Subscribe to Updates
Get the latest creative news from FooBar about art, design and business.
- ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ
- ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ
- ತುಮಕೂರು: ವಿಮೆ ಹಣ, ಮದ್ಯದ ಅಮಲಿಗೆ ನಡೆದಿದ್ದ 3 ಭೀಕರ ಕೊಲೆ ಕೇಸ್ ಭೇದಿಸಿದ ಪೊಲೀಸರು; 7 ಮಂದಿ ಬಂಧನ
- ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ
- ತುಮಕೂರು: ಆನ್ಲೈನ್ ಕೌನ್ಸಿಲಿಂಗ್ ಮೂಲಕ 41 ಸರ್ಕಾರಿ ನೌಕರರ ವರ್ಗಾವಣೆ
- ವೃದ್ದೆಯನ್ನು ಕೊಲೆ ಮಾಡಿ ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ
- ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ
- ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ
Author: admin
ಬೆಳಗಾವಿ,: ಅಂತರಾಷ್ಟ್ರೀಯ ಮಹಿಳಾ ದಿನಚರಣೆಯಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ವತಿಯಿಂದ ಕಳೆದ 5 ವರ್ಷಗಳಿಂದ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಗೆ ಹಾಗೂ ಇತರೆ ಕ್ಷೇತ್ರಗಳಾದ ಮಹಿಳಾ ಅಭಿವೃದ್ಧಿ, ಶಿಕ್ಷಣ, ಕ್ರೀಡೆ, ಸಾಹಿತ್ಯ ಹಾಗೂ ಕಲಾ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಸಾಧನೆಯನ್ನು ಗುರುತಿಸಿ ಮಹಿಳೆಯರಿಗಾಗಿ ಕಿತ್ತೂರುರಾಣಿ ಚನ್ನಮ್ಮ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಸದರಿ ಪ್ರಶಸ್ತಿಗಾಗಿ ಅರ್ಹ ಸ್ವಯಂ ಸೇವಾ ಸಂಸ್ಥೆ ಹಾಗೂ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಲಾಗಿದೆ. ಬೆಳಗಾವಿ ಜಿಲ್ಲೆಗೆ ಸಂಬಂಧಿಸಿದಂತೆ ನಿರ್ದಿಷ್ಟ ಅರ್ಜಿ ನಮೂನೆಗಳನ್ನು ಉಪನಿರ್ದೇಶಕರ ಕಚೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿವಾಜಿ ನಗರ ಬೆಳಗಾವಿ ಇವರಿಂದ ಪಡೆದು ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ಜನವರಿ 10, 2023ರರೊಳಗೆ ಶಿಶು ಅಭಿವೃದ್ಧಿ ಯೋಜನೆ ಬೆಳಗಾವಿ ಗ್ರಾಮೀಣ ಇಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ. 0831- 2476209 ಗೆ ಸಂಪರ್ಕಿಸಬಹುದು. ನಿಗದಿತ ಅವಧಿಯ ನಂತರ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ…
ಬೆಂಗಳೂರು : ರಾಜ್ಯದಲ್ಲಿ ನಕಲಿ ನೋಟು ಹಾವಳಿ ಆರಂಭವಾಗಿದೆ. ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಪೊಲೀಸರು 1.30 ಕೋಟಿ ಮೌಲ್ಯದ ನಕಲಿ ನೋಟುಗಳನ್ನು ಜಪ್ತಿ ಮಾಡಿದಲ್ಲದೇ ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಆರೋಪಿಗಳು ನಕಲಿ ನೋಟುಗಳನ್ನು ಕೊಟ್ಟು ಅಸಲಿ ನೋಟುಗಳನ್ನು ಪಡೆಯೋದಕ್ಕೆ ಪ್ರಮುಖ ಆರೋಪಿ ಕಣ್ಣಿ ಎಂಬಾತನ ಸೂಚನೆ ಮೇರೆಗೆ ಪಿಚ್ಚು ಮುತ್ತು ಮತ್ತು ತಂಡ ಬೆಂಗಳೂರಿಗೆ ಬಂದಿದ್ದರು. ಖಚಿತ ಮಾಹಿತಿ ಮೆರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ : ನಡುರಸ್ತೆಯಲ್ಲಿ ಯುವಕನನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಪಡತರವಾಡಿ ಗ್ರಾಮ ಹೊರವಲಯದಲ್ಲಿ ನಡೆದಿದೆ. ಕೋಹಳ್ಳಿ ಗ್ರಾಮದ ಕುಮಾರ ಮರಗಾಲೆ (48) ಕೊಲೆಯಾದ ದುರ್ದೈವಿ. ಪಡತರವಾಡಿ – ಕನಾಳ ರಸ್ತೆಯಲ್ಲಿ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಸುಬ್ರಹ್ಮಣ್ಯ: ಅಪ್ರಾಪ್ತೆಗೆ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ಯುವಕನೋರ್ವನಿಗೆ ದುಷ್ಕರ್ಮಿಗಳ ತಂಡವೊಂದು ಮಾರಣಾಂತಿಕವಾಗಿ ಥಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಹಫೀದ್, ಥಳಿತಕ್ಕೊಳಗಾದ ಯುವಕ. ಗಂಭೀರವಾಗಿ ಗಾಯಗೊಂಡಿರುವ ಯುವಕನನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಅಫೀದ್ ಕುಕ್ಕೆ ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿನಿಯೊಬ್ಬಳೊಂದಿಗೆ ಮಾತನಾಡುತ್ತಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ಅಫೀದ್ ರನ್ನು ತಂಡವೊಂದು ಬಲವಂತವಾಗಿ ಕರೆದೊಯ್ದು, ಅರೆಬೆತ್ತಲೆಗೊಳಿಸಿ ತೀವ್ರವಾಗಿ ಥಳಿಸಿದೆ. ಹಫೀದ್ ನೀಡಿರುವ ದೂರಿನಂತೆ ಸುಬ್ರಹ್ಮಣ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಆದಿ ಕವಿ ಅಮೋಘವರ್ಷ ನೃಪತುಂಗರಿಂದ ಆರಂಭವಾಗಿ, ರನ್ನ,ಪಂಪರಿಂದ ಹಿಡಿದು, 8 ಜನ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರನ್ನು ಹೊಂದಿರುವ ದೇಶದ ಏಕೈಕ ಭಾಷೆ ನಮ್ಮ ಕನ್ನಡ ಎಂಬುದು ನಮಗೆ ಹೆಮ್ಮೆಯ ವಿಷಯ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು. ಹಾವೇರಿಯಲ್ಲಿ86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ಅತ್ಯಂತ ಶ್ರೀಮಂತ ಭಾಷೆಯಾಗಿದ್ದು, ಇದಕ್ಕೆ ಆಪತ್ತು ತರುವ ಯಾವುದೇ ಶಕ್ತಿ ವಿಶ್ವದಲ್ಲಿ ಇನ್ನೂ ಹುಟ್ಟಿಲ್ಲ ಮತ್ತು ಹುಟ್ಟುವುದೂ ಇಲ್ಲ ಎಂದರು. ಕನ್ನಡಕ್ಕೆ ಮಾತ್ರ ಎಂಟು ಜ್ಞಾನಪೀಠ ಪ್ರಶಸ್ತಿಗಳು ದೊರೆತಿವೆ. ದೇಶದ ಬೇರೆ ಯಾವ ಭಾಷೆಗೂ ಸಹ ಇಷ್ಟು ಜ್ಞಾನಪೀಠ ಪ್ರಶಸ್ತಿಗಳು ದೊರೆತಿಲ್ಲ. ಒಂದು ಭಾಷೆ ಒಂದು ಸಂಸ್ಕೃತಿ ಬೆಳೆಯಬೇಕಂದರೇ ಇದುವರೆಗೆ ನಡೆದ ಬಂದ ದಾರಿಯ ಸಿಂಹಾವಲೋಕನ ಮಾಡಬೇಕಾಗುತ್ತದೆ. ಆಗ ಅದು ಮುಂದಿನ ದಾರಿಯನ್ನು ನಿರ್ಧರಿಸುತ್ತದೆ ಎಂದು ಅವರು ಹೇಳಿದರು. https://twitter.com/BSBommai/status/1611318093338542085?s=20&t=r-rYC7i2VuqsyYkgU8oKYA ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…
ತುರುವೇಕೆರೆ: ತುರುವೇಕೆರೆ ವಿಧಾನಸಭಾ ಕ್ಷೇತ್ರದ ಮತದಾರರ ಅಂತಿಮ ಪಟ್ಟಿಯ ಸಿದ್ದವಾಗಿದ್ದು 229 ಮತಗಟ್ಟೆಗಳ ಅಧಿಕಾರಿಗಳು ಮತಗಟ್ಟೆಗಳ ಮತದಾರರ ಅಂತಿಮ ಪಟ್ಟಿಯನ್ನು ಸಿದ್ಧಪಡಿಸಿದ್ದು, ಸಾರ್ವಜನಿಕರ ಪರಿಶೀಲನೆಗಾಗಿ ಪ್ರಕಟಿಸಲಾಗಿದೆ ಎಂದು ತಹಶೀಲ್ದಾರ್ ರೇಣುಕುಮಾರ್ ತಿಳಿಸಿದ್ದಾರೆ. 2022ರ ನವೆಂಬರ್ 9 ರಂದು ಕರಡು ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೋ, ಇಲ್ಲವೋ ಎಂಬುದನ್ನು ಪರಿಶೀಲಿಸಿ. ಹಾಗೆಯೇ ಮರಣ ಹೊಂದಿರುವ ಮತ್ತು ಸ್ಥಳಾಂತರ ಹೊಂದಿರುವ ವ್ಯಕ್ತಿಗಳನ್ನೂ ಪಟ್ಟಿಯಿಂದ ಕೈಬಿಟ್ಟಿದ್ದು ಹಾಗೂ ಹೊಸದಾಗಿ ಮತದಾನದ ಹಕ್ಕನ್ನು 18 ವರ್ಷ ತುಂಬಿರುವ ಹೊಸ ಮತದಾರರ ಪಟ್ಟಿಯ ಸಿದ್ದವಾಗಿದ್ದು, ಅವರುಗಳು ಪಟ್ಟಿಯನ್ನು ಪರಿಶೀಲಿಸಿ ಕೊಳ್ಳಬೇಕೆಂದು ಮನವಿ ಮಾಡಿದರು. ಪಟ್ಟಿಯಲ್ಲಿ 88,801 ಗಂಡು ಮತ್ತು 88,847ಹೆಣ್ಣು ಇತರೆ 3 ಒಟ್ಟು 1,77,651ಜನರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಈಗ ಅಂತಿಮ ಮತದಾರರ ಪಟ್ಟಿ ಸಿದ್ದವಾಗಿದ್ದು ತುರುವೇಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಗಂಡು 89,769 ಹಾಗೂ ಹೆಣ್ಣು 90,185 ಇತರೆ 4 ಮತದಾರರು ಒಟ್ಟು 1,79,958 ಮತದಾರರ ಪಟ್ಟಿ ಸಿದ್ದವಾಗಿ ಪ್ರಕಟಿಸಲಾಗಿದೆ. ಜೊತೆಗೆ…
ಮಧ್ಯಪ್ರದೇಶದಲ್ಲಿ ಸಣ್ಣ ವಿಮಾನ ಪತನ, ಪೈಲಟ್ ಸಾವು ಸಹ ಪೈಲಟ್ ಗಾಯಗೊಂಡಿದ್ದಾರೆ. ಫಾಲ್ಕನ್ ಏವಿಯೇಷನ್ ಅಕಾಡೆಮಿಯ ತರಬೇತಿ ವಿಮಾನ ಅಪಘಾತವಾಗಿದೆ. ಮಧ್ಯಪ್ರದೇಶದ ರಿವಾದಲ್ಲಿನ ದೇವಸ್ಥಾನದ ಮೇಲೆ ವಿಮಾನ ಪತನಗೊಂಡಾಗ ಈ ಅಪಘಾತ ಸಂಭವಿಸಿದೆ. ಅಪಘಾತದ ಸಮಯದಲ್ಲಿ ಪೈಲಟ್ ಮತ್ತು ಸಹ ಪೈಲಟ್ ಮಾತ್ರ ವಿಮಾನದಲ್ಲಿದ್ದರು. ತರಬೇತಿ ಹಾರಾಟದ ವೇಳೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ವಿಮಾನ ಹಾರಿಸಿದ ಟ್ರೈನಿ ಪೈಲಟ್ ಸಾವನ್ನಪ್ಪಿದ್ದಾರೆ. ಸಹ ಪೈಲಟ್ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತ ಸಂಭವಿಸಿದ ತಕ್ಷಣ ಇಬ್ಬರನ್ನೂ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಪೈಲಟ್ ಮೃತಪಟ್ಟಿದ್ದಾರೆ.ಸ್ಥಳಕ್ಕೆ ಉನ್ನತ ಪೊಲೀಸ್ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಘಟನೆ ಕುರಿತು ಡಿಜಿಸಿಎ ವರದಿ ಕೇಳಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ನ್ಯೂಯಾರ್ಕ್-ದೆಹಲಿ ವಿಮಾನದಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ ಪ್ರಕರಣದ ಆರೋಪಿ ಶಂಕರ್ ಮಿಶ್ರಾ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ. ನಾಲ್ವರು ಗಗನಸಖಿಯರ ಹೇಳಿಕೆಗಳನ್ನು ತೆಗೆದುಕೊಳ್ಳಲಾಗಿದೆ. ಇಂದು ಹೆಚ್ಚಿನ ಜನರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗುವುದು. ಆರೋಪಿ ಪೊಲೀಸರಿಗೆ ನಕಲಿ ವಿಳಾಸ ನೀಡಿದ್ದಾನೆ. ಆರೋಪಿಯು ಮುಂಬೈನಲ್ಲಿರುವ ತನ್ನ ಸಂಬಂಧಿಕರ ಬಾಡಿಗೆ ವಿಳಾಸವನ್ನು ತನ್ನ ಸ್ವಂತ ವಿಳಾಸವೆಂದು ನೀಡಿದ್ದಾನೆ. ಆದರೆ ಅವರು ಲಕ್ನೋದಲ್ಲಿ ವಾಸಿಸುತ್ತಿದ್ದಾರೆ ಎಂದು ಸಂಬಂಧಿಕರು ಹೇಳಿದ್ದಾರೆ. ಇದೇ ವೇಳೆ ತನ್ನ ಮೇಲೆ ಹಲ್ಲೆ ನಡೆದ ನಂತರ ಸೀಟು ಬದಲಾಯಿಸಲು ಅರ್ಧ ಗಂಟೆ ಕಾಯಬೇಕಾಯಿತು ಎಂದು ದೂರುದಾರರು ತಿಳಿಸಿದ್ದಾರೆ. ಪ್ರಕರಣದ ಆರೋಪಿ ಶಂಕರ್ ಮಿಶ್ರಾ ಭಾರತದಲ್ಲಿ ಅಮೆರಿಕದ ಕಂಪನಿಯೊಂದರ ಉಪಾಧ್ಯಕ್ಷರಾಗಿದ್ದಾರೆ. ಮುಂಬೈ ತಲುಪಿದ ದೆಹಲಿ ಪೊಲೀಸರ ತಂಡಕ್ಕೆ ಆತನ ಪತ್ತೆಯೇ ಆಗಲಿಲ್ಲ. ಏರ್ ಇಂಡಿಯಾದ ನಾಲ್ವರು ಉದ್ಯೋಗಿಗಳ ಹೇಳಿಕೆಗಳನ್ನು ತೆಗೆದುಕೊಳ್ಳಲಾಗಿದೆ. ಟಾಟಾ ಒಡೆತನದ ಏರ್ ಇಂಡಿಯಾದ ಪೈಲಟ್ ಮತ್ತು ಇತರ ಸಿಬ್ಬಂದಿಗೆ ಡಿಜಿಸಿಎ ಶೋಕಾಸ್ ನೋಟಿಸ್ ನೀಡಿದೆ. ಎರಡು ವಾರಗಳಲ್ಲಿ…
ಸೌದಿ ಅರೇಬಿಯಾದಲ್ಲಿ ದೇಶೀಯ ಹಜ್ ಯಾತ್ರಿಕರ ಬುಕ್ಕಿಂಗ್ ಪ್ರಾರಂಭವಾಗಿದೆ. ಸೌದಿ ಹಜ್ ಉಮ್ರಾ ಸಚಿವಾಲಯವು 4 ಪ್ಯಾಕೇಜ್‌ಗಳನ್ನು ಪ್ರಕಟಿಸಿದೆ. ಪ್ಯಾಕೇಜ್‌ಗೆ ಸಂಬಂಧಿಸಿದ ನಿಯಮಗಳು ಮತ್ತು ಷರತ್ತುಗಳನ್ನು ಸಚಿವಾಲಯ ಪ್ರಕಟಿಸಿದೆ. ಸೌದಿ ಹಜ್ ಮತ್ತು ಉಮ್ರಾ ಸಚಿವಾಲಯವು ಈ ವರ್ಷ ಹಜ್ ನಿರ್ವಹಿಸುವ ದೇಶೀಯ ಯಾತ್ರಿಕರ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ ಎಂದು ಘೋಷಿಸಿದೆ. ಹಜ್ ಮಾಡಲು ಉದ್ದೇಶಿಸಿರುವ ಸೌದಿ ಪ್ರಜೆಗಳು ಮತ್ತು ವಿದೇಶಿಯರು ಸಚಿವಾಲಯದ ವೆಬ್‌ಸೈಟ್ https://localhaj.haj.gov.sa/ ಮೂಲಕ ಅಥವಾ ನುಸುಕ್ ಅಪ್ಲಿಕೇಶನ್ ಮೂಲಕ ನೋಂದಾಯಿಸಿಕೊಳ್ಳಬಹುದು. ಸಚಿವಾಲಯವು 4 ಪ್ಯಾಕೇಜ್‌ಗಳನ್ನು ಸಿದ್ಧಪಡಿಸಿದೆ. ಮೊದಲ ಪ್ಯಾಕೇಜ್‌ನಲ್ಲಿ 10596 ರಿಂದ 11841 ರಿಯಾಲ್‌ಗಳನ್ನು ವಿಧಿಸಲಾಗುತ್ತದೆ. ಎರಡನೇ ಪ್ಯಾಕೇಜ್ ಬೆಲೆ 8092 ರಿಯಾಲ್‌ಗಳಿಂದ 8458 ರಿಯಾಲ್‌ಗಳವರೆಗೆ ಇರುತ್ತದೆ. ಮಿನಾ ಟವರ್‌ನಲ್ಲಿ ವಸತಿ ಸೌಕರ್ಯವಿರುವ ಮೂರನೇ ಪ್ಯಾಕೇಜ್‌ನ ಬೆಲೆ 13,150 ರಿಯಾಲ್‌ಗಳು. ಅಗ್ಗದ ನಾಲ್ಕನೇ ಪ್ಯಾಕೇಜ್‌ನ ಬೆಲೆ 3984 ರಿಯಾಲ್‌ಗಳು. ಇದು ವ್ಯಾಟ್ ಅನ್ನು ಒಳಗೊಂಡಿದೆ. ದರ ವ್ಯತ್ಯಾಸವನ್ನು ಅವಲಂಬಿಸಿ ಸೇವೆಗಳು ಮತ್ತು ಸೌಕರ್ಯಗಳು ಬದಲಾಗುತ್ತವೆ. ಅರ್ಜಿದಾರರ ಕನಿಷ್ಠ…
ತಮಿಳುನಾಡು :ಪ್ರಾಣೇಶ್ ಕಾರೈಕುಡಿಯ 15 ವರ್ಷದ ಬಾಲಕ. ಅವರು ಕಾಮನ್‌ವೆಲ್ತ್ ಚೆಸ್ ಟೂರ್ನಮೆಂಟ್‌ನಲ್ಲಿ ಬೆಳ್ಳಿ ಪದಕ, ಏಷ್ಯನ್ ಚೆಸ್ ಪಂದ್ಯಾವಳಿಯಲ್ಲಿ ಚಿನ್ನದ ಪದಕ ಮತ್ತು 16 ವರ್ಷದೊಳಗಿನವರ ಅಂತರರಾಷ್ಟ್ರೀಯ ಚೆಸ್ ಸರಣಿಯಲ್ಲಿ ಕಂಚಿನ ಪದಕವನ್ನು ಗೆದ್ದಿದ್ದಾರೆ. ಈ ಮೂಲಕ ಪ್ರಾಣೇಶ್ ಭಾರತದ 79ನೇ ಚೆಸ್ ಗ್ರ್ಯಾಂಡ್ ಮಾಸ್ಟರ್ ಎನಿಸಿಕೊಂಡಿದ್ದಾರೆ. ಅವರು ತಮಿಳುನಾಡಿನ 28 ನೇ ಚೆಸ್ ಗ್ರ್ಯಾಂಡ್ ಮಾಸ್ಟರ್ ಆಗಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy