Subscribe to Updates
Get the latest creative news from FooBar about art, design and business.
- ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ
- ಸಾಮಾಜಿಕ ನ್ಯಾಯ ಎತ್ತಿ ಹಿಡಿದವರು ಕನಕದಾಸರು: ಎಂ.ಬಿ.ಆನಂದ
- ರಾಜ್ಯ ಮಟ್ಟದ ಕನ್ನಡ ಸೇವಾರತ್ನ ಪ್ರಶಸ್ತಿಗೆ ಡಾ.ಸತ್ಯಕ್ಕ ಗಡ್ಡೆ ಆಯ್ಕೆ
- ನರಹಂತಕ ವ್ಯಾಘ್ರನ ಸೆರೆ: ಜನರ ನಿದ್ದೆಗೆಡಿಸಿದ 9 ವರ್ಷದ ಹುಲಿಯನ್ನು ಹಿಡಿದ ಅರಣ್ಯ ಇಲಾಖೆ
- ನರಹಂತಕ ಹುಲಿಯ ಸೆರೆಗಾಗಿ ಮುಂದುವರಿದ ಕಾರ್ಯಾಚರಣೆ: ಡ್ರೋನ್ ಕ್ಯಾಮೆರಾದಲ್ಲಿ ಹುಲಿ ಪತ್ತೆ!
- ಮಧುಗಿರಿ: ಎರಡು ವರ್ಷದ ಚಿರತೆ ಸೆರೆ
- ಶೈಕ್ಷಣಿಕ ಮತ್ತು ಸಾಂಸ್ಕೃತಿಕ ರಂಗಕ್ಕೆ ಕನಕದಾಸರ ಕೊಡುಗೆ ಅಪಾರ: ಪ.ಪಂ. ಅಧ್ಯಕ್ಷ ಶಿವಕುಮಾರ್
- ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ: ಸಿಎಂ ಸಿದ್ದರಾಮಯ್ಯ
Author: admin
ತುಮಕೂರು: ಕೃಷಿ ಯಂತ್ರಧಾರೆ ಯೋಜನೆಯಡಿ ಯಂತ್ರೋಪಕರಣಗಳ ಏಜೆನ್ಸಿ ರೈತರಿಗೆ ವಂಚನೆ ಮಾಡುತ್ತಿದೆ ಎಂದು ಭಾರತೀಯ ಕೃಷಿಕ ಸಮಾಜದ ತುಮಕೂರು ಜಿಲ್ಲಾ ಘಟಕ ಆರೋಪಿಸಿದೆ. ಈ ಸಂಬಂಧ ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡಿರುವ ಭಾರತೀಯ ಕೃಷಿಕ ಸಮಾಜದ ಅಧ್ಯಕ್ಷರಾದ ಕೋಡಿಹಳ್ಳಿ ಜಗದೀಶ್, ಕೃಷಿ ಯಂತ್ರಧಾರೆ ಯೋಜನೆಯಡಿ ಜಿಲ್ಲೆಯ ಎಲ್ಲಾ ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಅಧಿಕೃತ ಸಂಸ್ಥೆಗಳು ಯಂತ್ರೋಪಕರಣಗಳ ಏಜೆನ್ಸಿ ರೈತರಿಗೆ ವಂಚನೆ ಮಾಡಿ ಭ್ರಷ್ಟಾಚಾರ ನಡೆಸಿ ದುರುಪಯೋಗ ಪಡಿಸಿಕೊಂಡಿದೆ ಎಂದು ಆರೋಪಿಸಿದರು. ಈ ಸಂದರ್ಭದಲ್ಲಿ ಸದಸ್ಯರಾದ ಪುಟ್ಟರಾಜು, ಶ್ರೀ ಸಂಧ್ಯಾ, ಪಾಂಡುರಂಗ, ರಾಜಣ್ಣ, ಆನಂದ್ ಮತ್ತಿತರು ಭಾಗವಹಿಸಿದ್ದರು. ವರದಿ: ದಾಸಾಲುಕುಂಟೆ ಸಿದ್ದರಾಜು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಕೊಡಗಿನಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶ ಮತ್ತು ಸಂತ್ರಸ್ತರ ಭೇಟಿಗೆ ತೆರಳಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಪ್ರತಿಭಟನೆಯ ಜೊತೆ ಅವರ ಕಾರ್ ಗೆ ಮೊಟ್ಟೆ ಎಸೆದು ಅತಿರೇಕದ ವರ್ತನೆ ತೋರಿದ್ದ ಬಿಜೆಪಿ ಕಾರ್ಯಕರ್ತರ ವಿರುದ್ಧ ರಾಜಕೀಯ ವಲಯದಲ್ಲಿ ಪಕ್ಷಾತೀತವಾಗಿ ಆಕ್ರೋಶ ವ್ಯಕ್ತವಾಗುತ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಾರ್‌ಗೆ ಮೊಟ್ಟೆ ಎಸೆದ ಕೃತ್ಯವನ್ನು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಖಂಡಿಸಿದ ಬೆನ್ನಲ್ಲೇ ಇದೀಗ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಬಿಜೆಪಿ ಕಾರ್ಯಕರ್ತರ ವರ್ತನೆಯನ್ನು ಖಂಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಮಾನ್ಯ ಸಿದ್ದರಾಮಯ್ಯ ಅವರು, ವಿರೋಧ ಪಕ್ಷದ ನಾಯಕರಾಗಿದ್ದು, ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ತನ್ನದೇ ಆದ ಗೌರವ ಇರುತ್ತದೆ. ಯಾವುದೇ ವಿಷಯದ ಬಗ್ಗೆ ಬಿನ್ನಾಭಿಪ್ರಾಯವಿದ್ದರೆ ಅದನ್ನು ಬಲವಾದ ಅಭಿಪ್ರಾಯಗಳೊಂದಿಗೆ ವಿರೋಧಿಸಬೇಕು. ಯಾವುದೇ ದೈಹಿಕ ಕಾರ್ಯದಿಂದಲ್ಲ. ಇದನ್ನು ಎಲ್ಲರೂ ಪಾಲಿಸಬೇಕು’ ಎಂದು ಅಭಿಪ್ರಾಯಪಟ್ಟಿದ್ದಾರೆ. ಕೊಡಗಿನಲ್ಲಿ ಮಳೆ ಹಾನಿ ಸಂತ್ರಸ್ತರ ಭೇಟಿಗೆ ತೆರಳಿದ್ದ ವೇಳೆ…
ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ಸರ್ಕಾರಕ್ಕೆ ಕೇಂದ್ರ ಸಂಸ್ಥೆಗಳಿಂದ ಮತ್ತೊಂದು ಆಘಾತ ಎದುರಾಗಿದೆ. ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನಿವಾಸ ಸೇರಿದಂತೆ, ದಿಲ್ಲಿ ಮತ್ತು ಸುತ್ತಮುತ್ತಲಿನ 20ಕ್ಕೂ ಹೆಚ್ಚು ಸ್ಥಳಗಳಲ್ಲಿ ಸಿಬಿಐ ಶುಕ್ರವಾರ ಬೆಳಿಗ್ಗೆ ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದೆ. ದಿಲ್ಲಿ ಅಬಕಾರಿ ನೀತಿಯಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಈ ದಾಳಿಗಳನ್ನು ನಡೆಸಲಾಗಿದೆ ಎಂದು ವರದಿಯಾಗಿದೆ. ತಮ್ಮ ವಿರುದ್ಧದ ಎಲ್ಲ ಆರೋಪಗಳನ್ನು ನಿರಾಕರಿಸಿರುವ ಮನೀಶ್ ಸಿಸೋಡಿಯಾ, ತನಿಖೆಗೆ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ. ಸಿಬಿಐ ನನ್ನ ಮನೆಗೆ ಬಂದಿದೆ. ನಾವು ತನಿಖೆಗೆ ಸಂಪೂರ್ಣ ಸಹಕಾರ ನೀಡಲಿದ್ದೇವೆ. ಇದರಿಂದ ಸತ್ಯ ಶೀಘ್ರವೇ ಹೊರಬೀಳಲಿದೆ. ಇದುವರೆಗೂ ನನ್ನ ವಿರುದ್ಧ ಅನೇಕ ಪ್ರಕರಣಗಳನ್ನು ದಾಖಲಿಸಲಾಗಿದೆ. ಆದರೆ ಏನೂ ಹೊರಬಂದಿಲ್ಲ. ಅವುಗಳಿಂದ ಯಾವ ಪ್ರಯೋಜನ ಕೂಡ ಆಗಿಲ್ಲ. ದೇಶಕ್ಕೆ ಉತ್ತದಿಲ್ಮಲಿ ಶಿಕ್ಷಣ ನೀಡುವ ನನ್ನ ಕೆಲಸವನ್ನು ತಡೆಯುವುದು ಸಾಧ್ಯವಿಲ್ಲ” ಎಂದು ಮನೀಶ್ ಟ್ವೀಟ್ ಮಾಡಿದ್ದಾರೆ. ದೇಶದಲ್ಲಿ ಒಳ್ಳೆಯ ಕೆಲಸ ಮಾಡಿದವರಿಗೆ ಈ…
ಐಟಿಬಿಪಿ ಯೋಧರಿಗೆ ಸೇರಿದ ಎರಡು ಎಕೆ-47 ರೈಫಲ್ಗಳು ಕಳ್ಳತನವಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಹಾಲಬಾವಿಯಲ್ಲಿರುವ ಐಟಿಬಿಪಿ ಶಿಬಿರದಲ್ಲಿ ನಕ್ಸಲ್ ನಿಗ್ರಹ ತರಬೇತಿ ನಡೆಯುತ್ತಿದೆ. ತರಬೇತಿಗೆಂದು ಮಧುರೈನಿಂದ ಬಂದಿರುವ ಐಟಿಬಿಪಿ 45ನೇ ಬೆಟಾಲಿಯನ್ನ ಯೋಧರಾದ ರಾಜೇಶ್ಕುಮಾರ್, ಸಂದೀಪ ಮೀನಾ ಅವರಿಗೆ ಸೇರಿದ ಎಕೆ-47 ರೈಫಲ್ಗಳು ಕಳುವಾಗಿವೆ. ಆಗಸ್ಟ್ 17ರಂದು ರಾತ್ರಿ ಮಲಗುವಾಗ ಎಕೆ-47 ರೈಫಲ್ಗಳನ್ನು ಭದ್ರತೆಯಲ್ಲಿಯೇ ಇರಿಸಲಾಗಿತ್ತು. ಬಿಗಿ ಭದ್ರತೆಯ ನಡುವೆಯೂ ಘಾತಕ ರೈಫಲ್ಗಳು ಯೋಧರ ಸುಪರ್ದಿಯಿಂದ ತಪ್ಪಿಹೋಗಿರುವುದು ಆತಂಕಕ್ಕೆ ಕಾರಣವಾಗಿದೆ. ರೈಫಲ್ ಪತ್ತೆಗಾಗಿ ಅಪರಾಧ ವಿಭಾಗದ ಡಿಸಿಪಿ ಪಿ.ವಿ.ಸ್ನೇಹಾ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಭಾರತೀಯ ಶಸ್ತ್ರಾಸ್ತ್ರ ಕಾಯ್ದೆಯಡಿ ಐಟಿಬಿಪಿ ಅಧಿಕಾರಿಗಳು ಕಾಕತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಚಿಕ್ಕಮಗಳೂರು : ವ್ಯಕ್ತಿಯೊಬ್ಬ ತನ್ನ ಮನೆ ಬಳಿ ಕಟ್ಟಿದ್ದ ರಾಷ್ಟ್ರ ಧ್ವಜವನ್ನು ಸಿಗರೇಟ್ ನಿಂದ ಸುಟ್ಟು ತೂತಾಗಿಸಿದ್ದ ಎನ್ನಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಸ್ಗರ್ (50)ಬಂಧಿತ ಆರೋಪಿ. ಘಟನೆ ಬಳಿಕ ಆರೋಪಿ ಅಸ್ಗರ್ ಪರಾರಿಯಾಗಿದ್ದ. ಇದೀಗ ಚಿಕ್ಕಮಗಳೂರು ನಗರದ ಬಾರ್ ಲೈನ್ ರಸ್ತೆ ನಿವಾಸಿ ಅಸ್ಗರ್ ನನ್ನು ಪೊಲೀಸರು ಬಂಧಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತುಮಕೂರು : ಬೈಕ್ ನಲ್ಲಿ ನಾಗರಹಾವು ಇದ್ದರೂ ಸವಾರನಿಗೆ ತಿಳಿಯಲೇ ಇಲ್ಲ. ಒಂದೂವರೆ ಕಿಲೋಮೀಟರ್ ಪ್ರಯಾಣಿಸಿದ ಬಳಿಕ ಹಾವು ಇರುವುದು ಬೆಳಕಿಗೆ ಬಂದಿದ್ದು, ಬಳಿಕ ಹಾವನ್ನು ಹೊರ ತೆಗೆದಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ನಗರದ ರಂಗಾಪುರ ಬಡಾವಣೆಯಲ್ಲಿ ಶರತ್ ಎಂಬುವವರ ಬೈಕ್ ನಲ್ಲಿ ನಾಗರಹಾವು ಸೇರಿಕೊಂಡಿತ್ತು. ಹಾವನ್ನು ಕಂಡು ಭಯ ಭೀತರಾದ ಶರತ್, ವಾರಂಗಲ್ ವನ್ಯಜೀವಿ ಜಾಗೃತ ಹಾಗೂ ಉರಗ ರಕ್ಷಣೆ ಸಂಸ್ಥೆಗೆ ಕರೆ ಮಾಡಿದರು. ಸಂಸ್ಥೆಯ ಉರಗ ತಜ್ಞ ದಿಲೀಪ್ ಸ್ಥಳಕ್ಕೆ ಭೇಟಿ ನೀಡಿ ದ್ವಿಚಕ್ರ ವಾಹನವನ್ನು ಪರಿಶೀಲನೆ ಮಾಡಿದರು. ನಂತರ ಬೈಕ್ ಅನ್ನು ಒಂದು ಕಿಲೋಮೀಟರ್ ದೂರದಲ್ಲಿ ಇರುವ ಬೈಕ್ ಗ್ಯಾರೇಜ್ ಗೆ ಕೊಂಡೊಯ್ದುರು. ಬೈಕ್ ಪಾರ್ಟ್ಸ್ ಗಳನ್ನು ಬಿಚ್ಚಿ ಅರ್ಧಗಂಟೆಗಳ ಕಾಲ ಕಾರ್ಯಚರಣೆ ನಡೆಸಿ ಸೇರಿಕೊಂಡಿದ್ದ ಹಾವನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿ ದೇವರಾಯನ ದುರ್ಗ ಅರಣ್ಯಕ್ಕೆ ರವಾನಿಸಿದರು. ವರದಿ : ರಾಜೇಶ್ ರಂಗನಾಥ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…
ಪಾವಗಡ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಕುಮಾರ್ ಶೆಟ್ಟಿ ಅವರ ಪಾವಗಡ ಕಚೇರಿಯಲ್ಲಿ ರಾಷ್ಟ್ರಧ್ವಜ ಹಾರಿಸಿ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಬಳಿಕ ಪಾವಗಡ ಬೆಟ್ಟದ ಮೇಲೆ ಬಾವುಟ ಹಾರಿಸಿ, ಕರ್ನಾಟಕ ರಕ್ಷಣಾ ವೇದಿಕೆಯ ಮುಖಂಡರು ಹಾಗೂ ಕಾರ್ಯಕರ್ತರು ಬೈಕ್ ರಾಲಿ ನಡೆಸಿದರು. ಕಾರ್ಯಕ್ರಮದಲ್ಲಿ ಮಾಜಿ ಸೈನಿಕ ರಾಜಸಾಬ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಪಾವಗಡ ತಾಲೂಕು ಅಧ್ಯಕ್ಷ ಲಕ್ಷ್ಮಿನಾರಾಯಣ, ಪಾವಗಡ ತಾಲೂಕು ಉಪಾಧ್ಯಕ್ಷ ನರಸಿ ಪಾಟೀಲ್, ಪಾವಗಡ ತಾಲೂಕು ಗೌರವಾಧ್ಯಕ್ಷ ಅಮೀರ್, ಮಹಿಳಾ ಘಟಕದ ಅಧ್ಯಕ್ಷ ಶಶಿಕಲಾ, ಯೂಥ್ ಪ್ರೆಸಿಡೆಂಟ್ ಪ್ರಶಾಂತ್ ಮತ್ತು ಲಚ್ಚಿ ಹಾಗೂ ಮಿರ್ಚಿ, ರಂಗನಾಯಕ, ಮಂಜು, ಶ್ರೀನಿವಾಸ್, ಚಂದ್ರು, ನರಸಿಂಹಮೂರ್ತಿ ಸ್ಮಾರ್ಟ್ ತುಮಕೂರು ಪೇಪರ್ ವರದಿಗಾರರು ಅನಿಲ್, ನಾಗಲಮಡಿಕೆ ಹೋಬಳಿ ಅಧ್ಯಕ್ಷರು ರಾಮಮೂರ್ತಿ, ನಾಗಲಮಡಿಕೆ ಹೋಬಳಿ ಉಪಾಧ್ಯಕ್ಷರು ಅಧ್ಯಕ್ಷರು ಮಲ್ಲಿಕಾರ್ಜುನ ನಾಗಲಮಡಿಕೆ, ನಾಗಲಮಡಿಕೆ ಹೋಬಳಿ ಗೌರವ ಅಧ್ಯಕ್ಷರು ಮಲ್ಲಿಕಾರ್ಜುನ ಗ್ಯಾದಿಗುಂಟೆ, ವಿನಿತ್ ಹರ್ಷವರ್ಧನ್, ವಿನೋದ್ ಕುಮಾರ್, ಆಕಾಶ್ ಹಾಗೂ ಎಲ್ಲಾ ಘಟಕದ…
ತುಮಕೂರು: ಪತ್ನಿ ವಿದೇಶಕ್ಕೆ ತೆರಳಿದ್ದರಿಂದ ಬೇಸತ್ತು ಪತಿ, ತನ್ನ ಮೂವರು ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಪತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ನಗರದ ಪಿ.ಎಚ್ ಕಾಲೋನಿಯ ನಿವಾಸಿ ಸಮಿವುಲ್ಲಾ ಮೃತ ದುರ್ದೈವಿ, ಈತನೊಂದಿಗೆ ವಿಷ ಸೇವಿಸಿದ್ದ ಮೂವರು ಮಕ್ಕಳು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವು, ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಸಮಿವುಲ್ಲಾನ ಪತ್ನಿ ಸಾಹೆರಾಬಾನು ಪತಿಯ ವಿರೋಧದ ನಡುವೆಯೂ ಮನೆ ಕೆಲಸಕ್ಕೆಂದು ಸೌದಿ ಅರೆಬಿಯಾಕ್ಕೆ ತೆರಳಿದ್ದಳು. ವಿದೇಶಕ್ಕೆ ತೆರಳಿದ ಬಳಿಕ ಪತ್ನಿಯ ವರ್ತನೆ ಬದಲಾಗಿತ್ತು. ಮನೆ ಕೆಲಸಕ್ಕೆಂದು ಹೋಗಿದ್ದ ಪತ್ನಿ ಸಾಹೆರಾಬಾನು ವಾಪಸು ಭಾರತಕ್ಕೆ ಬರಲು ನಿರಾಕರಿಸಿದ್ದಳು. ಸಾಲದಕ್ಕೆ ಪತಿ ಕರೆ ಮಾಡಿದಾಗಲೆಲ್ಲಾ ಕರೆ ಸ್ವೀಕರಿಸುತ್ತಿರಲಿಲ್ಲ. ಅಲ್ಲದೇ ಮೋಜು ಮಸ್ತಿ ಮಾಡುತ್ತ ಪತಿಗೆ ವಿಡಿಯೋ ಕಾಲ್ ಮಾಡಿ ರೇಗಿಸುತ್ತಿದ್ದಳು ಎನ್ನಲಾಗಿದೆ. ಇದರಿಂದಾಗಿ ಬೇಸತ್ತ ಪತಿ, ಹಲವು ಬಾರಿ ಕರೆದರೂ ಪತ್ನಿ ವಾಪಾಸು ಬರುತ್ತಿಲ್ಲವೆಂದು ನೊಂದು ತನ್ನ ಮೂವರು ಮಕ್ಕಳೊಂದಿಗೆ ವಿಷ ಸೇವಿಸಿದ್ದಾನೆ. ಆಸ್ಪತ್ರೆಗೆ ಸಾಗಿಸುವ ವೇಳೆ ಸಮಿವುಲ್ಲಾ ಮೃತ…
ತುಮಕೂರು: ನಗರದ ಟೌನ್ ಹಾಲ್ ಸರ್ಕಲ್ ನಲ್ಲಿರುವ ಗಣಪತಿ ದೇವಸ್ಥಾನದ ಎದುರು ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ ಕಾರ್ಯಕರ್ತ ಸಾವರ್ಕರ್ ಫ್ಲೆಕ್ಸ್ ಅಳವಡಿಸಿದ್ದು, ಫ್ಲೆಕ್ಸ್ ವಿವಾದ ಮುಂದುವರಿದಿದೆ. ಮೊನ್ನೆ ರಾತ್ರಿ ಸಾವರ್ಕರ್ ಫ್ಲೆಕ್ಸ್ ಗಳನ್ನು ಕಿಡಿಗೇಡಿಗಳು ಹರಿದಿದ್ದರು. ಇದೀಗ ಮತ್ತೆ ಫ್ಲೆಕ್ಸ್ ಹಾಕಲಾಗಿದ್ದು, ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯುದಂತೆ ಕಟ್ಟೆಚ್ಚರ ವಹಿಸಲಾಗಿದೆ. ತುಮಕೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ವಾತಂತ್ರ್ಯೋತ್ಸವ ದಿನ ಮುಗಿದರೂ ಸಾವರ್ಕರ್ ಫ್ಲೆಕ್ಸ್ ವಿವಾದ ಮುಂದುವರಿದಿದೆ. ವರದಿ: ರಾಜೇಶ್ ರಂಗನಾಥ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಯುವ ಸಬಲೀಕರಣ ಮತ್ತುಕ್ರೀಡಾ ಇಲಾಖೆ, ಬೆಳಗಾವಿಯಿಂದ ಕಷ್ಟ ಪರಿಸ್ಥಿತಿಯಲ್ಲಿರುವ ಮಾಜಿ ಕುಸ್ತಿ/ಇತರೆ ಕ್ರೀಡಾಪಟುಗಳಿಗೆ ಕ್ರೀಡಾ ಮಾಶಾಸನ ಮಂಜೂರಾತಿಗಾಗಿ ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರ ಮಟ್ಟದ ಅಧೀಕೃತ ಪಂದ್ಯಾವಳಿಯಲ್ಲಿ ಭಾಗವಹಿಸಿದ/ಪದಕ ವಿಜೇತ 50 ವರ್ಷ ಮೇಲ್ಟಟ್ಟ ಮಾಜಿ ಕುಸ್ತಿ/ಇತರೆ ಕ್ರೀಡಾಪಟುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ. ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರ ಮಟ್ಟದಅಧೀಕೃತ ಪಂದ್ಯಾವಳಿಯಲ್ಲಿ ಭಾಗವಹಿಸಿದ/ಪದಕ ವಿಜೇತ ಮಾಜಿ ಕುಸ್ತಿ/ಇತರೆ ಕ್ರೀಡಾಪಟುಗಳು ನಿಗದಿತ ನಮೂನೆಯಲ್ಲಿಅರ್ಜಿಯನ್ನು ಉಪ ನಿರ್ದೇಶಕರಕಚೇರಿ, ಯುವ ಸಬಲೀಕರಣ ಮತ್ತುಕ್ರೀಡಾ ಇಲಾಖೆ, ಜಿಲ್ಲಾಕ್ರೀಡಾಂಗಣ, ಬೆಳಗಾವಿ ಇವರಲ್ಲಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ. 8660184052 ಅಥವಾ 0831-2950306 ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತುಕ್ರೀಡಾ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy