Subscribe to Updates
Get the latest creative news from FooBar about art, design and business.
- ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ: ತುಮಕೂರು ಪ್ರಥಮ
- ಸಿರಾದಲ್ಲಿ ಮೀನು ಮಾರಾಟ ಮಳಿಗೆಯನ್ನು ಸ್ಥಾಪಿಸಲು ಕೂಡಲೇ ಕ್ರಮ: ಟಿ.ಬಿ.ಜಯಚಂದ್ರ
- ಸಿರಾ ತಾಲೂಕು ಹೊಸಹಳ್ಳಿ ಗೇಟ್ ಬಳಿ ಪುರುಷ ಶವ ಪತ್ತೆ
- ಜಯನಗರ ಪಶ್ಚಿಮ ಪಾರ್ಕ್ ಜಾಗದಲ್ಲಿ ‘ನಮ್ಮ ಕ್ಲಿನಿಕ್’ ಸ್ಥಾಪನೆಗೆ ವಿರೋಧ: ಆಸ್ಪತ್ರೆ ನಿರ್ಮಾಣಕ್ಕೆ ತಡೆ ಕೋರಿ ಶಾಸಕರಿಗೆ ಮನವಿ
- ಕುಣಿಗಲ್: ಮೀಟರ್ ಬಡ್ಡಿ ದಂಧೆಗೆ ಮತ್ತೊಂದು ಬಲಿ; ಕಿರುಕುಳ ತಾಳಲಾರದೆ ಹರಿಕಥೆ ದಾಸ ಆತ್ಮಹತ್ಯೆ!
- ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗುವಂತೆ ಬಾಲಭವನ ಅಭಿವೃದ್ಧಿಗೆ ಪೂರಕ ಕಾಮಗಾರಿ ಕೈಗೊಳ್ಳಲು ಸಿಇಒ ಅಶ್ವಿಜಾ ಸಲಹೆ
- ಪಾವಗಡ: ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಶಾಸಕರಿಗೆ ಪ್ರಾಂಶುಪಾಲರ ಮನವಿ
- ಎಸ್ ಐಆರ್ ಪ್ರಕ್ರಿಯೆಯಿಂದ ತಿಪಟೂರು ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು: ಸಿ.ಬಿ. ಶಶಿಧರ್
Author: admin
ತುಮಕೂರು: ಜಿಲ್ಲಾಡಳಿತ, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಹಾಗೂ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಡಿಸೆಂಬರ್ 2ರವರೆಗೆ 8ನೇ ಸುತ್ತಿನ ಕಾಲುಬಾಯಿ ಜ್ವರದ ವಿರುದ್ಧ ಸಾಮೂಹಿಕ ಲಸಿಕಾ ಅಭಿಯಾನವನ್ನು ಜಿಲ್ಲೆಯಾದ್ಯಂತ ಕೈಗೊಳ್ಳಲಾಗುವುದು. ಇಲಾಖೆಯ ಪಶುವೈದ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ರೈತರ ಮನೆಗಳಿಗೆ ನೇರವಾಗಿ ಭೇಟಿ ನೀಡಿ ಉಚಿತವಾಗಿ ಲಸಿಕೆ ಹಾಕಲಿದ್ದಾರೆ. ಪಶುಪಾಲಕರು ತಮ್ಮ ಜಾನುವಾರುಗಳಿಗೆ ತಪ್ಪದೆ ಲಸಿಕೆ ಹಾಕಿಸಿಕೊಳ್ಳವ ಮೂಲಕ ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು, ಜಾನುವಾರುಗಳ ಆರೋಗ್ಯ ಕಾಪಾಡುವಲ್ಲಿ ಹಾಗೂ ರೋಗ ನಿಯಂತ್ರಿಸುವಲ್ಲಿ ಸಹಕರಿಸಬೇಕೆಂದು ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಉಪನಿರ್ದೇಶಕರು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ತುಮಕೂರು: ನವೋದಯ ಶಾಲೆ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳ ಮತ್ತು ನವೋದಯ, ಸೈನಿಕ್, ಆದರ್ಶ, ಮೊರಾರ್ಜಿ, ರಾಣಿ ಚೆನ್ನಮ್ಮ, ಅಟಲ್ ಬಿಹಾರಿ ವಾಜಪೇಯಿ, ಇಂದಿರಾ ಗಾಂಧಿ ಇನ್ನಿತರ ಸರ್ಕಾರಿ, ಖಾಸಗಿ ವಸತಿ ಶಾಲೆಗಳಲ್ಲಿ ಮುಂದಿನ ವರ್ಷಗಳಲ್ಲಿ ಪ್ರವೇಶ ಬಯಸಿರುವ 1ರಿಂದ 5ನೇ ತರಗತಿಯಲ್ಲಿರುವ ವಿದ್ಯಾರ್ಥಿಗಳಿಗೆ ವಿಜ್ಞಾನ ಬಿಂದು ಸಂಸ್ಥೆ ಮಾಕ್ ಪರೀಕ್ಷೆ ಆಯೋಜಿಸಿದೆ. ಮುಖ್ಯ ಪರೀಕ್ಷೆಯ ರೂಪುರೇಷೆಗಳನ್ನು ತಿಳಿಸಿಕೊಡಲು ನವೋದಯ ಪರೀಕ್ಷೆ ಮಾದರಿಯಲ್ಲಿ ಅಣಕು ಪರೀಕ್ಷೆ ನಡೆಯಲಿದೆ. ಪ್ರವೇಶಾಕಾಂಕ್ಷಿಗಳ ಪರೀಕ್ಷಾ ತಯಾರಿ, ಕಲಿಕಾ ಸಾಮರ್ಥ್ಯಗಳ ಸ್ವಯಂ ಮೌಲ್ಯಮಾಪನ, ಪರೀಕ್ಷೆಯ ಸಂಪೂರ್ಣ ಮಾಹಿತಿಗೆ ಮಾಕ್ ಪರೀಕ್ಷೆ ಅನುಕೂಲವಾಗಲಿದೆ. ಕೇಂದ್ರ ಸರ್ಕಾರದ ನವೋದಯ ವಿದ್ಯಾಲಯ ಸಮಿತಿ ರೂಪಿತ ಅಂಕಗಣಿತ, ಬುದ್ಧಿ ಸಾಮರ್ಥ್ಯ ಪರೀಕ್ಷೆ, ಭಾಷೆ ಕುರಿತು 100 ಅಂಕಗಳಿಗೆ ನವೆಂಬರ್ 16ರಂದು ಭಾನುವಾರ ಬೆಳಿಗ್ಗೆ 9.30ರಿಂದ 11.30ರವರೆಗೆ ವಿಜ್ಞಾನ ಬಿಂದು ಕಚೇರಿಯಲ್ಲಿ ಮಾಕ್ ಪರೀಕ್ಷೆ ನಡೆಯಲಿದೆ. ನವೆಂಬರ್ 12ರ ಒಳಗೆ ವಿದ್ಯಾರ್ಥಿಯ ಹೆಸರು, ತರಗತಿ, ಶಾಲೆ, ಕಲಿಕಾ ಮಾಧ್ಯಮ ವಿವರಗಳೊಂದಿಗೆ 8660587150 ವಾಟ್ಸಾಪ್…
ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಖಳನಟ, ಪೋಷಕ ನಟ ಹರೀಶ್ ರಾಯ್ ಇಂದು ಬೆಳಿಗ್ಗೆ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬೆಳಗ್ಗೆ 11 ಗಂಟೆ ಸುಮಾರಿಗೆ ಅವರು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಹರೀಶ್ ಅವರು ಇಬ್ಬರು ಮಕ್ಕಳು, ಪತ್ನಿಯನ್ನು ಅಗಲಿದ್ದಾರೆ. ಎರಡು ದಶಕಗಳಿಗಿಂತ ಹೆಚ್ಚು ಕಾಲ ನಟನೆಯಲ್ಲಿ ಅವರು ತೊಡಗಿಕೊಂಡಿದ್ದರು. ಕೆಜಿಎಫ್ ಸಿನಿಮಾದ ಬಳಿಕ ಅವರು ಕೆಜಿಎಫ್ ಚಾಚಾ ಎಂದೇ ಖ್ಯಾತಿ ಪಡೆದಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೀದರ್: ಜಿಲ್ಲೆಯ ನಿವೇಶನದ ಡಿಜಿಟಲ್ ಖಾತಾ ಮಾಡಿಕೊಡಲು 12 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯೊಬ್ಬರು ಬುಧವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಔರಾದ ತಾಲ್ಲೂಕಿನ ಧೂಪತಮಹಾಗಾಂವ ಗ್ರಾಮ ಪಂಚಾಯತ್ ಪಿಡಿಒ ಅನಿತಾ ರಾಠೋಡ್ ಸಿಕ್ಕಿ ಬಿದ್ದ ಅಧಿಕಾರಿ. ಧೂಪತಮಹಾಗಾಂವ ಗ್ರಾ.ಪಂ. ವ್ಯಾಪ್ತಿಯಲ್ಲಿ ಬರುವ ಜೀರ್ಗಾ(ಬಿ) ಗ್ರಾಮದ ರಾಜಕುಮಾರ್ ಪಾಟೀಲ್ ಎಂಬುವವರ ನಿವೇಶನದ ಡಿಜಿಟಲ್ ಖಾತಾ ಮಾಡಿಕೊಡಲು ಪಿಡಿಒ ಅನಿತಾ ಅವರು 12 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ರಾಜಕುಮಾರ್ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಪಿಡಿಒ ಅನಿತಾ ರಾಠೋಡ್ ಹಾಗೂ ಅವರ ಪತಿ ದಯಾನಂದ ರಾಠೋಡ್ ಬುಧವಾರ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಡಿಎಸ್ಪಿ ಹಣಮಂತರಾವ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಸಿಬ್ಬಂದಿ, ಅಧಿಕಾರಿಗಳು ಭಾಗವಹಿಸಿದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ಕುಣಿಗಲ್: ಬೈಕ್ ಗೆ ಕಾರು ಡಿಕ್ಕಿಯಾಗಿ ದಂಪತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ರಾಷ್ಟ್ರೀಯ ಹೆದ್ದಾರಿ ಸಿದ್ದಾಪುರ ಗೇಟ್ ಬಳಿ ಸಂಭವಿಸಿದೆ. ತಾಲ್ಲೂಕಿನ ಹುಲಿಯೂರುದುರ್ಗ ಹೋಬಳಿಯ ಹಳೆವೂರು ಗ್ರಾಮದ ಶಿವಶಂಕರ್ (63), ಪತ್ನಿ ಸುನಂದಾ (52) ಮೃತಪಟ್ಟವರು. ದಂಪತಿ ಬೈಕ್ ನಲ್ಲಿ ಎಡೆಯೂರಿಗೆ ಬಂದು ಹಿಂತಿರುಗುವಾಗ ಹಾಸನ ಕಡೆಯಿಂದ ಬಂದ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಮೃತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಸರಗೂರು: ಜಯಲಕ್ಷ್ಮೀಪುರ ಗ್ರಾಮಸ್ಥರು ಒತ್ತಾಯದ ಮೇರೆಗೆ ತಾಲೂಕಿನಿಂದ ಜಯಲಕ್ಷೀಪುರ ಗ್ರಾಮಕ್ಕೆ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಿಕೊಟ್ಟ ತಾಲೂಕಿನ ಶಾಸಕರಾದ ಅನಿಲ್ ಚಿಕ್ಕಮಾದು ಮತ್ತು ಸಾರಿಗೆ ಅಧಿಕಾರಿಗಳಿಗೆ ಗ್ರಾಮಸ್ಥರು, ಮುಖಂಡರು ಅಭಿನಂದನೆ ಸಲ್ಲಿಸಿದರು. ನಂತರ ಮಾತನಾಡಿದ ಗ್ರಾಮದ ಮುಖಂಡ ವೆಂಕಟರಾಮು, ತಾಲೂಕಿನ ದೊಡ್ಡ ಗ್ರಾಮಗಳ ಪೈಕಿ ಒಂದಾದ ಜಯಲಕ್ಷೀಪುರಗೆ ಸಾರಿಗೆ ಬಸ್ ವ್ಯವಸ್ಥೆಯೇ ಇರಲಿಲ್ಲ. ಇದರಿಂದ ಗ್ರಾಮದಿಂದ ವಿವಿಧ ಪಟ್ಟಣಕ್ಕೆ ಹೋಗುವಂತಹ ಸಾರ್ವಜನಿಕರು, ವಿದ್ಯಾಭ್ಯಾಸಕ್ಕೆ ಹೋಗುವಂತಹ ವಿದ್ಯಾರ್ಥಿಗಳಿಗೆ ಅನಾನೂಕೂಲ ಉಂಟಾಗಿತ್ತು. ನಮ್ಮ ಗ್ರಾಮದಿಂದ ಮೂಗತನಮೂಲೆ ವರಗೂ ಮೂರರಿಂದ ನಾಲ್ಕು ಕಿ.ಮೀ. ನಡೆದುಕೊಂಡು ಹೋಗುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಆ ಹಿನ್ನೆಲೆಯಲ್ಲಿ ಗ್ರಾಮಸ್ಥರು ಗ್ರಾಮಕ್ಕೆ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಿಕೊಡುವಂತೆ ಹಲವು ವರ್ಷಗಳಿಂದ ಮನವಿ ಮಾಡಿದ್ದರೂ ಕ್ರಮ ಕೈಗೊಂಡಿರಲಿಲ್ಲ. ನಮ್ಮ ತಾಲೂಕಿನ ಶಾಸಕ ಅನಿಲ್ ಚಿಕ್ಕಮಾದು ನಮ್ಮ ಮನವಿ ಸ್ಪಂದಿಸಿ ಬಸ್ ವ್ಯವಸ್ಥೆ ಕಲ್ಪಿಸಿದ್ದಾರೆ ಎಂದರು. ನಮ್ಮ ಗ್ರಾಮಗಳು ಕಾಡಂಚಿನ ಭಾಗದಲ್ಲಿರುವ ಗ್ರಾಮಗಳಿಗೆ ಬಸ್ ವ್ಯವಸ್ಥೆ ಇಲ್ಲದೆ ತುಂಬಾ ಸಮಸ್ಯೆ ಉಂಟಾಗಿತ್ತು. ನಾವುಗಳು ಸಾರಿಗೆ ಅಧಿಕಾರಿಗಳಿಗೆ…
ಶಿರಾ: ಸಮಾಜ ಕಲ್ಯಾಣ ಇಲಾಖಾವತಿಯಿಂದ ಅನುಷ್ಠಾನ ಮಾಡಲಾಗುತ್ತಿರುವ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಕಾರ್ಯಕ್ರಮದಡಿ ವಿದ್ಯಾರ್ಥಿವೇತನ ಕೋರಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಆಧಾರ್ ಆಧಾರಿತ Biometric e-authentica- tion ಪ್ರಕ್ರಿಯೆಗೆ ಒಳಪಡಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್-1) ವಿ.ಕೆ.ಬಡಿಗೇರ ತಿಳಿಸಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯಿಂದ ಅನುಷ್ಠಾನ ಮಾಡಲಾಗುತ್ತಿರುವ ಮೆಟ್ರಿಕ್ ಪೂರ್ವ ಮತ್ತು ಮೆಟಿಕ್ಸ್ ನಂತರದ ವಿದ್ಯಾರ್ಥಿವೇತನ ಕಾರ್ಯಕ್ರಮಗಳ ಸಂಬಂಧ ಯಾವುದೇ ಅರ್ಹ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ವಂಚಿತರಾಗಬಾರದೆಂಬ ಉದ್ದೇಶದಿಂದ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಅಭಿಯಾನ ಕಾರ್ಯಕ್ರಮವನ್ನು ಆಯೋಜಿಸಲಾಗಿರುತ್ತದೆ. 2025–26 ನೇ ಸಾಲಿನಲ್ಲಿ ಕೇಂದ್ರ ಪುರಸ್ಕೃತ ವಿದ್ಯಾರ್ಥಿವೇತನ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರದ ಪಾಲಿನ ಶೇ.60 ರಷ್ಟು ಮೊತ್ತದ ವಿದ್ಯಾರ್ಥಿವೇತನ ಪಡೆಯಲು ಎಲ್ಲಾ ಅರ್ಹ ವಿದ್ಯಾರ್ಥಿಗಳ ಆಧಾ ಆಧಾರಿತ ಬಯೋಮೆಟ್ರಿಕ್ ಇ–ದೃಢೀಕರಣ ಕಡ್ಡಾಯವಾಗಿದ್ದು, ಸದರಿ ಪ್ರಗತಿಯು ಕುಂಠಿತವಾಗಿದ್ದು, ಒಂದು ವೇಳೆ ಅರ್ಹ ವಿದ್ಯಾರ್ಥಿಯು ಬಯೋಮೆಟ್ರಿಕ್ ಇ–ದೃಢೀಕರಣಕ್ಕೆ ಒಳಪಡದೇ ಇದ್ದಲ್ಲಿ ಕೇಂದ್ರದ ಪಾಲಿನ ಶೇ.60 ರಷ್ಟು ಮೊತ್ತದಿಂದ…
ತುಮಕೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಮಕ್ಕಳು ಮತ್ತು ಯುವಜನರಲ್ಲಿರುವ ಕಲಾ ಪ್ರತಿಭೆಯನ್ನು ಗುರುತಿಸಿ ಅವರಿಗೆ ಉತ್ತೇಜನ ನೀಡುವ ಹಾಗೂ ಕಲಾ ನೈಪುಣ್ಯವನ್ನು ಪ್ರೋತ್ಸಾಹಿಸಲು ಕಲಾಪ್ರತಿಭೋತ್ಸವದಡಿ ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ನವೆಂಬರ್ 5 ಮತ್ತು 6ರಂದು ಆಯೋಜಿಸಲಾಗಿದ್ದ ಸ್ಪರ್ಧಾ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ. ಮುಂದಿನ ಸ್ಪರ್ಧಾ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು.ಮಿರ್ಜಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಚೇಳೂರು: ಚೇಳೂರಿನ ಶ್ರೀ ಗುರುಸಂಗಮೇಶ್ವರಸ್ವಾಮಿ ಅವರ ಲಕ್ಷದೀಪೋತ್ಸವ ನವೆಂಬರ್ 10 ರಂದು ನಡೆಯಲಿದೆ. ಅಂದು ದೇವಾಲಯದಲ್ಲಿ ಸ್ವಾಮಿಗೆ ವಿಶೇಷ ಪೂಜೆ, ಅಲಂಕಾರ, ರುದ್ರಾಭಿಷೇಕ ನಡೆದು ಸಂಜೆ ಲಕ್ಷದೀಪೋತ್ಸವ ಉದ್ಘಾಟನಾ ಕಾರ್ಯಕ್ರಮಕ್ಕೆ ಗವಿಮಠದ ಚಂದ್ರಶೇಖರಸ್ವಾಮೀಜಿ, ಬೆಳ್ಳಾವಿಯ ಕಾರದಮಠದ ಕಾರದವೀರಬಸವ ಸ್ವಾಮೀಜಿ ತೆವೆಡೆಹಳ್ಳಿ ಗದ್ದಿಗೆಮಠದ ಗೋಸಲಚನ್ನಬಸವೇಶ್ವರ ಸ್ವಾಮೀಜಿ, ದೇವಸ್ಥಾನದ ಸೇವಾ ಸಮಿತಿಯ ಅಧ್ಯಕ್ಷ ಈಶ್ವರಪ್ಪ ಕೇಂದ್ರ ಸಚಿವ ವಿ. ಸೋಮಣ್ಣ,ಶಾಸಕ ಎಸ್.ಆರ್. ಶ್ರೀನಿವಾಸ್, ಹಾಲು ಒಕ್ಕೂಟದ ನಿರ್ದೇಶಕಿ ಭಾರತಿಶ್ರೀನಿವಾಸ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸುಜಾತ, ಮುಖಂಡರಾದ ಪಟೇಲ್ ಟೇಶ್, ದಿಲೀಪ್ ಕುಮಾರ್, ನಾಗರಾಜು ಹಾಗೂ ಇತರರು ಭಾಗವಹಿ ಸುವರು ದೀಪೋತ್ಸವಕ್ಕೆ ಬಂದಂತಹ ಭಕ್ತಾದಿಗಳಿಗೆ ಸೇವಾ ಸಮಿತಿಯೊಂದಿಗೆ ನಂಜುಂಡಪ್ಪ, ಸುನಂದಮ್ಮ ಇವರಿಂದ ದಾಸೋಹವನ್ನು ಏರ್ಪಡಿಸಲಾಗಿದೆ ಎಂದು ದೇವಾಲಯದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ತುಮಕೂರು: ಸಮಾಜ ಕಲ್ಯಾಣ ಇಲಾಖೆಯಿಂದ ಅನುಷ್ಠಾನ ಮಾಡಲಾಗುತ್ತಿರುವ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರದ ಪಾಲಿನ ಶೇ.60ರಷ್ಟು ಮೊತ್ತದ ವಿದ್ಯಾರ್ಥಿ ವೇತನ ಪಡೆಯಲು ಎಲ್ಲಾ ಅರ್ಹ ವಿದ್ಯಾರ್ಥಿಗಳ ಆಧಾ ಆಧಾರಿತ ಬಯೋಮೆಟ್ರಿಕ್ ಇ–ದೃಢೀಕರಣ ಕಡ್ಡಾಯ ಎಂದು ತುಮಕೂರು ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಹ ವಿದ್ಯಾರ್ಥಿಗಳು ಬಯೋಮೆಟ್ರಿಕ್ ಇ–ದೃಢೀಕರಣಕ್ಕೆ ಒಳಪಡದೇ ಇದ್ದಲ್ಲಿ ಕೇಂದ್ರದ ಪಾಲಿನ ಶೇ.60ರಷ್ಟು ಮೊತ್ತ ಪಡೆಯುವಲ್ಲಿ ವಂಚಿತರಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ತುಮಕೂರು ತಾಲ್ಲೂಕಿನ ಶಾಲೆ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಗಳು ನವೆಂಬರ್ 15ರೊಳಗಾಗಿ ಸಹಾಯಕ ನಿರ್ದೇಶಕ(ಗ್ರೇಡ್–1)ರ ಕಚೇರಿ, ತುಮಕೂರು ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಕಡ್ಡಾಯವಾಗಿ ಬಯೋಮೆಟ್ರಿಕ್ ಇ–ದೃಢೀಕರಣವನ್ನು ಮಾಡಿಸಬೇಕೆಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC