Subscribe to Updates
Get the latest creative news from FooBar about art, design and business.
- ಕನಕದಾಸರು ಸಮಾಜದ ಓರೆಕೋರೆಗಳನ್ನು ತಿದ್ದಲು ಶ್ರಮಿಸಿದವರು: ಸಿ.ವಿ.ಕುಮಾರ್
- ಅವೈಜ್ಞಾನಿಕ ಸುತ್ತೋಲೆ ವಾಪಸ್ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರಾಂಶುಪಾಲರ, ಉಪನ್ಯಾಸಕರ ಸಂಘ ಆಗ್ರಹ
- ತುಮಕೂರು | ಕಾಂಗ್ರೆಸ್ ಭವನ ಕಟ್ಟಡ ನಿರ್ಮಾಣಕ್ಕೆ ತಡೆಯಾಜ್ಞೆ
- ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ
- ಸಾಮಾಜಿಕ ನ್ಯಾಯ ಎತ್ತಿ ಹಿಡಿದವರು ಕನಕದಾಸರು: ಎಂ.ಬಿ.ಆನಂದ
- ರಾಜ್ಯ ಮಟ್ಟದ ಕನ್ನಡ ಸೇವಾರತ್ನ ಪ್ರಶಸ್ತಿಗೆ ಡಾ.ಸತ್ಯಕ್ಕ ಗಡ್ಡೆ ಆಯ್ಕೆ
- ನರಹಂತಕ ವ್ಯಾಘ್ರನ ಸೆರೆ: ಜನರ ನಿದ್ದೆಗೆಡಿಸಿದ 9 ವರ್ಷದ ಹುಲಿಯನ್ನು ಹಿಡಿದ ಅರಣ್ಯ ಇಲಾಖೆ
- ನರಹಂತಕ ಹುಲಿಯ ಸೆರೆಗಾಗಿ ಮುಂದುವರಿದ ಕಾರ್ಯಾಚರಣೆ: ಡ್ರೋನ್ ಕ್ಯಾಮೆರಾದಲ್ಲಿ ಹುಲಿ ಪತ್ತೆ!
Author: admin
ಕಡೋಲಿ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರ ಆಯ್ಕೆಯಾಗಿದ್ದು, ದೇವಗಿರಿ ಗ್ರಾಮದ ರೇಖಾ ರಾಜು ಸುತಾರ್ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷೆಯಾಗಿ ರೇಖಾ ಕಲ್ಲಪ್ಪ ನರೋಟಿ 27 ಮತಗಳಲ್ಲಿ ತಲಾ17 ಮತವನ್ನು ಪಡೆದು ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾದರು. ಕಾರಣಾಂತರಗಳಿಂದ ಮಾಜಿ ಅಧ್ಯಕ್ಷೆ ಶ್ರೀದೇವಿ ವೈಜನಾಥ್ ಪಾಟೀಲ್ ಹಾಗೂ ಉಪಾಧ್ಯಕ್ಷೆ ಪ್ರೇಮ ರಾಯಪ್ಪ ನುರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲಾಯಿತು. ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಪರವಾಗಿ 27 ಮತಗಳ ಪಟ್ಟಿ 17 ಮತಗಳು ಇವರ ಪರವಾಗಿ ಸದಸ್ಯರು ಮತ ಚಲಾಯಿಸಿದರು. ಈ ಕುರಿತು ಮಾತನಾಡಿದ ಕಾಂಗ್ರೆಸ್ ಮುಖಂಡ ಮಲ್ಲನಗೌಡ ಪಾಟೀಲ್ ಅವರು, ಸತೀಶ್ ಜಾರಕಿಹೊಳಿ ಬಣಕ್ಕೆ ಮತ್ತೊಂದು ಸಲ ವಿಜಯಲಕ್ಷ್ಮಿ ಒಲಿದು ಬಂದಿದ್ದಾಳೆ ಎಂದು ಸಂತೋಷ ವ್ಯಕ್ತಪಡಿಸಿದರು. ಮುಂದುವರಿದು ಮಾತನಾಡಿ, ನಮ್ಮ ನಾಯಕರಾದ ಸತೀಶ್ ಜಾರಕಿಹೊಳಿ ಅವರು ಮಾರ್ಗದರ್ಶನದಲ್ಲಿ ಅಭಿವೃದ್ಧಿ ಮತ್ತು ಸರ್ವಾಂಗೀಣ ವಿಕಾಸ ನಡೆಯಲಿದೆ.ಸರ್ಕಾರಿ ಯೋಜನೆಗಳು ಎಲ್ಲಾ ಜನರಿಗೆ ತಲುಪುವ ವ್ಯವಸ್ತೆ ಗ್ರಾಮ ಪಂಚಾಯತಿ…
ಬೆಳಗಾವಿ: ಮಹಾನಗರ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಸ್ವತಂತ್ರ ವೀರ ಸಾವರ್ಕರ್ ಭಾವಚಿತ್ರವನ್ನು ಮನೆಮನೆಗೆ ತಲುಪಿಸುವ ಆಂದೋಲನವನ್ನು ಹಮ್ಮಿಕೊಳ್ಳಲಾಗಿತ್ತು. ಭಾರತೀಯ ಜನತಾ ಪಕ್ಷದ ಮಹಾನಗರ ಜನರಲ್ ಸೆಕ್ರೆಟರಿ ಮುರುಘೇಶ್ ಪಾಟೀಲ್ ಅವರ ನೇತೃತ್ವದಲ್ಲಿ ವೀರ ಸಾವರ್ಕರ್ ಅವರ ಭಾವಚಿತ್ರವನ್ನು ಆಟೋರಿಕ್ಷಾ ದ್ವಿಚಕ್ರ ವಾಹನಗಳಿಗೆ ಮತ್ತು ವಾಹನಗಳಿಗೆ ಹಂಚುವ ಮೂಲಕ ಆಂದೋಲನವನ್ನು ಪ್ರಾರಂಭಿಸಿದರು. ನಂತರ ಪಂಚಾಯತ ಸ್ವರಾಜ ಸಮಾಚಾರ ಜೊತೆ ಮಾತನಾಡಿದ ಅವರು, ವೀರ ಸಾವರ್ಕರ್ ಒಬ್ಬ ಸ್ವಾತಂತ್ರ್ಯ ಹೋರಾಟಗಾರರು ಕಾಂಗ್ರೆಸ್ ಪಕ್ಷ ವಿನಾಕಾರಣ ವೀರ್ ಸಾವರ್ಕರ್ ಅವರನ್ನು ರಾಜಕೀಯವಾಗಿ ದುರಹುದ್ದೇಶದಿಂದಾಗಿ ಅವರಿಗೆ ಅವಮಾನ ಮಾಡುತ್ತಿದೆ. ಮಾಜಿ ಮುಖ್ಯಮಂತ್ರಿಗಳು ಸಿದ್ದರಾಮಯ್ಯನವರು ಸಾವರ್ಕರ್ ಅವರು ಸ್ವತಂತ್ರ ಹೋರಾಟಗಾರರು ಅಲ್ಲ ಎಂದು ಹೇಳಿದ್ದಾರೆ. ಈ ಹೇಳಿಕೆಯನ್ನು ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಮತ್ತು ಹಿಂದೂ ಸಂಘಟನೆ ಪ್ರತಿಯೊಬ್ಬ ಕಾರ್ಯಕರ್ತರ ಅಲ್ಲದೆ ಪ್ರತಿಯೊಬ್ಬ ದೇಶಭಕ್ತ ಇದನ್ನು ವಿರೋಧಿಸುತ್ತಾನೆ ಎಂದು ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು. ಈ ಸಂದರ್ಭದಲ್ಲಿ ಮಹಾನಗರ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಹಾಗೂ…
ಕೊಪ್ಪಳ : ಬಸ್ ನಿಲ್ದಾಣದಲ್ಲಿ ಬಸ್ ಹತ್ತುವ ಸಂದರ್ಭದಲ್ಲಿ 9 ಲಕ್ಷ ರೂಪಾಯಿ ಮೌಲ್ಯದ 18 ತೊಲೆ ಚಿನ್ನದ ಸರ ಎಗಿಸಿ ಕಳ್ಳ ಪರಾರಿಯಾದ ಘಟನೆ ಜಿಲ್ಲೆಯ ಗಂಗಾವತಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ. ನಾಗರತ್ನ ಗೋಪಾಲಶೆಟ್ಟಿ ಹುಲೆಹೈದರ ಎಂಬ ಮಹಿಳೆ ತನ್ನ ಪುತ್ರನ ಜೊತೆ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಹುಲಿಹೈದರ್ ಗ್ರಾಮಕ್ಕೆ ತೆರಳಲು ಬಸ್ಸ್ ಹತ್ತುವ ಸಂದರ್ಭದಲ್ಲಿ ತನ್ನ ಬ್ಯಾಗಿನಲ್ಲಿ ಇಟ್ಟಿದ್ದ 9 ಲಕ್ಷ ರೂಪಾಯಿ ಮೌಲ್ಯದ 18 ತೊಲೆ ಚಿನ್ನದ ಸರ ಕದ್ದಿದ್ದಾರೆ. ಕೂಡಲೇ ಮಹಿಳೆ ಕಿರುಚಾಡಿದ್ದಾರೆ. ಅಷ್ಟರಲ್ಲಿಯೇ ಕಳ್ಳ ಪರಾರಿಯಾಗಿದ್ದಾನೆ. ಗಂಗಾವತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಮಿಷನ್150 ಗುರಿಸಾಧನೆಗೆ ಪಕ್ಷದ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣದ ಪದಾಧಿಕಾರಿಗಳು ಅವಿರತವಾಗಿ ಪರಿಶ್ರಮಿಸಬೇಕೆಂದು ಭಾರತೀಯ ಜನತಾ ಪಾರ್ಟಿ ರಾಜ್ಯ ಮಾಧ್ಯಮ ಸದಸ್ಯ ಬೆಳಗಾವಿ ವಿಭಾಗ ಮಾಧ್ಯಮ ಪ್ರಭಾರಿ ಸಿದ್ದು ಮೊಗಲಿಶೆಟ್ಟರ್ ಹೇಳಿದರು. ನಗರದಲ್ಲಿ ಬುಧವಾರ ಬೆಳಗಾವಿ ಗ್ರಾಮಾಂತರ ಹಾಗೂ ಮಹಾನಗರ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣದ ಪದಾಧಿಕಾರಿಗಳ ತುರ್ತುಸಭೆಯಲ್ಲಿ ಮಾತನಾಡಿ, 2014 ರಲ್ಲಿ ದೇಶದ ಚುಕ್ಕಾಣಿ ಹಿಡಿದ ನರೇಂದ್ರ ಮೊದಿಜಿ ಅತ್ಯಂತ ಉತ್ರಮ ಕಾರ್ಯಗಳನ್ನು ಮಾಡುವ ಮೂಲಕ ಭಾರತವನ್ನು ಜಗದ್ಗುರು ಸ್ಥಾನದಲ್ಲಿ ತಂದು ನಿಲ್ಲಿಸಿದ್ದಾರೆ. ಬರುವ ಎರಡು ವರ್ಷಗಳಲ್ಲಿ ರಾಜ್ಯದ ಮತ್ತು ಕೇಂದ್ರದ ಚುನಾವಣೆ ಬರಲಿದ್ದು ಅವುಗಳ ಗೆಲುವಿಗೆ ನಾವೆಲ್ಲರು ಹೆಚ್ಚಿನ ಶ್ರಮ ವಹಿಸಬೇಕಾಗಿದೆ. ಈ ಹಿಂದೆಯು ಸಹಿತ ಪಕ್ಷದ ಕಾರ್ಯಕರ್ತರು ನಿಸ್ವಾರ್ಥವಾಗಿ ಪಕ್ಷಕ್ಕಾಗಿ ದುಡಿದ ಪ್ರತಿಫಲವಾಗಿ ಪಕ್ಷ ಅಧಿಕಾರಕ್ಕೆ ಬಂದಿದೆ. ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರ ಉತ್ತಮ ಕಾರ್ಯಯೊಜನೆಗಳನ್ನು ಜಾರಿಗೆ ತಂದಿದ್ದು ಅವುಗಳ ಪ್ರಚಾರ ಹಾಗೂ ಯೋಜನೆಗಳ ಅನುಷ್ಠಾನಕ್ಕೆ ಕಾರ್ಯಕರ್ತರು ಮನೆಮನೆಗೆ…
ಬೆಳಗಾವಿಯ ಕ್ರೈಂ ವಿಭಾಗದ ಎಸಿಪಿ ನಾರಾಯಣ ಬರಮನಿ, ಬಿ.ಆರ್.ಗಡ್ಡೇಕರ್ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಎಸಿಪಿ ನಾರಾಯಣ ಬರಮನಿ ಅವರನ್ನು ಮಾರ್ಕೆಟ್ ಎಸಿಪಿಯಾಗಿ ವರ್ಗಾವಣೆ ಮಾಡಲಾಗಿದ್ದು, ಅವರ ಜಾಗಕ್ಕೆ ಸದಾಶಿವ ಕಟ್ಟಿಮನಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಇನ್ನು ಲೋಕಾಯುಕ್ತಕ್ಕೆ ವರ್ಗಾವಣೆಯಾಗಿದ್ದ ಬಿ.ಆರ್.ಗಡ್ಡೇಕರ್ ಅವರನ್ನು ಸಿಇಎನ್ ಪೊಲೀಸ್ ಠಾಣೆಗೆ ವಾಪಸ್ ನೇಮಿಸಲಾಗಿದೆ. ಉದ್ಯಮಬಾಗ್ ಇನ್ ಸ್ಪೆಕ್ಟರ್ ಧೀರಜ್ ಶಿಂಧೆ ಅವರನ್ನು ಡಿಸಿಇಆರ್ ಗೆ ವರ್ಗಾವಣೆ ಮಾಡಲಾಗಿದೆ. ಶಹಾಪುರ ಠಾಣೆಯಿಂದ ವಿನಾಯಕ ಬಡಿಗೇರ ಅವರನ್ನು ಸಂಚಾರ ದಕ್ಷಿಣ ಠಾಣೆಗೆ ವರ್ಗಾಯಿಸಲಾಗಿದೆ. ಡಿಎಸ್ ಬಿಯಿಂದ ಸುದರ್ಶನ ಪಟ್ಟಣಕುಡೆ ಅವರನ್ನು ಹುಬ್ಬಳ್ಳಿಗೆ ವರ್ಗಾಯಿಸಲಾಗಿದೆ. ಸುನೀಲ್ ಕುಮಾರ ಅವರನ್ನು ಎಸಿಬಿಯಿಂದ ಬೆಳಗಾವಿ ಶಹಾಪುರ ಠಾಣೆಗೆ ವರ್ಗಾಯಿಸಲಾಗಿದೆ. ರಾಮಣ್ಣ ಬಿರಾದಾರ ಅವರನ್ನು ಐಎಸ್ ಡಿಯಿಂದ ಉದ್ಯಮಬಾಗ್ ಠಾಣೆಗೆ, ಮಂಜುನಾಥ ನಾಯಕ ಅವರನ್ನು ದಕ್ಷಿಣ ಸಂಚಾರ ಠಾಣೆಯಿಂದ ಐಎಸ್ ಡಿಗೆ ವರ್ಗಾವಣೆ ಮಾಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ಪ್ರಸ್ತುತ ಸಮಯದಲ್ಲಿ ನಮ್ಮ ಮಕ್ಕಳಿಗೆ ಜೀವನ ಪಾಠದ ಕೊರತೆ ಉಂಟಾಗಿದ್ದು, ಜೀವನ ಪಾಠಕ್ಕೊಸ್ಕರ ಚಿಕ್ಕಮಕ್ಕಳಿಗೆ ಅಂಗನವಾಡಿಯಿಂದಲೇ ಒಳ್ಳೆಯ ಸಂಸ್ಕಾರವನ್ನು ಕೊಡುವಂತಾಗಬೇಕು ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹೇಳಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ದೇಸೂರ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡ ಅಂಗನವಾಡಿ ಕೇಂದ್ರದ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು. ಇಂದಿನ ಮಕ್ಕಳೇ ನಾಳಿನ ಪ್ರಜೆಗಳು ಎನ್ನುವಂತೆ ನಮ್ಮ ಮಕ್ಕಳನ್ನು ಬಾಲ್ಯದಿಂದಲೇ ಮಾನಸಿಕವಾಗಿ ಹಾಗೂ ಶೈಕ್ಷಣಿಕವಾಗಿ ಬೆಳೆಸುವ ಕಾಯಕವನ್ನು ಇವತ್ತು ಎಲ್ಲ ಪೋಷಕರು ರೂಢಿಸಿಕೊಳ್ಳಬೇಕು ಎಂದು ಅವರು ಕಿವಿಮಾತು ಹೇಳಿದರು. ಗ್ರಾಮದ ಹಿರಿಯರು, ಜಿ.ಕೆ. ಪಾಟೀಲ, ವೆಂಕಟ ಪಾಟೀಲ, ಸಂತೋಷ ಮರಗಾಳಿ, ಭರಮಣಿ ಪಾಟೀಲ, ಸಾತೇರಿ ಕಳಸೇಕರ್, ಯಲ್ಲಪ್ಪ ಸಾವಂತ ಮನೋಜ ಸಾವಂತ, ಅನಿಲ ಪಾಟೀಲ, ಭುಜಂಗ ಗುರವ, ಅಂಗನವಾಡಿಯ ಸಿಬ್ಬಂದಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಇಂದು ನವದೆಹಲಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೆರಳಲಿದ್ದು, ರಾಜ್ಯ ರಾಜಕೀಯದಲ್ಲಿ ಕುತೂಹಲ ಕೆರಳಿಸಿದೆ. ಸಂಸದೀಯ ಮಂಡಳಿ, ಕೇಂದ್ರೀಯ ಚುನಾವಣಾ ಸಮಿತಿಯಲ್ಲಿ ಸ್ಥಾನ ದೊರೆತ ಬಳಿಕ ಇದೇ ಮೊದಲ ಬಾರಿಗೆ ಅವರು ನವದೆಹಲಿಗೆ ಭೇಟಿ ನೀಡುತ್ತಿದ್ದಾರೆ. ಪಕ್ಷದ ವರಿಷ್ಠರನ್ನು ಯಡಿಯೂರಪ್ಪ ಭೇಟಿಯಾಗಲಿದ್ದು, ಅವಕಾಶ ದೊರೆತಲ್ಲಿ ಪ್ರಧಾನಿ ಮೋದಿ ಅವರನ್ನು ಕೂಡ ಭೇಟಿ ಮಾಡಲಿದ್ದಾರೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ, ಸಚಿವ ಸಂಪುಟ ವಿಸ್ತರಣೆ, ಪಕ್ಷ ಸಂಘಟನೆ ಮೊದಲಾದ ವಿಚಾರಗಳ ಬಗ್ಗೆ ವರಿಷ್ಠರೊಂದಿಗೆ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು : ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮಾಡಿರುವ 40% ಕಮಿಷನ್ ಆರೋಪ ರಾಜಕೀಯ ಪ್ರೇರಿತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ಪ್ರಕರಣಗಳ ತನಿಖೆ ನಡೆಸಲು ಲೋಕಾಯುಕ್ತ ಎಂಬ ಸ್ವಾಯತ್ತ ಸಂಸ್ಥೆ ಇದೆ ಇತ್ತೀಚೆಗೆ ಕರ್ನಾಟಕ ಉಚ್ಚ ನ್ಯಾಯಾಲಯದ ನಿರ್ದೇಶನದಂತೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರವನ್ನು ಲೋಕಾಯುಕ್ತಕ್ಕೆ ನೀಡಲಾಗಿತ್ತು. ಆ ಸಂಸ್ಥೆಯಲ್ಲಿ ಯಾರ ವಿರುದ್ಧವಾದರೂ ದೂರುಗಳನ್ನು ನೀಡುವ ಅಧಿಕಾರ ಎಲ್ಲರಿಗೂ ಇದೆ. ಆದರೆ, ರಾಜಕೀಯ ಪ್ರೇರಿತ ಹೇಳಿಕೆಗಳನ್ನು ನೀಡಲಾಗುತ್ತದೆ ಎಂದು ಹೇಳಿದ್ದಾರೆ. ಇನ್ನು ಕೆಂಪಣ್ಣ ಅವರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನಂತರ ಕಮಿಷನ್ ಆರೋಪ ಮಾಡಿದ್ದಾರೆ. ಜೊತೆಗೆ ಎಲ್ಲಾ ಪಕ್ಷಗಳ ಶಾಸಕರು ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ಅವರು ಹೇಳುತ್ತಾರೆ. ಹಿಂದಿನ ಸರ್ಕಾರದಲ್ಲಿ ಈ ಹಗರಣವು ನಡೆದಿದ್ದವು ಆದರೆ ಏಕೆ ಬೆಳಕಿಗೆ ಬರಲಿಲ್ಲ ಎಂದು ಪ್ರಶ್ನಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…
ಬೆಳಗಾವಿ : ಜಿಲ್ಲೆಯಲ್ಲಿ ಮ್ಯಾನುವಲ್ ಸ್ಕ್ಯಾವೆಂಜರ್ಸ್ ಇಲ್ಲ ಆದರೆ ಅವರ ಅವಲಂಬಿತರಿಗೆ ಸರ್ಕಾರದ ಸೌಲಭ್ಯಗಳು ಸಮರ್ಪಕವಾಗಿ ದೊರೆಯಬೇಕು ಈ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಸಫಾಯಿ ಕರ್ಮಚಾರಿ ಅಧ್ಯಕ್ಷರಾದ ಎಂ. ಶಿವಣ್ಣ ಕೋಟೆ ತಿಳಿಸಿದರು. ಇಲ್ಲಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ (ಆ.25) ನಡೆದ ಸಫಾಯಿ ಕರ್ಮಚಾರಿ/ ಪೌರ ಕಾರ್ಮಿಕರ ಕುಂದು ಕೊರತೆಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 2013ರ ಹಿಂದೆ ಈ ಕೆಲಸ ಮಾಡಿದವರು ಇನ್ನೂ ಪತ್ತೆ ಹಚ್ಚಲು ಆಗಿಲ್ಲ. ಗ್ರಾಮೀಣ ಭಾಗದಲ್ಲಿ ಈ ಹಿಂದೆ ಕೆಲಸ ಮಾಡಿದವರು ಅನೇಕರಿದ್ದಾರೆ. ಅಂತಹವರನ್ನು ಗುರುತಿಸಿ ಅವರಿಗೆ ಸರ್ಕಾರದ ಸೌಲಭ್ಯಗಳು ದೊರಕಿಸಬೇಕು ಎಂದು ಸಫಾಯಿ ಕರ್ಮಚಾರಿ ಜಿಲ್ಲಾ ಸದಸ್ಯ ವಿಜಯ ಹಿರಿಕಟ್ಟಿ ಮನವಿ ಮಾಡಿಕೊಂಡರು. ಮ್ಯಾನ್ಯುವಲ್ ಸ್ಕ್ಯಾವೆಂಜರ್ ಅಥವಾ ಅವರ ಅವಲಂಬಿತರು ಇದ್ದರೆ ಅಂತವರಿಗೆ ಕೌಶಲ್ಯ ತರಬೇತಿ, ಪುನರ್ವಸತಿ ಸೇರಿದಂತೆ ಅವಶ್ಯ ಸೌಲಭ್ಯಗಳನ್ನು ನೀಡಲಾಗುವುದು. ಈಗಾಗಲೇ ಅನೇಕ ಬಾರಿ ಸಮೀಕ್ಷೆ ನಡೆಸಿ, ಗುರುತಿಸಲಾಗುತ್ತಿದೆ. ಈ ಕಾರ್ಯದಲ್ಲಿ ತೊಡಗಿರುವ ಬಗ್ಗೆ ಸರಿಯಾದ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಪ್ರಧಾನ ರಸ್ತೆಯಲ್ಲಿರುವ ರಾಷ್ಟ್ರೀಯ ಅಕಾಡೆಮಿ ಶಾಲೆಯಲ್ಲಿ ಕಸಬಾ ಹೋಬಳಿಯ ಕ್ರೀಡಾಕೂಟ ಆಯೋಜಿಸಲಾಯಿತು. ಶೆಟಲ್, ಖೋ ಖೋ , ಹೈಜಂಪ್, ಲಾಂಗ್ ಜಂಪ್ ಸೇರಿದಂತೆ ವಿವಿಧ ಕ್ರೀಡಾ ಸ್ಪರ್ಧೆಯಲ್ಲಿ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರೀಯ ಅಕಾಡೆಮಿ ಶಾಲೆಯ ಶಿಕ್ಷಕರಾದ ಪರಮೇಶ್, ಕ್ರೀಡೆಯು ನಮ್ಮ ಜೀವನದ ಒಂದು ಪ್ರಮುಖ ಭಾಗವಾಗಿದೆ. ಇದು ದೈಹಿಕವಾಗಿ ಮತ್ತು ಮಾನಸಿಕವಾಗಿ ನಮ್ಮ ಅಭಿವೃದ್ಧಿಯ ಮೂಲವಾಗಿದೆ ಎಂದರು. ಕ್ರೀಡೆ ನಮ್ಮ ದೇಹದ ರಕ್ತ ಪರಿಚಲನೆಗೆ ಸಹಕಾರಿಯಾಗಿದೆ. ಮತ್ತೊಂದೆಡೆ ಇದು ನಮ್ಮ ಮೆದುಳಿನ ಬೆಳವಣಿಗೆಯಲ್ಲಿ ಪ್ರಯೋಜನಕಾರಿಯಾಗಿದೆ. ಕ್ರೀಡೆಗಳನ್ನು ವ್ಯಾಯಾಮದ ಅತ್ಯುತ್ತಮ ಸಾಧನವೆಂದು ಪರಿಗಣಿಸಲಾಗುತ್ತದೆ. ಯಶಸ್ವಿ ವ್ಯಕ್ತಿಯು ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯವಾಗಿರಲು, ಮಾನಸಿಕ ಬೆಳವಣಿಗೆಯು ನಮ್ಮ ಶಾಲಾ ದಿನಗಳಿಂದ ಪ್ರಾರಂಭವಾಗುತ್ತದೆ. ಆದರೆ ದೈಹಿಕ ಬೆಳವಣಿಗೆಗೆ ವ್ಯಾಯಾಮವು ಕ್ರೀಡೆಯ ಮೂಲಕ ನಾವು ಪಡೆಯುತ್ತೇವೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ದೈಹಿಕ ಶಿಕ್ಷಕರಾದ ಪರಮೇಶ್, ರಂಗನಾಥ್, ವಿಜಯ್ ಕುಮಾರ್ ನಾಯಕ, ಶಶಿಕಲಾ ಸೇರಿದಂತೆ ಇತರರು…