Subscribe to Updates
Get the latest creative news from FooBar about art, design and business.
- ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ
- ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ
- ಭಯ ಬೇಡ, ಪೊಲೀಸರನ್ನು ಸಮುದಾಯದ ಭಾಗವಾಗಿ ಕಾಣಿ: ಸಿಪಿಐ ಶ್ರೀನಿವಾಸ್ ಡಿಜೆ
- ತುಮಕೂರು: ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ
- ಸಾಗುವಳಿದಾರ ರೈತರ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ ಆರೋಪ; ಕೆಪಿಟಿಸಿಎಲ್ ಖಾಸಗೀಕರಣಕ್ಕೆ ತೀವ್ರ ಆಕ್ರೋಶ
- ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!
- ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ
- ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ
Author: admin
ಶಿಕ್ಷಕ ಮದ್ಯ ಸೇವಿಸಿ ಶಾಲೆಗೆ ಬಂದು ತರಗತಿಯಲ್ಲಿ ನೆಲದ ಮೇಲೆ ಮಲಗಿರುವ ಘಟನೆ ನಡೆದಿದೆ. ಕರ್ನಾಟಕ ರಾಜ್ಯದ ಉಡುಪಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಪುರಸಭೆ ವ್ಯಾಪ್ತಿಯ ಅಲಂಗಾರು ಸರ್ಕಾರಿ ಶಾಲೆಯಲ್ಲಿ ಕೃಷ್ಣಮೂರ್ತಿ ಎಂಬ ವ್ಯಕ್ತಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ವೇಳೆ ಬುಧವಾರ ಕುಡಿದು ಶಾಲೆಗೆ ಬಂದಿದ್ದರು. ಕುಡಿದ ಮತ್ತಿನಲ್ಲಿ ತರಗತಿಯ ನೆಲದ ಮೇಲೆಯೇ ನಿದ್ದೆಗೆ ಜಾರಿದರು. ಇದನ್ನು ಗಮನಿಸಿದ ಶಾಲಾ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಶಿಕ್ಷಕರನ್ನು ಎಬ್ಬಿಸಲು ಯತ್ನಿಸಿದ್ದಾರೆ. ಆದರೆ ಶಿಕ್ಷಕರು ಎಚ್ಚೆತ್ತುಕೊಳ್ಳಲಿಲ್ಲ. ಅವರನ್ನು ಅಮಾನತುಗೊಳಿಸಬೇಕು ಎಂದು ವಿದ್ಯಾರ್ಥಿಗಳ ಪೋಷಕರು ಒತ್ತಾಯಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ರಾಜ್ಯದಲ್ಲಿ 11133 ಪೌರ ಕಾರ್ಮಿಕರ ನೌಕರಿಯನ್ನು ಖಾಯಂಗೊಳಿಸಲಾಗಿದೆ. ಕರ್ನಾಟಕದಲ್ಲಿ ಸುಮಾರು 42 ಸಾವಿರ ಪೌರಕಾರ್ಮಿಕರಿದ್ದು, ಮುಂದಿನ ದಿನಗಳಲ್ಲಿ ಇವರೆಲ್ಲರಿಗೂ ಖಾಯಂ ನೇಮಕಾತಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಬೆಳಗಾವಿಯ ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇಮಕವಾದ ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರ ವಿತರಿಸಿ ಮಾತನಾಡಿದರು. ಪೌರಕಾರ್ಮಿಕರಿಗೆ 2000 ರೂ. ಸಂಕಷ್ಟ ಭತ್ಯೆ : ಆಯವ್ಯಯದಲ್ಲಿ ಪೌರಕಾರ್ಮಿಕರಿಗೆ 2000 ರೂ. ಸಂಕಷ್ಟ ಭತ್ಯೆಯನ್ನು ಅವರ ಆರೋಗ್ಯ ಹಿತರಕ್ಷಣೆಗೆ ನೀಡಲಾಯಿತು. ಪೌರಕಾರ್ಮಿಕರ ಹಿತರಕ್ಷಣೆಗಾಗಿ ಕಾನೂನನ್ನು ಬದಲಾಯಿಸಿ, ಈ ತೀರ್ಮಾನವನ್ನು ಕೈಗೊಳ್ಳುವ ಮೂಲಕ ಪೌರಕಾರ್ಮಿಕರಿಗೆ ನ್ಯಾಯ ಒದಗಿಸಲಾಗಿದೆ. ಅವರ ಗೌರವಯುತ ಜೀವನ ನಡೆಸುವ ಸಲುವಾಗಿ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ. ಈ ಜಿಲ್ಲೆಯಲ್ಲಿ 309 ಕ್ಲೀನರ್ ಗಳನ್ನು, 1437 ಲೋಡರ್ಸ್ ಗಳನ್ನು ಖಾಯಂಗೊಳಿಸಲಾಗಿದೆ. ಇದೇ ರೀತಿ ಉಳಿದವರನ್ನು ನೇಮಕಾತಿ ಪ್ರಕ್ರಿಯೆ ಕೈಕೊಳ್ಳಲಾಗುವುದು. ಅಲ್ಲಿಯವರೆಗೆ ಅವರ ಸೇವಾದರವನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡುವ ತೀರ್ಮಾನ ಸರ್ಕಾರ ಮಾಡಿದೆ ಎಂದರು. ಪೌರ…
ಕಾರ್ಮಿಕರ ಮಕ್ಕಳಿಗೆ ನೀಡುವ ಬಸ್‍ಪಾಸ್ ಈ ಹಿಂದೆ ಬಿ.ಎಂ.ಟಿ.ಸಿ.ಯಲ್ಲಿ ಮಾತ್ರ ಲಭ್ಯವಿದ್ದು ಅದನ್ನು ನಮ್ಮ ಸರ್ಕಾರ ಎಲ್ಲ ನಿಗಮಗಳಿಗೂ ವಿಸ್ತರಿಸಿದೆ.ಈಗಿರುವ 40 ಕೀ.ಮಿ. ವ್ಯಾಪ್ತಿಯನ್ನು ಹೆಚ್ಚಳ ಮಾಡಲಾಗುವುದು. ಹಾಗೂ ಕಾರ್ಮಿಕರ ಸಂಖ್ಯೆ ಅತ್ಯಧಿಕವಾಗಿದ್ದು ಎಲ್ಲರಿಗೂ ಏಕಕಾಲದಲ್ಲಿ ಸೌಲಭ್ಯ ನೀಡಲು ಆಗುವುದಿಲ್ಲ. ಹಾಗಾಗಿ ಹಂತ ಹಂತವಾಗಿ ಸೌಲಭ್ಯ ವಿಸ್ತರಿಸಲಾಗುವುದು ಎಂದರು. ವಿಧಾನ ಮಂಡಲದಲ್ಲಿ ಬುಧವಾರ ಹುಣಸೂರು ಶಾಸಕ ಎಚ್.ಪಿ.ಮಂಜುನಾಥ ಅವರು ಕಾರ್ಮಿಕ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ನಿಗಮ ಹಾಗೂ ಮಂಡಳಿ ಹಾಗೂ ಅವುಗಳ ಯೋಜನೆಗಳ ಕುರಿತು ಮತ್ತು ಕಾರ್ಮಿಕರ ಮಕ್ಕಳಿಗೆ ಬಸ್‍ಪಾಸ್ ಸಂಚಾರ ಮಿತಿಯನ್ನು ಹೆಚ್ಚಿಸಲು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು 28 ಲಕ್ಷ ಕಟ್ಟಡ ಕಾರ್ಮಿಕರಿದ್ದು ಅವರಿಗೆ ಉಚಿತವಾಗಿ ಗುರುತಿನ ಚೀಟಿಯನ್ನು ಸ್ಥಳದಲ್ಲಿಯೇ ವಿತರಿಸಲಾಗುತ್ತಿದೆ. ಅವರ ಒಂದು ವರ್ಷದ ಅವಧಿಗೆ ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆಯ ಪ್ರಯೋಜನೆ ಪಡೆಯಬಹುದ್ದಾಗಿದ್ದು ಅಪಘಾತದಿಂದ ಮರಣ ಹೊಂದಿದ್ದಲ್ಲಿ ಅಥವಾ ಸಂಪೂರ್ಣ ಶಾಶ್ವತ ದುರ್ಬಲತೆ ಹೊಂದಿದ್ದಲ್ಲಿ 2 ಲಕ್ಷ ರೂ. ಪರಿಹಾರ ಪಡೆಯಬಹುದಾಗಿದೆ. ಕರ್ನಾಟಕ ಕಾರ್ಮಿಕ ಕಲ್ಯಾಣ…
ದೂರುಗಳು ಬಾರದಂತೆ, ಸರಳೀಕರಣಗೊಳಿಸುವ ಭಾಗವಾಗಿ ಸರ್ವೆ ಪ್ರಕ್ರಿಯೆಯನ್ನು ಇನ್ನಷ್ಟು ಆಧುನೀಕರಣಗೊಳಿಸಲಾಗುವುದು ಎಂದು ಕಂದಾಯ ಸಚಿವರಾದ ಆರ್.ಅಶೋಕ ಅವರು ಹೇಳಿದರು. ಪರಿಷತ್ತಿನಲ್ಲಿ ಇಂದು ಸದಸ್ಯರಾದ ಗೋವಿಂದರಾಜು ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಾವು ಈಗಾಗಲೇ ಸ್ವಾವಲಂಬಿ ಆಪ್ ಮಾಡಿದ್ದೇವೆ. ಭೂ-ಪರಿವರ್ತನೆ ಬಯಸುವವರು ಸ್ಕೆಚ್ ಮಾಡಿಕೊಂಡು ಆಧಾರ್ ನಂಬರ್ ಸಹಿತ ಈ ಸ್ವಾವಲಂಬಿ ಆಪ್‍ಗೆ ಹಾಕಿದಲ್ಲಿ ಅದನ್ನು ಸಬ್ ರಿಜಿಸ್ಟರ್ ಕಚೇರಿಗೆ ಕಳುಹಿಸುತ್ತೇವೆ. ಇಲ್ಲಿ ತಿದ್ದುಪಡಿಗೆ ಅವಕಾಶವಿಲ್ಲ. ಈ ಪ್ರಕ್ರಿಯೆಯನ್ನು ಪ್ರಾಯೋಗಿಕವಾಗಿ ಬಳ್ಳಾರಿ ಜಿಲ್ಲೆಯಲ್ಲಿ ಆರಂಭಿಸಲು ತಿಳಿಸಿದ್ದೇವೆ. ಬಳಿಕ ರಾಜ್ಯಾದ್ಯಂತ ವಿಸ್ತರಿಸಲಾಗುವುದು ಎಂದು ಸಚಿವರು ತಿಳಿಸಿದರು. ಪಿ ಸರ್ವೆ ತೊಂದರೆ ಇತ್ಯರ್ಥಕ್ಕೆ ಕ್ರಮ: ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿನ ಪಿ ಸರ್ವೆ ನಂಬರ್ ತೊಂದರೆಯನ್ನು ಸಹ ಬೇಗ ಸರಿಪಡಿಸಲಾಗುವುದು ಎಂದು ಸಚಿವ ಆರ್.ಅಶೋಕ ಅವರು ಸದಸ್ಯರಾದ ಎಂ.ಎಲ್.ಅನೀಲ್ ಕುಮಾರ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಕಾನೂನು ತೊಡಕು ಸರಿಪಡಿಸ್ತೇವೆ: ಕರಾವಳಿ ಭಾಗದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಅನಾದಿಕಾಲದಿಂದ ಅನುಭವಿಸಿಕೊಂಡು ಬರುತ್ತಿರುವ ಕಾನೆ, ಬಾನೆ, ಕುಮ್ಕಿ…
ಗ್ರಾಮೀಣ ವಿಧಾನಸಭಾ ಕ್ಷೇತ್ರದ ತಾರಿಹಾಳ ಗ್ರಾಮದಲ್ಲಿ ಬುಧವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಒಟ್ಟು 6.50 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಚಾಲನೆ ನೀಡಿದರು. 1 ಕೋಟಿ ರೂ. ವೆಚ್ಚದ ಶ್ರೀ ರಾಮಲಿಂಗೇಶ್ವರ ದೇವಸ್ಥಾನ ನಿರ್ಮಾಣಕ್ಕೆ ಶಂಕುಸ್ಥಾಪನೆ, 1.50 ಕೋಟಿ ರೂ ವೆಚ್ಚದಲ್ಲಿ ಗ್ರಾಮದೊಳಗಿನ ಕಾಂಕ್ರೀಟ್ ರಸ್ತೆಗಳ ನಿರ್ಮಾಣದ ಜೊತೆಗೆ ಪೇವರ್ಸ್ ಅಳವಡಿಸುವ ಕಾಮಗಾರಿ ಹಾಗೂ 4 ಕೋಟಿ ರೂ. ವೆಚ್ಚದಲ್ಲಿ ಮಾಸ್ತಮರ್ಡಿ ಕ್ರಾಸ್ ನಿಂದ ತಾರಿಹಾಳ ಗ್ರಾಮದವರೆಗೆ ರಸ್ತೆಯ ಅಭಿವೃದ್ಧಿ ಜೊತೆಗೆ ರಸ್ತೆಯ ಅಗಲಿಕರಣ ಹಾಗೂ ಬೀದಿ ದೀಪಗಳ ಅಳವಡಿಕೆ ಕಾಮಗಾರಿಗಳಿಗೆ ಭೂಮಿ ಪೂಜೆಯನ್ನು ನಡೆಸಲಾಯಿತು. ಬಡೆಕೊಳ್ಳ ಮಠದ ಶ್ರೀ ಸದ್ಗುರು ನಾಗೇಂದ್ರ ಸ್ವಾಮಿಗಳು ಹಾಗೂ ಅಡವಿಸಿದ್ದೇಶ್ವರ ಮಠದ ಶ್ರೀ ಅಡವೇಶ್ವರ ದೇವರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ತಾರಿಹಾಳ ಗ್ರಾಮದಲ್ಲಿ ಬುಧವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಒಟ್ಟು 6.50 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ…
ಚಿಕ್ಕಮಗಳೂರು: ತನಗೆ ಕಚ್ಚಿದ ಹಾವನ್ನು ಕಾರ್ಮಿಕನೋರ್ವ ಕೈಯಲ್ಲಿ ಹಿಡಿದುಕೊಂಡು ನೇರವಾಗಿ ಆಸ್ಪತ್ರೆಗೆ ಬಂದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ನಡೆದಿದೆ. ತರೀಕೆರೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿ, ತನ್ನ ಊರಿಗೆ ಹೋಗಲು ರೈಲ್ವೆ ನಿಲ್ದಾಣದ ಬಳಿ ಬಂದಾಗ ಹಾವು ಕಚ್ಚಿದೆ. ಕಚ್ಚಿದ ಹಾವನ್ನು ಹಿಡಿದು ನೇರವಾಗಿ ತರೀಕೆರೆ ಸರ್ಕಾರಿ ಆಸ್ಪತ್ರೆಗೆ ಆಗಮಿಸಿದ್ದಾನೆ. ವ್ಯಕ್ತಿಯನ್ನು ಕೊಲ್ಕತ್ತಾ ಮೂಲದ ಆಸೀಫ್ ಎಂದು ಗುರುತಿಸಲಾಗಿದೆ. ಈತನಿಗೆ ಕಚ್ಚಿದ ಹಾವು ಕೊಳಕು ಮಂಡಲ ಹಾವಾಗಿದೆ. ಸದ್ಯ ತರೀಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಈತನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಇಂದಿನ ವಿಧಾನಸಭಾ ಅಧಿವೇಶನದಲ್ಲಿ ರಾಜ್ಯದಲ್ಲಿ ಕುಂಠಿತಗೊಳ್ಳುತ್ತಿರುವ ಕೃಷಿ ಚಟುವಟಿಕೆಗಳು, ನಷ್ಟದಲ್ಲಿರುವ ರೈತರು, ಸಾಂಕ್ರಾಮಿಕ ರೋಗಗಳಿಂದ ಹಾನಿಗೀಡಾದ ಬೆಳೆಗಳು ಮತ್ತು ಅವುಗಳ ಬಗ್ಗೆ ಸರ್ಕಾರ ಕೈಗೊಳ್ಳಬೇಕಾದ ಪರಿಹಾರ ಕ್ರಮಗಳ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸುದೀರ್ಘವಾಗಿ ಮಾತನಾಡಿದರು. ಅವರ ಮಾತುಗಳನ್ನು ಯಥಾವತ್ತಾಗಿ ಇಲ್ಲಿ ನೀಡಲಾಗಿದೆ. ಆಹಾರ ಭದ್ರತೆ ಸಿಕ್ಕಮೇಲೆ ಬಹಳಷ್ಟು ಜನ ಅನ್ನದಾತರು ಕೃಷಿಯಿಂದ ವಿಮುಖರಾಗುತ್ತಿದ್ದಾರೆ, ವಿಶೇಷವಾಗಿ ಯುವ ಜನರು ಕೃಷಿ ತೊರೆದು ಬೇರೆ ಉದ್ಯೋಗಗಳನ್ನು ಅರಸಿ ಪಟ್ಟಣಗಳಿಗೆ ವಲಸೆ ಹೋಗುತ್ತಿದ್ದಾರೆ. ಕೃಷಿ ಲಾಭದಾಯಕ ಉದ್ಯೋಗವಲ್ಲದಿರುವುದು ಇದಕ್ಕೆ ಕಾರಣ. ಕೃಷಿ ಒಟ್ಟು ಜನಸಂಖ್ಯೆಯ ಶೇ.50 ಜನರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಿದೆ. ರಾಜ್ಯದಲ್ಲಿ ಸುಮಾರು 3 ಕೋಟಿ ಜನ ಕೃಷಿ ಮೇಲೆ ಅವಲಂಬಿತರಾಗಿದ್ದಾರೆ. ಕೃಷಿಯಲ್ಲಿನ ಬಿಕ್ಕಟ್ಟಿನಿಂದಾಗ ರೈತರು ಕಷ್ಟ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. 2001ರಲ್ಲಿ ಹಿಡುವಳಿದಾರರ ಸಂಖ್ಯೆ 62 ಲಕ್ಷ ಕುಟುಂಬಗಳು. 2016ರಲ್ಲಿ ಅದು 87 ಲಕ್ಷ ಕುಟುಂಬಗಳಾಗಿ ಒಡೆದಿದೆ. ವ್ಯವಸಾಯಕ್ಕೆ ಯೋಗ್ಯವಾದ ಜಮೀನು ಅಷ್ಟೇ ಇದ್ದರೂ ಹಿಡುವಳಿದಾರರ ಸಂಖ್ಯೆ ಏರಿಕೆಯಾಗಿದೆ. ಹಿಡುವಳಿಯ ಗಾತ್ರ ಕಡಿಮೆಯಾದಂತೆ ಅದರಿಂದ…
ಬೆಳಗಾವಿ : ಸುವರ್ಣ ಸೌಧದ ಮುಂದೆ ನಾಲ್ಕು ಪ್ರತಿಮೆಗಳ ನಿರ್ಮಾಣ ಕಾಮಗಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಭೂಮಿ ಪೂಜೆ ನೆರವೇರಿಸಲಿದ್ದಾರೆ. ಬೆಳಗ್ಗೆ 10:30 ಕ್ಕೆ ಮಹಾತ್ಮ ಗಾಂಧೀಜಿ, ಡಾ ಬಿ.ಆರ್ , ಅಂಬೇಡ್ಕರ್, ಸಂಗೊಳ್ಳಿ ರಾಯಣ್ಣ, ಕಿತ್ತೂರು ರಾಣಿ ಚೆನ್ನಮ್ಮನ ಪ್ರತಿಮೆಗಳ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆಯನ್ನು ಸಿಎಂ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಸಿಎಂ ಸಿದ್ದರಾಮಯ್ಯ, ಸೇರಿ ಹಲವರು ಭಾಗಿಯಾಗಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
2022 ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಹಳಿಯಾಳ ಕ್ಷೇತ್ರದ ಶಾಸಕ ಆರ್.ವಿ. ದೇಶಪಾಂಡೆಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಲಾಗಿದೆ. ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅಧ್ಯಕ್ಷತೆಯಲ್ಲಿರುವ ಆಯ್ಕೆ ಸಮಿತಿಯು ಅವರನ್ನು ಆಯ್ಕೆ ಮಾಡಿದೆ. ಇಂದು ವಿಧಾನಸಭೆಯಲ್ಲಿ ಆರ್.ವಿ. ದೇಶಪಾಂಡೆಗೆ 2022 ನೇ ಸಾಲಿನ ಅತ್ಯುತ್ತಮ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಕ್ಷೇತ್ರದ ಶಾಸಕರಾಗಿರುವ ಆರ್.ವಿ. ದೇಶಪಾಂಡೆಗೆ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಕಳೆದ ವರ್ಷದಿಂದ ಆರಂಭಗೊಂಡಿದ್ದು, ಮೊದಲ ಪ್ರಶಸ್ತಿಯನ್ನು ಶಾಸಕ ಬಿ.ಎಸ್. ಯಡಿಯೂರಪ್ಪಗೆ ನೀಡಲಾಗಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಒಂದೇ ವರ್ಷದಲ್ಲಿ ನೂರಕ್ಕೂ ಹೆಚ್ಚು ಪೊಲೀಸ್ ಠಾಣೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಳಗಾವಿ ಪೊಲೀಸ್ ಆಯುಕ್ತರ ನೂತನ ಕಚೇರಿ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಅವರು, ಪೊಲೀಸ್ ಗೃಹ ಮಂಡಳಿಯಿಂದ ರಾಜ್ಯಾದ್ಯಂತ ಒಳ್ಳೆಯ ಕೆಲಸ ಆಗುತ್ತಿದೆ ಎಂದು ಹೇಳಿದರು. ರಾಜ್ಯದಲ್ಲಿ 2500 ಪೊಲೀಸ್ ಮನೆಗಳನ್ನು ನಿರ್ಮಾಣ ಮಾಡುತ್ತಿದ್ದು, ಈಗಾಗಲೇ 16 ಪೊಲೀಸ್ ಠಾಣೆ ನಿರ್ಮಾಣದ ಹಂತದಲ್ಲಿವೆ. ಒಂದೇ ವರ್ಷದಲ್ಲಿ ನೂರಕ್ಕೂ ಹೆಚ್ಚು ಪೊಲೀಸ್ ಠಾಣೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. 300 ಜೀಪ್ ಹಾಗೂ ಸ್ಕಾರ್ಪಿಯೊ ಖರೀದಿ ಮಾಡಲಾಗುತ್ತಿದೆ. ಡಿವೈಎಸ್ಪಿಗಳಿಗೆ ಸ್ಕಾರ್ಪಿಯೊ ವಾಹನಗಳನ್ನು ನೀಡಲಾಗುತ್ತಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy