Subscribe to Updates
Get the latest creative news from FooBar about art, design and business.
- ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ: ಡಿ.ಕೆ.ಸುರೇಶ್
- ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್
- ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ
- ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?
- ಖಮೇನಿ ಹತ್ಯೆ ಹಿನ್ನೆಲೆ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಜಿ.ಪರಮೇಶ್ವರ್ ಎಚ್ಚರಿಕೆ
- ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲು ಶಾಸಕ ಸುರೇಶ್ ಬಾಬು ಸೂಚನೆ
- ನಾಪತ್ತೆಯಾಗಿದ್ದ ಬೆಳ್ಳಾವಿ ಕಾರದೇಶ್ವರ ಮಠದ ಶ್ರೀಗಳು ಪತ್ತೆ: ಸ್ವಾಮೀಜಿ ಹೋಗಿದ್ದೆಲ್ಲಿಗೆ?
- ತುಮಕೂರು: ಭೀಮಸಂದ್ರದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಸೂಚನೆ
Author: admin
ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ದೀಪ ಬೆಳಗುವ ಮೂಲಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಚಾಲನೆ ನೀಡಿದರು. ಈ ವೇಳೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ನಿರ್ಮಲಾ ಸೀತಾರಾಮನ್ ಪೀಯೂಷ್ ಗೋಯಲ್, ಮೈಸೂರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಉಪಸ್ಥಿತರಿದ್ದರು. ಸರ್ಕಾರವು 5 ಲಕ್ಷ ಕೋಟಿಗೂ ಹೆಚ್ಚು ಹೂಡಿಕೆ ನಿರೀಕ್ಷೆಯಲ್ಲಿದ್ದು, ದೇಶ ವಿದೇಶಗಳ ಖ್ಯಾತ ಉದ್ಯಮಿಗಳು ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಸಮಾವೇಶ ಉದ್ಧೇಶಿಸಿ ವರ್ಚೂವಲ್ ಮೂಲಕ ಪ್ರಧಾನಿ ಮೋದಿ ಮಾತನಾಡುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಮಧುಗಿರಿ: ತಾಲೂಕಿನ ಜೆ ಸಿ ಬಿ ಬಾಯ್ಸ್ ವತಿಯಿಂದ ಪಟ್ಟಣದಲ್ಲಿ ಕನ್ನಡ ರಾಜ್ಯೋತ್ಸವದ ಭವ್ಯ ಮೆರವಣಿಗೆ ನಡೆಯಿತು. 67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಲೂಕಿನ ಜೆಸಿಬಿ ಬಾಯ್ಸ್ ಜೆಸಿಬಿಗಳಿಗೆ ಕನ್ನಡ ಬಾವುಟಗಳನ್ನು ಕಟ್ಟಿಕೊಂಡು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡುವ ಮೂಲಕ ನಾಡ ಹಬ್ಬ ಕನ್ನಡ ರಾಜ್ಯೋತ್ಸವವನ್ನು ವಿಜ್ರಂಭಣೆಯಿಂದ ಆಚರಿಸಿದರು. ವರದಿ: ಅಬಿದ್ ಮಧುಗಿರಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬಿಜೆಪಿ ಶಾಸಕ ತಿಪ್ಪಾರೆಡ್ಡಿ ಅವರಿಗೆ ಅಪರಿಚಿತ ಯುವತಿ ವಾಟ್ಸಪ್ ವಿಡಿಯೋ ಕಾಲ್ ಮಾಡಿ ಹನಿಟ್ರ್ಯಾಪ್ ಗೆ ಯತ್ನಿಸಿರುವ ಘಟನೆ ನಡೆದಿದೆ. ಈ ಸಂಬಂಧ ಶಾಸಕ ತಿಪ್ಪಾರೆಡ್ಡಿ ಅವರು ಚಿತ್ರದುರ್ಗ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅಕ್ಟೋಬರ್ 31 ರಂದು ಯುವತಿಯೋರ್ವಳು ಶಾಸಕ ತಿಪ್ಪಾರಡ್ಡಿಗೆ ಬೆತ್ತಲೆಯಾಗಿ ಕಾಲ್ ಮಾಡಿದ್ದು, ನಂತರ ವಾಟ್ಸಪ್ ಗೆ ಅಶ್ಲೀಲ ವಿಡಿಯೋ ಕಳುಹಿಸಿದ್ದಾಳೆ ಎನ್ನಲಾಗಿದೆ. ಈ ವೇಳೆ ಶಾಸಕ ತಿಪ್ಪರೆಡ್ಡಿ ಅವರು ತಕ್ಷಣ ಮೊಬೈಲ್ ಅನ್ನ ಪಕ್ಕಕ್ಕೆ ಇಟ್ಟಿರುವುದಾಗಿ ತಿಳಿಸಿದ್ದಾರೆ. ನಂತರ ವಿಡಿಯೋ ಕಾಲ್ ಮಾಡಿದ್ದ ನಂಬರ್ ಅನ್ನ ತಿಪ್ಪಾರೆಡ್ಡಿ ಅವರು ಬ್ಲಾಕ್ ಮಾಡಿದ್ದಾಗಿ ತಿಳಿಸಿದ್ದಾರೆ. ಈ ಕುರಿತು ಶಾಸಕ ತಿಪ್ಪಾರೆಡ್ಡಿ ಚಿತ್ರದುರ್ಗ ಸೈಬರ್ ಠಾಣೆಗೆ ದೂರು ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ನಟ ಅಪ್ಪು ದೇವರ ಮಗು. ದಾನ ಮಾಡುವ ಗುಣಕ್ಕಾಗಿ ಜನರು ನಟ ಪುನೀತ್ ರನ್ನ ಪ್ರೀತಿಸಿದ್ರು. ಮೇರು ನಟರ ಸಾಲಿನಲ್ಲಿ ಪುನೀತ್ ನಿಲ್ಲುತ್ತಾರೆ ಎಂದು ಹಿರಿಯ ನಟ ರಜಿನಿಕಾಂತ್ ಗುಣಗಾನ ಮಾಡಿದರು. ನಟ ದಿ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪುನೀತ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಪ್ರಶಸ್ತಿ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಹಿರಿಯ ನಟ ರಜಿನಿಕಾಂತ್, ಬಾಲ್ಯದಲ್ಲಿ ಪುನೀತ್ ಶಬರಿ ಮಲೆ ಪ್ರವಾಸದ ಬಗ್ಗೆ ನೆನಪಿಸಿಕೊಂಡರು. 1979ರಲ್ಲಿ ಚೆನ್ನೈನಲ್ಲಿ 4 ವರ್ಷದ ಅಪ್ಪು ಭೇಟಿಯಾಗಿದ್ದೆ. ಅಪ್ಪು ಇಲ್ಲ ಎಂದುಕೊಳ್ಳಲು ಆಗುತ್ತಲೇ ಇಲ್ಲ. ಅಪ್ಪು ನಿಧನರಾದಾಗ ನಾನು ಐಸಿಯುನಲ್ಲಿದ್ದೆ ಮೂರು ದಿನಗಳ ನಂತರ ಗೊತ್ತಾಯಿತು. ಅಪ್ಪು ಮೊದಲ ಚಿತ್ರ ನೋಡಲು ಆಹ್ವಾನಿಸಿದ್ದರು. ಅಪ್ಪು ಹಾಡು ಡ್ಯಾನ್ಸ್ ಅದ್ಬುತವಾಗಿತ್ತು. ಪುನೀತ್ ಗೆ 100 ದಿನದ ಸಮಾರಂಭದಲ್ಲಿ ಫಲಕ ನೀಡಿ ಗೌರವಿಸಿದೆ. ಇಂದು ಅಪ್ಪು ಇಲ್ಲ ಎಂದರೇ ನಂಬಲಾಗುತ್ತಿಲ್ಲ ನನ್ನ ಮನಸ್ಸಿನಲ್ಲಿ…
ಬೇರೆ ಭಾಷೆಯನ್ನು ಗೌರವಿಸಬೇಕು. ಆದರೆ ನಮ್ಮ ಭಾಷೆಯನ್ನು ಪ್ರೀತಿಸಿ, ಪೋಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ತಿಳಿಸಿದ್ದಾರೆ. ಮಾನಸ ಗಂಗೋತ್ರಿಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ವತಿಯಿಂದ ಮಂಗಳವಾರ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರಾಜ್ಯೋತ್ಸವದ ದಿನವನ್ನು ನಾವು ರಾಜ್ಯಾದ್ಯಂತ ಅತಿ ಸಂತೋಷ ಹಾಗೂ ಸಡಗರದಿಂದ ಆಚರಿಸುತ್ತೇವೆ. ಈ ದಿನ ಸರ್ಕಾರದಿಂದಲೂ ಸಾಹಿತ್ಯ ಕ್ಷೇತ್ರದಲ್ಲಿ ಕೃಷಿ ಮಾಡಿದಂತಹ ಮಹನೀಯರುಗಳಿಗೆ ಸನ್ಮಾನವನ್ನು ಏರ್ಪಡಿಸಿ ಅವರುಗಳಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರದಾನ ಮಾಡುವಂತಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತದೆ. ಇದರಿಂದ ಸಾಹಿತ್ಯ ಕ್ಷೇತ್ರದಲ್ಲಿ ಅದರಲ್ಲೂ ಕನ್ನಡದಲ್ಲಿ ಇನ್ನೂ ಉತ್ತಮವಾದ ಸಾಧನೆಯನ್ನು ಮಾಡಲು ಪ್ರೋತ್ಸಾಹಿಸುವಂತಹ ನಿಟ್ಟಿನಲ್ಲಿ ಸರ್ಕಾರವು ಕಾರ್ಯಕ್ರಮವನ್ನು ಆಯೋಜಿಸಿಕೊಂಡು ಬರುತ್ತಿದೆ ಎಂದರು. ನಮ್ಮ ವಿಶ್ವವಿದ್ಯಾನಿಲಯದಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ವಿದ್ಯಾರ್ಥಿಗಳಿಗೆ ಹಾಗೂ ಸಂಶೋಧಕರುಗಳಿಗೆ ಪ್ರಶಸ್ತಿಯನ್ನು ನೀಡುವಂತಹ ಕಾರ್ಯಕ್ರಮವನ್ನು ಏರ್ಪಡಿಸುವುದರಿಂದ ಅವರು ಇನ್ನಷ್ಟು ಸಾಹಿತ್ಯ ಕ್ಷೇತ್ರದಲ್ಲಿ ಹಾಗೂ ಕನ್ನಡಕ್ಕೆ ಕೊಡುವಂತಹ ಕೊಡುಗೆ ಇನ್ನು ಹೆಚ್ಚಾಗುವ ಸಂಭವ ಇರುತ್ತದೆ. ಆದ್ದರಿಂದ ಈ…
67ನೇ ಕನ್ನಡ ರಾಜ್ಯೋತ್ಸವದಂದೇ ನಟ ಯುವರತ್ನ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಇಂದು ರಾಜ್ಯದ ಅತ್ಯುನ್ನತ ಪ್ರಶಸ್ತಿ ಕರ್ನಾಟಕ ರತ್ನ ಪ್ರಶಸ್ತಿಯನ್ನ ಪ್ರದಾನ ಮಾಡಲಾಯಿತು. ವಿಧಾನಸೌಧದ ಮುಂಭಾಗದಲ್ಲಿ ನಡೆದ ಸಮಾರಂಭದಲ್ಲಿ ನಟ ಪುನೀತ್ ರಾಜ್ಕುಮಾರ್ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಿಎಂ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಿದರು. ನಟ ಪುನೀತ್ ರಾಜ್ ಕುಮಾರ್ ಪರವಾಗಿ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಈ ಪ್ರಶಸ್ತಿ ಸ್ವೀಕರಿಸಿದರು. ಈ ಕ್ಷಣಕ್ಕೆ ಹಿರಿಯ ನಟ ರಜನಿಕಾಂತ್ ಮತ್ತು ಜೂನಿಯರ್ ಎನ್ಟಿಆರ್, ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಡಾ.ಸುಧಾಮೂರ್ತಿ, ನಟ ಶಿವರಾಜ್ ಕುಮಾರ್ ಹಾಗೂ ಸಚಿವರು, ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ಧ ಅಭಿಮಾನಿಗಳು ಸಾಕ್ಷಿಯಾದರು. ಕಾರ್ಯಕ್ರಮದಲ್ಲಿ ಮಾತನಾಡಿದ ಹಿರಿಯ ನಟ ರಜನಿಕಾಂತ್, 67ನೇ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಎಲ್ಲರೂ ಜಾತಿ ಮತ ಬೇಧವಿಲ್ಲದೆ ನೆಮ್ಮದಿಯಿಂದ ಇರಬೇಕು. ರಾಜರಾಜೇಶ್ವರಿ, ಅಲ್ಲ, ಜೀಸಸ್ ನಲ್ಲಿ ಪ್ರಾರ್ಥನೆ ಮಾಡುತ್ತೇನೆ. ಪುನೀತ್ ದೇವರ ಮಗು…
ಮೈಸೂರಿನ ಪೊಲೀಸರು ಓರ್ವ ಸರಗಳ್ಳನನ್ನ ಬಂಧಿಸಿ 13 ಲಕ್ಷ ಮೌಲ್ಯದ ಚಿನ್ನಾಭರಣವನ್ನ ವಶಕ್ಕೆ ಪಡೆದಿದ್ದಾರೆ. ಮೈಸೂರು ನಗರದ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಸರಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮತ್ತು ಮಾಲು ಪತ್ತೆ ಸಂಬಂಧ ಕೃಷ್ಣರಾಜ ಉಪವಿಭಾಗದ ಅಪರಾಧ ಪತ್ತೆ ದಳ ಮತ್ತು ಸರಸ್ವತಿಪುರಂ ಮತ್ತು ಅಶೋಕಪುರಂ ಠಾಣೆಯ ಸಿಬ್ಬಂದಿಗಳ ವಿಶೇಷ ತಂಡವನ್ನು ರಚಿಸಲಾಗಿತ್ತು. ಈ ತಂಡಗಳು ದಿನಾಂಕ: 29-10-2022 ರಂದು ಒಬ್ಬ ಸರಗಳ್ಳ ಆರೋಪಿಯನ್ನು ದಸ್ತಗಿರಿ ಮಾಡಿ ವಿಚಾರಣೆ ಮಾಡಿದಾಗ ಆರೋಪಿತನು ತಲೆ ಮರೆಸಿಕೊಂಡಿರುವ ಮತ್ತೊಬ್ಬ ಆರೋಪಿಯ ಜೊತೆಗೂಡಿ ಮೈಸೂರು ನಗರ ವಿವಿಧ ಪೊಲೀಸ್ ಠಾಣಾ ಹಾಗೂ ಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿ ಸರಗಳ್ಳತನ ಮಾಡಿರುವುದಾಗಿ ತಿಳಿಸಿದ್ದಾನೆ. ಈ ಸಂಬಂಧ 8 ಸರಗಳ್ಳತನ ಪ್ರಕರಣಗಳು ಪತ್ತೆಯಾಗಿರುತ್ತವೆ. ಈ ಪ್ರಕರಣಗಳಿಂದ ರೂ. 13,00,000/- ಬೆಲೆಬಾಳುವ ಸುಮಾರು 290 ಗ್ರಾಂ ತೂಕದ 9 ಚಿನ್ನದ ಸರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣದ ಪತ್ತೆಯಿಂದ ಮೈಸೂರು ನಗರ ಸರಸ್ವತಿಪುರಂ ಪೊಲೀಸ್ ಠಾಣೆಯ 01 (2 ಚಿನ್ನದ…
ಇತ್ತೀಚೆಗೆ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ನಡೆದ ರಸ್ತೆ ಅಪಘಾತವೊಂದರಲ್ಲಿ ಮೃತಪಟ್ಟ ಶಿಲ್ಪಶ್ರೀ ಎಂಬ ಹೆಸರಿನ, ಬೆಂಗಳೂರು ವಿಶ್ವವಿದ್ಯಾಲಯ ಸ್ನಾತಕೋತ್ತರ ವಿದ್ಯಾರ್ಥಿನಿಯ ತಂಗಿಗೆ ಬೆಂಗಳೂರು ವಿಶ್ವವಿದ್ಯಾಲಯದ ವತಿಯಿಂದ ಸ್ನಾತಕೋತ್ತರ ಶಿಕ್ಷಣವನ್ನು ಉಚಿತವಾಗಿ ನೀಡಲು ನಿರ್ಧರಿಸಿದೆ. ಪ್ರಸ್ತುತ ಪದವಿ ಓದುತ್ತಿರುವ ಮೃತ ಶಿಲ್ಪಶ್ರೀ ಅವರ ಸಹೋದರಿಗೆ ಬೆಂಗಳೂರು ವಿಶ್ವವಿದ್ಯಾಲಯದಿಂದ ಉಚಿತವಾಗಿ ಸ್ನಾತಕೋತ್ತರ ಪದವಿ ಶಿಕ್ಷಣ ಮತ್ತು ವಿಶ್ವವಿದ್ಯಾಲಯದ ಸಿಬ್ಬಂದಿಗಳಿಂದ ಒಂದು ದಿನದ ವೇತನವನ್ನು ಸಂತ್ರಸ್ತೆಯ ಕುಟುಂಬಸ್ಥರಿಗೆ ಹಣಕಾಸಿನ ನೆರವನ್ನು ನೀಡಲು ಸಿಂಡಿಕೇಟ್ ನಿರ್ಧರಿಸಲಾಗಿದೆ. ಈ ಸಂಬಂಧ ಮಾತನಾಡಿದ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿಗಲಾದ ಡಾ. ಜಯಕರ ಎಸ್.ಎಂ. ಅವರು, “ಸಿಬ್ಬಂದಿಗಳು ತಮ್ಮ ಒಂದು ದಿನದ ವೇತನವನ್ನು ನೀಡುವುದು ಕಡ್ಡಾಯವಲ್ಲ. ನಾವು ಎಲ್ಲರಲ್ಲಿಯೂ ಮನವಿ ಮಾಡುತ್ತೇವೆ. ಯಾರಿಗೆ ಒಂದು ದಿನದ ವೇತನ ನೀಡುವುದು ಇಷ್ಟವೋ ಅವರು ನೀಡಬಹುದು. ಸಿಂಡಿಕೇಟ್ ನ ಎಲ್ಲಾ ಸದಸ್ಯರೂ ಸಹ ಈ ಉದ್ದೇಶಕ್ಕಾಗಿ ತಮ್ಮ ಸಭಾ ಭತ್ಯೆಯನ್ನು ದಾನ ನೀಡುತ್ತಿದ್ದಾರೆ,” ಎಂದು ತಿಳಿಸಿದರು. ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಘಟನೆಯಲ್ಲಿ ಮೃತಪಟ್ಟ ವಿದ್ಯಾರ್ಥಿನಿಯ ಕುಟುಂಬದವರಿಗೆ…
ಕರ್ನಾಟಕ ರಾಜ್ಯ ಇಡೀ ದೇಶದಲ್ಲಿ ತಲೆ ತಗ್ಗಿಸುವ ಕೆಲಸವನ್ನ ಬಿಜೆಪಿ ಸರ್ಕಾರ ಮಾಡಿದೆ. ಪತ್ರಕರ್ತರನ್ನೇ ಖರೀದಿಸಲು ಹೋಗಿದ್ದಾರಲ್ಲ ಇದು ದೊಡ್ಡ ಕಳಂಕ. ಸಿಎಂ ಬಸವರಾಜ ಬೊಮ್ಮಾಯಿ ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆಗ್ರಹಿಸಿದರು. ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಸರ್ಕಾರದಿಂದ ಪತ್ರಕರ್ತರಿಗೆ ದೀಪಾವಳಿ ಗಿಪ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ವಾಗ್ದಾಳಿ ನಡೆಸಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಬಿಜೆಪಿ ಸರ್ಕಾರದವರು ಪತ್ರಕರ್ತರಿಗೆ ಭ್ರಷ್ಟಾಚಾರದ ಕಳಂಕವನ್ನ ಅಂಟಿಸಿದ್ದಾರೆ ಅದನ್ನು ಯಾರು ತೊಳೆಯುತ್ತಾರೆ. ಪತ್ರಕರ್ತರ ಒಳ್ಳೆತನಕ್ಕೆ ಮಸಿ ಬಳಿಯುವ ಕೆಲಸ ಬಿಜೆಪಿಯವರು ಮಾಡಿದ್ದಾರೆ. ಪತ್ರಕರ್ತರನ್ನೇ ಖರೀದಿ ಮಾಡಲಿಕ್ಕೆ ಹೋಗಿದ್ದಾರಲ್ಲ ಇದು ದೊಡ್ಡ ಕಳಂಕ. ಸಿಎಂ ಇದಕ್ಕೆ ಸ್ಪಷ್ಟನೆ ಕೊಡಬೇಕು. ಆಯ್ದ ಪತ್ರಕರ್ತರಿಗೆ ಸ್ವೀಟ್ ಬಾಕ್ಸ್ ಮೂಲಕ ಹಣ ಹಂಚಿರುವುದು ಖಂಡನೀಯ. ಜನರ ದೃಷ್ಟಿಯಲ್ಲಿ ಪತ್ರಕರ್ತರಿಗೆ ಕೀಳು ಮಟ್ಟದ ಭಾವನೆ ಬರುವ ಹಾಗೆ ಮಾಡಿದ್ದೀರಿ. ಇದಕ್ಕೆ ಸ್ಪಷ್ಟನೆ ಕೊಡಿ ಎಂದು ಆಗ್ರಹಿಸಿದರು. ಇದರಲ್ಲಿ ಸಿಎಂ ಬೊಮ್ಮಾಯಿ, ಮಂತ್ರಿಗಳಾದ ಆರ್.ಆಶೋಕ್, ಸುಧಾಕರ್, ಅಶ್ವಥ್…
ಐತಿಹಾಸಿಕ ಕಥಾಹಂದರ ಹೊಂದಿರುವ, ಖ್ಯಾತ ನಿರ್ದೇಶಕ ಮಣಿರತ್ನಂ ಅವರ ‘ಪೊನ್ನಿಯನ್ ಸೆಲ್ವನ್ -1’ ಚಿತ್ರ ಒಟಿಟಿಯಲ್ಲಿ ರಿಲೀಸ್ ಆಗುತ್ತಿದೆ. ಹೌದು. ವಿಶ್ವದೆಲ್ಲೆಡೆ ಉತ್ತಮ ಪ್ರಶಂಸೆ ಪಡೆದ ಚಿತ್ರವು ಇದೀಗ ಡಿಜಿಟಲ್ ವೇದಿಕೆಯಲ್ಲಿ ಲಭ್ಯವಾಗುತ್ತಿದೆ. ಅಮೇಜಾನ್ ಪ್ರೈಮ್ ವೇದಿಕೆಯಲ್ಲಿಯೂ ಚಿತ್ರ ರಿಲೀಸ್ ಆಗುತ್ತಿದೆ. ‘ಪೊನ್ನಿಯನ್ ಸೆಲ್ವನ್ -1’ ಚಿತ್ರ ನಿರೀಕ್ಷೆಯಂತೆಯೇ ಭರ್ಜರಿ ಯಶಸ್ಸು ಗಳಿಸಿದೆ. ಬಿಡುಗಡೆಯಾಗಿ ಒಂದು ತಿಂಗಳ ಅವಧಿಯಲ್ಲಿ ಚಿತ್ರ ವಿಶ್ವದಾದ್ಯಂತ 500 ಕೋಟಿ ರೂ ಕಲೆಕ್ಷನ್ ಮಾಡಿದೆ. ಪೊನ್ನಿಯನ್ ಸೆಲ್ವನ್ ಚಿತ್ರದಲ್ಲಿ ಐಶ್ವರ್ಯ ರೈ ಬಚ್ಚನ್, ವಿಕ್ರಮ್, ಕಾರ್ತಿ, ತ್ರಿಶಾ, ಜಯಂ ರವಿ ಮತ್ತು ಪ್ರಕಾಶ್ ರಾಜ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy