Author: admin

ರಾಜ್ಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸಾವರ್ಕರ್ ವಾರ್ ಶುರುವಾಗಿದೆ. ಇದರ ನಡುವೆ ಈಗ ಮತ್ತೊಂದು ಹೊಸ ಗಲಾಟೆ ಶುರುವಾಗಿದೆ. ಗೋಕಾಕ್ ತಾಲೂಕಿನ ಖನಗಾಂವ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಭಾವಚಿತ್ರಕ್ಕೆ ಅಪಮಾನ ಮಾಡಲಾಗಿದೆ. ತಡರಾತ್ರಿ ಕೆಲ ಕಿಡಿಗೇಡಿಗಳು ಸಂಗೊಳ್ಳಿ ರಾಯಣ್ಣ ಭಾವಚಿತ್ರ ಹರಿದು ದರ್ಪ ಮೆರೆದಿದ್ದಾರೆ. ಕಿಡಿಗೇಡಿಗಳ ಕೃತ್ಯವನ್ನ ಖಂಡಿಸಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಟೈರ್ಗೆ ಬೆಂಕಿ ಹಚ್ಚಿ ಗ್ರಾಮದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಗುತ್ತಿದೆ. ಗ್ರಾಮದ ರಸ್ತೆಗೆ ರಾಯಣ್ಣ ಸರ್ಕಲ್ ಎಂದು ಹೆಸರಿಡಿ ಎಂದು ಫೋಟೋ ಹಾಕಿ ಪ್ರತಿಭಟನೆ ನಡೆಸುತ್ತಿದ್ದಾರೆ. ಗೋಕಾಕ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಧಾರವಾಡ: ನಗರದಲ್ಲಿ ಸಾವರ್ಕರ್‌ ಫೋಟೋ ಸುಟ್ಟ ಪ್ರಕರಣ ಸಂಬಂಧಿಸಿ ಕಾಂಗ್ರೆಸ್‌ ನ 12 ಕಾರ್ಯಕರ್ತರ FIR ದಾಖಲಿಸಲಾಗಿದೆ. ನಿನ್ನೆ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಕಾಂಗ್ರೆಸ್ ಪ್ರತಿಭಟನೆಯಲ್ಲಿ ವೀರ್​ ಸಾವರ್ಕರ್​ ಅವರ ಭಾವಚಿತ್ರಕ್ಕೆ ಮೊಟ್ಟೆ ಒಡೆದು, ಬಳಿಕ ಕಾಲಿನಲ್ಲಿ ಭಾವಚಿತ್ರ ತುಳಿದು ಅವಮಾನ ಮಾಡಿದ್ದಾರೆ. ಈ ವೇಳೆ ಕಾರ್ಯಕರ್ತರು ಪೂರ್ವ ನಿಯೋಜಿತವಾಗಿ ಐದಾರು ಭಾವಚಿತ್ರ ತಂದಿದ್ದರು. ಪೊಲೀಸ್ ಬಂದೋಬಸ್ತ್ ಮಧ್ಯೆಯೇ ಸಾವರ್ಕರ್ ಭಾವಚಿತ್ರಕ್ಕೆ ಅವಮಾನ, ಸುಟ್ಟು ಹಾಕಿದರು. ಕಾಂಗ್ರೆಸ್ ಕಾರ್ಯಕರ್ತರಿಂದ ವೀರ್ ಸಾವರ್ಕರ್ ಫೋಟೋ ಸುಟ್ಟ ಹಿನ್ನೆಲೆ ಭಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರು ಧಾರವಾಡದ ಉಪ ನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ಮಾಡಿದ್ದಾರೆ. ಸಾವರ್ಕರ್ ಫೋಟೋ ಸುಟ್ಟವರನ್ನು ಬಂಧಿಸುವಂತೆ ಧಾರವಾಡ-ಬೆಳಗಾವಿ ರಸ್ತೆ ತಡೆದು ಬಿಜೆಪಿ ಮತ್ತು ಹಿಂದೂಪರ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಈ ಬಗ್ಗೆ ಭಜರಂಗದಳದ ಮುಖಂಡ ಶಿವಾನಂದ ಸತ್ತಿಗೇರಿ ಧಾರವಾಡ ಉಪಠಾಣೆಗೆ ದೂರು ನೀಡಿದ್ದರು. ಇಂದು ಧಾರವಾಡ ಉಪಠಾಣೆಯಲ್ಲಿ ಕಾಂಗ್ರೆಸ್‌ನ 12 ಕಾರ್ಯಕರ್ತರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ…

Read More

ತುಮಕೂರು: ರಾಜಕೀಯ ದುರುದ್ದೇಶ ಇಟ್ಟುಕೊಂಡು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆಯಲಾಗಿದೆ. ಹೀಗೆ ಮುಂದುವರೆದರೆ ಬಿಜೆಪಿಯವರು ಕಾರ್ಯಕ್ರಮ ಮಾಡಲು ಕೂಡ ಬಿಡೋದಿಲ್ಲ ಎಂದು ಕೆ.ಎನ್.ರಾಜಣ್ಣ ಎಚ್ಚರಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಡಗು ಸಂತ್ರಸ್ಥರನ್ನ ವಿಚಾರಿಸಲು ಸಿದ್ದರಾಮಯ್ಯ ಹೋಗಿದ್ರು. ಬಡವರ, ನಿರಾಶ್ರಿತರ ಪರವಾಗಿ ಪರಿಶೀಲನೆಗೆ ತೆರಳಿದ್ದರು. ರಾಜಕೀಯ ದುರುದ್ದೇಶ ಇಟ್ಟುಕೊಂಡು ಮಾಡಿರೋದು ಅನಾಗರಿಕ ವರ್ತನೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲೆಲ್ಲೋ ಊರಲ್ಲಿ 50 ಜನ ಇರಬಹುದು. ಸಿದ್ದರಾಮಯ್ಯ ತಂಟೆಗೆ ಬಂದ್ರೆ ರಾಜ್ಯವೇ ಉರಿದು ಹೋಗಲಿದೆ. ಹೀಗೆ ಮುಂದುವರೆದರೆ ಬಿಜೆಪಿಯವರು ಕಾರ್ಯಕ್ರಮ ಮಾಡಲು ಕೂಡ ಬಿಡೋದಿಲ್ಲ. ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಸುಮ್ಮನಿದ್ದೇವೆ. ಈ ಘಟನೆಯನ್ನ ನಾವೆಲ್ಲ ಖಂಡಿಸುತ್ತೇವೆ ಎಂದರು. ಬಿಜೆಪಿಯಲ್ಲಿ ನಾಯಿ ಕೊಡೆಗಳಂತೆ ಹುಟ್ಟಿಕೊಂಡಿರುವ ಸಂಘಟನೆಗಳು ಕಾನೂನು ಕೈಗೆತ್ತಿಕೊಂಡ್ರೆ ಪರಿಣಾಮ ನೆಟ್ಟಗಿರಲ್ಲ. ಮಡಿಕೇರಿಯಲ್ಲಿ ಸಿದ್ದರಾಮಯ್ಯನವರು 26 ರಂದು ಪ್ರತಿಭಟನೆ ಮಾಡ್ತೀವಿ ಅಂತಾ ಹೇಳಿದ್ದಾರೆ. ನಾವು ಕೂಡಾ ಪ್ರತಿಭಟನೆಯಲ್ಲಿ ಭಾಗಿಯಾಗ್ತೀವಿ. ಭದ್ರತಾ ಲೋಪದ ಬಗ್ಗೆ ಸರ್ಕಾರನೇ ಒಪ್ಪಿಕೊಂಡಿದೆ. ಮೊದಲೇ ಭದ್ರತೆ ಯಾಕ್ ಕೊಡಬಾರದಿತ್ತು.…

Read More

ತಿಪಟೂರು: ಪರೀಕ್ಷಾ ಶುಲ್ಕ ಹೆಚ್ಚಳ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಎನ್ ಎಸ್ ಯು ಐ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ರಸ್ತೆ ತಡೆ ನಡೆಸಿ ಪ್ರತಿಭಟಿಸಿದ ವಿದ್ಯಾರ್ಥಿಗಳು ಪೈ ಹೋಟೆಲ್ ವೃತ್ತದಲ್ಲಿ ಸಮಾವೇಶಗೊಂಡು, ಪರೀಕ್ಷಾ ಶುಲ್ಕ ಹೆಚ್ಚಳ ಆದೇಶದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಈ ಹಿಂದಿನ ಸರ್ಕಾರಗಳು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ಸ್ಕಾಲರ್ ಶಿಪ್ ಗಳನ್ನು ನೀಡುತ್ತಿದ್ದವು. ಬಡ ಮಕ್ಕಳು ಓದಬೇಕು ಎಂಬ ಉದ್ದೇಶದಿಂದ ಪ್ರೋತ್ಸಾಹ ನೀಡುತ್ತಿದ್ದರು. ಆದರೆ, ಇತ್ತೀಚಿನ ದಿನಗಳಲ್ಲಿ ಪರೀಕ್ಷಾ ಶುಲ್ಕವನ್ನು ದಿಢೀರ್ 1 ಸಾವಿರ ಹೆಚ್ಚಳ ಮಾಡಲಾಗಿದೆ. ಇದನ್ನು ಹಿಂಪಡೆಯದಿದ್ದರೆ ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರೊಂದಿಗೆ ಬೃಹತ್ ಪ್ರತಿಭಟನೆಯನ್ನು ನಡೆಸಲಾಗುತ್ತದೆ ಎಂದು ಮುಖಂಡರು ಎಚ್ಚರಿಕೆ ನೀಡಿದರು. ಪ್ರತಿಭಟನಾ ರ್ಯಾಲಿಯಲ್ಲಿ ಎನ್ ಎಸ್ ಯುಐ ರಾಜ್ಯ ಪ್ರಧಾನ ಕಾರ್ಯದರ್ಶಿ ಹೇಮಂತ್ ನಗರಸಭಾ ಮಾಜಿ ಅಧ್ಯಕ್ಷ ಪ್ರಕಾಶ್ ಮತ್ತು ವಿದ್ಯಾರ್ಥಿಗಳು ಭಾಗಿಯಾಗಿದ್ದರು. ವರದಿ: ಆನಂದ್, ತಿಪಟೂರು ನಮ್ಮತುಮಕೂರು.ಕಾಂನ…

Read More

ತುಮಕೂರು:  ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾದ ಪರಿಣಾಮ ಮೂವರು ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ತರೂರು ಗೇಟ್ ಬಳಿಯಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಘಟನೆ ನಡೆದಿದ್ದು, ಕಾರಿನಲ್ಲಿ  ತಂದೆ ಹಾಗೂ ಇಬ್ಬರು ಮಕ್ಕಳು ಪ್ರಯಾಣಿಸುತ್ತಿದ್ದು, ಚಲಿಸುತ್ತಿದ್ದ ಲಾರಿಗೆ ಕಾರು ಏಕಾಏಕಿ ಡಿಕ್ಕಿಯಾದ ಪರಿಣಾಮ ಮೂವರೂ ಸಾವನ್ನಪ್ಪಿದ್ದಾರೆ. ಅವಿನಾಶ್(28), ಪ್ರಣತಿ(5), ಸೌಖ್ಯ(3) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಲಾರಿಗೆ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಗಾಯಾಳು ಬಾಲಕಿ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಈ ಬಗ್ಗೆ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮಧುಗಿರಿ: ಸಮಾಜದಲ್ಲಿ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ನಾಗರಿಕರು ತಮ್ಮ ಜವಾಬ್ದಾರಿಯನ್ನು ಅರಿತು ತಕ್ಷಣವೇ ದೂರುಗಳನ್ನು ನೀಡುವ ಮೂಲಕ ಪೊಲೀಸರಿಗೆ ಸಹಕರಿಸಬೇಕಾಗಿದೆ ಎಂದು ಮಧುಗಿರಿ ಡಿವೈಎಸ್ಪಿ ಕೆ.ಎಸ್. ವೆಂಕಟೇಶ್ ನಾಯ್ಡು ತಿಳಿಸಿದರು. ಪಟ್ಟಣದ ಒಕ್ಕಲಿಗರ ಸಮುದಾಯ ಭವನದಲ್ಲಿ ಗುರುವಾರದಂದು ಪೊಲೀಸ್ ಇಲಾಖೆ ವತಿಯಿಂದ ಏರ್ಪಡಿಸಿದ್ದ ಜನಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜನಸಂಪರ್ಕ ಸಭೆಯಲ್ಲಿ ನಾಗರಿಕರು ಬರಿ ದೂರುಗಳನ್ನು ಹೇಳುತ್ತಾ ಇದ್ದರೆ ಸಾಲದು ಘಟನೆ ನಡೆದ ತಕ್ಷಣವೇ ಸಂಬಂಧಪಟ್ಟ ಪೊಲೀಸ್ ಠಾಣೆಗಳಲ್ಲಿ ನಿಶ್ಚಿತವಾಗಿ ಆಗಲಿ ಅಥವಾ ದೂರವಾಣಿ ಮೂಲಕ ದೂರು ಸಲ್ಲಿಸಿದರೆ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ಸಾಧ್ಯ ಎಂದರು. ಮಧುಗಿರಿ ಉಪವಿಭಾಗ ಮಟ್ಟದಲ್ಲಿ ಜನಸಂಪರ್ಕ ಸಭೆಯಲ್ಲಿ ಮುಖಂಡರಾದ ಎಸ್ ಬಿ ಟಿ ರಾಮು ಮಾತನಾಡಿ, ಉತ್ತಮ ಸಂಚಾರಿ ವ್ಯವಸ್ಥೆ ಹಾಗೂ ಬೀಟ್ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಪೋಲಿಸ್ ಇಲಾಖೆ ನಿಭಾಯಿಸುತ್ತಿದೆ. ಜೊತೆಗೆ ಈ ಹಿಂದೆ ಸಿಪಿಐ ಸರ್ದಾರ್ ರವರು ಪಟ್ಟಣದ ಹಲವು ಪ್ರಮುಖ ಅಪಘಾತ ಸ್ಥಳಗಳನ್ನು ಗಮನಿಸಿ, ಅಪಘಾತ ತಡೆಗೆ ಸರ್ಕಲ್ ಗಳಲ್ಲಿ ವೃತ್ತಗಳನ್ನು…

Read More

ಜಮಖಂಡಿ: ರಾಜಸ್ಥಾನದ ಜಲೋರೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಕೊಡ ಮುಟ್ಟಿದ್ದಕ್ಕೆ ದಲಿತ ಬಾಲಕನನ್ನು ಶಾಲಾ ಶಿಕ್ಷಕನೋರ್ವ ಮಾರಣಾಂತಿಕವಾಗಿ ಥಳಿಸಿ ಹತ್ಯೆ ಮಾಡಿದ ಘಟನೆಯನ್ನು ಖಂಡಿಸಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ದೇಸಾಯಿ ವೃತ್ತದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿತು. ರಾಜಸ್ಥಾನ ದಲಿತ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರು, ದೇಸಾಯಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ರಾಜಸ್ಥಾನದಲ್ಲಿ ನಡೆದಿರುವ ಘಟನೆಯಿಂದಾಗಿ ಪ್ರಜ್ಞಾವಂತ ನಾಗರಿಕರು ತಲೆತಗ್ಗಿಸುವಂತಾಗಿದೆ. ದಲಿತರನ್ನು ವೋಟ್ ಬ್ಯಾಂಕ್ ಗೆ ಬಳಸಿಕೊಂಡ ಕಾಂಗ್ರೆಸ್ ಈ ಘಟನೆಗೆ ಏನು ಉತ್ತರ ನೀಡುತ್ತದೆ ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು. ಈ ಸಂದರ್ಭದಲ್ಲಿ ಕುಶಾಲ ವಾಘಮೋರೆ, ಗಣೇಶ ಸಿರಿಗನ್ನವರ ಪ್ರಶಾಂತ ಘಾಯಕವಾಡ, ವಿಜಯಲಕ್ಷ್ಮಿ ತುಂಗಳ ಸೇರಿದಂತೆ ಹಲವಾರು ಬಿ ಜೆ ಪಿ ಕಾರ್ಯಕರ್ತರು ಉಪಸ್ಥಿತರಿದ್ದರು. ವರದಿ: ಬಂದೇನವಾಜ ನದಾಫ್, ಜಮಖಂಡಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…

Read More

ಸರಗೂರು: ತಾಲ್ಲೂಕಿನ ಆಡಹಳ್ಳಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರು ತರಗತಿ ನಡೆಸುತ್ತಿರುವಾಗಲೇ ಕಟ್ಟಡದ ಮೇಲ್ಛಾವಣಿಯ ಸಿಮೆಂಟ್ ಕುಸಿದು ಬಿದ್ದಿದ್ದು ಶಿಕ್ಷಕರು ಮತ್ತು ಮಕ್ಕಳು ಪ್ರಾಣಯದಿಂದ ಸ್ವಲ್ಪದರಲ್ಲೇ ತಪ್ಪಿಸಿಕೊಂಡಿದ್ದಾರೆ. ಸರಗೂರು ತಾಲ್ಲೂಕಿನ ಆಡಹಳ್ಳಿ ಗ್ರಾಮದಲ್ಲಿ 20 ವರ್ಷಗಳ ಹಿಂದೆ ಈ ಕಟ್ಟಡವನ್ನು ನಿರ್ಮಾಣ ಮಾಡಿದ್ದು,  ಕಟ್ಟಡ ಇದೀಗ ಶಿಥಿಲ ಸ್ಥಿತಿಯಲ್ಲಿದೆ.  ಇದರ ಬಗ್ಗೆ ಸುಮಾರು ಬಾರಿ ಕ್ಷೇತ್ರ ಶಿಕ್ಷಣಾಧಿಕಾರಿ  ಉದಯಕುಮಾರ್ ಅವರಿಗೆ ಅರ್ಜಿ ಸಲ್ಲಿಸಿದ್ದರೂ ಯಾವುದೇ ಕ್ರಮಕೈಗೊಂಡಿಲ್ಲ. ಇದೀಗ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಪೋಷಕರು ಮಕ್ಕಳ ಪ್ರಾಣವನ್ನು ಬಲಿ ನೀಡುವಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಲೆಯ ಮುಖ್ಯ ಶಿಕ್ಷಕರು  ನಾರಾಯಣಮೂರ್ತಿ ಮಾತನಾಡಿ, ನಮ್ಮ ಶಾಲೆಯಲ್ಲಿ ಒಟ್ಟು 70 ಮಕ್ಕಳು ಇದ್ದಾರೆ.  1ನೇ ತರಗತಿಯಿಂದ 7ನೇ ತರಗತಿವರೆಗೆ ಶಾಲೆ ನಡೆಯುತ್ತಿದೆ. ಶಾಲೆಯಲ್ಲಿ ನಾಲ್ಕು ಕಟ್ಟಡಗಳಿವೆ.  ಈ ಪೈಕಿ ಒಂದು ಕಟ್ಟಡದಲ್ಲಿ ಪಾಠ ಮಾಡುತ್ತಿದ್ದ ಸಂದರ್ಭದಲ್ಲಿಯೇ ಮೇಲ್ಛಾವಣಿಯಿಂದ  ಕಾಂಕ್ರೀಟ್ ಕಿತ್ತು ಬಿದ್ದಿದೆ. ಆದರೆ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದೇವೆ. ಘಟನೆಯಿಂದಾಗಿ ಮಕ್ಕಳು…

Read More

ಹಿರಿಯೂರು: ಬಡವರಿಗೆಂದು ಸರ್ಕಾರ ಉಚಿತವಾಗಿ ನೀಡುತ್ತಿರುವ ಅಕ್ಕಿ ಕಳಪೆ ಗುಣಮಟ್ಟದಿಂದ ಕೂಡಿದ್ದು, ಇದರಲ್ಲೂ ಕಮಿಷನ್ ದಂಧೆ ನಡೆಯುತ್ತಿದೆಯೇ? ಎಂದು ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕಸಬಾ ಹೋಬಳಿಯ ಕೂನಿಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೂನಿಕೆರೆ ಗ್ರಾಮದ ಎಸ್ ಸಿ ಕಾಲೋನಿಯ ನಿವಾಸಿಗಳಿಗೆ ಹುಳ, ಕಸ, ಕಡ್ಡಿಗಳಿರುವ ಅಕ್ಕಿಯನ್ನು ಸರ್ಕಾರ ವಿತರಿಸಿದೆ. ಜನರಿಗೆ ತಿನ್ನಲು ಯೋಗ್ಯವಿಲ್ಲದ ಆಹಾರ ನೀಡುವ ಮೂಲಕ , ಪ್ರಾಣಗಳಿಂತಲೂ ಕಡೆಯಾಗಿ ಸರ್ಕಾರ ನಮ್ಮನ್ನು ಪರಿಗಣಿಸುತ್ತಿದೆಯೇ? ಎಂದು ಇಲ್ಲಿನ ನಿವಾಸಿಗಳು ಪ್ರಶ್ನಿಸಿದ್ದಾರೆ. ಸ್ಥಳೀಯ ಶಾಸಕರು ಹಾಗೂ ತಾಲ್ಲೂಕು ಆಡಳಿತ ಸೂಕ್ತ ಕ್ರಮ ವಹಿಸಿ, ಬಡವರಿಗೆ ಸರ್ಕಾರದಿಂದ ತಿನ್ನಲು ಯೋಗ್ಯವಾದ ಉತ್ತಮ ಗುಣಮಟ್ಟದ ಆಹಾರ ನೀಡುವಂತೆ ಒತ್ತಾಯಿಸಿದ್ದಾರೆ. ವರದಿ: ಮುರುಳಿಧರನ್ ಆರ್., ಚಿತ್ರದುರ್ಗ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಕೊರಟಗೆರೆ: ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಅಭಿಮಾನಿ ದೇವರುಗಳ ಪ್ರೀತಿ ಮತ್ತು ವಿಶ್ವಾಸಕ್ಕೆ ನಾನು ಸದಾ ಚಿರಾಋಣಿ. ನಿಮ್ಮೇಲ್ಲರ ಆರ್ಶಿವಾದ ಮತ್ತು ಹಾರೈಕೆ ಸದಾ ನನ್ನ ಮೇಲಿರಲಿ ಅಷ್ಟು ಸಾಕು ಎಂದು ಕೊರಟಗೆರೆ ಕ್ಷೇತ್ರದ ಮಾಜಿ ಶಾಸಕ ಪಿ.ಆರ್.ಸುಧಾಕರಲಾಲ್ ಹೇಳಿದರು. 55ನೇ ಹುಟ್ಟು ಹಬ್ಬವನ್ನು ಕಾರ್ಯಕರ್ತರ ಜೊತೆಗೆ ಆಚರಿಸಿಕೊಂಡ ಸುಧಾಕರಲಾಲ್, ಈ ವೇಳೆ ಮಾತನಾಡಿ, ಕೊರಟಗೆರೆ ಕ್ಷೇತ್ರದ ಮನೆಮಗನಾಗಿ 15 ವರ್ಷ ಜಿಲ್ಲಾ ಪಂಚಾಯತ್ ಸದಸ್ಯ ಮತ್ತು 5 ವರ್ಷ ಶಾಸಕನಾಗಿ 20 ವರ್ಷ ಹಗಲುರಾತ್ರಿ ಎನ್ನದೇ ಸಾಮಾನ್ಯನಂತೆ ಜನತೆಯ ಸೇವೆ ಸಲ್ಲಿಸಿದ್ದೇನೆ. 2018ರಲ್ಲಿ ನಾನು ಸೋತರು ಸಹ ಕೊರಟಗೆರೆ ಕ್ಷೇತ್ರದ ಜನತೆಯ ಒಡನಾಡಿಯಾಗಿ ಕೆಲಸ ಮಾಡುತ್ತಿದ್ದೇನೆ. 2023ರ ಕೊರಟಗೆರೆ ಕ್ಷೇತ್ರದ ವಿಧಾನಸಭಾ ಚುನಾವಣೆಗೆ ನಿಮ್ಮೆಲ್ಲರ ಆರ್ಶಿವಾದ ನನ್ನ ಮೇಲಿರಲಿ ಎಂದು ಮನವಿ ಮಾಡಿದರು. ತುಮಕೂರು ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಾಲಿಂಗಪ್ಪ ಮಾತನಾಡಿ, ಸ್ನೇಹಜೀವಿಯ ಹುಟ್ಟುಹಬ್ಬದ ಸಂಭ್ರಮವು ಸಾಮಾಜಿಕ ಕಾರ್ಯಕ್ರಮವಾಗಿ ಕೊರಟಗೆರೆ ಕ್ಷೇತ್ರದಲ್ಲಿ ನಡೆಯುತ್ತಿದೆ. ಕೊರಟಗೆರೆ ಕ್ಷೇತ್ರದ ಪ್ರತಿ…

Read More