Subscribe to Updates
Get the latest creative news from FooBar about art, design and business.
- ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ
- ಪರಿಶಿಷ್ಟರ ಸಮಸ್ಯೆಗಳ ಶೀಘ್ರ ವಿಲೇವಾರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
- ಜ.31ರವರೆಗೆ ರಸ್ತೆ ಸುರಕ್ಷಾ ಮಾಸಾಚರಣೆ ಅಭಿಯಾನ
- ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ
- ತುಮಕೂರು: 40 ವರ್ಷ ವಾಸವಿದ್ದರೂ ಸಿಗದ ಹಕ್ಕು ಪತ್ರ: ನಿವಾಸಿಗಳ ಆಕ್ರೋಶ
- ಹುಯಿಲ್ ದೊರೆ ನೂತನ ಗ್ರಾ.ಪಂ. ಕಟ್ಟಡ ಉದ್ಘಾಟನೆ: ಗ್ರಾಮ ಪಂಚಾಯ್ತಿಗಳೇ ಗ್ರಾಮಗಳ ಸರ್ಕಾರವಾಗಬೇಕು: ಶಾಸಕ ಟಿ.ಬಿ.ಜಯಚಂದ್ರ
- ತುಮಕೂರು: ಗಾಜಿನ ಮನೆಯಲ್ಲಿ ‘ಸಿರಿಧಾನ್ಯ ಖಾದ್ಯಗಳ’ ಘಮಲು!
- 48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ: ಎಸ್ಪಿ ಅಶೋಕ್ ಗೆ ಪದೋನ್ನತಿ
Author: admin
ತುಮಕೂರು: ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಖಾಲಿಯಿದ್ದ ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದಂತೆ, ತೃತೀಯ ಲಿಂಗಿ (TG) ಮೀಸಲಾತಿಯಡಿ 1:3 ಅನುಪಾತದನ್ವಯ ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸೂಚನಾ ಫಲಕ ಹಾಗೂ ಅಧಿಕೃತ ವೆಬ್ ಸೈಟ್ www.tumkur.nic.in ನಲ್ಲಿ ಪ್ರಕಟಿಸಲಾಗಿದೆ. ತಾತ್ಕಾಲಿಕ ಪಟ್ಟಿಯನುಸಾರ ತೃತೀಯ ಲಿಂಗಿ ಮೀಸಲಾತಿಯಡಿ ಪುಟ್ಟನರಸಮ್ಮ ಎನ್., ಹರ್ಷಿತ ಡಿ.ಹೆಚ್. ಹಾಗೂ ಆಶಾ ಎಸ್.ಎನ್. ಅವರು ಆಯ್ಕೆಯಾಗಿದ್ದು, ಆಯ್ಕೆಯಾಗಿರುವ ಅಭ್ಯರ್ಥಿಗಳು ಮಾತ್ರ ಮೇ 19ರಂದು ಸಂಜೆ 5:30ರೊಳಗಾಗಿ ತಮ್ಮ ಪಿಯುಸಿ/12ನೇ ತರಗತಿ ಅಂಕಪಟ್ಟಿ ಹಾಗೂ ಮೀಸಲಾತಿಗೆ ಸಂಬಂಧಿಸಿದ ಮೂಲ ಪ್ರಮಾಣಪತ್ರಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಪರಿಶೀಲನೆಗಾಗಿ ಹಾಜರಾಗಬೇಕೆಂದು ಗ್ರಾಮ ಆಡಳಿತಾಧಿಕಾರಿ ನೇಮಕಾತಿ ಆಯ್ಕೆ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ತುಮಕೂರು: ರುಡ್‌ಸೆಟ್ ಸಂಸ್ಥೆಯ ವತಿಯಿಂದ ಜೂನ್ 10 ರಿಂದ 12 ದಿನಗಳ ಉಚಿತ ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಗ್ರಾಮೀಣ ನಿರುದ್ಯೋಗಿ ಯುವಕ-ಯುವತಿಯರು ತರಬೇತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಪ್ರದೇಶದ ಆಧಾರ್ ಕಾರ್ಡ್ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು. ತರಬೇತಿಯು ವಸತಿಯುತವಾಗಿದ್ದು, ತರಬೇತಿ ಅವಧಿಯಲ್ಲಿ ಉಚಿತ ಊಟ ಮತ್ತು ವಸತಿ ಸೌಲಭ್ಯ ಕಲ್ಪಿಸಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ 9380220884, 9380162042, 9113880324ನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ ಸೆಟ್ ಸಂಸ್ಥೆ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ತುಮಕೂರು: ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ಮೇ 20ರವರೆಗೆ ಭಾರಿ ಪ್ರಮಾಣದ ಗುಡುಗು–ಸಿಡಿಲು ಸಹಿತ ಗಾಳಿ-ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೊ ಅಲರ್ಟ್ ಘೋಷಿಸಲಾಗಿದ್ದು, ಜಿಲ್ಲಾ/ತಾಲ್ಲೂಕು/ಗ್ರಾಮ ಮಟ್ಟದ ಅಧಿಕಾರಿ/ಸಿಬ್ಬಂದಿಗಳು ಮುಂಜಾಗ್ರತಾ ಕ್ರಮಗಳನ್ನು ವಹಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಂಗಾಮಿನಲ್ಲಿ ಈವರೆಗೆ ಶೇ.134ರಷ್ಟು ಅಧಿಕ ಮಳೆಯಾಗಿದ್ದು, ಪ್ರವಾಹ/ಭಾರಿ ಮಳೆಯಿಂದ ಯಾವುದೇ ಜನ-ಜಾನುವಾರುಗಳ ಜೀವ ಹಾನಿಯಾಗದಂತೆ ಮುಂಜಾಗ್ರತೆವಹಿಸಬೇಕು. ಭಾರಿ ಮಳೆ/ಪ್ರವಾಹದಿಂದ ಯಾವುದೇ ಅಹಿತಕರ ಘಟನೆಯಾಗದಂತೆ ಪ್ರತಿ ಗ್ರಾಮಗಳಲ್ಲಿ ಡಂಗೂರ ಸಾರುವುದು/ಮೈಕ್ ಮೂಲಕ ಜನರಿಗೆ ಜಾಗೃತಿ ಮೂಡಿಸಬೇಕು. ನಿರಂತರ ಮಳೆಯಿಂದ ದುರ್ಬಲ ಮಣ್ಣಿನ ಮನೆ/ಕಟ್ಟಡ, ಮರದ ಕೊಂಬೆ, ಜಲಕಾಯ, ವಿದ್ಯುತ್ ವಸ್ತುಗಳಿಂದ ದೂರವಿರುವ ಬಗ್ಗೆ ಎಚ್ಚರವಹಿಸಲು ವ್ಯಾಪಕ ಪ್ರಚಾರ ನೀಡಬೇಕು. ಶಾಲಾ/ಅಂಗನವಾಡಿ ಮೇಲ್ಛಾವಣಿ/ಗೋಡೆ ಹಾಗೂ ನದಿ/ಹಳ್ಳ/ಕೆರೆ/ಕಟ್ಟೆ/ರಸ್ತೆ/ಸೇತುವೆ/ವಿದ್ಯುತ್ ಸಂಪರ್ಕ ಇತ್ಯಾದಿ ಮೂಲಭೂತ ಸೌಕರ್ಯಗಳ ಸುಸ್ಥಿತಿ ಬಗ್ಗೆ ಪರಿಶೀಲಿಸಬೇಕು. ಹಠಾತ್ ಪ್ರವಾಹವಾಗುವ ತಗ್ಗು ಪ್ರದೇಶದ ವಾರ್ಡ್/ಅಂಡರ್ ಪಾಸ್/ರಸ್ತೆಗಳ ಕುರಿತು ಮುನ್ನೆಚ್ಚರಿಕೆ ವಹಿಸಬೇಕು…
ತುಮಕೂರು: ರೈತರ ಅನುಕೂಲಕ್ಕಾಗಿ ಬಿತ್ತನೆ ಬೀಜ ಹಾಗೂ ಕೃಷಿ ಉಪಕರಣಗಳ ದರಪಟ್ಟಿಯನ್ನು ಜಿಲ್ಲೆಯ ಎಲ್ಲಾ ರೈತ ಸಂಪರ್ಕ ಕೇಂದ್ರ ಮತ್ತು ಬೀಜ ಮಾರಾಟ ಕೇಂದ್ರಗಳಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸೋಮವಾರ ಸಂಜೆ ಜಿಲ್ಲಾಧಿಕಾರಿ ಕಚೇರಿ ನ್ಯಾಯಿಕ ಸಭಾಂಗಣದಲ್ಲಿ ಮುಂಗಾರು ಹಂಗಾಮಿಗಾಗಿ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳ ವಿತರಣೆ, ದಾಸ್ತಾನಿಗೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜಗಳನ್ನು ಸರ್ಕಾರ ನಿಗದಿಪಡಿಸಿದ ದರದಲ್ಲೇ ಮಾರಾಟ ಮಾಡಬೇಕು. ರೈತರಿಗೆ ಅಗತ್ಯ ಬಿತ್ತನೆ ಬೀಜಗಳು ಸುಲಭವಾಗಿ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು. ಬಿತ್ತನೆ ಬೀಜ ಮಾರಾಟ ಕೇಂದ್ರಗಳಲ್ಲಿ ಬೀಜಗಳ ಕೊರತೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ನಿರ್ದೇಶನ ನೀಡಿದರು. ಜಿಲ್ಲೆಯಲ್ಲಿ ಮೇ 20 ರಿಂದ ಬಿತ್ತನೆ ಬೀಜಗಳ ವಿತರಣೆ ಪ್ರಾರಂಭಿಸಲಾಗುತ್ತಿದ್ದು, ರೈತರಿಗೆ ಗುಣಮಟ್ಟದ ಬೀಜ ಒದಗಿಸುವ ದೃಷ್ಟಿಯಿಂದ ವಿತರಣೆಗೆ ಮುನ್ನ ಪ್ರತಿಯೊಂದು ಕೇಂದ್ರದಲ್ಲಿಯೂ ಬೀಜದ ತಳಿ ಹಾಗೂ ಪ್ರತಿ ಲಾಟ್‌ನಿಂದ ಬಿತ್ತನೆ ಬೀಜಗಳ…
ತುಮಕೂರು: ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯ ಅನುಷ್ಠಾನ ಮಾಡುವಲ್ಲಿ ಪ್ರಗತಿಯಲ್ಲಿ ಹಿಂದುಳಿದ ಅಧಿಕಾರಿಗಳ ಅಮಾನತ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಮ್ ಖಾನ್ ಎಚ್ಚರಿಕೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಿಕ ಸಭಾಂಗಣದಲ್ಲಿ ಬುಧವಾರ ಜರುಗಿದ ಜಿಲ್ಲೆಯ 10 ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನಗರೋತ್ಥಾನ ಯೋಜನೆಯು ಪ್ರಾರಂಭವಾಗಿ 3 ವರ್ಷಗಳು ಕಳೆದರೂ ಕುಣಿಗಲ್ ಪುರಸಭೆಯಲ್ಲಿ ಕೇವಲ ಶೇ.14ರಷ್ಟು ಮಾತ್ರ ಭೌತಿಕ ಸಾಧನೆಯಾಗಿದೆ. ಕಾರಣವೇನೆಂದು ಪುರಸಭೆ ಮುಖ್ಯಾಧಿಕಾರಿ ಮಂಜುಳಾ ಅವರನ್ನು ಸಚಿವರು ತರಾಟೆಗೆ ತೆಗೆದುಕೊಂಡರು. ಅನುಮೋದನೆ ನೀಡಿದ 27 ಕಾಮಗಾರಿಗಳ ಪೈಕಿ ಕೇವಲ 4 ಕಾಮಗಾರಿಗಳನ್ನು ಮಾತ್ರ ಪೂರ್ಣಗೊಳಿಸಲಾಗಿದ್ದು, 6 ಕಾಮಗಾರಿಗಳು ಇನ್ನೂ ಟೆಂಡರು ಪ್ರಕ್ರಿಯೆ ಹಂತದಲ್ಲಿವೆ. ಇದೇ ರೀತಿ ಕಾಮಗಾರಿ ಪ್ರಗತಿಯಲ್ಲಿ ಹಿನ್ನಡೆ ಕಂಡು ಬಂದರೆ ಸಂಬಂಧಿಸಿದ ಅಧಿಕಾರಿಗಳನ್ನು ಮನೆಗೆ ಕಳುಹಿಸಲು ಕ್ರಮವಿಡಲಾಗುವುದು ಎಂದು ಖಡಕ್ ಸೂಚನೆ ನೀಡಿದರು. ನಗರ ಸ್ಥಳೀಯ ಸಂಸ್ಥೆಗಳಲ್ಲಿ ರಸ್ತೆ ಹಾಗೂ ಚರಂಡಿ…
ತುಮಕೂರು: ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆಂಟ್ ರಾಜೇಂದ್ರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿದೆ. ತರಬೇತಿ ಶಿಬಿರದಲ್ಲಿ ಮೈಮುಟ್ಟಿ ತಪ್ಪು ವಿಷಯಗಳನ್ನು ಕಲಿಸುತ್ತಿದ್ದಾರೆ, ಕಿರುಕುಳ ನೀಡಿದ್ದಾರೆ ಎಂದು ಐವರು ಮಹಿಳಾ ಉದ್ಯೋಗಿಗಳು ಜಿಲ್ಲಾಧಿಕಾರಿ, ಮಹಿಳಾ ಆಯೋಗ ಮತ್ತು ಅಗ್ನಿಶಾಮಕ ಇಲಾಖೆಯ ಐಜಿಗೆ ಲಿಖಿತ ದೂರು ನೀಡಿದ್ದಾರೆ. ದೂರಿನ ಜೊತೆಗೆ ಪೆನ್ ಡ್ರೈವ್ ದಾಖಲೆಯನ್ನೂ ನೀಡಲಾಗಿದೆ. ತರಬೇತಿಯ ಸಮಯದಲ್ಲಿ ಅವರು ಮಹಿಳಾ ಸಿಬ್ಬಂದಿಯೊಂದಿಗೆ ನೃತ್ಯ ಮಾಡುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ತುಮಕೂರು: ಅಪರೇಷನ್ ಸಿಂಧೂರದಲ್ಲಿ ದೇಶದ ಸೈನಿಕರ ಆತ್ಮಸ್ಟೈರ್ಯ ಹೆಚ್ಚಿಸುವ ನಿಟ್ಟಿನಲ್ಲಿ ತುಮಕೂರಿನಲ್ಲಿ ಆಯೋಜಿಸಲಾಗಿದ್ದ ಬೃಹತ್ ತಿರಂಗ ಯಾತ್ರೆಯನ್ನು ಕೇಂದ್ರ ಸಚಿವ ವಿ.ಸೋಮಣ್ಣ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜೇಂದ್ರ, ರಾಜ್ಯಸಭೆ ಸದಸ್ಯ ಜಗ್ಗೇಶ್, ವಿವಿಧ ಮಠಗಳ ಸ್ವಾಮೀಜಿ ಗಳು ಹಾಜರಿದ್ದರು. ಬೃಹತ್ ರಾಷ್ಟ ಧ್ವಜವನ್ನು ಹಿಡಿದುಕೊಂಡು ವಿದ್ಯಾರ್ಥಿಗಳು ಸಾರ್ವಜನಿಕರು ಸಾಗಿದರು. ಇದೇ ವೇಳೆ ಮಾತನಾಡಿದ ಕೇಂದ್ರ ಸಚಿವ ವಿ ಸೋಮಣ್ಣ, ದೇಶದ ಸಾರ್ವಜನಿಕರನ್ನು ಮುಟ್ಟಿದರೆ ಯಾವ ರೀತಿ ಉತ್ತರವನ್ನು ಕೊಡುತ್ತೇವೆ ಎಂಬುದನ್ನು ದೇಶದ ಸೈನಿಕರು ದಿಟ್ಟ ಉತ್ತರವನ್ನು ನೀಡಿದ್ದಾರೆ. ಪ್ರಪಂಚಕ್ಕೆ ಈ ರೀತಿಯಾದ ಒಂದು ಸಂದೇಶವನ್ನು ನೀಡಿದ್ದಾರೆ ಎಂದರು. ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಅದನ್ನು ಹೇಗೆ ನಿಭಾಯಿಸಬೇಕು ಎಂಬುದನ್ನು ಪ್ರಧಾನಿ ಮೋದಿ ಅವರು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ತಿರಂಗ ಯಾತ್ರೆಯನ್ನು ಮಾಡುತ್ತಿದ್ದೇವೆ ಎಂದು ತಿಳಿಸಿದರು. 27 ಅಮಾಯಕ ಸಾರ್ವಜನಿಕರನ್ನು ಹತ್ಯೆ ಮಾಡಿದ ಉಗ್ರಗಾಮಿಗಳಿಗೆ ಹಾಗೂ ಪಾಕಿಸ್ತಾನಕ್ಕೆ ಪ್ರಧಾನಿ ಮೋದಿಯವರು ನೂರಾರು ಉಗ್ರಗಾಮಿಗಳನ್ನು ಕೊಂದು ಹಾಕುವ ಮೂಲಕ ಉತ್ತರವನ್ನು…
ತಿಪಟೂರು: ಗ್ಯಾಸ್ ಸಿಲಿಂಡರ್ ಸ್ಪೋಟದಿಂದ ಬೆಂಕಿಗೆ ಆಹುತಿಗೊಂಡ ರಾಧಾಮಣಿ ಮನೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 25 ಸಾವಿರ, ಸಹಾಯಧನದ ಪತ್ರ ವಿತರಣೆ ಮಾಡಲಾಯಿತು. ತಿಪಟೂರು ತಾಲ್ಲೂಕಿನ ರಂಗಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಬರುವ ಕಲ್ಲಯ್ಯನ ಪಾಳ್ಯ ಗ್ರಾಮದಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ರಾಧಾಮಣಿಗಂಗಾದರಯ್ಯ ಎಂಬುವವರ ಮನೆ ಬೆಂಕಿಗಾಹುತಿಯಾಗಿ ಸರಿಸುಮಾರು 20 ಲಕ್ಷ ಮೊತ್ತದಷ್ಟು ನಷ್ಟ ಅನುಭವಿಸಿತ್ತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ನೊಂದ ಕುಟುಂಬಕ್ಕೆ 25 ಸಾವಿರ ಮೊತ್ತದ ಸಹಾಯ ಧನವನ್ನು ಮಂಜೂರುಗೊಳಿಸಿದ ಡಿಡಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಿಪಟೂರು ತಾಲ್ಲೂಕಿನ ಯೋಜನಾಧಿಕಾರಿಗಳಾದ ಉದಯ್ ಕೆ. ರವರು ರಾಧಾಮಣಿಯ ಕುಟುಂಬದವರಿಗೆ ವಿತರಿಸಿದರು. ಈ ಸಂದರ್ಭ ರಂಗಾಪುರ ವಲಯ ಮೇಲ್ವಿಚಾರಕ ದಿನೇಶ್ ಕೆ., ಸೇವಾಪ್ರತಿನಿಧಿ ರೂಪ ಹಾಗೂ ಧರ್ಮಸ್ಥಳ ಸ್ವಸಹಾಯ ಸಂಘದ ಪಾಲುದಾರು ಉಪಸ್ಥಿತರಿದ್ದರು. ವರದಿ: ಆನಂದ್, ತಿಪಟೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…
ಬೀದರ್: ಜಿಲ್ಲೆಯ ಔರಾದ ತಾಲೂಕಿನ ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹೈಪರ್ ಟೆನ್ಶನ್ ದಿನಾಚರಣೆ ಮಾಡಲಾಯಿತು. ಹಿರಿಯ ಜೀವಿಗಳಿಗೆ ಹೆಪಟೈಂಶನ್ ಬಗ್ಗೆ ಮಾಹಿತಿ ನೀಡಿ, ಬಿಪಿ, ಶುಗರ್ ಟೆಸ್ಟ್ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. (ಎನ್ ಸಿ ಡಿ) ವಿಭಾಗದ ವೈದ್ಯರಾದ ಆಶಾ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ದಂತ ವೈದ್ಯಾಧಿಕಾರಿಗಳಾದ ರೇಣುಕಾ ನಾಗರಾಳ್ಕರ್ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, ನಾವು ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯಕರ ಜೀವನವನ್ನು ನಡೆಸಬಹುದು. ಯೋಗ ಮತ್ತು ಧ್ಯಾನವು ನಮಗೆ ಇದನ್ನು ಸಾಧಿಸಲು ಸಹಾಯ ಮಾಡುತ್ತದೆ. ಸದಾ ಒತ್ತಡದಿಂದ ತುಂಬಿರುವ ಇಂದಿನ ವೇಗದ ಜಗತ್ತಿನಲ್ಲಿ ಆತಂಕ ಮತ್ತು ಉದ್ವೇಗವನ್ನು ಎದುರಿಸಲು ಮತ್ತು ನಮ್ಮ ಆರೋಗ್ಯದ ಕಡೆಗೆ ಹೆಚ್ಚು ಗಮನ ನೀಡಲು ಒಂದು ಮಾರ್ಗವನ್ನು ಕಂಡುಹಿಡಿಯುವುದು ಅತ್ಯಗತ್ಯ ಎಂದರು. ಮಾನಸಿಕ ಆರೋಗ್ಯದ ಸಮಸ್ಯೆಗಳ ಜೊತೆಗೆ ದೈಹಿಕ ಆರೋಗ್ಯ ಸಮಸ್ಯೆಗಳಾದ ಅಧಿಕ ರಕ್ತದೊತ್ತಡ (High Blood Pressure), ಮಧುಮೇಹ (Diabetes), ಅಧಿಕ ಕೊಲೆಸ್ಟ್ರಾಲ್ ಮಟ್ಟಗಳು ಮುಂತಾದವುಗಳಿಗೆ ಒತ್ತಡವು ಪ್ರಮುಖ ಕಾರಣಗಳಲ್ಲಿ ಒಂದಾಗಿದೆ.…
ತುಮಕೂರು: ಜಿಲ್ಲೆಯಲ್ಲಿ ಮೇ 5 ರಿಂದ ಕೈಗೊಂಡಿರುವ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯಡಿ ಮನೆ–ಮನೆ ಭೇಟಿ ನೀಡಿ ಗಣತಿ ಮಾಡುವ ಅವಧಿಯನ್ನು ಮೇ 25ರವರೆಗೂ ವಿಸ್ತರಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ಶುಕ್ರವಾರ ಸಂಜೆ ಪತ್ರಿಕಾ ಹೇಳಿಕೆ ನೀಡಿದ ಅವರು ಮನೆ–ಮನೆ ಭೇಟಿ ಅವಧಿಯಲ್ಲಿ ಬಿಟ್ಟುಹೋದ ಪರಿಶಿಷ್ಟ ಜಾತಿ ಕುಟುಂಬಗಳ ಮಾಹಿತಿ ಸಂಗ್ರಹಿಸಲು ಮೇ 26 ರಿಂದ 28ರವರೆಗೆ ಸಮೀಕ್ಷೆಯ ಬ್ಲಾಕ್ ವ್ಯಾಪ್ತಿಯಲ್ಲಿ ವಿಶೇಷ ಶಿಬಿರಗಳನ್ನು ನಡೆಸಲಾಗುವುದು. ಮನೆ-ಮನೆ ಸಮೀಕ್ಷೆ ಹಾಗೂ ವಿಶೇಷ ಶಿಬಿರದಲ್ಲಿ ಜಾತಿಯ ಬಗ್ಗೆ ಘೋಷಣೆ ಮಾಡಿಕೊಳ್ಳದವರು ಆನ್ ಲೈನ್ ಮೂಲಕ ಸ್ವಯಂ ಘೋಷಣೆ ಮಾಡಿಕೊಳ್ಳಲು ಮೇ 19 ರಿಂದ 28ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು. ಸಮೀಕ್ಷೆಯಲ್ಲಿ ತಾಂಡಾ, ಕಾಲೋನಿಗಳ ಮನೆ–ಮನೆ ಭೇಟಿ ಕೈಬಿಟ್ಟು ಹೋಗಿದ್ದಲ್ಲಿ ಈ ದಿನವೇ ತೆರಳಿ ಸಮೀಕ್ಷಾ ಕಾರ್ಯವನ್ನು ಪೂರ್ಣಗೊಳಿಸಬೇಕು. ತಮಗೆ ವಹಿಸಿರುವ ಗಣತಿ ಕಾರ್ಯವನ್ನು ಶೇ.100ರಷ್ಟು ಪೂರ್ಣಗೊಳಿಸಬೇಕು. ಸಮೀಕ್ಷಾ ಕಾರ್ಯಕ್ಕೆ ಗೈರು ಹಾಜರಾಗಿರುವ…