Author: admin

ಜಾರ್ಖಂಡ್: ಪರೀಕ್ಷೆಯಲ್ಲಿ ಕಡಿಮೆ ಅಂಕ ನೀಡಿದ್ದಕ್ಕೆ ಶಾಲೆಯ ಶಿಕ್ಷಕ ಮತ್ತು ಗುಮಾಸ್ತರನ್ನೇ ಮರಕ್ಕೆ ಕಟ್ಟಿಹಾಕಿ ವಿದ್ಯಾರ್ಥಿಗಳು ಥಳಿಸಿರುವ ಘಟನೆ ದುಮ್ಕಾ ಜಿಲ್ಲೆಯ ವಸತಿ ಶಾಲೆಯಲ್ಲಿ ನಡೆದಿದೆ. ಶಾಲಾ ಮಕ್ಕಳ ಒಂದು ದೊಡ್ಡ ಗುಂಪು ಉಪನ್ಯಾಸ ನೀಡುವಾಗ ಶಿಕ್ಷಕರನ್ನು ಮರಗಳಿಂದ ಕಟ್ಟಿಹಾಕಿ ಥಳಿಸಿದ್ದಾರೆ. ಆ ಮಕ್ಕಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ನಿಜವಾಗಿಯೂ ಅರ್ಹತೆ ಹೊಂದಿದ್ದಾರೆಯೇ ಅಥವಾ ಶಿಕ್ಷಕರು ಉದ್ದೇಶಪೂರ್ವಕವಾಗಿ ಅವರಿಗೆ ಕಡಿಮೆ ಗ್ರೇಡ್ ಗಳನ್ನು ನೀಡಿದ್ದಾರೆಯೇ ಎಂಬುದು ಇನ್ನೂ ಅಸ್ಪಷ್ಟವಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಕ್ಷೇತ್ರ ಶಿಕ್ಷಣಾಧಿಕಾರಿ, ನಾವು ಘಟನೆಯ ಬಗ್ಗೆ ಮಾಹಿತಿ ಪಡೆದಿದ್ದೇವೆ.ಎಲ್ಲಾ ಶಿಕ್ಷಕರೊಂದಿಗೆ ಮಾತುಕತೆ ನಡೆಸಿದ್ದೇವೆ. ನಾವು ಅಲ್ಲಿಗೆ ತಲುಪಿದಾಗ, ವಿದ್ಯಾರ್ಥಿಗಳು ಪ್ರಾಕ್ಟಿಕಲ್ಸ್ ನಲ್ಲಿ ತಮಗೆ ಬಹಳ ಕಡಿಮೆ ಅಂಕಗಳನ್ನು ನೀಡಲಾಗಿದೆ ಈ ಘಟನೆ ನಡೆದಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ರಾಯಚೂರು: ಅಕ್ಕಿ ವ್ಯಾಪಾರಿ ಒಬ್ಬರಿಗೆ ಬೆದರಿಕೆ ಹಾಕಿ ಐದು ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಬೆಂಗಳೂರು ಮೂಲದ ಆರು ಮಂದಿ ನಕಲಿ ಪತ್ರಕರ್ತರನ್ನು ಬಂಧಿಸಿರುವ ಘಟನೆ ಜಿಲ್ಲೆಯ ಲಿಂಗಸಗೂರು ತಾಲೂಕಿನ ಮುದಗಲ್ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಬಂಧಿತರನ್ನು ರಾಜು ಬಿ, ನಾಗರಾಜ ಸಿ, ಪ್ರದಿಪಗೌಡ, ಅರ್ಪಿತಾ, ಮಹಾದೇವಿ, ಮಘಾ ಎಸ್ ಎಂದು ಗುರುತಿಸಲಾಗಿದೆ. ಅಕ್ಕಿ ವ್ಯಾಪಾರಿ ವೀರೇಶ್ ಎನ್ನುವವರ ಅಂಗಡಿಗೆ ಕ್ಯಾಮೆರಾ ಮತ್ತು ಲೋಗೋ ಹಿಡಿದು ನೀವು ಅಕ್ರಮವಾಗಿ ಪಡಿತರ ಆಹಾರ ಧಾನ್ಯದ ಅಕ್ಕಿ ಮಾರಾಟ ಮಾಡುತಿದ್ದೀರಿ, ನಿಮ್ಮ‌ ಬಗ್ಗೆ ಸುದ್ದಿವಾಹಿನಿಯಲ್ಲಿ ಪ್ರಸಾರ ಮಾಡುತ್ತೇವೆ ಎಂದು ಬೆದರಿಕೆ ಹಾಕಿದರು. ಸುದ್ದಿ ಪ್ರಸಾರ ಮಾಡಬಾರದೆಂದರೆ, 5 ಲಕ್ಷ ರೂಪಾಯಿ ಕೊಡಿ, ಇಲ್ಲವಾದಲ್ಲಿ ಸುದ್ದಿ ಪ್ರಸಾರ ಮಾಡಲಾಗುವುದು ಎಂದು ಬೆದರಿಕೆ ಹಾಕಿದ್ದಾರೆ. ವಿರೇಶ್ ಕೂಡಲೇ ಪೊಲೀಸರಿಗೆ ಹಾಗೂ ಸ್ಥಳೀಯ ಪತ್ರಕರ್ತರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಧಾವಿಸಿದ ಮುದಗಲ್​ ಪೊಲೀಸರು ನಕಲಿ ಪತ್ರಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರಿಂದ ಕ್ಯಾಮೆರಾ, ಐಡಿ ಕಾರ್ಡ್ ಹಾಗೂ…

Read More

ದಾವಣಗೆರೆ: ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಡಾ.ಹರ್ಷಾ ಕೆ.ಬಿ. (37) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ದಾವಣಗೆರೆ ನಗರದ ತಮ್ಮ ನಿವಾಸದಲ್ಲಿ ಕುಸಿದು ಬಿದ್ದ ಕೆಲವೇ ಕ್ಷಣಗಳಲ್ಲಿ ಡಾ.ಹರ್ಷಾ ಮೃತಪಟ್ಟಿದ್ದಾರೆ. ಕುಸಿದು ಬಿದ್ದ ತಕ್ಷಣ ತುರ್ತಾಗಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಡಾ.ಹರ್ಷಾ ಅವರು ಸಾವನ್ನಪ್ಪಿದರು. ಇತ್ತೀಚೆಗಷ್ಟೆ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಯಾಗಿ ಡಾ.ಹರ್ಷಾ ಅಧಿಕಾರ ಸ್ವೀಕರಿಸಿದ್ದರು. ಇವರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನ ಅಗಲಿದ್ದಾರೆ. ನಾಳೆ ಮಧ್ಯಾಹ್ನ ಸ್ವಗ್ರಾಮ ದಾವಣಗೆರೆ ತಾಲೂಕಿನ ಕಂದಗಲ್ ಗ್ರಾಮದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಹುಬ್ಬಳ್ಳಿ : ಗಣೇಶೋತ್ಸವ ಆಚರಣೆಗೆ ಹೈಕೋರ್ಟ್ ಅನುಮತಿ ನೀಡಿದ ಹಿನ್ನೆಲೆ ಈದ್ಗಾ ಮೈದಾನದಲ್ಲಿ ಹಿಂದೂ ಪರ ಸಂಘಟನೆಗಳು ಬೆಳಗ್ಗೆ 7.30ಕ್ಕೆ ಸರಳವಾಗಿ ಗಣೇಶನ ಮೂರ್ತಿಯನ್ನು ತಂದು ಪ್ರತಿಷ್ಠಾಪನೆ ಮಾಡಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲು ಸಮಯ ನಿಗದಿಯಾಗಿತ್ತು. ಆದರೆ ಬೆಳಿಗ್ಗೆ 7.30ಕ್ಕೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ವಿವಾದವನ್ನು ಇತ್ಯರ್ಥಪಡಿಸಿದ ಹೈಕೋರ್ಟ್, ರಾಣಿ ಚೆನ್ನಮ್ಮ ಗಣೇಶೋತ್ಸವ ಮಹಾಮಂಡಳಿ ಸಮಿತಿಗೆ ಗಣೇಶೋತ್ಸವದ ಜವಾಬ್ದಾರಿಯನ್ನು ನೀಡಿದೆ. ಈ ನಿಟ್ಟಿನಲ್ಲಿ ಇಂದಿನಿಂದ 3 ದಿನಗಳ ಕಾಲ ಮೈದಾನದಲ್ಲಿ ಗಣೇಶನನ್ನು ಪ್ರತಿಷ್ಠಾನ ಮಾಡಲಿರುವ ಮಹಾಮಂಡಳಿ ಸಮಿತಿಯು ಎಲ್ಲ ಸಿದ್ಧತೆಗಳನ್ನು ನಡೆಸಿಕೊಂಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ವಿಜಯಪುರ : ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆ ನಿಲ್ಲುವುದಿಲ್ಲ ಎಂದು ಆಹಾರ ಸಚಿವ ಉಮೇಶ್ ಕತ್ತಿ ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ಸರ್ಕಾರ 10 ಕೆಜಿ ಪಡಿತರ ಅಕ್ಕಿ ವಿತರಿಸುತ್ತಿದೆ. ಅಕ್ಕಿ ಜೊತೆಗೆ ಜೋಳ ಮತ್ತು ರಾಗಿಯನ್ನೂ ನೀಡುತ್ತಿದ್ದೇವೆ. ಯಾವುದೇ ಕಾರಣಕ್ಕೂ ಅನ್ನಭಾಗ್ಯ ಯೋಜನೆಯನ್ನು ಕೈಬಿಡುವುದಿಲ್ಲ ಎಂದು ಹೇಳಿದ್ದಾರೆ. ಸಿದ್ದರಾಮ್ಯನವರು ಮತ್ತೆ ಮುಖ್ಯಮಂತ್ರಿ ಆದರೆ 10 ಕೆಜಿ ಅಕ್ಕಿ ನೀಡುವುದಾಗಿ ಹೇಳುತ್ತಿದ್ದಾರೆ. ಆದರೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ಸೆ. 2ರಂದು ರಜೆ  ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಸೆ.2ರಂದು ಮಂಗಳೂರು ನಗರದ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ, ಪದವಿ ಹಾಗೂ ಸ್ನಾತಕೋತ್ತರ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸೆ.2ರಂದು ನಗರದ ಹಲವೆಡೆ ಗಣೇಶೋತ್ಸವದ ವಿಸರ್ಜನಾ‌ ಮೆರವಣಿಗೆಗಳು ಇರುವ ಕಾರಣದಿಂದ ಜನ ಸಂಚಾರ ಮತ್ತು‌ ವಾಹನ ದಟ್ಟಣೆಯಾಗುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ರಜೆ ಘೋಷಣೆ ಮಾಡಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.ಸೆ.2 ರಂದು ಪ್ರಧಾನಿ ಮೋದಿ ಮಧ್ಯಾಹ್ನ 1 ಗಂಟೆಗೆ ಮಂಗಳೂರಿಗೆ ಆಗಮಿಸಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ವಾಷಿಂಗ್‌ಟನ್ : ಏನನ್ನಾದರೂ ಮಾಡುವ ಉತ್ಸಾಹ ವ್ಯಕ್ತಿಗೆ ಅತ್ಯಂತ ವಿಶಿಷ್ಟವಾದ ಗುರುತನ್ನು ನೀಡುತ್ತದೆ. ಜಗತ್ತಿನಲ್ಲಿ ಪ್ರತಿಭೆಗೆ ಕೊರತೆಯಿಲ್ಲದಿದ್ದರೂ, ಅಪರೂಪವಾಗಿ ಕಂಡುಬರುವ ಕೆಲವು ಪ್ರತಿಭೆಗಳಿವೆ. ಅಂತಹ ಕೆಲವು ಪ್ರತಿಭೆಗಳೊಂದಿಗೆ ವ್ಯಕ್ತಿಯೊಬ್ಬರು ಇತಿಹಾಸವನ್ನು ಸೃಷ್ಟಿಸಿದ್ದಾರೆ. ವ್ಯಕ್ತಿಯೊಬ್ಬ ದೈತ್ಯ ಕುಂಬಳಕಾಯಿಯನ್ನು ಕೊರೆದು ಅದನ್ನು ದೋಣಿಯಾಗಿ ಬಳಸುವಲ್ಲಿ ಶೇ.100ರಷ್ಟು ಯಶಸ್ಸನ್ನು ಸಾಧಿಸಿದ್ದಾನೆ. ಡುವಾನ್ ಹ್ಯಾನ್ಸೆನ್ ಅವರು ತಮ್ಮ ಹೆಸರಿನಲ್ಲಿ ಈ ವಿಶಿಷ್ಟ ದಾಖಲೆಯನ್ನು ದಾಖಲಿಸಿದ ಯುನೈಟೆಡ್ ಸ್ಟೇಟ್ಸ್‌ನ ವ್ಯಕ್ತಿ. ಇವರು ಬೃಹತ್ ಟೊಳ್ಳಾದ ಕುಂಬಳಕಾಯಿಯಲ್ಲಿ ಕುಳಿತು ದೋಣಿಯಲ್ಲಿ 61 ಕಿ.ಮೀ ಪ್ರಯಾಣಿಸಿದ್ದಾರೆ. ಇದು ವಿಶ್ವದಲ್ಲೇ ಹೊಸ ದಾಖಲೆಯಾಗಿದೆ. ಆಲ್ ಡೇವ್ ಸಿಟಿ ಟ್ವಿಟ್ಟರ್ ಖಾತೆಯ ಪೋಸ್ಟ್ ಪ್ರಕಾರ, ಕುಂಬಳಕಾಯಿ ದೋಣಿಯಲ್ಲಿ ನೆಬ್ರಸ್ಕಾದ ಡುವಾನ್ ಹ್ಯಾನ್ಸೆನ್ ನದಿಯಾದ್ಯಂತ 61 ಕಿಲೋಮೀಟರ್ ಪ್ರಯಾಣಿಸಿದ್ದಾರೆ. ಈ ಕುಂಬಳಕಾಯಿ ಬೋಟ್ ಬಗ್ಗೆ ಜಗತ್ತಿನೆಲ್ಲಡೆ ಉತ್ಸಾಹ ಕೆರಳಿಸಿದ್ದಾರೆ. ಕುಂಬಳಕಾಯಿಯಿಂದ ಇವರಿಗೆ ಬೋಟ್ ಮಾಡುವ ಪರಿಕಲ್ಪನೆ ಹೇಗೆ ಬಂತು ಎನ್ನುವ ಬಗ್ಗೆ ವಿವರಣೆ ಕೂಡ ನೆಬ್ರಸ್ಕಾದ ಡುವಾನ್ ಹ್ಯಾನ್ಸೆನ್ ನೀಡಿದ್ದಾರೆ. ತಮ್ಮ ಕನಸನ್ನು ನನಸಾಗಿಸಿಕೊಂಡಿರುವುದಾಗಿ ನೆಬ್ರಸ್ಕಾದ…

Read More

ಬೆಂಗಳೂರು: ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ವಿಚಾರ ಸಂಬಂಧ ಯಥಾಸ್ಥಿತಿ ಎರಡೂ ಪಕ್ಷಗಳೂ ಕಾಯ್ದುಕೊಳ್ಳಲು ಸುಪ್ರೀಂಕೋರ್ಟ್ ಆದೇಶ ನೀಡಿದ್ದು, ನಾಳೆ ಗಣೇಶೋತ್ಸವ ಇಲ್ಲವೆಂದು ಆದೇಶ ಹೊರಡಿಸಿದೆ. ಹೈಕೋರ್ಟ್​ನಲ್ಲಿ ಮತ್ತೆ ಹೊಸದಾಗಿ ವಿಚಾರಣೆ ನಡೆಸುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ. ಈದ್ಗಾ ಮೈದಾನದಲ್ಲಿ ಯತಾಸ್ಥಿತಿ ಕಾಯ್ದುಕೊಂಡು, ಬೇರೆಡೆಗೆ ಗಣೇಶೋತ್ಸವ ಆಚರಿಸುವಂತೆ ಕೋರ್ಟ್ ಸೂಚನೆ ನೀಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಗಣೇಶೋತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕಿನಾದ್ಯಂತ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳುವ ಸಲುವಾಗಿ 31 ಆಗಸ್ಟ್ 2022 ರಂದು ಬೆಳಿಗ್ಗೆ 6 ಗಂಟೆಯಿಂದ 1ಸೆಪ್ಟೆಂಬರ್ 2022 ರಂದು ಬೆಳಿಗ್ಗೆ 6 ಗಂಟೆಯವರೆಗೆ 01 ದಿನ ಹಾಗೂ ವಿಸರ್ಜನೆ ಕಾಲಕ್ಕೆ 09 ಸೆಪ್ಟೆಂಬರ್ 2022 ರಂದು ಬೆಳಿಗ್ಗೆ 6 ಗಂಟೆಯಿಂದ 10 ಸೆಪ್ಟೆಂಬರ್ 2022 ರಂದು ಸಂಜೆ 6 ಗಂಟೆಯವರೆಗೆ ಮದ್ಯದ ಅಂಗಡಿ, ವೈನಶಾಪ್, ಬಾರ್‍ಗಳಲ್ಲಿ, ಕ್ಲಬ್‍ ಗಳಲ್ಲಿ ಮತ್ತು ಹೊಟೇಲ್‍ಗಳಲ್ಲಿ ಮದ್ಯ ಮಾರಾಟ ಮತ್ತು ಮದ್ಯ ಸಾಗಣ ಕೆಯನ್ನು ನಿಷೇಧಿಸಲಾಗಿದೆ. ಮಧ್ಯದ ಅಂಗಡಿಗಳನ್ನು ಹಾಗೂ ಕೆಎಸ್‍ ಬಿಸಿಎಲ್ ಡಿಪೋಗಳನ್ನು, ಹೊಟೇಲ್‍ಗಳಲ್ಲಿರುವ ಬಾರ್‍ಗಳನ್ನು ಮುಚ್ಚತಕ್ಕದ್ದು ಹಾಗೂ ಎಲ್ಲ ಅಬಕಾರಿ ಸನ್ನದು ಅಂಗಡಿಗಳನ್ನು ಮುಚ್ಚಿ ಸೀಲ್ ಹಾಕತಕ್ಕದ್ದೆಂದು ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿಗಳು ಹಾಗೂ ಬೆಳಗಾವಿ ನಗರ ಪೊಲೀಸ್ ಆಯುಕ್ತರು ಆದೇಶಿಸಿದ್ದಾರೆ. ಈ ಆದೇಶವನ್ನು ಉಲ್ಲಂಘನೆ ಮಾಡಿದಲ್ಲಿ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿಗಳು ಹಾಗೂ ಬೆಳಗಾವಿ ನಗರ ಪೊಲೀಸ್…

Read More

ಕೊರಟಗೆರೆ:  ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಸಿದ್ಧರಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಮಟೇನಹಳ್ಳಿ ಗ್ರಾಮವು ಕಂದಾಯ ಗ್ರಾಮಕ್ಕೆ ಒಳಪಟ್ಟಿದ್ದು, ಮೂಲ ಸೌಕರ್ಯಗಳಿಂದ ವಂಚಿತವಾಗಿದೆ. ಸುಮಾರು 25ಕ್ಕೂ ಹೆಚ್ಚು ಮನೆಗಳಿದ್ದು 150ಕ್ಕೂ ಹೆಚ್ಚು ಜನಸಂಖ್ಯೆ ಇರುವ ಈ ಗ್ರಾಮಕ್ಕೆ ರಸ್ತೆಯೇ ಇಲ್ಲ ಈ ಗ್ರಾಮದ ಮಧ್ಯೆ ಹರಿಯುವ ಹಳ್ಳ ರಸ್ತೆಯಾಗಿ ಮಾರ್ಪಟ್ಟಿದೆ.  ಈ ಬಗ್ಗೆ ನಮ್ಮ ತುಮಕೂರು ಮಾಧ್ಯಮದಲ್ಲಿ ಸುದ್ದಿ ಪ್ರಕಟವಾಗಿ ಕೆಲವೇ ಗಂಟೆಗಳಲ್ಲಿ ತಹಶೀಲ್ದಾರ್ ನಹೀದಾ ಜಂ ಜಂ ಸಂದಿಸಿದ್ದಾರೆ. ಕುಮಟೇನಹಳ್ಳಿಯಲ್ಲಿ ಸುಮಾರು 25ಕ್ಕೂ ಹೆಚ್ಚು ಮನೆಗಳಿದ್ದು ಸರಿ ಸುಮಾರು 120ಕ್ಕೂ ಹೆಚ್ಚು ಮತದಾರರಿದ್ದಾರೆ. ಸದರಿ ಗ್ರಾಮಕ್ಕೆ ನಕಾಶೆ ರಸ್ತೆ ಇದ್ದು ಇಲ್ಲದಂತೆ ಮಾಯವಾಗಿದೆ. ಸುಮಾರು ಏಳು ವರ್ಷಗಳಿಂದ ಈ ಗ್ರಾಮಕ್ಕೆ ಮೂಲಭೂತ ಸೌಕರ್ಯಗಳ ಕೊರತೆ ಎದುರಿಸುತ್ತಿದ್ದಾರೆ. ಅದರಲ್ಲೂ ರಸ್ತೆ ಸಮಸ್ಯೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದ್ದು, ರಸ್ತೆ ಇಲ್ಲದೆ ಜನರು ಹಳ್ಳವನ್ನೇ ರಸ್ತೆಯನ್ನಾಗಿ ಮಾಡಿಕೊಂಡು ಸಂಚರಿಸುವಂತಾಗಿದೆ. ಬೆಂಡೋಣೆ ಗ್ರಾಮದಿಂದ ಒಂದೂವರೆ ಕಿಲೋಮೀಟರ್ ದೂರದಲ್ಲಿರುವ  ಕುಮಟೇನಹಳ್ಳಿ ಗ್ರಾಮದ ಮುಗ್ಧ ಜನರು ಹೊರ ಪ್ರಪಂಚಕ್ಕೆ ಕಾಲಿಡಲು…

Read More