Author: admin

ಬೆಂಗಳೂರು : ಗಡಿ ವಿವಾದದಿಂದ ರಾಜ್ಯಗಳ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಮಹಾಪುಂಡರು ಕರ್ನಾಟಕದ ಬಸ್ ಗಳ ಮೇಲೆ ಮಸಿ ಬಳಿಯುತ್ತಿದ್ದಾರೆ. ಇತ್ತ ಕರ್ನಾಟಕದಲ್ಲಿ ಮಹಾರಾಷ್ಟ್ರ ಭಕ್ತರ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಸುಳ್ಳು ಸುದ್ದಿ ಹರಡಿದೆ. ಈ ಕುರಿತು ಬೆಳಗಾವಿ ಎಸ್ಪಿ ಡಾ. ಸಂಜೀವ್ ಪಾಟೀಲ್ ಸ್ಪಷ್ಟನೆ ನೀಡಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಮಹಾರಾಷ್ಟ್ರದ ಭಕ್ತರ ಮೇಲೆ ಹಲ್ಲೆ ಆಗಿಲ್ಲ. ಈ ರೀತಿಯ ಯಾವುದೇ ಪ್ರಕರಣ ಆಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಮಹಾರಾಷ್ಟ್ರದವರ ಮೇಲೆ ಹಲ್ಲೆ ಆಗಿದೆ ಎಂದು ಸುಳ್ಳು ಸುದ್ದಿ ಹರಡಲಾಗುತ್ತಿದೆ. ಈ ರೀತಿಯ ಯಾವುದೇ ಪ್ರಕರಣ ಆಗಿಲ್ಲ. ಎರಡೂ ಕಡೆ ಯಾವುದೇ ರೀತಿಯ ಅಹಿತಕರ ಘಟನೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು : ಕಂದಾಯ ಇಲಾಖೆಯ ಎಲ್ಲಾ ವರ್ಗಾವಣೆಗಳಿಗೆ ತಡೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇತ್ತೀಚೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ಆರೋಗ್ಯ ಇಲಾಖೆಯ ವರ್ಗಾವಣೆಗಳಿಗೆ ತಡೆ ನೀಡಿ ಆದೇಶ ಹೊರಡಿಸಿದ್ದ ಸರ್ಕಾರ, ಇದೀಗ ಕಂದಾಯ ಇಲಾಖೆಯ ಎಲ್ಲಾ ವರ್ಗಾವಣೆಗಳಿಗೆ ತಡೆ ನೀಡಿದೆ. ಚುನಾವಣಾ ಆಯೋಗ ಮತದಾರರ ಪಟ್ಟಿಯ ನೋಂದಣಿ, ಪರಿಷ್ಕರಣಾ ಕಾರ್ಯ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಸಿಬ್ಬಂದಿಗಳ ವರ್ಗಾವಣೆ ಮಾಡದಂತೆ ಚುನಾವಣಾ ಆಯೋಗ ನಿರ್ದೇಶನ ನೀಡಿದೆ. ಜನವರಿ-2023ರ ಎರಡನೇ ವಾರದವರೆಗೆ ವಿಲೇ ಇಡಲು ಸೂಚನೆ ನೀಡಿದ್ದಾರೆ. ಸರ್ಕಾರದ ಕಾರ್ಯದರ್ಶಿಯವರ ಆಪ್ತ ಕಾರ್ಯದರ್ಶಿ ಕೆ. ಲತಾ ಆದೇಶದಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ನವದೆಹಲಿ: ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ. ಅದೇ ರೀತಿ 5 ರಾಜ್ಯಗಳಲ್ಲಿ ತೆರವಾದ ಸ್ಥಾನಗಳಿಗೆ ನಡೆದ ಉಪಚುನಾವಣೆ ಫಲಿತಾಂಶ ಕೂಡ ಇಂದು ಪ್ರಕಟವಾಗಲಿದೆ. ಗುಜರಾತ್ನಲ್ಲಿ ಸಾಂಪ್ರದಾಯಿಕವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸ್ಪರ್ಧೆ ನಡೆಯುತ್ತಿದ್ದರೂ, ಈ ಬಾರಿ ಆಮ್ ಆದ್ಮಿ ಪಕ್ಷ ಚುನಾವಣಾ ಅಖಾಡಕ್ಕೆ ಪ್ರವೇಶಿಸುವುದರೊಂದಿಗೆ ಇಲ್ಲಿ ತ್ರಿಕೋನ ಸ್ಪರ್ಧೆ ನಡೆದಿದೆ. ಗುಜರಾತ್ ನಲ್ಲಿ ಸತತ 7ನೇ ಬಾರಿಗೆ ಅಧಿಕಾರಕ್ಕೆ ಇರುವ ನಿರೀಕ್ಷೆಯಲ್ಲಿ ಬಿಜೆಪಿ ಇದ್ದು, ಕಾಂಗ್ರೆಸ್ ಮತ್ತು ಆಪ್ ಕೂಡ ಪೈಪೋಟಿ ನೀಡುವ ಸಾಧ್ಯತೆ ಇದೆ. ಚುನಾವಣೋತ್ತರ ಸಮೀಕ್ಷೆಯಲ್ಲಿ ಬಿಜೆಪಿ ಅಧಿಕಾರಕ್ಕೇರುವುದಾಗಿ ಹೇಳಲಾಗಿದೆ. ಹಿಮಾಚಲ ಪ್ರದೇಶದಲ್ಲಿ ನವೆಂಬರ್ 12ರಂದು 68 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆದಿತ್ತು. 1985ರಿಂದ ಪ್ರತಿ ಐದು ವರ್ಷಕ್ಕೊಮ್ಮೆ ಇಲ್ಲಿ ಸರ್ಕಾರ ಬದಲಾಗುತ್ತೆ. ಒಮ್ಮೆ ಬಿಜೆಪಿ, ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೇರುತ್ತಿವೆ. ಈ ಬಾರಿ ಆಡಳಿತಾರೂಢ ಬಿಜೆಪಿಯೇ ಅಧಿಕಾರಕ್ಕೆರಲಿದೆ ಎಂದು ಸಮೀಕ್ಷೆಗಳು ಹೇಳಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಬೆಂಗಳೂರು : ಕಬ್ಬು ಬೆಳೆಗಾರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಪ್ರತಿ ಮೆಟ್ರಿಕ್ ಟನ್ ಗೆ 50 ರೂ.ಹೆಚ್ಚುವರಿ ಪಾವತಿಗೆ ಸರ್ಕಾರ ಆದೇಶ ಹೊರಡಿಸಿದೆ. ವಿವಿಧ ಬೇಡಿಕೆಗಳ ಈಡೇರಿಗೆ ಆಗ್ರಹಿಸಿ ಬಾಗಲಕೋಟೆ ಸೇರಿ ಹಲವು ಕಡೆ ಕಬ್ಬು ಬೆಳೆಗಾರರು ಭಾರೀ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆ ರೈತರ ಹೋರಾಟಕ್ಕೆ ಸ್ಪಂದಿಸಿದ ಸರ್ಕಾರ ನಿರ್ಧಾರ ಕೈಗೊಂಡಿದೆ. ಡಿಸೆಂಬರ್ 5 ರಂದು ಕಬ್ಬು ನಿಯಂತ್ರಣ ಮಂಡಳಿ ಸಭೆಯಲ್ಲಿ ಪ್ರತಿ ಮೆಟ್ರಿಕ್ ಟನ್ ಗೆ 50 ರೂ ಹೆಚ್ಚುವರಿಯಾಗಿ ಪಾವತಿಸಬೇಕು ಎಂದು ಸಕ್ಕರೆ ಸಚಿವ ಶಂಕರ್ ಪಾಟೀಲ್ ಘೋಷಣೆ ಮಾಡಿದ್ದರು. ಇತ್ತೀಚೆಗೆ ವಿಕಾಸಸೌಧದಲ್ಲಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ನೇತೃತ್ವದಲ್ಲಿ ಕಬ್ಬು ನಿಯಂತ್ರಣ ಮಂಡಳಿ ಸಭೆ ನಡೆದಿದ್ದು, ಎಫ್‌ಆರ್ ಪಿ ದರ ಪಾವತಿ ಬಳಿಕ ಪ್ರತಿ ಟನ್ ಗೆ ಹೆಚ್ಚುವರಿಯಾಗಿ 50 ರೂ ನಂತೆ ಒಟ್ಟು 204.47 ಕೋಟಿ ಬಿಡುಗಡೆ ಮಾಡಿದೆ. ಈ ಬಗ್ಗೆ ಆದೇಶ ಹೊರಡಿಸುವಂತೆ ಕಬ್ಬು ಅಭಿವೃದ್ದಿ ಆಯುಕ್ತರಿಗೆ ಸಚಿವರು ಸೂಚನೆ…

Read More

ಖಾನಾಪೂರ ತಾಲೂಕಿನ ವ್ಯಾಪ್ತಿಯ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (ವ್ಹಿ. ಆರ್. ಡಬ್ಲ್ಯೂ.) ಹುದ್ದೆಗಳನ್ನು ಇಲಾಖೆಯ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಮಾಸಿಕ ರೂ.9,000 ಗಳ ಗೌರವ ಧನ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಆಯಾ ಗ್ರಾಮ ಪಂಚಾಯ್ತಿಗಳ ವ್ಯಾಪ್ತಿಯ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಷರತ್ತುಗಳು : ಅರ್ಜಿದಾರರು ವಿಕಲಚೇತನರಿದ್ದು, ಕನಿಷ್ಟ 40% ಅಥವಾ 40% ಕ್ಕಿಂತ ಹೆಚ್ಚಿನ ವಿಕಲತೆ ಪ್ರಮಾಣ ಹೊಂದಿರತಕ್ಕದ್ದು, ಅರ್ಜಿದಾರರು ಆಯಾ ಗ್ರಾಮ ಪಂಚಾಯತಿಗಳ ವ್ಯಾಪ್ತಿಗೊಳಪಟ್ಟಿರಬೇಕು. ಎಸ್.ಎಸ್.ಎಲ್.ಸಿ. ಉತ್ತೀರ್ಣ/ಅನುತ್ತೀರ್ಣರಾಗಿದ್ದು, ಕಂಪ್ಯೂಟರ ಜ್ಞಾನ ಹೊಂದಿರಬೇಕು. ಅದೇ ರೀತಿಯಲ್ಲಿ ಅರ್ಜಿದಾರರು ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 05-01-2023 ಕ್ಕೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 45 ವರ್ಷ ವಯೋಮಿತಿಯಲ್ಲಿರಬೇಕು. ವಿಕಲಚೇತನ ಮಹಿಳಾ, ಪ.ಜಾತಿ ಮತ್ತು ಪ. ಪಂಗಡದ ಅಭ್ಯರ್ಥಿಗಳು ಹಾಗೂ ಇಲಾಖೆಯ ಯೋಜನೆಗಳ ಬಗ್ಗೆ ಜ್ಞಾನ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು… ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…

Read More

ಬೀದರ್: ಗಡಿ ವಿವಾದದ ನಡುವೆಯೇ ಮಹಾರಾಷ್ಟ್ರದ ಗ್ರಾಮವನ್ನು ಕರ್ನಾಟಕಕ್ಕೆ ಸೇರಿಸಬೇಕೆಂದು ಒತ್ತಾಯಿಸಿ ಲಾತುರ್ ಜಿಲ್ಲೆಯ ​ದೇವಣಿ ತಾಲೂಕಿನ ಬೊಂಬಳಿಯ ಜನರು ಆಗ್ರಹಿಸಿದ್ದಾರೆ. ಬೊಂಬಳಿ ಗ್ರಾಮದ ನಿವಾಸಿಗಳು ಗ್ರಾಮದಲ್ಲಿ ಸಭೆ ನಡೆಸಿ, ಮಹಾರಾಷ್ಟ್ರ ಸರ್ಕಾರ ಗ್ರಾಮಗಳ ಅಭಿವೃದ್ಧಿ ಮಾಡದೇ ತಾರತಮ್ಯ ಎಸಗುತ್ತಿದೆ. ಕರ್ನಾಟಕ ಸರ್ಕಾರ ಒಳ್ಳೆಯ ಸವಲತ್ತುಗಳನ್ನು ಮತ್ತು ಯೋಜನೆಗಳನ್ನು ತಂದಿದೆ. ಹಾಗಾಗಿ ನಮ್ಮ ಗ್ರಾಮ ಕರ್ನಾಟಕಕ್ಕೆ ಸೇರಬೇಕು ಎಂದು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಅಲ್ಲದೇ ಗ್ರಾಮ ಪಂಚಾಯತಿ ಚುನಾವಣೆಯನ್ನೂ ಬಹಿಷ್ಕಾರ ಮಾಡಿರುವುದಾಗಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಧಾರವಾಡ: ಜಿಲ್ಲೆಯ ನವಲಗುಂದದ ಅಶೋಕ ಲಾಡ್ಜ್​ನಲ್ಲಿ ಪ್ರೇಮಿಗಳು ಆತ್ಮಹತ್ಯೆ ಶರಣಾಗಿರುವ ಘಟನೆ ನಡೆದಿದೆ. ಕಳೆದ 3 ದಿನಗಳಿಂದ ನವಲಗುಂದದ ಅಶೋಕ ಲಾಡ್ಜ್​ನಲ್ಲಿ ಉಳಿದುಕೊಂಡಿದ್ದ ಜೋಡಿ ನಿನ್ನೆ ಫ್ಯಾನ್​ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದೆ. ಕುಮಾರ (22) ಮತ್ತು ದೀಪಾ (18) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಧಾರವಾಡ ತಾಲೂಕಿನ ನೀರಲಕಟ್ಟಿ ಗ್ರಾಮದ ದೀಪಾ ಎತ್ತಿನಗುಡ್ಡ ಹಾಗೂ ನವಲಗುಂದ ತಾಲೂಕಿನ ಬೆಳವಟಗಿ ಗ್ರಾಮದ ಕುಮಾರ ಇಬ್ಬರು ಪ್ರೀತಿಸುತ್ತಿದ್ದರು. ಕಳೆದ ಮೂರು ದಿನಗಳ ಹಿಂದೆ ಈ ಜೋಡಿ ಪರಿಚಯಸ್ಥರೊಬ್ಬರ ಮೂಲಕ ನವಲಗುಂದದ ಅಶೋಕ ಲಾಡ್ಜ್​ನಲ್ಲಿ ರೂಮ್ ಪಡೆದಿತ್ತು ಎಂದು ತಿಳಿದುಬಂದಿದೆ. ಇನ್ನು ಈ ಪ್ರೇಮಿಗಳ ಆತ್ಮಹತ್ಯೆಗೆ ನಿಖರ ತಿಳಿದುಬಂದಿಲ್ಲ. ವಿಷಯ ತಿಳಿದು ಸ್ಥಳಕ್ಕೆ ನವಲಗುಂದ ಠಾಣೆ ಪೊಲೀಸರ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಡಾ.ಜಿ.ಪರಮೇಶ್ವರನ್ನ ಕಾಂಗ್ರೆಸ್ ಪಕ್ಷದ ವೈರಿಗಳೇ ಸೋಲಿಸ್ತಾರೆ: ಸಿಎಂ ಬೊಮ್ಮಾಯಿ ಕೊರಟಗೆರೆ : ಡಾ.ಜಿ.ಪರಮೇಶ್ವರನ್ನ ಕಾಂಗ್ರೆಸ್ ಪಕ್ಷದವರೇ ವೈರಿಗಳಾಗಿ ಸೋಲಿಸ್ತಾರೇ.. ಅದು ಸ್ವತಃ ಶಾಸಕ ಡಾ.ಜಿ.ಪರಮೇಶ್ವರ್ ಅವರಿಗೂ ಕಟುಸತ್ಯ ಗೊತ್ತಾಗಿದೆ.. ಕೊರಟಗೆರೆ ಕ್ಷೇತ್ರದಲ್ಲಿ 2023ಕ್ಕೆ ಬಿಜೆಪಿ ಪಕ್ಷದ ಅಭ್ಯರ್ಥಿಯೇ ಗೆಲ್ತಾರೇ.. ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಪಕ್ಷಕ್ಕೆ 130ಸೀಟು ಬರುವುದು ಗ್ಯಾರಂಟಿ ಎಂದು ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. ಕೊರಟಗೆರೆ ಪಟ್ಟಣದ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಭಾರತೀಯ ಜನತಾ ಪಾರ್ಟಿ ಕೊರಟಗೆರೆ ಮಂಡಲದಿಂದ ಬುಧವಾರ ಏರ್ಪಡಿಸಲಾಗಿದ್ದ ಜನಸಂಕಲ್ಪ ಯಾತ್ರೆಯ ಸಾರ್ಥಕ ಸೇವೆ-ಯುವ ಸಬಲೀಕರಣ ವೇದಿಕೆಯ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಭಾರತದೇಶದ 20 ರಾಜ್ಯದಲ್ಲಿ ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಅಧಿಕಾರದಲ್ಲಿದೆ. ಕಾಂಗ್ರೆಸ್ ಪಕ್ಷವು ಕೇವಲ 2 ರಾಜ್ಯದಲ್ಲಿ ಅಧಿಕಾರದಲ್ಲಿದೆ. 2023ಕ್ಕೆ ಅದು ಕಳೆದುಕೊಂಡು ಕಾಂಗ್ರೆಸ್ ಮುಕ್ತ ರಾಷ್ಟ್ರ ಆಗಲಿದೆ. ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಪಕ್ಷದ ಸುನಾಮಿ ಎದ್ದು ನಿಂತಿದೆ. ಕಾಂಗ್ರೆಸ್ ಪಕ್ಷವು ಈಗಾಗಲೇ ಕೊಚ್ಚಿಹೋಗಿ ರಾಜಕೀಯ ಅಸ್ತಿತ್ವ ಕಳೆದುಕೊಂಡಿದೆ. 2023ಕ್ಕೆ…

Read More

ಬೆಂಗಳೂರಿನ ಹೆಬ್ಬಾಗಿಲು ಮೆಜೆಸ್ಟಿಕ್ ನಲ್ಲಿರುವ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮಂಗಳವಾರ ಸಂಜೆ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಟರ್ಮಿನಲ್ ಪವರ್ ರೂಮ್ ನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದರಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ. ಬೆಂಕಿ ಕಾಣಿಸಿಕೊಂಡ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಕೂಡಲೇ ಘಟನಾ ಸ್ಥಳದಿಂದ ಪ್ರಯಾಣಿಕರು ಹಾಗೂ ಅಂಗಡಿ ಮಾಲೀಕರನ್ನು ದೂರ ಕಳುಹಿಸಿ ಸಮಯಪ್ರಜ್ಞೆ ತೋರಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಒಗ್ಗರಣೆಗೆ ಬಳಸುವ ಕರಿಬೇವಿನ ಸೊಪ್ಪನ್ನು ಅಡುಗೆಗೆ ಹೊರತುಪಡಿಸಿ ಕೂದಲಿನ ಆರೋಗ್ಯಕ್ಕೂ ಬಳಸುವುದು ಸಾಮಾನ್ಯ. ವಿಶಿಷ್ಟವಾದ ವಾಸನೆ ಮತ್ತು ಕಟು ರುಚಿಯ ಹೊರತಾಗಿ ಕರಿಬೇವಿನ ಎಲೆಗಳು ವಿಟಮಿನ್ ಎ, ವಿಟಮಿನ್ ಬಿ, ವಿಟಮಿನ್ ಸಿ, ವಿಟಮಿನ್ ಬಿ 2, ಕ್ಯಾಲ್ಸಿಯಂ ಮತ್ತು ಕಬ್ಬಿಣದ ಸಮೃದ್ಧ ಮೂಲವಾಗಿದೆ ಎಂದು ತಜ್ಞರು ಹೇಳುತ್ತಾರೆ. ಕರಿಬೇವಿನ ಎಲೆಗಳು ನೋವನ್ನು ನಿವಾರಿಸಲು ಸಹಾಯ ಮಾಡುತ್ತದೆ ಮತ್ತು ಉರಿಯೂತದ ಮತ್ತು ಬ್ಯಾಕ್ಟೀರಿಯಾ ವಿರೋಧಿ ಪರಿಣಾಮಗಳನ್ನು ಹೊಂದಿದೆ. ಹೆಚ್ಚು ವಾಹನ ಚಾಲನೆ ಮಾಡುವವರು ಅಥವಾ ಡೆಸ್ಕ್ ಕೆಲಸ ಮಾಡುವವರು ಖಂಡಿತವಾಗಿ ಕರಿಬೇವಿನ ಸೊಪ್ಪನ್ನು ಸೇವಿಸಬೇಕು ಎಂದು ಆಯುರ್ವೇದ ವೈದ್ಯರು ಹೇಳುತ್ತಾರೆ. ಯಾಕೆಂದರೆ ಈ ಜನರು ಭುಜ ಮತ್ತು ಬೆನ್ನುನೋವಿನ ಸಮಸ್ಯೆಗೆ ಹೆಚ್ಚಾಗಿ ಒಳಗಾಗುತ್ತಾರೆ. ಕರಿಬೇವಿನ ಎಲೆಗಳ ಸೇವನೆಯು ಸರ್ವಿಕಲ್ ಸ್ಪಾಂಡಿಲೋಸಿಸ್ ರೋಗಿಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಕರಿಬೇವಿನ ಎಲೆಗಳು ಉರಿಯೂತ ನಿವಾರಕ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಕರಿಬೇವಿನ ಸಾರವು ಮೆದುಳನ್ನು ರಕ್ಷಿಸುವ ಉತ್ಕರ್ಷಣ ನಿರೋಧಕಗಳಾದ ಗ್ಲುಟಾಥಿಯೋನ್ ಪೆರಾಕ್ಸಿಡೇಸ್ , ಸೂಪರ್‌ಆಕ್ಸೈಡ್…

Read More