Subscribe to Updates
Get the latest creative news from FooBar about art, design and business.
- ರೇಷ್ಮೆ ಸೀರೆಗೆ ಎಣ್ಣೆ, ಮೇಣದ ಕಲೆ ಬಿದ್ದರೆ ಚಿಂತೆ ಬೇಡ; ಈ ಟಿಪ್ಸ್ ಅನುಸರಿಸಿ
- ನಾಯಿಗಳಲ್ಲ, ರೋಬೋಟ್ ಗಳಿಗೆ ವಾಕಿಂಗ್ ಮಾಡಿಸಿದರೆ ದುಡ್ಡು! AI ತಂತ್ರಜ್ಞಾನಕ್ಕೆ ಹೊಸ ಪ್ರಯೋಗ
- ವಿಮಾನದಲ್ಲೂ ಇರುತ್ತಾ ಹಾರ್ನ್? ಆಕಾಶದಲ್ಲಿ ಯಾರಿಗೆ ಹಾರ್ನ್? | ಈ ಅಚ್ಚರಿಯ ಸಂಗತಿ ನಿಮಗೆ ಗೊತ್ತಾ?
- ಫ್ರಿಜ್ ನಿಂದ ತೆಗೆದ ತಕ್ಷಣ ಮೊಸರು ತಿನ್ನುತ್ತೀರಾ? ಆರೋಗ್ಯದ ಮೇಲೆ ಏನು ಪರಿಣಾಮ ಬೀರುತ್ತದೆ?
- ನ.7ರಂದು ಹೊಳವನಹಳ್ಳಿ ಹೋಬಳಿಯಲ್ಲಿ ಪ್ರಜಾಸೇವೆ ಆಂದೋಲನ ಸಭೆ
- ತಿಪಟೂರು ರೋಟರಿ ಕ್ಲಬ್ ನಿಂದ ಅದ್ದೂರಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ
- ಔರಾದ್ ಬ್ಲಾಕ್ ಕಾಂಗ್ರೆಸ್ ಪ.ಜಾ. ವಿಭಾಗದ ಕಾರ್ಯದರ್ಶಿಯಾಗಿ ಗೌತಮ್ ಮೇತ್ರೆ ನೇಮಕ
- ಭಾಲ್ಕಿ: ವಕೀಲರ ಹಿತರಕ್ಷಣಾ ಕಾಯ್ದೆ ತಕ್ಷಣ ಜಾರಿಗೆ ತರಲು ಆಗ್ರಹ
Author: admin
ಬೆಳಗಾವಿ : ಟೀಮ್ ಇಂಡಿಯಾದ ಮಾಜಿ ಬೌಲರ್ ಆಶಿಶ್ ನೆಹ್ರಾ ಅವರು ಜಿಲ್ಲೆಯ ಖಾನಾಪುರದ ಬಸವೇಶ್ವರ ವೃತ್ತದಲ್ಲಿರುವ ಅಕ್ವಾ ಬ್ಲೂ ಸ್ಕೈ ಹೋಟೆಲ್ ಗೆ ಭೇಟಿ ನೀಡಿ ಉಪಹಾರ ಸವಿದಿದ್ದಾರೆ. ತಮ್ಮ ಸಂಗಡಿಗರೊಂದಿಗೆ ರಸ್ತೆ ಮಾರ್ಗವಾಗಿ ಗೋವಾದಿಂದ ಪುಣೆಗೆ ತೆರಳುತ್ತಿದ್ದ ಅವರು ನಿನ್ನೆ ಮಾರ್ಗ ಮಧ್ಯದಲ್ಲಿ ಸಾಮಾನ್ಯ ಗ್ರಾಹಕರಂತೆ ಹೋಟೆಲ್ ಗೆ ಭೇಟಿ ನೀಡಿದ್ದರು. ಅವರನ್ನು ಗುರುತಿಸಿದ ಹೋಟೆಲ್ ಮಾಲೀಕ ಮಹಮ್ಮದ್ ನಂದಗಡಿ ಮಾತನಾಡಿಸಿದ್ದು, ವಿಷಯ ಹಬ್ಬುತ್ತಲೇ ಅಲ್ಲಿದ್ದ ಕ್ರೀಡಾ ಪ್ರೇಮಿಗಳು ಆಶಿಶ್ ನೆಹ್ರಾ ಅವರ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ತಕ್ಷಣದಿಂದ ಜಾರಿಗೆ ಬರುವಂತೆ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆ ರದ್ದು ಮಾಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ. ಹೆಚ್ಚುವರಿ ಶಿಕ್ಷಕರಿಗೆ ಕೌನ್ಸೆಲಿಂಗ್ ಮೂಲಕ ಸ್ಥಳ ನಿಯೋಜನೆಗೆ ಪ್ರಕ್ರಿಯೆ ಕೈಗೊಂಡಿದ್ದು, ಇದನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ರದ್ದುಗೊಳಿಸಲಾಗಿದೆ. ಜನವರಿ 24ರಂದು ಕೌನ್ಸೆಲಿಂಗ್ ನಲ್ಲಿ ಯಾವುದಾದರೂ ಹೆಚ್ಚುವರಿ ಶಿಕ್ಷಕರಿಗೆ ಸ್ಥಳ ನಿಯೋಜನೆ ಆದೇಶ ನೀಡಿದ್ದಲ್ಲಿ ಅದನ್ನು ಹಿಂಪಡೆಯಲು ಸೂಚಿಸಲಾಗಿದೆ. ಪರಿಷ್ಕೃತ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಹೇಳಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ: ಲಂಚ ಸ್ವೀಕರಿಸುವ ವೇಳೆ ಚಿಕ್ಕೋಡಿ ಹಿರಿಯ ಉಪ ನೋಂದಣಾಧಿಕಾರಿ, ಕಚೇರಿ ಸಹಾಯಕ ಹಾಗೂ ಮಧ್ಯವರ್ತಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಚಿಕ್ಕೋಡಿಯ ಹಿರಿಯ ಉಪ ನೋಂದಣಾಧಿಕಾರಿ ಜಿ.ಪಿ.ಶಿವರಾಜು, ಸಹಾಯಕ, ಕಂಪ್ಯೂಟರ್ ಆಪರೇಟರ್ ಹುಸೇನ್ ರೆಹಮಾನ್ಭಾಯಿ ಹಾಗೂ ಮಧ್ಯವರ್ತಿ ಸಂದೀಪ ಪಾಟೀಲ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದು, ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಚಿಕ್ಕೋಡಿ ತಾಲೂಕಿನ ಡೋಣೆವಾಡ ಗ್ರಾಮದಲ್ಲಿ ಜಮೀನು ಖರೀದಿಸಿದ್ದ ರಾಜು ಪಾಶ್ಚಾಪುರೆ ಅವರು, ನೋಂದಣಿಗೆ ಎಲ್ಲ ಹಂತದ ಸರ್ಕಾರಿ ಶುಲ್ಕ ಪಾವತಿಸಿದ್ದರೂ, ಆದರೆ ಹೆಚ್ಚುವರಿಯಾಗಿ 30 ಸಾವಿರ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಈ ಕುರಿತು ಲೋಕಾಯುಕ್ತ ಅಧಿಕಾರಿಗಳಿಗೆ ರಾಜು ಪಾಶ್ಚಾಪುರೆ ಅವರು ದೂರು ನೀಡಿದ್ದರು. ಈ ಹಿನ್ನೆಯಲ್ಲಿ ಎಸ್ಪಿ ಯಶೋಧಾ ವಂಟಗೋಡಿ ನೇತೃತ್ವದಲ್ಲಿ ಕಾರ್ಯಾಚಾರಣೆ ನಡೆಸಿದ ಲೋಕಾಯುಕ್ತ ಪೊಲೀಸರು ಆರೋಪಿಗಳನ್ನು ಬಂಧಿಸಿ 30 ಸಾವಿರ ರೂ. ನಗದು ವಶಪಡಿಸಿಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…
ಬೆಂಗಳೂರು : ಫೆಬ್ರವರಿ 10 ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಫೆಬ್ರವರಿ 17 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್ ಮಂಡಿಸಲಿದ್ದಾರೆ.ಈ ಕುರಿತು ಫೆಬ್ರವರಿ 10 ರಿಂದ ಬಜೆಟ್ ಅಧಿವೇಶನ ಆರಂಭವಾಗುವ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈಗಾಗಲೇ ಇಲಾಖಾವಾರು ಬಜೆಟ್ ಪೂರ್ವಭಾವಿ ಸಭೆ ಆರಂಭಿಸಿದ್ದು, ಈ ಬಾರಿ ಬಜೆಟ್ ನಲ್ಲಿ ಬಂಪರ್ ಘೋಷಣೆಗಳನ್ನು ಮಾಡುವ ಸಾಧ್ಯತೆ ಇದೆ. ವಿಧಾನಸಭಾ ಚುನಾವಣೆ ಸಮೀಪವಿರುವ ಹಿನ್ನೆಲೆಯಲ್ಲಿ ಬಜೆಟ್ ನಲ್ಲಿ ಉಚಿತ ವಿದ್ಯುತ್ ಪೂರೈಕೆ, ವಿವಿಧ ಪಿಂಚಣಿ ಹೆಚ್ಚಳ, ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ಹೆಚ್ಚಿನ ಸಬ್ಸಿಡಿ ನೀಡುವಂತಹ ಯೋಜನೆಗಳು, ಕಲ್ಯಾಣ ಕರ್ನಾಟಕಕ್ಕೆ ಹಲವು ಯೋಜನೆಗಳನ್ನು ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲ್ಲ. ಸುಮ್ಮನೆ ಅವರು ಹವಾ ಎಬ್ಬಿಸಿದ್ದಾರೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಹೇಗಾದರೂ ಮಾಡಿ ನಾವು ಬಿಜೆಪಿ ಸರ್ಕಾರ ಮಾಡ್ತಿವಿ ಬಿಡುವುದಿಲ್ಲ. ಒಂದು ಸ್ವಲ್ಪ ಕಡಿಮೆ ಸೀಟ್ ಬಂದರೂ ಏನಾದರೂ ಗುದ್ದಾಡಿ ಬಿಜೆಪಿ ಸರ್ಕಾರ ಮಾಡ್ತೀವಿ, ತಲೆಕೆಡಿಸಿಕೊಳ್ಳಬೇಡಿ ಮುಂದೆ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದರು. ಇನ್ನು ರಮೇಶ್ ಜಾರಕಿಹೊಳಿ ಬಿಜೆಪಿ ಬಿಡ್ತಾರೆ ಅಂತಾ ಮಾಧ್ಯಮಗಳಲ್ಲಿ ಸೃಷ್ಟಿ ಮಾಡುತ್ತಿದ್ದಾರೆ. ನಾನು ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ. ಬಿಜೆಪಿಯಲ್ಲೇ ಇರೋನು ನಾನು, ಇಲ್ಲಿ ಇದ್ದು ಇತಿಹಾಸ ಮಾಡಿಯೇ ಹೋಗುತ್ತೇನೆ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುಮಕೂರು: ಕೊರಟಗೆರೆ ತಾಲೂಕಿನ ಹುಲೀಕುಂಟೆ ಗ್ರಾಮದ ಅಲೆಮಾರಿ ಜನರು ಕುಡಿಯಲು ನೀರಿಲ್ಲದೇ ಸಂಕಷ್ಟದಲ್ಲಿದ್ದು, ಗ್ರಾಮ ಪಂಚಾಯತ್ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯತ್ ನವರ ನಿರ್ಲಕ್ಷ್ಯದಿಂದ ಈ ಸಮಸ್ಯೆ ಸೃಷ್ಟಿಯಾಗಿತ್ತು. ಇದೀಗ ಸಾಮಾಜಿಕ ಹೋರಾಟಗಾರ ಹಂದ್ರಾಳ್ ನಾಗಭೂಷಣ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯ ವೇಳೆ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ. ತುಮಕೂರು ತಾಲ್ಲೂಕು ಹೆಬ್ಬೂರು ಹೋಬಳಿ ನಾಗವಲ್ಲಿ,ಅಮಲಾಪುರ ಮತ್ತು ಕೊರಟಗೆರೆ ತಾ ಹುಲೀಕುಂಟೆ ಗ್ರಾಮಗಳಲ್ಲಿನ ಅಲೆಮಾರಿ ಸಮುದಾಯಗಳಿಗೆ ನಿವೇಶನ ಮತ್ತು ವಸತಿಗೆ ಸಂಬಂದಿಸಿದಂತೆ ವಿಳಂಬವಾಗಿ ಬಾಕಿ ಉಳಿದಿರುವ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳು ಸಂಬಂದಿಸಿದ ಇಲಾಖೆಗಳ ಅಧಿಕಾರಿಗಳಿಗೆ ಕಳೆದೆರಡು ತಿಂಗಳುಗಳ ಹಿಂದೆ ನಿರ್ದೇಶನ ನೀಡಿದ್ದರು. ಸುಮಾರು 50 ಜನರು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳು, ಅಂ.ಅ.ನಿಗಮದ ಜಿಲ್ಲಾ ವ್ಯವಸ್ಥಾಪಕರು,ತುಮಕೂರು ಹಾಗೂ ಕೊರಟಗೆರೆ ತಾ ಸಹಾಯಕ ನಿರ್ದೇಶಕರು ಮತ್ತು TDO ಮಹೇಂದ್ರ ಅವರೊಂದಿಗೆ ಸುದೀರ್ಘ ಮಾತುಕತೆಯ ಬಳಿಕ ಅಧಿಕಾರಿಗಳು ಸ್ಪಂದಿಸುವುದಾಗಿ ಸ್ಪಷ್ಟನೆ ನೀಡಿರುವುದ ಸಂತಸದ ವಿಚಾರವಾಗಿದೆ ಎಂದು ಹಂದ್ರಾಳ್ ನಾಗಭೂಷಣ್ ತಿಳಿಸಿದ್ದಾರೆ. ಅದರಂತೆ ಕೊರಟಗೆರೆ…
ಇಂದು ತುಮಕೂರು ನಗರದ ಗಾಜಿನ ಮನೆಯಲ್ಲಿ ಕಾಂಗ್ರೆಸ್ ಪಕ್ಷದ “ಪ್ರಜಾ ಧ್ವನಿ”ಯಾತ್ರೆಯ ಬೃಹತ್ ಸಮಾವೇಶ ನಡೆಯಿತು. ಕಾರ್ಯಕ್ರಮದಲ್ಲಿ ಘಟಾನುಘಟಿ ನಾಯಕರು ಭಾಗವಹಿಸುವ ಮೂಲಕ ಯಾತ್ರೆಗೆ ಇನ್ನಷ್ಟು ಮೆರುಗು ತಂದರು. ವಿಧಾನಪರಿಷತ್ ಸದಸ್ಯರಾದ ಆರ್.ರಾಜೇಂದ್ರ, ಎ.ಐ.ಸಿ.ಸಿ ಪ್ರಧಾನಕಾರ್ಯದರ್ಶಿಗಳಾದ ರಣದೀಪ್ ಸಿಂಗ್ ಸುರ್ಜೆವಾಲ, ಮಯೂರ್ ಜಯಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆ.ಪಿ.ಸಿ.ಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ , ಕೆ.ಪಿ.ಸಿ.ಸಿ ಉಪಾಧ್ಯಕ್ಷರು ಮಧುಗಿರಿ ಜನಪ್ರಿಯ ಮಾಜಿ ಶಾಸಕರು ಆದ ಕೆ.ಎನ್.ರಾಜಣ್ಣ, ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ಮಾಜಿ ಸಚಿವರಾದ ಟಿ.ಬಿ.ಜಯಚಂದ್ರ, ಆಂಜನೇಯ, ವೆಂಕಟರವಣಪ್ಪ, ಯು.ಟಿ.ಖಾದರ್ , ಮಾಜಿ ಸಂಸದರಾದ ಬಿ.ಎನ್.ಚಂದ್ರಪ್ಪ, ಮಾ.ವಿ.ಸ ವಿ.ಎಸ್.ಉಗ್ರಪ್ಪನವರು,ಶಾಸಕ ರಂಗನಾಥ್ ಮೊದಲಾದವರು ಮಾತನಾಡಿದರು. ಮಾಜಿ ಶಾಸಕರುಗಳಾದ ಕೆ.ಷಡಕ್ಷರಿ, ಷಫಿ ಅಹ್ಮದ್, ರಫೀಕ್ ಅಹ್ಮದ್, ಮಾಜಿ ವಿ.ಪ.ಸದಸ್ಯ ಬೆಮಲ್ ಕಾಂತರಾಜು, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರ್ ನಾಥ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್ ಗೌಡ, ಯುವ ಕಾಂಗ್ರೆಸ್ ಅಧ್ಯಕ್ಷ ಶಶಿ ಹುಲಿಕುಂಟೆ ಸೇರಿದಂತೆ ಅನೇಕ ಗಣ್ಯರು, ಮುಖಂಡರು…
ತುರುವೇಕೆರೆ: ಕೊಬ್ಬರಿಗೆ ಕನಿಷ್ಠ ಬೆಲೆಗೆ ಕೃಷಿ ರೈತ ಬಂಧು ವೇದಿಕೆಯ ರಾಜ್ಯಾಧ್ಯಕ್ಷ ಟಿ. ಹೊನ್ನೇಗೌಡ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. ಪಟ್ಟಣದಲ್ಲಿರುವ ಪ್ರವಾಸಿ ಮಂದಿರದಲ್ಲಿ ಇಂದು ಕರೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಂಕಷ್ಟದಲ್ಲಿರುವ ರೈತರ ನೆರವಿಗೆ ಸರ್ಕಾರ ಒತ್ತು ನೀಡಬೇಕು ಎಂದು ಒತ್ತಾಯಿಸಿದರು. ತೆಂಗು ಬೆಳೆಗಾರರ ನೆರವಿಗೆ ಬಂದು ರೈತರನ್ನು ಸರ್ಕಾರ ಕಾಪಾಡಬೇಕು. ಇನ್ನೂ ರೈತರಿಗೆ ದುಬಾರಿ ಬೆಲೆಯಾಗಿರುವ ಗೊಬ್ಬರ, ಡೀಸೆಲ್ ಮತ್ತು ಕೃಷಿ ಪರಿಕರಗಳ ನಿರ್ವಹಣೆ ಕಷ್ಟವಾಗಿದ್ದು, ಕೂಡಲೇ ಸರ್ಕಾರ ರೈತರ ನೆರವಿಗೆ ಧಾವಿಸಬೇಕು ಎಂದು ಅವರು ಒತ್ತಾಯಿಸಿದರು. ಜೊತೆಗೆ ವ್ಯವಸಾಯೋತ್ಪನ್ನ ಮಾರುಕಟ್ಟೆಯಲ್ಲಿ ದಳ್ಳಾಳಿಗಳಿಂದ ಆಗುತ್ತಿರುವ ಕಿರುಕುಳಗಳನ್ನು ತಪ್ಪಿಸಲು ಕೂಡಲೇ ನಫೆಡ್ ತೆರೆದು ರೈತರಿಗೆ ಅನುಕೂಲ ಮಾಡಿಕೊಡಬೇಕು, ಕೊಬ್ಬರಿ ಬೆಲೆಯನ್ನು ಈ ಕೂಡಲೇ ಕನಿಷ್ಠ ಪ್ರತಿ ಕ್ವಿಂಟಾಲ್ ಗೆ 15,000 ನಿಗದಿಪಡಿಸಬೇಕು ಇಲ್ಲವಾದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುವ ಸಂಭವವಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು. ರೈತರ ಸಮಸ್ಯೆಗೆ ಕೂಡಲೇ ಸ್ಪಂದಿಸಿ ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ನಮ್ಮ ಸಂಘಟನೆಯ ವತಿಯಿಂದ ಉಗ್ರ…
ಸಿದ್ದಗಂಗಾ ಮಠದ ದಾಸೋಹ ಭಂಡಾರವಾದರೆ, ಜ್ಞಾನಯೋಗಾಶ್ರಮ ಶ್ರೀ ಮಠದ ಕೀರ್ತಿ : ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ
ಕೊರಟಗೆರೆ: ದೇಶದಲ್ಲಿ ಸಿದ್ದಗಂಗಾ ಮಠದ ಡಾ.ಶ್ರೀ ಶಿವಕುಮಾರ ಮಹಾಸ್ವಾಮಿಗಳು ದಾಸೋಹ ಭಂಡಾರವಾದರೆ, ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳು ಜ್ಞಾನ ಭಂಡಾರವಾಗಿದ್ದರು. ಈ ಮಹಾನ್ ಗುರುಗಳು ಜಗತ್ತಿನಲ್ಲಿ ಎಲ್ಲರಿಗೂ ಸರ್ವಕಾಲದ ಆದರ್ಶವಾಗಿದ್ದಾರೆ ಎಂದು ಶ್ರೀ ಕ್ಷೇತ್ರ ಸಿದ್ದರಬೆಟ್ಟದ ಶ್ರೀ ವೀರಭದ್ರಶೀವಾಚಾರ್ಯ ಸ್ವಾಮೀಜಿ ತಿಳಿಸಿದರು. ಅವರು ಪಟ್ಟಣದ ಸಜ್ಜನರ ಬೀದಿಯ ಬಸವೇಶ್ವರ ದೇವಾಲಯದಲ್ಲಿ ನಡೆದ ಡಾ.ಶ್ರೀ ಶಿವಕುಮಾರ ಸ್ವಾಮಿಗಳ 4 ನೇ ಪುಣ್ಯಸ್ಮರಣೆ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿಗಳ ಸ್ಮರಣೆ ಕಾರ್ಯಕ್ರಮದಲ್ಲಿ ದಿವ್ಯಸಾನಿದ್ಯ ವಹಿಸಿ ಮಾತನಾಡಿ, ತುಮಕೂರಿನ ಸಿದ್ದಗಂಗಾ ಮಠದಲ್ಲಿ ಉದ್ದಾನ ಶ್ರೀಗಳಿಂದ ಪ್ರಾರಂಭವಾದ ದಾಸೋಹ ಶಿವಕುಮಾರ ಸ್ವಾಮಿಗಳ ಪೀಠಾಧ್ಯಕ್ಷ ಕಾಲದಲ್ಲಿ ದಿನಕ್ಕೆ ಸಾವಿರಾರು ಮಂದಿಗೆ ದಾಸೋಹ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾ ದಾನ ನಡೆಯುತ್ತಿದ್ದು ಇದು ಸಾಮಾನ್ಯ ಕಾರ್ಯವಲ್ಲ, ದೇಶದಲ್ಲೇ ಇದೊಂದು ಮಹತ್ತರ ಧಾರ್ಮಿಕ ಕಾರ್ಯವಾಗಿದ್ದು ಶಿವಕುಮಾರ ಸ್ವಾಮಿಗಳ ಸಾಧನೆ ಅತಿ ಎತ್ತರದು, ಇದರೋಂದಿಗೆ ರೈತರಿಗೆ ನೆರವಾಗಲೂ ಸಿದ್ದಾಗಂಗಾ ಜಾತ್ರೆಯಲ್ಲಿ ಕೃಷಿ ಮೇಳವನ್ನು ಮಾಡಿಕೊಂಡು ಬರುತ್ತಿದ್ದರು ಅವರ ಪುಣ್ಯಸ್ಮರಣೆಯ ದಿನದಂದು ಸರ್ಕಾರವೂ ಸೇರಿದಂತೆ ಎಲ್ಲರೂ…
ರಾಜಸ್ಥಾನದ ಬಿಕಾನೇರ್ ಜಿಲ್ಲೆಯಲ್ಲಿ ದಂಪತಿಗಳು ತಮ್ಮ ಮೂರೂವರೆ ತಿಂಗಳ ಮಗುವನ್ನು ಕಾಲುವೆಗೆ ಎಸೆದು ಕೊಂದಿದ್ದಾರೆ. ಮೂವರು ಮಕ್ಕಳನ್ನು ಹೊಂದಿರುವ ದಂಪತಿ ಆರ್ಥಿಕ ಸಂಕಷ್ಟದಿಂದ ಮಗುವನ್ನು ಕೊಂದಿದ್ದಾರೆ ಎಂದು ಛತ್ತರಗಢ ಪೊಲೀಸರು ಹೇಳಿದ್ದಾರೆ. ಆರೋಪಿಗಳಾದ ಕನ್ವರ್ಲಾಲ್ (35) ಮತ್ತು ಅವರ ಪತ್ನಿ ಗೀತಾದೇವಿ (33) ಅವರನ್ನು ಬಂಧಿಸಲಾಗಿದೆ. ಭಾನುವಾರ ಸಂಜೆ 5.30ರ ಸುಮಾರಿಗೆ ದಂಪತಿ ಬೈಕ್ನಲ್ಲಿ ಬಂದು ಮಗುವನ್ನು ಕಾಲುವೆಗೆ ಎಸೆದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳೀಯರು ಕಿರುಚಿಕೊಂಡ ನಂತರ ದಂಪತಿ ಪರಾರಿಯಾಗಿದ್ದಾರೆ. ಮಗುವನ್ನು ರಕ್ಷಿಸಲು ಪ್ರಯತ್ನಿಸಿದರೂ ಪ್ರಯೋಜನವಾಗಲಿಲ್ಲ. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ದಂಪತಿ ಪತ್ತೆಗೆ ತನಿಖೆ ಆರಂಭಿಸಿದ್ದಾರೆ. ಘಟನೆ ನಡೆದ ಸ್ಥಳದಿಂದ 20 ಕಿ.ಮೀ ದೂರದಲ್ಲಿ ಬೈಕ್ ವಶಪಡಿಸಿಕೊಳ್ಳಲಾಗಿದೆ. ಹೆಚ್ಚಿನ ತನಿಖೆಯಲ್ಲಿ, ದಂಪತಿಯನ್ನು ಕೊಲ್ಯಾಡ್ ತಹಸಿಲ್ನ ದಿಯಾತ್ರಾ ಗ್ರಾಮದಿಂದ ಬಂಧಿಸಲಾಯಿತು. ಮುಂದಿನ ಕ್ರಮಕ್ಕಾಗಿ ಪ್ರಕರಣವನ್ನು ಛತ್ತರಗಢ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಬಿಕಾನೇರ್ ಪೊಲೀಸ್ ವರಿಷ್ಠಾಧಿಕಾರಿ ಯೋಗೇಶ್ ಯಾದವ್ ರಾಜಸ್ಥಾನ ಥಾಕ್ ತಿಳಿಸಿದ್ದಾರೆ. ಮೂರೂವರೆ ತಿಂಗಳ ಮಗುವನ್ನು ಹೊರತುಪಡಿಸಿ, ದಂಪತಿಗೆ…