Subscribe to Updates
Get the latest creative news from FooBar about art, design and business.
- ರೇಷ್ಮೆ ಸೀರೆಗೆ ಎಣ್ಣೆ, ಮೇಣದ ಕಲೆ ಬಿದ್ದರೆ ಚಿಂತೆ ಬೇಡ; ಈ ಟಿಪ್ಸ್ ಅನುಸರಿಸಿ
- ನಾಯಿಗಳಲ್ಲ, ರೋಬೋಟ್ ಗಳಿಗೆ ವಾಕಿಂಗ್ ಮಾಡಿಸಿದರೆ ದುಡ್ಡು! AI ತಂತ್ರಜ್ಞಾನಕ್ಕೆ ಹೊಸ ಪ್ರಯೋಗ
- ವಿಮಾನದಲ್ಲೂ ಇರುತ್ತಾ ಹಾರ್ನ್? ಆಕಾಶದಲ್ಲಿ ಯಾರಿಗೆ ಹಾರ್ನ್? | ಈ ಅಚ್ಚರಿಯ ಸಂಗತಿ ನಿಮಗೆ ಗೊತ್ತಾ?
- ಫ್ರಿಜ್ ನಿಂದ ತೆಗೆದ ತಕ್ಷಣ ಮೊಸರು ತಿನ್ನುತ್ತೀರಾ? ಆರೋಗ್ಯದ ಮೇಲೆ ಏನು ಪರಿಣಾಮ ಬೀರುತ್ತದೆ?
- ನ.7ರಂದು ಹೊಳವನಹಳ್ಳಿ ಹೋಬಳಿಯಲ್ಲಿ ಪ್ರಜಾಸೇವೆ ಆಂದೋಲನ ಸಭೆ
- ತಿಪಟೂರು ರೋಟರಿ ಕ್ಲಬ್ ನಿಂದ ಅದ್ದೂರಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ
- ಔರಾದ್ ಬ್ಲಾಕ್ ಕಾಂಗ್ರೆಸ್ ಪ.ಜಾ. ವಿಭಾಗದ ಕಾರ್ಯದರ್ಶಿಯಾಗಿ ಗೌತಮ್ ಮೇತ್ರೆ ನೇಮಕ
- ಭಾಲ್ಕಿ: ವಕೀಲರ ಹಿತರಕ್ಷಣಾ ಕಾಯ್ದೆ ತಕ್ಷಣ ಜಾರಿಗೆ ತರಲು ಆಗ್ರಹ
Author: admin
ಹುಬ್ಬಳ್ಳಿ : ಇಂದು ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದು, ಹುಬ್ಬಳ್ಳಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. 26ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ಇಂದು ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಈ ಯುವಜನೋತ್ಸವ 5 ದಿನಗಳ ಕಾಲ ನಡೆಯಲಿದೆ. ಮಧ್ಯಾಹ್ನ ಮೂರು ಗಂಟೆಗೆ ಹುಬ್ಬಳ್ಳಿ ಏರ್ ಪೋರ್ಟ್ ಗೆ ಆಗಮಿಸಲಿದ್ದು, ನಾಲ್ಕು ಗಂಟೆಗೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಹಾವೇರಿ: ದುಷ್ಕರ್ಮಿಗಳು4 ಏಕರೆ ಮೆಕ್ಕೆಜೋಳ ತೆನೆ ರಾಶಿಗೆ ಬೆಂಕಿ ಇಟ್ಟಿರುವಂತಹ ಘಟನೆ ಜಿಲ್ಲೆಯ ಹಾನಗಲ್ ತಾಲೂಕು ಕೆಲವರಕೊಪ್ಪ ಗ್ರಾಮದಲ್ಲಿ ನಡೆದಿದೆ. ಬಸವರಾಜ್ ಎಂಬ ರೈತನಿಗೆ ಸೇರಿದ ರಾಶಿ ಎನ್ನಲಾಗಿದೆ. ಅಂದಾಜು ಮೂರು ಲಕ್ಷಕ್ಕೂ ರೂಪಾಯಿಗೂ ಅಧಿಕ ಮೌಲ್ಯದ ತೆನೆರಾಶಿ ಬೆಂಕಿಗಾಹುತಿಯಾಗಿದೆ. ರಾತ್ರಿಯ ವೇಳೆ ಜಮೀನಿನಲ್ಲಿ ಮೆಕ್ಕೆಜೋಳ ತೆನೆಯ ರಾಶಿ ಹಾಕಲಾಗಿತ್ತು. ಈ ವೇಳೆ ದ್ವೇಷದಿಂದ ಅಪರಿಚಿತರು ರಾಶಿಗೆ ಬೆಂಕಿ ಹಾಕಿದ್ದಾರೆ ಎನ್ನಲಾಗಿದೆ. ಬೆಂಕಿ ನಂದಿಸಲು ಹರಸಾಹಸ ಪಟ್ಟರು ರಾಶಿಗಳು ಸುಟ್ಟು ಹೋಗಿವೆ. ಆಡೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಧುಗಿರಿ : ಪಟ್ಟಣದ ಸರ್ಕಾರಿ ಉರ್ದು ಶಾಲೆಯಲ್ಲಿ ‘ನಮ್ಮ ಮನೆ ಸೇವಾ ಟ್ರಸ್ಟ್’ ವತಿಯಿಂದ ನೇತ್ರ ತಪಾಸಣಾ, ಕಣ್ಣಿನ ಶಸ್ತ್ರ ಚಿಕಿತ್ಸಾ ತಪಾಸಣಾ ಹಾಗೂ ಉಚಿತ ಕನ್ನಡ ವಿತರಣಾ ಶಿಬಿರ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಎಲ್ಲಾ ಜನಾಂಗವನ್ನು ಒಳಪಟ್ಟು ಶಿಬಿರದಲ್ಲಿ 260 ಮಂದಿಗೆ ವೈದ್ಯರ ತಂಡ ಆರೋಗ್ಯ ತಪಾಸಣೆ ನಡೆಸಿ ಔಷಧೋಪಚಾರ ನೀಡಿದರು. ಉಚಿತ ಕಣ್ಣಿನ ಪೊರೆ ತಪಾಸಣೆ ನಡೆಸಿ ಕನ್ನಡಕ ಅವಶ್ಯಕತೆ ಇರುವವರಿಗೆ ಈ ದಿನ ಒಟ್ಟಾರೆ 162 ಉಚಿತ ಕನ್ನಡಕ ಸ್ಥಳದಲ್ಲೇ ವಿತರಿಸಲಾಯಿತು ಮತ್ತು 42 ಜನರಿಗೆ ಶಸ್ತ್ರ ಚಿಕಿತ್ಸೆಯ ಅಗತ್ಯವುಳ್ಳವರಿಗೆ ನಿಗದಿತ ದಿನಾಂಕಕ್ಕೆ ಆಸ್ಪತ್ರೆಗೆ ಕರೆದೊಯ್ದು ಶಸ್ತ್ರ ಚಿಕಿತ್ಸೆ ಮಾಡಿಸಲು ನಿರ್ಧರಿಸಲಾಗಿದೆ. ಮನುಷ್ಯನಿಗೆ ಎಲ್ಲ ಸಂಪತ್ತು ಇದ್ದರೂ ಅದನ್ನು ಸವಿಯಬೇಕಾದರೆ ಆರೋಗ್ಯ ಉತ್ತಮವಾಗಿರಬೇಕು. ಪ್ರಪಂಚ ನೋಡಿ ಆನಂದಿಸಬೇಕಾದರೆ ಕಣ್ಣನ್ನು ಜೋಪಾನವಾಗಿ ಇಟ್ಟುಕೊಳ್ಳಲು ಪ್ರತಿಯೊಬ್ಬರು ಮುಂದಾಗಬೇಕು. ಸೂಕ್ಷ್ಮ ಅಂಗ ಕಣ್ಣು ಬದುಕಿಗೆ ಬೆಳಕಾಗಿರಬೇಕಾದರೆ ಹಿರಿಯರಿಗೆ ಮಕ್ಕಳು ಇಂತಹ ಉಚಿತ ತಪಾಸಣೆಗೆ ಕರೆತರುವ ಮೂಲಕ ಹಿರಿಯರ ಸೇವೆಗೆ…
ಬೆಂಗಳೂರು : ಮುಂಬರುವಂತ ದಿನಗಳಲ್ಲಿ 25 ತಾಲ್ಲೂಕುಗಳಲ್ಲಿ ಮಿನಿ ಟೆಕ್ಸ್ ಟೈಲ್ ಪಾರ್ಕ್ ಸ್ಥಾಪಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇಂದು ವಿದ್ಯುತ್ ಮಗ್ಗ ನೇಕಾರರು ಮತ್ತು ಕಾರ್ಮಿಕರಿಗೆ ಡಿಬಿಟಿ ಮೂಲಕ ನೇಕಾರ್ ಸಮ್ಮಾನ್ ಯೋಜನೆಯ ಸಹಾಯಧನ ವರ್ಗಾವಣೆಗೆ ಚಾಲನೆ ನೀಡಿ ಮಾತನಾಡಿದ ಅವರು, ಸಿದ್ಧ ಉಡುಪು ತಯಾರಿಕೆವರೆಗಿನ ಎಲ್ಲ ಹಂತಗಳ ಸೌಲಭ್ಯಗಳನ್ನು ಒಳಗೊಂಡ ಮಿನಿ ಟೆಕ್ಸ್ ಟೈಲ್ ಪಾರ್ಕ್ ಸ್ಥಾಪಿಸುವ ಮೂಲಕ ನೇಕಾರರಿಗೆ ಅನುಕೂಲ ಮಾಡಿಕೊಡುವಂತೆ ಅವರು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ : 2022-23ನೇ ಸಾಲಿಗೆ 21 ರಿಂದ 50 ವರ್ಷದೊಳಗಿನ ಅರ್ಹ ಪರಿಶಿಷ್ಟ ವರ್ಗಗಳ ಆರ್ಥಿಕ ಸಬಲೀಕರಣಕ್ಕಾಗಿ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ, ಜಿಲ್ಲಾ ಕಚೇರಿ ವತಿಯಿಂದ ಅರ್ಹ ಫಲಾಪೇಕ್ಷಿಗಳಿಂದ ಸೇವಾಸಿಂಧು ಪೋರ್ಟಲ್ ಮೂಲಕ ವಿವಿಧ ಯೋಜನೆಗಳಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಸಣ್ಣ ಆದಾಯಗಳಿಸುವ ಆರ್ಥಿಕ ಚಟುವಟಿಕೆಗಳಿಗಾಗಿ ನೇರ ಸಾಲ ಯೋಜನೆ ಘಟಕದಡಿ ವೆಚ್ಚ ಗರಿಷ್ಟ ರೂ.1 ಲಕ್ಷಗಳು ಇದರಲ್ಲಿ 50% ಅವಧಿ ಸಾಲ ಮತ್ತು 50% ಸಹಾಯಧನ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ (ಐ.ಎಸ್.ಬಿ)-1: ಇ.ವಿ ಮತ್ತು ಇತರೆ ದ್ವಿಚಕ್ರ ವಾಹನ ಖರೀದಿ (ಇ-ಕಾಮರ್ಸ್ನಡಿಯಲ್ಲಿ ಕಂಪನಿಗಳಿಂದ ಗ್ರಾಹಕರಿಗೆ ಸರಕು ತಲುಪಿಸಲು) ಗರಿಷ್ಟ ರೂ.50 ಸಾವಿರ ಸಹಾಯಧನ ಹಾಗೂ ರೂ. 20 ಸಾವಿರ ಸಾಲ ಮಂಜೂರು ಮಾಡಲಾಗುವುದು ಅದೇ ರೀತಿಯಲ್ಲಿ ಸರಕು ಸಾಗಾಣಿಕೆ ವಾಹನಗಳಿಗೆ ಗರಿಷ್ಟ ರೂ. 3.50 ಲಕ್ಷ, ಸಹಾಯಧನ ಉಳಿದ ಮೊತ್ತ ಬ್ಯಾಂಕ್ ಸಾಲ ಮಂಜೂರು ಮಾಡಲಾಗುವುದು. ಅರ್ಜಿ ಸಲ್ಲಿಸಬೇಕಾದ ದಾಖಲಾತಿಗಳು: ಜಾತಿ ಮತ್ತು ಆದಾಯ…
ಹುಬ್ಬಳ್ಳಿ: ಫೆಬ್ರವರಿ 17 ರಂದು ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಈ ಕುರಿತು ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫೆಬ್ರವರಿ ಮೂರನೇ ವಾರ ಬಜೆಟ್ ಮಂಡಿಸುವುದಾಗಿ ತಿಳಿಸಿದ್ದಾರೆ. ಚುನಾವಣೆ ಸಮೀಪದಲ್ಲಿ ಇರುವುದರಿಂದ ಈ ಬಾರಿ ಬಜೆಟ್ ನಲ್ಲಿ ಜನಪ್ರಿಯ ಯೋಜನೆಗಳನ್ನು ಘೋಷಿಸುವ ಸಾಧ್ಯತೆ ಇದೆ. ಕಳೆದ ಬಜೆಟ್ ನಲ್ಲಿ ಘೋಷಣೆಯಾದ ಯೋಜನೆಗಳ ಅನುಷ್ಠಾನ, ಅನುದಾನ ಕುರಿತಾಗಿ ವಿವಿಧ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದ ಕೊನೆಯ ಬಜೆಟ್ ಇದಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕೋಲಾರ: ಸಿದ್ದರಾಮಯ್ಯನವರು ಎಲ್ಲರನ್ನೂ ಮುಗಿಸಿದ್ದಾರೆ. ಇದೀಗ ನನ್ನನ್ನು ಮುಗಿಸಲು ಬಂದಿದ್ದಾರೆ ಎಂದು ಮಾಜಿ ಸಚಿವ ವರ್ತೂರು ಪ್ರಕಾಶ್ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಆಕ್ರೋಶ ವ್ಯಕ್ತಪಡಿಸಿದ ಅವರು, ಆನೆ ಸೊಂಡಿಲಿನಿಂದ ಮಣ್ಣು ಮೇಲೆ ಹಾಕಿಕೊಂಡಂತೆ ಸಿದ್ದರಾಮಯ್ಯ ತಾನಾಗಿ ಮಣ್ಣು ಹಾಕಿಕೊಂಡಿದ್ದಾರೆ. ಸಿದ್ದರಾಮಯ್ಯನವರಿಗೆ ಕೇಡುಗಾಲ ಆರಂಭವಾಗಿದೆ ಎಂದಿದ್ದಾರೆ. ಕೋಲಾರಕ್ಕೆ ಸಿದ್ದರಾಮಯ್ಯ ಅಂತ, ವಿಶೇಷವಾಗಿ ಪರಿಗಣಿಸಬೇಕಿಲ್ಲ, ಚಾಮುಂಡಿ ಕ್ಷೇತ್ರದಲ್ಲಿ 40 ಮತಗಳ ಅಂತರದಲ್ಲಿ ಅವರು ಸೋತಿದ್ದಾರೆ ಎಂದ ಅವರು, ಬಾದಾಮಿಯಲ್ಲಿ ಸೋಲುತ್ತಾರೆ ಅನ್ನೋ ಭಯಕ್ಕೆ ಎಲ್ಲರನ್ನೂ ಮುಗಿಸಿದ್ದಾರೆ. ಇದೀಗ ನನ್ನನ್ನು ಮುಗಿಸಲು ಬಂದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಬೆಂಗಳೂರು: ಪ್ರಿನ್ಸಿಪಾಲ್ ಬೈದಿದ್ದಕ್ಕೆ ಕಾನೂನು ವಿದ್ಯಾರ್ಥಿ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಕೆ. ಜಿ ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅಲ್ ಅಮೀನ್ ಕಾಲೇಜು ವಿದ್ಯಾರ್ಥಿ ರಿಜ್ವಾನ್ (25) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಎಲ್ ಎಲ್ ಬಿ ಫೈನಲ್ ಇಯರ್ ಓದುತ್ತಿದ್ದ ರಿಜ್ವಾನ್, ನಿನ್ನೆ ಪ್ರಿನ್ಸಿಪಾಲ್ ಬೈದಿದ್ದಾರೆಂಬ ಕಾರಣಕ್ಕೆ ಮನನೊಂದಿದ್ದ ಎಂದು ತಿಳಿದುಬಂದಿದೆ. ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಳೆದ ಒಂದೂವರೆ ವರ್ಷದ ಹಿಂದೆ ಮದುವೆಯಾಗಿದ್ದ ಎನ್ನಲಾಗಿದೆ. ಕೆಜಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಚಿಕ್ಕೋಡಿ:ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನರ ಬದುಕಿನಲ್ಲಿ ಮತ್ತೆ ಬೆಳಕು ತರುವ ದೃಷ್ಟಿಯಿಂದ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಘೋಷಿಸಿದ್ದಾರೆ. ಕಾಂಗ್ರೆಸ್ ಪಕ್ಷ ಇಂದು ಆರಂಭಿಸಿದ ಪ್ರಜಾಧ್ವನಿ ಯಾತ್ರೆ ನಿಮಿತ್ತ ಚಿಕ್ಕೋಡಿಯಲ್ಲಿ ಬುಧವಾರ ನಡೆದ ಸಮಾವೇಶದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, ‘ಇದೊಂದು ಐತಿಹಾಸಿಕ ದಿನ. ಕಾಂಗ್ರೆಸ್ ಪಕ್ಷ ರಾಜ್ಯದ ಜನರ ಸಮಸ್ಯೆ, ನೋವು, ಅಭಿಪ್ರಾಯವನ್ನು ಸಂಗ್ರಹಿಸಿ ಅದರ ಪ್ರತಿಧ್ವನಿಯಾಗಿ ನಿಮಗೆ ಶಕ್ತಿ ನೀಡಲು, ನಿಮ್ಮ ಬದುಕಿಗೆ ಬೆಳಕು ನೀಡಲು ನಾವು ಇಲ್ಲಿಗೆ ಬಂದಿದ್ದೇವೆ. ಜನರ ಸಂಕಷ್ಟ ಪರಿಹಾರ ಮಾಡುವುದೇ ಈ ಪ್ರಜಾಧ್ವನಿ ಯಾತ್ರೆಯ ಉದ್ದೇಶ. ನಾವು ಈ ಯಾತ್ರೆಯನ್ನು ಬುದ್ಧ ಬಸವನು ಮನೆ ಬಿಟ್ಟ ಗಳಿಗೆಯಲ್ಲಿ, ಏಸು ಕ್ರಿಸ್ತನು ಶಿಲುಬೆಗೇರಿದ ಗಳಿಗೆಯಲ್ಲಿ, ಭೀಮಾಬಾಯಿ ಅವರು ಅಂಬೇಡ್ಕರ್ ಅವರಿಗೆ ಜನ್ಮ ಕೊಟ್ಟ ಗಳಿಗೆಯಲ್ಲಿ, ಮಹಾತ್ಮ ಗಾಂಧಿ ಅವರು ಕಾಂಗ್ರೆಸ್ ನಾಯಕತ್ವ…
ಶಿವಮೊಗ್ಗ: ಹೃದಯಾಘಾತದಿಂದ 10ನೇ ತರಗತಿಯ ವಿದ್ಯಾರ್ಥಿ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಎಣ್ಣೆಕೊಪ್ಪ ಗ್ರಾಮದಲ್ಲಿ ನಡೆದಿದೆ. 10ನೇ ತರಗತಿ ವಿದ್ಯಾರ್ಥಿ ಜಯಂತ್ ರಜತಾದ್ರಯ್ಯ ಮೃತ ವಿದ್ಯಾರ್ಥಿಯಾಗಿದ್ದಾನೆ. ಆನವಟ್ಟಿ ಜೂನಿಯರ್ ಕಾಲೇಜಿನಲ್ಲಿ ಓದುತ್ತಿದ್ದ ಜಯಂತ್ ಬೆಳಗ್ಗೆ ಶಾಲೆಗೆ ತೆರಳುವ ಸಂದರ್ಭದಲ್ಲಿ ಮೃತಪಟ್ಟಿದ್ದಾನೆ. ಇಂದು ಶಾಲೆಗೆ ಹೋಗಲು ಮನೆಯಲ್ಲಿ ರೆಡಿಯಾಗುತ್ತಿದ್ದ. ಈ ವೇಳೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಜಯಂತ್ನನ್ನು ಎಣ್ಣೆಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಅಷ್ಟರಲ್ಲಾಗಲೇ ಜಯಂತ್ ಮೃತಪಟ್ಟಿದ್ದ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy