Author: admin

ತಿಪಟೂರು: ರಾಜ್ಯಾದ್ಯಂತ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಾಗಿ ಬೆಳೆಗಾರರು ಕಂಗಾಲಾಗಿದ್ದು, ರಾಗಿಗೆ ಬೆಂಬಲ ಬೆಲೆ ಘೋಷಿಸುವಂತೆ ಸಮಾಜ ಸೇವಕ ಕೆ.ಟಿ.ಶಾಂತಕುಮಾರ್ ಒತ್ತಾಯ ಮಾಡಿದರು. ರಾಜ್ಯದಲ್ಲಿ ಉತ್ತಮ ಮಳೆಯಾಗಿತ್ತು ಬೆಳೆ ಕೈಸೇರುವ ಹಂತದಲ್ಲಿದ್ದಾಗ ಅಕಾಲಿಕ ಮಳೆಯಿಂದಾಗಿ ರಾಗಿ ನೆಲಕಚ್ಚಿ ಮೊಳಕೆ ಒಡೆದು ಅನ್ನದಾತರಿಗೆ ತುಂಬಲಾಗದ ನಷ್ಟವಾಗಿದೆ. ರೈತರು ಬಿತ್ತನೆ ಮಾಡುವಾಗ ಒಂದು ಲಕ್ಷ ಅಧಿಕ ಹಣ ಖರ್ಚಾಗುತ್ತಿದೆ. ಆದರೆ, ಇದೀಗ ರಾಗಿಗೆ ಉತ್ತಮ ಬೆಲೆಯೂ ಇಲ್ಲದಂತ ಪರಿಸ್ಥಿತಿ ಎದುರಾಗಿದೆ. ಹೀಗೆ ಆದರೆ ನಮ್ಮ ಅನ್ನದಾತರು ರಾಗಿ ಬೆಳೆಯಲು ಆಗದೆ ಕೈ ಬಿಡುವ ಪರಿಸ್ಥಿತಿ ನಿರ್ಮಾಣವಾಗುವ ಬೇಕಾಗುತ್ತದೆ ಎಂದು ಶಾಂತಕುಮಾರ್ ಆತಂಕ ವ್ಯಕ್ತಪಡಿಸಿದರು. ಸರ್ಕಾರ ರೈತರ ಬಗ್ಗೆ ಗಮನಹರಿಸಿ ರಾಗಿಗೆ ಕ್ವಿಂಟಲ್ 4,500 ಸಾವಿರ ಬೆಂಬಲ ಬೆಲೆ ಕೊಟ್ಟು, ಅನ್ನದಾತರನ್ನು ಕೈ ಹಿಡಿಯಬೇಕು ಎಂದು ಅವರು ಇದೇ ವೇಳೆ ಸರ್ಕಾರವನ್ನು ಒತ್ತಾಯಿಸಿದರು. ಕಟಾವು ಯಂತ್ರದ ಒಂದೊಂದು ಕಡೆ ಹಣ ಹೆಚ್ಚಳದಿಂದ ಕೇಳುತ್ತಿದ್ದಾರೆ ಒಂದು ಗಂಟೆ ನಿಗದಿತ ಹಣವನ್ನು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಬೇಕು. ಎಂದು ಆಗ್ರಹಿಸಿದರು.…

Read More

ತುಮಕೂರು: ನಗರದ ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗ ಡಾ.ಅಂಬೇಡ್ಕರ್  ರಸ್ತೆಯಲ್ಲಿ  ತುಮಕೂರು ಜಿಲ್ಲೆಯ ದಲಿತ ಸಂಘಟನೆಗಳ ಒಕ್ಕೂಟದ ಸಹಯೋಗದಲ್ಲಿ ಸಂವಿಧಾನ ಸಮರ್ಪಣೆ ದಿನಾಚರಣೆ ನಡೆಯಿತು. ತುಮಕೂರು ತಾಲ್ಲೂಕಿನ ತಹಶೀಲ್ದಾರ್ ಮೋಹನ್ ಕುಮಾರ್ ರವರು  ಸಂವಿಧಾನ ಸಮರ್ಪಣೆ ಪೀಠಿಕೆಗೆ ಪುಷ್ಪ ನಮನ ಸಲ್ಲಿಸುವ ಮೂಲಕ  ಉದ್ಘಾಟಿಸಿ ಸಂವಿಧಾನ ಪೀಠಿಕೆಗೆ ನಮನಗಳನ್ನು ಸಲ್ಲಿಸಿದರು. ದಲಿತ ಸಂಘಟನೆಗಳ ಮುಖಂಡರು ಸಂವಿಧಾನದ ಪೀಠಿಕೆ ಓದುವುದು ಈ ಕಾರ್ಯಕ್ರಮದಲ್ಲಿ ವಿನೂತನವಾಗಿದ್ದು, ಸಂವಿಧಾನ ಉಳಿವಿಗಾಗಿ ಎಲ್ಲರೂ ಹೋರಾಟ ನಡೆಸಲು ಪ್ರಮಾಣ ಮಾಡಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಕೂಟ್ಟ ಶಂಕರ್ ರವರು, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ತಮ್ಮ ಬಾಲ್ಯದ ದಿನಗಳಲ್ಲಿ ಹಲವಾರು ರೀತಿಯಲ್ಲಿ ಶೋಷಣೆ ಅವಮಾನಗಳನ್ನು ಅನುಭವಿಸಿ  ಉನ್ನತ ಮಟ್ಟದ ವಿದ್ಯಾಭ್ಯಾಸ ಮಾಡುವ ಮೂಲಕ ಕರುಡು ಸಮಿತಿಯ ಸದಸ್ಯರಾಗಿ ದೇಶದಲ್ಲಿ ಅಸ್ಪೃಶ್ಯತೆ ಅಸಮಾನತೆ ಹೋಗಲಾಡಿಸಿ ಸಮಾನತೆಯ ದೃಷ್ಟಿಯಿಂದ ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ದೊರೆಯುವ ಸಲುವಾಗಿಯೇ ಸಂವಿಧಾನ ರಚಿಸಿದ್ದಾರೆ ಎಂದರು. ಭಾರತದ ಎಲ್ಲಾ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು…

Read More

ತುಮಕೂರು: ನಗರದ ಜಿಲ್ಲಾ ಉಪ ನೋಂದಣಾಧಿಕಾರಿ ಕಛೇರಿಯ ಮುಂಭಾಗದಲ್ಲಿ ಬೆರಳಚ್ಚುಗಾರರ ಸಂಘದ ಸದಸ್ಯರು ಇಂದು ಸಂವಿಧಾನ ಸಮರ್ಪಣಾ ದಿನಾಚರಣೆಯನ್ನು ಕೇಕ್ ಕತ್ತರಿಸುವ ಮೂಲಕ ಬಹಳ ವಿಜೃಂಭಣೆಯಿಂದ ಆಚರಿಸಿದರು. ಈ ಕಾರ್ಯಕ್ರಮದಲ್ಲಿ ಉಪನೋಂದಣಾಧಿಕಾರಿಗಳಾದ ಸುಭಾಷ್ ಹೋಸಹಳ್ಳಿರವರು ಸಂವಿಧಾನದ ಪೀಠಿಕೆಗೆ ಪುಷ್ಪ ಗುಚ್ಛ ಅರ್ಪಿಸಿ ಮಾತನಾಡಿ,  ಸಂವಿಧಾನ ಪ್ರತಿಯೊಬ್ಬ ನಾಗರಿಕರಿಗೆ ಸಮಾಜದಲ್ಲಿ ಬದುಕುವ  ಹಕ್ಕುಗಳನ್ನು ಕಾಯ್ದಿರಿಸಲಾಗಿದೆ  ಸಮಾಜಲ್ಲಿ ಯಾವುದೇ ರೀತಿಯ ತಾರತಮ್ಯ ಮಾಡದೆ ಪ್ರತಿಯೊಬ್ಬ ಮನುಷ್ಯನ  ಬದುಕಿನ ಹಕ್ಕು  ಸಾಮಾಜಿಕ ಹಕ್ಕು,  ಸಮಾನತೆ ಮತ್ತು ಶೋಷಣೆ ಹಕ್ಕನ್ನು ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿದ್ದಾರೆ ಇದನ್ನು ಪ್ರತಿಯೊಬ್ಬರು  ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಬದುಕುವಂತ ಕೆಲಸವಾಗಬೇಕು ಎಂದರು. ಇದೆ ಸಂದರ್ಭದಲ್ಲಿ  ಬೆರಳಚ್ಚುಗಾರರ ಸಂಘದ ಸದಸ್ಯರು ಸಂವಿಧಾನದ ಪೀಠಿಕೆಯನ್ನು ಓದುವ ಮೂಲಕ ಜಾಗೃತಿ ಮೂಡಿಸಿದರು. ಈ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ದಲಿತ ಮುಖಂಡರಾದ ಜೆ.ಸಿ.ಪಿ. ವೆಂಕಟೇಶ್, ನಟರಾಜ್, ಮೇಳೇಕಲ್ಲಹಳ್ಳಿ ಯೋಗೀಶ್ ಭಾಗವಹಿಸಿದ್ದರು. ಬೆರಳಚ್ಚುಗಾರರ ಸಂಘದ  ಗೌರವಧ್ಯಕ್ಷರಾದ ಪುಟ್ಟರಾಜು, ಅಧ್ಯಕ್ಷರಾದ ಗಂಗಾಧರ್, ಉಪಾಧ್ಯಕ್ಷರಾದ ಮಂಜುಳ,  ಕಾರ್ಯದರ್ಶಿ…

Read More

ಕೊರಟಗೆರೆ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ತುಮಕೂರು ಜಿಲ್ಲೆಯ, ಕೊರಟಗೆರೆ ತಾಲ್ಲೂಕಿನ, ಎಲೆರಾಂಪುರದಲ್ಲಿರುವ ಕುಂಚಿಟಿಗರ ಮಠಕ್ಕೆ ಭೇಟಿ ನೀಡಿ ಶ್ರೀಶ್ರೀಶ್ರೀ ಡಾ.ಹನುಮಂತನಾಥ ಸ್ವಾಮೀಜಿಯ ಆಶೀರ್ವಾದ ಪಡೆದರು. ಈ ವೇಳೆ ಜೆಡಿಎಸ್ ಶಾಸಕರಾದ ಡಿ.ಸಿ.ಗೌರಿಶಂಕರ್ ಹಾಗೂ ವೀರಭದ್ರಯ್ಯ, ತುಮಕೂರು ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿ ಅನಿಲ್ ಕುಮಾರ್ ಮತ್ತು ಮಾಜಿ ಶಾಸಕ ಸುಧಾಕರ್ ಲಾಲ್ ಹಾಗೂ ಮುಖಂಡರಾದ ಅಂದಾನಪ್ಪ ಉಪಸ್ಥಿತರಿದ್ದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ಗುಬ್ಬಿ: ಇಂದು ರಾಜ್ಯಾದ್ಯಂತ ಸಂವಿಧಾನ ದಿನಾಚರಣೆ  ಆಚರಿಸಬೇಕು ಎಂದು ಸರ್ಕಾರದ ಆದೇಶವಿದ್ದರೂ ಗುಬ್ಬಿ ತಾಲೂಕಿನ ಚೇಳೂರು ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ದಿನಾಚರಣೆ ಆಚರಿಸದೇ ನಿರ್ಲಕ್ಷ್ಯ ವಹಿಸಿರುವ ಘಟನೆ ನಡೆದಿದೆ. ಪಂಚಾಯತ್ ನಡೆಯನ್ನು ಖಂಡಿಸಿ ಇಲ್ಲಿನ ದಲಿತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು, ಇಂದು ರಾಷ್ಟ್ರಮಟ್ಟದಲ್ಲಿ ಸಂವಿಧಾನ ದಿನಾಚರಣೆ ಆಚರಿಸುತ್ತಿದ್ದರೂ, ಚೇಳೂರು ಗ್ರಾಮ ಪಂಚಾಯತ್  ಉದ್ದೇಶ ಪೂರ್ವಕವಾಗಿ ಅಂಬೇಡ್ಕರ್ ಜಯಂತಿ ಆಚರಿಸದೇ ಸಂವಿಧಾನ ವಿರೋಧಿ ನೀತಿ ತೋರಿದೆ ಎಂದು ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡರು. ಪ್ರತಿಭಟನೆಯ ಬಿಸಿ ಮುಟ್ಟುತ್ತಿದ್ದಂತ ತಕ್ಷಣವೇ ಎಚ್ಚೆತ್ತುಕೊಂಡ ಗ್ರಾಮ ಪಂಚಾಯತ್ ಅಧ್ಯಕ್ಷ ಮತ್ತು  ಸದಸ್ಯರು, ಸಂವಿಧಾನ ದಿನ ಆಚರಿಸಲು ಮುಂದಾಗಿದ್ದಾರೆ. ಈ ವೇಳೆ ಗ್ರಾಪಂ ಅಭಿವೃದ್ಧಿ ಅಧಿಕಾರಿ ದಲಿತ ಮುಖಂಡರಲ್ಲಿ ಕ್ಷಮೆಯಾಚಿಸಿ, ಇನ್ನು ಮುಂದೆ ಇಂತಹ ಘಟನೆಯಾಗದಂತೆ ನೋಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ತುರುವೇಕೆರೆ: ತಾಲ್ಲೂಕಿನ ಮಾಯಸಂದ್ರ ಹೋಬಳಿಯ ಸೊರವನಹಳ್ಳಿ ಗ್ರಾಮ ಪಂಚಾಯ್ತಿಯ 2ನೇ ಅವಧಿಯ ಅಧ್ಯಕ್ಷರ ಚುನಾವಣೆಯಲ್ಲಿ 16 ಸದಸ್ಯ ಸಂಖ್ಯಾಬಲದಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಜಾಬೀರ್ ಹುಸೇನ್ ರವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು ಈ ಹಿಂದಿನ ಅಧ್ಯಕ್ಷರ ಪತಿ ಕೃಷ್ಣಸ್ವಾಮಿ ನೇತೃತ್ವದಲ್ಲಿ ಅಧ್ಯಕ್ಷಗಾದಿ ಹಿಡಿದಿದ್ದಾರೆ. ಈ ಸಂದರ್ಭದಲ್ಲಿ  ಚುನಾವಣಾಧಿಕಾರಿ ತಹಶೀಲ್ದಾರ್, ನೈಮುನ್ನಿಸ್ಸಾ, ಕಾಂತರಾಜು, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ವಾಸು, ಬಿಲ್. ಕಲೆಕ್ಟರ್ ಬಾಲಕುಮಾರ್ ಪಂಚಾಯ್ತಿಯ ಸದಸ್ಯರು ಹಾಜರಿದ್ದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ಬಳ್ಳಾರಿ: ತೀವ್ರ ಮಳೆಯಿಂದಾಗಿ ಮೆಣಸಿನಕಾಯಿ ಗಿಡಗಳು ಹಾನಿಯಾಗಿದ್ದರಿಂದ ನೊಂದ ರೈತರೊಬ್ಬರು ಕ್ರಿಮಿನಾಶಕ ಸೇವಿಸಿ, ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕುರುಗೋಡು ತಾಲೂಕಿನ ಬಾದನಹಟ್ಟಿ ಗ್ರಾಮದಲ್ಲಿ ನಡೆದಿದೆ‌. ಆತ್ಮಹತ್ಯೆ ಮಾಡಿಕೊಂಡ ರೈತನನ್ನು ಗಾದಿಲಿಂಗ ಅಲಿಯಾಸ್ ದರೂರು (28) ಎಂದು ಗುರುತಿಸಲಾಗಿದೆ. 5 ಎಕರೆ ಹೊಲವನ್ನು ಗುತ್ತಿಗೆ ಪಡೆದು ಮೆಣಸಿನಕಾಯಿ ಬೆಳೆ ಬೆಳೆದಿದ್ದ ಇವರು, ಪ್ರತಿ ಎಕರೆಗೆ 1.10 ಲಕ್ಷ ರೂ ಖರ್ಚು ಮಾಡಿದ್ದರು. ಇದಕ್ಕಾಗಿ 6 ಲಕ್ಷ ಸಾಲ ಮಾಡಿದ್ದರು ಎನ್ನಲಾಗಿದೆ. ಮನೆಯನ್ನು ಅಡಮಾನ ವಿಟ್ಟು 4 ಲಕ್ಷ ಮತ್ತು 100 ಕ್ಕೆ 2 ರೂಪಾಯಿಯ ಬಡ್ಡಿ ದರದಂತೆ 2 ಲಕ್ಷ ಕೈಸಾಲ ಪಡೆದಿದ್ದರು ಎನ್ನಲಾಗಿದೆ. ಈ ಬಾರಿ ಸುರಿದ ಮಳೆಯಿಂದಾಗಿ ಬೆಳೆ ನಾಶವಾಗಿದ್ದು, ಇದರಿಂದ ದಿಕ್ಕು ತೋಚದಂತಾಗಿ ಗುರುವಾರ ಮಧ್ಯಾಹ್ನ ಹೆಂಡತಿ- ಮಕ್ಕಳ ಜತೆ ಹೊಲಕ್ಕೆ ಹೋಗಿದ್ದ ಗಾದಿಲಿಂಗ ಅವರನ್ನು ಅಲ್ಲಿಯೇ ಬಿಟ್ಟು, ಏಕಾಂಗಿಯಾಗಿ ಮನೆಗೆ ಬಂದು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ:…

Read More

ದಾವಣಗೆರೆ: ಸಂವಿಧಾನ ದಿನದ ಅಂಗವಾಗಿ ಇಂದು ದಾವಣಗೆರೆಯಲ್ಲಿ ನಡೆದ ‘ಸಂವಿಧಾನ ದಿನಾಚರಣೆ’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು, ಮಾತನಾಡಿ, ಭಾರತ ಸಂವಿಧಾನದ ಪ್ರಸ್ತಾವನೆಯನ್ನು ಓದಿದರು. ಈ ವೇಳೆ ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ, ಸಂಸದ ಜಿ.ಎಂ ಸಿದ್ದೇಶ್ವರ ಹಾಗೂ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಲಸಿಕೆ ಎರಡನೇ ಡೋಸ್‌ ನೀಡಿಕೆ ಪ್ರಮಾಣ ಹೆಚ್ಚಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದು, ಮೊದಲ ಡೋಸ್‌ ನೀಡಿಕೆ ಸರಾಸರಿ ಶೇ.90ರಷ್ಟು ಇದೆ. ಎರಡನೇ ಡೋಸ್‌ ಶೇ.57 ರಷ್ಟಿದೆ. ಡಿಸೆಂಬರ್‌ ಕೊನೆಯೊಳಗೆ ಎರಡನೇ ಡೋಸ್‌ ಶೇ.70 ಕ್ಕೆ ತಲುಪಬೇಕು ಎಂದು ಅವರು ಸೂಚನೆ ನೀಡಿದರು. ಕೋವಿಡ್‌ ಲಸಿಕೆ ಅಭಿಯಾನದ ಪ್ರಗತಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಜತೆ ಗುರುವಾರ ವಿಡಿಯೊ ಸಂವಾದ ನಡೆಸಿದ ಅವರು, ಎರಡನೇ ಡೋಸ್‌ ಲಸಿಕೆ ಹಾಕುವಲ್ಲಿ ಕಲಬುರಗಿ ಜಿಲ್ಲೆ ಹಿಂದುಳಿದಿದೆ. ಬೆಂಗಳೂರು ನಗರ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ. ಎಲ್ಲ ಜಿಲ್ಲಾಧಿಕಾರಿಗಳು ಒಂದು ಗಂಟೆ ಸಮಯವನ್ನು ಲಸಿಕಾ ಕಾರ್ಯಕ್ರಮದ ಪ್ರಗತಿಗೆ ಮೀಸಲಿಡಬೇಕು ಎಂದರು. ಗ್ರಾಮ ಲೆಕ್ಕಿಗರು, ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳು, ಕಂದಾಯ ನಿರೀಕ್ಷಕರು ಹಾಗೂ ಅಗತ್ಯ ಬಿದ್ದಲ್ಲಿ ತಹಶೀಲ್ದಾರರನ್ನು ಈ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ಜನರೊಂದಿಗೆ ನಿತ್ಯ ವ್ಯವಹರಿಸುವ ಸ್ವಯಂ ಸೇವಕರು, ಶಿಕ್ಷಕರು, ಧಾರ್ಮಿಕ ಗುರುಗಳು, ಶಾಲಾ ಶಿಕ್ಷಕರು, ಸಹಕಾರಿ ಸಂಘಗಳ ಕಾರ್ಯದರ್ಶಿಗಳು, ಬ್ಯಾಂಕಿನ ವ್ಯವಸ್ಥಾಪಕರನ್ನು ಬಳಸಿಕೊಂಡು…

Read More

ಬೆಂಗಳೂರು: ವಿದ್ವಾಂಸ, ಪ್ರವಚನಕಾರ ಕೆ.ಎಸ್.ನಾರಾಯಣಾಚಾರ್ಯ (88) ಅವರು ಶುಕ್ರವಾರ ಮುಂಜಾನೆ 2 ಗಂಟೆಗೆ ನಿಧನರಾಗಿದ್ದಾರೆ. ಅವರು ಕೆಲ ದಿನಗಳಿಂದ ವಯೋಸಹಜ ಅನಾರೋಗ್ಯ ಸಮಸ್ಯೆ ಎದುರಿಸುತ್ತಿದ್ದರು. ನ್ಯೂ ಬಿಇಎಲ್ ರಸ್ತೆಯ ಜಲದರ್ಶಿನಿ ಲೇಔಟ್ ನಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ವಿದ್ವಾಂಸರೂ, ಭಾರತೀಯ ಸಂಸ್ಕೃತಿಯ ಪ್ರವಚನದ ಹರಿಕಾರರೂ ಆಗಿದ್ದ ಕೆ.ಎಸ್.ನಾರಾಯಣಾಚಾರ್ಯ ಅವರು, ರಾಮಾಯಣಸಹಶ್ರೀ, ಗೀತಾರತ್ನನಿಧಿ, ರಾಮಾಯಣ ಪಾತ್ರ ಪ್ರಪಂಚ, ಅಗಸ್ತ್ಯ, ಶ್ರೀಮಾತೇ ಕುಂತಿ ಕರೆದಾಗ, ಚಾಣಕ್ಯ ನೀತಿ ಸೂತ್ರಗಳು, ಶ್ರೀರಾಮಾವತಾರ ಸಂಪೂರ್ಣವಾದಾಗ, ವನದಲ್ಲಿ ಪಾಂಡವರು, ದಶಾವತಾರ ಸೇರಿದಂತೆ 70ಕ್ಕೂ ಹೆಚ್ಚು ಗ್ರಂಥಗಳನ್ನು ರಚಿಸಿದ್ದರು. ಕನ್ನಡದ ವಿವಿಧ ಪತ್ರಿಕೆ ಮತ್ತು ವಾರಪತ್ರಿಕೆಗಳಿಗೆ ಅಂಕಣಕಾರರಾಗಿದ್ದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More