Subscribe to Updates
Get the latest creative news from FooBar about art, design and business.
- ಕನಕದಾಸರು ಸಮಾಜದ ಓರೆಕೋರೆಗಳನ್ನು ತಿದ್ದಲು ಶ್ರಮಿಸಿದವರು: ಸಿ.ವಿ.ಕುಮಾರ್
- ಅವೈಜ್ಞಾನಿಕ ಸುತ್ತೋಲೆ ವಾಪಸ್ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರಾಂಶುಪಾಲರ, ಉಪನ್ಯಾಸಕರ ಸಂಘ ಆಗ್ರಹ
- ತುಮಕೂರು | ಕಾಂಗ್ರೆಸ್ ಭವನ ಕಟ್ಟಡ ನಿರ್ಮಾಣಕ್ಕೆ ತಡೆಯಾಜ್ಞೆ
- ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ
- ಸಾಮಾಜಿಕ ನ್ಯಾಯ ಎತ್ತಿ ಹಿಡಿದವರು ಕನಕದಾಸರು: ಎಂ.ಬಿ.ಆನಂದ
- ರಾಜ್ಯ ಮಟ್ಟದ ಕನ್ನಡ ಸೇವಾರತ್ನ ಪ್ರಶಸ್ತಿಗೆ ಡಾ.ಸತ್ಯಕ್ಕ ಗಡ್ಡೆ ಆಯ್ಕೆ
- ನರಹಂತಕ ವ್ಯಾಘ್ರನ ಸೆರೆ: ಜನರ ನಿದ್ದೆಗೆಡಿಸಿದ 9 ವರ್ಷದ ಹುಲಿಯನ್ನು ಹಿಡಿದ ಅರಣ್ಯ ಇಲಾಖೆ
- ನರಹಂತಕ ಹುಲಿಯ ಸೆರೆಗಾಗಿ ಮುಂದುವರಿದ ಕಾರ್ಯಾಚರಣೆ: ಡ್ರೋನ್ ಕ್ಯಾಮೆರಾದಲ್ಲಿ ಹುಲಿ ಪತ್ತೆ!
Author: admin
ನಾಳೆಯ ಮೇಷ ರಾಶಿ ಭವಿಷ್ಯ : ಕೆಲವು ಸಮಸ್ಯೆಗಳಿರುತ್ತವೆ ಆದರೆ ಸಂಭಾಷಣೆಯ ಮೂಲಕ ನೀವು ಅನೇಕ ಸಮಸ್ಯೆಗಳನ್ನು ಪರಿಹರಿಸುತ್ತೀರಿ. ನಿಮ್ಮ ಸಮಯವು ಸಂಬಂಧಿಕರಿಗೆ ಸಹಾಯ ಮಾಡಲು ಸಹ ವ್ಯಯಿಸುತ್ತದೆ. ಇದನ್ನು ಮಾಡುವುದರಿಂದ ನೀವು ಸಂತೋಷವಾಗಿರುತ್ತೀರಿ. ಒಂಟಿತನ ಹೆಚ್ಚಾಗಬಹುದು. ನಿಮ್ಮ ಕೋಪವು ಇತರರಿಂದ ಹೆಚ್ಚಾಗಬಹುದು, ಆದರೆ ಅದು ನಿಮಗೆ ಹಾನಿ ಮಾಡಬಾರದು ಎಂಬುದನ್ನು ನೆನಪಿನಲ್ಲಿಡಿ. ನಿಮ್ಮ ಹಿಡಿತದಲ್ಲಿರುವ ವಿಷಯಗಳನ್ನು ಮಾತ್ರ ನೆನಪಿನಲ್ಲಿಟ್ಟುಕೊಳ್ಳಬೇಕು. ನಿರೀಕ್ಷೆಯಂತೆ ನಿಮ್ಮ ಪರವಾಗಿ ವಿಷಯಗಳನ್ನು ಮಾಡಲು ಇಚ್ಛಾಶಕ್ತಿಯನ್ನು ಇಟ್ಟುಕೊಳ್ಳಿ. ನಾಳೆಯ ವೃಷಭ ರಾಶಿ ಭವಿಷ್ಯ : ಯಾವುದೇ ಆಸ್ತಿ, ಹಂಚಿಕೆ ಸಂಬಂಧಿತ ಸಮಸ್ಯೆಗಳು ನಡೆಯುತ್ತಿದ್ದರೆ, ಅದು ಪರಸ್ಪರ ಸಾಮರಸ್ಯದಿಂದ ಸುಲಭವಾಗಿ ಪರಿಹರಿಸಲ್ಪಡುತ್ತದೆ. ಕಾರ್ಯನಿರತತೆಯ ಹೊರತಾಗಿಯೂ, ಸ್ನೇಹಿತರು ಮತ್ತು ಸಂಬಂಧಿಕರೊಂದಿಗೆ ಸಂಪರ್ಕವಿರುತ್ತದೆ. ಕುಟುಂಬ ಸಮೇತ ಯಾವುದೇ ಧಾರ್ಮಿಕ ಸ್ಥಳಕ್ಕೆ ಹೋಗುವುದರಿಂದ ಎಲ್ಲರಿಗೂ ಸುಖ ಶಾಂತಿ ಸಿಗುತ್ತದೆ. ಕುಟುಂಬದ ಸದಸ್ಯರ ಒತ್ತಡದಿಂದಾಗಿ ನೀವು ಯಾವುದೇ ಕೆಲಸದಲ್ಲಿ ತೊಡಗಿಸಿಕೊಳ್ಳಲು ಇಷ್ಟಪಡುವುದಿಲ್ಲ. ವೈಯಕ್ತಿಕ ಜೀವನದಲ್ಲಿ ಸ್ಥಿರತೆ ಇರುತ್ತದೆ. ಆದರೂ, ವಿಷಯಗಳು ಪ್ರಗತಿಯಾಗಲು ಸಮಯ ತೆಗೆದುಕೊಳ್ಳಬಹುದು. ನಾಳೆಯ…
ಐದು ರಾಜ್ಯಗಳಲ್ಲಿ 164 ದರೋಡೆಗಳನ್ನು ಮಾಡಿರುವ 54 ವರ್ಷದ ವ್ಯಕ್ತಿ ಮತ್ತು ಆತನಿಗೆ ಸಹಕಾರ ನೀಡಿದ ಆತನ ಕುಟುಂಬದವರನ್ನು ಬೆಂಗಳೂರಿನ ರಾಜಾಜಿನಗರದ ಪೊಲೀಸರು ಬಂಧಿಸಿದ್ದಾರೆ. ರಾಜ್ಯದ ಶಿವಮೊಗ್ಗ ಮತ್ತು ಕೋಲಾರ ಜಿಲ್ಲೆ ಸೇರಿದಂತೆ ಕರ್ನಾಟಕದ ಕೆಲವು ಭಾಗಗಳಲ್ಲಿ ಅಪರಾಧ ಚಟುವಟಿಕೆ ನಡೆಸಿದ್ದು, 40 ವರ್ಷಗಳ ಅಪರಾಧದ ಇತಿಹಾಸ ಹೊಂದಿರುವ ಆರೋಪಿ ಪ್ರಕಾಶ್ ಎಂಬುವವನನ್ನು ಬಂಧಿಸಿದ್ದಾರೆ. ಆರೋಪಿ ಪ್ರಕಾಶ್ ಜೊತೆಗೆ ಅವರ ಪುತ್ರರು, ಅಳಿಯ ಮತ್ತು ಸಹೋದರನನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ. 10ನೇ ವಯಸ್ಸಿನಿಂದಲೂ ಕಳ್ಳನಾಗಿದ್ದ ಪ್ರಕಾಶ್‌ಗೆ 20ಕ್ಕೂ ಹೆಚ್ಚು ಬಾರಿ ಜೈಲು ಶಿಕ್ಷೆಯಾಗಿದೆ. ವರದಿಯ ಪ್ರಕಾರ ಆರೋಪಿ ಪ್ರಕಾಶ್ ತನ್ನ 10 ನೇ ವಯಸ್ಸಿನಿಂದಲೂ ಕ್ರಿಮಿನಲ್ ಚಟುವಟಿಕೆ ಪ್ರಾರಂಭಿಸಿದ್ದಾರೆ. ಕಳೆದ 40 ವರ್ಷಗಳಲ್ಲಿ 20 ಕ್ಕೂ ಹೆಚ್ಚು ಬಾರಿ ಜೈಲು ಶಿಕ್ಷೆ ಅನುಭವಿಸಿದ್ದಾನೆ. ಆತನ ಕುಟುಂಬದ ಸದಸ್ಯರ ವಿರುದ್ಧವೂ ಅನೇಕ ಪ್ರಕರಣಗಳಿವೆ. ಪ್ರಕಾಶ್ ಅವರಿಗೆ ಮೂರು ಬೇರೆ ಬೇರೆ ಊರುಗಳಲ್ಲಿ (ಬಳ್ಳಾರಿ, ಕೋಲಾರ ಮತ್ತು ಶಿವಮೊಗ್ಗ) ಮೂವರು ಪತ್ನಿಯರಿದ್ದು, ಏಳು ಮಂದಿ…
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಕೆಐಎ) ಮೆಮು ರೈಲಿನ ಬಳಕೆಯನ್ನು ಉತ್ತೇಜಿಸಲು ನಾಗರಿಕ ಗುಂಪುಗಳು ಕಂಟೋನ್ಮೆಂಟ್ ರೈಲು ನಿಲ್ದಾಣದಿಂದ ಕೆಐಎಗೆ 100ಕ್ಕೂ ಹೆಚ್ಚು ಜನರು ರೈಲಿನಲ್ಲಿ ಪ್ರಯಾಣಿಸಿದರು. ರೈಲಿನಲ್ಲಿ ಸವಾರಿ ಮಾಡಿದ ಸಿಟಿಜನ್ಸ್ ಫಾರ್ ಸಿಟಿಜನ್ಸ್‌ನ ರಾಜ್‌ಕುಮಾರ್ ದುಗರ್ ಅವರು, ಮೆಮು ರೈಲುಗಳು ವಿಮಾನ ನಿಲ್ದಾಣಕ್ಕೆ ಉತ್ತಮ ಸಾರಿಗೆ ವಿಧಾನವಾಗಿದೆ. 30 ರೂ. ಗಳಲ್ಲಿ ವಿಮಾನ ನಿಲ್ದಾಣ ತಲುಪಬಹುದು. ಇದು ಕ್ಯಾಬ್‌ಗಳು ಮತ್ತು ಬಸ್‌ಗಳಿಗಿಂತ ಹೆಚ್ಚು ಮಿತವ್ಯಯಕಾರಿಯಾಗಿದೆ. ಅಲ್ಲದೆ ಇದು ಸುರಕ್ಷಿತವಾಗಿದೆ. ವಾಶ್‌ರೂಮ್‌ಗಳು ಮತ್ತು ಬ್ಯಾಗ್‌ಗಳಿಗೆ ಸಾಕಷ್ಟು ಸ್ಥಳಾವಕಾಶವಿರುವ ಏಕೈಕ ಸಾರಿಗೆ ವಿಧಾನವಾಗಿದೆ. ಯಲಹಂಕ ನಿಲ್ದಾಣದಿಂದ ಸುಮಾರು 30 ವಿದ್ಯಾರ್ಥಿಗಳು ರೈಲನ್ನು ಹತ್ತಿದ್ದಾರೆ. 19 ವರ್ಷದ ದಿವ್ಯಾಕುಮಾರಿ ಮೊದಲ ಬಾರಿಗೆ ಮೆಮು ರೈಲಿನಲ್ಲಿ ಪ್ರಯಾಣಿಸಿ, ನಾನು ಸ್ಥಳೀಯ ರೈಲಿನಲ್ಲಿ ಪ್ರಯಾಣಿಸುತ್ತಿರುವುದು ಇದು ಮೊದಲು. ಈ ರೈಲು ಸೇವೆ ವಿದ್ಯಾರ್ಥಿಗಳಿಗೆ ಪಾಕೆಟ್ ಸ್ನೇಹಿಯಾಗಿದೆ. ಅಲ್ಲದೆ ನಾನು ಸುರಕ್ಷಿತವಾಗಿರುತ್ತೇನೆ. ಮುಖ್ಯವಾಗಿ ನಾನು ಟ್ರಾಫಿಕ್ ಜಾಮ್‌ಗಳಲ್ಲಿ ಸಿಲುಕಿಕೊಳ್ಳಬೇಕಾಗಿಲ್ಲ ಎಂದು ಹರ್ಷ ವ್ಯಕ್ತಪಡಿಸಿದರು. ಬೆಂಗಳೂರಿನ ಖಾಸಗಿ ಸಂಸ್ಥೆಯ…
ನವದೆಹಲಿ: ಹಿಜಾಬ್ ಪ್ರಕರಣ ಸಂಬಂಧ ಕರ್ನಾಟಕ ಹೈಕೋರ್ಟ್ ನೀಡಿರುವಂತ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿರುವಂತ ಅರ್ಜಿಗಳ ವಿಚಾರಣೆಯನ್ನು ಇಂದು , ಸುಪ್ರೀಂ ಕೋರ್ಟ್ ನಡೆಸಲಿದೆ ಎನ್ನಲಾಗಿತ್ತು.ಆದರೇ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 5ಕ್ಕೆ ಮುಂದೂಡಿಕೆ ಮಾಡಿದೆ. ಪದವಿಪೂರ್ವ ಕಾಲೇಜುಗಳ ತರಗತಿಗಳಲ್ಲಿ ಹಿಜಾಬ್ ಧರಿಸಿ ಬರುವುದಕ್ಕೆ ನಿಷೇಧ ಹರಿದ ಶಿಕ್ಷಣ ಸಂಸ್ಥೆಗಳ ಕ್ರಮವನ್ನು ರಾಜ್ಯ ಹೈಕೋರ್ಟ್ ಎತ್ತಿ ಹಿಡಿದಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ, ಸುಪ್ರೀಂ ಕೋರ್ಟ್ ನಲ್ಲಿ 24 ಪ್ರತ್ಯೇಕ ಅರ್ಜಿಗಳನ್ನು ದಾಖಲಿಸಲಾಗಿದೆ. ಈ ಅರ್ಜಿಗಳನ್ನು ಇಂದು ದ್ವಿಸದಸ್ಯ ಪೀಠದಿಂದ ವಿಚಾರಣೆ ಕೈಗೆತ್ತಿಕೊಂಡ ಬಳಿಕ, ಅರ್ಜಿಗಳ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿಕೆ ಮಾಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಸಂಪಾಜೆ: ಪಯಶ್ವಿನಿ ನದಿಯಲ್ಲಿ ಸುಳ್ಯ ತಾಲೂಕಿನ ವಿವಿಧ ಭಾಗದಲ್ಲಿ ಡಿಡೀರ್ ಪ್ರವಾಹ ಉಂಟಾಗಿ ಉಕ್ಕಿ ಹರಿದು ಹಲವೆಡೆ ನೀರು ನುಗ್ಗಿ, ಬೃಹತ್ ಗಾತ್ರದ ಮರಗಳೂ ಕೊಚ್ಚಿ ಬಂದ ಘಟನೆ ಆ.29ರ ಬೆಳಿಗ್ಗಿನ ಜಾವ ಸಂಪಾಜೆ ಸುತ್ತಮುತ್ತ ನಡೆದಿದೆ. ಪಯಸ್ವಿನಿ ನದಿಯಲ್ಲಿ ಭಾರೀ ಪ್ರಮಾಣದಲ್ಲಿ ಪ್ರವಾಹ ನೀರು ತುಂಬಿ ಹರಿದು ಹಲವು ಕಡೆಗಳಲ್ಲಿ ನದೀ ಬದಿಯ ಪ್ರದೇಶಗಳಿಗೆ ನೀರು ನುಗ್ಗಿದೆ. ಕೊಯನಾಡು ಶಾಲೆ ಬಳಿಯ 5 ಮನೆಗಳು ಜಲಾವೃತವಾಯಿತು. ಬಳಿಕ ಈ ಮನೆಯವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಯಿತು. ಭಾರೀ ಗಾತ್ರದ ಮರಗಳು ಪ್ರವಾಹ ನೀರಿನಲ್ಲಿ ಕೊಚ್ಚಿ ಬಂದು ಕೊಯನಾಡಿನ ಕಿಂಡಿ ಅಣೆಕಟ್ಟಿನಲ್ಲಿ ಅಡ್ಡಲಾಗಿ ನಿಂತಿದೆ. ಹಲವೆಡೆ ಕೃಷಿ, ತೋಟಗಳಿಗೆ ನೀರು ನುಗ್ಗಿದೆ. ಊರುಬೈಲು, ಚೆಂಬು ಭಾಗದಲ್ಲಿ ಸೇತುವೆಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ. ಸಂಪಾಜೆ ಭಾಗದಲ್ಲಿ ಮಳೆ ಕಡಿಮೆ ಇದ್ದರೂ ಪ್ರವಾಹ ಬಂದು ನದಿ ಉಕ್ಕಿ ಹರಿದು ನೀರು ನುಗ್ಗಿದ ಕಾರಣ ಜನರಲ್ಲಿ ಆತಂಕ ಸೃಷ್ಠಿಯಾಯಿತು. ಕಲ್ಮಕಾರು , ಕೊಲ್ಲಮೊಗ್ರುನಲ್ಲೂ ಇಂತಹದೇ ಪರಿಸ್ಥಿತಿ ನಿರ್ಮಾಣವಾಗಿದೆ.…
* 1612- ಸೂರತ್ ಕದನದಲ್ಲಿ ಬ್ರಿಟಿಷರು ಪೋರ್ಚುಗೀಸರನ್ನು ಸೋಲಿಸಿದರು. * 1947- ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದಡಿ ಭಾರತದಲ್ಲಿ ‘ಶಿಕ್ಷಣ ಇಲಾಖೆ’ಯನ್ನು ಮರುಸ್ಥಾಪಿಸಲಾಯಿತು. * 1947- ಅಂಬೇಡ್ಕರ್ ಅವರ ಅಧ್ಯಕ್ಷತೆಯಲ್ಲಿ ಸಂವಿಧಾನ ರಚಿಸಲು ಭಾರತದ ಸಂವಿಧಾನ ಸಭೆಯಿಂದ ಕರಡು ಸಮಿತಿ ರಚಿಸಲಾಯಿತು. * 1947 – ಚೌಧರಿ ಚರಣ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಲೋಕದಳ ಪಕ್ಷದ ಸ್ಥಾಪನೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ದೇಶಾದ್ಯಂತ ಇಂದು ರಾಷ್ಟ್ರೀಯ ಕ್ರೀಡಾದಿನ ಆಚರಿಸಲಾಗುತ್ತಿದೆ. ಪ್ರತಿ ವರ್ಷ ಆಗಸ್ಟ್ 29ರಂದು ಈ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಲಾಗುತ್ತದೆ. ಈ ದಿನವನ್ನೇ ಕ್ರೀಡಾ ದಿನವಾಗಿ ಆಯ್ಕೆ ಮಾಡಿರುವುದಕ್ಕೆ ಒಂದು ವಿಶೇಷವಾದ ಕಾರಣವಿದೆ. ರಾಷ್ಟ್ರೀಯ ಕ್ರೀಡಾ ದಿನ ಆಚರಣೆ ಏಕೆ? ಭಾರತದ ಹಾಕಿ ದಂತಕತೆ ಮೇಜರ್ ಧ್ಯಾನ್ ಚಂದ್ ಅವರು ಆಗಸ್ಟ್ 29 ರಂದು ಜನಿಸಿರುವುದರಿಂದ, ಅವರ ಹುಟ್ಟುಹಬ್ಬವನ್ನು ಪ್ರತಿವರ್ಷ ರಾಷ್ಟ್ರೀಯ ಕ್ರೀಡಾ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಆಗಸ್ಟ್ 29, 1905ರಂದು ಮೇಜರ್ ಧ್ಯಾನ್ ಚಂದ್ ಅಹಮದಾಬಾದ್ನಲ್ಲಿ ಜನ್ಮ ತಾಳಿದರು. ವಿಶ್ವ ಕಂಡ ಅಪರೂಪದ, ಅತ್ಯುತ್ತಮ ಹಾಕಿ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಅವರು ಸುಮಾರು 400ಕ್ಕೂ ಅಧಿಕ ಅಂತಾರಾಷ್ಟ್ರೀಯ ಗೋಲು ಗಳಿಸಿ ವಿಶೇಷ ದಾಖಲೆಯನ್ನೂ ತನ್ನ ಹೆಸರಿಗೆ ಬರೆದುಕೊಂಡಿದ್ದರು. 2012 ರಲ್ಲಿ ಭಾರತ ಸರ್ಕಾರ ಮೊದಲ ಬಾರಿಗೆ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಪರಿಚಯಿಸಿತ್ತು. ಇದು ದೇಶದಲ್ಲಿ ಕ್ರೀಡಾಭಿಮಾನಿಗಳನ್ನು ಆಕರ್ಷಿಸುತ್ತಿದೆ. ಕ್ರೀಡೆಯಿಂದಾಗುವ ಅನುಕೂಲಗಳನ್ನು ತಿಳಿಸಿ ಯುವಜನತೆಯಲ್ಲಿ ಕ್ರೀಡಾಪ್ರೇಮ ಹೆಚ್ಚಿಸುವುದೇ ಈ ದಿನದ ಉದ್ದೇಶ.. *…
ಹಾವೇರಿ: ಬಾಲಕಿಯರ ಮೇಲೆ ಲೌಂಗಿಕ ದೌರ್ಜನ್ಯ ಆರೋಪದಲ್ಲಿ ಚಿತ್ರದುರ್ಗದ ಮುರುಘಾ ಶರಣರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹಾವೇರಿ ಜಿಲ್ಲೆಯ ಬಂಕಾಪುರದ ಬಳಿಯ ಹೆದ್ದಾರಿಯಲ್ಲಿ ಇಂದು ಚಿತ್ರದುರ್ಗದ ಮುರುಘಾ ಮಠದ ಶ್ರೀಗಳನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಅಂದಹಾಗೇ ಪೋಕ್ಸೋ ಪ್ರಕರಣದಲ್ಲಿ ಬಂಧನದ ಭೀತಿಯಲ್ಲಿದ್ದಂತ ಮುರುಘಾ ಶ್ರೀ ಅಜ್ಞಾತ ಸ್ಥಳಕ್ಕೆ ತೆರಳೋ ಹಿನ್ನಲೆಯಲ್ಲಿ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಈ ಖಚಿತ ಮಾಹಿತಿಯನ್ನು ಆಧರಿಸಿ, ಅವರನ್ನು ಬಂಧಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ವಿಜಯಪುರ: ಬೆಳಗಾವಿ ಗೋಲ್ಫ್ ಮೈದಾನದಲ್ಲಿ ಪತ್ತೆಯಾಗಿರುವ ಚಿರತೆಯನ್ನು ಸೆರೆ ಹಿಡಿಯಲಾಗದ ಕಾರಣಕ್ಕೆ ನನ್ನ ರಾಜೀನಾಮೆ ಕೇಳುತ್ತಿದ್ದಾರೆ. ನಾನು ರಾಜೀನಾಮೆ ನೀಡಿದರೆ ಚಿರತೆ ಸೆರೆ ಆಗುತ್ತದೆ ಎಂದಾದರೆ ಈಗಲೇ ರಾಜಿನಾಮೆ ನೀಡುತ್ತೇನೆ ಎಂದು ಅರಣ್ಯ ಸಚಿವ ಉಮೇಶ ಕತ್ತಿ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿರತೆ ಸೆರೆ ಹಿಡಿಯಲು ಉತ್ತರ ಕರ್ನಾಟಕ ಭಾಗದ ಸಿಬ್ಬಂದಿಯನ್ನು ಹಾಕಿದ್ದೇವೆ. ಪಳಗಿದ ಆನೆಗಳನ್ನು ತಂದಿದ್ದೇವೆ, ಆದರೂ ಚಿರತೆ ಸೆರೆ ಸಾಧ್ಯವಾಗಿಲ್ಲ. ಎರಡು ದಿನಗಳಿಂದ ಚಿರತೆ ಬೆಳಗಾವಿ ಪಟ್ಟಣದಲ್ಲಿ ಎಲ್ಲೂ ಕಂಡು ಬಂದಿಲ್ಲ. ಚಿರತೆ ಗೋಲ್ಫ್ ಕೋರ್ಟ್ ಸುತ್ತಮುತ್ತ ತಿರುಗಾಡುತ್ತಿದೆ ಎನ್ನಲಾಗಿದೆ. ಸಿಬ್ಬಂದಿ ಚಿರತೆ ಸೆರೆಹಿಡಿಯುವ ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬಳ್ಳಾರಿ: ವಿದ್ಯುತ್ ತಂತಿ ಸ್ಪರ್ಶಿಸಿ ದಂಪತಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಬಂಡಿಹಟ್ಟಿಯಲ್ಲಿ ನಡೆದಿದೆ. ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಪಂಪಾಪತಿ ಹಾಗೂ ಅವರ ಪತ್ನಿ ದ್ಯಾವಮ್ಮ ಮೃತ ದುರ್ದೈವಿಗಳಾಗಿದ್ದಾರೆ. ಮನೆಯ ಮೇಲೆ ಹಾದು ಹೋಗಿದ್ದ ವಿದ್ಯುತ್ ತಂತಿ ದ್ಯಾವಮ್ಮಗೆ ತಗುಲಿತ್ತು, ಈ ವೇಳೆ ಪತ್ನಿಯನ್ನ ಬಿಡಿಸಲು ಹೋದ ಪತಿ ಕೂಡ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz