Subscribe to Updates
Get the latest creative news from FooBar about art, design and business.
- ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ
- ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ
- ಭಯ ಬೇಡ, ಪೊಲೀಸರನ್ನು ಸಮುದಾಯದ ಭಾಗವಾಗಿ ಕಾಣಿ: ಸಿಪಿಐ ಶ್ರೀನಿವಾಸ್ ಡಿಜೆ
- ತುಮಕೂರು: ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ
- ಸಾಗುವಳಿದಾರ ರೈತರ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ ಆರೋಪ; ಕೆಪಿಟಿಸಿಎಲ್ ಖಾಸಗೀಕರಣಕ್ಕೆ ತೀವ್ರ ಆಕ್ರೋಶ
- ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!
- ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ
- ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ
Author: admin
ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೊರೊನಾ ಪರೀಕ್ಷೆ ವೇಳೆಯಲ್ಲಿ 12 ಮಂದಿಗೆ ಪಾಸಿಟಿವ್ ವರದಿಯಾಗಿದೆ. ಇದರಲ್ಲಿ ಚೀನಾದಿಂದ ಬಂದಿರುವಂತ ವ್ಯಕ್ತಿಯೊಬ್ಬರು ಸಹ ಸೇರಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಬಿಎಫ್ 7 ಒಮಿಕ್ರಾನ್ ಉಪತಳಿಯ ಆಂತಕ ಹೆಚ್ಚಾಗಿದೆ. ಚೀನಾದಿಂದ ಬಂದ 35 ವರ್ಷದ ವ್ಯಕ್ತಿಯೊಬ್ಬನನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೊರೊನಾ ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಅವರಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಅವರನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಕಳೆದ ಮೂರು ದಿನಗಳಿಂದ ಹೈರಿಸ್ಕ್ ದೇಶಗಳಿಂದ ಬಂದಂತ 12 ಜನರಲ್ಲಿ ಕೊರೋನಾ ದೃಢಪಟ್ಟಿದೆ. ಇವರಲ್ಲಿ ಐವರನ್ನು ಹೋಂ ಐಸೋಲೇಷನ್ ಮಾಡಲಾಗಿದೆ, ನಾಲ್ವರನ್ನು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಹೀಗಾಗಿ ಈಗ ಬೆಂಗಳೂರಿನಲ್ಲಿಯೂ ಬಿಎಫ್.7 ಕೊರೋನಾ ಆತಂಕ ಹೆಚ್ಚಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ನಾಗ್ಪುರ : ಗಡಿ ವಿವಾದ ಸಂಬಂಧ ಕರ್ನಾಟಕದ ಸಿಎಂ ಬಸವರಾಜ ಬೊಮ್ಮಾಯಿ ಪ್ರಚೋದನೆ ನೀಡುತ್ತಿದ್ದಾರೆ ಎಂದು ಮಹಾರಾಷ್ಟ್ರ ವಿಪಕ್ಷ ನಾಯಕ ಅಜಿತ್ ಪವಾರ್ ಆರೋಪಿಸಿದ್ದಾರೆ. ಇಂದು ಮಹಾರಾಷ್ಟ್ರ ವಿಧಾನಸಭೆಯಲ್ಲಿ ಗಡಿ ವಿವಾದ ವಿಚಾರದ ಚರ್ಚೆ ವೇಳೆ ಮಾತನಾಡಿದ ವಿಪಕ್ಷ ನಾಯಕ ಅಜಿತ್ ಪವಾರ್, ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ದೇಶಪೂರ್ವಕವಾಗಿ ಗಡಿ ವಿಚಾರದಲ್ಲಿ ಪ್ರಚೋದನೆ ನೀಡುತ್ತಿದ್ದಾರೆ ಎಂದರು. ಕರ್ನಾಟಕದ ಸಿಎಂ ನಮಗೆ ದ್ರೋಹ ಮಾಡಿದ್ರೂ ಸುಮ್ಮನಿದ್ದೇವೆ. ಗಡಿ ವಿವಾದದ ಬಗ್ಗೆ ಸರ್ಕಾರ ನಿರ್ಣಯ ಕೈಗೊಳ್ಳಬೇಕು. ಎಂಇಎಸ್ ನವರು ಕೊಲ್ಹಾಪುರಕ್ಕೆ ಬರುವ ಇಚ್ಛೆ ವ್ಯಕ್ತಪಡಿಸಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಚೀನಾದಿಂದ ವಾಪಸಾದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಆಗ್ರಾ ಮೂಲದ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ವ್ಯಕ್ತಿಯನ್ನು ಬಾಧಿಸಿದ ಕಾಯಿಲೆಯ ಪ್ರಕಾರವನ್ನು ಖಚಿತಪಡಿಸಲು ಕಾರ್ಯವಿಧಾನಗಳನ್ನು ಪ್ರಾರಂಭಿಸಲಾಗಿದೆ. ಲಕ್ನೋದ ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಜೀನೋಮ್ ಸೀಕ್ವೆನ್ಸಿಂಗ್ ಮೂಲಕ ಇದನ್ನು ಕಂಡುಹಿಡಿಯಲಾಯಿತು. ಉತ್ತರ ಪ್ರದೇಶ ಸರ್ಕಾರವು ವಿದೇಶದಿಂದ ಹಿಂದಿರುಗುವವರಿಗೆ 7 ದಿನಗಳ ಸ್ವಯಂ ಕ್ವಾರಂಟೈನ್‌ಗೆ ಆದೇಶಿಸಿದೆ. ಈ ಹಿಂದೆ, ಚೀನಾವನ್ನು ಬಿಕ್ಕಟ್ಟಿಗೆ ಸಿಲುಕಿಸಿದ ಕೋವಿಡ್‌ನ ಹೊಸ ರೂಪಾಂತರವನ್ನು ಭಾರತದಲ್ಲಿಯೂ ಬಿಎಫ್ 7 ಎಂದು ದೃಢಪಡಿಸಲಾಯಿತು. ಈ ಹಿನ್ನೆಲೆಯಲ್ಲಿ ದೇಶ ಕಟ್ಟೆಚ್ಚರ ವಹಿಸಿದೆ. ಸೆಲ್ ಹೋಸ್ಟ್ ಮತ್ತು ಮೈಕ್ರೋಬ್ ಜರ್ನಲ್‌ನಲ್ಲಿ ಪ್ರಕಟವಾದ ಅಧ್ಯಯನವು ವುಹಾನ್‌ನಲ್ಲಿ ಮೊದಲು ಹರಡಿದ ವೈರಸ್‌ಗಿಂತ BF7 ರೂಪಾಂತರವು 4 ಪಟ್ಟು ಹೆಚ್ಚು ತಟಸ್ಥೀಕರಣ ಪ್ರತಿರೋಧವನ್ನು ಹೊಂದಿದೆ ಎಂದು ಹೇಳುತ್ತದೆ. ಇದರರ್ಥ ವ್ಯಾಕ್ಸಿನೇಷನ್ ಅಥವಾ ಸ್ವಾಧೀನಪಡಿಸಿಕೊಂಡ ಪ್ರತಿರಕ್ಷೆಯ ಮೂಲಕ ದೇಹವು ಈ ರೂಪಾಂತರದ ಸೋಂಕನ್ನು ಸುಲಭವಾಗಿ ತಡೆಯಲು ಸಾಧ್ಯವಿಲ್ಲ.ಅವು ಹೆಚ್ಚು ನಿರೋಧಕವಾಗಿದ್ದರೂ, ಅವು ಹೆಚ್ಚು ಅಪಾಯಕಾರಿ ಅಲ್ಲ…
ಕಮ್ಯುನಿಸ್ಟ್ ನಾಯಕ ಪುಷ್ಪ ಕಮಲ್ ಧಲ್ (ಪ್ರಚಂಡ) ನೇಪಾಳದ ಪ್ರಧಾನಿಯಾಗಿ ಇಂದು ಅಧಿಕಾರ ಸ್ವೀಕರಿಸಲಿದ್ದಾರೆ. ನೇಪಾಳದ ಪ್ರಧಾನಿಯಾಗಿ ಆಯ್ಕೆಯಾಗಿರುವ ಪ್ರಚಂಡ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಸ್ನೇಹವನ್ನು ಬಲಪಡಿಸಲು ನಾವು ಒಟ್ಟಾಗಿ ಕೆಲಸ ಮಾಡಬಹುದು ಎಂದು ಪ್ರಧಾನಿ ಹೇಳಿದರು. ಭಾರತ ಮತ್ತು ನೇಪಾಳ ನಡುವಿನ ಸಂಬಂಧವು ಸಾಂಸ್ಕೃತಿಕವಾಗಿ ಆಳವಾದದ್ದು. ಸ್ನೇಹವನ್ನು ಬಲಪಡಿಸಲು ಉಭಯ ದೇಶಗಳು ಒಟ್ಟಾಗಿ ಕೆಲಸ ಮಾಡಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಪ್ರತಿಪಕ್ಷ ಕಮ್ಯುನಿಸ್ಟ್ ಲೆನಿನಿಸ್ಟ್ ಮತ್ತು ಪ್ರಚಂಡ ಅವರ ಕಮ್ಯುನಿಸ್ಟ್ ಪಾರ್ಟಿ ಆಫ್ ನೇಪಾಳ ಮಾವೋವಾದಿ ಕೇಂದ್ರದ ನಡುವಿನ ಸಮ್ಮಿಶ್ರ ಸರ್ಕಾರ ಈ ಬಾರಿ ಅಧಿಕಾರಕ್ಕೆ ಬರಲಿದೆ. ಕಮ್ಯುನಿಸ್ಟ್ ಪಾರ್ಟಿ ಆಫ್ ನೇಪಾಳ-ಮಾವೋವಾದಿ ಕೇಂದ್ರದ ಅಧ್ಯಕ್ಷ ಪ್ರಚಂಡ ಮೂರನೇ ಬಾರಿಗೆ ಪ್ರಧಾನಿ ಹುದ್ದೆಗೆ ಏರುತ್ತಿದ್ದಾರೆ. ಪ್ರಚಂಡ ಅವರು ಈ ಹಿಂದೆ 2008 ಮತ್ತು 2016ರಲ್ಲಿ ಪ್ರಧಾನಿಯಾಗಿದ್ದರು. ಸಂಸತ್ತಿನಲ್ಲಿ ಬಹುಮತ ಸಾಬೀತುಪಡಿಸಲು ಅಧ್ಯಕ್ಷರು ಈ ಹಿಂದೆ ಪಕ್ಷಗಳಿಗೆ ಆಹ್ವಾನ ನೀಡಿದ್ದರು. 275 ಸದಸ್ಯ ಬಲದ…
ನಾಯಕಿ ತ್ರಿಷಾ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ ಎಂಬ ಪ್ರಚಾರದಲ್ಲಿ ಇರುವಂತ ವದಂತಿ ನಿಜವಲ್ಲ ಮತ್ತು ತನಗೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅವರ ಹೊಸ ಚಿತ್ರ ‘ರಾಂಗಿ’ ಇದೇ ತಿಂಗಳ 30 ರಂದು ಬಿಡುಗಡೆಯಾಗಲಿದೆ. ಈ ಸಿನಿಮಾದ ಪ್ರಚಾರದ ಭಾಗವಾಗಿ ನೀಡಿರುವ ಸಂದರ್ಶನದಲ್ಲಿ ತ್ರಿಶಾ ರಾಜಕೀಯ ಪ್ರವೇಶದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಚಿತ್ರರಂಗಕ್ಕೆ ಬಂದು 20 ವರ್ಷಗಳು ಕಳೆದಿದ್ದು, ಈ ಎರಡು ದಶಕಗಳಲ್ಲಿ ವಾಸ್ತವ ಅಂಶಗಳನ್ನು ಮಾತ್ರ ಪರಿಗಣಿಸಿ ಟೀಕೆಗಳತ್ತ ಗಮನ ಹರಿಸಿಲ್ಲ ಎಂದರು. ತಾನು ಕಾಂಗ್ರೆಸ್ ಪಕ್ಷ ಸೇರಲಿದ್ದೇನೆ ಎಂಬ ಪ್ರಚಾರ ನಡೆಯುತ್ತಿದ್ದು, ಅದರಲ್ಲಿ ಯಾವುದೇ ಸತ್ಯಾಂಶವಿಲ್ಲ, ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು. ಅದೇ ಸಮಯದಲ್ಲಿ ನೀವು ಯಾವಾಗ ಮದುವೆಯಾದಿರಿ? ನಿಮ್ಮ ನೆಚ್ಚಿನ ನಟ ಯಾರು? ಅಂತಹ ಪ್ರಶ್ನೆಗಳನ್ನು ಸ್ವಲ್ಪ ಸಮಯದವರೆಗೆ ಕೇಳದಿರುವುದು ಉತ್ತಮ ಎಂದು ಅವರು ಸೂಚಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…
ಎಸೆಸೆಲ್ಸಿ ಪರೀಕ್ಷೆಯಲ್ಲಿ ಕೋವಿಡ್-19 ನಿಯಮಾವಳಿ ಪಾಲನೆ ಜತೆಗೆ ಸಾಮಾಜಿಕ ಅಂತರ ಕಾಯ್ದುಕೊಂಡೇ ಪರೀಕ್ಷೆ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ಧರಿಸಿದೆ.ಕೋವಿಡ್-19 ನಿಯಮಾವಳಿ ಪಾಲನೆ ಜತೆಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಆಸನ ವ್ಯವಸ್ಥೆ ಮಾಡಲಾಗುತ್ತದೆ. ಎಸೆಸೆಲ್ಸಿ ಪರೀಕ್ಷೆಯನ್ನು ಸುವ್ಯವಸ್ಥಿತ ಹಾಗೂ ಅಚ್ಚುಕಟ್ಟಾಗಿ ನಡೆಸುವ ಉದ್ದೇಶದಿಂದ ಕೆಲವು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಇದನ್ನು ಕಡ್ಡಾಯವಾಗಿ ಪಾಲಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಎಲ್ಲ ಉಪನಿರ್ದೇಶಕರಿಗೆ ಸೂಚಿಸಲಾಗಿದೆ. ಪರೀಕ್ಷಾ ಕೇಂದ್ರದ ಪ್ರತಿ ಕೊಠಡಿಗೆ 24 ವಿದ್ಯಾರ್ಥಿಗಳಂತೆ ಆಸನ ವ್ಯವಸ್ಥೆ ಮಾಡಿ ಪರೀಕ್ಷಾ ಕೇಂದ್ರ ರಚಿಸಬೇಕು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ದೇಶನ ನೀಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ರವರು ಕ್ಷೇತ್ರದಲ್ಲಿ ಅಭಿವೃಧ್ದಿಯ ಪರ್ವವನ್ನು ಮುಂದುವರೆಸಿದ್ದು, ಅದರಂತೆಯೇ ಇಂದು ಬೆಳಗಾವಿ ನಗರದ ಮುಖ್ಯ ರಸ್ತೆ ಎನಿಸಿಕೊಂಡಿರುವ ಮಹಾಂತೇಶ ನಗರದ ಬ್ರಿಡ್ಜ ದಿಂದ ಕಣಬರ್ಗಿ ರಸ್ತೆ (ಸುರಭಿ ಹೊಟೆಲ್) ವರೆಗಿನ 2 ಕಿ.ಮೀ ರಸ್ತೆಯನ್ನು ಲೋಕೊಪಯೋಗಿ ಇಲಾಖೆಯಡಿ 1 ಕೋಟಿ ರೂಪಾಯಿ ಅನುದಾನದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಅವರ ಅಮೃತ ಹಸ್ತದಿಂದ ಭೂಮಿ ಪೂಜೆ ಸಲ್ಲಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕರು ಈಗಾಗಲೇ ನಗರದಲ್ಲಿ ಎಲ್ಲ ಕಡೆಗಳಲ್ಲಿ ಅಭಿವೃಧ್ದಿ ಕಾಮಗಾರಿಗಳು ಚಾಲ್ತಿಯಲ್ಲಿವೆ ಅದರಂತೆಯೇ ಇಂದು ನಗರದ ಮುಖ್ಯ ರಸ್ತೆಯಾಗಿರುವ ಮಹಾಂತೇಶ ನಗರ ಬ್ರಿಡ್ಜ ಕಡೆಗಿನ ರಸ್ತೆಯಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿಯು ನಡೆಯುತ್ತಿದ್ದರಿಂದ ರಸ್ತೆ ನಿರ್ಮಾಣ ಕಾಮಗಾರಿಯು ತಡವಾಗಿತ್ತು. ಆದ್ದರಿಂದ ಸದ್ಯ ಮಹಾಂತೇಶ ನಗರ ಬ್ರಿಡ್ಜ ರಸ್ತೆ ಯಿಂದ ಕಣಬರ್ಗಿ ರಸ್ತೆ (ಸುರಭಿ ಹೊಟೆಲ್) ವರೆಗಿನ ರಸ್ತೆ ಡಾಂಬರೀಕರಣ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆಯಡಿಯ 1 ಕೋಟಿ ರೂಪಾಯಿ…
ಬೆಂಗಳೂರು : ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ಹೈಕಮಾಂಡ್ ನಿಂದ ಸಚಿವ ಸಂಪುಟ ವಿಸ್ತರಣೆಗೆ ಹಸಿರು ನಿಶಾನೆ ತೋರುವ ಸಾಧ್ಯತೆ ಇದೆ ಎನ್ನಲಾಗಿದೆ. ಸಚಿವ ಸಂಪುಟ ವಿಸ್ತರಣೆ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಈಗಾಗಲೇ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದ್ದು, , ವರಿಷ್ಠರನ್ನು ಭೇಟಿಯಾಗಿ ಸಂಪುಟ ವಿಸ್ತರಣೆ ಕುರಿತಂತೆ ಚರ್ಚೆ ನಡೆಸಲಿದ್ದಾರೆ.ಇನ್ನು ಮೂರು ಪ್ರತ್ಯೇಕ ಪಟ್ಟಿಯನ್ನ ಸಿದ್ಧಪಡಿಸಿಕೊಂಡ ಸಿಎಂ , ವರಿಷ್ಠರ ಬಳಿ ಮೂರು ಪಟ್ಟಿಗಳ ಬಗ್ಗೆ ಚರ್ಚಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಸಚಿವ ಸ್ಥಾನಕ್ಕೆ ಈಶ್ವರಪ್ಪ , ರಮೇಶ್ ಜಾರಕಿಹೊಳಿ ಸೇರಿ ಖಾಲಿಯಿರುವ ಐದು ಸಚಿವ ಸ್ಥಾನಗಳ ಭರ್ತಿ ಮಾಡಲು ಸಿಎಂ ಲೆಕ್ಕಚಾರ ಹಾಕಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಹೊಸಮುಖಗಳಿಗೆ ಅವಕಾಶ ಕಲ್ಪಿಸುವ ಲೆಕ್ಕಾಚಾರ ಸಿದ್ದಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ : ಇಬ್ಬರನ್ನು ತಡರಾತ್ರಿ ಅಪರಿಚಿತರು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಶಿಂದೊಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿ ನಡೆಯುತ್ತಿದ್ದ ವೇಳೆ ಬಂದ ದುಷ್ಕರ್ಮಿಗಳು ಇಬ್ಬರು ವ್ಯಕ್ತಿಗಳ ಮೇಲೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಬಸವರಾಜ ಬೆಳಗಾಂವಾಕ್ಕರ್ (23), ಗಿರೀಶ್ ನಾಗಣ್ಣನವರ್ (34) ಮೃತರು ಎಂದು ಗುರುತಿಸಲಾಗಿದೆ. ಪಂದ್ಯಾವಳಿ ವೇಳೆ ಮೈದಾನಕ್ಕೆ ಅಪರಿಚಿತ ವಾಹನ ನುಗ್ಗಿದ್ದು, ಯುವಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಳಿಕ ವಾಹನದಿಂದ ಕೆಳಗಿಳಿದ ಅಪರಿಚಿತರು ಇಬ್ಬರು ಯುವಕರ ಮೇಲೆ ಚಾಕುವಿನಿಂದ ಇರಿದು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಮೃತದೇಹಗಳನ್ನು ಬಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಆಸ್ಪತ್ರೆ ಬಳಿ ಮುನ್ನೆಚ್ಚರಿಕಾ ಕ್ರಮವಾಗಿ ಕೆಎಸ್ ಆರ್ ಪಿ ತುಕಡಿ ನಿಯೋಜನೆ ಮಾಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬಾದಾಮಿ ನೀರು ಸೇವನೆಯಿಂದ ಈ ಸಮಸ್ಯೆಗಳನ್ನು ನಿಯಂತ್ರಿಸಬಹುದು! ಬಾದಾಮಿ ಅಂದ್ರೆ, ಯಾರಿಗೆ ಇಷ್ಟ ಇಲ್ಲ ಹೇಳಿ, ಬಾದಾಮಿ ಕೇವಲ ರುಚಿಗೆ ಮಾತ್ರವಲ್ಲದೇ ನಮ್ಮ ಆರೋಗ್ಯಕ್ಕೂ ಅತ್ಯುತ್ತಮವಾಗಿದೆ. ಹಾಗೆಯೇ ಬಾದಾಮಿಯ ನೀರು ಕೂಡ ಆರೋಗ್ಯಕ್ಕೆ ಉತ್ತಮವಾಗಿದೆ. ಬಾದಾಮಿ ನೀರನ್ನು ಸೇವನೆ ಮಾಡುವುದರಿಂದ ದೇಹ ತಂಪಾಗಿರುತ್ತದೆ. ಒಂದಷ್ಟು ಬಾದಾಮಿಯನ್ನು ರಾತ್ರಿ ವೇಳೆ ನೀರಿನಲ್ಲಿ ನೆನೆಹಾಕಿ ಬೆಳಗ್ಗೆ ಸೇವನೆ ಮಾಡಬೇಕು. ಹೀಗೆ ಮಾಡುವುದರಿಂದ ರಕ್ತದೊತ್ತಡದ ಮಟ್ಟವನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ. ಒಂದು ವಾರಗಳ ವರೆಗೆ ಬಾದಾಮಿ ನೀರನ್ನು ಸೇವನೆ ಮಾಡುವುದರಿಂದ ರಕ್ತದ ಒತ್ತಡ ನಿಯಂತ್ರಣಕ್ಕೆ ಬರುತ್ತದೆ. ಜೊತೆಗೆ ದೇಹವು ದುರ್ಬಲವಾಗಿರುವವರು ಬಾದಾಮಿ ನೀರನ್ನು ಸೇವನೆ ಮಾಡುವುದು ಉತ್ತಮ. ಯಾಕೆಂದರೆ ಬಾದಾಮಿ ನೀರು ದೇಹಕ್ಕೆ ಶಕ್ತಿಯನ್ನು ನೀಡುತ್ತದೆ.ಬಾದಾಮಿ ನೀರಿನ ಸೇವನೆಯಿಂದ ನೆನಪಿನ ಶಕ್ತಿ ಹೆಚ್ಚಿಸಲು ಸಹಕಾರಿಯಾಗುತ್ತದೆ. ಜೊತೆಗೆ ದೇಹದಲ್ಲಿ ಸಕ್ಕರೆ ಪ್ರಮಾಣವನ್ನು ಸಮತೋಲನದಲ್ಲಿಡಲು ಬಾದಾಮಿ ನೀರು ಒಳ್ಳೆಯದು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…