Subscribe to Updates
Get the latest creative news from FooBar about art, design and business.
- ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ
- ಸಾಮಾಜಿಕ ನ್ಯಾಯ ಎತ್ತಿ ಹಿಡಿದವರು ಕನಕದಾಸರು: ಎಂ.ಬಿ.ಆನಂದ
- ರಾಜ್ಯ ಮಟ್ಟದ ಕನ್ನಡ ಸೇವಾರತ್ನ ಪ್ರಶಸ್ತಿಗೆ ಡಾ.ಸತ್ಯಕ್ಕ ಗಡ್ಡೆ ಆಯ್ಕೆ
- ನರಹಂತಕ ವ್ಯಾಘ್ರನ ಸೆರೆ: ಜನರ ನಿದ್ದೆಗೆಡಿಸಿದ 9 ವರ್ಷದ ಹುಲಿಯನ್ನು ಹಿಡಿದ ಅರಣ್ಯ ಇಲಾಖೆ
- ನರಹಂತಕ ಹುಲಿಯ ಸೆರೆಗಾಗಿ ಮುಂದುವರಿದ ಕಾರ್ಯಾಚರಣೆ: ಡ್ರೋನ್ ಕ್ಯಾಮೆರಾದಲ್ಲಿ ಹುಲಿ ಪತ್ತೆ!
- ಮಧುಗಿರಿ: ಎರಡು ವರ್ಷದ ಚಿರತೆ ಸೆರೆ
- ಶೈಕ್ಷಣಿಕ ಮತ್ತು ಸಾಂಸ್ಕೃತಿಕ ರಂಗಕ್ಕೆ ಕನಕದಾಸರ ಕೊಡುಗೆ ಅಪಾರ: ಪ.ಪಂ. ಅಧ್ಯಕ್ಷ ಶಿವಕುಮಾರ್
- ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ: ಸಿಎಂ ಸಿದ್ದರಾಮಯ್ಯ
Author: admin
ಉತ್ತರ ಕನ್ನಡ : ಜಿಲ್ಲೆಯ ಯಲ್ಲಾಪುರದ ಅರಣ್ಯವಲಯದಲ್ಲಿ ಅಪರೂಪ ಹಾಗೂ ಹೊಸ ಪ್ರಬೇಧದ ಸಿಹಿ ನೀರಿನ ಏಡಿ ಪತ್ತೆಯಾಗಿದೆ. ಬಿಳಿ ಮೈ ಬಣ್ಣ ಮತ್ತು ನೇರಳೆ ಬಣ್ಣದ ಕಾಲುಗಳನ್ನ ಹೊಂದಿರುವ ಈ ಏಡಿಯನ್ನು ಘಾಟಿಯಾನ ದ್ವೀವರಣ ಎಂದು ಸೈಂಟಿಫಿಕ್ ಹೆಸರು ನಾಮಕರಣ ಮಾಡಲಾಗಿದೆ. ಕಪ್ಪು ಕಣ್ಣು, ಬಿಳಿ ಬಣ್ಣದ ಕೊಕ್ಕೆ, ನೇರಳೆ ಬಣ್ಣದ ನೀಳ ಕಾಲುಗಳನ್ನು ಹೊಂದಿರುವ ಅಪರೂಪದ ಏಡಿಯಾಗಿದೆ. ಹೊಸ ಪ್ರಬೇಧದ ಏಡಿ ಕಂಡು ಅರಣ್ಯ ಅಧಿಕಾರಿಗಳು ತಮ್ಮ ಕ್ಯಾಮಾರದಲ್ಲಿ ಏಡಿಯ ಚಿತ್ರಗಳನ್ನು ಸೆರೆ ಹಿಡಿದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು : ಎಲ್ಲಾ ಶಾಲೆ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ಕಡ್ಡಾಯ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಿದ ರಾಜ್ಯ ಸರ್ಕಾರ, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ, ಅನುದಾನಿತ ಅನುದಾನರಹಿತ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ಪ್ರತಿ ದಿನ ಸಾಮೂಹಿಕ ಪ್ರಾರ್ಥನೆ ವೇಳೆಯಲ್ಲಿ ವಿದ್ಯಾರ್ಥಿಗಳಲ್ಲಿ ರಾಷ್ಟ್ರಗೀತೆ ಹಾಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ರಾಷ್ಟ್ರಾಭಿಮಾನ ಹಾಗೂ ರಾಷ್ಟ್ರದ ಬಗ್ಗೆ ಗೌರವದ ಭಾವನೆಗಳನ್ನ ಮೂಡಿಸಬೇಕು ಎಂದು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ : ಬೈಕ್ ಸವಾರನ ಹುಚ್ಚಾಟಕ್ಕೆ 4 ವರ್ಷದ ಬಾಲಕ ಬಲಿಯಾದ ಘಟನೆ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಮಹಾಂತೇಶ ನಗರದಲ್ಲಿ ನಡೆದಿದೆ. ಮೃತ ಬಾಲಕನನ್ನು ಅಜಯ್ ಸುಭಾಷ್ (4) ಎಂದು ಗುರುತಿಸಲಾಗಿದೆ. ಮೃತ ಅಜಯ್ ಗೇಟ್ ತೆಗೆಯುತ್ತಿದ್ದಾಗ ವೇಗವಾಗಿ ಬಂದ ಬೈಕ್ ಸವಾರ ಕಾಂಪೌಂಡ್ಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ಗೇಟ್ ಸಮೇತವಾಗಿ ಗೋಡೆ ಬಾಲಕನ ಮೇಲೆ ಬಿದ್ದಿದೆ. ತೀವ್ರವಾಗಿ ಗಾಯಗೊಂಡಿದ್ದ ಬಾಲಕನನ್ನು ತಾಲ್ಲೂಕು ಆಸ್ಪತ್ರೆಗೆ ದಾಖಲು ಮಾಡಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ರಾಮದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತಿಪಟೂರು: ನಗರದ ಸತ್ಯ ಗಣಪತಿ ಆಸ್ಥಾನ ಮಂಟಪದ ಆವರಣದಲ್ಲಿ ಬ್ಯಾಂಕಿನ ಸುವರ್ಣ ಮಹೋತ್ಸವ ಸಮಾರಂಭ ನಡೆಯಿತು. ಈ ವೇಳೆ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಮೊಬೈಲ್ ಬ್ಯಾಂಕಿಂಗ್ ಸೇವೆ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸಹಕಾರಿ ಸಂಘಗಳು ಎಲ್ಲಾ ವರ್ಗದ ಜನರಿಗೂ ಸೇವೆ ನೀಡುತ್ತಾ ಬಂದಿದೆ, ಒಂದು ಬ್ಯಾಂಕ್ ಮಾಡಿದ ತಪ್ಪಿಗೆ ಬೇರೆ ಬ್ಯಾಂಕುಗಳಿಗೆ ಕೆಟ್ಟ ಹೆಸರು ಬರಬಾರದು ಎಂದು ಸೋಮಶೇಖರ್ ತಿಳಿಸಿದರು. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾತನಾಡಿ, ದೇಶದ ಆರ್ಥಿಕ ಪ್ರಗತಿಗೆ ಸಹಕಾರ ಸಂಘಗಳು ಸಹಕಾರಿಯಾಗಿದೆ ಎಂದರು. ಬ್ಯಾಂಕ್ ನ ಅಧ್ಯಕ್ಷ ಬಾಗೇಪಲ್ಲಿ ನಟರಾಜ್ ಅಧ್ಯಕ್ಷತೆ ವಹಿಸಿದ್ದರು. ಈ ಸಮಾರಂಭದಲ್ಲಿ ಸಮಾಜ ಸೇವೆಯನ್ನು ಗುರುತಿಸಿ ನಿವೃತ್ತ ಎಸಿಪಿ ಲೋಕೇಶ್ ಅವರನ್ನು ಸನ್ಮಾನಿಸಲಾಯಿತು. ನಗರಸಭೆಯ ಅಧ್ಯಕ್ಷರಾದ ರಾಮ್ ಮೋಹನ್, ಬ್ಯಾಂಕ್ ನ ಉಪಾಧ್ಯಕ್ಷ ಬಿ.ಎಸ್.ನಾಗೇಂದ್ರ ಗುಪ್ತ, ಸಿ.ಎಸ್. ಹರಿ , ಬಾಬು, ಶಿವಶಂಕರ್, ಬ್ಯಾಂಕ್ ನ ಸಿಇಒ ಟಿಪಿ ಚಂದನ್ ಹಾಗೂ ಬ್ಯಾಂಕ್ ನ ಶೇರುದಾರರು ಸಿಬ್ಬಂದಿಯವರು ಉಪಸ್ಥಿತರಿದ್ದರು. ವರದಿ: ಆನಂದ್ ತಿಪಟೂರು…
ಬೆಂಗಳೂರು: ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಸುಪ್ರಸಿದ್ಧ ಮುಧೋಳದ ನಾಯಿಗಳು ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆಯ ವಿಶೇಷ ರಕ್ಷಣಾ ಗುಂಪಿನ (ಎಸ್ಪಿಜಿ) ಭಾಗವಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ತಿಮ್ಮಾಪುರದ ಶ್ವಾನ ಸಂಶೋಧನಾ ಮತ್ತು ಮಾಹಿತಿ ಕೇಂದ್ರದ ಮುಖ್ಯಸ್ಥರಾಗಿರುವ ಡಾ.ಸುಶಾಂತ್ ಹಂದಗೆ ಎರಡು ತಿಂಗಳ ವಯಸ್ಸಿನ ಎರಡು ಗಂಡು ಮುಧೋಳ ಮರಿಗಳನ್ನು ಏಪ್ರಿಲ್ 25, 2022 ರಂದು ಎಸ್ಪಿಜಿಯ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ ಅಂತ ಹೇಳಿದ್ದಾರೆ. ಏಪ್ರಿಲ್ 25 ರಂದು ನಾಯಿಮರಿಗಳನ್ನು ಸಂಗ್ರಹಿಸಲು ಎಸ್ಪಿಜಿಯ ಪಶುವೈದ್ಯರು ಮತ್ತು ಇಬ್ಬರು ತರಬೇತುದಾರರು ಬಂದಿದ್ದರು ಸೂಕ್ಷ್ಮತೆಯಿಂದಾಗಿ, ಮಾಹಿತಿಯನ್ನು ಸಾರ್ವಜನಿಕರೊಂದಿಗೆ ಹಂಚಿಕೊಳ್ಳದಂತೆ ನಮ್ಮನ್ನು ಕೇಳಲಾಗಿದೆ ಅಂಥ ಅವರು ಇದೇ ವೇಳೆ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬೆಳಗಾವಿ : ಶ್ರೀ ಕೃಷ್ಣ ಜನ್ಮಾಷ್ಠಮಿ ನಿಮಿತ್ಯ ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಎಲ್ಲಾ ಕಸಾಯಿಖಾನೆ, ಮಾಂಸಾಹಾರಿ ಅಂಗಡಿಗಳನ್ನು ಆ 19 ಬಂದ್ ಮಾಡಬೇಕು. ಆ.19 ರಂದು ಕಸಾಯಿಖಾನೆ/ ಮಾಂಸಾಹಾರಿ ಅಂಗಡಿ ತೆರದರೆ ಅಂತಹ ಮಾಲೀಕರ ವಿರುದ್ದ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಮಂಡ್ಯ: ತಾಲ್ಲೂಕಿನ ಬಸರಾಳು ಹೋಬಳಿಯ ಮುತ್ತೇಗೆರೆ ಪಂಚಾಯತಿಯ ಆಡಳಿತ ವ್ಯವಸ್ಥೆ ವಿರುದ್ಧ ಗ್ರಾಮ ಪಂಚಾಯತ್ ಸದಸ್ಯರು ಶಿವಕುಮಾರ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಪಂಚಾಯತ್ ನಲ್ಲಿ ಎರಡು ವರ್ಷಗಳಿಂದ ಯಾವುದೇ ಅಭಿವೃದ್ಧಿ ಕಂಡಿಲ್ಲ, ಹುನುಗನಹಳ್ಳಿ ಎಸ್ ಸಿ ಕಾಲೋನಿ ತೊಂಬೆ ಹಾಕಿ ಎರಡು ವರ್ಷ ಆದರು ನೀರೇ ಕಂಡಿಲ್ಲ. PDO ಇದ್ದರು ಯಾವುದೇ ಕೆಲಸ ಮಾಡುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಎರಡು ವರ್ಷಗಳಾದರು ಬಿಲ್ ಕಲೆಕ್ಟರ್ ಮತ್ತು ಕಾರ್ಯದರ್ಶಿಗಳು ಇಲ್ಲದೆ ಪಂಚಾಯಿತಿ ಅವ್ಯವಸ್ಥೆಯಿಂದ ಕೂಡಿದೆ. ನಡವಳಿಕೆ ಪುಸ್ತಕದಲ್ಲಿ ಸಾಮಗ್ರಿ ಸೇರಿಸಿಲ್ಲ, ಬೀದಿ ದೀಪ ಖರೀದಿಯ ಬಿಲ್ ಇಲ್ಲ, ನಡುವಳಿ ಪುಸ್ತಕ ಹಾಗೂ ಬ್ಯಾಂಕ್ ಪಾಸ್ ಬುಕ್ ವ್ಯತ್ಯಾಸ ಕಂಡುಬಂದಿದೆ. ಆಡಳಿತ ಅಧಿಕಾರಿಗಳು ಅಧಿಕಾರ ಹಸ್ತಾಂತರ ಮಾಡುವಾಗ ಯಾವುದೇ ಬಾಕಿ ಮೊತ್ತ ತೋರಿಸುವುದಿಲ್ಲ ಎಂದು ಪ್ರತಿಭಟನಾಕಾರರು ದೂರಿದ್ದಾರೆ. ಪಂಚಾಯತ್ ನ ದಾಖಲಾತಿ ಅಂಶಗಳನ್ನು ಸರಿಯಾಗಿ ಪರಿಶೀಲನೆ ನಡೆಸಿದರೆ, ಇಲ್ಲಿ ನಡೆಯುವ ಕರ್ಮಕಾಂಡಗಳು ಬಯಲಾಗಲಿದೆ ಎಂದು ಪ್ರತಿಭಟನಾಕಾರರು ಹೇಳಿದ್ದು, ತಪ್ಪಿತಸ್ಥರಿಗೆ ಕಾನೂನು ರೀತಿಯ ಶಿಕ್ಷೆಯಾಗಬೇಕು…
ಪಾವಗಡ: ತಮ್ಮ ಪುತ್ರನ ವಿವಾಹ ಕಾರ್ಯಕ್ರಮದಲ್ಲಿ ಕುಟುಂಬಸ್ಥರು ತಮ್ಮ ಸಮುದಾಯದ 45 ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ಮತ್ತು ನೋಟ್ ಪುಸ್ತಕ ಹಾಗೂ ಕಲಿಕಾ ಸಾಮಗ್ರಿಗಳನ್ನು ನೀಡುವ ಮೂಲಕ ವಿದ್ಯಾಭ್ಯಾಸಕ್ಕೆ ವಿಶೇಷ ಪ್ರೋತ್ಸಾಹವನ್ನು ನೀಡಿ ಮಾದರಿಯಾಗಿದ್ದಾರೆ. ಪಾವಗಡ ತಾಲೂಕು ನಿಡಗಲ್ಲು ಹೋಬಳಿ ಹರಿಹರಪುರ ಗ್ರಾಮದಲ್ಲಿ ಈ ವಿಶೇಷ ವಿವಾಹ ನಡೆದಿದ್ದು, ಭಾರತೀಯ ಪರಿವರ್ತನಾ ಸಂಘದ ಪೋಷಕರಾಗಿರುವ ಹನುಮಂತರಾಯಪ್ಪ ಅವರ ಪುತ್ರ ಹೆಚ್.ರಾಜು ಹಾಗೂ ನೇಹಾ ಅಲಿಯಾಸ್ ಚಂದನ ಎ. ಅವರ ವಿವಾಹ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಿಸುವ ಮೂಲಕ ಹೊಸ ಸಂಪ್ರದಾಯಕ್ಕೆ ಸಾಕ್ಷಿಯಾಗಿದ್ದಾರೆ. ಈ ವೇಳೆ ಮಾತನಾಡಿದ ಹನುಮಂತರಪ್ಪ, ನಮ್ಮ ನಾಲ್ಕು ಜನ ಮಕ್ಕಳು ಇದೇ ಶಾಲೆಯಲ್ಲಿ ವಿದ್ಯಾಭ್ಯಾಸವನ್ನು ಕಲಿತವರು. ಕೆಲವು ತಿಂಗಳುಗಳ ಹಿಂದೆ ತಮ್ಮ ಹೆಂಡತಿ ತೀರಿಕೊಂಡರು. ಆದರೆ ಅವರು ಬದುಕಿದ್ದಾಗಲೇ ನನಗೆ ಯಾವಾಗಲೂ ಹೇಳುತ್ತಿದ್ದರು. ನಮ್ಮ ಸ್ಕೂಲಿನ ವಿದ್ಯಾರ್ಥಿಗಳಿಗೆ ನಮ್ಮ ಕೈಲಾದಷ್ಟು ಸಹಾಯ ಮಾಡಬೇಕು ಅಂತ. ಅವರ ಆಸೆಯಂತೆಯೇ ನಮ್ಮ ಕುಟುಂಬದವರೆಲ್ಲರ ಒಮ್ಮತದಿಂದ ಒಪ್ಪಿ ಈ ದಿನ ನಮ್ಮ…
ಮಧುಗಿರಿ: ರಾಜಸ್ಥಾನ ರಾಜ್ಯದ ಜಾಲೂರು ಜಿಲ್ಲೆಯ ಸರಾನಾ ಗ್ರಾಮದ ಸರಸ್ವತಿ ವಿದ್ಯಾಮಂದಿರದ ವಿಧ್ಯಾರ್ಥಿಯನ್ನು ಹತ್ಯೆ ಮಾಡಿರುವ ಆರೋಪಿಗಳಿಗೆ ಮರಣ ದಂಡನೆ ವಿಧಿಸಬೇಕು ಎಂದು ಒತ್ತಾಯಿಸಿ ತಾಲೂಕು ದಲಿತ ಸಾಹಿತ್ಯ ಪರಿಷತ್ ಮತ್ತು ಆದಿಜಾಂಭವ ಮಹಾಸಭಾ ವತಿಯಿಂದ ಉಪವಿಭಾಗಾಧಿಕಾರಿ ಸೋಮಪ್ಪ ಕಡಕೋಳ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಮನವಿ ಪತ್ರ ಸಲ್ಲಿಸದ ಪದಾಧಿಕಾರಿಗಳು ಶಿಕ್ಷಕ ಚೈಲ್ ಸಿಂಗ್ ನಿಂದ ಹಲ್ಲೆಗೆ ಒಳಗಾಗಿ ಸಾವನ್ನಪ್ಪಿರುವ ದಲಿತ ವಿದ್ಯಾರ್ಥಿ ಇಂದ್ರ ಮೇಘವಾಲ್ ಮೃತನ ಕುಟುಂಬಕ್ಕೆ ಆರ್ಥಿಕ ನೆರವನ್ನು ನೀಡುಬೇಕು ಹಾಗೂ ಅವರ ಕುಟುಂಬಕ್ಕೆ ಸರ್ಕಾರಿ ಉದ್ಯೋಗವನ್ನು ನೀಡಬೇಕು ಮತ್ತು ಹಲ್ಲೆ ಮಾಡಿದ ಶಿಕ್ಷಕನನ್ನು ಗಡಿಪಾರು ಇಲ್ಲವೇ ಮರಣ ದಂಡನೆ ಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ದಲಿತ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮಹರಾಜು ಮಾತನಾಡಿ, ವಿದ್ಯಾರ್ಥಿ ಇಂದ್ರ ಮೇಘವಾಲ್ ಮೇಲೆ ನಡೆದಂತಹ ಮಾರಣಾಂತಿಕ ಹಲ್ಲೆ ಮತ್ತು ಹತ್ಯೆಯನ್ನ ಖಂಡಿಸುತ್ತೇವೆ. ಇದಕ್ಕೆ ಕಾರಣನಾದ ಶಿಕ್ಷಕನನ್ನು ಗಡಿಪಾರು ಇಲ್ಲವೇ ಮರಣ ದಂಡನೆಗೆ ಗುರಿಪಡಿಸುವಂತೆ ಸರ್ಕಾರದ…
ಹಿಮಾಲಯದ ರಮ್ಯತೆಯ ಒಡಲಲ್ಲಿ ನೂರಾರು ವರ್ಷಗಳಿಂದಲೂ ಜೀವಿಸಿ, ಮೋಕ್ಷ- ಮುಕ್ತಿ, ಆತ್ಮ ಸಾಕ್ಷತ್ಕಾರದ ಹಾದಿ ತೋರುತ್ತಿದ್ದಾರೆ ಎಂದು ನಂಬಲಾಗಿರುವ ಮಹಾವತಾರ್ ಬಾಬಾಜಿ ಅವರ ಶಿಷ್ಯರ ಸಮಾಗಮ ಇಂದು ಚೆನ್ನೈನ ರಜಿನಿಕಾಂತ್ ನಿವಾಸದಲ್ಲಾಗಿದೆ. ಆಧ್ಯಾತ್ಮಿಕ ಸಾಧನೆಯಲ್ಲಿ ತೊಡಗಿಸಿಕೊಂಡಿರುವ ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್ ರಜಿನಿಕಾಂತ್ ಮತ್ತು ಹಿಮಾಲಯದದ ಯೋಗಿ, ದಾರ್ಶನಿಕ ಶ್ರೀ ಎಂ ಇಬ್ಬರೂ ಭೇಟಿಯಾಗಿ ಕುಶಲೋಪರಿ ವಿಚಾರಿಸಿಕೊಂಡಿದ್ದಾರೆ. ಬಾಬಾಜಿ ಅವರ ಅನುಯಾಯಿ ಆಗಿರುವ ರಜಿನಿಕಾಂತ್ ಆಗಾಗ್ಗೆ ಹಿಮಾಲಯದ ಗುಹೆಗಳಲ್ಲಿ ಧ್ಯಾನಕ್ಕೆ ಕೂರುವುದು ಎಲ್ಲರಿಗೂ ತಿಳಿದಿದ್ದೇ ಆಗಿದ್ದು ಯೋಗಿಗಳೊಟ್ಟಿಗೆ ಸಮಾಧಿ ಸ್ಥಿತಿಯಲ್ಲಿ ರಜಿನಿಕಾಂತ್ ಮಾತನಾಡುತ್ತಾರೆ ಎಂದು ಹೇಳಲಾಗುತ್ತದೆ. ಅದೇ ರೀತಿ, ಶ್ರೀ ಎಂ ಅವರು ಕೇರಳದಲ್ಲಿ ಮುಸ್ಲಿಂ ಕುಟುಂಬದಲ್ಲಿ ಜನಿಸಿ ಬಳಿಕ ಪೂರ್ವಜನ್ಮದ ಆಧ್ಯಾತ್ಮಿಕ ಹಾದಿಯನ್ನು ಮುಂದುವರೆಸಿ ಹಿಂದೂ ಯೋಗಿಯಾಗಿದ್ದಾರೆ. ” ‘ಹಿಮಾಲಯದ ಗುರುವಿನ ಗರಡಿಯಲ್ಲಿ’ ಎಂಬ ತಮ್ಮ ಆತ್ಮಕಥೆಯಲ್ಲಿ ಹಿಮಾಲಯದಲ್ಲಾದ ನೂರಾರು ರೋಮಾಂಚಕ ಘಟನೆಗಳು, ಉಯ್ಯಾಲೆ ಮೇಲೆ ಕುಳಿತು ಸಾಯಿ ಬಾಬಾ ದರ್ಶನ ಕೊಡುವುದನ್ನು ದಾಖಲಿಸಿದ್ದಾರೆ. ಶ್ರೀ ಎಂ ಹಾಗೂ ರಜಿನಿಕಾಂತ್…