Author: admin

ತುಮಕೂರು: ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಹೋರಾಟಗಾರರನ್ನು ಬಂಧಿಸಿರುವ ಹಿನ್ನೆಲೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ವಿರುದ್ಧ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು. ಕಳೆದ 17 ದಿನಗಳಿಂದ ನಿರಂತರವಾಗಿ ಹೋರಾಟ ಮಾಡುತ್ತಿರುವವರ ಮೇಲೆ ದಬ್ಬಾಳಿಕೆ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ಆದೇಶದ ವಿರುದ್ಧ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೋರಾಟಗಾರರನ್ನು ಜಿಲ್ಲಾಡಳಿತ ಪೊಲೀಸರನ್ನು ಬಿಟ್ಟು ಬಂಧಿಸಿದೆ, ಹಲವು ಅನುಮತಿ ಪಡೆಯುವಂತೆ ಆದೇಶ ಮಾಡಿ ಹೋರಾಟಗಾರರನ್ನು ಬಂಧಿಸಲಾಗಿದೆ. ಇದು ಜಿಲ್ಲಾಧಿಕಾರಿ ಶುಭಕಲ್ಯಾಣ್ ಅವರ ದಬ್ಬಾಳಿಕೆ ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು. ನಮ್ಮ ಸಮಸ್ಯೆಗೆ ಸಚಿವರು, ಜಿಲ್ಲಾಧಿಕಾರಿಗಳು ಈವರೆಗೆ ಹಲವು ಸಮಸ್ಯೆಗಳಿಗೆ ಸ್ಪಂದಿಸಿಲ್ಲ. ಇದರ ವಿರುದ್ಧ  ಹೋರಾಟ ಮಾಡ್ತಾ ಇದ್ದೋರನ್ನ ಬಂಧಿಸಿ ಹೋರಾಟ ಮಾಡುವಂತಿಲ್ಲ ಎನ್ನುತ್ತಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಹೋರಾಟ ಮಾಡೋದು ನಮ್ಮ ಹಕ್ಕು.  ಜಿಲ್ಲಾಧಿಕಾರಿಯವರು ನೇರಾ ನೇರ ಮಾತುಕತೆ ನಡೆಸಿ ಇತ್ಯರ್ಥ ಮಾಡುವಂತೆ ಒತ್ತಾಯಿಸುತ್ತೇವೆ, ನಾವು ಯಾವುದೇ ತೊಂದರೆ ಕೊಡುದಿಲ್ಲ ನಮಗೆ ಹೋರಾಟ ಮಾಡಲು ಬಿಡಿ ಎಂದು ಹೋರಾಟಗಾರರು ಒತ್ತಾಯ ಮಾಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ತಿಪಟೂರು ಕೃಷ್ಣ,…

Read More

ತುಮಕೂರು:  ಭರ್ಜರಿ ಮಳೆಗೆ ಮರ ಮುರಿದು ಬಿದ್ದ ಪರಿಣಾಮ ಕಾರು ಜಖಂ ಆಗಿರುವ ಘಟನೆ  ತುಮಕೂರು ಜಿಲ್ಲೆಯ ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ನಡೆದಿದೆ. ರಾತ್ರಿ ಸುರಿದ ಭರ್ಜರಿ ಮಳೆಗೆ ಮರ ಮುರಿದು ಬಿದ್ದಿದೆ. ಈ ವೇಳೆ ಮರದ ಕೆಳಗೆ ನಿಲ್ಲಿಸಲಾಗಿದ್ದ ಕಾರು ಜಖಂಗೊಂಡಿದೆ. ಮರ ಬಿದ್ದ ತೀವ್ರತೆಗೆ ಕಾರಿನ ಮೇಲ್ಭಾಗ ಸಂಪೂರ್ಣವಾಗಿ ಹಾನಿಗೊಳಗಾಗಿದೆ. ಘಟನೆ ವೇಳೆ ಕಾರಿನಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ತಿಪಟೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ಬೆಳಗಾವಿ:  ಆಪರೇಷನ್ ಸಿಂಧೂರ್ ಬಗ್ಗೆ ಮಾಹಿತಿ ನೀಡಿದ ಕರ್ನಲ್ ಸೋಫಿಯಾ ಖುರೇಷಿ ಪತಿಯ ಮನೆಯ ಮೇಲೆ RSS ದಾಳಿ ನಡೆಸಿದೆ ಎಂದು ಸುಳ್ಳು ವದಂತಿ ಹರಡಿದ ವ್ಯಕ್ತಿಯ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಅನೀಸ್ ಉದ್ದೀನ್ ಮೇಲೆ ಬೆಳಗಾವಿ ಜಿಲ್ಲಾ ಸಿಇಎನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಬೆಳಗಾವಿ ಎಸ್ಪಿ ಭೀಮಾಶಂಕರ್ ಗುಳೇದ್ ಅವರ ಸೂಚನೆ ಮೇರೆಗೆ ಬಿಎನ್‌ಎಸ್ ಕಾಯ್ದೆಯಡಿ 353(2), 192 ಸೆಕ್ಷನ್ ಅಡಿಯಲ್ಲಿ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಇನ್ನೂ ಈ ಬಗ್ಗೆ ಪ್ರತಿಕ್ರಿಯಿಸಿರುವ ಬೆಳಗಾವಿ ಎಸ್ಪಿ ಡಾ.ಭೀಮಾಶಂಕರ್ ಗುಳೇದ, ಎಕ್ಸ್ ಖಾತೆಯಲ್ಲಿ ಕರ್ನಲ್ ಸೋಫಿಯಾ ಪತಿ ಮನೆಯ ಮೇಲೆ ಆ ರ್‌ಎಸ್‌ ಎಸ್ ಬೆಂಬಲಿತ ಹಿಂದೂಗಳು ದಾಳಿ ಮಾಡಿ, ಮನೆ ದ್ವಂಸ ಮಾಡಿದ್ದಾರೆ ಎಂದು ಸುಳ್ಳು ಪೋಸ್ಟ್ ಹಾಕಲಾಗಿತ್ತು. ಅನೀಸ್ ಉದ್ದಿನ್ ಎಂಬಾತ ಎಕ್ಸ್ ಖಾತೆಯಲ್ಲಿ ಸುಳ್ಳು ಸುದ್ದಿ ಹಾಕಿಕೊಂಡಿದ್ದ ಎಂದು ಹೇಳಿದ್ದರು. ಪೋಸ್ಟ್ ನಲ್ಲಿ ಯಾವುದೋ ಹಳೆಯ ಫೋಟೋವನ್ನು ಹಂಚಿಕೊಳ್ಳಲಾಗಿತ್ತು. ವಿಚಾರವಾಗಿ ಜಿಲ್ಲಾ ಸಾಮಾಜಿಕ ಮಾಧ್ಯಮ…

Read More

ಬೆಂಗಳೂರು: ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆಯನ್ನು ರಾಜ್ಯ ಸರ್ಕಾರ ತಲಾ 2,000 ರೂಪಾಯಿಗಳಷ್ಟು ಹೆಚ್ಚಳ ಮಾಡಿದೆ. ಮುಂದಿನ ಆದೇಶದವರೆಗೆ ಈ ಪರಿಷ್ಕೃತ ಗೌರವ ಸಂಭಾವನೆ ಜಾರಿಯಲ್ಲಿರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಹಿಂದೆ ಸರ್ಕಾರ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ 10,000 ರೂಪಾಯಿ ಹಾಗೂ ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ 10,500 ಗೌರವ ಸಂಭಾವನೆ ನಿಗದಿಪಡಿಸಿತ್ತು. ಇದೀಗ ಈ ಮೊತ್ತಕ್ಕೆ ಹೆಚ್ಚುವರಿಯಾಗಿ 2,000 ರೂಪಾಯಿಗಳು ಸೇರ್ಪಡೆ ಆಗಿದೆ. ಪರಿಷ್ಕೃತ ಗೌರವ ಸಂಭಾವನೆಯು ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ 12,000 ರೂಪಾಯಿ ಸಿಗಲಿದೆ. ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ 12,500 ರೂಪಾಯಿ ಸಿಗಲಿದೆ. ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೂ 2,000 ಗಳಷ್ಟು ಗೌರವಧನ ಹೆಚ್ಚಳವಾಗಿದೆ. ಈ ಹಿಂದೆ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ 12,000 ರೂಪಾಯಿ ನಿಗದಿಯಾಗಿತ್ತು. ಪರಿಷ್ಕೃತ ಗೌರವ ಸಂಭಾವನೆಯು 14,000…

