Author: admin

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರ/ಸ್ನಾತಕೋತ್ತರ ಪದವೀಧರರಿಗೆ ಬೆಳಗಾವಿ ಜಿಲ್ಲಾ ಕಚೇರಿಯಲ್ಲಿ 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ ಕಾನೂನಾತ್ಮಕವಾಗಿ ಸ್ಥಾಪಿತಗೊಂಡ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತ್ತಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಅಭ್ಯರ್ಥಿಗಳು ಮಾತ್ರ ಅರ್ಜಿ ನಲ್ಲಿಸುವುದು. ಮೆರಿಟ್ ಹಾಗೂ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು. ತರಬೇತಿಯ ಅವಧಿ ವೇಳೆ ಮಾಹೆಯಾನ 15 ಸಾವಿರ ರೂಪಾಯಿ ಸ್ಟೈಪೆಂಡ್ ನೀಡಲಾಗುವುದು. ಒಮ್ಮೆ ಫಲಾನುಭವಿಯಾದವರನ್ನು ಈ ಯೋಜನೆಯಡಿ ಮತ್ತೊಂದು ಅವಧಿಗೆ ಆಯ್ಕೆ ಮಾಡಲು ಅವಕಾಶವಿರುವುದಿಲ್ಲ. ಅರ್ಜಿ ಸಲ್ಲಿಸಲು ನವೆಂಬರ್ 14, 2022 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಚೇರಿ, ವಾರ್ತಾ…

Read More

ಬೆಂಗಳೂರು : ರಾಜ್ಯದಲ್ಲಿ ಭಾರತ್ ಜೋಡೋ ಯಾತ್ರೆ ಯಶಸ್ಸಿನ ಬಳಿಕ ಇದೀಗ ಬಸ್ ಯಾತ್ರೆಯನ್ನು ಹಮ್ಮಿಕೊಳ್ಳಲು ಸಿದ್ದತೆ ಕಾಂಗ್ರೆಸ್ ನಾಯಕರು ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ರಥಯಾತ್ರೆ ನಡೆಯಲಿದ್ದು, ಇದಕ್ಕಾಗಿ ವಿಶೇಷ ವಾಹನವೂ ತಯಾರಾಗುತ್ತಿದೆ. ನವೆಂಬರ್ ಎರಡನೇ ವಾರದಲ್ಲಿ ರಾಜ್ಯಾದ್ಯಂತ ರಥಯಾತ್ರೆ ಆರಂಭಗೊಳ್ಳಲಿದೆ ಮೂಲಗಳು ತಿಳಿಸಿವೆ. ರಥಯಾತ್ರೆ ಮೂಲಕ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು 224 ವಿಧಾನಸಭಾ ಕ್ಷೇತ್ರಗಳ ಸಂಚಾರ ಮಾಡಿ ಈ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಸೃಷ್ಠಿಸಲು ಪ್ರಯತ್ನ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ. ನವೆಂಬರ್ 2 ನೇ ವಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದ ಎರಡು ಪ್ರತ್ಯೇಕ ತಂಡಗಳು ರಾಜ್ಯ ಪ್ರವಾಸ ಹೊರಡಲಿದ್ದು, ಪ್ರತಿ ತಂಡದಲ್ಲಿ 15 ಮುಂಚೂಣಿ ನಾಯಕರು ಇರಲಿದ್ದಾರೆ ಎನ್ನಲಾಗಿದೆ. ಪ್ರತಿದಿನ 2 ಕ್ಷೇತ್ರಗಳಂತೆ 224 ವಿಧಾನಸಭಾ ಕ್ಷೇತ್ರಗಳಲ್ಲಿ ಯಾತ್ರೆ ಮಾಡಲು ಸಿದ್ಧತೆ ನಡೆಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…

Read More

ಕೊರಟಗೆರೆ : ತಾಲ್ಲೂಕಿನ  ಹೊಳವನಹಳ್ಳಿ ಹೋಬಳಿಯ ಬೈಚಾಪುರ ಕ್ರಾಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮುಖ್ಯ ಪೇದೆ ನಾಗರಾಜು ರವರ ಮೇಲೆ ಏಕಾಏಕಿ 6 ಜನ ಆರೋಪಿಗಳು ಹಲ್ಲೆ ಮತ್ತು ಪೋಲೀಸ್ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಘಟನೆ ಕೊರಟಗೆರೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ಅಕ್ಕಿರಾಂಪುರ ಕುರಿ-ಮೇಕೆ ಸಂತೆಯು ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಶನಿವಾರದ ಸಂತೆಯನ್ನು ನಡೆಸದಂತೆ ಈಗಾಗಲೇ  ಮುಂಜಾಗ್ರತೆ ಕ್ರಮವಾಗಿ ಪೋಲೀಸ್ ಇಲಾಖೆಯಿಂದ ಜಾಗೃತಿ ಮೂಡಿಸಲಾಗಿತ್ತು. ಅದರೆ ಎಂದಿನಂತೆ ಕುರಿ ಮೇಕೆ ವ್ಯಾಪಾರಸ್ಥರು ಬೊಲೆರೊ ವಾಹನದಲ್ಲಿ ಕುರಿ ಮೇಕೆಗಳನ್ನು ಸಂತೆ ವ್ಯಾಪಾರಕ್ಕೆ ವಾಹನದಲ್ಲಿ ತುಂಬಿಕೊಂಡು ಅರಸಾಪುರ ಗ್ರಾಮದ ಕಡೆಯಿಂದ ಬೈಚಾಪುರ ಕಡೆಗೆ ವಾಹನದಲ್ಲಿ ಬರುತ್ತಿದ್ದಾಗ ಕರ್ತವ್ಯದಲ್ಲಿದ್ದ ಪೋಲೀಸ್ ಸಿಬ್ಬಂದಿಗಳು ವಾಹನವನ್ನು ತಡೆದು ವಾಪಸ್ಸು ಕಳಿಸಲು ಮುಂದಾದಾಗ ಏಕಾಎಕಿ 6 ಜನ ಆರೋಪಿಗಳು ಮುಖ್ಯಪೇದೆ ನಾಗರಾಜುರವರ ಮೇಲೆ ಹಲ್ಲೆಗೆ ಹಾಗೂ ಕರ್ತವ್ಯಕ್ಕೆ ಅಡ್ಡಿ ಪಡಿಸಿ,ಅವಾಚ್ಯ ಶಬ್ದಗಳಿಂದ ನಿಂದಿಸಿ,ಮಾತಿಗೆ ಮಾತು ಬೆಳೆದು  ಪೋಲಿಸರ ಮೇಲೆ ಹಲ್ಲೆಗೆ ಮತ್ತು ಕರ್ತವ್ಯ ಕ್ಕೆ ಅಡ್ಡಿಪಡಿಸಿದ್ದಾರೆ ಎನ್ನಲಾಗಿದೆ.ಅರಸಾಪುರ ಅಗ್ರಹಾರ…

Read More

ಶಿವಮೊಗ್ಗದಲ್ಲಿ ಕೆಲವರಿಂದ ಶಾಂತಿ ಕದಡುವ ಕೆಲಸವಾಗುತ್ತಿದೆ. ಮುಸ್ಲೀಂ ಗೂಂಡಾಗಳಿಗೆ ಇನ್ನೂ ಬುದ್ಧಿ ಬಂದಂತೆ ಕಾಣುತ್ತಿಲ್ಲ. ಪಿಎಫ್ ಐ ಇನ್ನೂ ಜೀವಂತವಿದೆ ಎಂದು ತೋರಿಸಲು ಹೊರಟಿದ್ದೀರಾ..? ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದರು. ಶಿವಮೊಗ್ಗದಲ್ಲಿ ಇಂದು ಮಾತನಾಡಿದ ಕೆ.ಎಸ್ ಈಶ್ವರಪ್ಪ, ಸಾವರ್ಕರ್ ಕಾರ್ಯಕ್ರಮದಲ್ಲಿ ಯಾವುದೇ ಗೊಂದಲವಾಗಿಲ್ಲ. ಸಾವರ್ಕರ್ ಮೊಮ್ಮಗ ಎಲ್ಲೂ ಪ್ರಚೋದನಾಕಾರಿ ಹೇಳಿಕೆ ನೀಡಿಲ್ಲ. ನಿನ್ನೆ ಪ್ರಕಾಶ್ ಎಂಬಾತನ ಮೇಲೆ ಹಲ್ಲೆಯಾಗಿದೆ. ಹರ್ಷ ಅವರ ಕುಟುಂಬಕ್ಕೆ ಬೆದರಿಕೆ ಹಾಕಿದ್ದಾರೆ. ಹೇಡಿಗಳಂತೆ ನಿನ್ನೆ ಗಲಾಟೆ ಮಾಡಿದ್ದಾರೆ. ಶಾಂತಿ ಕದಡುವ ಉದ್ಧೇಶದಿಂದ ಹೀಗೆ ಮಾಡುತ್ತಿದ್ದಾರೆ. ಮುಸ್ಲಿಂ ಗೂಂಡಾಗಳಿಗೆ ಶಿವಮೊಗ್ಗದಲ್ಲಿ ಪೊಲೀಸರ ಭಯ ಇಲ್ಲ ಎಂದು ಆಕ್ರೋಶ ಹೊರ ಹಾಕಿದರು. ಪಿಎಫ್ ಐ ಜೀವಂತಿವಿದೆ ಎಂದು ತೋರಿಸಲು ಹೊರಟಿದ್ದೀರಾ..? ಇಂತಹ ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಪಿಎಫ್ ಐ ಇನ್ನೂ ಜೀವಂತವಿದೆಯಾ ಎಂದು ಪತ್ತೆ ಹಚ್ಚಬೇಕಿದೆ. ಕೇಂದ್ರ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುವ ವಿಶ್ವಾಸವಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…

Read More

ಸುಮಾರು 36 ಸರಗಳ್ಳತನ ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯನ್ನ ಬೆಂಗಳೂರಿನ ತಿಲಕ್ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕುಖ್ಯಾತ ಸರಗಳ್ಳ ಸೈಯದ್ ಪರ್ವೇಜ್ ಬಂಧಿತ ಆರೋಪಿ. ಬಂಧಿತನಿಂಧ 92 ಗ್ರಾಂ ತೂಕದ 2 ಚಿನ್ನದ ಸರಗಳನ್ನ ವಶಕ್ಕೆ ಪಡೆಯಲಾಗಿದೆ. ಈತ ಸುಮಾರು 36 ಸರಗಳ್ಳತನ ಪ್ರಕರಣದಲ್ಲಿ ಬೇಕಾಗಿದ್ದ ಆರೋಪಿ ಎನ್ನಲಾಗಿದೆ. ಆರೋಪಿ ಸೈಯದ್ ಮನೆಯಲ್ಲಿ ಯಾರು ಇಲ್ಲದ ವೇಳೆ ನುಗ್ಗಿ ಚಿನ್ನದ ಸರ ಕದಿಯುತ್ತಿದ್ದ. ಪ್ರಕರಣ ಸಂಬಂಧ ತಿಲಕ್ ನಗರ ಠಾಣಾ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಮಹಿಳೆಗೆ ಕಪಾಳಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ವಿ.ಸೋಮಣ್ಣ ವಿರುದ್ಧ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ. ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯು ಸಚಿವ  ವಿ.ಸೋಮಣ್ಣ ವಿರುದ್ಧ ದೂರು ನೀಡಿದೆ. ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ವಿ.ಸೋಮಣ್ಣ, ಅಕ್ಟೋಬರ್ 23 ರಂದು ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಗೆ ಕಪಾಳ ಮೋಕ್ಷ ಮಾಡಿದ್ದರು ಎನ್ನಲಾಗಿತ್ತು. ಈ ಕುರಿತ ವಿಡಿಯೋ ವೈರಲ್ ಆಗಿತ್ತು. ಇದೀಗ ಸಚಿವ ವಿ.ಸೋಮಣ್ಣ ವಿರುದ್ಧ ದೂರು ನೀಡಿರುವ ಕಾಂಗ್ರೆಸ್  ಕ್ರಮ ಕೈಗೊಳ್ಳವಂತೆ ಆಗ್ರಹಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಭಾರತ ತಂಡವು ಗುರುವಾರ ನಡೆಯಲಿರುವ ನೆದರ್ಲೆಂಡ್ಸ್‌ ವಿರುದ್ಧ ಪಂದ್ಯದಲ್ಲಿ ಪ್ರಯೋಗಕ್ಕೆ ಸಿದ್ಧವಾಗಿದೆ. ಪಾಕಿಸ್ತಾನ ತಂಡದ ಎದುರು ರೋಚಕ ಜಯ ಕಂಡ ಟೀಂ ಇಂಡಿಯಾದ ವಿಶ್ವಾಸ ದುಪ್ಪಟ್ಟಾಗಿದೆ. ಇದೇ ಜೋಶ್ ನಲ್ಲಿ ನೆದರ್ಲೆಂಡ್ಸ್‌ ವಿರುದ್ಧ ಕೆಲ ಪ್ರಯೋಗ ನಡೆಸಲು ತಯಾರಿ ನಡೆಸಲಾಗಿದೆ. ನಾಳೆ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನೆದರ್ಲೆಂಡ್ಸ್‌ ವಿರುದ್ಧ ರೋಹಿತ್ ಶರ್ಮಾ ಬಳಗವು ಕಣಕ್ಕಿಳಿಯಲಿದೆ. ಇಲ್ಲಿ ಹಾರ್ದಿಕ್ ಪಾಂಡ್ಯ ಅವರಿಗೆ ವಿಶ್ರಾಂತಿ ನೀಡಿ ದೀಪಕ್ ಹೂಡಾಗೆ ಅವಕಾಶ ನೀಡುವ ಸಾಧ್ಯತೆ ಇದೆ. ಅನುಭವದ ಕೊರತೆಯಿರುವ ನೆದರ್ಲೆಂಡ್ಸ್‌ ವಿರುದ್ಧ ಸುಲಭ ಜಯದ ನಿರೀಕ್ಷೆಯಲ್ಲಿರುವ ಭಾರತ ತಂಡವು ಬೆಂಚ್‌ ಶಕ್ತಿಯ ಸಾಮರ್ಥ್ಯ ಪರೀಕ್ಷೆ ಮಾಡಲು ಯೋಚಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ನಗ್ನ ಫೋಟೋ, ವಿಡಿಯೋ ಮೂಲಕ ಕನ್ನಡ ಚಿತ್ರನಟಿಗೆ ಬ್ಲಾಕ್ ಮೇಲ್ ಮಾಡಿದ್ದ ಮೇಕಪ್ ಮ್ಯಾನ್ ಪೊಲೀಸರ ಅತಿಥಿಯಾಗಿದ್ದಾನೆ. ಕನ್ನಡದ ಚಿತ್ರನಟಿಯೊಬ್ಬರ ನಗ್ನ ವಿಡಿಯೋ ಹಾಗೂ ಫೊಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿದ್ದ ಮಹಾಂತೇಶ ಎಂಬ ಮೇಕಪ್ ‍ಮ್ಯಾನ್ ಅನ್ನು ಪೊಲೀಸರು ಬಂಧಿಸಿದ್ದಾರೆ. ನಗ್ನ ಫೋಟೋ, ವಿಡಿಯೋ ಬಿಡುಗಡೆ ಮಾಡುವುದಾಗಿ ಬೆದರಿಕೆಯೊಡ್ಡಿ 30 ಲಕ್ಷಕ್ಕೆ ಡಿಮ್ಯಾಂಡ್ ಮಾಡಿದ್ದ ಎನ್ನಲಾಗಿದೆ. ಭುವನೇಶ್ವರ ನಗರದ ನಿವಾಸಿ ಮಹಾಂತೇಶ್ ಸಂತ್ರಸ್ತ ನಟಿಯ ಬಳಿ ಮೇಕಪ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದನು. ಈತ ಆ ನಟಿಯ ಸಂಬಂಧಿಕ ಎಂಬ ಮಾಹಿತಿ ಲಭ್ಯವಾಗಿದೆ. “ನಿನ್ನ ನಗ್ನ ಫೋಟೋ, ವಿಡಿಯೋ ನನ್ನ ಬಳಿ ಇದೆ , 30 ಲಕ್ಷ ಕೊಡದೇ ಇದ್ದಲ್ಲಿ ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತೇನೆ” ಎಂದು ಈಗ ಬೆದರಿಕೆಯೊಡ್ಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ವರ್ಷದ ಕೊನೆಯ ಸೂರ್ಯಗ್ರಹಣ ಇಂದು ಗೋಚರವಾಗಿದ್ದು,  ಈ ಬಾರಿಯ ದೀಪಾವಳಿ ಅಮಾವಾಸ್ಯೆಯಂದೇ ಸೂರ್ಯಗ್ರಹಣ  ಸಂಭವಿಸಿದೆ. ಭಾರತದಲ್ಲಿ ಮೊದಲಿಗೆ ಪಂಜಾಬ್ ನ ಅಮೃತಸರದಲ್ಲಿ4 ಗಂಟೆ 19 ನಿಮಿಷಕ್ಕೆ ಗ್ರಹಣ ಗೋಚರವಾಗಿದೆ. ಹಾಗೆಯೇ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಸಂಜೆ 4.29ಕ್ಕೆ  ಗ್ರಹಣ ಗೋಚರವಾಗಿದೆ. ವಿಶಾಖ ಪಟ್ಟಣಂ, ಜಮ್ಮುಕಾಶ್ಮೀರ, ರಾಂಚಿ, ನೋಯ್ಡಾ,  ಲಕ್ನೋ, ಜೈಪುರ, ಪಾಟ್ನಾದಲ್ಲೂ ಗ್ರಹಣ ಗೋಚರಿಸಿದೆ.  ಅಬುಧಾಬಿ ಲಡಾಖ್ ನಲ್ಲಿ  ಸೂರ್ಯಗ್ರಹಣ ಸಂಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ರಾಜ್ಯದಲ್ಲಿ ಬೆಂಗಳೂರು, ಮೈಸೂರು, ಕಲ್ಬುರ್ಗಿ,ಹುಬ್ಬಳ್ಳಿ, ಮಂಗಳೂರು, ಶಿವಮೊಗ್ಗದಲ್ಲಿ ಗ್ರಹಣ ಗೋಚರಿಸಿದೆ. ಇನ್ನು  ಸೂರ್ಯಗ್ರಹಣ ಹಿನ್ನೆಲೆ ದೇಶದಲ್ಲಿ ರಾಜ್ಯದಲ್ಲಿ ಹಲವು ದೇವಸ್ಥಾನಗಳು ಬಂದ್ ಆಗಿದ್ದು, ಸಂಜೆ 7 ಗಂಟೆ ಬಳಿಕ ತೆರೆಯಲಿವೆ. ಸೂರ್ಯಗ್ರಹಣ ಹಿನ್ನೆಲೆ ಬೆಂಗಳೂರಿನಲ್ಲಿ ಜನರ ಓಡಾಟ ಕೊಂಚ ಕಡಿಮೆಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಬೆಳಗಾವಿ: ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಅಂಗಡಿ ಮಾಲೀಕರೊಬ್ಬರು ಹಚ್ಚಿದ ಪಟಾಕಿ ಕಿಡಿ ಸಿಡಿದು ಕುಶನ್ ಅಂಗಡಿಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ವಸ್ತುಗಳು ಹಾನಿಯಾದ ಘಟನೆ ಕಿತ್ತೂರು ಪಟ್ಟಣದಲ್ಲಿ ತಡರಾತ್ರಿ ನಡೆದಿದೆ. ಕಿತ್ತೂರು ಪಟ್ಟಣದ ನಿವಾಸಿ ಶಬ್ಬೀರ್​ ಬೀಡಿ ಎಂಬುವವರಿಗೆ ಸೇರಿದ ಅಂಗಡಿಗೆ ಬೆಂಕಿ ಬಿದ್ದಿದೆ. ಪಟಾಕಿ ಕಿಡಿ ಸಿಡಿಯುತ್ತಿದ್ದಂತೆ ಧಗಧಗನೇ ಕುಶನ್ ಅಂಗಡಿ ಹೊತ್ತಿ ಉರಿದಿದ್ದು, ಅಂದಾಜು 3 ಲಕ್ಷ ಮೌಲ್ಯದ ಕುಶನ್, ಪೀಠೋಪಕರಣ ಬೆಂಕಿಗೆ ಆಹುತಿಯಾಗಿವೆ. ನಿನ್ನೆ ದೀಪಾವಳಿ ನಿಮಿತ್ತ ಶಬ್ಬೀರ್​ ಬೀಡಿ ಅಂಗಡಿ ಮಾಲೀಕರು ದೀಪಾವಳಿ ಪೂಜೆ ಮಾಡಿದ್ದಾರೆ. ಬಳಿಕ ಪಟಾಕಿ ಸಿಡಿಸಲು ಮುಂದಾದಾಗ ಅದರ ಕಿಡಿ ಪಕ್ಕದ ಕುಶನ್ ಅಂಗಡಿಗೆ ವ್ಯಾಪಿಸಿದೆ‌. ಬೆಂಕಿ ನಂದಿಸಲು ಹೋದ ಶಬ್ಬೀರ್ ಕೈ, ಕಾಲು ದೇಹದ ಇತರ ಭಾಗಗಳಿಗೆ ಸುಟ್ಟ ಗಾಯಗಳಾಗಿವೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…

Read More