Author: admin

ಬಂಟ್ವಾಳ: ಕೆಲವು ವರ್ಷಗಳ ಹಿಂದೆ ಅನಕ್ಷರತೆ ತುಂಬಿದ್ದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಇಂದು ನಗರ ಭಾಗದ ವಿದ್ಯಾರ್ಥಿಗಳನ್ನು ಮೀರಿಸಿ ಕಲಿಕೆಯಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದಾರೆ. ಆ ಮೂಲಕ ಗ್ರಾಮೀಣ ಭಾಗ ಜ್ಞಾನಿಗಳ ಊರಾಗಿ ಮಾರ್ಪಡುತ್ತಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು. ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ದಕ್ಷಿಣ ಕನ್ನಡ ಇದರ ವತಿಯಿಂದ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಎಸ್.ಎಸ್.ಎಲ್.ಸಿ., ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದು ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಶನಿವಾರ ಬಿ.ಸಿ.ರೋಡಿನಲ್ಲಿ ಹಮ್ಮಿಕೊಂಡ ‘ನಮ್ಮೂರ ಹೆಮ್ಮೆ’ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಉತ್ತಮ ಅಂಕಗಳನ್ನು ಪಡೆದು ಸಾಧನೆ ಮಾಡಿದ ವಿದ್ಯಾರ್ಥಿಗಳು ನಮ್ಮೂರ ಹೆಮ್ಮೆಯಾಗಿದ್ದಾರೆ. ಅವರನ್ನು ಗುರುತಿಸಿ ಗೌರವಿಸುವುದು ನಮ್ಮ ಕರ್ತವ್ಯವಾಗಿದೆ. ಅದರಿಂದ ಎನ್.ಎಸ್.ಯು.ಐ.ನಿಂದ ಗೌರವಿಸಲಾಗುತ್ತಿದೆ. ಇಂದಿನ ಸಾಧಕ ಸಾಧಕಿಯರು ಮುಂದೆ ಉನ್ನತ ಮಟ್ಟದ ಶಿಕ್ಷಣ ಪಡೆಯುವ ಮೂಲಕ ನಿಮ್ಮ ಹೆತ್ತವರ ಋಣ ತೀರಿಸಬೇಕು ಎಂದರು. ಶಿಕ್ಷಣ ಕೊಡದ ತಂದೆ ತಾಯಿ ಮಕ್ಕಳ ಮೊದಲ ವೈರಿ. ಇಂದಿನ…

Read More

ಮಂಡ್ಯ: ಮಾಜಿ ಮುಖ್ಯಮಂತ್ರಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಅಪಮಾನಿಸಿದ ಕೊಡಗು ಜಿಲ್ಲೆಯ ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವಂತೆ ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಿಕ್ಕೇರಿ ಸುರೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಪಟ್ಟಣದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಿಕ್ಕೇರಿ ಸುರೇಶ್ ನೇತೃತ್ವದಲ್ಲಿ ನೂರಾರು ಕಾಂಗ್ರೇಸ್ ಕಾರ್ಯಕರ್ತರು ರಸ್ತೆಗಿಳಿದು ಮುಖ್ಯಮಂತ್ರಿ ಹಾಗೂ ಗೃಹ ಸಚಿವರ ವಿರುದ್ದ ಧಿಕ್ಕಾರ ಘೋಷಣೆಗಳೊಂದಿಗೆ ಆಕ್ರೋಶ ವೈಕ್ತಪಡಿಸಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕಿಕ್ಕೇರಿ ಸುರೇಶ್, ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳನ್ನು ವೀಕ್ಷಿಸಲು ಹೋಗಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಕಾರ್ಯಕರ್ತರು ಹಾಗೂ ಆರ್ ಎಸ್ ಎಸ್ ಮುಖಂಡರು ಕಪ್ಪುಭಾವುಟ ಪ್ರದರ್ಶಿಸಿ ನಮ್ಮ ನಾಯಕರ ಕಾರಿನ ಮೇಲೆ ಮೊಟ್ಟೆ ಎಸೆದು ಅವಮಾನಿಸಿರುವುದು ಖಂಡನೀಯ ಮಾಜಿ ಮಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು ಅವಮಾನಿಸಿರುವ ಕೃತ್ಯ ಜನಪ್ರತಿನಿಧಿಗಳಿಗೆ ಅವಮಾನಿಸಿದಂತಾಗಿದೆ. ಹಾಗಾಗಿ ಈ ಕೃತ್ಯವನ್ನುವ್ಯಸಗಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು ಮತ್ತು ಕ್ಷಮೆಯಾಚಿಸಬೇಕು.…

Read More

ಹುಬ್ಬಳ್ಳಿ : ಮತ್ತಷ್ಟು ಸಾವರ್ಕರ್‌ ಕಿಚ್ಚು ಹೆಚ್ಚಾಗಿದ್ದು. ನಿನ್ನೆ ಕಾಂಗ್ರೆಸ್‌ ಕಾರ್ಯಕರ್ತರು ಸಾವರ್ಕರ್‌ ಫೋಟೋಗೆ ಬೆಂಕಿ ಹಾಕಿ ದಹನ ಮಾಡಿದ್ದಾರೆ. ಈ ಹಿನ್ನೆಲೆ ಇಂದು ಹುಬ್ಬಳ್ಳಿ ಕಾಂಗ್ರೆಸ್‌ ಕಚೇರಿ ಬಳಿ ಬಿಜೆಪಿ ಕಾರ್ಯಕರ್ತರು ಜಮಾವಣೆಗೊಂಡು ಎಂ.ಬಿ.ಪಾಟೀಲ್‌ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ತಡೆಯಲು ಹರಸಾಹಸ ಪಟ್ಟಿದ್ದಾರೆ. ಸಾವರ್ಕರ್‌ ಫೋಟೋ ಹಿಡಿದು ಕಾರ್ಯಕರ್ತರ ಪ್ರತಿಭಟನೆ ತೀವ್ರಗೊಂಡಿದೆ. 50ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

2022-23 ನೇ ಸಾಲಿಗೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿ ಈ ಕೆಳಕಾಣ ಸಿದ 08 ಯೋಜನೆಗಳಿಗೆ ಸುವಿಧಾ ತಂತ್ರಾಂಶದಡಿ (ಪೋರ್ಟಲ್) ವಿಕಲಚೇತನರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿರುತ್ತದೆ. ಮೆರಿಟ್ ವಿದ್ಯಾರ್ಥಿವೇತನಕ್ಕಾಗಿ ಬಹುಮಾನ ಹಣ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಆಧಾರ ಯೋಜನೆ, ಪುನರ್ವಸತಿ ಕಾರ್ಯಕರ್ತರ ಮರಣ ಪರಿಹಾರ ನಿಧಿ, ಸಾಧನೆ ಯೋಜನೆ, ಪ್ರತಿಭೆ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ ಒಟ್ಟು 08 ಯೋಜನೆಗಳಾಗಿವೆ. ಬೆಳಗಾವಿ ಜಿಲ್ಲೆಯ ವಿಕಲಚೇತನ ವ್ಯಕ್ತಿಗಳು ಯೋಜನೆಗಳಡಿ (Suvidha Website URL: https://suvidha.karnataka.gov.in )ನಲ್ಲಿ ನಿಗದಿತ ನಮೂನೆಯಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಸಪ್ಟಂಬರ್ 19 ರ ಒಳಗಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಹಾರ್ಡ ಪ್ರತಿಯೊಂದಿಗೆ ದ್ವಿ ಪ್ರತಿಯಲ್ಲಿ ಅರ್ಜಿಯನ್ನು ಆಯಾ ತಾಲೂಕು ಪಂಚಾಯತಿ ಕಛೇರಿಯಲ್ಲಿರುವ ಎಂ.ಆರ್.ಡಬ್ಲ್ಯೂ. ಗಳಿಗೆ ಸಲ್ಲಿಸಬೇಕು ಎಂದು ಬೆಳಗಾವಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ಸ್ವಾತಂತ್ರ್ಯೊತ್ಸವ ದಿನದಂದು ಕಚೇರಿಗಳ ಮೇಲೆ ಧ್ವಜ ಹಾರಿಸದ ಆರ್‌ ಎಸ್‌ ಎಸ್‌ ನಿಜವಾಗಿಯೂ ಅವರು ದೇಶದ್ರೋಹಿಗಳಿರುವ ಸಂಘಟನೆ ಎಂದು ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಕಾಂಗ್ರೆಸ್‌ ವತಿಯಿಂದ ಆಯೋಜಿಸಿಲಾದ ಅಮೃತ ಮಹೋತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ತಿರಂಗಾ ಅಪಶಕುನವೆಂದು ಹೇಳಿ ಆರ್‌ ಎಸ್‌ ಎಸ್‌ ಧ್ವಜಾರೋಹಣ ಮಾಡಿಲ್ಲ. ಕೋಮುವಾದಿಗಳು ಇತ್ತೀಚೆಗೆ ದೇಶಭಕ್ತಿಯ ಮಾತನಾಡಲು ಆರಂಭಿಸಿದ್ದಾರೆ. ಸ್ವಾತಂತ್ರ್ಯ ತಂದುಕೊಟ್ಟ ಕಾಂಗ್ರೆಸ್‌ ಕೊಡುಗೆಯನ್ನು ಜನತೆ ಮರೆತಿಲ್ಲ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಚಿಕ್ಕಮಗಳೂರು: ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರದಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಅವರಿಗೆ ಪಶ್ಚಾತಾಪವಾಗಿದೆ. ಲಿಂಗಾಯತ ಧರ್ಮದ ವಿಚಾರದಲ್ಲಿ ಅನೇಕರು ನನ್ನ ದಾರಿ ತಪ್ಪಿಸಿದ್ದಾರೆ. ಆ ಬಗ್ಗೆ ನನಗೆ ಪಶ್ಚತ್ಥಾಪ ಇರೋದಾಗಿ ಸಿದ್ಧರಾಮಯ್ಯ ಒಪ್ಪಿಕೊಂಡಿದ್ದಾರೆ ಎಂದು ಬಾಳೆಹೊನ್ನೂರು ಶ್ರೀಗಳು ಹೇಳಿದ್ದಾರೆ. ಇಂದು ಸಿದ್ಧರಾಮಯ್ಯ ಅವರು ಬಾಳೆಹೊನ್ನೂರಿನ ರಂಭಾಪುರಿ ಶ್ರೀ ಮಠಕ್ಕೆ ಭೇಟಿ ನೀಡಿದ ಬಳಿಕ, ಸುದ್ದಿಗಾರರೊಂದಿಗೆ ಮಾತನಾಡಿದಂತ ರಂಭಾಪುರಿ ಶ್ರೀಗಳು, ನಾನು ಈ ಹಿಂದೆ ಸಿದ್ಧರಾಮಯ್ಯ ಅವರಿಗೆ ಆಹ್ವಾನ ನೀಡಿದ್ದೆ. ಆ ಆಹ್ವಾನದ ಮೇರೆಗೆ ಇಂದು ಕೊಟ್ಟ ಮಾತಿನಂತೆ ಸಿದ್ಧರಾಮಯ್ಯ ರಂಭಾಪುರಿ ಮಠಕ್ಕೆ ಭೇಟಿ ನೀಡಿದ್ದಾರೆ ಎಂದರು. ಇದೇ ವೇಳೆಯಲ್ಲಿ ವೀರಶೈವ ಲಿಂಗಾಯತ ಧರ್ಮದ ವಿಚಾರವಾಗಿ ನಮ್ಮ ಜೊತೆ ಮಾತನಾಡಿದ ಅವರು. ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರದಲ್ಲಿ ಸಿದ್ಧರಾಮಯ್ಯನವರಿಗೆ ಪಶ್ಚಾತಾಪವಾಗಿರೋದನ್ನು ಹೇಳಿಕೊಂಡಿದ್ದಾರೆ. ಅವರನ್ನು ದಾರಿತಪ್ಪಿಸಿದ ಬಗ್ಗೆಯೂ ಮಾತನಾಡಿರೋದಾಗಿ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಶ್ರಾವಸ್ತಿಯಲ್ಲಿ 250 ರೂ. ಶಾಲಾ ಶುಲ್ಕಕ್ಕಾಗಿ 3ನೇ ತರಗತಿ ವಿದ್ಯಾರ್ಥಿಯನ್ನು ಶಿಕ್ಷಕರು ಹೊಡೆದು ಕೊಂದಿದ್ದಾರೆ. ಸಿರ್ಸಿಯಾದ ಪಂಡಿತ್ ಬ್ರಹ್ಮದತ್ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿಯಾಗಿದ್ದ ಬಾಲಕನನ್ನು ಶಿಕ್ಷಕರು ಹೊಡೆದು ಕೊಂದಿದ್ದಾರೆ. ಶಾಲಾ ಶುಲ್ಕವಾಗಿ 250 ರೂಪಾಯಿ ಪಾವತಿಸದ ಕಾರಣಕ್ಕೆ ಆರೋಪಿ ಅನುಪಮ್ ಪಾಠಕ್, ಬಾಲಕನಿಗೆ ಥಳಿಸಿದ್ದಾನೆ. ಈ ಘಟನೆ ಆಗಸ್ಟ್ 8 ರಂದು ನಡೆದಿದೆ. ಬ್ರಿಜೇಶ್ ಕುಮಾರ್ ಎಂದು ಗುರುತಿಸಲಾದ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ ಎನ್ನಲಾಗಿದೆ. ತಪ್ಪಿತಸ್ಥ ಶಿಕ್ಷಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬಾಲಕನ ಹಿರಿಯ ಸಹೋದರ ಬ್ರಿಜೇಶ್ ಕಳೆದ ಎರಡು ತಿಂಗಳ ಹಿಂದೆ ಶಾಲೆಗೆ ದಾಖಲಾಗಿದ್ದು, ಮೊದಲ ತಿಂಗಳ ಶುಲ್ಕವನ್ನು ಪಾವತಿಸಿದ್ದರು. ಕುಟುಂಬಕ್ಕೆ ಆಧಾರವಾಗಿರುವ ಅವರ ಸಹೋದರ ಕೆಲಸದಿಂದ ಹೊರಗುಳಿದಿದ್ದರಿಂದ ಎರಡನೇ ತಿಂಗಳು ಶುಲ್ಕ ಪಾವತಿಸಲು ವಿಳಂಬವಾಗಿತ್ತು ಎಂದು ಹೇಳಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…

Read More

ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ಇತಿಹಾಸದಲ್ಲೇ ದಾಖಲೆಯ ಪ್ರಮಾಣದಲ್ಲಿ ಅನುದಾನ ತಂದಿರುವ ಸಮಾಧಾನ ನನಗಿದೆ. ಹಾಗಂತ ನನಗಿನ್ನೂ ಸಂಪೂರ್ಣ ತೃಪ್ತಿ ಇಲ್ಲ. ಇನ್ನಷ್ಟು ಅಭಿವೃದ್ಧಿಪರ ಯೋಜನೆಗಳನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡುತ್ತಿದ್ದೇನೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಾವಗಾಂವ ಗ್ರಾಮದ ರಸ್ತೆಗಳ ಹಾಗೂ ಒಳಚರಂಡಿಗಳ ಅಭಿವೃದ್ಧಿಗಾಗಿ ಲೋಕೋಪಯೋಗಿ ಇಲಾಖೆಯ ವತಿಯಿಂದ 2.5 ಕೋಟಿ ರೂ,ಗಳನ್ನು ಮಂಜೂರು ಮಾಡಿಸಿರುವ ಲಕ್ಷ್ಮೀ ಹೆಬ್ಬಾಳಕರ್, ಶುಕ್ರವಾರ ಕಾಂಕ್ರೀಟ್ ರಸ್ತೆಗಳ ಹಾಗೂ ಒಳಚರಂಡಿಗಳ ಕಾಮಗಾರಿಗಳಿಗೆ ಪೂಜೆ ನೆರವೇರಿಸಿದರು. ಜನರಿಗೆ ತುರ್ತು ಅಗತ್ಯದ ಕೆಲಸಗಳನ್ನು ಮಾಡಿಸಿದ್ದೇನೆ, ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಕೆಲಸ ಮಾಡಿದ್ದೇನೆ. ಆರೋಗ್ಯ ಕ್ಷೇತ್ರದಲ್ಲಿ ಒಂದಿಷ್ಟು ಕೆಲಸಗಳನ್ನು ಮಾಡಿಸಿದ್ದೇನೆ. ಶೈಕ್ಷಣಿಕ ಕ್ಷೇತ್ರದಲ್ಲಿ ಕೆಲಸಗಳಾಗಿವೆ. ನೀರಾವರಿ ಯೋಜನೆಗಳು ಬಂದಿವೆ. ಆದರೆ ಇವಿಷ್ಟರಿಂದಲೇ ನಾನು ತೃಪ್ತಿಪಡುವವಳಲ್ಲ. ಕ್ಷೇತ್ರದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ದೊಡ್ಡ ಯೋಜನೆಗಳನ್ನು ತರುವ, ಯುವಕರಿಗೆ ಉದ್ದೋಗ ಸೃಷ್ಟಿಸುವ ಮಹತ್ವಾಕಾಂಕ್ಷೆಯನ್ನು ಹೊಂದಿದ್ದೇನೆ. ಮುಂದಿನ ದಿನಗಳಲ್ಲಿ ಅವನ್ನೆಲ್ಲ ಕ್ಷೇತ್ರದ ಜನರು ಕಾಣಲು ಸಾಧ್ಯ ಎಂದು…

Read More

ಶಾಲಾ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಚಾಲಕರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಜಿಲ್ಲೆಯ ಅಥಣಿಯ ತಾಲೂಕಿನ ವಿಜಯಪುರ – ಬೆಳಗಾವಿ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದಲ್ಲಿ ಶಾಲಾ ವಾಹನ ನಜ್ಜುಗುಜ್ಜಾಗಿದ್ದು, ಇಬ್ಬರು ಚಾಲಕರು ಸ್ಥಳದಲ್ಲೇ ಸಾವಿಗಿಡಾಗಿದ್ದಾರೆ. 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಹುಬ್ಬಳ್ಳಿ: ನಿಮ್ಮ ಕ್ರೆಡಿಟ್‌ ಕಾರ್ಡ್‌ ಕ್ಯಾಶ್‌ ಬ್ಯಾಕ್‌ ಬಂದಿದೆ ಎಂದು ನಗರದ ಉಣಕಲ್‌ನ ಬ್ಯಾಂಕ್‌ ಉದ್ಯೋಗಿಗೆ ಮೊಬೈಲ್‌ಗೆ ಲಿಂಕ್‌ ಕಳುಹಿಸಿ ಬ್ಯಾಂಕ್‌ ಮಾಹಿತಿ ಪಡೆದ ವಂಚಕರು 3.12 ಲಕ್ಷ ರೂಪಾಯಿ ಹಣ ವರ್ಗಾಯಿಸಿಕೊಂಡಿದ್ದಾನೆ. ಕ್ರೆಡಿಟ್‌ ಕಾರ್ಡ್‌ಗೆ 6 ಸಾವಿರ ಕ್ಯಾಶ್‌ ಬ್ಯಾಕ್‌ ಬಂದಿದ್ದು, ಅದನ್ನು ಪಡೆಯಲು ಲಿಂಕ್‌ ಒತ್ತಿ ಮಾಹಿತಿ ಭರ್ತಿ ಮಾಡಬೇಕು ಎಂದು ಮಹಾಂತೇಶ ಅವರ ಮೊಬೈಲ್‌ಗೆ ವಂಚಕ ಲಿಂಕ್‌ ಸಮೇತ ಸಂದೇಶ ಕಳುಹಿಸಿದ್ದ. ಅದನ್ನು ನಂಬಿದ ಅವರು ಆನ್‌ಲೈನ್‌ನಲ್ಲಿ ಈ-ಮೇಲ್‌ ಐಡಿ, ಫೋನ್‌ ನಂಬರ್‌, ಕ್ರೆಡಿಟ್‌ ಕಾರ್ಡ್‌ ನಂಬರ್‌ ಭರ್ತಿ ಮಾಡಿದ್ದಾರೆ. ಅದಾದ ಕೆಲವೇ ಸಮಯದಲ್ಲಿ ವಂಚಕ ಅವರ ಬ್ಯಾಂಕ್‌ ಖಾತೆಯಿಂದ ಏಳು ಬಾರಿ ಹಣ ವರ್ಗಾಯಿಸಿಕೊಂಡಿದ್ದಾನೆ. ಹುಬ್ಬಳ್ಳಿ ಸೈಬರ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More