Subscribe to Updates
Get the latest creative news from FooBar about art, design and business.
- ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ: ಡಿ.ಕೆ.ಸುರೇಶ್
- ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್
- ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ
- ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?
- ಖಮೇನಿ ಹತ್ಯೆ ಹಿನ್ನೆಲೆ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಜಿ.ಪರಮೇಶ್ವರ್ ಎಚ್ಚರಿಕೆ
- ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲು ಶಾಸಕ ಸುರೇಶ್ ಬಾಬು ಸೂಚನೆ
- ನಾಪತ್ತೆಯಾಗಿದ್ದ ಬೆಳ್ಳಾವಿ ಕಾರದೇಶ್ವರ ಮಠದ ಶ್ರೀಗಳು ಪತ್ತೆ: ಸ್ವಾಮೀಜಿ ಹೋಗಿದ್ದೆಲ್ಲಿಗೆ?
- ತುಮಕೂರು: ಭೀಮಸಂದ್ರದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಸೂಚನೆ
Author: admin
ಸುಳ್ಯ: ಹೃದಯಾಘಾತದಿಂದ 2ನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಸುಳ್ಯ ತಾಲೂಕಿನಲ್ಲಿ ಸಂಭವಿಸಿದೆ. ಅಮರಮುಟ್ನೂರು ಗ್ರಾಮದ ಕುಕ್ಕುಜಡ್ಕ ಶಾಲೆಯ 2ನೇ ತರಗತಿ ವಿದ್ಯಾರ್ಥಿ ಕುಂಟಿಕಾನದ ಮೋಕ್ಷಿತ್ ಕೆ.ಸಿ.(7) ಮೃತ ಬಾಲಕ. ಬಾಲಕ ಎಂದಿನಂತೆ ಶಾಲೆಗೆ ಬಂದಿದ್ದು ಮಧ್ಯಾಹ್ನದ ವೇಳೆಗೆ ಸ್ವಲ್ಪ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಿಕ್ಷಕರು ದೂರವಾಣಿ ಮೂಲಕ ಪೋಷಕರಿಗೆ ಮಾಹಿತಿ ನೀಡಿದರು. ತಂದೆ ಚಂದ್ರಶೇಖರ ಆಚಾರ್ಯ ಅವರು ಶಾಲೆಗೆ ಬಂದಿರುವ ಸಂದರ್ಭದಲ್ಲೇ ಬಾಲಕ ನಿಂತಲ್ಲಿಯೇ ಕುಸಿದು ಬಿದ್ದಿದ್ದು, ತಕ್ಷಣ ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು, ವೈದ್ಯರು ಪರೀಕ್ಷಿಸಿದಾಗ ಬಾಲಕನಿಗೆ ಹೃದಯಾಘಾತ ಸಂಭವಿಸಿದ್ದರಿಂದ ಮೃತ ಪಟ್ಟಿರುವುದಾಗಿ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಮಂಡ್ಯ: ಅರ್ಚಕ ಹಾಗೂ ಆತನ ಮಕ್ಕಳು ಹಾಗೂ ದೇವಾಲಯದ ಕಾವಲುಗಾರ ದೇವಾಲಯಕ್ಕೆ ಸೇರಿದ ಲಕ್ಷಾಂತರ ರೂಪಾಯಿಗಳನ್ನು ದೋಚಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ ಬಯಲು ಸೀಮೇಯ ಸುಬ್ರಹ್ಮಣ್ಯ ಎಂದೇ ಪ್ರಸಿದ್ದವಾಗಿರುವ ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಸಮೀಪದ ಶ್ರೀ ಕ್ಷೇತ್ರ ಸಾಸಲು ಗ್ರಾಮದಲ್ಲಿ ಮುಜರಾಯಿ ಇಲಾಖೆಗೆ ಸೇರಿರುವ ಶ್ರೀ ಸೋಮೇಶ್ವರ ಮತ್ತು ಶ್ರೀ ಶಂಭುಲಿಂಗೇಶ್ವರ ದೇವಾಯಲ್ಲಿ ಪ್ರತಿ ವರ್ಷವು ಕೋಟ್ಯಾಂತರ ರೂಪಾಯಿಗಳು ಆದಾಯ ಬರುವ ದೇವಾಯವಾಗಿದೆ. ಇದನ್ನು ದುರುಪಯೋಗ ಮಾಡಿಕೊಂಡು ರಾತ್ರಿ ವೇಳೆಯಲ್ಲಿ ಕಾಣಿಕೆ ಹುಂಡಿಯಲ್ಲಿದ್ದ ಹಣವನ್ನು ದೋಚುವ ಕೆಲಸಕ್ಕೆ ಕೈ ಹಾಕಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ದೇವಾಯದ ಕಾವಲುಗಾರ ವೀರಪ್ಪ, ಅರ್ಚಕರಾದ ಸೋಮೇಶ ಮತ್ತು ಆತನ ಮಕ್ಕಳಾದ ಸಂತೋಷ್ ಆರಾದ್ಯ, ಉಮಾಶಂಕರ್ ಆರಾದ್ಯ, ಮತ್ತು ಸಚ್ಚಿನ್ ಜಂಗಮ್, ಪುಟ್ಟರಾಜು ಇವರುಗಳು ದೇವಾಯದ ಹುಂಡಿಯಲ್ಲಿ ಸಂಗ್ರಹವಾಗುವ ಕಾಣಿಕೆ ಹಣವನ್ನು ಯಾರಿಗೂ ತಿಳಿಯದಂತೆ ಹುಂಡಿಯ ಬಾಯಿಯನ್ನು ಅಗಲಿಸಿ ದಿನನಿತ್ಯ ಲಕ್ಷಾಂತರ ರೂಪಾಯಿಗಳನ್ನು ದೋಚಿರುವುದು ಬೆಳಕಿಗೆ ಬಂದಿದೆ. ಅಲ್ಲದೆ ದೇವಾಲಯದ ಅರ್ಚಕರಾದ ಸೋಮೇಶ ಆರಾದ್ಯ, ಆತನ…
ಬೆಂಗಳೂರು: ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಗೆ ಮಾತ್ರ ಎರಡು ವರ್ಷಗಳಿಗೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಸಂಬಂಧ ಒಳಾಡಳಿತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ನಡವಳಿಯನ್ನು ಹೊರಡಿಸಿದ್ದು, ಪೊಲೀಸ್ ಕಾನ್ಸ್ ಟೇಬಲ್ (ಸಿವಿಲ್) ಹುದ್ದೆ ಮತ್ತು ಪೊಲೀಸ್ ಕಾನ್ಸ್ ಟೇಬಲ್ (ಸಿಎಆರ್ ಮತ್ತು ಡಿಎಆರ್) ಹುದ್ದೆಗಳಿಗೆ ನಿಗಧಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಗೆ ಮಾತ್ರ 2022-23ನೇ ಸಾಲಿನಲ್ಲಿ ನೇಮಕಾತಿಗೆ ಕರೆದಿರುವ ಪೊಲೀಸ್ ಕಾನ್ಸ್ ಟೇಬಲ್ 420+3064 ಸೇರಿ ಒಟ್ಟು 3484 ಹುದ್ದೆಗಳಿಗೆ ಮತ್ತು ಪೊಲೀಸ್ ಕಾನ್ಸ್ ಟೇಬಲ್ ( ಸಿವಿಲ್ ) 1137+454 ಸೇರಿದಂತೆ 1591 ಹುದ್ದೆಗಳಿಗೆ ಮಾತ್ರ ಗರಿಷ್ಠ ವಯೋಮಿತಿಯನ್ನು ಎರಡು ವರ್ಷಗಳಿಗೆ ಹೆಚ್ಚಿಸಲಾಗಿದೆ ಎಂದು ತಿಳಿಸಿದ್ದಾರೆ. ಹುದ್ದೆಗಳಿಗೆ ಗರಿಷ್ಠ ವಯೋಮಿತಿಯ ಕುರಿತಂತೆ ಸಂಬಂಧಿಸಿದ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ಅಗತ್ಯ ತಿದ್ದುಪಡಿ ಮಾಡವು ಷರತ್ತಿಗೆ ಒಳಪಟ್ಟು ಈ ಆದೇಶ ಹೊರಡಿಸಲಾಗಿದೆ ಎಂದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…
ಛತ್ತೀಸ್‌ಗಢ : ಎಂಟು ವರ್ಷದ ಬಾಲಕನೊಬ್ಬ ನಾಗರ ಹಾವನ್ನು ಕಚ್ಚಿ ಸಾಯಿಸಿದ್ದ ವಿಚಿತ್ರ ಘಟನೆ ಜಶ್‌ಪುರ ಜಿಲ್ಲೆಯ ಪಂದರ್‌ಪಾಡ್ ಎಂಬ ಗ್ರಾಮದಲ್ಲಿ ನಡೆದಿದೆ. ದೀಪಕ್ ಮನೆಯ ಹಿತ್ತಲಿನಲ್ಲಿ ಆಟವಾಡುತ್ತಿದ್ದಾಗ ವಿಷಪೂರಿತ ನಾಗರಹಾವು ಕೈಗೆ ಸುತ್ತಿಕೊಂಡಿತ್ತು.ದೀಪಕ್ ಕೈಗೆ ನಾಗರಹಾವು ಕಚ್ಚಿದೆಯಂತೆ. ಹಾವಿನ ಹಿಡಿತವನ್ನು ಬಿಡಿಸಿಕೊಳ್ಳಲು ಸಾಕಷ್ಟು ಪ್ರಯತ್ನಿಸಿದ್ರೂ ಸಾಧ್ಯವಾಗಲೇ ಇಲ್ಲ. ಕೊನೆಗೆ ಬೇರೆ ದಾರಿ ಕಾಣದೆ ಬಾಲಕನೂ ಹಾವಿಗೆ ಎರಡು ಬಾರಿ ಕಚ್ಚಿದ್ದಾನೆ. ಕೂಡಲೇ ಹಾವು ಹಿಡಿತ ಸಡಿಲಿಸಿದೆ. ಕುಟುಂಬದವರು ಹಾವಿನ ಕಡಿತಕ್ಕೊಳಗಾದ ಬಾಲಕನನ್ನು ಕೂಡಲೇ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರು. ಆದರೆ ದೀಪಕ್‌ನಲ್ಲಿ ಯಾವುದೇ ರೋಗಲಕ್ಷಣಗಳಿರಲಿಲ್ಲ. ಹಾವು ಕಚ್ಚಿದಾಗ ವಿಷ ಬಿಡುಗಡೆಯಾಗಿರಲಿಲ್ಲ, ಹಾಗಾಗಿ ಬಚಾವ್ ಆಗಿದ್ದಾನೆ. ಮನುಷ್ಯರಿಂದ ಕಡಿತಕ್ಕೊಳಗಾಗಿ ಹಾವು ಸಾಯುವುದು ಅತ್ಯಂತ ಅಪರೂಪದ ಪ್ರಕರಣ. ಜಶ್ಪುರ್ ಜಿಲ್ಲೆಯಲ್ಲಿ ಈವರೆಗೂ ಇಂತಹ ಘಟನೆ ನಡೆದಿರಲಿಲ್ಲವಂತೆ. ಜಶ್ಪುರ್ ಬುಡಕಟ್ಟು ಜಿಲ್ಲೆಯಾಗಿದ್ದು, ಇದನ್ನು ಸರ್ಪಗಳ ವಾಸಸ್ಥಾನ ಎಂದೂ ಕರೆಯುತ್ತಾರೆ. ಇಲ್ಲಿ 200ಕ್ಕೂ ಹೆಚ್ಚು ಜಾತಿಯ ಹಾವುಗಳಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…
ಹಾವೇರಿ: ಹಾವೇರಿ ತಹಶೀಲ್ದಾರ್ ಗಿರೀಶ್ ಸ್ವಾದಿ ನಾಪತ್ತೆಯಾದ ಆಘಾತಕಾರಿ ಘಟನೆ ನಡೆದಿದೆ. ಕಳೆದ ಮೂರು ದಿನಗಳಿಂದ ಅವರು ಮನೆಗೆ ಬಂದಿಲ್ಲ ಅಂತ ಅವರ ಪತ್ನಿ ಭಾಗ್ಯಶ್ರೀ ಅವರು ಹಾವೇರಿ ಶಹರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಅಕ್ಟೋಬರ್ 31ರ ರಾತ್ರಿ ನಂತರ ತಹಶೀಲ್ದಾರ್ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ಕುಟುಂಬಸ್ಥರನ್ನು ಆತಂಕದಿಂದ ಕಾಲ ಕಳೆಯುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಮಂಡ್ಯ: ಮಹಾವೀರ ವೃತ್ತದಲ್ಲಿ ಸಂಚಾರಿ ಪೊಲೀಸರೊಬ್ಬರು ಮಾನವೀಯತೆ ಮರೆತು ಚಿಕಿತ್ಸೆಗಾಗಿ ಹಸುಗೂಸನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಬಂದಿದ್ದ ದಂಪತಿಗಳನ್ನು ತಡೆದು ಅಮಾನವೀಯವಾಗಿ ನಡೆದುಕೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಕೆ.ಆರ್. ಪೇಟೆ ತಾಲೂಕಿನ ಬೂಕನಕೆರೆ ಹೋಬಳಿಯ ಯಗಚೆ ಕುಪ್ಪೆ ಗ್ರಾಮದ ಅಭಿಷೇಕ್ ಮತ್ತು ಆತನ ಪತ್ನಿ ತಮ್ಮ 6–7 ತಿಂಗಳ ಹಸುಗೂಸನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಬೈಕ್ ನಲ್ಲಿ ಕರೆದುಕೊಂಡು ಬಂದಿದ್ದರು. ನಗರದ ಮಹಾವೀರ ವೃತ್ತಕ್ಕೆ ಬಂದ ಸಂದರ್ಭದಲ್ಲಿ ಸಂಚಾರಿ ಠಾಣೆಯ ಎಎಸ್ಐ ರಘುಪ್ರಕಾಶ್ ಎಂಬಾತ ಹೆಲ್ಮೆಟ್ ಇಲ್ಲದ ಕಾರಣಕ್ಕಾಗಿ ಅಭಿಷೇಕ್ ಅವರನ್ನು ತಡೆದು ನಿಲ್ಲಿಸಿದ್ದಾರೆ. ಹೆಲ್ಮೆಟ್ ಧರಿಸದ ಕಾರಣ 500 ರೂಪಾಯಿ ದಂಡ ಕಟ್ಟಿ ಹೋಗುವಂತೆ ತಿಳಿಸಿದ್ದಾರೆ. ಆಗ ಅಭಿಷೇಕ್ ನನ್ನ ಬಳಿ ಹಣವಿಲ್ಲ ಎಂದಾಗ ಬೈಕ್ ನ ಕೀ ಕಿತ್ತುಕೊಂಡು ದಂಡದ ಹಣ ಕಟ್ಟಿ ಬೈಕ್ ತೆಗೆದುಕೊಂಡು ಹೋಗು ಎಂದು ದರ್ಪದಿಂದ ಹೇಳಿದ್ದಾರೆ. ಈ ಸಂದರ್ಭದಲ್ಲಿ ದಾರಿಯಲ್ಲಿ ಹೋಗುತ್ತಿದ್ದ ಒಂದಿಬ್ಬರು ನಾಗರಿಕರು ಪಾಪ, ಅವರು ಕೆ.ಆರ್. ಪೇಟೆಯಿಂದ ಮಗು ತೋರಿಸಲು…
ಬೆಳಗಾವಿ: 132 ಸಮಾಜ ಘಾತುಕ ಕೃತ್ಯಗಳಲ್ಲಿ ಭಾಗಿಯಾಗಿದ್ದಂತ 12 ಜನ ಆರೋಪಿಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ್ ಪಾಟೀಲ್ ಗಡಿಪಾರು ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಉಪ ವಿಭಾಗದಲ್ಲಿ ಮದಬಾವಿ ಗ್ರಾಮದ ಮೀರಸಾಬ್ ಬಾಗಡಿ, ರಡ್ಡೇರಹಟ್ಟಿ ಗ್ರಾಮದ ಸದಾಶಿವ ಗೊಡಮಾಲೆ, ಕೋಹಳಿ ಗ್ರಾಮದ ರವಿ ಶಿಂಗೆ, ಉಗಾರ ಬಿ.ಕೆ ಗ್ರಾಮದ ಮಹಾದೇವ ಕಾಂಬಳೆ, ಕಮರಿ ಗ್ರಾಮದ ಪ್ರದೀವ್ ಕರಡಿ, ಹಾಲಳ್ಳಿ ಗ್ರಾಮದ ಕಾಶಪ್ಪ ಕಾರಿಕೊಳ್ಳ ಸೇರಿದಂತೆ 12 ಮಂದಿ ಆರೋಪಿಗಳನ್ನು ಜಿಲ್ಲೆಯಿಂದ ಗಡಿಪಾರು ಮಾಡಿ ಎಸ್ಪಿ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಸಮಾಜಘಾತುಕ ಕೃತ್ಯಗಳನ್ನು ತಡೆಗಟ್ಟೋ ನಿಟ್ಟಿನಲ್ಲಿ ಈ ಕ್ರಮವನ್ನು ಪೊಲೀಸರು ಕೈಗೊಂಡಿದ್ದಾರೆ. 132 ಕೃತ್ಯಗಳಲ್ಲಿ ಭಾಗಿಯಾಗಿದ್ದಂತ 12 ಆರೋಪಿಗಳನ್ನು ಗಡಿಪಾರು ಮಾಡಿ ಕಾನೂನು ಸುವ್ಯವಸ್ಥೆ ಕಾಪಾಡುವಂತ ಕೆಲಸ ಮಾಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ರಾಜ್ಯದ ಹಲವು ಕಡೆ ಇಂದು ಧಾರಾಕಾರ ಮಳೆಯಾಗಿದ್ದು, ಮುಂದಿನ 24 ಗಂಟೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ತಮಿಳುನಾಡು ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿದ್ದು, ಸಮುದ್ರ ಮಟ್ಟದಿಂದ 7.7 ಕಿ.ಲೋ ಎತ್ತರದವರೆಹೆ ವ್ಯಾಪಿಸಿದೆ. ಈ ಮೇಲ್ಮೈ ಸುಳಿಗಾಳಿಯು ಉತ್ತರ ಒಳನಾಡಿನವರೆಗೂ ವ್ಯಾಪಿಸಿದೆ. ಹಾಗಾಗಿ ಮುಂದಿನ 5 ದಿನಗಳು ಬೆಂಗಳೂರಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಇನ್ನೂ 5 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಮಲೆನಾಡು, ಉತ್ತರ ಒಳನಾಡು, ಕರಾವಳಿ, ಬೆಂಗಳೂರು ಭಾಗದಲ್ಲಿ ಇಂದಿನಿಂದ 5 ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮೈಸೂರು ದಸರಾ ಸೇರಿ ಬೇರೆ ಬೇರೆ ಉತ್ಸವಗಳಿಗೆ ರಾಜ್ಯ ಸರ್ಕಾರ ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡುತ್ತದೆ. ಆದರೆ ಕನ್ನಡ ರಾಜ್ಯೋತ್ಸವಕ್ಕೆ ಮಾತ್ರ ಒಂದು ರೂಪಾಯಿ ಹಣ ನೀಡುವುದಿಲ್ಲ, ರಾಜ್ಯ ಸರ್ಕಾರದ ಈ ಮಲತಾಯಿ ದೊರಣೆಯು ಕನ್ನಡ ಪರ ಸಂಘಟನೆಗಳು ಆಕ್ರೋಶ ಕಾರಣವಾಗಿದೆ. ಸರಕಾರದ ಬಿಡಿಗಾಸು ಅನುದಾನವಿಲ್ಲದೇ 12 ಗಂಟೆಗಳ ಕಾಲ ಅದ್ಧೂರಿಯಿಂದ ವೈಭವದಿಂದ ನಡೆಯುವ ಏಕೈಕ ರಾಜ್ಯೋತ್ಸವ ಮೆರವಣಿಗೆಯೆಂದರೆ ಬೆಳಗಾವಿ ಮೆರವಣಿಗೆ! ರಾಜ್ಯ ಸರ್ಕಾರ ಮೈಸೂರು ದಸರಾ ಹಬ್ಬಕ್ಕೆ ಹತ್ತು ಕೋಟಿ ಅನುದಾನ ನೀಡುತ್ತದೆ. ವಿಧಾನ ಸೌಧದ ಸಮೀಪವಿರುವ ಕನ್ನಡ ಸಂಘಟನೆಗಳಿಗೆ ಕೋಟ್ಯಾವಧಿ ಹಣ ಕೊಡುತ್ತದೆ.ಬೆಳಗಾವಿಯ 75 ಕ್ಕೂ ಅಧಿಕ ಕನ್ನಡ ಸಂಘಟನೆಗಳಿಗೆ ಬೆಳಗಾವಿಯಲ್ಲಿ ನವ್ಹೆಂಬರ್ ತಿಂಗಳಾದ್ಯಂತ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲುಒಂದು ಕೋಟಿ ರೂ.ಅನುದಾನ ನೀಡಲುಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿತ್ತು. ನವ್ಹೆಂಬರ್ ಒಂದರ ಮೆರವಣಿಗೆಯಲ್ಲಿ ಈ ಬಾರಿ ನಾಲ್ಕು ಲಕ್ಷ ಮೀರಿದ ಜನಸಾಗರವೇ ಸೇರಿತ್ತು ಇದೊಂದು ಐತಿಹಾಸಿಕ ದಾಖಲೆ. ಮೆರವಣಿಗೆಯ ಮಾರ್ಗ ಹೊರತುಪಡಿಸಿ ಬೆಳಗಾವಿಯ ಇನ್ನುಳಿದ ಪ್ರಮುಖ ರಸ್ತೆಗಳು,ವೃತ್ತಗಳು ಸಹಸ್ರಾರು ಯುವಕರಿಂದ…
ಹುಬ್ಬಳ್ಳಿ : ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಮನೆ ಸಂಪೂರ್ಣ ಸುಟ್ಟುಹೋದ ಘಟನೆ ಹುಬ್ಬಳ್ಳಿ ತಾಲೂಕಿನ ಕರಡಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಮಾಬೂಸಾಬ್ ಅಲಿಸಾಬ ಸಂಶಕಿ ಎಂಬುವರ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಆದರೆ ಮನೆ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಸ್ಪೋಟದ ಶಬ್ದ ಕೇಳಿ ಮನೆಯಿಂದ ಮಾಬೂಸಾಬ್ ಕುಟುಂಬಸ್ಥರು ಹೊರಗೆ ಒಡಿ ಬಂದಿದ್ದು, ಮನೆಯಲ್ಲಿದ್ದ ಬಟ್ಟೆ, ಗೃಹ ವಸ್ತುಗಳು ಬೆಂಕಿಗಾಹುತಿಯಾಗಿವೆ. ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy