Author: admin

ಚಿಕ್ಕಬಳ್ಳಾಪುರ : ವಿವಿಧ ಕಾರಣಗಳಿಗಾಗಿ ಎರಡು ಬಾರಿ ಮುಂದೂಡಿಕೆಯಾಗಿದ್ದ ಬಿಜೆಪಿ ಜನೋತ್ಸವಕ್ಕೆ ಕೊನೆಗೂ ದಿನಾಂಕ ನಿಗದಿಯಾಗಿದ್ದು, ಸೆಪ್ಟೆಂಬರ್ 8ರಂದು ದೊಡ್ಡಬಳ್ಳಾಪುರದಲ್ಲಿ ಬೃಹತ್ ಸಮಾವೇಶ ನಡೆಯಲಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಈ ಸಮಾವೇಶದಲ್ಲಿ ಎರಡರಿಂದ ಮೂರು ಲಕ್ಷ ಜನ ಭಾಗವಹಿಸುವ ನಿರೀಕ್ಷೆಯಿದ್ದು, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿನಡ್ಡಾ ಸೇರಿದಂತೆ ಹಲವು ರಾಷ್ಟ್ರೀಯ ನಾಯಕರು ಪಾಲ್ಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ಜುಲೈ 28ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ನಡೆಯಬೇಕಾಗಿತ್ತು. ಆದರೆ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಹತ್ಯೆಯ ಕಾರಣಕ್ಕೆ ಮುಂದೂಡಿಕೆಯಾಗಿತ್ತು. ಬಳಿಕ ಅಗಸ್ಟ್ 28ರಂದು ಜನೋತ್ಸವಕ್ಕೆ ದಿನಾಂಕ ನಿಗದಿಯಾಗಿತ್ತಾದರೂ ಆ ಸಂದರ್ಭದಲ್ಲಿ ಗೌರಿ – ಗಣೇಶ ಹಬ್ಬ ಸಮೀಪದಲ್ಲಿರುವುದರಿಂದ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಪಾಲ್ಗೊಳ್ಳಲು ಕಷ್ಟವಾಗುತ್ತದೆ ಎಂಬ ಕಾರಣದಿಂದ ಮತ್ತೊಮ್ಮೆ ಮುಂದೂಡಿಕೆ ಮಾಡಲಾಗಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…

Read More

ಮೈಸೂರಿನ ವಿಶ್ವ ಮಾನವ ಸಂಗೀತ ಪ್ರತಿಷ್ಠಾನವು ಉತ್ತರ ಪ್ರದೇಶದ ವಾರಣಾಸಿ ಯ ಬನಾರಸ್ ಹಿಂದೂ ವಿವಿ ಯಲ್ಲಿ ನಾಲ್ವಡಿ ನಮನ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ರಾದ ಹೆಚ್ ಎಲ್ ಯಮುನಾ ತಿಳಿಸಿದ್ದಾರೆ. ಬನಾರಸ್ ವಿವಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಸಹಾಯ ಮಾಡಿದ್ದರು.ಮತ್ತು ಸಹ ಸ್ಥಾಪಕ ರಾಗಿದ್ದಾರೆ ಹಾಗಾಗಿ ಅವರನ್ನು ಸ್ಮರಿಸಲು ಈ ಕಾರ್ಯಕ್ರಮ ಮಾಡುತಿದ್ದು ,ಕನ್ನಡದ ಖ್ಯಾತ ಗಾಯಕ ಲಕ್ಷ್ಮಿರಾಮ್ ರವರು 350 ಜನ ಕಲಾವಿದರನ್ನು ಜಾನಪದ ಅಕಾಡೆಮಿಯ ಸದಸ್ಯರಾದ ಲಕ್ಷ್ಮಿ ದೇವಮ್ಮ ರವರ ಸಹಕಾರ ದೊಂದಿಗೆ ನಾಲ್ವಡಿಗೀತೆ,ಶಿವನಗೀತೆ ದೇಶ ಭಕ್ತಿ ಗೀತೆ.ಕಂಸಾಳೆ. ಕೊಂಬು.ಕಹಳೆ.ಕೊಲಾಟ ಮುಂತಾದವುಗಳನ್ನು ಸಂಯೋಜನೆ ಮಾಡಿದ್ದಾರೆ. ಕಾರ್ಯಕ್ರಮ 26 ಆಗಸ್ಟ್ ಮಧ್ಯಾಹ್ನ 3 ಗಂಟೆಗೆ ಬನಾರಸ್ ವಿವಿಯ ಪಂಡಿತ್ ರವಿ ಶಂಕರ್ ಬಯಲು ರಂಗ ಮಂದಿರದಲ್ಲಿ ನಡೆಯಲಿದೆ ಎಂದರು. ಅತಿಥಿಗಳಾಗಿ ಬಿಜಿಎಸ್ ವಾರಣಾಸಿ ಯ ಶ್ರೀ ವಿಜಯೆಂದರ್ ನಾಥ ಸ್ವಾಮೀಜಿ.ವಿಹನ್ಗಮ ಯೋಗ ದ ಮುಖ್ಯಸ್ಥ ರಾದ ಶ್ರೀಮತಿ ಸುನೀತಾ ಸಿಂಗ್.ಕರ್ನಾಟಕ ಖಾದಿ ಮಂಡಳಿ ಯ ಆಡಳಿತ…

Read More

ಪುನೀತ್ ರಾಜ್‌ಕುಮಾರ್ ವಿಶೇಷ ಪಾತ್ರದಲ್ಲಿ ನಟಿಸಿರುವ ‘ಲಕ್ಕಿಮ್ಯಾನ್‌’ ಚಿತ್ರ ಸೆ.9ಕ್ಕೆ ತೆರೆಗೆ ಬರಲು ಸಜ್ಜಾಗಿದೆ. ಸದ್ಯ ಚಿತ್ರ ಪ್ರಚಾರದಲ್ಲಿ ಬ್ಯುಸಿ ಆಗಿರುವ ಡಾರ್ಲಿಂಗ್ ಕೃಷ್ಣ, ‘ಅಪ್ಪು ಸರ್ ಜತೆಗೆ ನಟಿಸಿದ್ದು, ಮರೆಯಲಾಗದ ಅನುಭವ’ ಎಂದು ಹೇಳಿದ್ದಾರೆ. ‘ಜಾಕಿ’ ಸಿನಿಮಾದ ಮೂಲಕ ನನ್ನ ಕೆರಿಯರ್ ಶುರುವಾಯಿತು. ಪುನೀತ್ ಅವರು ನಾನು ತುಂಬ ಇಷ್ಟಪಡುವ ನಟ. ಈ ಚಿತ್ರದುದ್ದಕ್ಕೂ ನಮ್ಮಿಬ್ಬರ ಮಾತು, ದೃಶ್ಯಗಳಿವೆ. ಇದು ನನಗೆ ಬಹಳ ಖುಷಿ ನೀಡಿತು’ ಎಂದು ಅಭಿಪ್ರಾಯಪಟ್ಟರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಹಿರಿಯ ಪತ್ರಕರ್ತ, ಸಿಎಂ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೊಳಿಮಠ ಅವರು ನಿಧನರಾಗಿದ್ದಾರೆ. 45 ವರ್ಷದ ಅವರು, ಇಂದು ಬೆಳಗ್ಗೆ ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿರುವಾಗ ಕುಸಿದು ಬಿದ್ದಿದ್ದರು. ನಂತರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಸುಮಾರು 20 ವರ್ಷಗಳ ಕಾಲ ನಾಡಿನ ಹಲವು ಕನ್ನಡದ ಪತ್ರಿಕೆಗಳು ಹಾಗೂ ಟಿವಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಕಳೆದ ವರ್ಷದಿಂದ ಬೊಮ್ಮಾಯಿ ಅವರ ಮಾಧ್ಯಮ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು.ಬೊಮ್ಮಾಯಿ ಸಿಎಂ ಆದ ಬಳಿಕ 2021ರ ಆಗಸ್ಟ್ ನಲ್ಲಿ ಅವರ ಮಾಧ್ಯಮ ಸಂಯೋಜಕರಾಗಿ ನೇಮಕ ಮಾಡಲಾಗಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮಧುಗಿರಿ: ಶ್ರೀ ಜಗದ್ಗುರು ರೇಣುಕಾಚಾರ್ಯರ, ಶ್ರೀಜಗಜ್ಯೋತಿ ಬಸವೇಶ್ವರ ಜಯಂತೋತ್ಸವ ಹಾಗೂ ಕಾಶಿ ವಿಶ್ವನಾಥ ಸ್ವಾಮಿ ಸಮುದಾಯ ಭವನದ ಭೂಮಿ ಪೂಜೆ ಕಾರ್ಯ ಮತ್ತು ಜನಜಾಗೃತಿ ಧರ್ಮ ಕಾರ್ಯಕ್ರಮವು ಕನಪ ನಾಯಕನಳ್ಳಿ ಗ್ರಾಮದಲ್ಲಿ ಏರ್ಪಡಿಸಲಾಗಿತ್ತು. ಗಂಗೆ ಪೂಜೆ, ಗಣಪತಿ ಪೂಜೆ, ವಾಚನ ನಾಂದಿ ಪೂಜೆ, ಪಂಚಕಲಸ ಪೂಜೆ ಹಾಗೂ ದೇವರಿಗೆ ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ ನೆರವೇರಿತು. ಶ್ರೀ ಕಾಶಿ ವಿಶ್ವನಾಥ ಸ್ವಾಮಿ ದೇವರಿಗೆ ರುದ್ರಾಭಿಷೇಕ ಪೂಜೆ, ನವಗ್ರಹ ಶಾಂತಿ ಪೂಜೆ, ಉಮಾ ಮಹೇಶ್ವರಿ ಪ್ರಧಾನ ಕಲಶ ಪೂಜೆ, ಶ್ರೀ ವಿಶ್ವನಾಥ ಸ್ವಾಮಿಗೆ ತುಂಬಾ ಅಭಿಷೇಕ ಬಿಲ್ವಾರ್ಚನೆ ಹಾಗೂ ರಾಜ ಪ್ರಚಾರ ಪೂಜೆ ಮಂಗಳಾರತಿ ತೀರ್ಥ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮಿಗಳು ಮತ್ತು ಶ್ರೀ ರಂಭಾಪುರಿ ಖಾಸ ಶಾಖ ಮಠ ಶ್ರೀ ಕ್ಷೇತ್ರ ಸಿದ್ದರಬೆಟ್ಟ ಇವರ ದಿವ್ಯ ಸಾನಿಧ್ಯದಲ್ಲಿ ನೆರವೇರಿಸಲಾಯಿತು. ವರದಿ: ದೊಡ್ಡೇರಿ ಮಹಾಲಿಂಗಯ್ಯ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…

Read More

ಶಾಸಕ ಅನಿಲ ಬೆನಕೆ ಬೆಳಗಾವಿಯ ಎಲ್ಲ ಸಾರ್ವಜನಿಕ ಶ್ರೀ ಗಣೇಶ ಉತ್ಸವ ಮಂಟಪಗಳಲ್ಲಿ ವೀರ ಸಾವರ್ಕರ್ ಭಾವಚಿತ್ರ, ಬ್ಯಾನರ್ ಅಳವಡಿಸಲು ವಿನಂತಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು, ಮುಂಬರುವ ಗಣೇಶೋತ್ಸವವನ್ನು ಬೆಳಗಾವಿಯ ಎಲ್ಲ ಜನತೆ ವಿಜ್ರಂಭನೆಯಿಂದ ಆಚರಿಸಬೇಕು ಹಾಗೂ ಆಜಾದಿ ಕಾ ಅಮೃತ ಮಹೋತ್ಸವ ನಿಮಿತ್ಯ ಎಲ್ಲ ಮಂಟಪಗಳಲ್ಲಿ ವೀರ ಸಾವರ್ಕರ್ ಬ್ಯಾನರ್/ಭಾವಚಿತ್ರ ಅಳವಡಿಸುವಂತೆ ವಿನಂತಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಈಗ ರಾಜ್ಯದಲ್ಲಿ ಮತ್ತೊಂದು ಭಾರೀ ಪರೀಕ್ಷಾ ಅಕ್ರಮ ಬಯಲಾಗಿದೆ. ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇತೃತ್ವದಲ್ಲಿ ನಡೆದಿದ್ದ ಪರೀಕ್ಷೆ ಪತ್ರಿಕೆ ಲೀಕ್ ಆಗಿದೆ. ಗದಗದ ಮುನ್ಸಿಪಲ್ ಕಾಲೇಜ್ ನಲ್ಲಿ ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗಾಗಿ ಪರೀಕ್ಷೆ ನಡೆದಿತ್ತು. ಆದ್ರೆ ಗದಗದಲ್ಲಿಯೇ ಈ ಪರೀಕ್ಷಾ ಪತ್ರಿಕೆ ಲೀಕ್ ಆಗಿದೆ. ತಂದೆ-ಮಗನ ಸೇರಿಕೊಂಡು ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದಾರೆ ಎನ್ನಲಾಗುತ್ತಿದೆ. ಮುನಿಸಿಪಲ್ ಕಾಲೇಜಿನ ಉಪ ಪ್ರಾಚಾರ್ಯ ಮಾರುತಿ ಸೋನಾವನೆ ಮತ್ತು ಅವರ ಮಗ ಸಮೀತ ಕುಮಾರ್ ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದಾರೆ ಎನ್ನಲಾಗಿದೆ. ಮಗ ಸಮೀತಕುಮಾರ್ ಪತ್ರಕರ್ತನ ಸೋಗಿನಲ್ಲಿ ಪರೀಕ್ಷಾ ಕೇಂದ್ರಕ್ಕೆ ಎಂಟ್ರಿ ಕೊಟ್ಟು ಮೊಬೈಲ್ ಮೂಲಕ ಪ್ರಶ್ನೆ ಪತ್ರಿಕೆ ಸೆರೆ ಹಿಡಿದಿದ್ದಾನೆ. ರಾಜ್ಯದ ಬೇರೆ ಬೇರೆ ಕಡೆ ಪ್ರಶ್ನೆ ಪತ್ರಿಕೆ ಕಳಿಸಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ಸದ್ಯ ಬೆಳಗಾವಿ ಸೈಬರ್ ಕ್ರೈಮ್ ಪೊಲೀಸರು ಮೊಬೈಲ್ ಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ. ತಂದೆ-ಮಗನನ್ನು ಬಂಧಿಸಿ, ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಸೈಬರ್…

Read More

ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಕೊಡಗು ಭೇಟಿ ನೀಡಿದ ಸಂದರ್ಶನದಲ್ಲಿ ಬಿಜೆಪಿ ಕಾರ್ಯಕರ್ತರು ಅವರ ಕಾರಿನ ಮೇಲೆ ಮೊಟ್ಟೆ ಎಸೆದಿರುವುದನ್ನು ಖಂಡಿಸಿ ಶನಿವಾರ ನಗರದ ಚನ್ನಮ್ಮ‌ ವೃತ್ತದಲ್ಲಿ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಯುವ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸಿದ್ದರಾಮಯ್ಯನವರು ಕೊಡಗು ನೆರೆ ಸಂತ್ರಸ್ತರ ಸಮಸ್ಯೆ ಆಲಿಸಲು, ಹಾನಿ ಪ್ರದೇಶವನ್ನು ಪರಿಶೀಲನೆ ನಡೆಸಲು‌ ಹೋದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ವಿಪಕ್ಷ ನಾಯಕರ ಕಾರಿನ ಮೇಲೆ ಮೊಟ್ಟೆ ಎಸೆದು ತಮ್ಮ ಕೀಳುಮಟ್ಟವನ್ನು ಪ್ರದರ್ಶಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೊಡಗಿನ ಪೊನ್ನಂಪೇಟೆ ತಾಲೂಕಿನ ತಿತಿಮತಿಯಲ್ಲಿ ಪ್ರತಿಭಟನೆ ನಡೆಸಿ‌ದ್ದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಪಡಿಸಿಕೊಂಡಿದ್ದರೆ ರಾಜ್ಯದಲ್ಲಿ ಇಂಥ ಘಟನೆ ನಡೆಯುತ್ತಿರಲಿಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ಹೊರ‌ ಹಾಕಿದರು. ಕಾಂಗ್ರೆಸ್ ಯುವ ಮುಖಂಡ ಮೃಣಾಲ್ ಹೆಬ್ಬಾಳ್ಕರ್ ಮಾತನಾಡಿ, ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯನವರು ಕೊಡಗು ಜಿಲ್ಲೆಗೆ ಸಂತ್ರಸ್ತರ ನೋವು ಆಲಿಸಲು ಹೋಗಿದ್ದರು. ಆಗ ಮೊಟ್ಟೆ ಎಸೆದು ಅವಮಾನ ಮಾಡಿದ್ದಾರೆ. ಅವರ ಮೇಲೆ…

Read More

ತುರುವೇಕೆರೆ: ತಾಲೂಕು ಕಸಬಾ ಹೋಬಳಿಗೆ ಸೇರಿದ ಹುಲಿಕೆರೆ ಗ್ರಾಮದ ವಾಸಿಯಾದ ಗಂಗಣ್ಣ ಕೆಂಪದೇವಮ್ಮ ರವರ ಪುತ್ರಿ ಹಾಗೂ ಕೊಟ್ಟಿಗೆಹಳ್ಳಿ ಗ್ರಾಮದ ವಾಸಿಯಾದ ತಿಮ್ಮಯ್ಯ ಸಾವಿತ್ರಮ್ಮ ದಂಪತಿಗಳ ಮಗ ಇಬ್ಬರು ಯುವ ಜೋಡಿಗಳು ಪರಸ್ಪರ ಸುಮಾರು 4 ವರ್ಷಗಳ ಹಿಂದೆ ಪರಿಚಯವಾಗಿ ಪರಿಚಯ ಸ್ನೇಹಕ್ಕೆ ತಿರುಗಿ ಸ್ನೇಹದಿಂದ ಪ್ರೀತಿಯವರೆಗೂ ಹೋಗಿ ಮದುವೆಯಾಗುವ ಲೆಕ್ಕಾಚಾರಕ್ಕೆ ಬಂದಿದ್ದರು. ಹುಡುಗ ಮತ್ತು ಹುಡುಗಿ ಇಬ್ಬರೂ ಒಂದೇ ಕೋಮಿಗೆ ಸೇರಿದವರಾಗಿದ್ದು, ಹುಡುಗ ತುರುವೇಕೆರೆ ಪಟ್ಟಣದ ಪೆಟ್ರೋಲ್ ಬಂಕ್ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಹುಡುಗಿಯು ಅದೇ ಮಾರ್ಗವಾಗಿ ಕಾಲೇಜಿಗೆ ಹೋಗುವಾಗ ಪ್ರೇಮಾಂಕರವಾಗಿತ್ತು. ಇವರಿಬ್ಬರ ಮದುವೆಗೆ ಎರಡು ಕುಟುಂಬದ ಸದಸ್ಯರು ಒಪ್ಪಿಗೆ ಸೂಚಿಸಿರಲಿಲ್ಲ. ಈ ವಿಚಾರವಾಗಿ ಹುಡುಗಿಯ ಮನೆಯವರು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ಈ ಸಂಬಂಧ ಠಾಣೆಯಲ್ಲಿ ಎರಡು ಕಡೆಯ ಸಂಬಂಧಿಕರು ಹಾಗೂ ಹಿತೈಷಿಗಳು ಆಗಮಿಸಿ ಮಾತುಕತೆ ನಡೆಸಿದ್ದಾರೆ. ಹುಲಿಕೆರೆ ಗ್ರಾಮದ ವಾಸಿಯಾದ ದಲಿತ ಮುಖಂಡರಾದ ಟಿ.ಎಚ್. ಗುರುದತ್ ಅವರು ಎರಡು ಕಡೆಯ ಮನೆಯವರಿಗೆ ಸರಿಯಾದ ತಿಳುವಳಿಕೆಯನ್ನು ನೀಡಿ ಯುವ ಜೋಡಿಗಳು…

Read More

ಧಾರವಾಡ: ಕೊಲೆ ಆರೋಪದಡಿ ಬಂಧಿತನಾಗಿರುವ ಪಾತಕಿಗೆ ಪ್ರೇಯಸಿ ಜತೆ ಕಾಲ ಕಳೆಯಲು ಪೊಲೀಸರೇ ಅವಕಾಶ ಮಾಡಿಕೊಟ್ಟ ಪ್ರಸಂಗ ನಡೆದಿದೆ. ಹುಬ್ಬಳ್ಳಿಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ಗೆ ಹಾಜರು ಪಡಿಸಲು ಬಳ್ಳಾರಿ ಜೈಲಿನಿಂದ ಪಾತಕಿ ಬಚ್ಚಾಖಾನ್‌ ನನ್ನು ಕರೆತರಲಾಗಿತ್ತು. ನಿಗದಿಯಂತೆ ಆತನನ್ನು ಖಾಸಗಿ ಹೊಟೇಲ್‌ ಗೆ ಪೊಲೀಸರೇ ಕರೆದುಕೊಂಡು ಹೋಗಿದ್ದಾರೆ. ಆಗ ಅಲ್ಲಿನ ಕೊಠಡಿಯೊಂದರಲ್ಲಿ ಆತನ ಪ್ರೇಯಸಿ ಕಾಯುತ್ತಿದ್ದಳು. ಬಚ್ಚಾಖಾನ್‌ ಆಕೆಯೊಂದಿಗೆ ಏಕಾಂತದಲ್ಲಿದ್ದಾಗ, ಆತನನ್ನು ಕರೆತಂದ ಬಳ್ಳಾರಿ ಪೊಲೀಸರೇ ಕೊಠಡಿ ಹೊರಗೆ ಕಾವಲು ಕಾದಿದ್ದರು ಎನ್ನಲಾಗಿದೆ. ವಿಷಯ ತಿಳಿದ ಹುಬ್ಬಳ್ಳಿ – ಧಾರವಾಡ ಪೊಲೀಸ್‌ ಆಯುಕ್ತ ಲಾಬುರಾಮ್‌ ಅವರು ತಮ್ಮ ತಂಡದೊಂದಿಗೆ ಹೋಟೆಲ್‌ ಮೇಲೆ ದಾಳಿ ಮಾಡಿ ಬಚ್ಚಾಖಾನ್‌ ನನ್ನು ಬಂಧಿಸಿ ವಿದ್ಯಾಗಿರಿ ಪೊಲೀಸರಿಗೆ ಒಪ್ಪಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More