Read More

ಬೆಂಗಳೂರು: ಬೆಂಗಳೂರು ಹಾಗೂ ತುಮಕೂರು ನಡುವೆ ನಮ್ಮ ಮೆಟ್ರೋ ಯೋಜನೆ ಬಗ್ಗೆ ಹೊಸ ಮಾಹಿತಿ ಲಭ್ಯವಾಗಿದ್ದು, ಕಾರ್ಯ ಸಾಧ್ಯತಾ ಪರೀಕ್ಷಾ ವರದಿಯನ್ನು ಈಗಾಗಲೇ ಖಾಸಗಿ ಕಂಪನಿ ಬಿಎಂಆರ್ ಸಿಎಲ್ ಗೆ ಸಲ್ಲಿಸಿದೆ. ಆ ವರದಿಯನ್ನು ಬಿಎಂಆರ್ ಸಿಎಲ್ ಸರ್ಕಾರಕ್ಕೆ ಸಲ್ಲಿಸಿದೆ. 56.6 ಕಿ.ಮೀ. ಮೆಟ್ರೋ ಮಾರ್ಗದಲ್ಲಿ, 25 ಎತ್ತರಿಸಿದ ನಿಲ್ದಾಣಗಳ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ. ಗ್ರೀನ್ ಲೈನ್ ನಲ್ಲಿ ಬರುವ ಮಾದಾವರ ನಿಲ್ದಾಣದಿಂದ ಪ್ರಾರಂಭವಾಗುವ ಮೆಟ್ರೋ ಮಾರ್ಗವು ಶಿರಾ ಗೇಟ್ ವರೆಗೆ ಮೆಟ್ರೋ ಮಾರ್ಗ ಹಾದು ಹೋಗಲಿದೆ ಎಂದು ವರದಿಗಳಿಂದ ತಿಳಿದು ಬಂದಿದೆ. ಕಾರ್ಯಸಾಧ್ಯತಾ ಪರೀಕ್ಷಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿರುವ ಬಗ್ಗೆ ಬಿಎಂಆರ್ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಯಶವಂತ್ ಚೌವ್ಹಾಣ್ ಮಾಹಿತಿ ನೀಡಿದ್ದಾರೆ. ತುಮಕೂರಿಗೆ ನಮ್ಮ ಮೆಟ್ರೋ ವಿಸ್ತರಣೆಯಾಗಿದ್ದೇ ಆದಲ್ಲಿ, ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ಮತ್ತೊಂದು ಜಿಲ್ಲೆಗೆ ಮೆಟ್ರೋ ಸಂಚಾರ ಮಾಡುವಂತಾಗಲಿದೆ. ಬೆಂಗಳೂರಿನಿಂದ ತುಮಕೂರಿಗೆ ಮೆಟ್ರೋ ಸಂಚಾರ ಆರಂಭವಾದರೆ ತುಮಕೂರಿನಲ್ಲಿ ಇತಿಹಾಸ ನಿರ್ಮಾಣವಾಗಲಿದೆ. ಅಲ್ಲದೇ ತುಮಕೂರಿನ ಜನತೆಗೆ ಬೆಂಗಳೂರು…

Read More

ಯಾದಗಿರಿ: ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಬಾಲಕಿಯರು ಕಾಲು ಜಾರಿ ಬಾವಿಗೆ  ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಗುರುವಾರ ಯಾದಗಿರಿ ಜಿಲ್ಲೆಯ ಮೊಟ್ನಳ್ಳಿ ಗ್ರಾಮದ ಹೊರ ಭಾಗದಲ್ಲಿ ನಡೆದಿದೆ. ಮೃತ ಬಾಲಕಿಯರು ವೈಶಾಲಿ(17) ಮತ್ತು ನವೀತಾ(16) ಎಂದು ಗುರುತಿಸಲಾಗಿದ್ದು, ಇಬ್ಬರು ಬಟ್ಟೆ ತೊಳೆಯಲು ಹೋಗಿದ್ದರು. ಈ ವೇಳೆ ಈ ಘಟನೆ ನಡೆದಿದೆ. ಸ್ಥಳೀಯರು ಶವವನ್ನು ಬಾವಿಯಿಂದ ಹೊರಗೆ ತೆಗೆದಿದ್ದಾರೆ. ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ತುಮಕೂರು:  ತುಮಕೂರು ನಗರ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ವ್ಯಾಪಕವಾದ ಮಳೆ ಸುರಿಯುತ್ತಿದ್ದು ಜನಜೀವನ ಅಸ್ತವ್ಯಸ್ತ ಗೊಂಡಿದೆ. ನಗರ ಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತೆ ಆಗಿದೆ.  ತುಮಕೂರು ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಕಳೆದ ಹಲವು ದಿನಗಳಿಂದಲೂ ತೀವ್ರ ಬಿಸಿಲಿನ ತಾಪದಿಂದ ಕಂಗೆಟ್ಟಿದ್ದ ಸಾರ್ವಜನಿಕರಿಗೆ ಮಳೆರಾಯ ತಂಪೆರೆದಿದ್ದಾನೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ಬೆಂಗಳೂರು: ಕನ್ನಡ ಅಭಿಮಾನವನ್ನು ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಹೋಲಿಸಿದ ಗಾಯಕ ಸೋನು ನಿಗಮ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಕರ್ನಾಟಕ ಹೈಕೋರ್ಟ್‌ ಆದೇಶ ಮಾಡಿದೆ. ಬೆಂಗಳೂರಿನ ಖಾಸಗಿ ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಸೋನು ನಿಗಮ್‌ ಗೆ ಕನ್ನಡ  ಹಾಡು ಹೇಳಿ ಎಂದಿದ್ದಕ್ಕೆ, ಇದಕ್ಕೆ ಪಹಲ್ಗಾಮ್ ದಾಳಿ ನಡೆದಿದ್ದು ಎಂದಿದ್ದರು. ಈ ಹೇಳಿಕೆ ವಿರುದ್ಧ ಬೆಂಗಳೂರಿನಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಪ್ರಕರಣ ರದ್ದುಕೋರಿ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಏಕಸದಸ್ಯಪೀಠ, ಗಾಯಕನ ವಿರುದ್ಧ ತನಿಖಾಧಿಕಾರಿಗಳು ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ರಾಮನಗರ:  ಬಿಡದಿಯ ಭದ್ರಾಪುರ ಗ್ರಾಮದಲ್ಲಿ ಬಾಲಕಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಡಾ.ಮಂಜುನಾಥ್ ಗ್ರಾಮಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಇದೇ ವೇಳೆ ಬಾಲಕಿ ತಾಯಿಗೆ ಧೈರ್ಯ ತುಂಬಿದ ಸಂಸದರು, ಈ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚನೆ ನೀಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 14 ವರ್ಷದ ಬಾಲಕಿಯನ್ನ ಹತ್ಯೆ ಮಾಡಿರೋದು ವಿಕೃತಿ. ಯಾವ ಕಾರಣಕ್ಕೆ ಹತ್ಯೆಯಾಗಿದೆ ಎಂಬುದು ಮರಣೋತ್ತರ ವರದಿ ಹಾಗೂ ಎಫ್‌ ಎಸ್‌ ಎಲ್ ವರದಿಯಲ್ಲಿ ಬಹಿರಂಗವಾಗಬೇಕಿದೆ ಎಂದರು. ಈಗಾಗಲೇ ಎರಡು–ಮೂರು ತಂಡಗಳ ರಚನೆ ಮಾಡಿಕೊಂಡು ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಬಾಲಕಿ ಸಾವಿಗೆ ನ್ಯಾಯ ಒದಗಿಸುವ ಕೆಲಸ ಆಗಬೇಕು ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ತುಮಕೂರು: ತುಮಕೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ನಿರ್ಮಿತಿ ಕೇಂದ್ರ ಎಮ್.ಡಿ.ರಾಜಶೇಖರ ಮನೆ ಮೇಲೆ ದಾಳಿ ಮಾಡಿ ಅಪಾರ ಪ್ರಮಾಣದ ದಾಖಲೆ ಪತ್ರಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ತುಮಕೂರು ನಗರದ ಅಶೋಕ ನಗರ ಬಡಾವಣೆ ಯ ಎಸ್.ಐ.ಟಿಯ ನಾಲ್ಕನೇ ಕ್ರಾಸ್ ಇರುವ ರಾಜಶೇಖರ ಸಹೋದರನ ಮನೆ ಮೇಲೆ ರೇಡ್ ಮಾಡಿದ್ದಾರೆ. ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ರೇಡ್ ಮಾಡಿರುವ 10 ಜನ ಅಧಿಕಾರಿಗಳಿಂದ ಏಕಕಾಲಕ್ಕೆ ದಾಳಿ– ಪರಿಶೀಲನೆ ನಡೆಸುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More