Author: admin

2022-23ನೇ ಸಾಲಿಗೆ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಮಂಜೂರಾತಿಗಾಗಿ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ವೆಬ್‍ ಸೈಟ್ ವಿಳಾಸ https://ssp.karnataka.gov.in ಹಾಗೂ ತಮ್ಮ ವ್ಯಾಪ್ತಿಯಲ್ಲಿ ಬರುವ ತಾಲ್ಲೂಕಿನ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಹಾಗೂ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಂಪರ್ಕಿಸಬಹುದು ಎಂದು ಬೆಳಗಾವಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಉಡುಪಿ: ಹಿಂದೂಗಳ ಬಗ್ಗೆ ಹಗುರವಾಗಿ ಮಾತನಾಡಿದರೆ ದೊಡ್ಡವರಾಗುತ್ತಾರೆ ಎಂದು ಅಂದುಕೊಂಡರೆ ಅದು ಅವರ ಭ್ರಮೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಸತೀಶ್‌ ಜಾರಕಿಹೊಳಿ ವಿರುದ್ಧ ಕಿಡಿಕಾರಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ಅವರು ಹಿಂದೂಗಳಿಗೆ ಅಪಮಾನ ಮಾಡುವ ರೀತಿ ಮಾತನಾಡಿರುವುದು ಖಂಡನೀಯ. ಕಾಂಗ್ರೆಸ್ ಕೇವಲ ಖಂಡನೆ ಮಾಡಿದರೆ ಸಾಕಾಗುವುದಿಲ್ಲ. ಸತೀಶ್ ಜಾರಕಿಹೊಳಿ ರಾಜ್ಯದ ಜನರಿಗೆ ಕ್ಷಮಾಪಣೆ ಕೇಳಬೇಕು ಎಂದರು. ಹಗುರವಾಗಿ ಮಾತನಾಡಿದರೆ ದೊಡ್ಡವನಾಗುತ್ತೇನೆ ಎಂದು ಅಂದುಕೊಂಡಿದ್ದರೆ ಅದೊಂದು ಭ್ರಮೆ. ಸತೀಶ್ ಜಾರಕಿಹೊಳಿ ಗೌರವದಿಂದ ನಡೆದುಕೊಳ್ಳಬೇಕು. ಹಿಂದೂಗಳಿಗೆ ಅಪಮಾನವಾಗುವ ಹಾಗೆ ವರ್ತನೆ ಮಾಡಬಾರದು ಎಂದು ಕಿಡಿಕಾರಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷದ ನಾಯಕರ ವಿರುದ್ಧ ಸಿಬಿಐ ತನಿಖೆ ನಡೆಸುವಂತೆ ಕೋರಿ, ಬಹುಕೋಟಿ ವಂಚನೆ ಪ್ರಕರಣದಲ್ಲಿ ಜೈಲು ಸೇರಿರುವ ಸುಕೇಶ್ ಚಂದ್ರಶೇಖರ್ ಅವರು, , ಲೆಫ್ಟಿನೆಂಟ್ ಗರ್ವನರ್‌ ಗೆ ಪತ್ರ ಬರೆದಿದ್ದಾರೆ. ಈ ಕುರಿತು ಸುಕೇಶ್ ಚಂದ್ರಶೇಖರ್ ಪರ ವಕೀಲರು ಮಾಹಿತಿ ನೀಡಿದ್ದು, ವಂಚನೆ ಮತ್ತು ಭ್ರಷ್ಟಾಚಾರಕ್ಕೆ ಸಂಬಂಧಿಸಿ ತನಿಖೆ ನಡೆಸಲು ಸುಕೇಶ್ ಒತ್ತಾಯಿಸಿದ್ದಾರೆ ಎಂದು ತಿಳಿಸಿದ್ದಾರೆ. ಈ ಮೊದಲು ಲೆಫ್ಟಿನೆಂಟ್ ಗವರ್ನರ್‌ ಅವರಿಗೆ ಬರೆದಿದ್ದ ಪತ್ರ ಮಾಧ್ಯಮಗಳಲ್ಲಿ ಸೋರಿಕೆಯಾದ ಬಳಿಕ ದೆಹಲಿಯ ಮಾಂಡೊಲಿ ಜೈಲಿನಲ್ಲಿರುವ ತಮಗೆ ಬಹಳಷ್ಟು ಬೆದರಿಕೆ ಬಂದಿದೆ. ಎಎಪಿ ನಾಯಕ ಸತ್ಯೇಂದರ್ ಜೈನ್ ಅವರು ಜೈಲು ಅಧಿಕಾರಿಗಳ ಮೂಲಕ ಬೆದರಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ತುರುವೇಕೆರೆ: ತಾಲೂಕಿನ ದಂಡಿನ ಶಿವರ ಶಿವರ ಪೊಲೀಸ್ ಠಾಣಾ ವ್ಯಾಪ್ತಿಯ ಸಣ್ಣಯ್ಯನ ಪಾಳ್ಯದ ಬಳಿಯ ಕಾಲುವೆಯಲ್ಲಿ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಹತ್ಯೆ ನಡೆದಿದೆ ಎಂದು ಮೃತ ಮಹಿಳೆಯ ಪತಿ ಆರೋಪಿಸಿದ್ದಾರೆ. ಕುರುಬರಹಳ್ಳಿ ಗ್ರಾಮದ ರವಿಕುಮಾರ್ ಅವರ ಪತ್ನಿ ಆಶಾ(29) ಮೃತ ಮಹಿಳೆ ಎಂದು ಗುರುತಿಸಲಾಗಿದ್ದು, ಈಕೆಗೆ ಇಬ್ಬರು ಮಕ್ಕಳಿದ್ದಾರೆ. ತೋಟದಲ್ಲಿ ಮಹಿಳೆಯನ್ನು ಹತ್ಯೆ ಮಾಡಿ ಶವವನ್ನು ಸಣ್ಣಯ್ಯನ ಪಾಳ್ಯದ ಬಳಿ ಇರುವ ಕಾಲುವೆಗೆ ಎಸೆದು ಹೋಗಲಾಗಿದೆ ಎಂದು ಶಂಕಿಸಲಾಗಿದ್ದು, ಆರೋಪಿಯ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಹತ್ಯೆಗೆ ನಿಖರವಾದ ಕಾರಣಗಳು ತಿಳಿದು ಬಂದಿಲ್ಲ ಆದರೆ, ಅಕ್ರಮ ಸಂಬಂಧ ಹಿನ್ನೆಲೆಯಲ್ಲಿ ಈ ಹತ್ಯೆ ನಡೆಸಿದೆ ಎಂದು ಮೃತ ಮಹಿಳೆಯ ಪತಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಕುಣಿಗಲ್ ಡಿ ವೈ ಎಸ್ ಪಿ ರಮೇಶ್, ತುರುವೇಕೆರೆ ಸರ್ಕಲ್ ಇನ್ಸ್ ಪೆಕ್ಟರ್ ಗೋಪಾಲ ನಾಯಕ್ , ದಂಡಿನಶಿವರ ಪೊಲೀಸ್ ಠಾಣಾ ಸಬ್ ಇನ್ಸ್ಪೆಕ್ಟರ್ ರಾಮಚಂದ್ರಪ್ಪ, ಎಎಸ್ ಐ ಗಂಗಣ್ಣ …

