Subscribe to Updates
Get the latest creative news from FooBar about art, design and business.
- ರೇಷ್ಮೆ ಸೀರೆಗೆ ಎಣ್ಣೆ, ಮೇಣದ ಕಲೆ ಬಿದ್ದರೆ ಚಿಂತೆ ಬೇಡ; ಈ ಟಿಪ್ಸ್ ಅನುಸರಿಸಿ
- ನಾಯಿಗಳಲ್ಲ, ರೋಬೋಟ್ ಗಳಿಗೆ ವಾಕಿಂಗ್ ಮಾಡಿಸಿದರೆ ದುಡ್ಡು! AI ತಂತ್ರಜ್ಞಾನಕ್ಕೆ ಹೊಸ ಪ್ರಯೋಗ
- ವಿಮಾನದಲ್ಲೂ ಇರುತ್ತಾ ಹಾರ್ನ್? ಆಕಾಶದಲ್ಲಿ ಯಾರಿಗೆ ಹಾರ್ನ್? | ಈ ಅಚ್ಚರಿಯ ಸಂಗತಿ ನಿಮಗೆ ಗೊತ್ತಾ?
- ಫ್ರಿಜ್ ನಿಂದ ತೆಗೆದ ತಕ್ಷಣ ಮೊಸರು ತಿನ್ನುತ್ತೀರಾ? ಆರೋಗ್ಯದ ಮೇಲೆ ಏನು ಪರಿಣಾಮ ಬೀರುತ್ತದೆ?
- ನ.7ರಂದು ಹೊಳವನಹಳ್ಳಿ ಹೋಬಳಿಯಲ್ಲಿ ಪ್ರಜಾಸೇವೆ ಆಂದೋಲನ ಸಭೆ
- ತಿಪಟೂರು ರೋಟರಿ ಕ್ಲಬ್ ನಿಂದ ಅದ್ದೂರಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ
- ಔರಾದ್ ಬ್ಲಾಕ್ ಕಾಂಗ್ರೆಸ್ ಪ.ಜಾ. ವಿಭಾಗದ ಕಾರ್ಯದರ್ಶಿಯಾಗಿ ಗೌತಮ್ ಮೇತ್ರೆ ನೇಮಕ
- ಭಾಲ್ಕಿ: ವಕೀಲರ ಹಿತರಕ್ಷಣಾ ಕಾಯ್ದೆ ತಕ್ಷಣ ಜಾರಿಗೆ ತರಲು ಆಗ್ರಹ
Author: admin
ಪಾವಗಡ : ಸಂವಿಧಾನ ನೀಡಿರುವ ಹಲವಾರು ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಶೈಕ್ಷಣಿಕವಾಗಿ ಹಾಗೂ ಆರ್ಥಿಕವಾಗಿ ನಮ್ಮ ಸಮುದಾಯ ಮುಖ್ಯ ವಾಹಿನಿಗೆ ಬರಬೇಕೆಂದು ಮಾಜಿ ಶಾಸಕರಾದ ಕೆ.ಎಂ. ತಿಮ್ಮರಾಯಪ್ಪ ತಿಳಿಸಿದರು. ತಾಲ್ಲೂಕಿನ ನಿಡಗಲ್ ಹೋಬಳಿಯ ಚಿನ್ನಮ್ಮನಹಳ್ಳಿ ಗ್ರಾಮದಲ್ಲಿ ಭಾನುವಾರ ಹೋಬಳಿ ಮಟ್ಟದ ಡಾ.ಬಿ.ಆರ್.ಅಂಬೇಡ್ಕರ್ ರವರ 132 ನೇ ‘ಜೈ ಭೀಮೋಸ್ಸವ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಿಗೆ ಉತ್ತಮ ಶಿಕ್ಷಣ ನೀಡದ ಹೊರತು ನಮ್ಮ ಸಮಾಜ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ, ಸಂವಿಧಾನವನ್ನು ಅರ್ಥ ಮಾಡಿಕೊಳ್ಳಲು ಮತ್ತು ಒಳ್ಳೆಯ ಸಮಾಜ ಕಟ್ಟಲು ನಿಮ್ಮ ಮಕ್ಕಳಿಗೆ ಉತ್ತಮವಾದ ಶಿಕ್ಷಣ ನೀಡಿ ಎಂದು ಕರೆ ನೀಡಿದರು. ಪಾರದರ್ಶಕವಾದ ಆಡಳಿತ ನಡೆಸುವುದರಿಂದ ಭ್ರಷ್ಟಾಚಾರ ರಹಿತವಾದ ಸರ್ಕಾರವನ್ನು ನಡೆಸಬಹುದು. ನಾನು ಒಬ್ಬ ಸಾಮಾನ್ಯ ಪ್ರಜೆಯಾಗಿ ಮೊದಲನೇ ಬಾರಿಗೆ ಗ್ರಾಮ ಪಂಚಾಯತಿ ಸದಸ್ಯನಾಗಿ ಆಯ್ಕೆಯಾಗುವ ಮೂಲಕ ರಾಜಕೀಯ ಪ್ರವೇಶಿಸಿದೆ. ಇಲ್ಲಿವರೆಗೂ ಸಂವಿಧಾನ ನಮಗೆ ನೀಡಿರುವ ಅನೇಕ ಸೌಲಭ್ಯಗಳನ್ನು ಜನರ ಜನರಿಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದು ತಿಳಿಸಿದರು. ಸಮಾಜ ಸೇವಕಿಯಾದ…
ಎಚ್.ಡಿ.ಕೋಟೆ ತಾಲ್ಲೂಕಿನ ನಾಗರಹೊಳೆ ಅಭಯಾರಣ್ಯದ ಬಳ್ಳೆ ಹಾಡಿ ನಿವಾಸಿ ಹದಿನೆಂಟು ವರ್ಷದ ಮಂಜು ಬಿನ್ ಬೆಟ್ಚದ ಹುಲಿ ಅಲಿಯಾಸ್ ಬಿ.ಕಾಳ ಹುಲಿ ದಾಳಿಯಿಂದ ಮೃತಪಟ್ಟಿದ್ದಾರೆ. ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಡಿ.ಬಿ.ಕುಪ್ಪೆ ವಲಯದ ಬಳ್ಳೆ ಕಾಡಿನ ಒಳಭಾಗದಲ್ಲಿ ಹುಲಿ ದಾಳಿ ನಡೆಸಿದ್ದು, ಹುಲಿಯ ದಾಳಿಗೆ ವ್ಯಕ್ತಿ ಸಾವನ್ನಪ್ಪಿದ್ದಾರೆ. ವ್ಯಕ್ತಿಯ ಮೃತದೇಹವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆಯ ಶವಾಗಾರದಲ್ಲಿ ಇಡಲಾಗಿದೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ, ಡಿವೈಎಸ್ ಪಿ ಮಹೇಶ್, ಉಪನೀರಿಕ್ಷಕ ತಮ್ಮೇಗೌಡ, ತಂಗರಾಜು, ಕಿರಣ್ ಭೇಟಿ ನೀಡಿ ವೀಕ್ಷಣೆ ನಡೆಸಿದ್ದಾರೆ. ಘಟನೆಯನ್ನು ಖಂಡಿಸಿ ಬಳ್ಳೆ ಗ್ರಾಮದಲ್ಲಿ ಮೃತ ವ್ಯಕ್ತಿಯ ಪೋಷಕರು ಹಾಗೂ ಹಾಡಿ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದಾಗಿ ಮೈಸೂರು ಮಾನಂದವಾಡಿ ಹೆದ್ದಾರಿಯಲ್ಲಿ ಸಂಚಾರ ಕೆಲ ಕಾಲ ಅಡಚಣೆ ಉಂಟಾಗಿತ್ತು. ಪ್ರತಿಭಟನೆ ನಿರತರನ್ನು ಮನವೊಲಿಸಲು ಡಿವೈಎಸ್ ಪಿ ತೆರಳಿದ್ದಾರೆ. ಇನ್ನೂ ಪ್ರಕರಣ ದಾಖಲಾಗದ ಹಿನ್ನಲೆ ಮರಣೋತ್ತರ ಪರೀಕ್ಷೆಯನ್ನು ಮಾಡಿಲ್ಲ. ದಾಳಿ ಮಾಡಿದ ಹುಲಿಯು ನಾಲ್ಕು ಮರಿಗಳ ತಾಯಿ ಬ್ಯಾಕ್ ವಾಟರ್…
ಬೆಂಗಳೂರು: ರೈತರ ಮನೆ ಬಾಗಿಲಿಗೆ ಆಸ್ತಿ ದಾಖಲೆ ತಲುಪಿಸಲಾಗುತ್ತಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿಯಲ್ಲಿ ನಡೆದ ಜಿಲ್ಲಾಧಿಕಾರಿಗಳ ಕಾರ್ಯಕ್ರಮದಲ್ಲಿ ಗ್ರಾಮ ವಾಸ್ತವ್ಯ ಮಾಡಿದ್ದ ಕಂದಾಯ ಸಚಿವ ಆರ್ ಅಶೋಕ್, ಗಿರಿಜಮ್ಮ, ಮುನಿಯಪ್ಪ ದಂಪತಿ ಮನೆಯಲ್ಲಿ ಉಪಹಾರ ಸೇವಿಸಿದರು. ನಂತರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಹಿಂದೆ ರೈತ ಕುಟುಂಬಗಳು ತಮ್ಮ ಆಸ್ತಿ ಭಾಗ ಮಾಡಿಕೊಳ್ಳುವುದು ಸವಾಲಿನ ಕೆಲಸವಾಗಿತ್ತು. ಪೌತಿಖಾತೆ ಆಂದೋಲನದ ಮೂಲಕ ಜನರ ಮನೆ ಬಾಗಿಲಿಗೆ ಆಸ್ತಿ ದಾಖಲೆಗಳು ಬರುತ್ತಿವೆ.ಜನರ ಮನೆ ಬಾಗಿಲಿಗೆ ಆಸ್ತಿ ದಾಖಲೆಗಳನ್ನು ತಲುಪಿಸುವ ಮಹತ್ವದ ಸುಧಾರಣೆ ಕ್ರಮವನ್ನು ರಾಜ್ಯ ಸರ್ಕಾರ ತಂದಿದೆ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು : ಬಿಜೆಪಿ ಪ್ರತಿ ಮತದಾರರಿಗೆ 6000 ರೂ ಹಣ ನೀಡಲಿದೆ ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದು, ವಿವಾದಕ್ಕೆ ಕಾರಣವಾಗಿದೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಾಗ್ಧಾಳಿ ನಡೆಸುವ ಭರದಲ್ಲಿ ನಾನು ನಿಮಗೆ 6 ಸಾವಿರ ರೂಪಾಯಿ ನೀಡುತ್ತೇನೆ ಎಂದು ಹೇಳಿದ್ದರು. ಇದುವರೆಗೆ ಲಕ್ಷ್ಮೀ ಹೆಬ್ಬಾಳ್ಕರ್ ಸಾವಿರಾರು ರೂಪಾಯಿಯ ಗಿಫ್ಟ್ ನೀಡಿದ್ದಾರೆ, ಎಲ್ಲ ಸೇರಿ 3000 ಆಗಬಹುದು, ನಾನು ಪ್ರತಿ ಮತದಾರರಿಗೆ 6 ಸಾವಿರ ರೂ ನೀಡುತ್ತೇನೆ. ಒಂದು ವೇಳೆ ಕೊಡದಿದ್ದರೆ ನನಗೆ ಓಟು ಹಾಕಬೇಡಿ ಎಂದು ಹೇಳಿದರು. ಈ ಹೇಳಿಕೆ ವಿವಾದ ಪಡೆಯುತ್ತಿದ್ದಂತೆ ಬಿಜೆಪಿ ರಮೇಶ್ ಜಾರಕಿಹೊಳಿಯಿಂದ ಅಂತರ ಕಾಯಿದುಕೊಂಡಿದೆ ಎಂಬ ಗುಸುಗುಸು ಕೇಳಿಬರುತ್ತಿದೆ. ರಮೇಶ್ ಜಾರಕಿಹೊಳಿ ಹೇಳಿಕೆಗೆ ಸಚಿವ ಗೋವಿಂದ ಕಾರಜೋಳ ಪ್ರತಿಕ್ರಿಯೆ ನೀಡಿದ್ದು, ಇದಕ್ಕೆಲ್ಲಾ ನಮ್ಮ ಪಕ್ಷದಲ್ಲಿ ಅವಕಾಶ ಇಲ್ಲ, 2023 ರಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ಬೆಂಗಳೂರು : ಬಿಜೆಪಿ ಸರ್ಕಾರದ ವಿರುದ್ಧ ಜನಜಾಗೃತಿ ಮೂಡಿಸಲು ಬೆಂಗಳೂರಿನ 300 ಸ್ಥಳಗಳಲ್ಲಿ ಇಂದು ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದೆ.ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಭಾಗಿಯಾಗಲಿದ್ದಾರೆ. ಇಂದು 51 ಮೆಟ್ರೋ ನಿಲ್ದಾಣಗಳು, 26 ಫ್ಲೈಓವರ್, 200 ಟ್ರಾಫಿಕ್ ಸಿಗ್ನಲ್ ಗಳಲ್ಲಿ ಭ್ರಷ್ಟಾಚಾರ ತೊಲಗಿಸಿ, ಬೆಂಗಳೂರು ಉಳಿಸಿ ಘೋಷವಾಕ್ಯದಡಿ ಮೂರು ತಾಸು ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದೆ.ಬೆಂಗಳೂರಿನ ಎಲ್ಲ 28 ಕ್ಷೇತ್ರಗಳಲ್ಲಿ ಶಾಸಕರು, ಮಾಜಿ ಶಾಸಕರು ಸೇರಿದಂತೆ ಕಾಂಗ್ರೆಸ್ ಮುಖಂಡರು 300 ಕಡೆಗಳಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ಖ್ಯಾತ ಖಳನಟ ಲಕ್ಷ್ಮಣ್ (74) ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದಲ್ಲಿ ನಟ ಲಕ್ಷ್ಮಣ್ ಹೃದಯಾಘಾತ ಸಂಭವಿಸಿದ್ದರಿಂದ ಅವರು ಮೃತಪಟ್ಟಿದ್ದಾರೆ ಅವರಿಗೆ 74 ವರ್ಷ ವಯಸ್ಸಾಗಿತ್ತು ಎಂದು ತಿಳಿದು ಬಂದಿದೆ. ಯಜಮಾನ, ಸೂರ್ಯವಂಶ,ಒಲವಿನ ಉಡುಗೊರೆ, ದಾದಾ, ಸಾಂಗ್ಲಿಯಾನ ಸೇರಿಂತೆ 200 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು. ನಟನ ಅಗಲಿಕೆಗೆ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಭಾರತದ 74ನೇ ಗಣರಾಜ್ಯೋತ್ಸವ ಆಚರಣೆ ಪ್ರಗತಿಯಲ್ಲಿದೆ. ವಿವಿಧ ರಾಜ್ಯಗಳನ್ನು ಪ್ರತಿನಿಧಿಸುವ ಕೋಷ್ಟಕಗಳನ್ನು ಸಹ ಸಿದ್ಧಪಡಿಸಲಾಗುತ್ತಿದೆ. ಸಾಮಾನ್ಯವಾಗಿ ಪರೇಡ್ ಮೈದಾನದ ಮೊದಲ ಸಾಲು ವಿವಿಐಪಿಗಳಿಗೆ ಮೀಸಲಾಗಿದೆ. ಆದರೆ ಈ ಬಾರಿ ರಿಕ್ಷಾ ಚಾಲಕರು, ಡ್ಯೂಟಿ ಪಾತ್ ಕಾರ್ಮಿಕರು ಮತ್ತು ಸೆಂಟ್ರಲ್ ವಿಸ್ಟಾ ನಿರ್ಮಾಣ ಕಾರ್ಮಿಕರು ಪರೇಡ್ ವೀಕ್ಷಿಸಲು ಮುಂದಿನ ಸಾಲಿನಲ್ಲಿ ಕುಳಿತುಕೊಳ್ಳುವ ಅನುಕೂಲವಿದೆ. ಈ ಬಾರಿ ಪರೇಡ್ ವೀಕ್ಷಿಸಲು ಆಸನಗಳ ಸಂಖ್ಯೆಯೂ ಕಡಿಮೆಯಾಗಿದೆ. 32000 ಟಿಕೆಟ್ಗಳನ್ನು ಮಾರಾಟ ಮಾಡಲು ಸರ್ಕಾರ ಉದ್ದೇಶಿಸಿದೆ. ಟಿಕೆಟ್ ದರ 20 ರಿಂದ 500 ರೂ ವರೆಗೆ ಟಿಕೆಟ್ ದರಗಳಿವೆ. ಗಣರಾಜ್ಯೋತ್ಸವದ ಪರೇಡ್ ಟಿಕೆಟ್ಗಳನ್ನು ಆನ್ಲೈನ್ನಲ್ಲಿ ಬುಕ್ ಮಾಡುವುದು ಹೇಗೆ? ನೋಂದಣಿ ಮೊದಲು ಟಿಕೆಟ್ ಕಾಯ್ದಿರಿಸಲು ನಿಮ್ಮ ಮೊಬೈಲ್ ಸಂಖ್ಯೆಗೆ ಸಂಬಂಧಿಸಿದ ಖಾತೆಗೆ ನೀವು ಸೈನ್ ಇನ್ ಮಾಡಬೇಕಾಗುತ್ತದೆ. ಇಲ್ಲದಿದ್ದರೆ, www.aamantran.mod.gov.in ನಲ್ಲಿ ನೋಂದಾಯಿಸಿ. ನಂತರ ಹೆಸರು, ಪೋಷಕರು/ಸಂಗಾತಿಯ ಹೆಸರು, ಹುಟ್ಟಿದ ದಿನಾಂಕ, ಫೋನ್ ಸಂಖ್ಯೆ ಮತ್ತು ಸ್ಥಳದಂತಹ ವಿವರಗಳನ್ನು ನಮೂದಿಸಿ. ನಂತರ ಫಲಿತಾಂಶದ OTp ಅನ್ನು ನಮೂದಿಸಬೇಕಾಗುತ್ತದೆ.…
ತುಮಕೂರು: ಮಾತೃಭೂಮಿ ಸೇವಾ ಟ್ರಸ್ಟ್ ವತಿಯಿಂದ ನಡೆದ ‘ಕನ್ನಡ ಸಂಭ್ರಮ ಹಬ್ಬ‘ ಕಾರ್ಯಕ್ರಮದಲ್ಲಿ ನಮ್ಮ ತುಮಕೂರು ಮಾಧ್ಯಮದ ಬೆಂಗಳೂರು ವರದಿಗಾರರಾದ ಆಂಟೋನಿ ರಾಜು ಎ. ಅವರಿಗೆ ಮಾತೃ ಭೂಮಿ ಸೇವಾ ರತ್ನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸತತ ನಾಲ್ಕು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ಕೆಲಸ ಮಾಡುತ್ತಿರುವ ಆಂಟೋನಿ ರಾಜು ಎ. ಅವರು ನಮ್ಮತುಮಕೂರು ಮಾಧ್ಯಮದಿಂದ ರಾಜ್ಯಾದ್ಯಂತ ಪರಿಚಯಿಸಲ್ಪಟ್ಟರು. ತಮ್ಮ ವೃತ್ತಿಯ ಜೊತೆಗೆ ಸಾಮಾಜಿಕ ಬದ್ಧತೆಗೆ ಇಂದು ಪ್ರಶಸ್ತಿ ಸಂದಿದೆ. ನಮ್ಮತುಮಕೂರು ಮಾಧ್ಯಮದ ಪ್ರಧಾನ ಸಂಪಾದಕರಾದ ನಟರಾಜ್ ಜಿ.ಎಲ್. ಅವರ ವಿಶೇಷ ಮಾರ್ಗದರ್ಶನದಲ್ಲಿ ಜನಸ್ನೇಹಿ, ವಿಭಿನ್ನ ಸುದ್ದಿಗಳನ್ನು ನೀಡುವ ಮೂಲಕ ಮಾಧ್ಯಮರಂಗದಲ್ಲಿ ವಿಶಿಷ್ಠ ಸಾಧನೆ ಮಾಡಿದ ಆಂಟೋನಿ ರಾಜು ಎ. ಅವರ ಪ್ರತಿಭೆಯನ್ನು ಡಾ.ಜ್ಯೋತಿ ಶ್ರೀನಿವಾಸ್ ಗುರುತಿಸಿ, ಮಾತೃಭೂಮಿ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಿದರು. ಪ್ರಶಸ್ತಿ ಸ್ವೀಕರಿಸಿದ ಬಳಿಕ ಪ್ರತಿಕ್ರಿಯಿಸಿರುವ ಆಂಟೋನಿ ರಾಜು ಎ. ಅವರು, ಉತ್ತಮ ಅವಕಾಶ ನೀಡಿದ ನಮ್ಮತುಮಕೂರು ಮಾಧ್ಯಮ ಹಾಗೂ ತಮ್ಮನ್ನು ಗುರುತಿಸಿದ ಮಾತೃಭೂಮಿ ಸೇವಾ ಟ್ರಸ್ಟ್…
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನ ಮೂಲದ ಯುವತಿಯನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ. ಇಕ್ರಾ ಜೀವನಿ (19) ಬಂಧಿತ ಪಾಕಿಸ್ತಾನಿ ಎಂದು ತಿಳಿದು ಬಂದಿದೆ. ಉತ್ತರ ಪ್ರದೇಶ ಮೂಲದ ಮುಲಾಯಂ ಸಿಂಗ್ ಎಂಬಾತನನ್ನು ಮದುವೆಯಾಗಿ ನಗರದ ಸರ್ಜಾಪುರ ರಸ್ತೆಯ ಜನ್ನಸಂದ್ರದಲ್ಲಿ ವಾಸವಾಗಿದ್ದಳು. ಮುಲಾಯಂ ಸಿಂಗ್ ಎಚ್ಎಸ್ಆರ್ ಲೇಔಟ್ನ ಕಂಪನಿಯೊಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿದ್ದ. ಈ ವೇಳೆ ಗೇಮಿಂಗ್ ಆ್ಯಪ್ LUDOನಲ್ಲಿ ಪಾಕಿಸ್ತಾನದ ಇಕ್ರಾ ಜೀವಾನಿ ಪರಿಚಯವಾಗಿದೆ. ಬಳಿಕ ಪರಿಚಯ ಪ್ರೇಮಕ್ಕೆ ತಿರುಗಿ, ಇಬ್ಬರು ಮದುವೆಯಾಗಲು ನಿರ್ಧರಿಸಿದರು. ಈ ಹಿನ್ನೆಲೆಯಲ್ಲಿ ಇಕ್ರಾ ಜೀವಾನಿಯನ್ನು ಭಾರತಕ್ಕೆ ಕರೆತಂದಿದ್ದ ಮುಲಾಯಂ ಸಿಂಗ್, ಆಕೆಯೊಂದಿಗೆ ಒಟ್ಟಿಗೆ ವಾಸವಿದ್ದ. ಇದೀಗ ಇಬ್ಬರು ಸಿಕ್ಕಿಬಿದ್ದಿದ್ದಾರೆ. ಆರೋಪಿ ಇಕ್ರಾ, ರವ ಯಾದವ್ ಎನ್ನುವ ಹೆಸರಲ್ಲಿ ನಕಲಿ ಆಧಾರ್ ಕಾರ್ಡ್ ಮಾಡಿಸಿಕೊಂಡಿದ್ದಳು. ಮುಲಾಯಂ ಸಿಂಗ್ ಈಕೆಯನ್ನು ನೇಪಾಳದ ಮೂಲಕ ಬಿಹಾರಕ್ಕೆ ಕರೆಸಿಕೊಂಡು, ಅಲ್ಲಿಂದ ರಾಜ್ಯಕ್ಕೆ ಕರೆತಂದಿದ್ದ. ಇವರಿಂದ ಸರಿಯಾಗಿ ದಾಖಲೆ ಪಡೆಯದೇ ಗೋವಿಂದ ರೆಡ್ಡಿ ಎಂಬಾತ ಮನೆ ಬಾಡಿಗೆ ನೀಡಿದ್ದ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ…
ಕೇರಳ : ಎರ್ನಾಕುಲಂನಲ್ಲಿ ನೊರೊ ವೈರಸ್ ಹರಡಿದೆ. ಎರ್ನಾಕುಲಂ ಕಾಕನಾಟೆ ಶಾಲೆಯ 19 ವಿದ್ಯಾರ್ಥಿಗಳಿಗೆ ನೊರೊ ವೈರಸ್ ಇರುವುದು ಪತ್ತೆಯಾಗಿದೆ. ಕೆಲವು ಮಕ್ಕಳ ಪೋಷಕರಿಗೂ ನೊರೊ ವೈರಸ್ ಇರುವುದು ಪತ್ತೆಯಾಗಿದೆ. ಜಿಲ್ಲಾ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ಆರಂಭಿಸಿದ್ದು, ಶಾಲೆಯ 1ನೇ ತರಗತಿಯಿಂದ 5ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಆನ್ ಲೈನ್ ತರಗತಿಗಳನ್ನು ಆರಂಭಿಸಲಾಗಿದೆ. ನೊರೊ ಎಂಬುದು ಹೊಟ್ಟೆ ಜ್ವರಕ್ಕೆ ಕಾರಣವಾಗುವ ವೈರಸ್ಗಳ ಗುಂಪಾಗಿದೆ. ವೈರಸ್ ತೀವ್ರವಾದ ವಾಂತಿ ಮತ್ತು ಅತಿಸಾರವನ್ನು ಸಹ ಉಂಟುಮಾಡುತ್ತದೆ. ನೊರೊವೈರಸ್ ಸಾಮಾನ್ಯವಾಗಿ ಆರೋಗ್ಯವಂತ ಜನರಲ್ಲಿ ಸೌಮ್ಯವಾಗಿದ್ದರೂ, ಇದು ಚಿಕ್ಕ ಮಕ್ಕಳು, ವೃದ್ಧರು ಮತ್ತು ಇತರ ಆಧಾರವಾಗಿರುವ ವೈದ್ಯಕೀಯ ಪರಿಸ್ಥಿತಿಗಳನ್ನು ಹೊಂದಿರುವ ಜನರಿಗೆ ಸೋಂಕು ತಗುಲಿದರೆ ಅದು ಗಂಭೀರವಾಗಿರಬಹುದು. ಈ ರೋಗವು ಕೊಳಚೆ ನೀರು, ಆಹಾರ ಮತ್ತು ಸೋಂಕಿತ ಜನರ ಸಂಪರ್ಕದಿಂದ ಹರಡುತ್ತದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy