ. ಕ್ರೀಡಾಂಗಣವು ಮಕ್ಕಳಿಗೆ ಗೆಲುವು ಮತ್ತು ಸೋಲಿನ ಜೀವನದ ಪಾಠ ಕಲಿಸುತ್ತದೆ. ನಮ್ಮ ದೇಶದ ದ್ಯಾನ್‌ಚಂದ್, ಸಚಿನ್, ಪಿ.ವಿ.ಸಿಂಧು ಅಂತಹ ಕ್ರೀಡಾಪಟುಗಳೇ ನನ್ನ ಶಾಲೆಯ ಮಕ್ಕಳ ಸಾಧನೆಗೆ ಸ್ಪೂರ್ತಿ ಎಂದು ಸಾರಂಗ ಅಕಾಡೆಮಿ ಅಧ್ಯಕ್ಷ ಅಜಯ್ ಕುಮಾರ್ ತಿಳಿಸಿದರು. ಕೊರಟಗೆರೆ ಪಟ್ಟಣದ ಶ್ರೀರಾಘವೇಂದ್ರ ಇಂಟರ್ ನ್ಯಾಷನಲ್ ಸ್ಕೂಲ್‌ನಲ್ಲಿ ವಾರ್ಷಿಕ ಕ್ರೀಡಾ ಕಾರ್ಯಕ್ರಮದಡಿ ಸೋಮವಾರ ಏರ್ಪಡಿಸಲಾಗಿದ್ದ ರಾಘಕ್ರೀಡೆ–2025 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ದಿಗೆ ಶಿಕ್ಷಕರ ಜೊತೆ ಪೋಷಕರ ಪಾತ್ರ ಬಹುಮುಖ್ಯ. ಟಿವಿ ಮತ್ತು ಮೊಬೈಲ್ ಮಕ್ಕಳ ಶೈಕ್ಷಣಿಕ ಜೀವನಕ್ಕೆ ಅಪಾಯ. ಪೋಷಕರು ಮಕ್ಕಳ ಶೈಕ್ಷಣಿಕ ಜೀವನದ ಬಗ್ಗೆ ಕಡ್ಡಾಯವಾಗಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕಿದೆ. ಕ್ರೀಡಾಕೂಟ ಯಶಸ್ವಿಗೆ ಕಾರಣರಾದ ಪೋಷಕರು ಮತ್ತು ಶಿಕ್ಷಕರಿಗೆ ಧನ್ಯವಾದ ಎಂದರು. ರಾಘವೇಂದ್ರ ಶಾಲೆ ಆಡಳಿತ ಅಧಿಕಾರಿ ಕೆ.ಎನ್.ರುದ್ರೇಶ್ ಮಾತನಾಡಿ, ವಿದ್ಯಾರ್ಥಿಗಳಿಗೆ ಪಠ್ಯದ ಜೊತೆ ಕ್ರೀಡಾ ಚಟುವಟಿಕೆ ಬಹುಮುಖ್ಯ. ನಮ್ಮ ಶಾಲೆಯಲ್ಲಿ ಚಿಣ್ಣರಸಂತೆ,…