Author: admin

ಹಾಡು ಹಗಲೇ ವ್ಯಕ್ತಿಯೊಬ್ಬನ ರುಂಡವನ್ನ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಹಲಗಾ ಗ್ರಾಮದಲ್ಲಿ ನಡೆದಿದೆ. ಗದಗಯ್ಯ ಹಿರೇಮಠ ಸವದತ್ತಿ ತಾಲೂಕಿನ ಮುನವಳ್ಳಿ ಗ್ರಾಮದ ನಿವಾಸಿ ಕೊಲೆಯಾದ ದುರ್ದೈವಿ ಎನ್ನಲಾಗಿದೆ. ಬೈಕ್ ಮೇಲೆ ಹೊರಟಿದ್ದ ವ್ಯಕ್ತಿಯ ರುಂಡ ಕತ್ತರಿಸಿ ಕೊಲೆಗಾರರು ಪರಾರಿಯಾಗಿದ್ದಾರೆ. ಇನ್ನು ಮೃತ ದೇಹ ನೋಡಿ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಪತಿ ಮೃತಪಟ್ಟ  ಬೆನ್ನಲೆ, ಸೊಸೆ ಹಾಗೂ20 ದಿನದ ಮಗುವನ್ನು ಪತಿಯ ಕುಟುಂಬ ತಿರಸ್ಕರಿಸಿದ ಅಘಾತಕಾರಿ ಘಟನೆ ಉಡುಪಿಯಲ್ಲಿ ನಡೆದಿದೆ. ಒಂದು ಕಡೆ ಪತಿಯನ್ನು ಕಳಕೊಂಡು, ಇನ್ನೊಂದು ಕಡೆ 20 ದಿನದ ಮಗುವನ್ನು ಕಂಕುಳಲ್ಲಿ ಇಟ್ಟುಕೊಂಡ ಆ ಮಹಿಳೆಯ ಬಗ್ಗೆ ಪತಿಯ ಮನೆಯವರು ಅಮಾನವೀಯವಾಗಿ ವರ್ತಿಸಿದ್ದಾರೆ ಎಂಬ ಆಕ್ರೋಶ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ. ಬಳಿಕ ಸಮಾಜ ಸೇವಕರೊಬ್ಬರ ಕಾಳಜಿಯಿಂದ ಮಗು ಮತ್ತು ತಾಯಿಗೆ ಉಡುಪಿ ಬಳಿಯ ನಿಟ್ಟೂರಿನ ಸಖೀ ಕೇಂದ್ರದ ಆಶ್ರಯ ಕಲ್ಪಿಸಲಾಗಿದೆ. ಉಡುಪಿಯಲ್ಲಿ ಮೆಕ್ಯಾನಿಕ್‌ ಆಗಿ ಕೆಲಸ ಮಾಡುತ್ತಿದ್ದ ಬಾದಾಮಿ ಮೂಲದ ಅಯ್ಯಪ್ಪ (28) ಅವರು ಗುರುವಾರ ಅಕಾಲಿಕವಾಗಿ ಮೃತಪಟ್ಟಿದ್ದಾರೆ. ಗುರುವಾರ ಬೆಳಗ್ಗೆ ಅವರು ಎದೆ ನೋವು ಕಾಣಿಸಿಕೊಂಡು ಕುಸಿದು ಬಿದ್ದಿದರು . ಕೂಡಲೇ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಹೃದಯಘಾತಕ್ಕೆ ತುತ್ತಾಗಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದರು. ಅಯ್ಯಪ್ಪ ಎರಡು ವರ್ಷಗಳ ಹಿಂದೆ ಗಂಗಾವತಿಯ ಯುವತಿಯನ್ನು ಪ್ರೀತಿಸಿ ವಿವಾಹವಾಗಿದ್ದರು. ಇವರ ಮದುವೆಗೆ ಎರಡೂ ಕಡೆಯಿಂದಲೂ ವಿರೋಧವಿತ್ತು ಎನ್ನಲಾಗಿದೆ. ಅಯ್ಯಪ್ಪ ಅವರು…

Read More

ನವದೆಹಲಿ: ಹಾಲಿ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರು ಆಗಸ್ಟ್ 26ರಂದು ನಿವೃತ್ತರಾದ ಹಿನ್ನೆಲೆಯಲ್ಲಿ ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರು ಭಾರತದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಮೂರ್ತಿ ಲಲಿತ್ ಅವರಿಗೆ ಸಿಜೆಐ ಆಗಿ ಪ್ರಮಾಣ ವಚನ ಬೋಧಿಸಿದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ಜಗದೀಪ್ ಧಂಖರ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಚಿತ್ರದುರ್ಗದ ಮುರುಘಾ ಬೃಹನ್ಮಠದ ಡಾ. ಶಿವಮೂರ್ತಿ ಮುರಘಾ ಶರಣರಿಗೆ ಬಂಧನದ ಭೀತಿ ಎದುರಾಗಿದೆ. ಪೋಕೋ ಕಾಯ್ದೆಯಡಿ ಕೇಸ್ ದಾಖಲಾಗಿರುವುದರಿಂದ ಜಾಮೀನು ಸಿಗುವುದು ಕೂಡ ಕಷ್ಟವಾಗಲಿದೆ. ಎಫ್‌ಐಆರ್‌ನಲ್ಲಿ ಮುರುಘಾ ಮಠದ ಶ್ರೀಗಳನ್ನು A1, ಹಾಸ್ಟೆಲ್ ವಾರ್ಡನ್ ರಶ್ಮಿ A2, ಬಸವಾದಿತ್ಯ ಮರಿಸ್ವಾಮಿ A3 ಸೇರಿದಂತೆ 5 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಾರಂಭದಲ್ಲಿ ಪ್ರಭಾವಿ ಸ್ವಾಮೀಜಿಗಳ ವಿರುದ್ದ ಕೇಸ್‌ ದಾಖಲು ಮಾಡಲು ಅಧಿಕಾರಿಗಳು ಹಿಂದೇಟು ಹಾಕಿದ್ದರು ಎನ್ನಲಾಗಿದ್ದು, ಒಡನಾಡಿ ಸಂಸ್ಥೆಯವರು ಪ್ರಕರಣ ಸಂಬಂಧ ಡಿಸಿ ಗಮನಕ್ಕೆ ತಂದ ಬಳಿಕ ಸ್ವಾಮೀಜಿಗಳ ವಿರುದ್ದ ಕೇಸ್‌ ಅನ್ನು ಮಕ್ಕಳ ರಕ್ಷಣಾಧಿಕಾರಿಗಳು ನಜರ್‌ಬಾದ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿದ್ದಾರೆ ಎನ್ನಲಾಗಿದೆ. ಮಠದ ಉಚಿತ ಹಾಸ್ಟೆಲ್ ನಲ್ಲಿ ಇರುವ ಪ್ರೌಢಶಾಲೆಯ ಕೆಲವು ವಿದ್ಯಾರ್ಥಿನಿಯರಿಗೆ ಹಾಸ್ಟೇಲ್‌ ವಾರ್ಡ್‌ನ್‌ ಖುದ್ದು ಸ್ವಾಮಿಜಿಗಳಿಗೆ ಹೋಗಿ ಹಾಲು ನೀಡುವಂತೆ ಹೇಳುತ್ತಿದ್ದಳು ಎನ್ನಲಾಗಿದ್ದು, ಒಂದು ವೇಳೆ ಒಪ್ಪದೇ ಹೋದ್ರೆ ಅವ್ಯಾಚ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕುತ್ತಿದ್ದಳು ಎನ್ನಲಾಗಿದೆ. ಹಾಸ್ಟೆಲ್‌…

Read More

ತುಮಕೂರು: ಈ ಬಾರಿ ಸಣ್ಣ ಸಣ್ಣ ಸಮುದಾಯಗಳಿಗೆ ಟಿಕೇಟ್ ಕೊಡಬೇಕು ಅಂತಾ ಯೋಚನೆ ಮಾಡಿದ್ದೇವೆ. ಮುಂದಿನ ಚುನಾವಣೆಯಲ್ಲಿ ತಿಗಳ ಸಮುದಾಯದ ಇಬ್ಬರಿಗೆ ಜೆಡಿಎಸ್ ನಿಂದ ಟಿಕೇಟ್ ಕೊಡಲಾಗುವುದು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ತುಮಕೂರಿನಲ್ಲಿ ಶುಕ್ರವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ 40% ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಭ್ರಷ್ಟಾಚಾರ ಅನ್ನೋದು ಮೊದಲಿನಿಂದಲೂ ನಡೆದುಕೊಂಡು ಬಂದಿದೆ. ಸ್ವಾತಂತ್ರ್ಯ ಪೂರ್ವ ಹಾಗೂ ಸ್ವಾತಂತ್ರ್ಯ ನಂತರ ಕಮಿಷನ್ ಅನ್ನೋದು ಉಡುಗೊರೆ ರೂಪದಲ್ಲಿ ನಡೆದುಕೊಂಡು ಬಂದಿದೆ. 2008ರಲ್ಲಿ ಬಿಜೆಪಿ ಸರ್ಕಾರ ಬಂದಾಗ ಅದು ಸ್ವೇಚ್ಚಾಚಾರವಾಗಿ ನಡೆಯಿತು. ಈ ಭ್ರಷ್ಟಾಚಾರವನ್ನ ಹೇಗಾದರೂ ಮಾಡಿ ನಿಲ್ಲಿಸಬೇಕು ಅನ್ನೋದರ ಬಗ್ಗೆ ಜನತೆಯೂ ಚಿಂತಿಸಿ ಸಿದ್ದರಾಗಬೇಕು ಎಂದರು. ನಾನು ಸಿಎಂ ಆಗಿದ್ದಾಗ ಪರ್ಸೆಂಟೇಜ್ ವ್ಯವಸ್ಥೆಯನ್ನ ನಿಲ್ಲಿಸಬೇಕು ಅಂತಾ ತಯಾರಾಗಿದ್ದೆ. ವೈಯಕ್ತಿವಾಗಿ ನಾನು ತೀರ್ಮಾನ ಮಾಡಿದ್ದೆ. ನನ್ನ ಅವಧಿಯ ಮೈತ್ರಿ ಸರ್ಕಾರದಲ್ಲೂ ಕಮಿಷನ್ ದಂಧೆ ನಡೆದಿತ್ತು. ಹಾಗಂತ ಜೆಡಿಎಸ್ ಸಚಿವರು ಯಾರೂ ಕಮಿಷನ್ ತಗೊತಿರಲಿಲ್ಲ ಎಂದರು.…

Read More

ತುಮಕೂರು: ಆರ್.ಎಸ್.ಎಸ್ ಸಿದ್ದಾಂತ, ದೇಶ ಭಕ್ತಿ ಜೊತೆಗೆ ನಾನಿದ್ದೀನಿ ಅಂತ ಈ ಹಿಂದೆಯೂ ನಾನು ಹೇಳಿದ್ದೇನೆ. ಸಿದ್ದರಾಮಯ್ಯ ಬಗ್ಗೆ ನಾನು ಏನು ಮಾತಾಡಲ್ಲ. ನಾವು ದೊಡ್ಡ ದೇಶ ಭಕ್ತಿಯ ಸಂಸ್ಥೆಯೊಂದಿಗೆ ಜೋಡಿಸಿಕೊಂಡಿದ್ದೇವೆ. ಸಿದ್ದರಾಮಯ್ಯ ಎಂಥಾ ಸಂಸ್ಥೆ‌ ಜೊತೆ ಜೋಡಿಸಿಕೊಂಡಿದ್ದಾರೆ ಅಂತಾ ಗೊತ್ತು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದರು. ತುಮಕೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,   ಸಿಎಂ ಆರ್.ಎಸ್.ಎಸ್ ಅನ್ನೋ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದರು. 40% ಕಮೀಷನ್ ಆರೋಪ ಮಾಡಿದ್ದ ಕೆಂಪಣ್ಣನ ವಿರುದ್ಧ ಕ್ರಮ ತೆಗೆದುಕೊಳ್ಳಲು ಸರ್ಕಾರ ಯಾವುದೇ ರೀತಿಯ ಹಿಂದೇಟು ಹಾಕುತಿಲ್ಲ. ಮುಂದಿನ ದಿನಗಳಲ್ಲಿ ಕಾದು ನೋಡಿ ಎಂದ ಅವರು, ಅರ್ಕಾವತಿ ಫೈಲ್ ರೀ ಓಪನ್ ಆಗೋದಕ್ಕೆ ನಿನ್ನೆ ಸಭೆಯಲ್ಲಿ ಚರ್ಚೆ ಆಗಿಲ್ಲ, ಆದರೇ 40% ಸುಳ್ಳು ಆರೋಪ ಬಗ್ಗೆ ಯಾವ ರೀತಿಯ ಕ್ರಮ ತೆಗೆದುಕೊಳ್ಳಬೇಕು ಅನ್ನೋ ಬಗ್ಗೆ ಚರ್ಚೆ ನಡೆದಿದೆ, ಈ ಸಂಬಂಧ ಮುನಿರತ್ನ ಅವರು ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ  ಎಂದು ತಿಳಿಸಿದ್ರು.  ವರದಿ: ರಾಜೇಶ್ ರಂಗನಾಥ್ ನಮ್ಮತುಮಕೂರು.ಕಾಂನ…

Read More

ಮಾಯಿಲು ಫಿಲಮ್ಸ್ ಅರ್ಪಿಸುವ , ದಿವ್ಯ ಎಲ್ ಮೂಡಿಗೆರೆ ನಿರ್ಮಾಣದಲ್ಲಿ, ಕರಾವಳಿಯ ನಿರ್ದೇಶಕ ಜಯಂತ್ ನಿಟ್ಟಡೆ ಯವರ ಕಥೆ, ಹಾಗೂ ನಿರ್ದೇಶನದಲ್ಲಿ “ಬಾಯಿಲ್ಡ್ ರೈಸ್” ತುಳು ಕಿರುಚಿತ್ರ ಆಗಸ್ಟ್ 27ಕ್ಕೆ ಸಂಜೆ 6-00ಕ್ಕೆ Maayilu films ಯೂಟ್ಯೂಬ್ ಚಾನಲ್‌ನಲ್ಲಿ ಬಿಡುಗಡೆಯಾಗಲಿದೆ‌. ತುಳು ಕಿರುಚಿತ್ರಗಳಲ್ಲಿ ಇದುವರೆಗೂ ಹಾಸ್ಯವನ್ನೆ ನೋಡುತ್ತಿದ್ದ ಸಿನಿಪ್ರೀಯರಲ್ಲಿ ಇದೊಂದು ವಿಬಿನ್ನ ಕಥೆಯನ್ನೊಳಗೊಂಡ ಹೊಸ ಆಲೋಚನೆಗಳನ್ನು ಮೋಡಿಸುವ ಕಿರುಚಿತ್ರ ಇದು ಎನ್ನಲಾಗುತ್ತಿದೆ. ಜನರ ದೈನಂದಿನ ಜೀವನಾಧಾರಿತ ಕಿರುಚಿತ್ರ ಇದಾಗಿದ್ದು, ಶನಿವಾರ ಸಂಜೆ Maayilu Film ಯ್ಯುಟ್ಯೂಬ್ ಚಾನಲ್ ನಲ್ಲಿ ನೋಡಲೆ ಬೇಕಲ್ವೆ. ಚಿತ್ರ ವೀಕ್ಷಿಸಿ: ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಮೈಸೂರು: ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಿಎಂ ಅವರ ಕೊನೆಯ ಸಹೋದರ ರಾಮೇಗೌಡ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಮೈಸೂರಿನ ಸಿದ್ದರಾಮನಹುಂಡಿಯಲ್ಲಿ ವಾಸವಾಗಿದ್ದ ಸಿದ್ದರಾಮೇಗೌಡ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಮೇಗೌಡರನ್ನು ಸಿದ್ದರಾಮಯ್ಯನವರು ಒಂದು ದಿನದ ಹಿಂದೆಯಷ್ಟೇ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ್ದರು. ನಿನ್ನೆ ರಾತ್ರಿ ಸಿದ್ದರಾಮೇಗೌಡ ಅವರು ಕೊನೆಯುಸಿರೆಳೆದಿದ್ದು, ಅವರ ಅಂತ್ಯ ಸಂಸ್ಕಾರಕ್ಕೆ ಸಿದ್ದರಾಮನಹುಂಡಿಯಲ್ಲಿ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ತುಮಕೂರು: ಗಣೇಶೋತ್ಸವ ನಿಮಿತ್ತ ಸಾವರ್ಕರ್ ಫ್ಲೆಕ್ಸ್ ಹಾಕಲು ಪೊಲೀಸರು ಅವಕಾಶ ನಿರಾಕರಿಸಿದ್ದು, ಅಳವಡಿಸಿದ್ದ ಫ್ಲೆಕ್ಸ್ ನ್ನು ತೆರವುಗೊಳಿಸಿದ್ದಾರೆ. ತುಮಕೂರು ನಗರದ ಜಯನಗದ ಅನ್ನಪೂರ್ಣೇಶ್ವರಿ ದೇವಸ್ಥಾನದ ಬಳಿ ಘಟನೆ ನಡೆದಿದ್ದು, ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳ ಸಹಯೋಗದೊಂದಿಗೆ ನಡೆಯುತ್ತಿರುವ ಹಿಂದೂ ಏಕತಾ ಗಣೇಶೋತ್ಸವ ಸಮಿತಿಯಿಂದ ಅಳವಡಿಸಿದ್ದ ಫ್ಲೆಕ್ಸ್ ನ್ನು ಪೊಲೀಸರು ತೆರವುಗೊಳಿಸಿದ್ದಾರೆ. ಫ್ಲೆಕ್ಸ್ ಅಳವಡಿಸಲು ಅನುಮತಿಗಾಗಿ ಅರ್ಜಿ ಕೊಟ್ಟರು ಪಾಲಿಕೆ ಅನುಮತಿ ನೀಡಿರಲಿಲ್ಲ. ನಿನ್ನೆ ಮಧ್ಯರಾತ್ರಿ ಫ್ಲೆಕ್ಸ್ ಗಳನ್ನು ಪೊಲೀಸರು ತೆರವುಗೊಳಿಸಿದ್ದು, ಈ ವೇಳೆ ಭಜರಂಗದಳ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ. ವರದಿ: ರಾಜೇಶ್ ರಂಗನಾಥ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಕೊರಟಗೆರೆ: ಬಿರುಕು ಬಿದ್ದಿದ್ದ ತೀತಾ ಬ್ರೀಡ್ಜ್ ಸಂಪೂರ್ಣವಾಗಿ ಕುಸಿದಿದ್ದು, ಪರಿಣಾಮವಾಗಿ ಈ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ಜಯಮಂಗಲಿ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಿದ್ದ ಬ್ರಿಡ್ಜ್ ಕೊರಟಗೆರೆ ತಾಲೂಕಿನ ಗೊರವನಹಳ್ಳಿ –ತೀತಾ ಕುಸಿದಿದ್ದು, ಸೇತುವೆ ಭಾಗಶಃ ಕುಸಿದು ಅಪಾಯದಂಚಿನಲ್ಲಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಜಲಾಶಯದ ಮೂಗಳತೆ ದೂರದಲ್ಲಿ ಈ ಬ್ರಿಡ್ಜ್ ಇದ್ದು, ಬ್ರಿಡ್ಜ್ ಕುಸಿದ ಹಿನ್ನೆಲೆಯಲ್ಲಿ ಜಲಾಶಯದ ಮುಂಭಾಗದ ಮತ್ತೊಂದು ರಸ್ತೆ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಪಿಡಬ್ಯುಡಿ ಅಧಿಕಾರಿಗಳು ಮತ್ತು ಮಾಜಿ ಶಾಸಕ ಪಿ ಆರ್ ಸುಧಾಕರ್ ಲಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಹೊಸ ಸೇತುವೆ ನಿರ್ಮಾಣ ಮಾಡಲು ಸುಮಾರು 6 ತಿಂಗಳ ಸಮಯ ಬೇಕಾಗಬಹುದು ಎಂದು ಪಿಡಬ್ಲ್ಯುಡಿ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ. ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…

Read More