Author: admin

ಕೋಲಾರ: ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತಗೊಂಡ ಪರಿಣಾಮ, ದಂಪತಿ ಸಾವನ್ನಪ್ಪಿ, 15ಕ್ಕೂ ಹೆಚ್ಚು ಜನರು ಗಾಯಗೊಂಡಿರುವಂತ ಘಟನೆ ಜಿಲ್ಲೆಯ ಮುಳಬಾಗಿಲು ತಾಲೂಕಿನ ರಾಷ್ಟ್ರೀಯ ಹೆದ್ದಾರಿ-75ರ ವಿರುಪಾಕ್ಷಿ ಗೇಟ್ ಬಳಿಯಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಒಂದು ಪಲ್ಟಿಯಾಗಿದೆ. ಈ ಪರಿಣಾಮ ಬಸ್ಸಿನಲ್ಲಿದ್ದಂತ ದಂಪತಿಗಳಿಬ್ಬರು ಸ್ಥಳದಲ್ಲೇ ದುರ್ಮರಣಹೊಂದಿರೋದಾಗಿ ತಿಳಿದು ಬಂದಿದೆ. ಇನ್ನೂ ಬಸ್ ನಲ್ಲಿದ್ದಂತ 15ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಆಂಧ್ರಪ್ರದೇಶದ ಗುಂಟೂರಿನಿಂದ ಬೆಂಗಳೂರಿಗೆ ತೆರಳುತ್ತಿತ್ತು ಎಂಬುದಾಗಿ ತಿಳಿದು ಬಂದಿದೆ. ಅಪಘಾತಗೊಂಡ ಬಸ್ಸಿನಲ್ಲಿ 30 ಪ್ರಯಾಣಿಕರಿದ್ದರು ಎಂದು ಹೇಳಲಾಗಿದೆ. ಈ ಸಂಬಂಧ ಮುಳಬಾಗಿಲು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಬಳ್ಳಾರಿ : ಕಾಂಗ್ರೆಸ್ ನಿಂದ ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಲಿ ಎಂದು ಆಸೆ ಪಡುವ ವ್ಯಕ್ತಿಗಳಲ್ಲಿ ನಾನೂ ಒಬ್ಬ ಎಂದು ಹೇಳುವ ಮೂಲಕ ಸಚಿವ ಶ್ರೀರಾಮುಲು ಅಚ್ಚರಿ ಮೂಡಿಸಿದ್ದಾರೆ. ಬಳ್ಳಾರಿಯಲ್ಲಿ ನಡೆದ ಕುರುಬ ಸಂಘದ ವಾಣಿಜ್ಯ ಮಳಿಗೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀರಾಮುಲು, ಹಿಂದುಳಿದವರ ಅಭಿವೃದ್ಧಿ ವಿಚಾರಕ್ಕೆ ಬಂದರೆ ನಾನು ಹಾಗೂ ಸಿದ್ದರಾಮಯ್ಯನವರು ಒಂದೇ. ಭಗವಂತ ಆಶೀರ್ವಾದ ಮಾಡಿದರೆ ಕಾಂಗ್ರೆಸ್ ನಿಂದ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಲಿ ಎಂದು ನಾನೂ ಸಹ ಆಸೆ ಪಡುತ್ತೇನೆ ಎಂದು ಹೇಳಿದರು. ಅಲ್ಲದೆ ವೈಯಕ್ತಿಕವಾಗಿ ನನಗೂ ಹಾಗೂ ಸಿದ್ದರಾಮಯ್ಯನವರ ಮಧ್ಯೆ ಏನೂ ಇಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಬೆಳಗಾವಿ : ನಗರದ ಚನ್ನಮ್ಮ ವೃತ್ತದಲ್ಲಿರುವ ರಾಣಿ ಚನ್ನಮ್ಮ ಪುತ್ಥಳಿಯ ಕಟ್ಟೆಗೆ ಲಾರಿಯೊಂದು ಡಿಕ್ಕಿ ಹೊಡೆದಿದೆ.ತಡರಾತ್ರಿ 11.15ರ ಸುಮಾರಿಗೆ ಈ ಘಟನೆ ನಡೆದಿದೆ. ಕೊಲ್ಲಾಪುರ ವೃತ್ತದ ಕಡೆಯಿಂದ ವೇಗವಾಗಿ ಬಂದ ಲಾರಿ ಪುತ್ಥಳಿಯ ಕಟ್ಟೆಯ ಸುತ್ತಲಿರುವ ಗ್ರಿಲ್ಸ್ ಗಳಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಗ್ರಿಲ್ಸ್ ಗಳು ನಜ್ಜುಗುಜ್ಜಾಗಿವೆ. ಚನ್ನಮ್ಮ ಪುತ್ಥಳಿಗೆ ಯಾವುದೇ ಹಾನಿ ಸಂಭವಿಸಿಲ್ಲ. ಸ್ಥಳಕ್ಕಾಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಮುಂಬೈ: ಖ್ಯಾತ ಕೈಗಾರಿಕೋದ್ಯಮಿ ಹಾಗೂ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಖೇಶ್ ಅಂಬಾನಿ ಕುಟುಂಬಕ್ಕೆ ಮತ್ತೊಮ್ಮೆ ಬೆದರಿಕೆ ಬಂದಿದೆ. ಗಿರ್ಗಾಂವ್‌ ನ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಅಂಬಾನಿ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಬಹಿರಂಗಪಡಿಸಿದ್ದಾರೆ. ಸೋಮವಾರ ಬೆಳಗ್ಗೆ 10.30ರ ಸುಮಾರಿಗೆ ವ್ಯಕ್ತಿ ಮೂರ್ನಾಲ್ಕು ಬಾರಿ ಫೋನ್ ಮಾಡಿ ಅಂಬಾನಿ ಕುಟುಂಬಕ್ಕೆ ಬೆದರಿಕೆ ಹಾಕಿದ್ದಾನೆ. ಅದರ ನಂತರ, ಮುಂಬೈ ನಗರ ಪೊಲೀಸರು ಮಧ್ಯಪ್ರವೇಶಿಸಿ ದಹಿಸರ್ ಪ್ರದೇಶದಲ್ಲಿ ಶಂಕಿತನನ್ನು ಬಂಧಿಸಿದರು. ಪ್ರಾಥಮಿಕ ತನಿಖೆಯಿಂದ ವ್ಯಕ್ತಿ ಮಾನಸಿಕ ಅಸ್ವಸ್ಥ ಎಂದು ಹೇಳಲಾಗಿದೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ತುಮಕೂರು: ಜಿಲ್ಲೆಯ ತುರುವೇಕೆರೆ ತಾಲೂಕಿನ ಬಾಣಸಂದ್ರದಲ್ಲಿ ಮೊನ್ನೆಯಷ್ಟೇ ಬಸ್ ಡಿಕ್ಕಿಯಾಗಿ ಮೂರು ಎಮ್ಮೆಗಳು ಸಾವನ್ನಪ್ಪಿದ ಘಟನೆ ನಡೆದಿತ್ತು. ಈ ಘಟನೆ ಮಾಸುವ ಮೊದಲೇ ಇದೀಗ ತುರುವೇಕೆರೆಯಿಂದ ಕೆ.ಬಿ. ಕ್ರಾಸ್ ಗೆ ಹೊರಟಿದ್ದ ತವೇರಾ ಕಾರು ಬಾಣಸಂದ್ರ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಯ ಬಲಭಾಗದಲ್ಲಿ ನಿಲ್ಲಿಸಿದ್ದ  ದ್ವಿಚಕ್ರ ವಾಹನಕ್ಕೆ  ಡಿಕ್ಕಿ ಹೊಡೆದಿದೆ. ಟವೇರಾ ಕಾರು ಗುದ್ದಿದ ರಬಸಕ್ಕೆ ದ್ವಿಚಕ್ರವಾಹನ ಸಂಪೂರ್ಣವಾಗಿ ನುಗ್ಗಿಜ್ಜಾಗಿದೆ ತವೇರಾ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಈ ಜಾಗದಲ್ಲಿ ರಸ್ತೆ ಹುಬ್ಬು ಇಲ್ಲದ ಕಾರಣ ವೇಗವಾಗಿ ಬಂದ ವಾಹನಗಳು ಅಪಘಾತಗಳು ನಡೆಯುತ್ತಿವೆ.  ಇಂತಹ ದುರ್ಘಟನೆಗಳು ಮತ್ತೆ ಮತ್ತೆ ನಡೆಯುತ್ತಲೇ ಇರುತ್ತವೆ ಎಂದು ಸಾರ್ವಜನಿಕರು  ಪಿ ಡಬ್ಲ್ಯೂ ಡಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಬೇಸತ್ತ ಇಲ್ಲಿನ ನಿವಾಸಿಗಳು, ಅಪಘಾತಗಳನ್ನು ಕಂಡು ಸಾಕಾಗಿ ಹೋಗಿದೆ. ನಿಮ್ಮ ಸುದ್ದಿ ವಾಹಿನಿಯ ಮೂಲಕವಾದರೂ ಸಂಬಂಧಪಟ್ಟ ಪೊಲೀಸ್ ಹಾಗೂ ಲೋಕೋಪಯೋಗಿ ಇಲಾಖೆಯವರಿಗೆ ಸಮಸ್ಯೆ ಮನವರಿಕೆ ಮಾಡಿ ಎಂದು ಸಾರ್ವಜನಿಕರು ನಮ್ಮತುಮಕೂರು ಪ್ರತಿನಿಧಿಯ…

Read More

ಕೊರಟಗೆರೆ : ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಬೂದಾಗವಿ (ಸಿದ್ದರಬೆಟ್ಟ)ಗ್ರಾಮ ಪಂಚಾಯಿತಿ ಕಚೇರಿಯ ಆವರಣದಲ್ಲಿರುವ ಧ್ವಜಸ್ಕಂಭದಲ್ಲಿ ದಿನಾಂಕ 13/08/2022 ರ ರಾತ್ರಿ 2 ಗಂಟೆಯವರೆಗೂ ರಾಷ್ಟ್ರಧ್ವಜವನ್ನು ಕೆಳಗಿಳಿಸದೆ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವ ಘಟನೆ ನಡೆದಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿ ಸದಸ್ಯ ಬಸವರಾಜು ಮಲ್ಲೇಕಾವು ಮಾತನಾಡಿ,  ಸಿದ್ದರಬೆಟ್ಟ ಗ್ರಾಮ ಪಂಚಾಯಿತಿಯ ಕಚೇರಿ ಆವರಣದಲ್ಲಿರುವ ಧ್ವಜಸ್ತಂಭದಲ್ಲಿ ದಿನಾಂಕ 13/08/2022 ರ ಬೆಳಗ್ಗೆ ಹಾರಿಸಿದ ತ್ರಿವರ್ಣ ಧ್ವಜವನ್ನು ರಾತ್ರಿ ಇಡೀ ಕೆಳಗಿಳಿಸದೆ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿ ಕಾನೂನು ಉಲ್ಲಂಘನೆಯನ್ನು ಮಾಡಿರುವ ಘಟನೆ ನಡೆದಿದೆ. ರಾಷ್ಟ್ರಧ್ವಜ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ವಿಜಯ ಕುಮಾರಿ ಹಾಗೂ ಕಾರ್ಯದರ್ಶಿಗಳಾದ ನರಸಿಂಹಮೂರ್ತಿ ಮತ್ತು ಪಂಚಾಯಿತಿ ಅಧ್ಯಕ್ಷೆ ವಿನೋದ ನವೀನ್ ಕುಮಾರ್ ರವರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ತಿಳಿಸಿದರು. ರಾಷ್ಟ್ರಧ್ವಜದ ವಿಚಾರವಾಗಿ  ಕೇಂದ್ರ ಸರ್ಕಾರದ ಆದೇಶವನ್ನ ಗಾಳಿಗೆ ತೂರಿದ ಘಟನೆಯು ನಮ್ಮ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರವಾಗಿ ಸುದ್ದಿ ಹೊರಬಂದಿತ್ತು…

Read More

ಸರಗೂರು ತಾಲ್ಲೂಕಿನ ಪಟ್ಟಣದ ಸ್ವಾಮಿ ವಿವೇಕಾನಂದ ಆಸ್ಪತ್ರೆಯಲ್ಲಿ 75 ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದಲ್ಲಿ ಅಂಬೇಡ್ಕರ್ ರವರ ಭಾವಚಿತ್ರ ವನ್ನು ಇಡದೆ ಆಚರಣೆ ಮಾಡಿರುವ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದವು. ಸರಗೂರು ತಾಲೂಕಿನ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಅಂಗ ಸಂಸ್ಥೆಯಾದ ಸ್ವಾಮಿ ವಿವೇಕಾನಂದ ಆಸ್ಪತ್ರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಫೋಟೋ ಹಾಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಂಬೇಡ್ಕರ್ ಫೋಟೋ ಬಳಸದಿರುವ ಬಗ್ಗೆ ವಿವೇಕಾನಂದ ಆಸ್ಪತ್ರೆಯ ಅಧಿಕಾರಿಗಳು ವಿಚಾರಿಸಿದಾಗ ಸ್ವಾತಂತ್ರ್ಯ ದಿನದಂದು ನಾವು ಅಂಬೇಡ್ಕರ್ ಪೋಟೋ ಇಡುವುದಿಲ್ಲ. ಜನವರಿ 26ರಂದು ಇಡುತ್ತೀವಿ ಎಂದರಲ್ಲದೇ ನಿಮ್ಮ ಹತ್ತಿರ ಸರ್ಕಾರದ ಸುತ್ತೋಲೆ ಇದ್ದರೆ ಕೊಡಿ ಎಂದು ಉಡಾಫೆಯ ವರ್ತನೆ ತೋರಿದರು ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ವಾತಂತ್ರ್ಯೋತ್ಸವದಲ್ಲಿ ಅಂಬೇಡ್ಕರ್ ಭಾವ ಚಿತ್ರ ಬಳಸದೇ ನಿರ್ಲಕ್ಷ್ಯತನದಿಂದ ಮಾತನಾಡಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಂವಿಧಾನ ಸಂರಕ್ಷಣಾ ಸಮಿತಿ ಒತ್ತಾಯಿಸಿದೆ. ಈ ವೇಳೆ ಎಸ್ ಎಲ್ ರಾಜಣ್ಣ ಶಿವಣ್ಣ ಕುಮಾರ್ ಗೊವಿಂದರಾಜು…

Read More

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹಳೇ ಕಡಲೆಕಾಯಿ ಮಂಡಿ, ನೆಹರು ಕ್ರೀಡಾಂಗಣದ ಒಳಗಡೆ ಇರುವ ಸಾರ್ವಜನಿಕ ಶೌಚಾಲಯದ ಹಿಂಭಾಗದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಹಿರಿಯೂರು ನಗರ ಪೋಲಿಸ್ ಠಾಣೆಯ ಪಿ ಎಸ್ ಐ ಅನಸೂಯ ಹಾಗೂ ಹೊರಕೇರಪ್ಪ ಸೇರಿದಂತೆ ಸಿಬ್ಬಂದಿ ತನಿಖೆ ನಡೆಸಿ ಮೃತದೇಹವನ್ನು ಸ್ಥಳಾಂತರಿಸಿದ್ದಾರೆ. ಮೃತಪಟ್ಟ ವ್ಯಕ್ತಿ ಯಾರು ಎಂದು ತಿಳಿದು ಬಂದಿಲ್ಲ. ಸದ್ಯ ಪೊಲೀಸರು ಮೃತ ವ್ಯಕ್ತಿಯ ಗುರುತು ಪತ್ತೆಗಾಗಿ ಮುಂದಿನ ತನಿಖೆ ಆರಂಭಿಸಿದ್ದಾರೆ. ವರದಿ: ಮುರುಳಿಧರನ್ ಆರ್ ಚಿತ್ರದುರ್ಗ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಮಧುಗಿರಿ: ಪಟ್ಟಣದ 19 ವಾರ್ಡ್ ನಲ್ಲಿ ಶಾಸಕ ಎಂ.ವಿ ವೀರಭದ್ರಯ್ಯ ನವರು ಸುಮಾರು ಎಂಟು ಲಕ್ಷದ ಮೌಲ್ಯದ  ಶುದ್ಧ ನೀರಿನ ಘಟಕವನ್ನು ಉದ್ಘಾಟನೆ ಮಾಡಿದ್ದರು.  ಆದರೆ ಶುದ್ಧ ನೀರಿನ ಘಟಕ ನೋಡಿಕೊಳ್ಳುವವರು ಯಾರು ಇಲ್ಲದ,  ಕಾರಣ   ಸುತ್ತಮುತ್ತ ನಿಂತಿರುವ ಕೊಚ್ಚೆ ನೀರು ತೊಟ್ಟಿಗೆ ಬಂದು, ಅದೇ ನೀರು ಶುದ್ಧವಾಗಿ ಬರುತ್ತಿತ್ತು. ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಹಣ ವೆಚ್ಚ ಮಾಡಿ ಕುಡಿಯುವ ನೀರಿನ ಘಟಕ ತೆರೆದಿದ್ದರೂ, ಕುಡಿಯಲು ನೀರು ಯೋಗ್ಯವಲ್ಲದ ಕಾರಣ ಸಾರ್ವಜನಿಕರು  ಯಾರು ನೀರನ್ನೂ ಕುಡಿಯುತ್ತಿರಲಿಲ್ಲ. ಇದನ್ನು ಮನಗಂಡ ಕನ್ನಡ ಜಾಗೃತಿ ವೇದಿಕೆಯ ಪದಾಧಿಕಾರಿಗಳು ಸ್ವತಃ ಸ್ಥಳಕ್ಕೆ ಹೋಗಿ ನೀರನ್ನು ಕುಡಿದು ಪರೀಕ್ಷಿಸಿದಾಗ ನೀರು ಅಶುದ್ಧಿಯಾಗಿ ಬರುತ್ತಿರುವುದು ಕಂಡುಬಂದಿತು. ಕುಡಿಯುವ ನೀರಿನ ಘಟಕದ ದುಸ್ಥಿತಿ ಕಂಡ ಕನ್ನಡ ಜಾಗೃತಿ ವೇದಿಕೆಯ ಪದಾಧಿಕಾರಿಗಳು ನಮ್ಮ ತುಮಕೂರು ನ್ಯೂಸ್ ಗೆ ಮಾಹಿತಿ ತಿಳಿಸಿದ್ದು, ಈ ವಿಚಾರದ ಬಗ್ಗೆ  ಆಕ್ರೋಶ ವ್ಯಕ್ತಪಡಿಸಿದ್ದರು. ಈ ಸುದ್ದಿ ನಮ್ಮ ತುಮಕೂರು ನ್ಯೂಸ್ ಚಾನಲ್ ನಲ್ಲಿ ವರದಿಯಾದ ಬೆನ್ನಲ್ಲೇ ಎಚ್ಚೆತ್ತುಕೊಂಡ ಅಧಿಕಾರಿಗಳು…

Read More

ತುಮಕೂರು: ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರುವ ಫ್ಲಕ್ಸ್’ನಲ್ಲಿದ್ದ ವೀರ ಸಾವರ್ಕರ್ ಭಾವಚಿತ್ರವನ್ನು ಕಿಡಿಗೇಡಿಗಳು ಹರಿದು ಹಾಕಿ ವಿಕೃತಿ ಮೆರೆದಿರುವ ಘಟನೆ ತುಮಕೂರು ನಗರದಲ್ಲಿ ನಡೆದಿದೆ. ನಗರದ ಎಂಪ್ರೆಸ್ ಕಾಲೇಜು ಮುಂಭಾಗ ನಗರ ಶಾಸಕ ಜ್ಯೋತಿಗಣೇಶ್ ರವರು ವಿವಿಧ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರದೊಂದಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರುವ ಫ್ಲೆಕ್ಸ್ ಅಳವಡಿಸಿದ್ದು, ಕಿಡಿಗೇಡಿಗಳು ಸಾವರ್ಕರ್ ರವರ ಭಾವಚಿತ್ರವಿರುವ ಫ್ಲೆಕ್ಸನ್ನು ಹರಿದು ಹಾಕಿ ವಿಕೃತಿ ಮೆರೆದಿದ್ದಾರೆ. ಕಿಡಿಗೇಡಿಗಳು ಶಿವಮೊಗ್ಗದಲ್ಲಿ ನಡೆದ ಘಟನೆಯಿಂದ ಪ್ರೇರಿತಗೊಂದು ಶಾಂತಿ ಸುವ್ಯವಸ್ಥೆಯಿಂದಿರುವ ತುಮಕೂರು ನಗರದಲ್ಲಿ  ವೀರ ಸಾವರ್ಕರ್​​ ಫೋಟೋ ಹರಿದು ಹಾಕಿರುವ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮೂರು ದಿನಗಳ ಹಿಂದೆ ಫ್ಲೆಕ್ಸ್​ ಹಾಕಲಾಗಿದ್ದು, ಅಂದಿನಿಂದ ಎಲ್ಲ ಫ್ಲೆಕ್ಸ್’ಗಳು ಸುಸ್ಥಿತಿಯಲ್ಲಿದ್ದವು. ಆದರೆ  ಸ್ವಾತಂತ್ರ್ಯ ದಿನೋತ್ಸವದ  ರಾತ್ರಿ ಕಿಡಿಗೇಡಿಗಳು ವೀರ ಸಾರ್ವಕರ್ ಭಾವಚಿತ್ರ ಇರುವ ಫ್ಲೆಕ್ಸ್​ ಅನ್ನು ಮಾತ್ರ ಹರಿದು ಹಾಕಿದ್ದಾರೆ. ಈ ಕುರಿತು ಹಿಂದೂಪರ ಸಂಘಟನೆಗಳ ಮುಖಂಡರು ಹಾಗೂ ನಾಗರೀಕರು ತೀವ್ರ ಬೇಸರ ವ್ಯಕ್ತಪಡಿದ್ದಾರೆ.  ತುಮಕೂರು ನಗರ ಪೊಲೀಸ್​ ಠಾಣಾ…

Read More