Read More

ಚೆನ್ನೈ-ಬೆಂಗಳೂರು- ಮೈಸೂರು ನಡುವೆ ಇದೇ ವಾರ ಸಂಚಾರ ಆರಂಭಿಸಲಿರುವ ವಂದೇ ಭಾರತ್ ರೈಲು ಸೋಮವಾರ ಪ್ರಾಯೋಗಿಕ ಸಂಚಾರ ಆರಂಭಿಸಿದೆ. ಚೆನ್ನೈನ ಎಂಜಿಆರ್ ರೈಲು ನಿಲ್ದಾಣದಿಂದ ಸೋಮವಾರ ಮುಂಜಾನೆ 5.50ಕ್ಕೆ ಸೆಮಿ ಹೈಸ್ಪೀಡ್ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಆರಂಭಿಸಿತು. ಚೆನ್ನೈ ಮತ್ತು ಮೈಸೂರು ನಡುವಿನ 483 ಕಿ.ಮೀ. ದೂರದ ರೈಲು ಸಂಚಾರ ನವೆಂಬರ್ 11ರಂದು ಉದ್ಘಾಟನೆಗೊಳ್ಳಲಿದ್ದು, ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ವಂದೇ ಭಾರತ್ ಮತ್ತು ವಂದೇ ಮಾತರಂ ರೈಲು ಶೀಘ್ರದಲ್ಲೇ 25 ಹೊಸ ರೈಲುಗಳು ಸಂಚಾರ ಆರಂಭಿಸಲಿದ್ದು, ಮೊದಲ ರೈಲು ಮೈಸೂರು-ಚೆನ್ನೈ ನಡುವೆ ಸಂಚರಿಸಲಿವೆ. ಇದು ದಕ್ಷಿಣ ಭಾರತದಕ್ಕೆ ಒಲಿದ ಅತ್ಯಂತ ಕಡಿಮೆ ವೇಗದ ರೈಲು ಎಂದು ಹೇಳಲಾಗಿದೆ. ಇದರ ವೇಗ 120 ಕಿ.ಮೀ.ನಿಂದ ಗರಿಷ್ಠ 160 ಕಿ.ಮೀ. ಎಂದು ಹೇಳಲಾಗಿದೆ. ವಂದೇ ಮಾತರಂ ರೈಲುಗಳು ಗರಿಷ್ಠ 180 ಕಿ.ಮೀ. ವೇಗವಾಗಿ ಸಂಚರಿಸಲಿವೆ. ಈಗಾಗಲೇ ಹಿಮಾಚಲ ಪ್ರದೇಶ ಹಾಗೂ ಗುಜರಾತ್‌ನಲ್ಲಿ ಕಾರ್ಯನಿರ್ವಹಿಸುತ್ತಿದೆ ಮತ್ತು ಅತ್ಯಾಧುನಿಕ ಸುರಕ್ಷತಾ ವೈಶಿಷ್ಯತೆಗಳನ್ನು ಹೊಂದಿದೆ.…

Read More

ನಾಯಿಗೆ ಊಟ ಕೊಡಲಿಲ್ಲ ಅಂತ 21 ವರ್ಷದ ಸಂಬಂಧಿಯನ್ನೇ ವ್ಯಕ್ತಿಯೊಬ್ಬ ಕೊಂದ ಘಟನೆ ಕೇರಳದ ಪಾಲಕ್ಕಾಡ್ ನಲ್ಲಿ ನಡೆದಿದೆ. ಪಾಲಕ್ಕಾಡ್ ಜಿಲ್ಲೆಯ ಮುಲಯಂಕಾವು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, 21 ವರ್ಷದ ಹರ್ಷದ್ ಮೃತಪಟ್ಟ ದುರ್ದೈವಿ. ಸಂಬಂಧ ಹಕೀಂ (27) ಕೊಲೆ ಮಾಡಿ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಹೊಡೆದು ಹಲ್ಲೆ ಮಾಡಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದ ಹಕೀಂ ಹಾಗೂ ಸ್ನೇಹಿತರು ಆಸ್ಪತ್ರೆಗೆ ದಾಖಲಿಸಿದ್ದು, ಮಹಡಿ ಮೇಲಿಂದ ಬಿದ್ದಿದ್ದಾನೆ. ನಾವಿಬ್ಬರು ಕೇಬಲ್ ವರ್ಕ್ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಹೇಳಿದ್ದರು. ಹರ್ಷದ್ ಚಿಕಿತ್ಸೆಗೆ ಮುಂದಾದ ವೈದ್ಯರು ಹಲ್ಲೆ ನಡೆದಿದ್ದರಿಂದ ಮೂಳೆ ಮುರಿದಿದ್ದರಿಂದ ದೇಹದೊಳಗೆ ರಕ್ತಸ್ರಾವ ಆಗಿ ಮೃತಪಟ್ಟಿದ್ದಾನೆ ಎಂದು ವೈದ್ಯರು ದೃಢಪಡಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಹರ್ಷದ್ ಮೃತಪಟ್ಟಿದ್ದಾನೆ. ನಂತರ ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ನವೆಂಬರ್ 11 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕೆಐಎಬಿಯಲ್ಲಿ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಮಾಡಲಿದ್ದು, ಸಮಾವೇಶದಲ್ಲಿ 4 ರಿಂದ 5ಲಕ್ಷ ಜನರು ಸೇರುವ ನಿರೀಕ್ಷೆ ಇದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದರು. ನ.11 ರಂದು ಸಮಾವೇಶ ನಡೆಯುವ ಸ್ಥಳದಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಪರಿಶೀಲನೆ ನಡೆಸಿದರು. ಡಿಸಿಪಿ ಅನೂಪ್ ಶೆಟ್ಟಿ, ಬೆಂಗಳೂರುನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಸಾಥ್ ನೀಡಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ನ.11ರಂದು ಮೋದಿ ಪ್ರವಾಸ ಹಿನ್ನೆಲೆ ಎಲ್ಲಾ ವ್ಯವಸ್ಥೆ ಪರಿಶೀಲನೆ ನಡೆಸಿದ್ದೇನೆ. ಪ್ರಧಾನಿ ಮೋದಿ ಕೆಂಪೇಗೌಢ ಪ್ರತಿಮೆ ಉದ್ಘಾಟಿಸಲಿದ್ದಾರೆ. ಸಮಾವೇಶಕ್ಕೆ 4ರಿಂದ 5 ಲಕ್ಷ ಜನ ಸೇರುವ ನಿರೀಕ್ಷೆ. ಇದೆ. ಟ್ರಾಫಿಕ್ ಸೇರಿ ಯಾವುದೇ ಸಮಸ್ಯೆ ಆಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತದೆ. ಭದ್ರತೆಗೆ 4 ಸಾವಿರಕ್ಕೂ ಹೆಚ್ಚು ಪೊಲೀಸರು ನಿಯೋಜನೆ ಮಾಡುತ್ತೇವೆ ಎಂದು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…

Read More

ರಾಹುಗ್ರಸ್ತ ಚಂದ್ರಗ್ರಹಣ ಸಂಭವಿಸಲಿದ್ದು.ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇಗುಲಗಳ ಬಾಗಿಲು ಮುಚ್ಚಿರಲಿದ್ದು ದೇವಸ್ಥಾನಗಳಲ್ಲಿ ಭಕ್ತರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಇದು 2022 ರಲ್ಲಿ ಸಂಭವಿಸುತ್ತಿರುವ ಕಟ್ಟಕಡೆಯ ಗ್ರಹಣವಾಗಿದೆ. ಎರಡು ವಾರದ ಹಿಂದಷ್ಟೇ ಸೂರ್ಯಗ್ರಹಣ ಗೋಚರವಾಗಿತ್ತು. ಮಧ್ಯಾಹ್ನ 2 ಗಂಟೆ 37 ನಿಮಿಷಕ್ಕೆ ಚಂದ್ರ ಗ್ರಹಣ ಆರಂಭವಾಗಲಿದ್ದು, ಸಂಜೆ 4 ಗಂಟೆ 28 ನಿಮಿಷಕ್ಕೆ ಗ್ರಹಣ ಮಧ್ಯಕಾಲ ತಲುಪಲಿದೆ. ಸಂಜೆ 6 ಗಂಟೆ 17 ನಿಮಿಷ ಚಂದ್ರಗ್ರಹಣ ಅಂತ್ಯವಾಗಲಿದೆ. ಕರ್ನಾಟಕದಲ್ಲಿ ಪಾರ್ಶ್ವ ಚಂದ್ರಗ್ರಹಣ ಗೋಚರ ಆಗಲಿದ್ದು, ಇದೇ ಹೊತ್ತಲ್ಲಿ ಬಹುತೇಕ ದೇವಾಲಯಗಳು ಬಂದ್​​​​ ಆಗಲಿವೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಮೈಸೂರಿನ ಚಾಮುಂಡಿಬೆಟ್ಟದ ದೇಗುಲ, ತುಮಕೂರು ಜಿಲ್ಲೆ​ ದೇವರಾಯನದುರ್ಗ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನಕ್ಕೆ ಇಂದು ಮಧ್ಯಾಹ್ನ 1 ಗಂಟೆ ಬಳಿಕ ಭಕ್ತರ ನಿಷೇಧ ಹೇರಲಾಗಿದ್ದು ಕೊರಟಗೆರೆ ತಾಲೂಕಿನ ಗೊರವನಹಳ್ಳಿಯಲ್ಲಿರುವ ಗೊರವನಹಳ್ಳಿ ಮಹಾಲಕ್ಷ್ಮೀ ದೇಗಲವು ಇಂದು ಸಂಜೆ 5ರಿಂದ ನಾಳೆ ಬೆಳಗ್ಗೆ 6.30ರವರೆಗೆ ಬಂದ್ ಆಗಿರಲಿದೆ. ಇಂದು ಸಂಭವಿಸುವ ವರ್ಷದ ಎರಡನೇ ಮತ್ತು ಕೊನೆಯ ಚಂದ್ರಗ್ರಹಣಕ್ಕೆ ಭಾರತ…

Read More

ಉಡುಪಿ : ಹಿಂದೂ ಪದ ಅಶ್ಲೀಲ ಹೇಳಿಕೆ ನೀಡಿದ ಸತೀಶ್‌ ಜಾರಕಿಹೊಳಿ ಹೇಳಿಕೆ ವಿಚಾರವಾಗಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ ಸತೀಶ್‌ ಜಾರಕಿಹೊಳಿ ಅರೆ ಬರೆ ಓದಿದ ವ್ಯಕ್ತಿ ಎಂದು ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ,ಸತೀಶ್‌ ಜಾರಕಿಹೊಳಿ ಅರೆಬರೆ ಓದಿದ ವ್ಯಕ್ತಿ. ಸತೀಶ್‌ ಆಳವಾದ ಅಧ್ಯಯನ ಮಾಡದೇ ಮಾತಾಡಿದ್ದಾರೆ. ಸತೀಶ್‌ ಅಲ್ವಸಂಖ್ಯಾತರ ಮತ ಬರುತ್ತೆ ಎಂಬ ಭ್ರಮೆಯಲ್ಲಿದ್ದಾರೆ. ಜಾರಕಿಹೊಳಿ ಹೇಳಿಕೆಯಿಂದ ಭಾರತದ ಭಾವನೆಗೆ ಧಕ್ಕೆಯಾಗಿದೆ. ಸತೀಶ್‌ ಹೇಳಿಕೆಯನ್ನು ಖಂಡಿಸಬೇಕು ಈ ಬಗ್ಗೆ ರಾಹುಲ್‌ ಗಾಂಧಿ, ಸಿದ್ದರಾಮಯ್ಯ ಮೌನ ಯಾಕೆ.. ಕಾಂಗ್ರೆಸ್‌ ನಾಯಕರ ಮೌನ ಸತೀಶ್‌ ಮಾತಿಗೆ ಸಮ್ಮತಿನಾ.. ಎಂದು ಪ್ರಶ್ನಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ನವೆಂಬರ್ 4ರ ಶುಕ್ರವಾರ ಸಂಜೆ ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಅಪರಿಚಿತ ವಾಹನದಿಂದ ಡಿಕ್ಕಿ ಹೊಡೆಸಿ ಕೇಂದ್ರ ಗುಪ್ತಚರ ದಳದ ನಿವೃತ್ತ ಅಧಿಕಾರಿಯೋರ್ವರನ್ನು ಹತ್ಯೆಗೈಯ್ಯಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಜಯಲಕ್ಷ್ಮಿಪುರಂ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೇಂದ್ರ ಗುಪ್ತಚರ ದಳದ ನಿವೃತ್ತ ಅಧಿಕಾರಿ ಆರ್.ಎನ್.ಕುಲಕರ್ಣಿ ಕೊಲೆ ಕುರಿತಂತೆ ವಿಶೇಷ ತಂಡ ತನಿಖೆ ನಡೆಸುತ್ತಿತ್ತು. ತನಿಖೆ ವೇಳೆ ಕುಲಕರ್ಣಿಯವರ ಪಕ್ಕದ ಮನೆಯ ಮಾದಪ್ಪ ಮತ್ತು ಆರ್.ಎನ್.ಕುಲಕರ್ಣಿ ನಡುವೆ ಮನೆ ಕಟ್ಟುವ ವಿಚಾರವಾಗಿ ಗಲಾಟೆ ನಡೆದಿತ್ತು ಎಂಬ ಬಗ್ಗೆ ಮಾಹಿತಿ ಲಭಿಸಿತ್ತು. ಈ ಸಂಬಂಧ ವಿಶೇಷ ತಂಡ ತನಿಖೆ ಮುಂದುವರಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಇಬ್ಬರನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮಾದಪ್ಪನ ಪುತ್ರ , ಕಟ್ಟಡ ಕಾಮಗಾರಿಗಳಲ್ಲಿ ತೊಡಗಿಸಿಕೊಂಡಿದ್ದ ಮನು(30) ಹಾಗೂ ಇತನ ಸ್ನೇಹಿತ ವರುಣ್ ಬಂಧಿತ ಆರೋಪಿಗಳು. ಮನುವಿನ ಸ್ನೇಹಿತ ವರುಣ್ ಎಂಬಾತ ಆರ್.ಎನ್ ಕುಲಕರ್ಣಿ ವಾಯುವಿಹಾರಕ್ಕೆ ಬರುತ್ತಿದ್ದ ಸ್ಥಳಗಳನ್ನು ದ್ವಿಚಕ್ರವಾಹನದಲ್ಲಿ ಕರೆತಂದು ತೋರಿಸಿದ್ದು, ಇಬ್ಬರೂ ಸೇರಿ ಕೊಲೆಗೆ ಸ್ಕೆಚ್ ರೂಪಿಸಿದ್ದರು…

Read More