Subscribe to Updates
Get the latest creative news from FooBar about art, design and business.
- ಮಧುಗಿರಿ: ಎರಡು ವರ್ಷದ ಚಿರತೆ ಸೆರೆ
- ಶೈಕ್ಷಣಿಕ ಮತ್ತು ಸಾಂಸ್ಕೃತಿಕ ರಂಗಕ್ಕೆ ಕನಕದಾಸರ ಕೊಡುಗೆ ಅಪಾರ: ಪ.ಪಂ. ಅಧ್ಯಕ್ಷ ಶಿವಕುಮಾರ್
- ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ: ಸಿಎಂ ಸಿದ್ದರಾಮಯ್ಯ
- ಅಪ್ರಾಪ್ತೆ ಜೊತೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಪುತ್ರನ ಬಂಧನ
- ಬೈಕ್ ಟಾಕ್ಸಿ ಚಾಲಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ
- ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕ ನಿರ್ಮಾಣ: ಡಾ.ಜಿ.ಪರಮೇಶ್ವರ್
- ಚಿಕ್ಕನಾಯಕನಹಳ್ಳಿ: ತುಳುನಾಡಿನ ಪಂಜುರ್ಲಿ ದೈವಕ್ಕೆ ಭಕ್ತಿ ಸಮರ್ಪಣೆ
- ಮಧುಗಿರಿ | ಜೀತ ವಿಮುಕ್ತರಿಗೆ ಪುನರ್ ವಸತಿ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ!
Author: admin
ಪಾವಗಡ: ತಾಲ್ಲೂಕಿನ ಯ.ನಾ. ಹೊಸಕೋಟೆ ಹೋಬಳಿಯ ತಿಪ್ಪಯ್ಯನದುರ್ಗ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ಬಿಜೆಪಿ ಮುಖಂಡ ಕೃಷ್ಣ ನಾಯ್ಕ ಬ್ಯಾಗ್ ವಿತರಣೆ ಮಾಡಿದರು. ಬಳಿಕ ಮಾತನಾಡಿದ ಕೃಷ್ಣ ನಾಯ್ಕ ಅವರು, ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವಂತಹ ವಿದ್ಯಾರ್ಥಿಗಳು ಬಡ ವಿದ್ಯಾರ್ಥಿಗಳು ಆಗಿರುತ್ತಾರೆ ಎಂದು ತಿಳಿದು ಈ ಬ್ಯಾಗ್ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದಾಗಿ ತಿಳಿಸಿದರು. ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷ ಉಮೇಶ್, ಬಿಜೆಪಿ ಮಂಡಲ ಅಧ್ಯಕ್ಷ ರವಿಶಂಕರ್ ನಾಯ್ಕ, ಮಂಡಲ ಉಪಾಧ್ಯಕ್ಷ ನಾರಾಯಣಪ್ಪ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಅಶೋಕ್, ರೈತ ಮೋರ್ಚಾ ಅಧ್ಯಕ್ಷ ಕೋಟೆಶ್ವರ್ ರೆಡ್ಡಿ, ಎಸ್ ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ರವಿ ನಾಯ್ಕ ಮತ್ತು ಪ್ರಸಾದ್ ಬಾಬು, ಯುವ ಮುಖಂಡ ವಸಂತ್ ನಾಯ್ಕ, ಬಿಜೆಪಿ ಕಾರ್ಯಕರ್ತ ಹರೀಶ್ ನಾಯ್ಕ ಹಾಗೂ ಊರಿನ ಗ್ರಾಮಸ್ಥರು ಹಾಜರಿದ್ದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 4ನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಖರ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಅವರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದರು. ದೆಹಲಿಯಲ್ಲಿರುವ ಎ.ಬಿ.ವಾಜಪೇಯಿ ಅವರ ಸದೈವ್ ಅಟಲ್ ಸ್ಮಾರಕಕ್ಕೆ ತೆರಳಿದ ರಾಷ್ಟ್ರ ನಾಯಕರು ಅವರಿಗೆ ಗೌರವ ನಮನ ಸಲ್ಲಿಸಿದರು. ಪ್ರಧಾನಿ ಮೋದಿಯಲ್ಲದೆ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಕೂಡ ಅವರ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿದರು. ಅಟಲ್ ಬಿಹಾರಿ ವಾಜಪೇಯಿ ಅವರ ಸಾಕು ಮಗಳು ನಮಿತಾ ಕೌಲ್ ಭಟ್ಟಾಚಾರ್ಯ ಅವರು ಕೂಡ ಬಿಜೆಪಿ ನಾಯಕರೊಂದಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ದಿವಂಗತ ಮಾಜಿ ಪ್ರಧಾನಿ, ಭಾರತೀಯ ಜನತಾ ಪಕ್ಷದ ಹೆಸರಾಂತ ನಾಯಕ, ಹಿರಿಯ ಧುರೀಣರಾಗಿದ್ದ ವಾಜಪೇಯಿ ಅವರು ಅನಾರೋಗ್ಯದಿಂದ 2018ರಲ್ಲಿ ನಿಧನರಾದರು. ಮೂರು ಬಾರಿ ಭಾರತದ ಪ್ರಧಾನಿಯಾಗಿದ್ದ…
ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮನೆ ಮೇಲೆ ತ್ರಿವರ್ಣ ಧ್ವಜ ಕಟ್ಟುತ್ತಿದ್ದ ವ್ಯಕ್ತಿ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿರುವ ಮನಕಲುಕುವ ಘಟನೆ ಸಿಲಿಕಾನ್ ಸಿಟಿಯ ಹೆಚ್ ಬಿಆರ್ ಲೇಔಟ್ ನಲ್ಲಿ ನಡೆದಿದೆ. ವಿಶುಕುಮಾರ್ (33) ಮೃತ ದುರ್ದೈವಿಯಾಗಿದ್ದಾರೆ. ಬೆಂಗಳೂರಿನ ಹೆಚ್ ಬಿಆರ್ ಲೇಔಟ್ ನಲ್ಲಿ ದುರ್ಘಟನೆ ನಡೆದಿದ್ದು, ವಿಶುಕುಮಾರ್ ವೃತ್ತಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದರು. ದಕ್ಷಿಣ ಕನ್ನಡದ ಸುಳ್ಯ ಮೂಲದವರಾದ ವಿಶುಕುಮಾರ್ ನಿನ್ನೆ ಮಧ್ಯಾಹ್ನ 1.45 ಸುಮಾರಿಗೆ ತ್ರಿವರ್ಣ ಧ್ವಜ ಕಟ್ಟಲು ಎರಡನೇ ಮಹಡಿಯಲ್ಲಿರುವ ಮನೆ ಟೇರಸ್ ಮೇಲೆ ಏರಿದ್ದಾರೆ. ಈ ವೇಳೆ ಆಯತಪ್ಪಿ 30 ಅಡಿ ಎತ್ತರದಿಂದ ಕೆಳಗೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ವಿಶುಕುಮಾರ್ ತಲೆಗೆ ಗಂಭೀರ ಗಾಯವಾಗಿದೆ. ತಕ್ಷಣವೇ ಕುಟುಂಬಸ್ಥರು ಸ್ಥಳೀಯರ ಸಹಾಯದಿಂದ ವಿಶುಕುಮಾರ್ ಅವರನ್ನು ಅಂಬೇಡ್ಕರ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ತಲೆಗೆ ತೀವ್ರ ಪೆಟ್ಟಾದ ಹಿನ್ನೆಲೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ ಆಸ್ಪತ್ರೆಯಲ್ಲಿ ವಿಶುಕುಮಾರ್ ಕೊನೆಯುಸಿರೆಳೆದಿದ್ದಾರೆ. ಮೃತರಿಗೆ ಹೆಂಡತಿ ಹಾಗೂ 2 ವರ್ಷದ ಮುದ್ದಾದ ಮಗುವಿದೆ. ಇನ್ನೂ…
ಬಾಗಲಕೋಟೆ: ಸ್ವಾತಂತ್ರ್ಯ ದಿನಾಚರಣೆಯಂದೇ ಜೈಲಿನಲ್ಲಿ ಕೈದಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ. ನಗರದ ಜಿಲ್ಲಾ ಕಾರಾಗೃಹದ ಕೈದಿ ಮಂಜುನಾಥ ಕುರಿ (28) ಆತ್ಮಹತ್ಯೆ ಮಾಡಿಕೊಂಡವರು. ಸೋಮವಾರ ಜೈಲಿನಲ್ಲಿ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದಲ್ಲಿ ಮಂಜುನಾಥ ಭಾಗವಹಿಸಿದ್ದರ. ಕಾರ್ಯಕ್ರಮ ಮುಗಿದ ನಂತರ ಬ್ಯಾರೆಕ್ ಗೆ ತೆರಳಿ, ಕಿಟಕಿಗೆ ಟವೆಲ್‌ನಿಂದ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಈ ಸಸ್ಯವು ನಮ್ಮ ಮನೆಗಳು, ಉದ್ಯಾನಗಳು, ಉದ್ಯಾನವನಗಳು ಮತ್ತು ಕಛೇರಿಗಳಲ್ಲಿ ಬಹಳ ಸಾಮಾನ್ಯವಾಗಿದೆ (ಒಳಾಂಗಣ ಮತ್ತು ಹೊರಾಂಗಣ ಸಸ್ಯವಾಗಿ ಜನಪ್ರಿಯವಾಗಿದೆ). ಸಸ್ಯ (ಡಂಬ್ ಕೇನ್ ಅಥವಾ ಡೈಫೆನ್‌ಬಾಚಿಯಾ) ಈಗ ಅಪಾಯಕಾರಿ ಎಂದು ಸಾಬೀತಾಗಿದೆ, ಆದ್ದರಿಂದ ದಯವಿಟ್ಟು ಕಾಳಜಿ ವಹಿಸಿ! ಈ ಸಸ್ಯದ ಎಲೆಯು ಅದರ ರಸ (ಹಾಲು) ನಿಮ್ಮ ಚರ್ಮಕ್ಕೆ ತಾಗಿದರೆ ತುರಿಕೆ ಉಂಟಾಗುತ್ತದೆ. ಆದರೆ ಹೆಚ್ಚು ಅಪಾಯಕಾರಿ ಸಂಗತಿಗಳಿವೆ! ಕೆಳಗಿನ ವಿವರಗಳನ್ನು ಓದಿ. ನನ್ನ ಸ್ನೇಹಿತರೊಬ್ಬರು ಈ ಗಿಡದ ಎಲೆಯ ತುಂಡನ್ನು ಬಾಯಿಗೆ ಹಾಕಿಕೊಂಡ ಮಗಳನ್ನು ಕಳೆದುಕೊಂಡರು ಮತ್ತು ಅವಳ ನಾಲಿಗೆ ಉಸಿರುಗಟ್ಟುವ ಹಂತಕ್ಕೆ ಊದಿಕೊಂಡಿತು. ಹೆಸರು: ಡಂಬ್ ಕೇನ್ ಅಥವಾ ಡಿಫೆನ್‌ಬಾಚಿಯಾ ಈ ಸಸ್ಯವು ರುವಾಂಡಾದಲ್ಲಿ ಸಾಮಾನ್ಯವಾಗಿದೆ. ಇದು ಮಾರಣಾಂತಿಕ ವಿಷವಾಗಿದೆ, ವಿಶೇಷವಾಗಿ ಮಕ್ಕಳಿಗೆ. ಇದು ಒಂದು ನಿಮಿಷಕ್ಕಿಂತ ಕಡಿಮೆ ಅವಧಿಯಲ್ಲಿ ಮಗುವನ್ನು ಮತ್ತು 15 ನಿಮಿಷಗಳಲ್ಲಿ ವಯಸ್ಕನನ್ನು ಕೊಲ್ಲುತ್ತದೆ. ಇದನ್ನು ತೋಟಗಳಿಂದ ಕಿತ್ತು ಕಛೇರಿಯಿಂದ ಹೊರಗೆ ತೆಗೆಯಬೇಕು. ಮುಟ್ಟಿದರೆ, ಒಬ್ಬನು ಅವನ/ಅವಳ ಕಣ್ಣುಗಳನ್ನು ಮುಟ್ಟಬಾರದು; ಇದು ಭಾಗಶಃ…
ಸ್ವಾತಂತ್ರ್ಯದ 75 ಸಂವತ್ಸರಗಳನ್ನು ಪೂರೈಸಿದ ಸಂಭ್ರಮದಲ್ಲಿ ಜಿಲ್ಲೆಯಲ್ಲಿ ಬೃಹತ್ ತ್ರಿವರ್ಣ ಧ್ವಜ ಪ್ರದರ್ಶಿಸಿ ಲಿಮ್ಕಾ ಪುಸ್ತಕದಲ್ಲಿ ದಾಖಲೆ ನಿರ್ಮಿಸಲಾಯಿತು. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೋಲಾರ ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಪ್ರಧಾನ ಮಂತ್ರಿಗಳ ಹರ್ ಘರ್ ತಿರಂಗಾ ಅಭಿಯಾನದ ಕರೆಗೆ ಓಗೊಟ್ಟು ಸಂಸದ ಎಸ್.ಮುನಿಸ್ವಾಮಿ ಅವರ ನೇತೃತ್ವದಲ್ಲಿ ದೇಶದ ಅತಿ ದೊಡ್ಡ ರಾಷ್ಟ್ರಧ್ವಜವನ್ನು ಕ್ರೀಡಾಂಗಣದ ಉದ್ದಗಲಕ್ಕೂ ಪ್ರದರ್ಶಿಸಲಾಯಿತು. ಈ ಸಂದರ್ಭದಲ್ಲಿ ರಾಷ್ಟ್ರಧ್ವಜಕ್ಕೆ ರಕ್ಷಣಾ ಇಲಾಖೆಯ ಸೇನಾ ಹೆಲಿಕಾಪ್ಟರ್‍ನಿಂದ ಪುಷ್ಪವೃಷ್ಟಿ ಸಲ್ಲಿಸಲಾಯಿತು. ಆ ಕ್ಷಣದಲ್ಲಿ ಕ್ರೀಡಾಂಗಣದಲ್ಲಿ ನೆರೆದಿದ್ದ ಜನಸ್ತೋಮದ ಹರ್ಷೋದ್ಘಾರ ಎಲ್ಲೆ ಮೀರಿತ್ತು. ನಮ್ಮ ಧ್ವಜ ನಮ್ಮ ಹೆಮ್ಮೆ, ಭಾರತ ಮಾತೆಗೆ ಜೈಕಾರ ಸೇರಿದಂತೆ ದೇಶಪ್ರೇಮದ ಘೋಷಣೆಗಳನ್ನು ಕೂಗಿದರು. ಸಹಸ್ರಾರು ತ್ರಿವರ್ಣ ಧ್ವಜಗಳನ್ನು ಹಿಡಿದಿದ್ದ ಶಾಲಾ ಮಕ್ಕಳು ಸಂತಸದಿಂದ ಕುಣಿದಾಡಿದರು. ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಸೇರಿದಂತೆ ಜನಪ್ರತಿಧಿನಿಗಳು, ಅಧಿಕಾರಿಗಳು ಬೃಹತ್ ಬಾವುಟ ವೀಕ್ಷಿಸಿ ಹರ್ಷ ವ್ಯಕ್ತಪಡಿಸಿದರು. 20್ಡ5630 ಅಡಿ ವಿಸ್ತಿರ್ಣ ಹೊಂದಿದ ರಾಷ್ಟ್ರಧ್ವಜವು ಒಟ್ಟು 1.29 ಲಕ್ಷ ಚದರ ಅಡಿ…
ಶಿವಮೊಗ್ಗ: ಯುವಕನಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ಕಾರ್ಯಾಚರಣೆ ವೇಳೆ ಆರೋಪಿ ಜೆ.ಸಿ. ನಗರ ನಿವಾಸಿ ಮೊಹಮ್ಮದ್ ಜಬಿ ಅಲಿಯಾಸ್ ಚರ್ಬಿಯನ್ನು ಗುಂಡು ಹಾರಿಸಿ ಬಂಧಿಸಲಾಗಿದೆ. ಯುವಕನಿಗೆ ಚಾಕುವಿನಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ನದೀಮ್ ಹಾಗೂ ಅಬ್ದುಲ್ ರೆಹೆಮಾನ್ ರನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿ ಮುಖ್ಯ ಆರೋಪಿಯ ಬಂಧನಕ್ಕೆ ಕಾರ್ಯಾಚರಣೆ ಆರಂಭಿಸಿದ್ದರು. ಇಂದು ಮುಂಜಾನೆ 4 ಗಂಟೆ ಸುಮಾರಿನಲ್ಲಿ ತೀರ್ಥಹಳ್ಳಿ ರಸ್ತೆಯ ಫಲಕ್ ಸಮುದಾಯ ಭವನದ ಬಳಿ ಆರೋಪಿ ಮೊಹಮ್ಮದ್ ಜಬಿ ಇರುವ ಖಚಿತ ಮಾಹಿತಿಯೊಂದಿಗೆ ವಿನೋಬ ನಗರ ಠಾಣೆ ಪಿ.ಎ. ಮಂಜುನಾಥ್ ಅವರು ತಮ್ಮ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳುತ್ತಿದ್ದಂತೆ ಪೊಲೀಸರನ್ನು ಕಂಡ ಆರೋಪಿ ಮೊಹಮ್ಮದ್ ಚಾಕುವಿನಿಂದ ಅವರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆನ್ನಲಾಗಿದೆ. ಈ ವೇಳೆ ತಕ್ಷಣ ಪಿಎಸ್‍ಐ ಅವರು ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿ ಶರಣಾಗುವಂತೆ ಎಚ್ಚರಿಸಿದ್ದಾರೆ. ಆದರೆ ಪೊಲೀಸರ ಮಾತಿಗೆ ಕಿವಿಗೊಡದೆ ಮತ್ತೆ ಹಲ್ಲೆಗೆ ಮುಂದಾದಾಗ ಆತ್ಮ ರಕ್ಷಣೆಗಾಗಿ ಮಂಜುನಾಥ್ ಅವರು ಹಾರಿಸಿದ ಗುಂಡು…
ಸರಗೂರು: ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಪಟ್ಟಣದ ಪ್ರಥಮ ದರ್ಜೆ ಕಾಲೇಜು ಅವರಣದಲ್ಲಿ ಹಮ್ಮಿಕೊಳ್ಳಲಾಯಿತು. ಪ್ರಥಮ ದರ್ಜೆ ಕಾಲೇಜಿನಿಂದ ಶಾಲೆಯ ಮಕ್ಕಳು ಹೊರಟ ಸರಗೂರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿ ಅದೇ ಮಾರ್ಗವಾಗಿ ಪ್ರಥಮ ದರ್ಜೆ ಕಾಲೇಜು ಅವರಣದಲ್ಲಿ ವಿವಿಧ ಶಾಲೆಯ ಮಕ್ಕಳಿಂದ ಪಥಸಂಚಲನ ನಡೆಸಿದರು ತಹಸೀಲ್ದಾರ್ ಚೆಲುವರಾಜು ಗೌರವಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಸಕ ಅನಿಲ್ ಚಿಕ್ಕಮಾದು ತಹಸೀಲ್ದಾರ್ ಚೆಲುವರಾಜು ಪ.ಪಂ. ಅಧ್ಯಕ್ಷೆ ರಾಧಿಕಾ ಶ್ರೀನಾಥ್ , ಉಪಾಧ್ಯಕ್ಷ ವಿನಾಯಕ ಪ್ರಸಾದ್, ಪಪಂ ಸದಸ್ಯರು ಎಸ್ ಎಲ್ ರಾಜಣ್ಣ, ಶ್ರೀನಿವಾಸ್, ಹೇಮಾವತಿ, ರಮೇಶ್, ಸಣ್ಣತಾಯಮ್ಮ, ಶಿವಕುಮಾರ್, ಚೈತ್ರಸ್ವಾಮಿ, ಉಮಾರಾಚಂದ್ರ, ದಿವ್ಯನವೀನ್, ಚಲುವಕೃಷ್ಣ, ನೂರಾಳಸ್ವಾಮಿಇನ್ನೂ ತಾಲ್ಲೂಕಿನ ಅಧಿಕಾರಿಗಳು ಹಾಗೂ ಶಾಲೆಯ ಮಕ್ಕಳು ಶಿಕ್ಷಕರು ಇನ್ನೂ ಹೆಚ್ಚಿನ ರೀತಿಯಲ್ಲಿ ಸಿಬ್ಬಂದಿ ಭಾಗವಹಿಸಿದ್ದರು. ವರದಿ: ಚಂದ್ರ ಹಾದನೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…
ತಿಪಟೂರು: ಇಲ್ಲಿನ ಕೆ.ಆರ್. ಬಡಾವಣೆಯಲ್ಲಿರುವ ಜಯಕರ್ನಾಟಕ ವೃತ್ತದಲ್ಲಿ ತಾಲೂಕು ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ 75 ನೇ ಸುವರ್ಣ ಮಹೋತ್ಸವ ಸ್ವಾತಂತ್ರೋತ್ಸವದ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಸೈನಿಕ ಟಿ.ಎಸ್.ಷಣ್ಮುಖ, ಉಪವಿಭಾಗಾಧಿಕಾರಿಗಳ ಕಚೇರಿಯ ತಹಸೀಲ್ದಾರ್ ಕೆ.ಎಲ್.ಪರಮೇಶ್ವರಯ್ಯ ಮತ್ತು ನಿವೃತ್ತ ಲೀಡ್ ಬ್ಯಾಂಕ್ ಮುಖ್ಯಸ್ಥ ಜ್ಯೋತಿ ಗಣೇಶ್ ಮಾತನಾಡಿದರು. ಸಂಘಟನೆಯ ತಾಲ್ಲೂಕು ಅಧ್ಯಕ್ಷ ಬಿ.ಟಿ.ಕುಮಾರ್,ನಿವೃತ್ತ ಶಿಕ್ಷಕ ಸೋಮಶೇಖರ್, ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ಬಿ.ಬಿ.ಬಸವರಾಜ್, ನೌಕರರ ಘಟಕದ ಡಾ.ಮೋಹನ್ ಎಐಟಿಯುಸಿ ಸಂಚಾಲಕ ಗೋವಿಂದರಾಜ್, ಸಮಾಜ ಸೇವಕ ಬಿ.ಆರ್.ಶಶಿಧರ್, ತಾಲೂಕು ಪ್ರಧಾನ ಕಾರ್ಯದರ್ಶಿ ಶಿವಕುಮಾರ್, ಉಪಾಧ್ಯಕ್ಷ ಸಿದ್ದೇಶ್, ಕಾರ್ಯದರ್ಶಿ ಹಿಂಡಿಸ್ಕೆರೆ ರವಿ, ನಗರ ಕಾರ್ಯದರ್ಶಿ ಲೋಕೇಶ್, ಮುಖಂಡ ಕೆ.ಆರ್. ಬೋಜೇಗೌಡ, ಸಹ ಕಾರ್ಯದರ್ಶಿ ವಿಜಯಕುಮಾರ್, ಆಟೋ ಘಟಕದ ಕಾಂತರಾಜ್, ಕಲ್ಕೆಳೆ ಘಟಕದ ಗಂಗಾಧರಯ್ಯ, ಯುವ ಘಟಕದ ರೋಹನ್ ರಾಜ್, ಶ್ವೇತಕುಮಾರ್, ಕೆ.ಇ.ಬಿ. ಸೋಮಶೇಖರ್, ಮುಖಂಡರಾದ ಅಂಗಡಿ ಕಿಟ್ಟಪ್ಪ, ನಿವೃತ್ತ ನೌಕರ ಷಡಕ್ಷರಿ, ಸಂಘಟನೆಯ ರಮೇಶ್ ಮತ್ತು ಚಂದ್ರಶೇಖರ್ ಸೇರಿದಂತೆ ಸಂಘಟನೆಯ ವಿದ್ಯಾರ್ಥಿ ಘಟಕದ ಪದಾಧಿಕಾರಿಗಳು ಭಾಗವಹಿಸಿದ್ದರು. ವರದಿ:…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಪ್ರಧಾನ ರಸ್ತೆಯಲ್ಲಿರುವ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಡಿ.ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ವಿಜೃಂಭಣೆಯಿಂದ 75 ನೇಯ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಧ್ವಜಾರೋಹಣ ನೆರವೇರಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿ ಜೆ. ರಮೇಶ್ ಬಳಿಕ ನಮ್ಮ ತುಮಕೂರು ಮಾಧ್ಯಮದ ಜೊತೆಗೆ ಮಾತನಾಡಿ, ಸಮಸ್ತ ಭಾರತೀಯರಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರಿದರು. ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ನಗರದಲ್ಲಿ ಅಮೃತ ಮಹೋತ್ಸವ ಪಾದಯಾತ್ರೆಗೆ ಕಾಂಗ್ರೆಸ್ ಪಕ್ಷ ಭರ್ಜರಿ ತಯಾರಿ ನಡೆಸಿದೆ. ಹಿರಿಯೂರು ತಾಲ್ಲೂಕಿನಲ್ಲಿ ಸಹ ನೂರು ಕಿಲೋಮೀಟರ್ ಗಳ ಪಾದಯಾತ್ರೆ ಯನ್ನು ಮುಕ್ತಾಯಗೊಳಿಸಿದ್ದೇವೆ . ಈ ದಿನ ಭಾರತವು ಬ್ರಿಟಿಷ್ ಆಳ್ವಿಕೆಯಿಂದ ಸ್ವಾತಂತ್ರ್ಯವನ್ನು ಪಡೆಯಿತು. ಪ್ಲಾಸಿಯ ಕದನದಲ್ಲಿ ಬ್ರಿಟಿಷರ ವಿಜಯದ ನಂತರ, ಈಸ್ಟ್ ಇಂಡಿಯಾ ಕಂಪನಿಯು 1757ರಲ್ಲಿ ಭಾರತದಲ್ಲಿ ತನ್ನ ಆಡಳಿತವನ್ನು ಆರಂಭಿಸಿತು. ಭಾರತೀಯ ಸ್ವಾತಂತ್ರ್ಯ ಚಳುವಳಿಯು ಮೊದಲನೆಯ ಮಹಾಯುದ್ಧದ ಸಮಯದಲ್ಲಿ ಪ್ರಾರಂಭವಾಯಿತು ಮತ್ತು ಮೋಹನ್ ದಾಸ್ ಕರಮದಾಸ್ ಗಾಂಧಿ ನೇತೃತ್ವದಲ್ಲಿ ನಡೆಯಿತು. ಆಗಸ್ಟ್ 15, 1947…