Subscribe to Updates
Get the latest creative news from FooBar about art, design and business.
- ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ
- ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ
- ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)
- ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಸ್ವಚ್ಛಗೊಳಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ
- ಕುಣಿಗಲ್: ಮಾ.25ರಂದು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವ
- ಮಧುಗಿರಿ: ಮಾರ್ಚ್ 7ರಿಂದ ಕಬಡ್ಡಿ ಪಂದ್ಯಾಟ
- ಮೋದಿ ಕಾರ್ಯಕ್ರಮಕ್ಕೆ ₹33 ಕೋಟಿ ವೆಚ್ಚ; ಜನರನ್ನು ಕರೆತರಲು ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ ₹6.5 ಕೋಟಿ!
- ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ: ಡಿ.ಕೆ.ಸುರೇಶ್
Author: admin
ಕರ್ನಾಟಕದ ಅಥ್ಲೀಟ್ ಅಶ್ಚಿನಿ ಅಕ್ಕುಂಜೆ ಮತ್ತು ಕಬಡ್ಡಿ ಆಟಗಾರ ಬಿಸಿ ಸುರೇಶ್ ಜೀವಮಾನದ ಸಾಧನೆಗಾಗಿ ಪ್ರತಿಷ್ಠಿತ ಧ್ಯಾನ್ ಚಂದ್ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಉಡುಪಿ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅಶ್ವಿನಿ ಅಕ್ಕುಂಜೆ 400 ಮೀ. ರೀಲೆ ಓಟಗಾರ್ತಿಯಾಗಿದ್ದು, 2010ರ ಕಾಮನ್ ವೆಲ್ತ್ ಹಾಗೂ ಏಷ್ಯನ್ ಗೇಮ್ಸ್ ಗಳ ರಿಲೇ ತಂಡದಲ್ಲಿ ಚಿನ್ನದ ಪದಕ ಗೆದ್ದಿದ್ದರು. ಚೀನಾದ ಗುವಾಂಗ್ ಜುನಲ್ಲಿ ನಡೆದ ಏಷ್ಯನ್ ಗೇಮ್ಸ್ ನಲ್ಲಿ ಅಶ್ವಿನಿ ಅಕ್ಕುಂಜೆ ವೈಯಕ್ತಿಕ 400 ಮೀ. ರೇಸ್ ನಲ್ಲಿ ಚಿನ್ನದ ಪದಕದ ಸಾಧನೆ ಮಾಡಿದ್ದರು. ಮಾಜಿ ಕಬ್ಬಡ್ಡಿ ಆಟಗಾರ ಬಿಸಿ ಸುರೇಶ್ ಈಗಾಗಲೇ ಅರ್ಜುನ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಎರಡು ಬಾರಿ ಚಿನ್ನದ ಪದಕ ಗೆದ್ದ ಭಾರತ ತಂಡದ ಆಟಗಾರರಾಗಿದ್ದರು. ಅಲ್ಲದೇ ಪ್ರೊ ಕಬಡ್ಡಿ ಲೀಗ್ ನಲ್ಲಿ ಪ್ರಶಸ್ತಿ ತಂಡದ ಕೋಚ್ ಆಗಿದ್ದರು. ಪ್ರಸ್ತುತ ಬಂಗಾಳ್ ವಾರಿಯರ್ಸ್ ತಂಡದ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…
ಪರೀಕ್ಷೆಗೆ ಕಾಪಿ ಚೀಟಿ ತಂದಿದ್ದೀಯ ಅಂತ ಶಿಕ್ಷಕಿ ನಿಂದಿಸಿದ್ದರಿಂದ ನೊಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಒಎಂಬಿಆರ್ ಲೇಔಟ್ನ ದೊಡ್ಡ ಬಾಣಸವಾಡಿಯ ಮರಿಯಂ ನಿಲಯ ಇಂಗ್ಲಿಷ್ ಸ್ಕೂಲ್ ವಿದ್ಯಾರ್ಥಿನಿ ಅಮೃತಾ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ನವೆಂಬರ್ 2ರಂದು ಟೆಸ್ಟ್ ವೇಳೆ ಅಮೃತಾ ಕಾಪಿ ಚೀಟಿ ತಂದಿದ್ದಾಳೆ ಎಂದು 4-5 ದಿನಗಳಿಂದ ಕ್ಲಾಸ್ನಲ್ಲಿ ವಿದ್ಯಾರ್ಥಿಗಳ ಮುಂದೆ ಅಮೃತಾಳನ್ನು ಶಿಕ್ಷಕಿ ಶಾಲಿನಿ ನಿಂದಿಸಿದ್ದಾರೆ. ಶಾಲೆಯಲ್ಲಿ ಶಿಕ್ಷಕಿ ಪದೇಪದೆ ನಿಂದಿಸಿ ಅಪಮಾನ ಮಾಡಿದ್ದಾರೆ ಎಂದು ಅಮೃತಾ ಡೆತ್ ನೋಟ್ ನಲ್ಲಿ ವಿವರಿಸಿದ್ದಾಳೆ. ಎಲ್ ಕೆಜಿಯಿಂದ ಇದೇ ಶಾಲೆಯಲ್ಲಿ ಓದುತ್ತಿದ್ದ ಅಮೃತಾ ಸಾವಿಗೆ ಶಾಲಾ ಆಡಳಿತ ಮಂಡಳಿ ಕಾರಣ ಎಂದು ಆರೋಪಿಸಿ ಪೋಷಕರು ಪ್ರತಿಭಟನೆ ನಡೆಸಿದರು.ಇದ್ದ ಒಬ್ಬಳೇ ಪುತ್ರಿಯನ್ನು ಕಳೆದುಕೊಂಡು ಪೋಷಕರು ಕಣ್ಣೀರು ಹಾಕಿದ್ದಾರೆ. ಘಟನಾ ಸ್ಥಳಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಜಯಪ್ರಕಾಶ್ ಭೇಟಿ ನೀಡಿ ಅಮೃತಾ ತಾಯಿ ಆಶಾ ಅವರನ್ನು ಸಾಂತ್ವನ ಮಾಡಿದರು. ಅಮೃತಾ ಮೃತ ದೇಹಕ್ಕೆ ಅಂತಿಮ…
ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (RAW) ಕಚೇರಿಯ 10ನೇ ಮಹಡಿಯಿಂದ ಅಧಿಕಾರಿಯೊಬ್ಬರು ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನವದೆಹಲಿಯಲ್ಲಿ ನಡೆದಿದೆ. ಲೋಧಿ ಕಾಲೋನಿಯ ರಾ ಕಚೇರಿಯ ಕಟ್ಟಡದಿಂದ ಹಾರಿ ಮೃತಪಟ್ಟಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಅಧಿಕಾರಿ ಖಿನ್ನತೆಯಿಂದ ನರಳುತ್ತಿದ್ದರು ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿದ್ದು, ತನಿಖೆ ಆರಂಭಗೊಂಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ತನ್ನ ಸಿಬ್ಬಂದಿಗೆ ಅಪಘಾತ ವಿಮಾ ಯೋಜನೆ ಸೌಲಭ್ಯಯನ್ನು 1 ಕೋಟಿ ರೂ.ಗೆ ಏರಿಸಿದೆ. ಕೆಎಸ್ಆರ್ಟಿಸಿ ಸಿಬ್ಬಂದಿಗೆ 50 ಲಕ್ಷ ರೂ ವಿಮೆ ನೀಡಲಾಗುತ್ತಿತ್ತು. ಇದೀಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ಜೊತೆಗೆ ಒಡಂಬಡಿಕೆ ಮಾಡಿಕೊಂಡು ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ರವರಿಂದ ಮಾಡಿಕೊಂಡ ಒಡಂಬಡಿಕೆಯ 50 ಲಕ್ಷ ರೂ. ಸೇರಿ ಒಟ್ಟು ರೂ.1 ಕೋಟಿ ಅಪಘಾತ ವಿಮೆ ನೀಡುವುದಾಗಿ ಕೆಎಸ್ಆರ್ಟಿಸಿ ಘೋಷಿಸಿದೆ. ನಿಗಮದ ಸಿಬ್ಬಂದಿಗಳು ಅಪಘಾತದಲ್ಲಿ (ಕರ್ತವ್ಯದ ಮೇಲೆ ಅಥವಾ ಕರ್ತವ್ಯದಲ್ಲಿ ಇಲ್ಲದಿರುವಾಗಲೂ) ಮೃತಪಟ್ಟರೆ ಅಥವಾ ಶಾಶ್ವತ / ತಾತ್ಕಾಲಿಕ ಅಂಗವೈಕಲ್ಯಕ್ಕೆ ತುತ್ತಾದರೆ ಅವರಿಗೆ ರೂ. 50 ಲಕ್ಷಗಳ ಪರಿಹಾರ ನೀಡುವ ಪ್ರೀಮಿಯಂ ರಹಿತ ಅಪಘಾತ ಪರಿಹಾರ ವಿಮಾ ಯೋಜನೆಯನ್ನು ನಿಗಮವು ಭಾರತೀಯ ಸ್ಟೇಟ್ ಬ್ಯಾಂಕ್ ಜೊತೆಯಲ್ಲಿ ಒಡಂಬಡಿಕೆ ಮಾಡಿಕೊಳ್ಳುವ ಮೂಲಕ ಜಾರಿಗೆ ತಂದಿರುತ್ತದೆ. ಸೋಮವಾರ ನಿಗಮವು ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಕಂಪನಿ ಲಿ. ರವರೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದು, ಅದರಂತೆ ಸಿಬ್ಬಂದಿಗಳಿಗೆ…
ಹೃದಯಾಘಾತದಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಕೊನೆಯುಸಿರೆಳೆದರು. ಕೃಷ್ಣ ಅವರನ್ನು ಸೋಮವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು ಮತ್ತು ವೆಂಟಿಲೇಟರ್ ನಲ್ಲಿ ಇರಿಸಲಾಗಿತ್ತು. ಹೃದಯ ಸ್ತಂಭನದ ನಂತರ ಅವರಿಗೆ ನುರಿತ ವೈದ್ಯರ ತಂಡವು ಚಿಕಿತ್ಸೆ ನೀಡುತ್ತಿದ್ದರು. ಮಂಗಳವಾರ ಬೆಳಗ್ಗೆ ನಟ ಇಹಲೋಕ ತ್ಯಜಿಸಿದ್ದಾರೆ. ಶ್ರೀ ಕೃಷ್ಣಅವರು 350 ಚಿತ್ರಗಳಲ್ಲಿ ನಟಿಸಿದ್ದಾರೆ. ಜತೆಗೆ ಯಶಸ್ವಿ ನಿರ್ದೇಶಕ ಮತ್ತು ನಿರ್ಮಾಪಕರೂ ಆಗಿದ್ದರು. 2009ರಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು ನಗರ ಟ್ರಾಫಿಕ್ ನಿರ್ವಹಣೆ ವೈಫಲ್ಯವನ್ನು ನಿವಾರಿಸಲು ರಾಜ್ಯ ಸರ್ಕಾರವು ಟ್ರಾಫಿಕ್ ನಿರ್ವಹಣೆಗಾಗಿ ನಗರ ಪೊಲೀಸ್ ವಿಭಾಗದಲ್ಲಿ ವಿಶೇಷ ಕಮಿಷನರ್ ಹುದ್ದೆ ಸೃಷ್ಟಿಸಿ ಮೊದಲ ಅಧಿಕಾರಿಯಾಗಿ ಎಡಿಜಿಪಿ ಎಂ.ಎ.ಸಲೀಂ ಅವರನ್ನು ನೇಮಕಗೊಳಿಸಿದೆ. ನಗರ ಪೊಲೀಸ್ ಕಮಿಷನರ್ ಅಧೀನದಲ್ಲಿ ಡಿಐಜಿ ದರ್ಜೆಯ ಐಪಿಎಸ್ ಅಧಿಕಾರಿ ಟ್ರಾಫಿಕ್ ವಿಭಾಗದ ಹೊಣೆ ಹೊತ್ತುಕೊಂಡಿದ್ದರು. ಈವರೆಗೆ ಈ ಹುದ್ದೆ ನಿರ್ವಹಿಸುತ್ತಿದ್ದ ಜಂಟಿ ಪೊಲೀಸ್ ಕಮಿಷನರ್ ಬಿ.ಆರ್.ರವಿಕಾಂತೇಗೌಡ ಅವರನ್ನು ಇದೀಗ ಸಿಐಡಿಯ ಡಿಐಜಿ ಆಗಿ ವರ್ಗಾಯಿಸಲಾಗಿದೆ.ಟ್ರಾಫಿಕ್ ವಿಭಾಗದ ವಿಶೇಷ ಕಮಿಷನರ್ ಆಗಿರುವ ಎಂ.ಎ.ಸಲೀಂ ಅವರು ಈ ಹಿಂದೆ ಸಂಚಾರ ವಿಭಾಗದ ಜಂಟಿ ಕಮಿಷನರ್ ಆಗಿ ಕೆಲಸ ಮಾಡಿದ್ದರು. 11 ಐಪಿಎಸ್ ಅಧಿಕಾರಿಗಳ ವರ್ಗಾವಣೆ: 11 ಹಿರಿಯ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಎಂ.ಅಬ್ದುಲ್‌ಸಲೀಂ (ವಿಶೇಷ ಕಮಿಷನರ್, ಸಂಚಾರ ವಿಭಾಗ, ಬೆಂಗಳೂರು ನಗರ), ಉಮೇಶ್‌ಕುಮಾರ್(ಹೆಚ್ಚುವರಿ ಪೊಲೀಸ್‌ಮಹಾನಿರ್ದೇಶಕ ಆಡಳಿತ ವಿಭಾಗ), ದೇವಜ್ಯೋತಿ ರೇ (ಐಜಿಪಿ, ಕುಂದುಕೊರತೆ ಮತ್ತು ಮಾನವ ಹಕ್ಕುಗಳ ವಿಭಾಗ), ರಮಣ ಗುಪ್ತ (ಜಂಟಿ…
ಕಲಬುರಗಿ : ಒಂದೇ ವರ್ಷದಲ್ಲಿ 8000 ಶಾಲಾ ಕೊಠಡಿ ನಿರ್ಮಾಣ ಹಾಗೂ 4000 ಹೊಸ ಅಂಗನವಾಡಿಗಳನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಕಲಬುರಗಿ ತಾಲೂಕಿನ ಮಡಿಹಾಳ ತಾಂಡಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಿವೇಕ ಶಾಲಾ ಕೊಠಡಿಗಳ ಯೋಜನೆಯ ಶಂಕುಪನೆ ಸ್ಥಾಪನೆ ನೆರವೇರಿಸಿ ಮಾತನಾಡಿದರು.ಈ ವರ್ಷ ರಾಜ್ಯದಲ್ಲಿ 4,000 ಹೊಸ ಅಂಗನವಾಡಿಗಳನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ. ತಲಾ 15 ಲಕ್ಷ ರೂ.ನಂತೆ ಅನುದಾನ ನೀಡಲಾಗಿದ್ದು, ಈ ಯೋಜನೆಯಲ್ಲಿ 1500 ಅಂಗನವಾಡಿಗಳನ್ನು ಕಲ್ಯಾಣ ಕರ್ನಾಟಕ ಭಾಗದಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದರು. ಒಟ್ಟು 8,000 ಸಾವಿರ ಶಾಲಾ ಕೊಠಡಿಗಳನ್ನು ಕಲ್ಯಾಣ ಕರ್ನಾಟಕ ಭಾಗದಲ್ಲಿ ನಿರ್ಮಾಣ ವಾಗಲಿದ್ದು, ಸುಮಾರು ಆರು ಸಾವಿರ ಕೊಠಡಿಗಳನ್ನು ಕರ್ನಾಟಕದಲ್ಲಿ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಈ ಕಾರ್ಯವನ್ನು ಮೂರು ವರ್ಷ ನಿರಂತರವಾಗಿ ಮಾಡಿದರೆ, ಕರ್ನಾಟಕದಲ್ಲಿ ಪ್ರಾಥಮಿಕ, ಮಾಧ್ಯಮಿಕ ಶಾಲಾ ಕೊಠಡಿಗಳ ಮೂಲಸೌಕರ್ಯದ ಕೊರತೆ ನೀಗಲಿದೆ. ಅದರ ಜೊತೆಗೆ ಮುಂದಿನ ಆಗಸ್ಟ್ 15 ರೊಳಗೆ…
ಸ್ಪೇನ್ : ಮೂರು ದಶಕಗಳಿಂದ ಯಾರೂ ವಾಸಿಸದ ಸ್ಪೇನ್ ದೇಶದ ಸಂಪೂರ್ಣ ಗ್ರಾಮವೊಂದನ್ನು 2 ಕೋಟಿ ರೂಪಾಯಿಗಳಿಗೆ ಮಾರಾಟಕ್ಕೆ ಇಡಲಾಗಿದೆ. ಪೋರ್ಚುಗಲ್ ನ ಗಡಿಯಲ್ಲಿರುವ ಸ್ಪೇನ್ ನ ಸಾಲ್ಟೊ ಡಿ ಕ್ಯಾಸ್ಟ್ರೊ ಎಂಬ ಹಳ್ಳಿಯು ಸುಮಾರು ರೂ. 2 ಕೋಟಿ 16 ಲಕ್ಷ ಮಾರಾಟಕ್ಕಿದೆ ಎಂದು ಸ್ಪಾನಿಷ್ ಪ್ರಾಪರ್ಟಿ ರಿಟೇಲ್ ವೆಬ್ ಸೈಟ್ ಐಡಿಯಲಿಸ್ಟಾದಲ್ಲಿ ಪಟ್ಟಿ ಮಾಡಲಾಗಿದೆ. 44 ಮನೆಗಳು, ಹೋಟೆಲ್, ಚರ್ಚ್, ಶಾಲೆ, ಪುರಸಭೆಯ ಈಜುಕೊಳ ಮತ್ತು ಬ್ಯಾರಕ್ ಗಳ ಕಟ್ಟಡವನ್ನು ಹೊಂದಿರುವ ಗ್ರಾಮವು ಪ್ರವಾಸಿ ತಾಣವಾಗಿ ಹೊರಹೊಮ್ಮುವ ನಿರೀಕ್ಷೆಯಿತ್ತು. ಆದರೆ ಯೂರೋಜೋನ್ ಬಿಕ್ಕಟ್ಟಿನಿಂದಾಗಿ ಇದು ಕಾರ್ಯರೂಪಕ್ಕೆ ಬರಲಿಲ್ಲ. ಮಾರಾಟಕ್ಕಿರುವ ಗ್ರಾಮವು ಮ್ಯಾಡ್ರಿಡ್ ನಿಂದ ಕೆಲವು ಗಂಟೆಗಳ ಪ್ರಯಾಣದ ದೂರದಲ್ಲಿದೆ. ರಿಟೇಲ್ ಆಸ್ತಿ ವೆಬ್‌ಸೈಟ್‌ನಲ್ಲಿ ಈಗ ಹೊಸದಾಗಿ ಹರಾಜು ಜಾಹೀರಾತು ಪ್ರಕಟಿಸಲಾಗಿದೆ. ಈಗ ಬ್ರಿಟನ್, ಫ್ರಾನ್ಸ್, ಬೆಲ್ಜಿಯಂ ಮತ್ತು ರಷ್ಯಾದ ಸುಮಾರು 300ಕ್ಕೂ ಹೂಡಿಕೆದಾರರು ಗ್ರಾಮದ ಖರೀದಿಗೆ ಆಸಕ್ತಿ ವ್ಯಕ್ತಪಡಿಸಿದ್ದಾರೆ. ವರದಿಗಳ ಪ್ರಕಾರ, 1950 ರ ದಶಕದಿಂದ ವಿದ್ಯುತ್ ಉತ್ಪಾದನಾ…
ಬೆಂಗಳೂರು: ಹಾಲು ಮತ್ತು ಮೊಸರಿನ ದರವನ್ನು 3ರೂಗೆ ಏರಿಕೆ ಮಾಡಿದ್ದ ಕೆಎಂಎಫ್ ನ ಆದೇಶವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಡೆ ಹಿಡಿದಿದ್ದಾರೆ. ಬೆಲೆ ಏರಿಕೆ ಬಗ್ಗೆ ನವೆಂಬರ್ 20ರಂದು ನಡೆಯುವ ಸಭೆ ಬಳಿಕ ನಿರ್ಧಾರ ಮಾಡಲಾಗುತ್ತದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ. ನಿನ್ನೆ ಕೆಎಂಎಫ್ ಹಾಲಿನ ಮತ್ತು ಮೊಸರಿನ ದರವನ್ನು 3 ರೂ. ಗೆ ಏರಿಕೆ ಮಾಡಿ ಆದೇಶ ಹೊರಡಿಸಿತ್ತು. ಇದಾದ ಬಳಿಕ ಕಲಬುರಗಿಯ ಸೇಡಂನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹಾಲಿನ ದರ ಏರಿಕೆ ಇಲ್ಲ, ನವೆಂಬರ್ 20ರ ನಂತರ ಸಭೆ ಮಾಡಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತುರುವೇಕೆರೆ: ಶಾಲಾ ಮಕ್ಕಳ ಶೌಚಾಲಯದ ಗುಂಡಿ ಕುಸಿದು ಬಿದ್ದು ವರ್ಷಗಳು ಕಳೆದರೂ ಅಧಿಕಾರಿಗಳು ಹಾಗೂ ಸಂಬಂಧ ಪಟ್ಟವರು ಈ ಕಡೆಗೆ ಗಮನ ಹರಿಸದೇ ನಿರ್ಲಕ್ಷಿಸಿದ್ದು ಮಕ್ಕಳ ಪ್ರಾಣದ ಜೊತೆಗೆ ಚೆಲ್ಲಾಟವಾಡುತ್ತಿರುವ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಹೊಂದಿಕೊಂಡಂತೆ ಇರುವ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಹಾಗೂ ಅಂಗನವಾಡಿ ಕೇಂದ್ರದ ಮಕ್ಕಳು ಬಳಸುತ್ತಿರುವ ಶೌಚಾಲಯದ ಗುಂಡಿ ವರ್ಷಗಳ ಹಿಂದೆ ಕುಸಿದು ಬಿದ್ದಿದೆ. ಆದರೆ ಈವರೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಲಿ, ಪಟ್ಟಣ ಪಂಚಾಯತಿ ಅಧಿಕಾರಿಗಳಾಗಲಿ, ಶಾಲಾ ಶಿಕ್ಷಕ ಸಿಬ್ಬಂದಿಯಾಗಲಿ ಈ ಬಗ್ಗೆ ಯಾವುದೇ ಕ್ರಮಕ್ಕೆ ಮುಂದಾಗದೇ ಮಕ್ಕಳ ಪ್ರಾಣದ ಜೊತೆಗೆ ಚೆಲ್ಲಾಟವಾಡುತ್ತಿದ್ದಾರೆ. ಶಾಲೆಯ ಮುಂಭಾಗದಲ್ಲಿ ಜ್ಞಾನ ದೇಗುಲವಿದು, ಕೈ ಮುಗಿದು ಒಳಗೆ ಬಾ ಎಂಬ ಬರಹ ಕಾಣುತ್ತದೆ. ಆದರೆ, ದೇಗುಲದಂತೆ ಕಾಣಬೇಕಿದ್ದ ಶಾಲೆಯನ್ನು ಶಿಕ್ಷಕ ವರ್ಗ, ಸಿಬ್ಬಂದಿ ವರ್ಗ ಇಷ್ಟೊಂದು ನಿರ್ಲಕ್ಷಿಸಿದ್ದಾದರೂ ಯಾಕೆ ಅನ್ನೋ ಪ್ರಶ್ನೆಗಳು ಕೇಳಿ ಬಂದಿವೆ. ಶೌಚಾಲಯದ ಗುಂಡಿ ಕುಸಿದು ತೆರೆದುಕೊಂಡ ಸ್ಥಿತಿಯಲ್ಲಿದೆ. ಈ ಗುಂಡಿಗೆ ಯಾರಾದ್ರೂ ಮಕ್ಕಳು…