Subscribe to Updates
Get the latest creative news from FooBar about art, design and business.
- ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ: ಡಿ.ಕೆ.ಸುರೇಶ್
- ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್
- ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ
- ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?
- ಖಮೇನಿ ಹತ್ಯೆ ಹಿನ್ನೆಲೆ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಜಿ.ಪರಮೇಶ್ವರ್ ಎಚ್ಚರಿಕೆ
- ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲು ಶಾಸಕ ಸುರೇಶ್ ಬಾಬು ಸೂಚನೆ
- ನಾಪತ್ತೆಯಾಗಿದ್ದ ಬೆಳ್ಳಾವಿ ಕಾರದೇಶ್ವರ ಮಠದ ಶ್ರೀಗಳು ಪತ್ತೆ: ಸ್ವಾಮೀಜಿ ಹೋಗಿದ್ದೆಲ್ಲಿಗೆ?
- ತುಮಕೂರು: ಭೀಮಸಂದ್ರದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಸೂಚನೆ
Author: admin
ರಾಜ್ಯ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಜೆಡಿಎಸ್ ನಾಯಕರು ತಯಾರಾಗುತ್ತಿದ್ದು ಈ ನಡುವೆ ಇಂದು ಪಂಚರತ್ನ ರಥಯಾತ್ರೆಗೆ ಚಾಲನೆ ನೀಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಚಾಲನೆ ನೀಡಿದರು. ಗುಟ್ಟಳ್ಳಿ ಗವಿಗಂಗಾಧರೇಶ್ವರ ದೇಗುಲದಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಜೆಡಿಎಸ್ ಪಂಚರತ್ನ ರಥಯಾತ್ರೆಗೆ ಚಾಲನೆ ನೀಡಿದರು, ಪಂಚರತ್ನ ರಥಕ್ಕೆ ಪೂಜೆ ಮಾಡಿ ಸಾಂಕೇತಿಕ ಚಾಲನೆ ನೀಡಿದರು. ಶಿಕ್ಷಣ, ಉದ್ಯೋಗ, ಕೃಷಿ, ನೀರಾವರಿ, ಆರೋಗ್ಯ ಯೋಜನೆಗಳ ಪಂಚರತ್ನವಾಗಿದೆ. 2023ರ ವಿಧಾನಸಭಾ ಚುನಾವಣೆ ಹಿನ್ನೆಲೆ ಜೆಡಿಎಸ್ ಮೆಗಾ ಪ್ಲಾನ್ ನಡೆಸಿದೆ. ಪಂಚರತ್ನ ರಥಯಾತ್ರೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, 1994 ರಲ್ಲಿ ಚುನಾವಣೆಗೆ ಮೊದಲು ಇಲ್ಲೇ ಪೂಜೆ ಸಲ್ಲಿಸಲಾಗಿತ್ತು, ಹೆಚ್.ಡಿ ದೇವೇಗೌಡರ ನೇತೃತ್ವದಲ್ಲಿ ಚುನಾವಣೆಗೆ ಹೋಗಿದ್ದವು. ನವೆಂಬರ್ 1 ರಿಂದ ಪಂಚರತ್ನ ರಥಯಾತ್ರೆ ಆರಂಭಿಸಲು ಚಿಂತಿಸಿದ್ಧೆ. ಆದರೆ ಇಂದು ಒಳ್ಳೆ ದಿನವಾದ್ದರಿಂದ ಇಂದೇ ಚಾಲನೆ ನೀಡಿದ್ದೇವೆ ಎಂದರು. ನಾಳೆ ಅಣ್ಣಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಗುವುದು. ನವೆಂಬರ್ 1 ರಂದು ಕೋಲಾರದಲ್ಲಿ ಸಮಾವೇಶ ಆಯೋಜಿಸಿದ್ದೇವೆ…
ಕರ್ನಾಟಕದಲ್ಲಿ ವಶಪಡಿಸಿಕೊಂಡಿರುವಂತಹ ಮಾದಕವಸ್ತುಗಳ ಮಾದರಿಗಳ ತಪಾಸಣೆಗಾಗಿ ಎರಡು ಹೆಚ್ಚುವರಿ ಫೋರೆನ್ಸಿಕ್ ಪ್ರಯೋಗಾಲಯಗಳನ್ನು ಸ್ಥಾಪಿಸಲು ಕೇಂದ್ರ ಸರ್ಕಾರದಿಂದ ರೂ.7 ಕೋಟಿ ಅನುದಾನ ಲಭಿಸಿದೆ. ಸರಣಿ ಟ್ವೀಟ್‌ಗಳ ಮೂಲಕ ರಾಜ್ಯದ ಪೋಲಿಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು, ಮಾದಕವಸ್ತುಗಳ ಮಾರಾಟದ ಮೂಲಕ ಕಾನೂನುಬಾಹಿರವಾಗಿ ಗಳಿಸಿರುವ ಆಸ್ತಿಯನ್ನು ರಾಜ್ಯ ಪೋಲಿಸ್ ಇಲಾಖೆ ವಶಕ್ಕೆ ತೆಗೆದುಕೊಳ್ಳುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಕರ್ನಾಟಕದಲ್ಲಿ ವಶಪಡಿಸಿಕೊಂಡಿರುವ ಮಾದಕವಸ್ತುಗಳ ಮಾದರಿಗಳ ಕ್ಷಿಪ್ರ ತಪಾಸಣೆಗಾಗಿ ಎರಡು ಹೆಚ್ಚುವರಿ ಫೋರೆನ್ಸಿಕ್ ಪ್ರಯೋಗಾಲಯಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ಕೇಂದ್ರ ಸರ್ಕಾರದ ಗೃಹ ವ್ಯವಹಾರಗಳ ಇಲಾಖೆ ರೂ.7 ಕೋಟಿ ಹಣಕಾಸಿನ ನೆರವನ್ನು ಒದಗಿಸಿದೆ. ಇದಕ್ಕಾಗಿ ನಾನು ಕೇಂದ್ರದ ಸಂಬಂಧಪಟ್ಟ ಇಲಾಖೆ ಹಾಗೂ ಎಲ್ಲಾ ಅಧಿಕಾರಿಗಳಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ರಾಜ್ಯದಲ್ಲಿ ಮಾದಕವಸ್ತುಗಳ ವಿರುದ್ಧದ ನಮ್ಮ ಹೋರಾಟ ಹಾಗೂ ಮಾದಕವಸ್ತುಗಳನ್ನು ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸುವ ಪ್ರಕ್ರಿಯೆಯನ್ನು ಕ್ಷಿಪ್ರಗೊಳಿಸಲು ನಮ್ಮ ಇಲಾಖೆ ಬದ್ಧವಾಗಿದೆ,” ಎಂದು ತಮ್ಮ ಟ್ವೀಟ್‌ನಲ್ಲಿ ಸೂದ್ ಅವರು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
ಮಂಗಳೂರು: ಫ್ಲಿಪ್‌ಕಾರ್ಟ್‌ನಿಂದ ವ್ಯಕ್ತಿಯೊಬ್ಬರು ಲ್ಯಾಪ್‌ಟಾಪ್ ಆರ್ಡರ್ ಮಾಡಿದ್ದು, ಅದರ ಬದಲಿಗೆ ದೊಡ್ಡ ಕಲ್ಲು ಮತ್ತು ಇ-ತ್ಯಾಜ್ಯವನ್ನು ಪಡೆದಿರುವ ವಿಲಕ್ಷಣ ಪ್ರಕರಣ ನಡೆದಿದೆ. ಚಿನ್ಮಯ ರಮಣ ಎಂಬ ವ್ಯಕ್ತಿ ಫ್ಲಿಪ್‌ಕಾರ್ಟ್‌ನಿಂದ ಲ್ಯಾಪ್‌ಟಾಪ್ ಖರೀದಿಸಿದ್ದರು. ಆದರೆ ಅವರಿಗೆ ಲ್ಯಾಪ್‌ಟಾಪ್ ಬಾಕ್ಸ ಅಲ್ಲಿ ದೊಡ್ಡ ಕಲ್ಲು ಕಳುಹಿಸಲಾಗಿದೆ. ಈ ವಿಚಾರವನ್ನ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದು, ಲ್ಯಾಪ್‌ಟಾಪ್ ಆರ್ಡರ್ ಮಾಡಿದ್ದೆ ಬದಲಾಗಿ ದೊಡ್ಡ ಕಲ್ಲು ಮತ್ತು ಇ-ತ್ಯಾಜ್ಯವನ್ನು ಸ್ವೀಕರಿಸಿದೆ. ದೀಪಾವಳಿ ಮಾರಾಟದ ಸಮಯದಲ್ಲಿ ಎಂದು ಬರೆದಿದ್ದಾರೆ. ಅವರು ಬಾಕ್ಸ್ ತೆರೆಯುವ ವಿಡಿಯೋವನ್ನು ಸಹ ಪೋಸ್ಟ್ ಮಾಡಿದ್ದಾರೆ. ಆದಾಗ್ಯೂ, ಫ್ಲಿಪ್‌ಕಾರ್ಟ್ ಜವಾಬ್ದಾರಿಯನ್ನು ವಹಿಸಿಕೊಂಡಿದ್ದು, ಸಂಪೂರ್ಣ ಮೊತ್ತವನ್ನು ಪಾವತಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ವಿಜಯಪುರ: ಟ್ರ್ಯಾಕ್ಟರಗೆ ಕ್ರೂಸರ್ ಡಿಕ್ಕಿಯಾಗಿ ದಂಪತಿ ಮೃತಪಟ್ಟು, 9 ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಇಂಡಿ ತಾಲೂಕಿನ ಧೂಳಖೇಡ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಭಯ್ಯಾಜಿ ಶಿಂಧೆ(50), ಸುಮಿತ್ರಾ ಶಿಂಧೆ(45) ಮೃತ ದುರ್ದೈವಿಗಳು. ಮೃತ ದಂಪತಿ ಬೆಳಗಾವಿ ಜಿಲ್ಲೆಯ ಅಥಣಿ ಮೂಲದ ನಿವಾಸಿಗಳು. ಕಬ್ಬು ಸಾಗಾಟ ಮಾಡುತ್ತಿದ್ದ ಟ್ಯಾಕ್ಟರಗೆ ಮಹಾರಾಷ್ಟ್ರದ ಅಕ್ಕಲಕೋಟಗೆ ತೆರಳುತ್ತಿದ್ದ ಕ್ರೂಸರ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಘಟನೆ ಸಂಭವಿಸಿದೆ. ಕ್ರೂಸರ್ ವಾಹನದಲ್ಲಿದ್ದ 9 ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಥಣಿ ಮೂಲದ ಇವರೆಲ್ಲಾ ಕ್ರೂಸರ್ ನಲ್ಲಿ ಅಕ್ಕಲಕೋಟೆ ಬಳಿಯ ಸ್ವಾಮಿ ಸಮರ್ಥ ಕ್ಷೇತ್ರಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಝಳಕಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬೆಂಗಳೂರು: ಕಬ್ಬಿಗೆ ದರ 5,500 ದರ ನಿಗದಿ ಮಾಡುವಂತೆ ಆಗ್ರಹಿಸಿ ಇಂದು ರೈತರು ರಾಜ್ಯದಾದ್ಯಂತ ರಸ್ತೆಗೆ ಇಳಿದು ಪ್ರತಿಭಟನೆ ನಡೆಸಲಿದ್ದಾರೆ. ಬೆಳಗ್ಗೆ 11ರಿಂದ 1 ಗಂಟೆಯವರೆಗೆ ಹೆದ್ದಾರಿಗಳನ್ನು ತಡೆಯಲಾಗುವುದು ಎಂದು ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ. ಸರ್ಕಾರ ಈ ಪ್ರತಿಭಟನೆ ಜಗ್ಗದೇ ಹೋದಲ್ಲಿ ವಿವಿಧ ಜಿಲ್ಲೆಗಳ ಜಿಲ್ಲಾಡಳಿತಕ್ಕೆ ಮುತ್ತಿಗೆ ಹಾಕಿ ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ. ರಾಜ್ಯದ ಮೂವತ್ತು ಲಕ್ಷ ಕಬ್ಬು ಬೆಳೆಗಾರರ ಪರವಾಗಿ ಹೋರಾಟ ನಡೆಯುತ್ತಿದೆ. ಸರ್ಕಾರ ಇಲ್ಲಿಯವರೆಗೆ ಯಾವುದೇ ತೀರ್ಮಾನ ಕೈಗೊಳ್ಳದೆ ವಿಳಂಬ ನೀತಿ ಅನುಸರಿಸುತ್ತಿದೆ. ಹೀಗಾಗಿ ಕಬ್ಬಿನ ಬೆಲೆ ಏರಿಕೆ ಮಾಡಬೇಕೆಂದು ಒತ್ತಾಯಿಸಿ ಹೆದ್ದಾರಿ ಬಂದ್ ನಡೆಸಲಾಗುವುದು ಎಂದು ಕುರುಬೂರು ಶಾಂತಕುಮಾರ್ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ವಿಜಯನಗರ: ಇಸ್ಪಿಟ್ ಅಡ್ಡೆಯ ಮೇಲೆ ದಾಳಿ ಮಾಡಿದ ನಂತರ, ಕಾನೂನು ಕ್ರಮ ಕೈಗೊಳ್ಳದೇ ದಾಳಿ ನಡೆಸಿದ ಆ ವಿಷಯವನ್ನೇ ಮುಚ್ಚಿಟ್ಟು, ದಾಳಿಯೇ ನಡೆದಿಲ್ಲ ಎಂಬ ನಡೆಯನ್ನು ಪೊಲೀಸರು ತೋರಿದ್ದಾರೆ. ಈ ಹಿನ್ನಲೆಯಲ್ಲಿ ಪೊಲೀಸರ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡಿ ಗ್ರಾಮಸ್ಥರೇ ಶಾಕ್ ನೀಡಿದ್ದಾರೆ. ದೀಪಾವಳಿ ಹಬ್ಬದಂದು ಇಸ್ಪಿಟ್ ಆಡುತ್ತಿದದಂತ ಜೂಜು ಕೋರರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಮೂವರು ಜೂಜುಕೋರರಿಂದ 20 ಸಾವಿರ ಹಣ ಹಾಗೂ ಮೊಬೈಲ್ ಜಪ್ತಿ ಮಾಡಿದ್ದಾರೆ. ಈ ಬಗ್ಗೆ ಸ್ಥಳೀಯರಾದಂತ ವೆಂಕಟೇಶ್ ಎಂಬುವರು ಠಾಣೆಗೆ ತೆರಳಿ ದೂರು ದಾಖಲಾದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಠಾಣೆಯಲ್ಲಿ ದೂರು ದಾಖಲಾಗಿಲ್ಲ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ. ಹೀಗಾಗಿ ಜೂಜು ಅಡ್ಡೆಯ ಮೇಲೆ ದಾಳಿ ನಡೆಸಿದರೂ, ಪ್ರಕರಣ ದಾಖಲಿಸದೇ ಇದ್ದಂತ ಪೊಲೀಸರ ವಿರುದ್ಧ ನಂತರ ವೆಂಕಟೇಶ್ ನಾಲ್ವರು ಪೊಲೀಸ್ ಪೇದಗಳ ವಿರುದ್ಧ ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ನಾಲ್ವರು ಪೇದೆಗಳಾದ ಮಹೇಶ. ಅಭಿಷೇಕ್.…
ಬೆಳಗಾವಿ: ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ 7 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಖಾನಾಪುರ ತಾಲೂಕಿನ ಕಾಮಸಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಬಸಪ್ಪ ಕೋಲ್ಕಾರ (7) ಮೃತ ಬಾಲಕ. ಹೆಸ್ಕಾಂ ಅಧಿಕಾರಿಗಳು ವಿದ್ಯುತ್ ಕಂಬ ನೆಡುವ ಬದಲು ಮರದ ಕಂಬ ನೆಟ್ಟು, ವಿದ್ಯುತ್ ತಂತಿ ಎಳೆದಿದ್ದರು. ಇದರಿಂದ ವಿದ್ಯುತ್ ತಂತಿ ಜೋತು ಬಿದ್ದ ಪರಿಣಾಮ ತಂತಿ ತಗುಲಿ ಬಾಲಕ ಸಾವನ್ನಪ್ಪಿದ್ದಾನೆ. ಖಾನಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಕಲುಷಿತ ನೀರು ಕುಡಿದು ಕಳೆದ 3 ದಿನಗಳಲ್ಲಿ ಗ್ರಾಮದ 50ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡ ಆಘಾತಕಾರಿ ಘಟನೆ ಜಿಲ್ಲೆಯ ರಾಮದುರ್ಗ ತಾಲೂಕಿನ ಮುದೇನೂರು ಗ್ರಾಮದಲ್ಲಿ ನಡೆದಿದೆ. ದೀಪಾವಳಿ ಸಂಭ್ರಮದಲ್ಲಿ ಇರಬೇಕಿದ್ದ ಮುದೇನೂರು ಗ್ರಾಮದ ಜನ ಆಸ್ಪತ್ರೆಗಳಿಗೆ ಅಲೆದಾಡುತ್ತಿದ್ದಾರೆ. ಅಸ್ವಸ್ಥಗೊಂಡ 50ಕ್ಕೂ ಹೆಚ್ಚು ಜನರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 5 ಮಂದಿಯ ಸ್ಥಿತಿ ಗಂಭೀರವಾಗಿದ್ದು, ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮದಲ್ಲಿ ಕುಡಿಯುವ ನೀರಿನ ಪೈಪ್ ಒಡೆದು ಚರಂಡಿ ನೀರು ಮಿಶ್ರಣವಾಗಿತ್ತು. ಇದನ್ನು ತಿಳಿದರೂ ಗ್ರಾಮ ಪಂಚಾಯಿತಿ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದಕ್ಕೆ ಅವಘಡ ಸಂಭವಿಸಿದೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ. ಗ್ರಾಮಕ್ಕೆ ಶಾಸಕ ಮಹದೇವಪ್ಪ ಯಾದವಾಡ ಭೇಟಿ ನೀಡಿದ್ದು, ಅಸ್ವಸ್ಥರಿಗೆ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ನವದೆಹಲಿ: ನೋಟುಗಳ ಮೇಲೆ ಗಾಂಧೀಜಿ ಭಾವಚಿತ್ರದೊಂದಿಗೆ ಲಕ್ಷ್ಮಿ ಮತ್ತು ಗಣೇಶ ದೇವರುಗಳ ಚಿತ್ರಗಳನ್ನೂ ಮುದ್ರಿಸಬೇಕು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಎರಡು ದಿನಗಳ ಹಿಂದೆ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪೂಜೆ ಮಾಡುವಾಗ ತಮಗೆ ಈ ವಿಚಾರ ಹೊಳೆಯಿತು ಎಂದು ಹೇಳಿದ್ದಾರೆ. ಇಂಡೋನೇಷ್ಯಾದಲ್ಲಿ ಹಿಂದೂಗಳ ಜನಸಂಖ್ಯೆ ಕೇವಲ ಶೇ. 2 ರಷ್ಟಿದೆ. ಆದರೂ ಅಲ್ಲಿನ ಕರೆನ್ಸಿ ನೋಟುಗಳ ಮೇಲೆ ಗಣೇಶ ದೇವರ ಭಾವಚಿತ್ರವಿರುತ್ತದೆ. ಹೀಗಿರುವಾಗ ಭಾರತದಲ್ಲಿ ಇದು ಏಕೆ ಸಾಧ್ಯವಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ. ಕರೆನ್ಸಿ ನೋಟುಗಳ ಮೇಲೆ ಲಕ್ಷ್ಮಿ ಮತ್ತು ಗಣೇಶ ದೇವರ ಭಾವಚಿತ್ರ ಮುದ್ರಿಸುವ ಕುರಿತಂತೆ ತಾವು ಶೀಘ್ರದಲ್ಲೇ ಪ್ರಧಾನಮಂತ್ರಿಗಳಿಗೆ ಪತ್ರ ಬರೆಯವುದಾಗಿ ಮುಖ್ಯಮಂತ್ರಿ ಕೇಜ್ರಿವಾಲ್ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬೆಂಗಳೂರು: ಏಪ್ರಿಲ್ 2022ರಿಂದ ಆಶಾ ಕಾರ್ಯಕರ್ತೆಯರಿಗೆ ಗೌರವಧನವನ್ನು ರೂ.1000ಕ್ಕೆ ಹೆಚ್ಚಿಸಲಾಗಿತ್ತು. ಈ ಗೌರವಧನ ಸೇರಿದಂತೆ ಬಾಕಿ ಗೌರವಧನವನ್ನು ರಾಜ್ಯ ಸರ್ಕಾರ ಬಿಡುಗಡೆಗೊಳಿಸಿ ಆದೇಶಿಸಿದೆ. ಈ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. 2021-22ನೇ ಸಾಲಿನ ಆಶಾ ಕಾರ್ಯಕರ್ತೆಯರಿಗೆ ಗೌರವಧನ ವಿತರಣೆ ಮಾಡಲು ಮೂರನೇ ತ್ರೈ ಮಾಸಿಕ ಅನುದಾನ ಬಿಡುಗಡೆ ಮಾಡಲಾಗಿದೆ ಎಂದಿದ್ದಾರೆ. ಡಿ ಬಿಟಿ ಪೋರ್ಟ್ ನಲ್ಲಿ ಆಶಾ ಕಾರ್ಯಕರ್ತೆಯರ ಗೌರವಧನವನ್ನು ಪಾವತಿಸವುದಾಗಿ ಸರ್ಕಾರ ಆದೇಶಿಸಿದೆ. ಏಪ್ರಿಲ್ 2022ರ ತಿಂಗಳಿನಿಂದ ಆಶಾ ಕಾರ್ಯಕರ್ತೆಯರ ಮಾಸಿಕ ಗೌರವಧನವನ್ನು ರೂ.1000ಕ್ಕೆ ಹೆಚ್ಚಿಸಿ ಆದೇಶಿಸಿದೆ ಎಂದು ಹೇಳಿದ್ದಾರೆ. 2022-23ನೇ ಸಾಲಿಗೆ ಆಶಾ ಕಾರ್ಯಕರ್ತೆಯರಿಗೆ ಗೌರವಧನ ಪಾವತಿಗೆ ಎರಡನೇ ತ್ರೈ-ಮಾಸಿಕ ಅವಧಿಗೆ ರೂ.6378.30 ಲಕ್ಷಗಳ ಅನುದಾನ ಬಿಡುಗಡೆಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz